Site icon Vistara News

Lok Sabha Election 2024: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿಯ ಹತ್ತು ಪ್ರಶ್ನೆ!

Lok sabha Election

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರಿಗೆ ಬಿಜೆಪಿ (BJP Karnataka) ಹತ್ತು ಪ್ರಶ್ನೆಗಳನ್ನು ಕೇಳಿದೆ. ಇದಕ್ಕೆ ಉತ್ತರ ಕೊಡಿ ಎಂದು ಆಗ್ರಹಿಸಿದೆ. ಲೋಕೋಪಯೋಗಿ ಸಚಿವರು ಈವರೆಗೂ ಒಂದೇ ಒಂದು ಕಾಮಗಾರಿ ಶಂಕುಸ್ಥಾಪನೆ ಮಾಡಿಲ್ಲ, ಸರ್ಕಾರವೂ ಶಂಕುಸ್ಥಾಪನೆ ಮಾಡಿಲ್ಲ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ, ಊಟ ಕೊಡುತ್ತಿಲ್ಲ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದು, ಈ ಎಲ್ಲವಕ್ಕೂ ಉತ್ತರ ಕೊಡಿ ಎಂದು ರಾಹುಲ್‌ ಗಾಂಧಿ ಅವರನ್ನು ಆಗ್ರಹಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್, ಆಸ್ಪತ್ರೆಗಳಲ್ಲಿ ಔಷಧಿ ಸಿಗುತ್ತಿಲ್ಲ. ಬಿ.ಆರ್. ಪಾಟೀಲ್ ಮತ್ತು ಬಸವರಾಜ್ ರಾಯರೆಡ್ಡಿ ಹಣ ಬಿಡುಗಡೆ ಮಾಡದ ಬಗ್ಗೆ ನಿಮಗೆ ಪತ್ರ ಬರೆದಿದ್ದರು. ರೈತರು ಸಾವನ್ನಪ್ಪಿದ್ದಾರೆ, ಅವರ ಮನೆಗೆ ಭೇಟಿ ಕೊಡುತ್ತೀರಾ? ಕೆಆರ್‌ಎಸ್ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಾರೆ. ಕಾವೇರಿ ನೀರಿನ ಕೆನಾಲ್ ಕಾಮಗಾರಿ ಮಾಡಬೇಕಿದೆ. ಅದರ ಕಾಮಗಾರಿ ಸ್ಟಾರ್ ಚಂದ್ರು ಅವರೇ ಮಾಡುತ್ತಿದ್ದಾರೆ. ಗುತ್ತಿಗೆದಾರರಿಗೆ ಅನುಕೂಲ ಆಗಲಿ ಅಂತ ಕಾವೇರಿ ನೀರು ಖಾಲಿ ಮಾಡಿದಿರಾ? ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಕೊಡುವಂತೆ ರಾಹುಲ್‌ ಗಾಂಧಿ ಅವರಿಗೆ ಕೇಳಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಸೇರಿದ ಕರಡಿ ಸಂಗಣ್ಣ; ಪಕ್ಷ ಸೇರ್ಪಡೆಗೆ ಲಕ್ಷ್ಮಣ ಸವದಿ ಕಾರಣ!

ರಾಹುಲ್ ಗಾಂಧಿಗೆ ಬಿಜೆಪಿ ಕೇಳಿದ 10 ಪ್ರಶ್ನೆಗಳು!

ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಡಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಬಿಜೆಪಿ ಪ್ರಶ್ನೆ ಮಾಡಿದೆ.

Exit mobile version