Site icon Vistara News

BJP Nominations: ಯದುವೀರ್‌ ಸೇರಿ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ; ಇಲ್ಲಿವೆ Photos

BJP Nominations

Lok Sabha Election 2024: BJP Candidates Filed Nominations In Karnataka Including Yaduveer, Sudhakar

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ (Karnataka) ಬಿಜೆಪಿ ಅಭ್ಯರ್ಥಿಗಳ ನಾಮಪತ್ರ (BJP Nominations) ಸಲ್ಲಿಕೆಯ ಭರಾಟೆ ಜೋರಾಗಿದೆ. ಬೆಂಗಳೂರು ಕೇಂದ್ರದಲ್ಲಿ ಪಿ.ಸಿ. ಮೋಹನ್, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಸೇರಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಅಭ್ಯರ್ಥಿಗಳು ದೇವಾಲಯಗಳಲ್ಲಿ ವಿಶೇಷ ಪೂಜೆ, ಬೃಹತ್‌ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನವನ್ನೂ ಮಾಡಿದರು.

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಅವರು ನಾಮಪತ್ರ ಸಲ್ಲಿಸಿದರು. ಇವರಿಗೆ ಪಿ.ಸಿ ಮೋಹನ್ ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಸಾಥ್‌ ನೀಡಿದರು.

ಯದುವೀರ್‌ ನಾಮಿನೇಷನ್‌

ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಜ್ಯೋತಿಷಿಗಳ ಸೂಚನೆಯಂತೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ‌ ಶ್ರೀವತ್ಸ ಜತೆ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಏಪ್ರಿಲ್‌ 3ರಂದು ಬೃಹತ್‌ ರ‍್ಯಾಲಿ ಮೂಲಕ ಅವರು ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ವಿ. ಸೋಮಣ್ಣ ಉಮೇದುವಾರಿಕೆ ಸಲ್ಲಿಕೆ

ತುಮಕೂರಿನಲ್ಲಿ ವಿ.ಸೋಮಣ್ಣ ಅವರು ಕೂಡ ಉಮೇದುವಾರಿಕೆ ಸಲ್ಲಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರೊಂದಿಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಅವರು ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.

ಎಂಟಿಬಿ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಸುಧಾಕರ್‌

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಎಂ.ಟಿ.ಬಿ. ನಾಗರಾಜ್‌ ಅವರ ಕಾಲಿಗೆ ಬಿದ್ದು ಸುಧಾಕರ್‌ ಆಶೀರ್ವಾದ ಪಡೆದರು. ಇದೇ ವೇಳೆ, ನಾಗರಾಜ್‌ ಅವರು ನಾಮಪತ್ರ ಶುಲ್ಕವಾದ 25 ಸಾವಿರ ರೂ. ನೀಡಿ ಆಶೀರ್ವಾದ ಮಾಡಿದರು. ಹಲವು ಹಿರಿಯರ ಆಶೀರ್ವಾದ ಪಡೆದ ಬಳಿಕ ಸುಧಾಕರ್‌ ಅವರು ನಾಮಪತ್ರ ಸಲ್ಲಿಸಿದರು. ಇವರಿಗೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ವರ್ತೂರು ಪ್ರಕಾಶ್, ನಿಸರ್ಗ ನಾರಾಯಣಸ್ವಾಮಿ ಸಾಥ್ ನೀಡಿದರು.

ಇದನ್ನೂ ಓದಿ: ಬಿಜೆಪಿಯಿಂದ ಸ್ತ್ರೀಯರ ಏಳಿಗೆ; ‘ಉಚಿತ’ ಕೊಟ್ಟರೆ ಸ್ವಾವಲಂಬನೆ ಆಗಲ್ಲ ಎಂದ ನಟಿ ಶ್ರುತಿ

ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ನಾಮಪತ್ರ

ಕೋಲಾರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು ಅವರು ನಾಮಿನೇಷನ್‌ ಫೈಲ್‌ ಮಾಡಿದರು. ತಾಯಿ ಹಾಗೂ ಪತ್ನಿ ಜತೆ ಕೋಲಾರ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version