Lok Sabha Election 2024: ರಾಯಚೂರಲ್ಲಿ ಬಿ.ವಿ. ನಾಯಕ ಭಿನ್ನಮತ ಸ್ಫೋಟ; ಡೀಸೆಲ್‌ ಸುರಿದುಕೊಂಡು ಹೈಡ್ರಾಮಾ! - Vistara News

Lok Sabha Election 2024

Lok Sabha Election 2024: ರಾಯಚೂರಲ್ಲಿ ಬಿ.ವಿ. ನಾಯಕ ಭಿನ್ನಮತ ಸ್ಫೋಟ; ಡೀಸೆಲ್‌ ಸುರಿದುಕೊಂಡು ಹೈಡ್ರಾಮಾ!

Lok Sabha Election 2024: ರಾಯಚೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ರಾಜಾ ಅಮೇಶ್ವರ ನಾಯಕ ಅವರಿಗೆ ಟಿಕೆಟ್‌ ನೀಡಿದ್ದನ್ನು ಬಿ.ವಿ. ನಾಯಕ ಮತ್ತವರ ಬೆಂಬಲಿಗರು ಖಂಡಿಸಿದ್ದು, ಭಾರಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಅಲ್ಲದೆ, ಆಯ್ಕೆಯನ್ನು ಬದಲು ಮಾಡಲು 2 ದಿನಗಳನ್ನು ಗಡುವನ್ನೂ ನೀಡಿದ್ದಾರೆ.

VISTARANEWS.COM


on

Lok Sabha Election 2024 BV Nayaka dissent erupts in Raichur High drama pouring diesel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಗ ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೆ ಭಿನ್ನಮತದ ತಲೆ ನೋವು ಎದುರಾಗಿದೆ. ಟಿಕೆಟ್‌ ವಂಚಿತ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ. ಬಿಜೆಪಿ (BJP Karnataka) ಸಹ ಇದಕ್ಕೆ ಹೊರತಾಗಿಲ್ಲ. ಒಂದು ಕಡೆ ಬಂಡಾಯವನ್ನು ಶಮನ ಮಾಡುತ್ತಿದ್ದಂತೆ ಮತ್ತೊಂದು ಕಡೆ ಅಸಮಾಧಾನ ಸ್ಫೋಟಗೊಳ್ಳುತ್ತಿದೆ. ಈ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕಗೆ (Raja Amareswara Nayaka) ಟಿಕೆಟ್‌ ಕೊಟ್ಟಿರುವುದು ಬಿ.ವಿ‌. ನಾಯಕ (BV Nayaka) ಅವರನ್ನು ಕೆರಳಿಸಿದೆ. ಇದೀಗ ಅವರ ಬಣ ರೌದ್ರಾವತಾರ ತಾಳಿದ್ದು, ಪ್ರತಿಭಟನೆಯನ್ನು ಮಾಡಿವೆ. ಅಭ್ಯರ್ಥಿ ಬದಲಾವಣೆಗೆ ಎರಡು ದಿನಗಳ ಗಡುವನ್ನು ನೀಡಿದೆ. ಇನ್ನು ಪ್ರತಿಭಟನೆ ವೇಳೆ ಬಿ.ವಿ. ನಾಯಕ ಅವರ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದು ಹೈಡ್ರಾಮಾ ನಡೆಸಿದ್ದಾನೆ.

ರಾಯಚೂರಿನಲ್ಲಿ ಕರೆದ ಅಭಿಮಾನಿ, ಬೆಂಬಲಿಗರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕಗೆ ಗೋಬ್ಯಾಕ್ ಘೋಷಣೆಯನ್ನು ಕೂಗಲಾಗಿದೆ. ಬಳಿಕ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ. ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ವಿ. ನಾಯಕ ಅವರಿಗೆ ಬಿಜೆಪಿ ಟಿಕೆಟ್ ಕೊಡಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಈ ವೇಳೆ ಅವರ ಅಭಿಮಾನಿಯೊಬ್ಬ ಡೀಸೆಲ್ ಸುರಿದುಕೊಂಡು ಆಕ್ರೋಶವನ್ನು ಹೊರಹಾಕಿದ್ದಾನೆ.

ಎರಡು ದಿನಗಳ ಗಡುವು: ಬಿ.ವಿ. ನಾಯಕ ಎಚ್ಚರಿಕೆ

ಈ ವೇಳೆ ಮಾತನಾಡಿದ ಬಿ.ವಿ‌. ನಾಯಕ ಅವರು ಮುಂದಿನ ಎರಡು ದಿನಗಳವರೆಗೆ ಕಾದು ನೋಡುತ್ತೇನೆ. ಬಳಿಕ ನನ್ನ ಕಾರ್ಯಕರ್ತರ, ಅಭಿಮಾನಿಗಳ ತೀರ್ಮಾನದಂತೆ‌ ನಿರ್ಧಾರ ಮಾಡುತ್ತೇನೆ. ಈ‌ ಬಗ್ಗೆ ಇನ್ನೆರಡು ದಿನದಲ್ಲಿ ದೇವದುರ್ಗದಲ್ಲಿ‌ ಬೃಹತ್ ಸಭೆ ನಡೆಸಿ ಬಿಜೆಪಿ ಹೈಕಮಾಂಡ್‌ಗೆ ನನ್ನ ನಿರ್ಣಯ ತಿಳಿಸುವೆ. ಬಿಜೆಪಿ ನಾಯಕರ ಸೂಚನೆಯಂತೆ ಸ್ಪರ್ಧೆಗೆ ನಿರ್ಧರಿಸಿ ಸಂಚಾರ ಮಾಡಿದ್ದೆ. ತನ್ನ ತಂದೆ ಹಾಗೂ ನಾನು 40 ವರ್ಷದಿಂದ ಇದ್ದ ಪಕ್ಷವನ್ನು ಬಿಟ್ಟು ಬಿಜೆಪಿಗೆ ಬಂದಿದ್ದೆ. ಈಗ ಬಿಜೆಪಿ‌ ನಾಯಕರು ಮೋಸ ಮಾಡಿದ್ದಾರೆ ಎಂದು ಬಿ.ವಿ. ನಾಯಕ ಅವರು ಆಕ್ರೋಶವನ್ನು ಹೊರಹಾಕಿದ್ದಾರೆ. ಈ ವೇಳೆ ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ತಿಮ್ಮಾರೆಡ್ಡಿ ಬೋಗಾವತಿ ಸೇರಿ ಸಾವಿರಾರು ಜನರು ಭಾಗಿಯಾಗಿದ್ದರು.

ಇದನ್ನೂ ಓದಿ: Lok Sabha Election 2024: ಎಚ್‌.ವಿ. ರಾಜೀವ್‌ ಕಾಂಗ್ರೆಸ್‌ ಸೇರಲು ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಕಾರಣ!

ಬಿ.ಎಸ್‌. ಯಡಿಯೂರಪ್ಪ ಮಧ್ಯಪ್ರವೇಶ?

ಈಗಾಗಲೇ ಬಿಜೆಪಿಯಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಂದಾಗಿದ್ದರು. ಈ ನಿಟ್ಟಿನಲ್ಲಿ ಹಳೇ ಮೈಸೂರು ಭಾಗಕ್ಕೆ ವಿಜಯೇಂದ್ರ ತೆರಳಿದ್ದರೆ, ಉತ್ತರ ಕರ್ನಾಟಕ ಭಾಗಕ್ಕೆ ಯಡಿಯೂರಪ್ಪ ಭೇಟಿ ನೀಡುತ್ತಿದ್ದಾರೆ. ಬಿಎಸ್‌ವೈ ಇಂದು ಬೆಳಗಾವಿಯಲ್ಲಿದ್ದಾರೆ. ಹೀಗಾಗಿ ಶೀಘ್ರವೇ ಅವರು ರಾಯಚೂರು ಕಡೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈಗಾಗಲೇ ಕುಪಿತಗೊಂಡಿರುವ ಬಿ.ವಿ. ನಾಯಕ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕಾರಣದಿಂದ ಅವರು ಬಿ.ಎಸ್.‌ ಯಡಿಯೂರಪ್ಪ ಅವರ ಮಾತನ್ನು ಕೇಳಲಿದ್ದಾರೆಯೇ? ಅಷ್ಟು ತಾಳ್ಮೆ ಅವರಲ್ಲಿ ಇದೆಯೇ? ಎಂಬ ಪ್ರಶ್ನೆ ಮೂಡಿದೆ. ಇನ್ನು ಎರಡು ದಿನದಲ್ಲಿ ಬಿಜೆಪಿ ಒಂದು ನಿರ್ಣಯಕ್ಕೆ ಬಾರದೇ ಹೋದಲ್ಲಿ, ಮನವೊಲಿಕೆ ಮಾಡದೇ ಹೋದಲ್ಲಿ ಬಿ.ವಿ. ನಾಯಕ ಅವರು ಮುಂದಿನ ಹೆಜ್ಜೆಯನ್ನು ಇಡಲಿದ್ದಾರೆ. ಅದು ಬಿಜೆಪಿ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ಮುಖ್ಯವಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರವಾಡ

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Dharwad Lok Sabha Constituency: ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ಅವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿ, ಐದನೇ ಬಾರಿಗೆ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಇವರಿಗೆ ಹೊಸಮುಖವಾದ ಆನಂದ್‌ ಅಸೂಟಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆಯೊಡ್ಡಿದ್ದಾರೆ. ತೀವ್ರ ಪೈಪೋಟಿ, ಪ್ರತಿಷ್ಠೆಯ ಕಣವಾದಲ್ಲಿ ಧಾರವಾಡದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

VISTARANEWS.COM


on

Dharwad Lok Sabha Constituency
Koo

ಧಾರವಾಡ: ಪೇಡಾಗಳಿಗೆ ಹೆಸರುವಾಸಿಯಾಗಿರುವ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ (Dharwad Lok Sabha Constituency) ಸತತ ನಾಲ್ಕು ಚುನಾವಣೆಗಳಲ್ಲಿ ಗೆಲುವು ಸಾಧಿಸಿ, ಐದನೇ ಬಾರಿಗೆ ಗೆದ್ದು ದಾಖಲೆ ಸೃಷ್ಟಿಸಲು ಹಂಬಲಿಸುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರಿಗೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಆನಂದ್‌ ಅಸೂಟಿ (Anand Asooti) ಅವರು ಸವಾಲೊಡ್ಡಿದ್ದಾರೆ. ಹಾಗಾಗಿ, ಈ ಬಾರಿ ಧಾರವಾಡ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಕದನ ಏರ್ಪಟ್ಟಿದ್ದು, ವಿಜಯದ ಮಾಲೆ ಯಾರ ಕೊರಳಿಗೆ ಎಂಬ ಕುತೂಹಲ ಹೆಚ್ಚಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಲೆ, ಧಾರವಾಡ ಕ್ಷೇತ್ರದಲ್ಲಿ ಪ್ರಬಲ ಸಮುದಾಯಗಳ ಬೆಂಬಲ, ಕೇಂದ್ರ ಸಚಿವರಾಗಿ ಕ್ಷೇತ್ರಕ್ಕೆ ತಂದಿರುವ ಅಭಿವೃದ್ಧಿ ಯೋಜನೆಗಳು, ವಂದೇ ಭಾರತ್‌ ರೈಲು ಸೇರಿ ಹಲವು ಮೂಲ ಸೌಕರ್ಯಗಳು ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗುವ ಲಕ್ಷಣಗಳಿವೆ. ಕಳೆದ ನಾಲ್ಕು ಬಾರಿ ಗೆದ್ದು, ಕ್ಷೇತ್ರದ ಜನರ ಬೆಂಬಲ, ವಿಶ್ವಾಸ ಗಳಿಸಿರುವ ಪ್ರಲ್ಹಾದ್‌ ಜೋಶಿ ಅವರು ಸತತ ಐದನೇ ಬಾರಿಗೆ ಜಯಿಸುವ ವಿಶ್ವಾಸದಲ್ಲಿದ್ದಾರೆ. ‌

Pralhad Joshi

ಗದಗ ಜಿಲ್ಲೆ ಶಿರಹಟ್ಟಿಯ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಅವರ ವಿರೋಧದಿಂದಾಗಿ ಪ್ರಲ್ಹಾದ್‌ ಜೋಶಿ ಅವರಿಗೆ ತುಸು ಹಿನ್ನಡೆಯುಂಟಾಗಿತ್ತು. ಪಕ್ಷೇತರರಾಗಿ ದಿಂಗಾಲೇಶ್ವರ ಸ್ವಾಮೀಜಿ ಅವರು ಕಣಕ್ಕೂ ಇಳಿದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರು ಚುನಾವಣೆಯಿಂದ ಹಿಂದೆ ಸರಿದರೂ ಅವರ ಬೆಂಬಲವು ಕಾಂಗ್ರೆಸ್‌ ಅಭ್ಯರ್ಥಿಗಿದೆ. ಇದು ಜೋಶಿ ಅವರಿಗೆ ಹಿನ್ನಡೆ ತಂದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.

ಖಾತೆ ತೆರೆಯುವರೇ ಆನಂದ್?

2018ರಲ್ಲಿ ನವಲಗುಂದ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಆನಂದ್‌ ಅಸೂಟಿಯವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈ ಬಾರಿ ಕಾಂಗ್ರೆಸ್‌ ಲಿಂಗಾಯತರ ಬದಲು ಕುರುಬ ಸಮುದಾಯದ ಆನಂದ್‌ ಅಸೂಟಿ ಅವರಿಗೆ ಟಿಕೆಟ್‌ ನೀಡಿದೆ. ಇದು ಕ್ಷೇತ್ರದಲ್ಲಿ ಹಿಂದುಳಿದವರ ಮತ ಸೆಳೆಯಲು ಕಾರಣವಾಗಲಿದೆ ಎಂಬುದು ಪಕ್ಷದ ರಣತಂತ್ರವಾಗಿದೆ. ಗ್ಯಾರಂಟಿ ಯೋಜನೆಗಳಂತೂ ಸಕಾರಾತ್ಮಕ ಪ್ರಭಾವವನ್ನೇ ಬೀರಿವೆ.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪ್ರಲ್ಹಾದ್‌ ಜೋಶಿ ಅವರು ಕಾಂಗ್ರೆಸ್‌ನ ವಿನಯ್‌ ಕುಲಕರ್ಣಿ ಅವರ ವಿರುದ್ಧ 2.05 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲೂ ಪ್ರಲ್ಹಾದ್‌ ಜೋಶಿ ಅವರೇ ಜಯಿಸಿದ್ದರು. ಇವರು ವಿನಯ್‌ ಕುಲಕರ್ಣಿ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರಗಿಂದ ಜಯಭೇರಿ ಬಾರಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದ್ದರು. ನರೇಂದ್ರ ಮೋದಿ ಅವರ ಅಲೆಯೂ ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗಿತ್ತು.

ಇದನ್ನೂ ಓದಿ: Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Continue Reading

ವಿಜಯಪುರ

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

Vijaypur Lok Sabha Constituency: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ನಾಲ್ಕನೇ ಬಾರಿಗೆ ವಿಜಯ ಪತಾಕೆ ಹಾರಿಸಲು ರಮೇಶ್‌ ಜಿಗಜಿಣಗಿ ಸಜ್ಜಾಗಿದ್ದಾರೆ. ಇವರಿಗೆ ಪ್ರಬಲ ಬಲಗೈ ಸಮಾಜದ ಮುಖಂಡ ಪ್ರೊ. ರಾಜು ಆಲಗೂರ ಅವರು ಸೆಡ್ಡು ಹೊಡೆದಿದ್ದು, ಗೆಲುವು ಯಾರಿಗೆ ಸಿಗಲಿದೆ ಎಂಬುದಕ್ಕೆ ಇನ್ನೂ ಕೆಲವು ಗಂಟೆ ಕಾಯಲಬೇಕಿದೆ. ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿತ್ತು.

VISTARANEWS.COM


on

Vijaypur Lok Sabha Constituency
Koo

ವಿಜಯಪುರ: ಗುಮ್ಮಟಗಳಿಗೆ ಪ್ರಸಿದ್ಧವಾದ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಎದುರಾಗಿದೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ (Vijaypur Lok Sabha Constituency) ಬಿಜೆಪಿಯಿಂದ ಸತತ ನಾಲ್ಕನೇ ಬಾರಿಗೆ ರಮೇಶ್‌ ಜಿಗಜಿಣಗಿ (Ramesh Jigajinagi) ಕಣಕ್ಕಿಳಿದಿದ್ದರೆ, ಪ್ರಯೋಗಕ್ಕೆ ಮುಂದಾಗಿರುವ ಕಾಂಗ್ರೆಸ್‌, ಬಲಗೈ ಸಮಾಜದ ಪ್ರೊ.ರಾಜು ಆಲಗೂರ (Raju Algur) ಅವರನ್ನು ಕಣಕ್ಕಿಳಿಸಿದೆ. ಹಾಗಾಗಿ, ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಯಾರು ಗೆಲುವಿನ ಮಾಲೆಗೆ ಕೊರಳೊಡ್ಡಲಿದ್ದಾರೆ ಎಂಬ ಕುತೂಹಲ ಜಾಸ್ತಿಯಾಗಿದೆ.

ಜಿಗಜಿಣಗಿಗೆ ತೀವ್ರ ಪೈಪೋಟಿ

ರಮೇಶ್‌ ಜಿಗಜಿಣಗಿ ಅವರು ಕಳೆದ ಮೂರು ಚುನಾವಣೆಗಳಲ್ಲಿ ಗೆಲುವು ಸಾಧಿಸಿ ವಿಜಯಪುರ ಕ್ಷೇತ್ರದ ಜನರ ನಾಡಿಮಿಡಿತವನ್ನು ಅರಿತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ ಎಂಬುದಾಗಿ ಹೇಳುತ್ತ ಪ್ರಚಾರ ಮಾಡಿರುವ ಅವರಿಗೆ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದವರ ಮತಗಳ ಬೆಂಬಲ ಇದೆ. ನರೇಂದ್ರ ಮೋದಿ ಅವರ ಅಲೆ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರೊಂದಿಗಿನ ಮುನಿಸು ಶಮನವಾಗಿರುವುದು ರಮೇಶ್‌ ಜಿಗಜಿಣಗಿ ಅವರಿಗೆ ಪ್ಲಸ್‌ ಪಾಯಿಂಟ್‌ ಆಗಿದೆ.

Mp Ramesh Jigajinagi

ಆದರೆ, ಸತತ ಮೂರು ಬಾರಿ ಇವರೇ ಸಂಸದರಾಗಿದ್ದು, ಕ್ಷೇತ್ರದ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ ಎಂಬ ಕೊರಗು ಜನರಲ್ಲಿದೆ. ಆಡಳಿತ ವಿರೋಧಿ ಅಲೆಯೂ ತುಸು ಹೆಚ್ಚೇ ಇದೆ. ಅವರು ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿ ಅನುಕಂಪ ಗಿಟ್ಟಿಸಿಕೊಳ್ಳಲು ಮುಂದಾಗಿದ್ದು ಕೂಡ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿರುವುದೂ ಜಿಗಜಿಣಗಿ ಅವರಿಗೆ ಹಿನ್ನಡೆ ತರಲಿದೆ ಎಂದೇ ಹೇಳಲಾಗುತ್ತಿದೆ.

ಫಲ ಕೊಡುವುದೇ ಕಾಂಗ್ರೆಸ್‌ ಪ್ರಯೋಗ?

ಕಳೆದ ಮೂರು ಚುನಾವಣೆಗಳಲ್ಲೂ ಬಂಜಾರ ಸಮುದಾಯದ ಅಭ್ಯರ್ಥಿಗೆ ಟಿಕೆಟ್‌ ನೀಡಿದ್ದ ಕಾಂಗ್ರೆಸ್‌ ಈ ಬಾರಿ ಬಲಗೈ ಸಮಾಜದ ಪ್ರೊ. ರಾಜು ಆಲಗೂರ ಅವರಿಗೆ ಟಿಕೆಟ್‌ ನೀಡುವ ಮೂಲಕ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಕ್ಷೇತ್ರದಲ್ಲಿರುವ ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡಿರುವ ರಾಜು ಆಲಗೂರ ಅವರಿಗೆ ಸಚಿವ ಎಂ.ಬಿ.ಪಾಟೀಲ್‌ ಅವರ ಬೆಂಬಲ, ಸಹಕಾರ ಇದೆ. ಗ್ಯಾರಂಟಿ ಯೋಜನೆಗಳನ್ನೂ ಕ್ಷೇತ್ರದ ಜನ ಮೆಚ್ಚಿಕೊಂಡಿದ್ದಾರೆ. ಹಾಗಾಗಿ, ಚುನಾವಣೆ ಫಲಿತಾಂಶವು ಹೆಚ್ಚಿನ ಕುತೂಹಲ ಕೆರಳಿಸಿದೆ.

2019, 2014ರ ಫಲಿತಾಂಶ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ರಮೇಶ್‌ ಜಿಗಜಿಣಗಿ ಅವರು ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಇವರು ತಮ್ಮ ಪ್ರತಿಸ್ಪರ್ಧಿ ಸುನೀತಾ ದೇವಾನಂದ ಚೌಹಾಣ್‌ ಅವರ ವಿರುದ್ಧ 2.58 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಆದರೂ, ರಮೇಶ್‌ ಜಿಗಜಿಣಗಿ ಅವರು ಕಾಂಗ್ರೆಸ್‌ನ ಪ್ರಕಾಶ್‌ ರಾಥೋಡ್‌ ಅವರ ವಿರುದ್ಧ 69 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Continue Reading

ದೇಶ

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Lok Sabha Election Result 2024: ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ನರೇಂದ್ರ ಮೋದಿ ಹ್ಯಾಟ್ರಿಕ್‌ ಬಾರಿಸುವರೋ ಇಲ್ಲವೇ ಇಂಡಿಯಾ ಒಕ್ಕೂಟ ಮುನ್ನಡೆ ಪಡೆಯುವುದೋ ಎಂಬ ಚರ್ಚೆ, ನಿರೀಕ್ಷೆ, ಕುತೂಹಲ ಹೆಚ್ಚಾಗಿದೆ.

VISTARANEWS.COM


on

Lok Sabha Election Result 2024
Koo

ನವದೆಹಲಿ: ಕಳೆದ ಕೆಲ ತಿಂಗಳಿಂದ ದೇಶಾದ್ಯಂತ ತೀವ್ರ ಚರ್ಚೆ, ಕುತೂಹಲ, ರಾಜಕಾರಣಿಗಳ ಅಬ್ಬರದ ಪ್ರಚಾರ, ವಾದ, ವಾಗ್ವಾದ, ವಿವಾದಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು (Lok Sabha Election 2024) ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Result 2024) ಪ್ರಕಟವಾಗಲಿದ್ದು, ದೇಶದ ಭವಿಷ್ಯಕ್ಕೆ ಇದು ದಿಕ್ಸೂಚಿ ಎನಿಸಲಿದೆ. ಸಹಜವಾಗಿಯೇ ರಾಜಕಾರಣಿಗಳು, ಅಭ್ಯರ್ಥಿಗಳ ಜತೆಗೆ ದೇಶದ ನಾಗರಿಕರ ಕುತೂಹಲವೂ ಜಾಸ್ತಿಯಾಗಿದೆ.

ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹ್ಯಾಟ್ರಿಕ್‌ ಬಾರಿಸುವ ಉತ್ಸಾಹದಲ್ಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವೇ ಗೆಲುವು ಸಾಧಿಸಲಿದೆ ಎಂಬುದಾಗಿ ಬಹುತೇಕ ಮತಗಟ್ಟೆ ಸಮೀಕ್ಷೆಗಳು ತಿಳಿಸಿವೆ.

ಬಿಜೆಪಿಗೆ ಒಲಿಯುವುದೇ ಗೆಲುವು?

ನರೇಂದ್ರ ಮೋದಿ ಅವರ ಅಲೆ, ಕಳೆದ 10 ವರ್ಷಗಳ ಅಭಿವೃದ್ಧಿ ಕೆಲಸಗಳು, ರಾಮಮಂದಿರ, 370ನೇ ವಿಧಿ ರದ್ದು ಸೇರಿ ಹಲವು ಪ್ರಮುಖ ತೀರ್ಮಾನಗಳನ್ನು ಮುಂದಿಟ್ಟುಕೊಂಡು ಬಿಜೆಪಿಯು ಚುನಾವಣೆ ಎದುರಿಸಿದೆ. ಅದರಲ್ಲೂ, ಮೋದಿ ಅವರು 200ಕ್ಕೂ ಅಧಿಕ ಸಮಾವೇಶಗಳ ಮೂಲಕ ದೇಶದ ಮೂಲೆ ಮೂಲೆಯಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರು ಕೂಡ ಇದಕ್ಕೆ ಶ್ರಮಿಸಿದ್ದಾರೆ. ಹಾಗಾಗಿ, ಬಿಜೆಪಿಯು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯು ಕನಸು ಕಾಣುತ್ತಿದೆ.

Lok Sabha Election 2024 PM Narendra Modi roadshow on April 14 route map is ready

ಕುತೂಹಲ ಘಟ್ಟದಲ್ಲಿ ಇಂಡಿಯಾ ಒಕ್ಕೂಟ

ಬಿಜೆಪಿಯನ್ನು ಶತಾಯ ಗತಾಯ ಸೋಲಿಸಬೇಕು ಎಂಬ ಕಾರಣಕ್ಕಾಗಿಯೇ ಕಾಂಗ್ರೆಸ್‌ ಮುಂದಾಳತ್ವದಲ್ಲಿ ಇಂಡಿಯಾ ಒಕ್ಕೂಟವನ್ನು ರಚಿಸಿ, ಪ್ರತಿಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳ ಆಚೆಯೂ ಅಚ್ಚರಿಯ ಫಲಿತಾಂಶವನ್ನು ಇಂಡಿಯಾ ಒಕ್ಕೂಟದ ಪಕ್ಷಗಳು ನಿರೀಕ್ಷಿಸುತ್ತಿವೆ. ಹಾಗೊಂದು ವೇಳೆ, ಮತಗಟ್ಟೆ ಸಮೀಕ್ಷೆಗಳು ಉಲ್ಟಾ ಹೊಡೆದರೆ, ಇಂಡಿಯಾ ಮೈತ್ರಿಕೂಟವು ಮುನ್ನಡೆ ಸಾಧಿಸಲಿದೆ.

ಸಮೀಕ್ಷೆಗಳು ಹೇಳಿರುವುದೇನು?

ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. 2019ರಲ್ಲಿ ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.

Kharage or Rahul may be pm candidate for India bloc Sasy Shashi Shashi Tharoor

200 ಸಮೀಪವೂ ಬಾರದ ಇಂಡಿಯಾ ಒಕ್ಕೂಟ

ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟವು ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ 125-165 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ಮತಗಟ್ಟೆ ಸಮೀಕ್ಷೆಗಳ ಒಟ್ಟು ಸಾರವಾಗಿದೆ. ಇದರೊಂದಿಗೆ ಇಂಡಿಯಾ ಒಕ್ಕೂಟವು ಮ್ಯಾಜಿಕ್‌ ನಂಬರ್‌ (272) ಬಿಡಿ, 200 ಕ್ಷೇತ್ರಗಳನ್ನೂ ತಲುಪುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಇದರೊಂದಿಗೆ ಕಾಂಗ್ರೆಸ್‌ ಸೇರಿ ಪ್ರತಿಪಕ್ಷಗಳಿಗೆ ಸತತ ಮೂರನೇ ಬಾರಿಯೂ ಹಿನ್ನಡೆಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಲಾಭ

ದಕ್ಷಿಣ ಭಾರತದಲ್ಲಿ, ಅದರಲ್ಲೂ ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿವೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ.

ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, 2019ರಲ್ಲಿ ಶೇ.77.84ರಷ್ಟಿದ್ದ ಮತದಾನ ಪ್ರಮಾಣ ಈ ಬಾರಿ ಶೇ.70.35ಕ್ಕೆ ಕುಸಿದಿತ್ತು.

ಇದನ್ನೂ ಓದಿ: PM Narendra Modi: ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ; ದೇಶದ ಜನತೆಗೆ ಮೋದಿ ಭಾವುಕ ಪತ್ರ

Continue Reading

ದಾವಣಗೆರೆ

Davangere Lok Sabha Constituency: ದಾವಣಗೆರೆಯಲ್ಲಿ ನಾರಿಶಕ್ತಿ ಕದನ, ಯಾರು ಗೆದ್ದರೂ ಇತಿಹಾಸ

Davangere Lok Sabha Constituency: ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಯಾರು ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ. ಕಾಂಗ್ರೆಸ್‌ನಿಂದ ಪ್ರಭಾ ಮಲ್ಲಿಕಾರ್ಜುನ್‌, ಬಿಜೆಪಿಯಿಂದ ಗಾಯತ್ರಿ ಸಿದ್ದೇಶ್ವರ್‌ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಜಿ.ಬಿ.ವಿನಯ್‌ ಕುಮಾರ್‌ ಅವರು ಕಣಕ್ಕಿಳಿದಿದ್ದು, ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಜಾಸ್ತಿಯಾಗಿದೆ.

VISTARANEWS.COM


on

Davangere Lok Sabha Constituency
Koo

ದಾವಣಗೆರೆ: ಬೆಣ್ಣೆ ದೋಸೆಗೆ ಖ್ಯಾತಿಯಾಗಿರುವ ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ (Davangere Lok Sabha Constituency) ಈ ಬಾರಿಯೂ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರ ಕುಟುಂಬಗಳ ನಡುವಿನ ಸಮರವೇ ಜೋರಾಗಿದೆ. ಆದರೆ, ಈ ಕುಟುಂಬಗಳ ಮಹಿಳೆಯರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇದರ ಮಧ್ಯೆಯೇ, ಜಿ.ಬಿ. ವಿನಯ್‌ ಕುಮಾರ್‌ ಅವರು ಕಾಂಗ್ರೆಸ್‌ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮತಗಳ ವಿಭಜನೆ ನಿರೀಕ್ಷಿಸಲಾಗಿದೆ.

ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರಿಗೆ ಅನಾರೋಗ್ಯದ ಕಾರಣದಿಂದಾಗಿ ಬಿಜೆಪಿಯು ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್‌ ಅವರನ್ನು ಕಣಕ್ಕಿಳಿಸಿದೆ. ಅತ್ತ, ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಇದರಿಂದಾಗಿ ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ನಾರಿಶಕ್ತಿಯ ನಡುವಿನ ದೊಡ್ಡ ಸಮರವಾಗಿದೆ. ಹಾಗಾಗಿ, ಯಾರು ಗೆದ್ದರೂ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಯಾಗಲಿದೆ ಎಂದೇ ಹೇಳಲಾಗುತ್ತಿದೆ.

ಜಿ.ಎಂ.ಸಿದ್ದೇಶ್ವರ್‌ ಅವರು ಅನಾರೋಗ್ಯದ ಮಧ್ಯೆಯೂ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ನರೇಂದ್ರ ಮೋದಿ ಅವರ ಅಲೆಯು ಕೂಡ ಕ್ಷೇತ್ರದಲ್ಲಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಧ್ಯಸ್ಥಿಕೆಯಿಂದಾಗಿ ಕ್ಷೇತ್ರದಲ್ಲಿ ಭುಗಿಲೆದ್ದಿದ್ದ ಭಿನ್ನಮತವು ಶಮನವಾಗಿದೆ. ಹಾಗಾಗಿ, ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಗೆಲುವು ಸಿಕ್ಕರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ದಾವಣಗೆರೆ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ವರ್ಚಸ್ಸಿದೆ. ಇವರ ಪುತ್ರ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸಚಿವರೂ ಆಗಿದ್ದಾರೆ. ಲಿಂಗಾಯತ ಮತಗಳ ಮೇಲೆ ಇವರ ಕುಟುಂಬದ ಹಿಡಿತವಿದೆ. ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಕಳೆದ ಒಂದು ವರ್ಷದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು ಜನರಿಗೆ ಹತ್ತಿರವಾಗಿದ್ದಾರೆ. ಮಾವ, ಪತಿಯ ಬಲದಿಂದ, ಸಮಾಜ ಸೇವೆ, ಕಾಂಗ್ರೆಸ್‌ ಗ್ಯಾರಂಟಿಗಳ ಫಲವಾಗಿ ಪ್ರಭಾ ಮಲ್ಲಿಕಾರ್ಜುನ್‌ ಅವರು ಮುನ್ನಡೆಯ ವಿಶ್ವಾಸದಲ್ಲಿದ್ದಾರೆ. ಆದರೆ, ಜಿ.ಬಿ.ವಿನಯ್‌ ಕುಮಾರ್‌ ಅವರು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿರುವುದು ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ತುಸು ಹಿನ್ನಡೆ ಎಂದೇ ಹೇಳಲಾಗುತ್ತಿದೆ.

ಪ್ರಭಾ ಮಲ್ಲಿಕಾರ್ಜುನ್

2019, 2014ರ ಫಲಿತಾಂಶ ಏನಾಗಿತ್ತು?

2019ರಲ್ಲಿ ಬಿಜೆಪಿಯ ಜಿ.ಎಂ.ಸಿದ್ದೇಶ್ವರ್‌ ಅವರು ಕಾಂಗ್ರೆಸ್‌ನ ಎಚ್‌.ಬಿ.ಮಂಜಪ್ಪ ಅವರ ವಿರುದ್ಧ ಸುಮಾರು 1.69 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ಕಳೆದ 4 ಲೋಕಸಭೆ ಚುನಾವಣೆಗಳಲ್ಲೂ ಬಿಜೆಪಿಯಿಂದ ಜಿ.ಎಂ.ಸಿದ್ದೇಶ್ವರ್‌ ಅವರೇ ಗೆಲುವು ಸಾಧಿಸಿದ್ದಾರೆ. 2004, 2009 ಹಾಗೂ 2014ರಲ್ಲೂ ಜಿ.ಎಂ.ಸಿದ್ದೇಶ್ವರ್‌ ಅವರೇ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ: Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

Continue Reading
Advertisement
Stock Market
ವಾಣಿಜ್ಯ9 mins ago

Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Dharwad Lok Sabha Constituency
ಧಾರವಾಡ17 mins ago

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Anant Ambani Radhika Merchant Pre Wedding
ಫ್ಯಾಷನ್31 mins ago

Anant Ambani Radhika Merchant Pre Wedding: ಅಂಬಾನಿ ಫ್ಯಾಮಿಲಿಯ ಕ್ರ್ಯೂಸ್ ಟೂರ್‌ನಲ್ಲಿ ಸ್ಟಾರ್‌ಗಳ ಮಕ್ಕಳ ಲುಕ್‌ ಹೇಗಿದೆ ನೋಡಿ!

Vijaypur Lok Sabha Constituency
ವಿಜಯಪುರ36 mins ago

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

IND vs PAK
ಕ್ರಿಕೆಟ್48 mins ago

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

Lok Sabha Election Result 2024
ದೇಶ59 mins ago

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Maldives
ವಿದೇಶ1 hour ago

Maldives: ಇಸ್ರೇಲಿಗರ ಪ್ರವೇಶವನ್ನು ನಿಷೇಧಿಸಿದ ಮಾಲ್ಡೀವ್ಸ್‌; ಭಾರತದ ಬೀಚ್‌ಗೆ ತೆರಳಿ ಎಂದು ತಿರುಗೇಟು ನೀಡಿದ ಇಸ್ರೇಲ್‌

Cow including lineman dies of electric shock
ಉಡುಪಿ1 hour ago

Electric shock : ಪ್ರತ್ಯೇಕ ಕಡೆ‌ ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Rave Party
ಕರ್ನಾಟಕ1 hour ago

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

Saree Fashion
ಫ್ಯಾಷನ್2 hours ago

Saree Fashion: ರಫಲ್‌ ಡಿಸೈನ್‌ನಲ್ಲಿ ಬಂದಿದೆ ಜಾರ್ಜೆಟ್ ಲೆಹೆಂಗಾ ಸೀರೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌