Site icon Vistara News

Lok Sabha Election 2024: ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರಲಿದ್ದಾರೆ ಸೆಲೆಬ್ರಿಟಿಗಳು; ಕಿಚ್ಚ ಸುದೀಪ್‌ ಎಂಟ್ರಿ?

Kichcha Sudeep will be campaign for BJP in this Lok Sabha Election 2024

ಹುಬ್ಬಳ್ಳಿ: ಲೋಕಸಭೆ ಚುನಾವಣಾ (Lok Sabha Election 2024) ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಎಲ್ಲ ಕಡೆಯಿಂದ ಬರುತ್ತಾರೆ. ರಾಷ್ಟ್ರೀಯ ನಾಯಕರ ಜತೆ ಸೆಲೆಬ್ರೆಟಿಗಳು (campaign by celebrities) ಕೂಡಾ ಪ್ರಚಾರಕ್ಕೆ ಬರುತ್ತಾರೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಪ್ರವಾಸದ ನಿರ್ಧಾರ ಆಗುತ್ತದೆ ಎಂದು ಮಾಜಿ ಸಿಎಂ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್‌ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಂತೆ ಈ ಬಾರಿಯೂ ಕಿಚ್ಚ ಸುದೀಪ್‌ (Kichcha Sudeep) ಅವರು ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ್‌ ಬೊಮ್ಮಾಯಿ, ಧಾರವಾಡ ಹಾಗೂ ನಮ್ಮ ಕ್ಷೇತ್ರಕ್ಕೂ ಸೆಲೆಬ್ರಿಟಿಗಳು ಪ್ರಚಾರಕ್ಕೆ ಬರುತ್ತಾರೆ. ನಮ್ಮ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ‌ಬಿ.ವೈ. ವಿಜಯೇಂದ್ರ ಸೇರಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವೆ ಎಂದ ಎಚ್.ಡಿ. ಕುಮಾರಸ್ವಾಮಿ

ಎನ್‌ಡಿಆರ್‌ಎಫ್‌ ನಿಧಿ ಪಟ್ಟಿ ಬಹಿರಂಗ ಮಾಡಿ

ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ ಆಗಲಿದೆ ಎಂದು ಸುಮ್ಮನೆ ಆರೋಪ ಮಾಡಲಾಗುತ್ತಿದೆ. ಹಾಗಾದರೆ ಯುಪಿಎ ಕಾಲದಲ್ಲಿ ಎಷ್ಟು? ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎಂಬುದನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ.

ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆಯಾಗಿದೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್‌ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ ಬಿಡುಗಡೆಯಾಗಿರುವ ಎನ್‌ಡಿಆರ್‌ಎಫ್ ನಿಧಿ ಬಗ್ಗೆ ಬಹಿರಂಗಪಡಿಸಲಿ ಎಂದು ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಇದೇ ವೇಳೆ ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ್ ಬೊಮ್ಮಾಯಿ, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ ಕಾಂಗ್ರೆಸ್ಸಿಗರ ಕಪಾಳಕ್ಕೆ ಹೊಡೆಯುತ್ತಾರೆ ಎಂದು ಹೇಳಿದರು.

ಬಿಜೆಪಿಯಲ್ಲಿ ಭಿನ್ನಮತ ಶಮನವಾಗಿದೆ

ರಾಜ್ಯದಲ್ಲಿ ಈಗ ಉತ್ತರ ವಾತಾವರಣ ಇದೆ. ಎಲ್ಲ ಕಡೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಪರ ಅಲೆ ಇದೆ. ರಾಜ್ಯ ಬಿಜೆಪಿಯ ಅಲ್ಲಲ್ಲಿ ಎದ್ದಿರುವ ಭಿನ್ನಮತ ಶಮನ ಆಗುತ್ತಿದೆ. ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಬಂಡಾಯ ಶಮನಕ್ಕೆ ಹೊರಟ ದಿಗ್ಗಜರು; ಹಳೇ ಮೈಸೂರಿಗೆ ವಿಜಯೇಂದ್ರ, ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ

ಬಿಜೆಪಿಗೆ ರೆಡ್ಡಿ ಬಲ

ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದಿರುವುದು ಬಲ ಬಂದಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ. ಇದರಿಂದ ಪಕ್ಷಕ್ಕೆ ಲಾಭವಾಗಲಿದೆ ಎಂದು ಬಸವರಾಜ್‌ ಬೊಮ್ಮಾಯಿ ಹೇಳಿದರು.

ಬಿಜೆಪಿಗೆ ಬಂದರೆ ಎಲ್ಲರೂ ಶುದ್ಧವಾಗುತ್ತಾರೆ ಅನ್ನುವ ಸಚಿವ ಸಂತೋಷ್ ಲಾಡ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಬಸವರಾಜ್ ಬೊಮ್ಮಾಯಿ, ಅದು ಅವರ ಅನುಭವದ ಮಾತು ಎಂದು ತಿರುಗೇಟು ನೀಡಿದರು.

ಕಿಚ್ಚ ಸುದೀಪ್‌ ಎಂಟ್ರಿ?

ಕಳೆದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಹಾಗೂ ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಪರ ಖ್ಯಾತ ಸ್ಯಾಂಡಲ್‌ವುಡ್‌ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ (Kichcha Sudeep) ಪ್ರಚಾರ ಮಾಡಿದ್ದರು. ಅವರು ಬಿಜೆಪಿಯ ಸ್ಟಾರ್‌ ಪ್ರಚಾರಕರಾಗಿದ್ದರು. ಈ ಬಾರಿಯೂ ಅವರನ್ನು ಬೊಮ್ಮಾಯಿ ಕರೆತರಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದ್ದು, ಇನ್ನೂ ಈ ಬಗ್ಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

Exit mobile version