Site icon Vistara News

Lok Sabha Election 2024: ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟ; ಪಕ್ಷಗಳಿಗೆ ಆಯೋಗ ಸೂಚಿಸಿದ್ದೇನು?

election

election

ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆ (Lok Sabha Election 2024)ಯ ವೇಳಾಪಟ್ಟಿ ಘೋಷಣೆಯಾಗಿದೆ. ಈ ಬಾರಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ (Election Commission Of India) ತಿಳಿಸಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಚುನಾವಣಾ ದಿನಾಂಕವನ್ನು ಘೋಷಿಸಿದರು. ಈ ಘೋಷಣೆಯೊಂದಿಗೆ ಮಾದರಿ ನೀತಿ ಸಂಹಿತೆಯನ್ನು ತಕ್ಷಣವೇ ಜಾರಿಗೆ ತರಲಾಗಿದ್ದು, ಆಡಳಿತಾರೂಢ ಸರ್ಕಾರವು ಯಾವುದೇ ಹೊಸ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ರಾಜೀವ್‌ ಕುಮಾರ್‌ ತಿಳಿಸಿದ್ದಾರೆ. ಇದರ ಜತೆಗೆ ರಾಜಕೀಯ ಪಕ್ಷಗಳಿಗೆ ಮಾರ್ಗಸೂಚಿಯನ್ನೂ ತಿಳಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಏನೇನಿದೆ?

ನೀತಿ ಸಂಹಿತೆ ಎಂದರೇನು?

ಪ್ರತಿ ಚುನಾವಣೆ ಘೋಷಣೆಯಾದಾಗಲೂ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗುತ್ತದೆ. ಹಾಗಾದರೆ ಈ ಮಾದರಿ ನೀತಿ ಸಂಹಿತೆ ಎಂದರೇನು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಚುನಾವಣಾ ಆಯೋಗವು ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಪ್ರಚಾರವನ್ನು ನಿಯಂತ್ರಿಸಲು ಹೊರಡಿಸಿರುವ ಮಾರ್ಗಸೂಚಿಗಳನ್ನು ಮಾದರಿ ನೀತಿ ಸಂಹಿತೆ ಎಂದು ಕರೆಯಲಾಗುತ್ತದೆ. ಮತದಾರರ ಮೇಲೆ ಪ್ರಭಾವ ಬೀರುವ ಅಥವಾ ಚುನಾವಣಾ ಪ್ರಕ್ರಿಯೆಗಳನ್ನು ಹಾಳುಗೆಡಗುವಂತಹ ಯಾವುದೇ ಚಟುವಟಿಕೆಗಳನ್ನು ತಡೆಯುವುದು ಮಾದರಿ ನೀತಿ ಸಂಹಿತೆಯ ಗುರಿ. ಆ ಮೂಲಕ ನ್ಯಾಯ ಸಮ್ಮತ ಚುನಾವಣೆ ನಡೆಯುವುದನ್ನು ಖಚಿತಪಡಿಸಲಾಗುತ್ತದೆ.

ಚುನಾವಣೆ ಯಾವಾಗ?

ಏಪ್ರಿಲ್‌ 19ರಂದು 102 ಕ್ಷೇತ್ರಗಳು ಕ್ಷೇತ್ರಗಳಿಗೆ ಮತದಾನ ನಡೆಯುವ ಮೂಲಕ ಏಳು ಹಂತದ ಚುನಾವಣೆಗೆ ನಾಂದಿ ಹಾಡಲಾಗುತ್ತದೆ. ಬಳಿಕ ಏಪ್ರಿಲ್‌ 26ರಂದು ನಡೆಯುವ 2ನೇ ಹಂತದಲ್ಲಿ 89 ಕ್ಷೇತ್ರ, ಮೇ 7ರ 3ನೇ ಹಂತದಲ್ಲಿ 94 ಕ್ಷೇತ್ರ, ಮೇ 13ರಂದು ನಡೆಯುವ 4ನೇ ಹಂತದಲ್ಲಿ 96 ಕ್ಷೇತ್ರ, ಮೇ 20ರ 5ನೇ ಹಂತದಲ್ಲಿ 49 ಕ್ಷೇತ್ರ, ಮೇ 25ರಂದು ನಡೆಯುವ 6ನೇ ಹಂತದಲ್ಲಿ 57 ಕ್ಷೇತ್ರ ಮತ್ತು ಜೂನ್‌ 1ರ 7ನೇ ಹಂತದಲ್ಲಿ 57 ಕ್ಷೇತ್ರಗಳ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: Assembly Elections: 4 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ; ಇಲ್ಲಿದೆ ವಿವರ

ಕರ್ನಾಟಕದಲ್ಲಿ ಎರಡು ಹಂತದಲ್ಲಿ (ಏಪ್ರಿಲ್‌ 26 ಮತ್ತು ಮೇ 7ರಂದು) ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version