Lok Sabha Election 2024: ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡಲೋ? ಕಿತ್ತುಕೊಳ್ಳಲೋ? ಸಿಎಂ ಪ್ರಶ್ನೆ - Vistara News

Lok Sabha Election 2024

Lok Sabha Election 2024: ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡಲೋ? ಕಿತ್ತುಕೊಳ್ಳಲೋ? ಸಿಎಂ ಪ್ರಶ್ನೆ

Lok Sabha Election 2024: ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈ ವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ? ಎಂದು ಅಮಿತ್‌ ಶಾ ಅವರನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Lok Sabha Election 2024 CM Siddaramaiah attack on Amit Shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಈಗ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯೆ ನೀಡಿದ್ದು, ಅಮಿತ್ ಶಾ ಅವರು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಕೇಂದ್ರದಿಂದ ತಾರತಮ್ಯ ನೀತಿಯನ್ನು ಅನುಸರಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಪ್ರತಿಕಾ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಬರ ಪರಿಹಾರಕ್ಕೆ ಮನವಿ ಮಾಡಿ ನಾಲ್ಕು ತಿಂಗಳು ಕಳೆದಿದೆ ನಯಾಪೈಸೆ ಕೊಟ್ಟಿಲ್ಲ, ಹಿಂದೆ ಬಿಜೆಪಿಯೇ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗಲೂ ಹೀಗೆಯೇ ಅನ್ಯಾಯ ಮಾಡಿದ್ದಿರಿ, ನಿಮಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ಎಂದು ಪ್ರಶ್ನೆ ಮಾಡಿದ್ದಾರೆ. ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಆರು ವರ್ಷಗಳಾಗುತ್ತಾ ಬಂದರೂ ಇಲ್ಲಿಯವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ. ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು ಎಂದು ಸಲಹೆ ನೀಡಿದ್ದಾರೆ.

ಸಿಎಂ ಪ್ರಕಟಣೆಯಲ್ಲೇನಿದೆ?

ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ?

ಇದನ್ನೂ ಓದಿ: Lok Sabha Election 2024: ಮುಂದಿನ ಎಲೆಕ್ಷನ್‌ಗೆ ಸ್ಪರ್ಧಿಸಲ್ಲ; ಚುನಾವಣಾ ನಿವೃತ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈ ವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ?

ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್ ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರಪರಿಹಾರವನ್ನೂ ನೀಡಿಲ್ಲ. ಯಾಕೆ?

ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ ಬಂದಿತ್ತು. ಇದರಿಂದಾಗಿ ಅಂದಾಜು ₹30,000 ಕೋಟಿಯಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ ₹1,435 ಕೋಟಿ ಪರಿಹಾರ. ಅದೇ ವರ್ಷ ಮಹಾರಾಷ್ಟ್ರಕ್ಕೆ ₹8,195 ಕೋಟಿ ಮತ್ತು ಗುಜರಾತ್‌ಗೆ ₹3,894 ಕೋಟಿ ಪರಿಹಾರ ನೀಡಲಾಗಿತ್ತು. 2019ರಲ್ಲಿ ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ?

ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್. ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡಿದ್ದು ಗುಜರಾತ್‌ನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?

ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂ ಎಫ್ ಅನ್ನು ಗುಜರಾತ್‌ನ ಅಮುಲ್ ಜತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟಿದ್ದು ನಿಜ ಅಲ್ಲವೇ?

ಗೃಹ ಸಚಿವ ಅಮಿತ್ ಶಾ ಅವರೇ, ಕರ್ನಾಟಕದಲ್ಲಿ ಮತ ಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ.

ಜಗತ್ತಿನ ಯಾವ ಭಾಷೆಗೂ ನಮ್ಮ ವಿರೋಧ ಇಲ್ಲ. ಆದರೆ ಕನ್ನಡದ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪೂಜೆ ಸಲ್ಲಬೇಕೆನ್ನುವುದು ಮಾತ್ರ ಕನ್ನಡಿಗರ ನಿಲುವು. ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಆರು ವರ್ಷಗಳಾಗುತ್ತಾ ಬಂದರೂ ಇಲ್ಲಿಯವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ. ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ಉತ್ತರ ಕೊಡಿ.

ಹಿಂದಿ ರಾಷ್ಟ್ರಭಾಷೆ ಎನ್ನುವುದನ್ನು ಸಂವಿಧಾನ ಹೇಳಿದೆಯೇ?

ರಾಷ್ಟ್ರೀಕೃತ ಬ್ಯಾಂಕ್, ರೈಲ್ವೆ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ಸ್ವಾಮ್ಯದ ಎಲ್ಲ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನೂ ಮಾಧ್ಯಮವಾಗಿ ಬಳಸಲು ಅವಕಾಶ ಇರಬೇಕೆಂಬುದು ಕನ್ನಡಿಗರ ಬಹುವರ್ಷಗಳ ಬೇಡಿಕೆ. ಈ ಅವಕಾಶದಿಂದ ವಂಚಿತರಾದ ಉದ್ಯೋಗಾರ್ಥಿ ಕನ್ನಡಿಗ ಯುವಕ-ಯುವತಿಯರು ಉದ್ಯೋಗದಿಂದಲೂ ವಂಚಿತರಾಗಿ ನಿರುದ್ಯೋಗಿಗಳಾಗುತ್ತಿದ್ದಾರೆ. ಇದಕ್ಕೆ ನೀವೇ ಹೊಣೆ ಅಲ್ಲವೇ?
ಹಿಂದಿ ಎನ್ನುವುದು ರಾಷ್ಟ್ರಭಾಷೆ ಎನ್ನುವ ಸುಳ್ಳನ್ನು ಮತ್ತೆ ಮತ್ತೆ ಹೇಳಿ ಆ ಭಾಷೆಯನ್ನು ಕನ್ನಡಿಗರ ಮೇಲೆ ಹೇರುತ್ತಿರುವುದು ಯಾಕೆ? ಹಿಂದಿ ರಾಷ್ಟ್ರಭಾಷೆ ಎನ್ನುವುದನ್ನು ಸಂವಿಧಾನ ಹೇಳಿದೆಯೇ? ಹೇಳಿದ್ದರೆ ಸಂವಿಧಾನದ ಯಾವ ಪರಿಚ್ಚೇದಲ್ಲಿ ಹೇಳಲಾಗಿದೆ? ದಯವಿಟ್ಟು ಅದನ್ನು ಕನ್ನಡಿಗರ ಮುಂದೆ ತೆರೆದಿಡಿ.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ಅಮಿತೋತ್ಸಾಹ; ಸಿದ್ದರಾಮಯ್ಯ, ಡಿಕೆಶಿಗೆ ತವರಲ್ಲಿ ಚೆಕ್‌ಮೇಟ್‌ಗೆ ಮೆಗಾ ಪ್ಲ್ಯಾನ್!

ಒಳ್ಳೆಯತನದ ವಿವೇಕವೂ ನಿಮಗೆ ಇಲ್ಲ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಯ ಆಧಾರದಲ್ಲಿ ಮತಕೇಳುವ ವಿಶ್ವಾಸ ನಿಮಗೆ ಇಲ್ಲ. ಮಾಡಿರುವ ತಪ್ಪುಗಳನ್ನು ಒಪ್ಪಿಕೊಳ್ಳುವ ಸಹೃದಯತೆಯೂ ನಿಮಗೆ ಇಲ್ಲ. ರಾಜಕೀಯ ಲಾಭಕ್ಕಾಗಿ ಸಮಾಜದ ಶಾಂತಿ-ಸೌಹಾರ್ದತೆಯನ್ನು ಕೆಡಿಸಬಾರದೆಂಬ ಒಳ್ಳೆಯತನದ ವಿವೇಕವೂ ನಿಮಗೆ ಇಲ್ಲ. ನೀವು ನೀಡಿರುವ ಸಲಹೆಯಂತೆಯೇ ತಾವು ಗಲಭೆ ನಡೆಸುತ್ತಿರುವುದಾಗಿ ಮೈಸೂರಿನ ಮಾಜಿ ಸಂಸದನೊಬ್ಬ ಬಹಿರಂಗ ಹೇಳಿಕೆ ನೀಡಿದ್ದಾನೆ. ನೀವು ಹೋದಲ್ಲಿ ಬಂದಲ್ಲಿ ಗಲಭೆ ನಡೆದು ಶಾಂತಿ ಭಂಗವಾಗುತ್ತಿರುವುದಕ್ಕೆ ಇದೇ ಕಾರಣವೇ?

ಚುನಾವಣೆಯ ಫಲಿತಾಂಶವೇ ಪುನರಾವರ್ತನೆ

ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ, ಕನ್ನಡಿಗರಿಗೆ ದ್ರೋಹ ಎಸಗಬೇಡಿ, ಕನ್ನಡ ಭಾಷೆಯನ್ನು ತುಳಿಯಲು ಹೋಗಬೇಡಿ, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಲು ಹೋಗಬೇಡಿ. ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು. ಇದರ ಹೊರತಾಗಿ ಅಡ್ಡಮಾರ್ಗದ ಮೂಲಕ ಚುನಾವಣೆಯನ್ನು ಎದುರಿಸಲು ಹೊರಟರೆ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿ ಪುನರಾವರ್ತನೆಯಾಗುವುದು ಖಂಡಿತ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

PM Narendra Modi: ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

PM Narendra Modi
Koo

ಪಾಟ್ನಾ: ಲೋಕಸಭೆ ಚುನಾವಣೆ(Lok Sabha Election 2024)ಯ ಕೊನೆಯ ಹಂತಕ್ಕೆ ತಲುಪಿದ್ದು, ರಾಜಕೀಯ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಯನ್ನೂ ಎದುರಿಸುತ್ತಿರುವ ಒಡಿಶಾದಲ್ಲಿ ಕೊನೆಯ ಹಂತದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸಿಎಂ ನವೀನ್‌ ಪಟ್ನಾಯಕ್‌ (Naveen Patnaik) ಅವರ ಆರೋಗ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಈ ವಿಡಿಯೂ ದೇಶವ್ಯಾಪಿ ಬಹಳ ಸದ್ದು ಮಾಡುತ್ತಿದೆ.

ಒಡಿಶಾದ ಮಯೂರ್‌ಭಂಜ್‌ನಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಡಿಶಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹಾಲಿ ಸಿಎಂ ನವೀನ್‌ ಪಟ್ನಾಯಕ್‌ ಅವರ ಆರೋಗ್ಯ ಕ್ಷೀಣಿಸಲು ಕಾರಣ ಏನೆಂಬುದರ ಬಗ್ಗೆ ತನಿಖೆಗೆ ಆದೇಶಿಸುತ್ತೇವೆ ಎಂದು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಕಳೆದೊಂದು ವರ್ಷಗಳಿಂದ ನವೀನ್‌ ಬಾಬು(ಪಟ್ನಾಯಕ್‌) ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡುತ್ತಿರುವ ಬಗ್ಗೆ ಅವರ ಹಿತೈಷಿಗಳು ಇತ್ತೀಚೆಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಕಳೆದೊಂಡು ವರ್ಷಗಳಿಂದ ಪಟ್ನಾಯಕ್‌ ಅವರ ಪರಿಚಯಸ್ಥರು ಯಾರೇ ನನ್ನನ್ನು ಭೇಟಿ ಮಾಡಿದರೂ ಅವರ ಆರೋಗ್ಯದ ಬಗ್ಗೆ ಚರ್ಚೆ ಮಾಡುತ್ತಾರೆ. ಈಗೀಗ ಅವರಿಗೆ ತಮ್ಮ ಸ್ವಂತ ಕೆಲಸಗಳನ್ನೂ ಮಾಡಿಕೊಳ್ಳಲಾಗದಂತಹ ಅನಾರೋಗ್ಯ ಕಾಡುತ್ತಿದೆ ಎಂಬುದು ಅವರ ಆಪ್ತರಿಂದ ತಿಳಿದಿದೆ.

ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ. ಜೂ.10ರ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ನವೀನ್‌ ಬಾಬು ಅವರ ಅನಾರೋಗ್ಯಕ್ಕೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ವಿಶೇಷ ಸಮಿತಿ ರಚಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಒಡಿಶಾದಲ್ಲಿ ಬಿಜೆಡಿಯ 25 ವರ್ಷಗಳ ಆಡಳಿತ ಅಂತ್ಯಗೊಳ್ಳುವುದು ಖಚಿತ. ಬಿಜೆಪಿಯ ವ್ಯಕ್ತಿ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಒಡಿಶಾಗೆ ಒಡಿಯಾ ವ್ಯಕ್ತಿಯೇ ಸಿಎಂ ಆದರೆ ಚೆಂದ. ಹೊರಗಿನವರ ಕೈಗೆ ಅಧಿಕಾರ ಕೊಡಲು ಜನರಿಗೂ ಮನಸಿಲ್ಲ ಎಂದು ಪರೋಕ್ಷವಾಗಿ ಬಿಜೆಡಿ ಸಿಎಂ ಸ್ಥಾನದ ಆಕಾಂಕ್ಷಿ ಪಾಂಡಿಯನ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ:Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Continue Reading

ದೇಶ

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

Rahul Gandhi:ಉತ್ತರಪ್ರದೇಶದ ರುದ್ರಪುರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಹುಲ್‌ ಗಾಂಧಿ ವೇದಿಕೆಯಲ್ಲಿ ಮಾತನಾಡುತ್ತಾ ಅಲ್ಲೇ ಇದ್ದ ಬಾಟಲಿಯ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಅಲ್ಲದೇ ಅಬ್ಬಾ ಎಂಥಾ ಸೆಖೆ ಎಂದು ಹೇಳಿದ್ದಾರೆ. ಇದು ವಿಡಿಯೋದಲ್ಲಿ ಸೆರೆ ಆಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಉತ್ತರಭಾರತದಲ್ಲಿ ಸಹಿಸಲಾಗದಂತಹ ಬಿಸಿಗಾಳಿ ಬೀಸುತ್ತಿದ್ದು, ಉಷ್ಣಾಂಶ 48 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಿದೆ.

VISTARANEWS.COM


on

Rahul Gandhi
Koo

ಉತ್ತರಪ್ರದೇಶ: ಉತ್ತರಭಾರತದಲ್ಲಿ ಬಿಸಿಲ ಬೇಗೆ ದಿನೇ ದಿನೇ ಹಚ್ಚಾಗುತ್ತಿದೆ. ಜನ ಅಂತೂ ಸೆಖೆಗೆ ಬಳಲಿ ಬೆಂಡಾಗಿದ್ದಾರೆ. ಇದೀಗ ಬಿಸಿಲಿನ ಶಾಖ ಕಾಂಗ್ರೆಸ್‌ ನಾಯಕ(Congress Leader) ರಾಹುಲ್‌ ಗಾಂಧಿ(Rahul Gandhi) ಅವರಿಗೂ ತಟ್ಟಿದೆ. ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ನಾಯಕ ಎಂದರೆ ಅದು ರಾಹುಲ್‌ ಗಾಂಧಿ. ಅವರು ಎಲ್ಲೇ ಹೋದರೂ ಚಿತ್ರ ವಿಚಿತ್ರ ಕೆಲಸ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌(Viral Video) ಆಗುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರಪ್ರದೇಶದ ರುದ್ರಪುರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಹುಲ್‌ ಗಾಂಧಿ ವೇದಿಕೆಯಲ್ಲಿ ಮಾತನಾಡುತ್ತಾ ಅಲ್ಲೇ ಇದ್ದ ಬಾಟಲಿಯ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಅಲ್ಲದೇ ಅಬ್ಬಾ ಎಂಥಾ ಸೆಖೆ ಎಂದು ಹೇಳಿದ್ದಾರೆ. ಇದು ವಿಡಿಯೋದಲ್ಲಿ ಸೆರೆ ಆಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಉತ್ತರಭಾರತದಲ್ಲಿ ಸಹಿಸಲಾಗದಂತಹ ಬಿಸಿಗಾಳಿ ಬೀಸುತ್ತಿದ್ದು, ಉಷ್ಣಾಂಶ 48 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಿದೆ.

ಎರಡು ದಿನಗಳ ಹಿಂದೆಯಷ್ಟೇ ರಾಹುಲ್‌ ಗಾಂಧಿ ಭಾಗಿಯಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ವೇದಿಕೆ ಕುಸಿದ ಘಟನೆ ವರದಿಯಾಗಿತ್ತು. ರಾಹುಲ್‌ ಗಾಂಧಿ ಅವರು ಬಿಹಾರದಲ್ಲಿ (Bihar) ಚುನಾವಣೆ ಪ್ರಚಾರ ಕೈಗೊಂಡಿದ್ದರು. ರಾಹುಲ್‌ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುವ ವೇಳೆ ಅವರಿದ್ದ ವೇದಿಕೆ ಕುಸಿದಿದ್ದು, ಸ್ವಲ್ಪರದರಲ್ಲಿಯೇ ಅವರು ಪಾರಾಗಿದ್ದರು.

ಪಟನಾ ಹೊರವಲಯದಲ್ಲಿರುವ ಪಾಲಿಗಂಜ್‌ನಲ್ಲಿ ಚುನಾವಣೆ ಸಮಾವೇಶ ಆಯೋಜಿಸಲಾಗಿತ್ತು. ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು. ಇಂಡಿಯಾ ಒಕ್ಕೂಟದ ಮಿತ್ರಪಕ್ಷ, ಆರ್‌ಜೆಡಿ ಅಭ್ಯರ್ಥಿ ಮೀಸಾ ಭಾರ್ತಿ ಪರವಾಗಿ ಮತಯಾಚಿಸಲು ರಾಹುಲ್‌ ಗಾಂಧಿ ಆಗಮಿಸಿದ್ದರು. ಇದೇ ವೇಳೆ, ರಾಹುಲ್‌ ಗಾಂಧಿ ಹಾಗೂ ಮೀಸಾ ಭಾರ್ತಿ ಸೇರಿ ಹಲವು ನಾಯಕರು ವೇದಿಕೆ ಮೇಲೆ ನಿಂತಿದ್ದರು. ಆಗ, ವೇದಿಕೆಯು ಕುಸಿದಿದೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ:Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಇನ್ನೇನು ಸ್ಟೇಜ್‌ನಿಂದ ಹೊರಡಬೇಕು ಎನ್ನುವರಷ್ಟರಲ್ಲಿ ವೇದಿಕೆಯು ಮತ್ತಷ್ಟು ಕುಸಿಯಿತು. ಆಗ ರಾಹುಲ್‌ ಗಾಂಧಿ ಅವರು ನಗುತ್ತಲೇ ಜನರತ್ತ ಕೈಬೀಸಿದರು. ವೇದಿಕೆಯು ತುಂಬ ಎತ್ತರದಲ್ಲಿ ಇರದ ಕಾರಣ ಯಾರಿಗೂ ಗಾಯಗಳಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.


Continue Reading

ಪ್ರಮುಖ ಸುದ್ದಿ

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Lok Sabha Election : ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election) ಆರು ಹಂತಗಳ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಆನ್​ಲೈನ್​ ಸ್ಟಾಕ್ ಟ್ರೇಡಿಂಗ್ ಮತ್ತು ಹೂಡಿಕೆ ಸಂಸ್ಥೆಯಾಗಿರುವ ಐಐಎಫ್ಎಲ್ ಸೆಕ್ಯುರಿಟೀಸ್ ತನ್ನ ಸಮೀಕ್ಷೆಯನ್ನು ಪ್ರಕಟಿಸಿದೆ. ಅದರ ಪ್ರಕಾರ ಈ ಬಾರಿ ಬಿಜೆಪಿ 320 ಸ್ಥಾನಗಳನ್ನು ಸಲೀಸಾಗಿ ಗೆಲ್ಲಲಿದೆ. ಇದು 2019ರ 303 ಸೀಟ್​ಗಳಿಂತ ಅಧಿಕ. ಆರನೇ ಹಂತದ ಮತದಾನ ಸೇರಿದಂತೆ ಬಿಜೆಪಿಗೆ ಹೆಚ್ಚು ಮತಗಳು ಬೀಳುವ ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ 3 ಶೇಕಡಾ ಮತ ಚಲಾವಣೆ ಕುಸಿತ ಕಂಡಿದೆ. (ಹಿಂದಿಯೇತರ ರಾಜ್ಯಗಳಲ್ಲಿ 0.6 ಶೇಕಡಾ ಕುಸಿತ) ಇದು ಬಿಜೆಪಿಗೆ ನಷ್ಟ ಎಂದು ಅಂದಾಜಿಸಲಾಗುತ್ತದೆ. ಇದರ ಹೊರತಾಗಿಯೂ, ಉತ್ತರ ಪ್ರದೇಶ (ಎಸ್ಪಿ-ಬಿಎಸ್ಪಿ ಮೈತ್ರಿಯ ಅನುಪಸ್ಥಿತಿ), ಒಡಿಶಾ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸಿಗುವ ಸ್ಥಾನಗಳ ಲಾಭಗಳ ಮೂಲಕ ಬಿಜೆಪಿ ಬಹುಮತ ಹೆಚ್ಚಿಸಿಕೊಳ್ಳಲಿದೆ ಎಂದು ಬ್ರೋಕರೇಜ್ ಸಂಸ್ಥೆ ಅಂದಾಜಿಸಿದೆ.

ಒಟ್ಟು ಆರು ಹಂತಗಳ ಮತದಾನ ಮುಕ್ತಾಯವಾಗಿದ್ದು ಶೇಕಡಾ 89ರಷ್ಟು ಮತಗಳು ಚಲಾವಣೆಯಾಗಿದೆ. ಈ 486 ಸ್ಥಾನಗಳ ಪೈಕಿ ಬಿಜೆಪಿ 278 ಸ್ಥಾನಗಳಲ್ಲಿ ಗೆಲುವು ಸಾಧಿಸಿಲಿದೆ. ಜೂನ್ 1 ರಂದು ನಡೆಯಲಿರುವ ಕೊನೆಯ ಹಂತದ ಚುನಾವಣೆಗೆ ಮುಂಚಿತವಾಗಿ ಮೊದಲ ಎರಡು ಹಂತಗಳಲ್ಲಿ ಮತದಾನದ ಪ್ರಮಾಣ ಕುಸಿತ ಕಂಡಿದೆ. ಆದಾಗ್ಯೂ ಬಿಜೆಪಿ 320ರ ಗಡಿ ಮುಟ್ಟುವುದು ಖಚಿತ ಎಂದು ಅದು ಅಂದಾಜಿಸಿದೆ. ಇದೇ ವೇಳೆ ಕೊನೇ ಹಂತದ ಮತದಾನ 2019 ರ ಮಟ್ಟಕ್ಕಿಂತ ಸ್ವಲ್ಪ ಕಡಿಮೆಯಾಗಬಹುದು ಸಮೀಕ್ಷೆ ಹೇಳಿದೆ.

ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ ಕಡಿಮೆಯಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

ಇದನ್ನೂ ಓದಿ: Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

1951-67ನ್ನು ಹೊರತುಪಡಿಸಿ ಭಾರತದಲ್ಲಿ ಸತತವಾಗಿ ನಡೆದ 3 ಲೋಕಸಭಾ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳಗೊಂಡ ಉದಾಹರಣೆಗಳು ಇಲ್ಲ. ಅಂತೆಯೇ 2014 ಮತ್ತು 2019 ರ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳ ಕಂಡ ನಂತರ 2024 ರ ಚುನಾವಣೆಯಲ್ಲಿ ಯಥಾವತ್​ ಪ್ರಮಾಣ ಸ್ವಲ್ಪ ಕುಸಿತ ಕಂಡಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

ಐಐಎಫ್ಎಲ್ ಸೆಕ್ಯುರಿಟೀಸ್ ಪ್ರಕಾರ, ಉತ್ತರ ಪ್ರದೇಶದಲ್ಲಿ ಬಿಜೆಪಿ 2019 ರ ಒಟ್ಟು ಸ್ಥಾನಕ್ಕೆ ಇನ್ನೂ 10 ಸ್ಥಾನಗಳನ್ನು ಸೇರ್ಪಡೆಗೊಳಿಸಲಿದೆ. ಅಂದರೆ ಒಟ್ಟು 80ರಲ್ಲಿ 72 ಬಿಜೆಪಿ ಪಾಲಾಗಲಿದೆ. 2019ರಲ್ಲಿ ಅದು 62 ಆಗಿತ್ತು. ನರೇಂದ್ರ ಮೋದಿ ನೇತೃತ್ವದ ಪಕ್ಷವು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ 2019ಕ್ಕಿಂತ ತಲಾ 5 ಹೆಚ್ಚುವರಿ ಸ್ಥಾನಗಳನ್ನು ಗಳಿಸಲದೆ. ಬಂಗಾಳದಲ್ಲಿ 18ರಿಂದ 23ಕ್ಕೆ ಏರಿಕೆಯಾದರೆ, ಒಡಿಶಾದಲ್ಲಿ 8ರಿಂದ 13ಕ್ಕೆ ಜಿಗಿಯಲಿದೆ. ಅಲ್ಲದೆ, ತೆಲಂಗಾಣ ಮತ್ತು ಆಂಧ್ರಪ್ರದೇಶ ತಲಾ 3 ಸ್ಥಾನಗಳನ್ನು ಪಡೆಯಲಿದೆ.

ಬೇಸ್​ ಪಾಯಿಂಟ್​ಗಳ ಕುಸಿತ

6 ಹಂತಗಳ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮತದಾನದ ಪ್ರಮಾಣದಲ್ಲಿ ಸರಾಸರಿ 150 ಬೇಸಿಸ್ ಪಾಯಿಂಟ್​​ಗಳ ಕುಸಿತ ಕಂಡುಬಂದಿದೆ. ಮೊದಲ ಹಂತದಲ್ಲಿ ಮತದಾನದ 400 ಬೇಸಿಸ್ ಪಾಯಿಂಟ್​ಗಳ ಕುಸಿತ ಹೋಲಿಸಿದರೆ ಇದು ಕಡಿಮೆ. ಹಂತ 4 ಮತ್ತು 5ನೇ ಹಂತದಲ್ಲಿ 2019 ಕ್ಕೆ ಹೋಲಿಸಿದರೆ ಅಲ್ಪ ಏರಿಕೆ ಕಂಡಿದ್ದು. 6 ನೇ ಹಂತವು ಅಲ್ಪ ಕುಸಿತ ದಾಖಲಾಗಿದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

2019 ರ ಚುನಾವಣೆಗೆ ಹೋಲಿಸಿದರೆ 486 ಸ್ಥಾನಗಳಲ್ಲಿ ಒಟ್ಟು 156 ಸ್ಥಾನಗಳಲ್ಲಿ ಮತದಾನದ ಪ್ರಮಾಣ ಹೆಚ್ಚಾಗಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ತಿಳಿಸಿದೆ.

ಅನಿರೀಕ್ಷಿತ ಫಲಿತಾಂಶ ಅಸಾಧ್ಯ

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರಿ ಪ್ರಮಾಣದ ಮತ ಹಂಚಿಕೆ ವ್ಯತ್ಯಾಸ ಆಗಿದೆ. ಹೀಗಾಗಿ 2024 ರ ಚುನಾವಣೆಯ ಫಲಿತಾಂಶ 2004 ರ ಚುನಾವಣೆಗಳಂತೆ ಅಚ್ಚರಿಯ ಫಲಿತಾಂಶವನ್ನು ಪ್ರಕಟಿಸುವುದಿಲ್ಲ ಎಂದು ಐಐಎಫ್ಎಲ್ ದೃಢವಾಗಿ ಹೇಳಿದೆ.

ಕರ್ನಾಟಕದಲ್ಲಿ ನಷ್ಟ

“ಮೈತ್ರಿ / ಅಭ್ಯರ್ಥಿ ಆಯ್ಕೆ ಸಮಸ್ಯೆಗಳಿಂದಾಗಿ ರಾಜಸ್ಥಾನ, ಕರ್ನಾಟಕ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಜೆಪಿಗೆ ನಷ್ಟವಾಗಬಹುದು. ಆದರೆ, ಮಹಾರಾಷ್ಟ್ರದಲ್ಲಿ ಎನ್​ಡಿಎ 2 ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಅಂದಾಜಿಸಿದೆ. 2019 ರಲ್ಲಿ 224 ಸ್ಥಾನಗಳಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮತ ಪಡೆಯುವ ಮೂಲಕ ಬಿಜೆಪಿ ತನ್ನ ಬಹುಮತವನ್ನು ಉಳಿಸಿಕೊಳ್ಳುತ್ತದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

Continue Reading

ಪ್ರಮುಖ ಸುದ್ದಿ

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

lok sabha Election : ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದರು.

VISTARANEWS.COM


on

Lok Sabha Election
Koo

ರಾಂಚಿ: ಲೋಕ ಸಭಾ ಚುನಾವಣೆ (Lok Sabha Election) ಕೊನೇ ಹಂತದ ಮತದಾದನ ಹಿನ್ನೆಲೆಯಲ್ಲಿ ಜಾರ್ಖಂಡ್​ನಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಆಡಳಿತಾರೂಢ ಜಾರ್ಖಂಡ್​ ಮುಕ್ತಿ ಮೋರ್ಚಾದ (ಜೆಎಮ್​ಎಮ್​) ವಿರುದ್ಧ ಹಲವಾರು ಆರೋಪಗಳನ್ನು ಮಾಡಿದರು. ಜಾರ್ಖಂಡ್​ನ ದುಮ್ಕಾದಲ್ಲಿ ಮಂಗಳವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದೂ ಧರ್ಮಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ‘ಲವ್ ಜಿಹಾದ್’ ಆರಂಭಗೊಂಡಿರುವುದೇ ಜಾರ್ಖಂಡ್​ನಿಂದ ಎಂದು ಹೇಳಿಕೆ ನೀಡಿದ್ದಾರೆ.

ಜೆಎಂಎಂ ನಿರಂತರವಾಗಿ ಕೋಮುವಾದಿ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ ಮೋದಿ, ಜಾರ್ಖಂಡ್​ ನ ಒಂದು ಜಿಲ್ಲೆಯಲ್ಲಿ ಭಾನುವಾರದ ಸಾಂಪ್ರದಾಯಿಕ ರಜಾದಿನವನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಹೇಳಿದರು. ವಾಸ್ತವದಲ್ಲಿ ಭಾನುವಾರ ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಕ್ರಿಶ್ಚಿಯನ್ ಸಮುದಾಯಕ್ಕೆ ಸಂಬಂಧಿಸಿದೆ. 200-300 ವರ್ಷಗಳಿಂದ ರಜಾದಿನವಾಗಿ ಪರಿಗಣಿಸಲಾಗಿದೆ. ಈಗ ಅದನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಲೂಟಿ ಆರೋಪಗಳು

ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಜೆಎಂಎಂ ಮತ್ತು ಕಾಂಗ್ರೆಸ್ ಮಿತಿಮೀರಿದ ಲೂಟಿಯಲ್ಲಿ ತೊಡಗಿವೆ ಎಂದು ಆರೋಪಿಸಿದರು, ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ಅವರು ಪ್ರತಿಜ್ಞೆ ಮಾಡಿದರು.

ಇದನ್ನೂ ಓದಿ: Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

2014ಕ್ಕೂ ಮೊದಲು ಕಾಂಗ್ರೆಸ್ ದಿನದ 24 ಗಂಟೆಯೂ ಲೂಟಿಯಲ್ಲಿ ತೊಡಗಿದ್ದರಿಂದ ಹಗರಣಗಳು ಸಾಮಾನ್ಯವಾಗಿದ್ದವು, ಆದರೆ ತಾವು ಅಧಿಕಾರಕ್ಕೆ ಬಂದ ನಂತರ ಅದನ್ನು ನಿಲ್ಲಿಸಿಸಲಾಯಿತು ಎಂದು ಹೇಳಿದರು

ನುಸುಳುಕೋರರ ಸಮಸ್ಯೆ

ಒಳನುಸುಳುವಿಕೆಯಿಂದಾಗಿ ಸಂತಾಲ್ ಪರಗಣಗಳಲ್ಲಿ ಬುಡಕಟ್ಟು ಜನಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೋದಿ ಆರೋಪಿಸಿದರು. ಜಾರ್ಖಂಡ್​ನಲ್ಲಿ ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟವು “ನುಸುಳುಕೋರರನ್ನು ಪೋಷಿಸುತ್ತಿದೆ” ಎಂದು ಅವರು ಆರೋಪಿಸಿದರು. ಬುಡಕಟ್ಟು ಜನರ ಭೂಮಿಯನ್ನು ನುಸುಳುಕೋರರು ವಶಪಡಿಸಿಕೊಳ್ಳುತ್ತಿದ್ದಾರೆ. ಅವರು ಮಹಿಳೆಯರಿಗೆ ಅಪಾಯವನ್ನುಂಟು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಜಾರ್ಖಂಡ್​ನಲ್ಲಿ ದೊಡ್ಡ ಬಿಕ್ಕಟ್ಟು ತಲೆದೋರಿದೆ. ಅದುವೇ ಒಳನುಸುಳುವಿಕೆ. ಸಂತಾಲ್ ಪರಗಣಗಳು ಒಳನುಸುಳುವಿಕೆಯ ಸವಾಲನ್ನು ಎದುರಿಸುತ್ತಿವೆ. ಅನೇಕ ಪ್ರದೇಶಗಳಲ್ಲಿ, ಬುಡಕಟ್ಟು ಜನರ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ ಮತ್ತು ಒಳನುಸುಳುವವರ ಸಂಖ್ಯೆ ಹೆಚ್ಚುತ್ತಿದೆ. ನುಸುಳುಕೋರರು ಬುಡಕಟ್ಟು ಜನರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ಬುಡಕಟ್ಟು ಹೆಣ್ಣುಮಕ್ಕಳು ನುಸುಳುಕೋರರ ದಾಳಿಗೆ ಗುರಿಯಾಗಿದ್ದಾರೆ. ಅವರ ಭದ್ರತೆ ಮತ್ತು ಸುರಕ್ಷತೆ ಅಪಾಯದಲ್ಲಿದೆ. ಅವರ ಜೀವವೂ ಅಪಾಯದಲ್ಲಿದೆ” ಎಂದು ಅವರು ಹೇಳಿದರು.

2022 ರ ಘಟನೆಗಳನ್ನು ಉಲ್ಲೇಖಿಸಿದ ಮೋದಿ, “ಬುಡಕಟ್ಟು ಹೆಣ್ಣುಮಕ್ಕಳನ್ನು 50 ತುಂಡುಗಳಾಗಿ ಕತ್ತರಿಸಲಾಗುತ್ತಿದೆ. ಜೀವಂತವಾಗಿ ಸುಡಲಾಗುತ್ತಿದೆ ನಾಲಿಗೆಯನ್ನು ಹೊರತೆಗೆಯಲಾಗಿದೆ. ಬುಡಕಟ್ಟು ಹೆಣ್ಣುಮಕ್ಕಳನ್ನು ಗುರಿಯಾಗಿಸುತ್ತಿರುವ ಈ ಜನರು ಯಾರು? ಜೆಎಂಎಂ ಸರ್ಕಾರ ಅವರನ್ನು ಏಕೆ ಪೋಷಿಸುತ್ತಿದೆ ಎಂದು ಮೋದಿ ಪ್ರಶ್ನಿಸಿದರು. ಮುಂದಿನ ಐದು ವರ್ಷಗಳಲ್ಲಿ ದೇಶವು ಹಿಂದಿನ ದಶಕಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಸಾಕ್ಷಿಯಾಗಲಿದೆ ಎಂದು ಅವರು ಭರವಸೆ ನೀಡಿದರು.

Continue Reading
Advertisement
Forbes World Billionaires List
ವಾಣಿಜ್ಯ1 min ago

Forbes World Billionaires List: ವಿಶ್ವದ ಶ್ರೀಮಂತ ಮಹಿಳೆಯರು; ಭಾರತದ ಸಾವಿತ್ರಿ ಜಿಂದಾಲ್‌ಗೆ ಎಷ್ಟನೇ ಸ್ಥಾನ?

Cannes 2024 Sandalwood Actress Interview
ಫ್ಯಾಷನ್3 mins ago

Cannes 2024 Sandalwood Actress Interview: ಕಾನ್‌ನಲ್ಲಿ ಹ್ಯಾಟ್ರಿಕ್‌ ವಾಕ್‌ ಮಾಡಿದ ಸ್ಯಾಂಡಲ್‌ವುಡ್‌ ನಟಿ ಇತಿ ಆಚಾರ್ಯ ಹೇಳಿದ್ದೇನು?

Delhi Temperature
ದೇಶ8 mins ago

Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Babar Azam
ವೈರಲ್ ನ್ಯೂಸ್25 mins ago

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Madhu Chopra on Priyanka Chopra-Nick Jonas' age gap
ಬಾಲಿವುಡ್33 mins ago

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Tamarind Fruit Benefits
ಆರೋಗ್ಯ33 mins ago

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

Karnataka Weather
ಮಳೆ49 mins ago

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Viral News
ವೈರಲ್ ನ್ಯೂಸ್1 hour ago

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Rashmika Mandanna shares why she doesn’t speak English
ಸಿನಿಮಾ1 hour ago

Rashmika Mandanna: ಸಮಾರಂಭಗಳಲ್ಲಿ ರಶ್ಮಿಕಾ ಇಂಗ್ಲೀಷ್‌ ಏಕೆ ಮಾತನಾಡಲ್ಲ? ನಟಿ ಕೊಟ್ಟ ಸ್ಪಷ್ಟನೆ ಏನು?

Bhavani Revanna
ಕರ್ನಾಟಕ1 hour ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ22 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌