Lok Sabha Election 2024: ಬೆಂಗಳೂರಲ್ಲಿ ಅಬ್ಬರದ ರೋಡ್‌ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ! - Vistara News

Lok Sabha Election 2024

Lok Sabha Election 2024: ಬೆಂಗಳೂರಲ್ಲಿ ಅಬ್ಬರದ ರೋಡ್‌ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ!

Lok Sabha Election 2024: ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ಧ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ನಿರಂತರವಾಗಿ ಧ್ವನಿ ಎತ್ತುವ ರಾಜೀವ್ ಗೌಡರಿಂದ ನಿಮ್ಮ ಮತಕ್ಕೆ ಉತ್ತಮ ಘನತೆ ಬರುತ್ತದೆ. ಆದ್ದರಿಂದ ಪ್ರಜ್ಞಾವಂತರಾಗಿ ಇವರನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

VISTARANEWS.COM


on

Lok Sabha Election 2024 Cm Siddaramaiah holds roadshow in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಅಬ್ಬರ ಶುರುವಾಗಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಈಗ ರೋಡ್‌ ಶೋಗಳನ್ನು (Road Show) ನಡೆಸಲು ಆರಂಭ ಮಾಡಿದ್ದಾರೆ. ಈ ಮೂಲಕ ಶಕ್ತಿ ಪ್ರದರ್ಶನವನ್ನು ಮಾಡುವುದಲ್ಲದೆ, ಮತದಾರರನ್ನು ಸೆಳೆಯುತ್ತಿದ್ದಾರೆ. ಭಾನುವಾರ ರಾಜಧಾನಿಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ (Bangalore North Lok Sabha constituency) ಸಿಎಂ ಸಿದ್ದರಾಮಯ್ಯ (CM Siddaramaiah) ಭರ್ಜರಿ ರೋಡ್‌ ಶೋ ಮಾಡಿದ್ದಾರೆ.

ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ರೋಡ್‌ ಶೋದಲ್ಲಿ ಭಾಗಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ಪರ ಮತಯಾಚನೆ ಮಾಡಿದ್ದಾರೆ. ರಸ್ತೆಯುದ್ದಕ್ಕೂ ಜನರತ್ತ ಕೈಬೀಸುತ್ತಾ ಬಂದ ಸಿಎಂ ಸಿದ್ದರಾಮಯ್ಯ, ಆಗಾಗ ಕಾಂಗ್ರೆಸ್‌ಗೆ ಮತ ಹಾಕಿ ಎಂದು ನಾಗರಿಕರಲ್ಲಿ ಮನವಿ ಮಾಡಿದರು.

Lok Sabha Election 2024 Cm Siddaramaiah holds roadshow in Bengaluru

ಮಲ್ಲೇಶ್ವರಂ, ಸುಬ್ರಮಣ್ಯನಗರ, ಗಾಯತ್ರಿನಗರದಲ್ಲಿ ರೋಡ್‌ ಶೋ

ಪ್ರೊ.ರಾಜೀವ್ ಗೌಡ ಪರವಾಗಿ ಮಲ್ಲೇಶ್ವರಂ, ಸುಬ್ರಮಣ್ಯನಗರ, ಗಾಯತ್ರಿನಗರದ ಕೆಲವು ರಸ್ತೆಗಳಲ್ಲಿ ರೋಡ್‌ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಹೊಸ ಶಕ್ತಿ ಹಾಗೂ ಹುರುಪನ್ನು ತುಂಬಿದರು. ಸುಡು ಬಿಸಿಲನ್ನೂ ಲೆಕ್ಕಿಸದೆ ಸುಮಾರು ಎರಡು ಗಂಟೆಗೂ ಹೆಚ್ಚು ಸಮಯ ರೋಡ್ ಶೋ ನಡೆಸಿದರು.

ರಾಜೀವ್ ಗೌಡ ಗೆಲ್ಲೋದು ಸತ್ಯ: ಸಿಎಂ ಸಿದ್ದರಾಮಯ್ಯ

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರೊ. ರಾಜೀವ್ ಗೌಡ (Rajeev Gowda) ಗೆಲ್ಲೋದು ಸಹ ಅಷ್ಟೇ ಸತ್ಯ ಎಂದು ಹೇಳಿದರು.

Lok Sabha Election 2024 Cm Siddaramaiah holds roadshow in Bengaluru

ರಾಜ್ಯದ ಪರ ಕೆಲಸ ಮಾಡದ ಶೋಭಾ

ಕೇಂದ್ರ ಕೃಷಿ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಅವರು ರಾಜ್ಯದ ರೈತರ ಪರವಾಗಿ ಯಾವ ಕೆಲಸಗಳನ್ನೂ ಮಾಡಲಿಲ್ಲ. ಸಂಸದೆಯಾಗಿಯೂ ನಾಡಿನ ಪರವಾಗಿ ಕೆಲಸ ಮಾಡಲಿಲ್ಲ. ಇಂಥವರಿಗೆ ಬೆಂಬಲಿಸಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ ಎಂದು ಪ್ರಶ್ನೆ ಮಾಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಸ್ ಕಳಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ಧ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ನಿರಂತರವಾಗಿ ಧ್ವನಿ ಎತ್ತುವ ರಾಜೀವ್ ಗೌಡರಿಂದ ನಿಮ್ಮ ಮತಕ್ಕೆ ಉತ್ತಮ ಘನತೆ ಬರುತ್ತದೆ. ಆದ್ದರಿಂದ ಪ್ರಜ್ಞಾವಂತರಾಗಿ ಇವರನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಲೇ ಇಲ್ಲ. ಕಪ್ಪು ಹಣ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ ಕಾಳು ಯಾವುದರ ಬೆಲೆಯನ್ನೂ ಇಳಿಸಲಿಲ್ಲ. ಬರೀ ಬಾಯಲ್ಲಿ ಅಚ್ಛೇ ದಿನ್ ಆಯೇಗಾ ಎಂದು ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆಗಳಿಂದ ಹೈರಾಣಾಗಿದ್ದ ನಮ್ಮ ನಾಡಿನ ಜನತೆಯ ಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದಲೇ ಐದು ಗ್ಯಾರಂಟಿಗಳ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 5-6 ಸಾವಿರ ಉಳಿತಾಯ ಆಗುವ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಭದ್ರ ಆಗಿರುವವರೆಗೂ ಈ ಅನುಕೂಲ ಪ್ರತಿ ತಿಂಗಳೂ ಜನರ ಮನೆ ಬಾಗಿಲಿಗೆ ಬರುತ್ತಲೇ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 14ರಂದು ಕರ್ನಾಟಕಕ್ಕೆ ಮೋದಿ; ಬೆಂಗಳೂರಲ್ಲಿ ರೋಡ್‌ ಶೋ

ದೇವೇಗೌಡರ ವಿರುದ್ಧ ವಾಗ್ದಾಳಿ

ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ಭಾರತ ತೊರೆಯುವುದಾಗಿ ಹೇಳಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ ಮೋದಿಯವರ ಜತೆಗೇ ಸೇರಿದ್ದಾರೆ. ಇದ್ದದ್ದು ಇದ್ದಂಗೆ ಹೇಳಿದರೆ ದೇವೇಗೌಡರಿಗೆ ಸಿಟ್ಟು ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಕನ್ನಡಿಗರು ಸ್ವಾಭಿಮಾನ ಮೆರೆಯಬೇಕು

ನಾಡಿನ ಜನತೆಯ ತೆರಿಗೆ ಹಣದ ಪಾಲಿನಲ್ಲಿ ರಾಜ್ಯಕ್ಕೆ ವಿಪರೀತ ಅನ್ಯಾಯ ಮಾಡಿದರು. ರಾಜ್ಯದ ಜನತೆ ಪ್ರವಾಹದಿಂದ, ಬರಗಾಲದಲ್ಲಿ ನರಳುವಾಗ ಮೋದಿ, ಅಮಿತ್ ಶಾ ನೆಪಕ್ಕೂ ರಾಜ್ಯಕ್ಕೆ ಕಾಲಿಡಲಿಲ್ಲ. ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಇವತ್ತಿನವರೆಗೂ ಒಂದೇ ಒಂದು ರೂಪಾಯಿ ನೀಡಲಿಲ್ಲ. ಹೀಗೆ ನಿರಂತರವಾಗಿ ರಾಜ್ಯದ ಜನತೆಗೆ ಮಹಾದ್ರೋಹ ಎಸಗಿದ ಬಿಜೆಪಿ ಯನ್ನು ಸೋಲಿಸಿ 7 ಕೋಟಿ ಕನ್ನಡಿಗರು ಸ್ವಾಭಿಮಾನ ಮೆರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Richest MP’s: ಇವರೇ ನೋಡಿ, ಟಾಪ್ 10 ಶ್ರೀಮಂತ ಸಂಸದರು! ಇವರ ಆಸ್ತಿ ಎಷ್ಟು?

ಲೋಕಸಭಾ ಚುನಾವಣೆಯನ್ನು ಗೆದ್ದ ಅಭ್ಯರ್ಥಿಗಳಲ್ಲಿ ಶೇ. 93ರಷ್ಟು ಮಂದಿ ಕೋಟ್ಯಧಿಪತಿಗಳಾಗಿದ್ದಾರೆ ಎಂದು ಪಿ ಆರ್ ಎಸ್ ವರದಿ ಹೇಳಿದೆ. ಇದರಲ್ಲಿ ಅತೀ ಹೆಚ್ಚು ಶ್ರೀಮಂತರನ್ನು (Richest MP’s) ಗುರುತಿಸಲಾಗಿದ್ದು, ಟಾಪ್ ಹತ್ತರಲ್ಲಿ ಇರುವ ಕರ್ನಾಟಕದ ಸಂಸದೆ ಸೇರಿ ಉಳಿದವರು ಯಾರು, ಅವರ ಆಸ್ತಿ ಮೌಲ್ಯ ಎಷ್ಟಿದೆ ಗೊತ್ತೇ? ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Richest MP's
Koo

ಭಾರತೀಯ ಜನತಾ ಪಕ್ಷದ (BJP) ವರ್ಚಸ್ವಿ ನಾಯಕ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ (Prime Minister) ಅಧಿಕಾರ ವಹಿಸಿಕೊಳ್ಳುವುದರೊಂದಿಗೆ ಭಾರತದ (India) 2024ರ ಲೋಕಸಭಾ ಚುನಾವಣೆ (Loksabha election 2024) ಪ್ರಕ್ರಿಯೆ ಮುಕ್ತಾಯಗೊಂಡಿದೆ.

ಈ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (NDA) 293 ಸ್ಥಾನಗಳನ್ನು ಗೆದ್ದು ಬಹುಮತವನ್ನು ಪಡೆದುಕೊಂಡಿದೆ. ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನ ಇತ್ತೀಚಿನ ವರದಿಯ ಪ್ರಕಾರ ಪ್ರಸ್ತುತ ಲೋಕಸಭೆಯಲ್ಲಿ ಗೆದ್ದ ಅಭ್ಯರ್ಥಿಗಳಲ್ಲಿ ಶೇ. 93ರಷ್ಟು ಮಂದಿ ಕೋಟ್ಯಧಿಪತಿಗಳು (Richest MP’s). 2019ರಲ್ಲಿ ಇದು ಶೇ. 88ರಷ್ಟಿದ್ದು, 2014 ರಲ್ಲಿ ಇದು ಶೇ. 82ರಷ್ಟಾಗಿತ್ತು.

ಪಿಆರ್‌ಎಸ್ ಶಾಸಕಾಂಗ ಸಂಶೋಧನೆ ವರದಿಯ ಪ್ರಕಾರ ಲೋಕಸಭೆಯ 543 ಸ್ಥಾನಗಳಿಗೆ 8,039 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿದ್ದರು. 1996ರ ಬಳಿಕ ಈ ಚುನಾವಣೆಯಲ್ಲೇ ಅತೀ ಹೆಚ್ಚು ಅಭ್ಯರ್ಥಿಗಳನ್ನು ಸ್ಪರ್ಧಿಸಿರುವುದು ಈಗ ದಾಖಲೆಯಾಗಿದೆ.

ಈ ಬಾರಿ ಲೋಕಸಭೆಯನ್ನು ಪ್ರವೇಶಿಸಿದ ಅತೀ ಹೆಚ್ಚು ಶ್ರೀಮಂತರನ್ನು ಗುರುತಿಸಲಾಗಿದ್ದು, ಟಾಪ್ ಹತ್ತರಲ್ಲಿರುವ ಶ್ರೀಮಂತ ಸಂಸದರ ಮಾಹಿತಿ ಇಲ್ಲಿದೆ.


1. ಡಾ. ಚಂದ್ರಶೇಖರ್ ಪೆಮ್ಮಸಾನಿ- ಟಿಡಿಪಿ

ಗ್ರಾಮೀಣಾಭಿವೃದ್ಧಿ ಮತ್ತು ಸಂವಹನ ಸಚಿವಾಲಯದ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಚಂದ್ರಶೇಖರ್ ಪೆಮ್ಮಸಾನಿ ಅವರು ಮೋದಿ 3.0 ಕ್ಯಾಬಿನೆಟ್‌ನಲ್ಲಿ 2024ರ ಶ್ರೀಮಂತ ಲೋಕಸಭೆ ಅಭ್ಯರ್ಥಿ ಮತ್ತು ಸಂಸದರಾಗಿದ್ದಾರೆ. ಇವರು ಒಟ್ಟು 5,705 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಪೆಮ್ಮಸಾನಿ ಅವರು ಗುಂಟೂರು ಕ್ಷೇತ್ರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ವೈಎಸ್‌ಆರ್‌ಸಿಪಿಯ ಕಿಲಾರಿ ವೆಂಕಟ ರೋಸಾಲ ಅವರನ್ನು 3,44,695 ಮತಗಳ ಅಂತರದಿಂದ ಸೋಲಿಸಿದರು.

2. ಕೊಂಡ ವಿಶ್ವೇಶ್ವರ್ ರೆಡ್ಡಿ- ಬಿಜೆಪಿ

ತೆಲಂಗಾಣದ ಚೆಲ್ಲೆವಾ ಕ್ಷೇತ್ರದಿಂದ ಬಿಜೆಪಿಯ ಕೊಂಡ ವಿಶ್ವೇಶ್ವರ್ ರೆಡ್ಡಿ ಅವರು ಕಾಂಗ್ರೆಸ್ ನ ಡಾ. ಗದ್ದಂ ರಂಜಿತ್ ರೆಡ್ಡಿ ಅವರನ್ನು 1,72,897 ಮತಗಳ ಅಂತರದಿಂದ ಸೋಲಿಸಿದ್ದಾರೆ. ರೆಡ್ಡಿ ಅವರು 4,568 ಕೋಟಿ ರೂ. ಮೌಲ್ಯದ ಒಟ್ಟು ಆಸ್ತಿಯನ್ನು ಹೊಂದಿದ್ದಾರೆ. ಇವರು ಲೋಕಸಭೆಯಲ್ಲಿ ಪ್ರಸ್ತುತ ಸಂಸದರಲ್ಲಿ ಎರಡನೇ ಅತ್ಯಂತ ಶ್ರೀಮಂತರಾಗಿದ್ದಾರೆ.

3. ನವೀನ್ ಜಿಂದಾಲ್- ಬಿಜೆಪಿ

14 ಮತ್ತು 15ನೇ ಲೋಕಸಭೆಯಲ್ಲಿ ಸಂಸದರಾಗಿದ್ದ ನವೀನ್ ಜಿಂದಾಲ್ ಅವರು ಕುರುಕ್ಷೇತ್ರ ಕ್ಷೇತ್ರದಿಂದ ಬಿಜೆಪಿಗೆ 2024 ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಎಎಪಿಯ ಸುಶೀಲ್ ಗುಪ್ತಾ ಅವರನ್ನು 29,021 ಮತಗಳಿಂದ ಸೋಲಿಸಿದರು. ನವೀನ್ ಜಿಂದಾಲ್ ಏಷ್ಯಾದ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು ಮತ್ತು ಭಾರತದ ಪ್ರಮುಖ ಉಕ್ಕಿನ ಕಂಪೆನಿಯಾದ ಜಿಂದಾಲ್ ಸ್ಟೀಲ್ ಮತ್ತು ಪವರ್ ಲಿಮಿಟೆಡ್‌ನ ಅಧ್ಯಕ್ಷರಾಗಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 1,241 ಕೋಟಿ ರೂ. ಗಿಂತ ಹೆಚ್ಚಿದ್ದು, ಲೋಕಸಭೆಯಲ್ಲಿ ಮೂರನೇ ಅತ್ಯಂತ ಶ್ರೀಮಂತ ಸಂಸದರಾಗಿದ್ದಾರೆ.

4. ಪ್ರಭಾಕರ ರೆಡ್ಡಿ ವೇಮಿರೆಡ್ಡಿ- ಟಿಡಿಪಿ

ಪ್ರಭಾಕರ ರೆಡ್ಡಿ ವೇಮಿರೆಡ್ಡಿ ಅವರು ವಿಪಿಆರ್ ಮೈನಿಂಗ್ ಇನ್ಫ್ರಾ ಪ್ರೈ. ಲಿಮಿಟೆಡ್ ನ ಮಾಲೀಕರಾಗಿದ್ದು, 716 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ನೆಲ್ಲೂರು ಕ್ಷೇತ್ರದಲ್ಲಿ ಅವರು ವೈಎಸ್‌ಆರ್‌ಸಿಪಿಯ ವೇಣುಂಬಾಕ ವಿಜಯ ರೆಡ್ಡಿ ಅವರನ್ನು 2,45,902 ಮತಗಳ ಅಂತರದಿಂದ ಸೋಲಿಸಿದರು.

5. ಸಿ.ಎಂ. ರಮೇಶ್- ಬಿಜೆಪಿ

ಚಿಂತಕುಂಟಾ ಮುನುಸ್ವಾಮಿ ಅಥವಾ ಸಿ.ಎಂ. ರಮೇಶ್ ಅವರು ಭಾರತದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು. ಒಟ್ಟು 497 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವ ಇವರು ಆಂಧ್ರಪ್ರದೇಶದ ಅನಕಾಪಲ್ಲಿ ಕ್ಷೇತ್ರದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಡಿ. ಮುತ್ಯಾಲ ನಾಯ್ಡು ಅವರನ್ನು 2,96,530 ಮತಗಳ ಅಂತರದಿಂದ ಸೋಲಿಸಿದರು.

6. ಜ್ಯೋತಿರಾದಿತ್ಯ ಎಂ. ಸಿಂಧಿಯಾ- ಬಿಜೆಪಿ

ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು 424 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. 2021 ರಲ್ಲಿ ಮೋದಿ ಕ್ಯಾಬಿನೆಟ್ ಅಡಿಯಲ್ಲಿ ನಾಗರಿಕ ವಿಮಾನಯಾನ ಮತ್ತು ಉಕ್ಕು ಸಚಿವರಾಗಿದ್ದ ಸಿಂಧಿಯಾ ಈ ಬಾರಿಯ ಚುನಾವಣೆಯಲ್ಲಿ ಮಧ್ಯದ ಗುನಾ ಕ್ಷೇತ್ರದಿಂದ ಗೆದ್ದು, ಸಂವಹನ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವರಾಗಿ ನೇಮಕಗೊಂಡಿದ್ದಾರೆ.


7. ಛತ್ರಪತಿ ಶಾಹು ಮಹಾರಾಜ್- ಐ ಎನ್ ಸಿ

ಕೊಲ್ಲಾಪುರದ ರಾಜಮನೆತನದವರಾದ ಛತ್ರಪತಿ ಶಾಹು ಮಹಾರಾಜರ ಒಟ್ಟು ಆಸ್ತಿ 342 ಕೋಟಿ ರೂ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ, ಅವರು ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿದರು. ಮಹಾರಾಷ್ಟ್ರದ ಕೊಲ್ಲಾಪುರ ಕ್ಷೇತ್ರದಿಂದ 1,54,964 ಮತಗಳ ಗೆಲುವಿನ ಅಂತರದಿಂದ ಶಿವಸೇನೆಯ ಸಂಜಯ್ ಸದಾಶಿವರಾವ್ ಮಾಂಡ್ಲಿಕ್ ಅವರನ್ನು ಸೋಲಿಸಿದರು.

ಇದನ್ನೂ ಓದಿ: Tamilisai Soundararajan: ವೇದಿಕೆ ಮೇಲೆಯೇ ತಮಿಳ್‌ಸಾಯಿಗೆ ಅಮಿತ್‌ ಶಾ ಭರ್ಜರಿ ಕ್ಲಾಸ್;‌ ವಿಡಿಯೊ ನೋಡಿ

8. ಶ್ರೀಭರತ್ ಮಾತುಕುಮಿಲ್ಲಿ- ಟಿಡಿಪಿ

ಭಾರತೀಯ ಶಿಕ್ಷಣ ತಜ್ಞ ಮತ್ತು ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ನ (GITAM) ಅಧ್ಯಕ್ಷ, ಟಿಡಿಎಸ್ ನ ಶ್ರೀಭರತ್ ಮಟ್ಟುಕುಮಿಲ್ಲಿ ಅವರು ಒಟ್ಟು 298 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಕ್ಷೇತ್ರದಲ್ಲಿ ಅವರು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಝಾನ್ಸಿ ಲಕ್ಷ್ಮಿ ಬೋಟ್ಚಾ ಅವರನ್ನು 5,04,247 ಮತಗಳ ಅಂತರದಿಂದ ಸೋಲಿಸಿದರು.

9. ಹೇಮಾ ಮಾಲಿನಿ- ಬಿಜೆಪಿ

2024ರ ಲೋಕಸಭಾ ಚುನಾವಣೆಯಲ್ಲಿ ಮಥುರಾ ಕ್ಷೇತ್ರದಿಂದ ಗೆಲ್ಲುವ ಮೂಲಕ ಮಾಲಿನಿ ಹ್ಯಾಟ್ರಿಕ್ ಸಾಧಿಸಿದರು. ಅವರ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮುಖೇಶ್ ಧಂಗರ್ ಅವರನ್ನು 2,93,407 ಮತಗಳ ಅಂತರದಿಂದ ಸೋಲಿಸಿದರು. ಅವರು 278 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.

10. ಡಾ ಪ್ರಭಾ ಮಲ್ಲಿಕಾರ್ಜುನ್- ಕಾಂಗ್ರೆಸ್

ಕಾಂಗ್ರೆಸ್‌ನ ಡಾ. ಪ್ರಭಾ ಮಲ್ಲಿಕಾರ್ಜುನ್ ಒಟ್ಟು 241 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವರು ಕರ್ನಾಟಕದ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ಅವರನ್ನು 26,094 ಮತಗಳ ಅಂತರದಿಂದ ಸೋಲಿಸಿ ಸಂಸತ್ತು ಪ್ರವೇಶಿಸಿದ್ದಾರೆ.

Continue Reading

ರಾಜಕೀಯ

Naseeruddin Shah: ಮೋದಿ ಮುಸ್ಲಿಮರ ಟೋಪಿ ಧರಿಸಬೇಕೆಂದ ನಾಸಿರುದ್ದೀನ್ ಶಾ! ನಿಮ್ಮ ಅಭಿಪ್ರಾಯವೇನು?

ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕೇಂದ್ರ ಸಂಪುಟದಲ್ಲಿ ಮುಸ್ಲಿಂ ಪ್ರಾತಿನಿಧ್ಯವಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ನಾಸಿರುದ್ದೀನ್ ಶಾ (Naseeruddin Shah), ಇದು ಬೇಸರವನ್ನುಂಟು ಮಾಡುತ್ತದೆ. ಆದರೆ ಆಶ್ಚರ್ಯವೇನಿಲ್ಲ. ಆದರೆ ನಾನು ಮೋದಿಯವರನ್ನು ಮುಸ್ಲಿಮರು ಹಾಕುವ ಟೋಪಿಯಲ್ಲಿ ನೋಡ ಬಯಸುತ್ತೇನೆ ಎಂದು ಹೇಳಿದರು.

VISTARANEWS.COM


on

By

Naseeruddin Shah
Koo

ನವದೆಹಲಿ: ಲೋಕಸಭೆ ಚುನಾವಣೆ 2024ರ (loksabha election-2024) ಬಳಿಕ ಮೂರನೇ ಬಾರಿಗೆ ಅಧಿಕಾರಕ್ಕೆ ಏರಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ಅವರು ಯಾವಾಗಲೂ ಟೋಪಿಯನ್ನು ಇಷ್ಟಪಡುತ್ತಾರೆ ಎಂದು ತೋರುತ್ತದೆ. ಆದರೆ ನಾನು ಅವರನ್ನು ಮುಸ್ಲಿಮರು ಹಾಕುವ ಟೋಪಿಯಲ್ಲಿ (skullcap) ನೋಡಲು ಇಷ್ಟಪಡುವುದಾಗಿ ನಟ (actor) ನಾಸಿರುದ್ದೀನ್ ಶಾ (Naseeruddin Shah) ಹೇಳಿದ್ದಾರೆ.

ಸಂವಾದವೊಂದರಲ್ಲಿ ಮಾತನಾಡಿದ ಅವರು, ಭಾರತೀಯ ಮುಸ್ಲಿಮರಿಗೆ ತೋರಿಸುವ ಸಲುವಾಗಿ ನಾನು ಪ್ರಧಾನಿ ಮೋದಿಯನ್ನು ಟೋಪಿಯಲ್ಲಿ ನೋಡಲು ಇಷ್ಟಪಡುವುದಾಗಿ ಹೇಳಿಕೊಂಡಿದ್ದಾರೆ. ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಮೋದಿ 3.0 ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಪ್ರಾತಿನಿಧ್ಯವಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾ, ಇದು ಖಿನ್ನತೆಯನ್ನುಂಟು ಮಾಡುತ್ತದೆ. ಆದರೆ ಆಶ್ಚರ್ಯವೇನಿಲ್ಲ. ಮುಸ್ಲಿಮರ ಮೇಲಿನ ದ್ವೇಷವನ್ನು ಇದು ತೋರುತ್ತದೆ ಎಂದರು.

ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ದೇಶದಲ್ಲಿ ಮುಸ್ಲಿಮರಿಗೆ ಆತಂಕವಿದೆ ಎಂದು ಹೇಳಿದ್ದಾರೆ. ಇದು ನಾವು ಆತಂಕ ಪಡುವ ವಿಷಯ. ಇದು ಕೇವಲ ಹಿಂದೂಗಳು ಅಥವಾ ಮುಸ್ಲಿಮರು ಮಾತ್ರ ಮಾಡುವ ಕೆಲಸವಲ್ಲ. ಇದು ನಾವು ಒಟ್ಟಾಗಿ ಮಾಡಬೇಕಾದ ಕೆಲಸ ಎಂದು ಹೇಳಿದರು.

ಇದನ್ನೂ ಓದಿ: Tamilisai Soundararajan: ವೇದಿಕೆ ಮೇಲೆಯೇ ತಮಿಳ್‌ಸಾಯಿಗೆ ಅಮಿತ್‌ ಶಾ ಭರ್ಜರಿ ಕ್ಲಾಸ್;‌ ವಿಡಿಯೊ ನೋಡಿ

ಮೋದಿ ಅವರು ಒಂದು ದಿನ ಮುಸ್ಲಿಮರು ಧರಿಸುವ ಟೋಪಿಯಲ್ಲಿ ನೋಡಲು ನಾನು ಬಯಸುತ್ತೇನೆ. ಮುಸ್ಲಿಮರು ಧರಿಸುವ ಟೋಪಿ ಧರಿಸುವುದು ಒಂದು ಸೌಹಾರ್ದದ ಸೂಚಕವಾಗಿದೆ. ಒಂದು ಸಮಾರಂಭದಲ್ಲಿ ಅವರು ಮೌಲ್ವಿಯವರು ನೀಡಿದ ಈ ಟೋಪಿಯನ್ನು ಧರಿಸಲು ನಿರಾಕರಿಸಿದ್ದನ್ನು ಸ್ಮರಣೆಯಿಂದ ಅಳಿಸಿ ಹಾಕುವುದು ಕಷ್ಟ. ನಾನು ನಿಮ್ಮಿಂದ ಪ್ರತ್ಯೇಕವಾಗಿಲ್ಲ ಎಂದು ಅವರು ಮನವರಿಕೆ ಮಾಡಿದರೆ ಈ ದೇಶದ ಮುಸ್ಲಿಮರಿಗೆ ಇದು ಒಂದು ದೊಡ್ಡ ಸಹಾಯ ಎಂದು ನಾನು ಭಾವಿಸುತ್ತೇನೆ ಎಂದು ನಾಸಿರುದ್ದೀನ್ ಶಾ ಹೇಳಿದರು.


ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಅನಂತರ ಸತತ ಮೂರನೇ ಬಾರಿಗೆ ಗೆದ್ದ ಎರಡನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. 2024ರ ಜೂನ್ 5ರಂದು ಮೂರನೇ ಬಾರಿಗೆ ನರೇಂದ್ರ ಮೋದಿಯವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡುವ ನಿರ್ಣಯವನ್ನು ಎನ್‌ಡಿಎ ಸರ್ವಾನುಮತದಿಂದ ಅಂಗೀಕರಿಸಿತು. ನರೇಂದ್ರ ಮೋದಿ ಅವರು ಜೂನ್ 9ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Continue Reading

ದೇಶ

Tamilisai Soundararajan: ವೇದಿಕೆ ಮೇಲೆಯೇ ತಮಿಳ್‌ಸಾಯಿಗೆ ಅಮಿತ್‌ ಶಾ ಭರ್ಜರಿ ಕ್ಲಾಸ್;‌ ವಿಡಿಯೊ ನೋಡಿ

Tamilisai Soundararajan: ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಒಂದೇ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸದ ಕಾರಣ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಭಿನ್ನಮತವನ್ನು ಕೊನೆಗಾಣಿಸಬೇಕೆಂದೇ ಅಮಿತ್‌ ಶಾ ಅವರು ತಮಿಳ್‌ಸಾಯಿ ಸೌಂದರರಾಜನ್‌ ಅವರಿಗೆ ವೇದಿಕೆ ಮೇಲೆಯೇ ವಾರ್ನಿಂಗ್‌ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತ್‌ ಶಾ ಅವರು ಸಿಟ್ಟಿನಿಂದ ಮಾತನಾಡಿದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Tamilisai Soundararajan
Koo

ಅಮರಾವತಿ: ತಮಿಳುನಾಡಿನಲ್ಲಿ ಬಿಜೆಪಿಯು ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಅದರಲ್ಲೂ, ತೆಲಂಗಾಣ ಮಾಜಿ ರಾಜ್ಯಪಾಲೆ, ಪಕ್ಷದ ನಾಯಕಿ ತಮಿಳ್‌ಸಾಯಿ ಸೌಂದರರಾಜನ್‌ (Tamilisai Soundararajan) ಹಾಗೂ ಅಣ್ಣಾಮಲೈ ಬೆಂಬಲಿಗರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಾದ-ವಿವಾದಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ವೇದಿಕೆ ಮೇಲೆಯೇ ತಮಿಳ್‌ಸಾಯಿ ಸೌಂದರರಾಜನ್‌ ಅವರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್‌.ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಪವನ್‌ ಕಲ್ಯಾಣ್‌ ಅವರು ಉಪ ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ವೇದಿಕೆ ಮೇಲೆ ನರೇಂದ್ರ ಮೋದಿ ಅವರ ಜತೆಗೆ ಅಮಿತ್‌ ಶಾ, ನಿತಿನ್‌ ಗಡ್ಕರಿ, ಮಾಜಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ ತಮಿಳ್‌ಸಾಯಿ ಸೌಂದರರಾಜನ್‌ ಅವರು ವೇದಿಕೆ ಮೇಲೆ ಬಂದು ಎಲ್ಲ ನಾಯಕರಿಗೂ ನಮಸ್ಕಾರ ಮಾಡಿದರು. ಆಗ ಅಮಿತ್‌ ಶಾ ಅವರು ತಮಿಳ್‌ಸಾಯಿ ಅವರ ಜತೆ ಸಿಟ್ಟಿನಿಂದ ಮಾತನಾಡಿದ್ದಾರೆ.

ವೇದಿಕೆ ಮೇಲಿದ್ದ ನಾಯಕರಿಗೆ ಕೈ ಮುಗಿದು ನಮಸ್ಕಾರ ಮಾಡಿದ ತಮಿಳ್‌ಸಾಯಿ ಅವರು ಇನ್ನೇನು ಹೊರಡಬೇಕು ಎನ್ನುವಷ್ಟರಲ್ಲಿ ಅವರನ್ನು ಅಮಿತ್‌ ಶಾ ಅವರು ಕರೆದರು. ಕರೆದು ಹಾಗೆಲ್ಲ ಮಾಡುವುದು ಸರಿ ಅಲ್ಲ ಎನ್ನುವ ರೀತಿಯಲ್ಲಿ ಸನ್ನೆ ಮಾಡಿದರು. ಇದರಿಂದ ತುಸು ವಿಚಲಿತರಾದಂತಾದ ತಮಿಳ್‌ಸಾಯಿ ಸೌಂದರರಾಜನ್‌ ಅವರು, ಅಮಿತ್‌ ಶಾ ಅವರು ಸೂಚಿಸಿದ್ದಕ್ಕೆಲ್ಲ ಸರಿ ಎಂಬಂತೆ ತಲೆ ಅಲ್ಲಾಡಿಸಿದರು. ಆದರೆ, ಅಮಿತ್‌ ಶಾ ಅವರು ಯಾವ ವಿಷಯಕ್ಕೆ ಕೋಪ ಮಾಡಿಕೊಂಡಿದ್ದರು ಎಂಬುದು ನಿಖರವಾಗಿ ಗೊತ್ತಾಗಿಲ್ಲ.

ಏನಿದು ಭಿನ್ನಮತ?

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೆ. ಅಣ್ಣಾಮಲೈ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ನಾಯಕತ್ವದಲ್ಲಿಯೇ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸಲಾಗಿದೆ. ಒಳ್ಳೆಯ ಪ್ರಯತ್ನದ ಫಲವಾಗಿಯೂ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲೂ ಆಗದಿರುವುದು ಪಕ್ಷದಲ್ಲಿ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. “ತಮಿಳುನಾಡಿನಲ್ಲಿ ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ 35 ಕ್ಷೇತ್ರಗಳಲ್ಲಿ ಗೆಲ್ಲಬಹುದಿತ್ತು. ಇದಕ್ಕೂ ಮೊದಲು ತಮಿಳುನಾಡಿನಲ್ಲಿ ಎಲ್‌.ಮುರುಗನ್‌ ಹಾಗೂ ತಮಿಳ್‌ಸಾಯಿ ಸೌಂದರರಾಜನ್‌ ಅವರು ಪಕ್ಷದ ನಾಯಕತ್ವ ವಹಿಸಿಕೊಂಡಿದ್ದಾಗ ಸಮಸ್ಯೆ ಇರಲಿಲ್ಲ. ಅಣ್ಣಾಮಲೈ ಅವರು ರಾಜ್ಯಾಧ್ಯಕ್ಷರಾದ ಬಳಿಕವೇ ಸಮಸ್ಯೆಗಳು ಆರಂಭವಾಗಿವೆ” ಎಂದು ಎಐಎಡಿಎಂಕೆ ನಾಯಕ ಎಸ್‌.ಪಿ. ವೇಲುಮಣಿ ಹೇಳಿದ್ದಾರೆ.

ಅಣ್ಣಾಮಲೈ ಅವರು ಎಸ್‌.ಪಿ.ವೇಲುಮಣ್ಣಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, “ಎಐಎಡಿಎಂಕೆಯು ತಮಿಳುನಾಡಿನಲ್ಲಿ ಸ್ಪರ್ಧಿಸಿ ಒಂದೇ ಒಂದು ಕ್ಷೇತ್ರ ಗೆದ್ದಿಲ್ಲ. ಹಾಗಾಗಿ, ಅವರ ಹೇಳಿಕೆಯನ್ನು ಹೇಗೆ ಒಪ್ಪಿಕೊಳ್ಳಬೇಕು” ಎಂದಿದ್ದಾರೆ. ಆದರೆ, “ಎಸ್‌.ಪಿ. ವೇಲುಮಣಿ ನೀಡಿದ ಹೇಳಿಕೆಯು ವಾಸ್ತವಕ್ಕೆ ಹತ್ತಿರವಾಗಿದೆ” ಎಂದು ತಮಿಳ್‌ಸಾಯಿ ಪ್ರತಿಕ್ರಿಯಿಸಿದ್ದಾರೆ. ಇದು ಈಗ ತಮಿಳುನಾಡು ಬಿಜೆಪಿಯಲ್ಲಿ ಭಿನ್ನಮತದ ಅಲೆ ಸೃಷ್ಟಿಸಿದೆ. ಹಾಗಾಗಿಯೇ, ಅಮಿತ್‌ ಶಾ ಅವರು ತಮಿಳ್‌ಸಾಯಿ ಅವರಿಗೆ ವಾರ್ನಿಂಗ್‌ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Election Results 2024: 7 ಲಕ್ಷ ಮತಗಳಿಂದ ಗೆದ್ದು ಬೀಗಿದ ಅಮಿತ್‌ ಶಾ

Continue Reading

ದೇಶ

Rahul Gandhi: ನನ್ನ ಮೇಲೆ ಮೋದಿಗಿರುವಷ್ಟು ದೇವರ ಕೃಪೆ ಇಲ್ಲ ಎಂದ ರಾಹುಲ್‌ ಗಾಂಧಿ; ಏಕಿಂಥ ಮಾತು?

Rahul Gandhi: ವಯನಾಡು ಸಂಸದನಾಗಿಯೇ ಮುಂದುವರಿಯಬೇಕೋ ಅಥವಾ ತಾಯಿ ಸೋನಿಯಾ ಗಾಂಧಿ ಕ್ಷೇತ್ರವಾಗಿದ್ದ ರಾಯ್‌ಬರೇಲಿ ಸಂಸದನಾಗಿ ಪ್ರಮಾಣವಚನ ಸ್ವೀಕರಿಸಬೇಕೋ ಎಂಬ ಪ್ರಶ್ನೆ ನನ್ನ ಮುಂದಿವೆ. ಆದರೆ, ಇದನ್ನು ಜನರೇ ತೀರ್ಮಾನ ಮಾಡಲಿದ್ದಾರೆ. ಏಕೆಂದರೆ, ನಾನು ನರೇಂದ್ರ ಮೋದಿ ಅವರಷ್ಟು ದೈವಾಂಶ ಸಂಭೂತನಲ್ಲ ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

VISTARANEWS.COM


on

Rahul Gandhi
Koo

ತಿರುವನಂತಪುರಂ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಸ್ಪರ್ಧಿಸಿದ ವಯನಾಡು ಹಾಗೂ ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರೀಗ ಉಭಯ ಸಂಕಟಕ್ಕೆ ಸಿಲುಕಿದ್ದಾರೆ. ವಯನಾಡು ಸಂಸದನಾಗಿಯೇ ಮುಂದುವರಿಯಬೇಕೋ ಅಥವಾ ತಾಯಿ ಸೋನಿಯಾ ಗಾಂಧಿ ಕ್ಷೇತ್ರವಾಗಿದ್ದ ರಾಯ್‌ಬರೇಲಿ ಸಂಸದನಾಗಿ ಪ್ರಮಾಣವಚನ ಸ್ವೀಕರಿಸಬೇಕೋ ಎಂಬ ಗೊಂದಲ ಕಾಡುತ್ತಿದೆ. ಇದರ ಬಗ್ಗೆಯೇ ಕೇರಳದಲ್ಲಿ ಮಾತನಾಡಿದ ಅವರು, “ನರೇಂದ್ರ ಮೋದಿ ಅವರಂತೆ ನಾನು ದೈವಾಂಶ ಸಂಭೂತನಲ್ಲ. ನನಗೆ ಜನರೇ ದೇವರು, ಅವರೇ ತೀರ್ಮಾನಿಸುತ್ತಾರೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

“ನನ್ನ ಮುಂದೆ ಎರಡು ಆಯ್ಕೆಗಳಿವೆ. ನಾನು ವಯನಾಡು ಸಂಸದನಾಗಿ ಮುಂದುವರಿಯಬೇಕೋ, ರಾಯ್‌ಬರೇಲಿ ಸಂಸದನಾಗಬೇಕೋ ಎಂಬ ಪ್ರಶ್ನೆ ಇದೆ. ಆದರೆ, ಪ್ರಧಾನಿಯವರಂತೆ ನನಗೆ ದೇವರು ಮಾರ್ಗದರ್ಶನ ನೀಡುವುದಿಲ್ಲ. ನಾನೊಬ್ಬ ಸಾಮಾನ್ಯ ಮನುಷ್ಯನಾಗಿದ್ದು, ದೇಶದ ಬಡವರೇ ನನಗೆ ದೇವರಾಗಿದ್ದಾರೆ. ನಾನು ಯಾವ ಕ್ಷೇತ್ರದ ಸಂಸದನಾಗಿ ಮುಂದುವರಿಯಬೇಕೋ ಎಂಬುದನ್ನು ದೇಶದ ಜನರೇ ತೀರ್ಮಾನಿಸುತ್ತಾರೆ” ಎಂಬುದಾಗಿ ಕೇರಳದ ಮಲಪ್ಪುರಂನಲ್ಲಿ ರಾಹುಲ್‌ ಗಾಂಧಿ ಹೇಳಿದರು.

“400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದರು. ಇದಾದ ಬಳಿಕ ಮಾಯವಾದ ಅವರು 300ಕ್ಕೂ ಅಧಿಕ ಕ್ಷೇತ್ರ ಅಂದರು. ಇದಾದ ನಂತರ, ನಾನೇನೂ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಎಲ್ಲ ತೀರ್ಮಾನಗಳೂ ದೇವರದ್ದೇ ಎಂದರು. ಆದರೆ, ನರೇಂದ್ರ ಮೋದಿ ಅವರಿಗೆ ಪರಮಾತ್ಮನೇ ಮುಂಬೈ ಏರ್‌ಪೋರ್ಟ್‌ ಬಿಟ್ಟುಕೊಡು, ಲಖನೌ ಏರ್‌ಪೋರ್ಟ್‌ ಬಿಟ್ಟುಕೊಡು, ಅಂಬಾನಿ ಹಾಗೂ ಅದಾನಿ ಅವರ ಪರವಾಗಿ ಕೆಲಸ ಮಾಡು ಎಂಬುದಾಗಿ ಸೂಚಿಸುತ್ತಿದ್ದಾನೆ” ಎಂದು ಕುಟುಕಿದರು.

ದೇವರ ಬಗ್ಗೆ ಮೋದಿ ಹೇಳಿದ್ದೇನು?

“ನನ್ನ ತಾಯಿ ಇರುವವರೆಗೆ ನನ್ನ ಭಾವನೆ ಬೇರೆಯೇ ಆಗಿತ್ತು. ಆದರೆ, ನನ್ನ ತಾಯಿ ಅಗಲಿದ ಮೇಲೆ ನನಗೆ ಹಲವು ವಿಚಿತ್ರ ಅನುಭವಗಳು ಆದವು. ನಾನು ಇಷ್ಟೊಂದು ಕೆಲಸ ಮಾಡಲಿ ಎಂಬುದಾಗಿ ದೇವರೇ ಕಳುಹಿಸಿದ್ದಾನೆ ಎಂದು ನನಗೆ ಅನಿಸುತ್ತದೆ. ಇದರಿಂದಾಗಿಯೇ ನಾನು ಹೆಚ್ಚು ಕೆಲಸ ಮಾಡಲು, ನಿಮ್ಮ ಸೇವೆ ಮಾಡಲು, ನಿಷ್ಕಲ್ಮಶವಾಗಿ ದುಡಿಯಲು ಸಾಧ್ಯವಾಗಿದೆ” ಎಂಬುದಾಗಿ ಚುನಾವಣೆ ಪ್ರಚಾರದ ವೇಳೆ ನರೇಂದ್ರ ಮೋದಿ ಅವರು ಹೇಳಿದ್ದರು.

ಇದನ್ನೂ ಓದಿ: Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

Continue Reading
Advertisement
IND vs USA
ಕ್ರೀಡೆ2 mins ago

IND vs USA: ಕೊಹ್ಲಿಯ ವಿಕೆಟ್​ ಪತನ ಕಂಡು ದಂಗಾದ ರೋಹಿತ್​ ಶರ್ಮ; ವಿಡಿಯೊ ವೈರಲ್​

World Anti Child Labor Day celebration in Hosapete
ವಿಜಯನಗರ36 mins ago

Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Kangana Ranaut
Latest40 mins ago

Kangana Ranaut: ಸಂಸದೆಯಾಗಿರುವ ನಟಿ ಕಂಗನಾ ರಣಾವತ್‌ಗೆ ಸಿಗುವ ಸಂಬಳ, ಇತರ ಸವಲತ್ತುಗಳು ಏನೇನು?

JP Nadda
Latest52 mins ago

JP Nadda: ವೇದಿಕೆ ಮೇಲೆ ಗುಟ್ಕಾ ತಿಂದ ಕೇಂದ್ರ ಆರೋಗ್ಯ ಸಚಿವ ನಡ್ಡಾ? ವಿಡಿಯೊ ನೋಡಿ

Actor darshan Arrested
ಪ್ರಮುಖ ಸುದ್ದಿ59 mins ago

Actor darshan Arrested : ದರ್ಶನ್‌ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಠಾಣೆಗೇ ಶಾಮಿಯಾನ ಹಾಕಿದರೆ ಪೊಲೀಸರು?

Hamare Baarah Release Supreme Court has imposed a stay
ಬಾಲಿವುಡ್1 hour ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Stock Market
ವಾಣಿಜ್ಯ1 hour ago

Stock Market: ಷೇರುಪೇಟೆಯಲ್ಲಿ ಗೂಳಿ ಗುಟುರು; ಸೆನ್ಸೆಕ್ಸ್‌, ನಿಫ್ಟಿ ಏರಿಕೆ

Actor Darshan
ಬೆಂಗಳೂರು1 hour ago

Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

Darshan Old Case Coming Out darshan gang
ಕ್ರೈಂ1 hour ago

Actor Darshan: ಬಡಪಾಯಿ ಕಾರ್ಮಿಕರ ಮೇಲೆ ನಾಯಿ ಛೂ ಬಿಟ್ಟು ಹಿಂಸಿಸಿದ್ದ ದರ್ಶನ್‌ & ಗ್ಯಾಂಗ್‌!

IND vs USA
ಕ್ರೀಡೆ1 hour ago

IND vs USA: ಬೆಸ್ಟ್​ ಫೀಲ್ಡಿಂಗ್​ಗೆ 2ನೇ ಚಿನ್ನದ ಪದಕ ಗೆದ್ದ ಮೊಹಮ್ಮದ್ ಸಿರಾಜ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌