Lok Sabha Election 2024: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್; ಇಲ್ಲಿದೆ 28 ಕ್ಷೇತ್ರಗಳ ಫುಲ್ ಲಿಸ್ಟ್‌! - Vistara News

Lok Sabha Election 2024

Lok Sabha Election 2024: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್; ಇಲ್ಲಿದೆ 28 ಕ್ಷೇತ್ರಗಳ ಫುಲ್ ಲಿಸ್ಟ್‌!

Lok Sabha Election 2024: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಒಂದೆರಡು ಸುತ್ತಿನ ಸಭೆ ನಡೆಸಿ ಒಂದು ಹಂತದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್‌ ಮಾಡಿದ್ದಾರೆ. ಹೀಗಾಗಿ 28ಕ್ಕೆ 28 ಕ್ಷೇತ್ರಗಳಲ್ಲಿಯೂ ಯಾರನ್ನು ಅಭ್ಯರ್ಥಿಗಳನ್ನಾಗಿ ಮಾಡಬಹುದು ಎಂಬ ಲಿಸ್ಟ್‌ ಈಗ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

VISTARANEWS.COM


on

Lok Sabha Election 2024 Congress candidates to be finalised tomorrow Here 28 constituencies list
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಮೂರ್ನಾಲ್ಕು ದಿನದೊಳಗೆ ಎರಡನೇ ಪಟ್ಟಿಯನ್ನೂ ಬಿಡುಗಡೆ ಮಾಡುವ ತಯಾರಿಯಲ್ಲಿದೆ. ಆ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರುಗಳೂ ಇರಲಿವೆ. ಇತ್ತ ಕಾಂಗ್ರೆಸ್‌ನಲ್ಲಿ ಸಹ ಈಗ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಸಮಿತಿ ಸಭೆಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಯಲಿದೆ. ಈಗಾಗಲೇ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಒಂದೆರಡು ಸುತ್ತಿನ ಸಭೆ ನಡೆಸಿ ಒಂದು ಹಂತದಲ್ಲಿ ಕಾಂಗ್ರೆಸ್‌ (Congress Karnataka) ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್‌ ಮಾಡಿದ್ದಾರೆ. ಹೀಗಾಗಿ 28ಕ್ಕೆ 28 ಕ್ಷೇತ್ರಗಳಲ್ಲಿಯೂ ಯಾರನ್ನು ಅಭ್ಯರ್ಥಿಗಳನ್ನಾಗಿ ಮಾಡಬಹುದು ಎಂಬ ಲಿಸ್ಟ್‌ ಈಗ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಟಿಕೆಟ್ ಆಕಾಂಕ್ಷಿಗಳ ಹೆಸರಿನ ಪಟ್ಟಿ ಹಿಡಿದು ಇಂದು (ಗುರುವಾರ – ಮಾ. 7) ಡಿಸಿಎಂ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ಎರಡು- ಮೂರು ಸುತ್ತಿನ ಸಭೆ ನಡೆಸಿರುವ ಸಿಎಂ, ಡಿಸಿಎಂ ಆಕಾಂಕ್ಷಿಗಳ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಿದ್ದಾರೆ. ಅಲ್ಲದೆ, ಎರಡು, ಮೂರು ಹಂತಗಳಲ್ಲಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಗೊಂದಲವಿಲ್ಲದ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುವುದು. ಮೊದಲ ಹಂತದಲ್ಲಿ ರಾಜ್ಯದ 10-15 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.

10-13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯೇ ತಲೆ ನೋವಾಗಿ ಪರಿಣಮಿಸಿದೆ. ಕೆಲ ಕ್ಷೇತ್ರಗಳಲ್ಲಿ ತೀವ್ರವಾದ ಪೈಪೋಟಿ ಇದೆ. ಇನ್ನು ಕೆಲವು ಕಡೆ ಪ್ರಬಲ ಅಭ್ಯರ್ಥಿಗಳ ಕೊರತೆ ಇದೆ.

ಲೋಕಸಭೆ ಸಂಭಾವ್ಯರು ಮತ್ತು ಆಯ್ಕೆ ಲೆಕ್ಕಚಾರವೇನು?

1. ಚಿಕ್ಕೋಡಿ – (ಸಾಮಾನ್ಯ ಕ್ಷೇತ್ರ)
ಪ್ರಕಾಶ್ ಹುಕ್ಕೇರಿ / ಲಕ್ಷಣರಾವ್ ಚಿಂಗಳೆ

  • ಜಾತಿ ಸಮೀಕರಣದ‌ ಲೆಕ್ಕಚಾರದಲ್ಲಿರುವ ನಾಯಕರು
  • ಲಿಂಗಾಯತ, ಕುರುಬ ಕಾಂಬಿನೇಷನ್ ಲೆಕ್ಕಾಚಾರ
  • ಚಿಕ್ಕೋಡಿಗೆ ಲಿಂಗಾಯತರು ಎಂದಾದರೆ, ಬೆಳಗಾವಿಯಲ್ಲಿ ಅನ್ಯ ಜಾತಿಗೆ ಟಿಕೆಟ್
  • ಕುರುಬರಿಗೆ ಎಂದಾದರೆ ಲಕ್ಷಣರಾವ್ ಚಿಂಗಳೆ ಅವರನ್ನು ಪರಿಗಣಸುವ ಸಾಧ್ಯತೆ
  • ಬಹುತೇಕ ಪ್ರಕಾಶ್ ಹುಕ್ಕೇರಿಗೆ ಟಿಕೆಟ್ ಫೈನಲ್ ಆಗುವ ಸಾಧ್ಯತೆ

2. ಬೆಳಗಾವಿ (ಸಾಮಾನ್ಯ)

  • ಕಿರಣ್ ಸಾಧುನವರ,‌ ಮೃಣಾಲ್ ಹೆಬ್ಬಾಳ್ಕರ್, ಡಾ. ಗಿರೀಶ್ ಸೋನವಾಲ್ಕರ್, ಸಚಿವ ಸತೀಶ್ ಜಾರಕಿಹೊಳಿ‌, ಪ್ರಿಯಾಂಕಾ ಜಾರಕಿಹೊಳಿ‌ ಅವರ ಹೆಸರುಗಳು ಶಾರ್ಟ್‌ ಲಿಸ್ಟ್‌ನಲ್ಲಿದೆ
  • ಮೃಣಾಲ್ ಹೆಬ್ಬಾಳ್ಕರ್, ಗಿರೀಶ್ ನಡುವೆ ಪೈಪೋಟಿ
  • ಪುತ್ರನಿಗೆ ಟಿಕೆಟ್ ಪಡೆಯಲು ಲಕ್ಷ್ಮಿ ಹೆಬ್ಬಾಳ್ಕರ್ ಲಾಬಿ
  • ಡಾ. ಗಿರೀಶ್ ಬೆನ್ನಿಗೆ ನಿಂತಿರುವ ಸತೀಶ್ ಜಾರಕಿಹೊಳಿ

3. ಉತ್ತರ ಕನ್ನಡ

  • ಅಂಜಲಿ ನಿಂಬಾಳ್ಕರ್‌‌, ಆರ್‌.ವಿ. ದೇಶಪಾಂಡೆ
  • ಅಂಜಲಿ ನಿಂಬಾಳ್ಕರ್‌ ಅವರು ಸ್ಪರ್ಧೆಗೆ ಉತ್ಸಾಹ ತೋರಿದ್ದಾರೆ. ಆದರೆ, ಆರ್‌.ವಿ. ದೇಶಪಾಂಡೆ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ

4. ಬಾಗಲಕೋಟೆ (ಸಾಮಾನ್ಯ)

  1. ವೀಣಾ ಕಾಶಪ್ಪನವರ್, ಅಜಯ್ ಕುಮಾರ್ ಸರ್ನಾಯಕ್, ಆನಂದ್ ನ್ಯಾಮಗೌಡರ್ ನಡುವೆ ಪೈಪೋಟಿ
  2. ಪೈಪೋಟಿ ಹೆಚ್ಚಾಗಿರುವ ಕಾರಣಕ್ಕೆ ಹೈಕಮಾಂಡ್ ಅಂಗಳದಲ್ಲಿ ತೀರ್ಮಾನ ಆಗಲಿ ಎಂಬ ಅಭಿಪ್ರಾಯ

5. ವಿಜಯಪುರ (ಪರಿಶಿಷ್ಟ ಜಾತಿ ಮೀಸಲು)

  • ರಾಜು ಆಲಗೂರ, ಕಾಂತಾ ನಾಯಕ್ ಹೆಸರು ಶಿಫಾರಸು
  • ಕಾಂತಾ ನಾಯಕ್‌ಗೆ ಈಗಾಗಲೇ ನಿಗಮ ಮಂಡಳಿ ನೀಡಲಾಗಿದೆ
  • ಆದ್ದರಿಂದ ಬಹುತೇಕ ರಾಜು ಆಲಗೂರುಗೆ ಟಿಕೆಟ್ ಸಾಧ್ಯತೆ
  • ಹಾಲಿ ಸಂಸದ ರಮೇಶ್ ಜಿಗಜಿಣಗಿ ಕಾಂಗ್ರೆಸ್ ಅಭ್ಯರ್ಥಿ ಆಗಬಹುದು ಎಂಬ ಚರ್ಚೆಯೂ ಇದೆ

6. ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)

  • ಡಾ. ರಾಧಾಕೃಷ್ಣ ಹೆಸರು ಶಿಫಾರಸು
  • ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಲ್ಲ
  • ಆದ್ದರಿಂದ ಕಲಬುರಗಿಯಿಂದ ಇವರೊಬ್ಬರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದೆ

7.. ರಾಯಚೂರು (ಪರಿಶಿಷ್ಟ ಪಂಗಡ ಮೀಸಲು)

  1. ರವಿಕುಮಾರ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕುಮಾರ ನಾಯಕ ನಡುವೆ ಪೈಪೋಟಿ
  • ರವಿಕುಮಾರ್ ಅವರು ಸಚಿವ ಸತೀಶ್ ಜಾರಕಿಹೊಳಿ ಅಳಿಯ
  • ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಚರ್ಚೆ ನಡೆದಿದೆ.
  • ಬಿ.ವಿ. ನಾಯಕ್ ಪ್ರಸ್ತುತ ಬಿಜೆಪಿಯಲ್ಲಿದ್ದಾರೆ. ಅವರಿಗೆ ಬಿಜೆಪಿಯಲ್ಲಿ ಟಿಕೆಟ್ ಸಿಕ್ಕಿಲ್ಲ ಎಂದರೆ ಕಾಂಗ್ರೆಸ್ ಅಭ್ಯರ್ಥಿಯಾದರೂ ಅಚ್ಚರಿಯಿಲ್ಲ‌ ಎಂಬ ಚರ್ಚೆ ಇದೆ

8. ಬೀದರ್ (ಸಾಮಾನ್ಯ)

  • ಮಾಜಿ ಶಾಸಕ ರಾಜಶೇಖರ್ ಪಾಟೀಲ್ (ಬಹುತೇಕ ಟಿಕೆಟ್ ಸಾಧ್ಯತೆ)
  • ಸಾಗರ ಖಂಡ್ರೆ ಹೆಸರನ್ನೂ ಶಿಫಾರಸು ಮಾಡಲಾಗಿದೆ.
  • ಪುತ್ರನಿಗೆ ಟಿಕೆಟ್ ಪಡೆಯಲು ಸಚಿವ ಈಶ್ವರ್ ಖಂಡ್ರೆ ಕಸರತ್ತು
  • ನೀವೇ ಸ್ಪರ್ಧೆ ಮಾಡಿ ಎಂದು ಈಶ್ವರ್ ಖಂಡ್ರೆಗೆ ಹೈಕಮಾಂಡ್ ಸೂಚನೆ
  • ಮತ್ತೊಂದೆಡೆ ರಾಜಶೇಖರ್ ಪಾಟೀಲ್‌ಗೆ ಸಿಎಂ, ಡಿಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ

9. ಕೊಪ್ಪಳ (ಸಾಮಾನ್ಯ)

  • ರಾಜಶೇಖರ್ ಹಿಟ್ನಾಳ್, ಅಮರೇಗೌಡ ಭಯ್ಯಾಪುರ ಹೆಸರು ಶಿಫಾರಸುಗೊಂಡಿದೆ,
  • ಕಳೆದ ಬಾರಿ ಸೋತರೂ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ
  • ನನಗೆ ಟಿಕೆಟ್ ಬೇಕೆ ಬೇಕು ಎಂದು ರಾಜಶೇಖರ್ ಪಟ್ಟು
  • ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಸಹೋದರನ ಬೆನ್ನಿಗೆ ನಿಂತಿದ್ದಾರೆ
  • ನಾನು ಹಿರಿಯ ,ಕಳೆದ ವಿಧಾನಸಭೆಯಲ್ಲಿ ಸೋಲು ಆಗಿದೆ
  • ಈ ಬಾರಿ ಅವಕಾಶ ಮಾಡಿಕೊಡಿ ಎಂದಿರುವ ಭಯ್ಯಾಪುರ
  • ಸಿಎಂ, ಡಿಸಿಎಂ, ಪ್ರಭಾವಿ ಸಚಿವರ ಜೊತೆಗೆ ಮಾತುಕತೆ ನಡೆಸಿರುವ ಭಯ್ಯಾಪುರ

10. ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)

  1. ವೆಂಕಟೇಶ್ ಪ್ರಸಾದ್, ವಿ.ಎಸ್, ಉಗ್ರಪ್ಪ ಹೆಸರು ಶಿಫಾರಸು (ಇವರು ಸಚಿವ ನಾಗೇಂದ್ರ ಅವರ ಸಹೋದರ)
  • ಸಹೋದರನಿಗೆ ಟಿಕೆಟ್ ಕೊಡಿಸಲು ಸಚಿವರ ಪ್ರಯತ್ನ ಕಸರತ್ತು
  • ಕಳೆದ ಬಾರಿ ಸ್ಪರ್ಧೆ ಮಾಡಿ ಸೋತಿದ್ದೇನೆ ಅವಕಾಶ ಕೊಡಿ ಎಂದು ವಿ.ಎಸ್. ಉಗ್ರಪ್ಪ ಕೇಳುತ್ತಿದ್ದಾರೆ

11. ಹಾವೇರಿ (ಸಾಮಾನ್ಯ)

  1. ಶಾಸಕ ಬಸವರಾಜ ಶಿವಣ್ಣನವರ್, ಆನಂದ್ ಗಡ್ಡದೇವರಮಠ, ಸಲೀಂ ಅಹ್ಮದ್ ಹೆಸರು ಚರ್ಚೆಯಲ್ಲಿ
  • ಸ್ಪರ್ಧೆಗೆ ನಿರಾಕರಿಸಿರುವ ಶಾಸಕ ಬಸವರಾಜ್ ಶಿವಣ್ಣನವರ್,
  • ಮುಸ್ಲಿಂ ಕೋಟಾ ನೀಡಬೇಕು ಎಂದಾದರೆ ಸಲೀಂ ಅಹ್ಮದ್‌ಗೆ ಟಿಕೆಟ್‌
  • ಇಲ್ಲವಾದಲ್ಲಿ ಆನಂದ್ ಗಡ್ಡದೇವರಮಠ್‌ಗೆ ಟಿಕೆಟ್ ಸಾಧ್ಯತೆ

12. ಧಾರವಾಡ (ಸಾಮಾನ್ಯ)

  1. ರಜತ್ ಉಳ್ಳಾಗಡ್ಡಿಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
  • ಶಿವಲೀಲಾ ಕುಲಕರ್ಣಿ, ವಿನಯ್ ಕುಲಕರ್ಣಿ ಪತ್ನಿ
  • ಶಾಕಿರ್ ಸನದಿ

13. ದಾವಣಗೆರೆ (ಸಾಮಾನ್ಯ)

  1. ಜಿಬಿ ವಿನಯ್ ಕುಮಾರ್, ಕೆಪಿಸಿಸಿ ಸದಸ್ಯ
  • ಪ್ರಭಾ ಮಲ್ಲಿಕಾರ್ಜುನ್, ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಪತ್ನಿ

14. ಶಿವಮೊಗ್ಗ (ಸಾಮಾನ್ಯ)

  1. ಗೀತಾ ಶಿವರಾಜ್ ಕುಮಾರ್, ಮಧು ಬಂಗಾರಪ್ಪ ಸಹೋದರಿ
  • ಕಿಮ್ಮನೆ ರತ್ನಾಕರ್, ಮಾಜಿ ಸಚಿವ

15. ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)

  1. ಅಂಶುಮನ್, ಚಿಕ್ಕಮಗಳೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ
  • ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ‌ ಆಯೋಗದ ಅಧ್ಯಕ್ಷ

16. ಹಾಸನ (ಸಾಮಾನ್ಯ)

  1. ಗೋಪಾಲಸ್ವಾಮಿ, ಮಾಜಿ ಎಂಎಲ್‌ಸಿ
  • ಶ್ರೇಯಸ್ ಪಟೇಲ್, ಹೊಳೆನರಸೀಪುರ ಪರಾಜಿತ ಅಭ್ಯರ್ಥಿ

17. ದಕ್ಷಿಣ ಕನ್ನಡ (ಸಾಮಾನ್ಯ)

  1. ವಿನಯದ ಕುಮಾರ್ ಸೊರಕೆ (ಬಹುತೇಕ ಟಿಕೆಟ್ ಸಿಗುವ ಸಾಧ್ಯತೆ)
  • ರಮಾನಾಥ್ ರೈ
  • ಪದ್ಮರಾಜ್

18. ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)

  1. ಬಿ.ಎನ್. ಚಂದ್ರಪ್ಪ, ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ (ಬಹುತೇಕ ಟಿಕೆಟ್ ಸಾಧ್ಯತೆ)
  • ವಿನಯ್ ತಿಮ್ಮಾಪುರ, ಸಚಿವ ಆರ್.ಬಿ ತಿಮ್ಮಾಪುರ ಪುತ್ರ

19. ತುಮಕೂರು (ಸಾಮಾನ್ಯ)

  1. ಮುದ್ದಹನುಮೇಗೌಡ (ಬಹುತೇಕ ಟಿಕೆಟ್ ಸಾಧ್ಯತೆ)
  • ಮುರಳೀಧರ್ ಹಾಲಪ್ಪ, ಕೌಶಲ್ಯಾಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ

20. ಮಂಡ್ಯ (ಸಾಮಾನ್ಯ)

  1. ಸ್ಟಾರ್ ಚಂದ್ರು (ಬಹುತೇಕ್ ಟಿಕೆಟ್ ಸಾಧ್ಯತೆ)
  • ಸಚಿವ ಚಲುವರಾಯಸ್ವಾಮಿ ಪತ್ನಿ ಹೆಸರು ಕೇಳಿ ಬಂದಿತ್ತು

21. ಮೈಸೂರು-ಕೊಡಗು (ಸಾಮಾನ್ಯ)

  1. ಯತೀಂದ್ರ, ಸಿಎಂ ಸಿದ್ದರಾಮಯ್ಯ ಪುತ್ರ
  • ವಿಜಯ್ ಕುಮಾರ್, ಮೈಸೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ
  • ಎಂ. ಲಕ್ಷ್ಮಣ್, ಕೆಪಿಸಿಸಿ ವಕ್ತಾರ (ಬಹುತೇಕ ಟಿಕೆಟ್ ಸಾಧ್ಯತೆ)

22. ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)

  1. ಎಚ್.ಸಿ ಮಹದೇವಪ್ಪ, ಹಾಲಿ ಸಚಿವ
  • ಸುನಿಲ್ ಬೋಸ್, ಸಚಿವ ಮಹದೇವಪ್ಪ ಪುತ್ರ
  • ನಂಜುಂಡಸ್ವಾಮಿ, ಮಾಜಿ ಶಾಸಕ
  • ದರ್ಶನ್ ಧ್ರುವನಾರಾಯಣ್
  • ನೀವೇ ಸ್ಪರ್ಧೆ ಮಾಡಿ ಎಂದು ಮಹದೇವಪ್ಪಗೆ ಹೈಕಮಾಂಡ್‌ ಸೂಚನೆ. ಆದರೆ, ಸ್ಪರ್ಧೆಗೆ ನಿರಾಕರಣೆ

23. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)

  1. ಡಿಕೆ ಸುರೇಶ್, ಹಾಲಿ ಸಂಸದ, ಕಾಂಗ್ರೆಸ್

24. ಬೆಂಗಳೂರು ಉತ್ತರ (ಸಾಮಾನ್ಯ)

  1. ನಾರಾಯಣಸ್ವಾಮಿ, ಮಾಜಿ ಎಂಎಲ್‌ಸಿ
  • ಪೂರ್ಣಿಮಾ ಶ್ರೀನಿವಾಸ್, ಮಾಜಿ ಎಂಎಲ್‌ಸಿ
  • ಕುಸುಮ ಹನುಮಂತರಾಯಪ್ಪ (ಟಿಕೆಟ್ ಸಿಗುವ ಸಾಧ್ಯತೆ)

25. ಬೆಂಗಳೂರು ಕೇಂದ್ರ (ಸಾಮಾನ್ಯ)

  1. ಶಾಸಕ ಎನ್.ಎ ಹ್ಯಾರಿಸ್ (ಬಹುತೇಕ ಟಿಕೆಟ್ ಸಾಧ್ಯತೆ)
  • ಎಸ್.ಎ ಹುಸೇನ್, ಕೆಪಿಸಿಸಿ ಕಾರ್ಯದರ್ಶಿ
  • ನಲಪಾಡ್, ಯೂತ್ ಕಾಂಗ್ರೆಸ್

26. ಬೆಂಗಳೂರು ದಕ್ಷಿಣ (ಸಾಮಾನ್ಯ)

  • ಸೌಮ್ಯ ರೆಡ್ಡಿ, ಮಾಜಿ ಶಾಸಕಿ

27. ಚಿಕ್ಕಬಳ್ಳಾಪುರ (ಸಾಮಾನ್ಯ)

  • ವೀರಪ್ಪ ಮೊಯ್ಲಿ, ಮಾಜಿ ಸಿಎಂ
  • ರಕ್ಷಾ ರಾಮಯ್ಯ,‌ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಎಂ.ಆರ್ ಸೀತಾರಾಂ ಪುತ್ರ (ಬಹುತೇಕ ಟಿಕೆಟ್ ಸಾಧ್ಯತೆ)
  • ಶಿವಶಂಕರ ರೆಡ್ಡಿ, ಮಾಜಿ ಸಚಿವ

ಇದನ್ನೂ ಓದಿ: Lok Sabha Election 2024: ಹಾಲಿ ಸಂಸದರಿಗೆ ಟಿಕೆಟ್‌; ಡಿಸೈಡ್‌ ಆಗಿದ್ದಾರಾ ಶಾ? ರಾಜ್ಯ ನಾಯಕರಿಗೆ ಹೇಳಿದ್ದೇನು?

28. ಕೋಲಾರ (ಪರಿಶಿಷ್ಟ ಜಾತಿ ಮೀಸಲು)

  1. ಕೆ.ಎಚ್ ಮುನಿಯಪ್ಪ, ಹಾಲಿ ಸಚಿವ (ಬಹುತೇಕ ಟಿಕೆಟ್ ಸಾಧ್ಯತೆ)
  • ಚಿಕ್ಕಪೆದ್ದಣ್ಣ
  • ಮಾಜಿ ಶಾಸಕ ನಾಗೇಶ್
  • ಎಲ್.ಹನುಮಂತಯ್ಯ
  • ಮುದ್ದಗಂಗಾಧರ್
  • ಕೆ.ಎಚ್‌. ಮುನಿಯಪ್ಪ ದಲಿತ ಮುಖಂಡರಾಗಿದ್ದು, ಈ ಹಿನ್ನೆಲೆಯಲ್ಲಿ ಇವರಿಗೆ ಟಿಕೆಟ್‌ನೀಡುವ ಸಾಧ್ಯತೆ ಹೆಚ್ಚಿದೆ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ದೇಶ

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ ಎಂದು ಎಚ್ಚರಿಸಿದ್ದ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರಿಗೆ ಯೋಗಿ ಆದಿತ್ಯನಾಥ್‌ ತಿರುಗೇಟು ನೀಡಿದ್ದರು. “ನಾವೇನೂ ಅಣುಬಾಂಬ್‌ಗಳನ್ನು ಫ್ರಿಡ್ಜ್‌ನಲ್ಲಿ ಇರಿಸಲು ತಯಾರಿಸಿಲ್ಲ. ಇದು ಹೊಸ ಭಾರತ. ನಮ್ಮ ತಂಟೆಗೆ ಬಂದರೆ ಯಾರನ್ನೂ ನಾವು ಬಿಡುವುದಿಲ್ಲ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ಭಾರತ ಕಳೆದ 10 ವರ್ಷಗಳಲ್ಲಿ ಕಂಡುಕೊಂಡಿದೆ” ಎಂದು ಹೇಳಿದ್ದರು. ಈಗ ಮೋದಿ ಕೂಡ ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: “ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ಅದರ ಬಳಿ ಅಣು ಬಾಂಬ್‌ಗಳು ಇವೆ. ಹಾಗಾಗಿ, ಪಾಕಿಸ್ತಾನಕ್ಕೆ ಭಾರತ ಗೌರವ ನೀಡಬೇಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನದ ಬಳಿ ಅಣು ಬಾಂಬ್‌ ಇವೆ ಎಂಬುದಾಗಿ ಕಾಂಗ್ರೆಸ್‌ (Congress) ಹೇಳುತ್ತದೆ. ಆದರೆ, ಅವುಗಳನ್ನು ನಿರ್ವಹಣೆ ಮಾಡುವಷ್ಟು ಹಣವೇ ಪಾಕಿಸ್ತಾನದ ಬಳಿ ಇಲ್ಲ” ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ನರೇಂದ್ರ ಮೋದಿ ಮಾತನಾಡಿದರು. “ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ನಾಯಕರನ್ನು ಜನ ಯಾವುದೇ ಕಾರಣಕ್ಕೂ ನಂಬಬಾರದು. ಅವರು ವೋಟ್‌ ಜಿಹಾದ್‌ಗೆ ಕರೆ ನೀಡುತ್ತಾರೆ. ಸಮಾಜವನ್ನು ಒಡೆಯುವುದು ಅವರ ಉದ್ದೇಶವಾಗಿದೆ. ಮಾಫಿಯಾವನ್ನು ಸಮಾಜವಾದಿ ಪಕ್ಷವು ಈಗಲೂ ಬೆಂಬಲಿಸುತ್ತದೆ. ಇನ್ನು, ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡುತ್ತಲೇ ಬಂದಿತು. ಆದರೆ, ಕಾಂಗ್ರೆಸ್‌ ದಾಳಿ ಮಾಡಿದವರಿಗೇ ಕ್ಲೀನ್‌ಚಿಟ್‌ ನೀಡುವ ಮೂಲಕ ತನ್ನ ನಿಲುವು ಯಾರ ಪರ ಎಂಬುದನ್ನು ಸಾಬೀತುಪಡಿಸಿತು” ಎಂದು ಮೋದಿ ಹೇಳಿದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Continue Reading

ದೇಶ

Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Narendra Modi: ದೇಶದ ಸಂವಿಧಾನಕ್ಕೆ ಮೊದಲು ತಿದ್ದುಪಡಿ ತಂದಿದ್ದು ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು ಅವರು. ಸಂವಿಧಾನಕ್ಕೆ ಧಕ್ಕೆ ತಂದವರು ಯಾರು ಎಂಬ ಪ್ರಶ್ನೆಯನ್ನು ಅವರಿಗೆ ಮೊದಲು ಕೇಳಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲು ತಿದ್ದುಪಡಿ ಮಾಡಿದರು. ಇದಾದ ಬಳಿಕ ಎಲ್ಲ ಪೀಳಿಗೆಗಳ ಕುಟುಂಬಸ್ಥರು ಹಲವು ರೀತಿಯಲ್ಲಿ ಸಂವಿಧಾನಕ್ಕೆ ಧಕ್ಕೆ ತಂದರು ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳುವ ಜತೆಗೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಸಂವಿಧಾನ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಗಾಂಧಿ ಕುಟುಂಬಸ್ಥರ ವಿರುದ್ಧ ನರೇಂದ್ರ ಮೋದಿ ಟೀಕಿಸಿದ್ದಾರೆ. “ನೆಹರು ಅವರಿಂದ ಹಿಡಿದು ರಾಹುಲ್‌ ಗಾಂಧಿವರೆಗೆ ನಾಲ್ಕು ಪೀಳಿಗೆಗಳು (Gandhi Family) ಸಂವಿಧಾನಕ್ಕೆ ಧಕ್ಕೆ ತಂದಿವೆ” ಎಂದು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದ ವೇಳೆ ಪ್ರಸ್ತಾಪಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 400ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದರೆ ಸಂವಿಧಾನ ಬದಲಾಯಿಸುತ್ತದೆ ಎಂಬುದಾಗಿ ಪ್ರತಿಪಕ್ಷಗಳು ಆರೋಪಿಸುತ್ತಿವೆ ಎಂಬ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ದೇಶದ ಸಂವಿಧಾನಕ್ಕೆ ಮೊದಲು ತಿದ್ದುಪಡಿ ತಂದಿದ್ದು ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು ಅವರು. ಸಂವಿಧಾನಕ್ಕೆ ಧಕ್ಕೆ ತಂದವರು ಯಾರು ಎಂಬ ಪ್ರಶ್ನೆಯನ್ನು ಅವರಿಗೆ ಮೊದಲು ಕೇಳಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲು ತಿದ್ದುಪಡಿ ಮಾಡಿದರು. ಇದಾದ ಬಳಿಕ ಎಲ್ಲ ಪೀಳಿಗೆಗಳ ಕುಟುಂಬಸ್ಥರು ಹಲವು ರೀತಿಯಲ್ಲಿ ಸಂವಿಧಾನದ ಆಶಯಕ್ಕೆ ಧಕ್ಕೆ ತಂದರು” ಎಂದು ಹೇಳಿದರು.

“ಜವಾಹರ ಲಾಲ್‌ ನೆಹರು ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟುಮಾಡಿದರು. ನೆಹರು ಅವರ ಪುತ್ರಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ನ್ಯಾಯಾಲಯದ ಆದೇಶವನ್ನೇ ಹಿಂದಕ್ಕೆ ತಳ್ಳಿದರು. ಇಂದಿರಾ ಗಾಂಧಿ ಅವರ ಪುತ್ರ ರಾಜೀವ್‌ ಗಾಂಧಿ ಅವರು ಶಾ ಬಾನೋ ಪ್ರಕರಣದಲ್ಲಿ ಕೋರ್ಟ್‌ ತೀರ್ಮಾನವನ್ನೇ ಬದಲಿಸಿದರು. ಇದಕ್ಕಾಗಿ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದರು. ಇನ್ನು ರಾಹುಲ್‌ ಗಾಂಧಿ ಅವರು ಮನಮೋಹನ್‌ ಸಿಂಗ್‌ ಸರ್ಕಾರವು 2013ರಲ್ಲಿ ಹೊರಡಿಸಿದ್ದ ಸುಗ್ರೀವಾಜ್ಞೆಯ ಪ್ರತಿಯನ್ನೇ ಹರಿದುಹಾಕಿದರು. ಇದೆಲ್ಲ ಸಂವಿಧಾನಕ್ಕೆ ಗಾಂಧಿ ಕುಟುಂಬಸ್ಥರು ತಂದ ಧಕ್ಕೆಯಾಗಿದೆ” ಎಂದು ಮೋದಿ ವಾಗ್ದಾಳಿ ನಡೆಸಿದರು.

“ಹೀಗೆ ಜವಾಹರ ಲಾಲ್‌ ನೆಹರು ಅವರಿಂದ ಹಿಡಿದು ರಾಹುಲ್‌ ಗಾಂಧಿವರೆಗೆ ನಾಲ್ಕೂ ಪೀಳಿಗೆಗಳ ನಾಯಕರು ಸಂವಿಧಾನವನ್ನು ಒಂದಲ್ಲ ಒಂದು ರೀತಿಯಲ್ಲಿ ಹಾಳು ಮಾಡಿದ್ದಾರೆ. ಆದರೆ, ನಮ್ಮ ಸರ್ಕಾರವು ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆ ತರುವುದಿಲ್ಲ. ಇದೇ ಕಾರಣಕ್ಕಾಗಿಯೇ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ನಾನು ಬಿಡುವುದಿಲ್ಲ ಎಂಬುದಾಗಿ ಹೇಳುತ್ತಿದ್ದೇನೆ” ಎಂದು ತಿಳಿಸಿದರು. “ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತಾರೆ. ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ” ಎಂಬುದು ಕಾಂಗ್ರೆಸ್‌ ನಾಯಕರ ಆರೋಪವಾಗಿದೆ.

ಇದನ್ನೂ ಓದಿ: PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Continue Reading

ಪ್ರಮುಖ ಸುದ್ದಿ

Lok Sabha Election 2024: 272 ಸೀಟು ಗೆಲ್ಲದೇ ಹೋದರೆ ಬಿಜೆಪಿಯ ಪ್ಲ್ಯಾನ್ ಬಿ ಏನು? ಅಮಿತ್ ಶಾ ಉತ್ತರ ಹೀಗಿದೆ

Lok Sabha Election 2024: ಲೋಕಸಭೆಯಲ್ಲಿ 400 ಸ್ಥಾನಗಳನ್ನು ಹೊಂದಲಿರುವ ಬಿಜೆಪಿಯು ಗಡಿಗಳನ್ನು ರಕ್ಷಿಸಲು, ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡಲು ಮತ್ತು ಬಡವರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಬಯಸುತ್ತದೆ ಎಂದು ಅಮಿತ್‌ ಶಾ ಹೇಳಿದರು.

VISTARANEWS.COM


on

Amith Shah lok sabha election 2024
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ (BJP) ಬಹುಮತಕ್ಕೆ ಬೇಕಾದ 272 ಸೀಟು ಪಡೆಯದಿದ್ದರೆ ಏನು ಮಾಡುತ್ತದೆ? ಈ ಕುರಿತು ಎದುರಾದ ಮಾಧ್ಯಮದ ಪ್ರಶ್ನೆಗೆ ಗೃಹ ಸಚಿವ ಅಮಿತ್ ಶಾ (Home minister Amit Shah) ಖಡಕ್‌ ಆಗಿ ಉತ್ತರಿಸಿದ್ದಾರೆ. ಅಂಥದೊಂದು ಸನ್ನಿವೇಶ ಸಂಭವಿಸುವ ಸಾಧ್ಯತೆ ನನಗೆ ಕಾಣುತ್ತಿಲ್ಲ. ಹೀಗಾಗಿ ಬಿಜೆಪಿಗೆ ಪ್ಲಾನ್ ಬಿ (Plan B) ಬೇಕಾಗಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 272ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆದ್ದರೆ ಬಿಜೆಪಿಯ ನಡೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, “ಅಂತಹ ಯಾವುದೇ ಸಾಧ್ಯತೆಗಳು ನನಗೆ ಕಾಣುತ್ತಿಲ್ಲ, 60 ಕೋಟಿ ಫಲಾನುಭವಿಗಳ ಸೈನ್ಯವು ಪ್ರಧಾನಿ ಮೋದಿಯವರೊಂದಿಗೆ ನಿಂತಿದೆ. ಅವರಿಗೆ ಯಾವುದೇ ಜಾತಿಬಲ ಅಥವಾ ವಯೋಮಾನವಿಲ್ಲ. ಈ ಎಲ್ಲಾ ಪ್ರಯೋಜನಗಳನ್ನು ಪಡೆದವರಿಗೆ ನರೇಂದ್ರ ಮೋದಿಯವರಿಗೆ ಹೇಗೇ ಆದರೂ 400 ಸೀಟ್‌ ನೀಡುವುದು ಗೊತ್ತು” ಎಂದು ಶಾ ಹೇಳಿದ್ದಾರೆ.

ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ, ಬಿಜೆಪಿಯ ಪ್ಲಾನ್ ಬಿ ಬಗ್ಗೆ ಕೇಳಲಾಯಿತು. ಆದರೆ ಪಕ್ಷದ ಪ್ಲಾನ್ ಎ ಯಶಸ್ವಿಯಾಗಿಯೇ ಆಗುತ್ತದೆ ಎಂದು ಅಮಿತ್ ಶಾ ಹೇಳಿದರು. “ಪ್ಲಾನ್ ಎ ಯಶಸ್ವಿಯಾಗಲು 60%ಕ್ಕಿಂತ ಕಡಿಮೆ ಅವಕಾಶವಿರುವಾಗ ಮಾತ್ರ ಪ್ಲಾನ್ ಬಿ ಮಾಡಬೇಕು. ಪಿಎಂ ಮೋದಿ ಅವರು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಾರೆ ಎಂದು ನನಗೆ ಖಚಿತವಾಗಿದೆ” ಎಂದು ಅವರು ಹೇಳಿದರು.

ʻಉತ್ತರ-ದಕ್ಷಿಣ’ ವಿಭಜನೆಗೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.‌

“ಇದು ಪ್ರತ್ಯೇಕ ದೇಶ ಎಂದು ಯಾರಾದರೂ ಹೇಳಿದರೆ ಅದು ತುಂಬಾ ಆಕ್ಷೇಪಾರ್ಹ. ಈ ದೇಶವನ್ನು ಇನ್ನು ಎಂದಿಗೂ ವಿಭಜಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ಉತ್ತರ ಮತ್ತು ದಕ್ಷಿಣ ಭಾರತವನ್ನು ವಿಭಜಿಸುವ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅದನ್ನು ನಿರಾಕರಿಸಿಲ್ಲ. ಜನತೆ ಈ ಹೇಳಿಕೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಸೂಚಿಯ ಬಗ್ಗೆ ಗ್ರಹಿಸಬೇಕು. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ 5 ರಾಜ್ಯಗಳನ್ನು ಒಟ್ಟುಗೂಡಿಸಿ ಬಿಜೆಪಿ ಈ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ” ಎಂದು ಅವರು ಹೇಳಿದರು.

ದೇಶದ ರಾಜಕೀಯದಲ್ಲಿ ಸ್ಥಿರತೆ ತರಲು 400ಕ್ಕೂ ಹೆಚ್ಚು ಸ್ಥಾನಗಳ ಅಗತ್ಯವಿದೆ. ಸಂವಿಧಾನವನ್ನು ಬದಲಾಯಿಸುವ ಜನಾದೇಶ ಬಿಜೆಪಿಗಿದೆ. ಆದರೆ ನಾವು ಎಂದಿಗೂ ಹಾಗೆ ಮಾಡಲಿಲ್ಲ. ಲೋಕಸಭೆಯಲ್ಲಿ 400 ಸ್ಥಾನಗಳನ್ನು ಹೊಂದಲಿರುವ ಬಿಜೆಪಿಯು ಗಡಿಗಳನ್ನು ರಕ್ಷಿಸಲು, ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡಲು ಮತ್ತು ಬಡವರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಬಯಸುತ್ತದೆ ಎಂದು ಅವರು ಹೇಳಿದರು.

ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಸಂವಿಧಾನವನ್ನು ತಿದ್ದುಪಡಿ ಮಾಡಲು ಬಯಸುತ್ತದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿ ಪ್ರಯೋಜನಗಳನ್ನು ಕಿತ್ತುಕೊಂಡು ಮುಸ್ಲಿಂ ಸಮುದಾಯಕ್ಕೆ ನೀಡಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಮೋದಿ, ಶಾ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Continue Reading
Advertisement
ಕರ್ನಾಟಕ10 mins ago

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

dilip Kumar
ಪ್ರಮುಖ ಸುದ್ದಿ11 mins ago

Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

Fan Code OTT Subscription Now for Jio AirFiber JioFiber Jio Mobility Customers
ದೇಶ26 mins ago

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Gopi Hinduja
ವಿದೇಶ31 mins ago

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

AC visited Gandabommanahalli Goshala and inspected
ವಿಜಯನಗರ1 hour ago

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Application Invited for TTTI and Toyota Skill Courses from Toyota Technical Training Institute
ಕರ್ನಾಟಕ1 hour ago

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

SSLC Exam 2024
ಕರ್ನಾಟಕ1 hour ago

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಕ್ರಿಕೆಟ್1 hour ago

Gautam Gambhir : ಗೌತಮ್​ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಕೋಚ್​​?

Retirement Plan
ಮನಿ ಗೈಡ್2 hours ago

Retirement Plan: ನಿವೃತ್ತಿ ನಂತರ ನೆಮ್ಮದಿ ಜೀವನ ನಡೆಸಬೇಕೆ? ಈ 5 ಯೋಜನೆಗಳನ್ನು ಮರೆಯಬೇಡಿ

Siddharth Kak
ದೇಶ2 hours ago

Siddharth Kak: ಡಿಡಿಯ ʼಸುರಭಿʼ ಕಾರ್ಯಕ್ರಮ ನೆನಪಿದೆಯಾ? ಪ್ರತಿ ವಾರ ಎಷ್ಟು ಲಕ್ಷ ಪೋಸ್ಟ್‌ ಕಾರ್ಡ್‌ ಬರುತ್ತಿತ್ತು ಗೊತ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ16 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ17 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌