Lok Sabha Election 2024: ಬರ ಪರಿಹಾರ ಕೊಡುವಂತೆ ಕೇಂದ್ರಕ್ಕೆ ಸೂಚನೆ ಕೊಡಿ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ಮೊರೆ - Vistara News

Lok Sabha Election 2024

Lok Sabha Election 2024: ಬರ ಪರಿಹಾರ ಕೊಡುವಂತೆ ಕೇಂದ್ರಕ್ಕೆ ಸೂಚನೆ ಕೊಡಿ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ಮೊರೆ

Lok Sabha Election 2024: ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ನೀಡಬೇಕು ಎಂದು ದೂರಿನಲ್ಲಿ ಕಾಂಗ್ರೆಸ್ ಆಗ್ರಹಿಸಿದೆ. 4663 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆಗೆ ನಿರ್ದೇಶಿಸಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬರ ಪರಿಹಾರ ಕೊಡುವ ವಿಚಾರದಲ್ಲಿ ಎಲೆಕ್ಷನ್ ಕಮಿಷನ್‌ನ ನೀತಿ ಸಂಹಿತೆ ಅಡ್ಡಿಯಾಗಿದೆ. ಬರ ಪರಿಹಾರ ನೀಡಲು ಹೈಪವರ್ ಕಮಿಟಿ ಸಭೆ ನಡೆಯಬೇಕು. ಸಭೆ ನಡೆಸಲು ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ನಾವು ಪತ್ರ ಬರೆದಿದ್ದೇವೆ. ಆದರೆ, ಚುನಾವಣಾ ಆಯೋಗ ಅನುಮತಿ ನೀಡಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ. ಹೀಗಾಗಿ ಅನುಮತಿ ನೀಡಬೇಕು ಎಂದು ಕಾಂಗ್ರೆಸ್‌ ದೂರಿನಲ್ಲಿ ಹೇಳಿದೆ.

VISTARANEWS.COM


on

Lok Sabha Election 2024 Congress complains to EC seeking direction to Centre to disburse drought relief and Nirmla Seetharaman in this photo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ರಾಜ್ಯದಲ್ಲಿ ಬರ (Karnataka Drought) ಪರಿಹಾರ ಪಾಲಿಟಿಕ್ಸ್‌ ಜೋರಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನಡುವೆ ತಿಕ್ಕಾಟಗಳು ಜೋರಾಗಿಯೇ ನಡೆದಿವೆ. ಈಗ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ (Congress Karnataka) ಮನವಿ ಮಾಡಿದೆ. ಕಾರಣ, ಈಗ ನೀತಿ ಸಂಹಿತೆ (Model Code of Conduct) ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರವು ಚುನಾವಣಾ ಆಯೋಗದ (Election Commission) ಅನುಮತಿ ಸಿಕ್ಕಿಲ್ಲ ಎಂದು ಬೊಟ್ಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ದೂರಿದೆ.

ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ನೀಡಬೇಕು ಎಂದು ದೂರಿನಲ್ಲಿ ಕಾಂಗ್ರೆಸ್ ಆಗ್ರಹಿಸಿದೆ. 4663 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆಗೆ ನಿರ್ದೇಶಿಸಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬರ ಪರಿಹಾರ ಕೊಡುವ ವಿಚಾರದಲ್ಲಿ ಎಲೆಕ್ಷನ್ ಕಮಿಷನ್‌ನ ನೀತಿ ಸಂಹಿತೆ ಅಡ್ಡಿಯಾಗಿದೆ. ಬರ ಪರಿಹಾರ ನೀಡಲು ಹೈಪವರ್ ಕಮಿಟಿ ಸಭೆ ನಡೆಯಬೇಕು. ಸಭೆ ನಡೆಸಲು ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ನಾವು ಪತ್ರ ಬರೆದಿದ್ದೇವೆ. ಆದರೆ, ಚುನಾವಣಾ ಆಯೋಗ ಅನುಮತಿ ನೀಡಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ. ಹೀಗಾಗಿ ಅನುಮತಿ ನೀಡಬೇಕು ಎಂದು ಕಾಂಗ್ರೆಸ್‌ ದೂರಿನಲ್ಲಿ ಹೇಳಿದೆ.

ಮೀಟಿಂಗ್ ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಬೇಕು

ಈಗ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆ ಇದೆ. ಕಾನೂನಿನಲ್ಲಿ ಬರ ಪರಿಹಾರ ಕೊಡುವ ಅವಕಾಶ ಇದ್ದರೂ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಬೊಟ್ಟು ಮಾಡುತ್ತಿದೆ. ಹೀಗಾಗಿ ಹೈಪವರ್ ಕಮಿಟಿ ಮೀಟಿಂಗ್ ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಬೇಕು. ತಕ್ಷಣವೇ ಬರ ಪರಿಹಾರ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕಾಂಗ್ರೆಸ್ ಮನವಿ ಮಾಡಿದೆ.

ಬೀದಿಗಳಲ್ಲಿ ಮಾತ್ರವಲ್ಲ ಕೋರ್ಟಲ್ಲೂ ʼಬರ ಪರಿಹಾರʼ ಹೋರಾಟ ಜೋರು: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಈಗ ಉತ್ತರ ನೀಡಬೇಕು ಎಂದು ಹೇಳಿದ್ದಾರೆ. ಅಲ್ಲದೆ, ಕೇಂದ್ರದಿಂದ ಕೋರ್ಟ್‌ನ ದಾರಿ ತಪ್ಪಿಸುವ ಪ್ರಯತ್ನ ಸಹ ಆಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ.

ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರ ಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ.

‘’ಬರ ಪರಿಹಾರಕ್ಕಾಗಿ ಅವರು (ಕರ್ನಾಟಕ) ನಮ್ಮನ್ನು (ಕೇಂದ್ರ ಸರ್ಕಾರ)ವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟಿಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ’’ ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ ಮುಂದೆಯೂ ಸುಳ್ಳು ಹೇಳಿಕೆ

ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ‘ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದರು. ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 14ರಂದು ಮಂಗಳೂರಿಗೆ ಮೋದಿ; ದಾಖಲೆ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿ!

ಮುಂದಿನ ವಿಚಾರಣೆ ವೇಳೆ ಉತ್ತರ ನೀಡಬೇಕಿದೆ

ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ.

ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ ಕೃಷ್ಣ ಜನ್ಮಭೂಮಿ ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ.

VISTARANEWS.COM


on

By

Himanta Biswa Sarma
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok sabha election) ಈ ಬಾರಿ ಹಲವು ನಿರ್ಣಾಯಕ ಕಾರಣಗಳಿಗಾಗಿ ಭಾರತೀಯ ಜನತಾ ಪಕ್ಷಕ್ಕೆ (BJP) ಸಂಸತ್ತಿನಲ್ಲಿ (Parliament) 400 ಸ್ಥಾನಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ (ayodhya) ರಾಮಮಂದಿರವನ್ನು (ram mandir) ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ (Mathura) ಕೃಷ್ಣ ಜನ್ಮಭೂಮಿ (Krishna Janmabhoomi) ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ (Gyanvapi Mosque) ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರವನ್ನು (ಪಿಒಜೆಕೆ) ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತದಲ್ಲಿ ಸೇರಿಸಲಾಗುವುದು ಎಂದು ಹೇಳಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ ಎಂದು ದೂರಿದ್ದಾರೆ.

ಪಿಒಕೆ ನಮ್ಮದು ಎಂಬ ಚರ್ಚೆಯೇ ಆಗಿಲ್ಲ

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ, ಒಂದು ಕಾಶ್ಮೀರ ಭಾರತದಲ್ಲಿ ಮತ್ತು ಇನ್ನೊಂದು ಪಾಕಿಸ್ತಾನದಲ್ಲಿದೆ ಎಂದು ನಮಗೆ ಹೇಳಲಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹೊಂದಿದೆ ಎಂದು ನಮ್ಮ ಸಂಸತ್ತಿನಲ್ಲಿ ಎಂದಿಗೂ ಚರ್ಚಿಸಲಾಗಿಲ್ಲ, ಅದು ನಿಜವಾಗಿ ನಮ್ಮದು. ಇದೀಗ ಪಿಒಕೆಯಲ್ಲಿ ಪ್ರತಿದಿನ ಆಂದೋಲನ ನಡೆಯುತ್ತಿದ್ದು, ಜನರು ತಮ್ಮ ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಪಾಕಿಸ್ತಾನದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಮೋದಿಜೀ 400 ಸೀಟುಗಳನ್ನು ಪಡೆದರೆ ಪಿಒಕೆ ಕೂಡ ಭಾರತಕ್ಕೆ ಸೇರುತ್ತದೆ. ಇದು ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರವು ಮೀಸಲಾತಿಗೆ ಹೆಚ್ಚಿನ ಬಲವನ್ನು ನೀಡಲು ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ ಅವರು, ಪ್ರಧಾನಿ ಮೋದಿ ಸ್ವತಃ ಒಬಿಸಿ ವರ್ಗದಿಂದ ಬಂದವರು. ಬಿಜೆಪಿ 10 ವರ್ಷ ಅಧಿಕಾರದಲ್ಲಿದೆ. ನಮ್ಮ ಸರ್ಕಾರ ಮೀಸಲಾತಿಗೆ ಹೆಚ್ಚಿನ ಬಲ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ಆರಂಭಿಸಿರುವ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಮತ್ತು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (ಪಿಒಜೆಕೆ) ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಇದು ಭಾರತವಾಗಿದೆ ಮತ್ತು ಯಾವಾಗಲೂ ಇರುತ್ತದೆ ಎಂದು ಪುನರುಚ್ಚರಿಸಿದ್ದಾರೆ.

ಪಿಒಕೆ ಜನರು ತಮ್ಮ ಪರಿಸ್ಥಿತಿಯನ್ನು ಹೋಲಿಸಿ ನೋಡಬೇಕು. ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುತ್ತಿರುವ ಜನರು ಸ್ಪಷ್ಟ ಪ್ರಗತಿಯನ್ನು ಸೂಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

ಪಾಕಿಸ್ತಾನದ ಅರೆಸೈನಿಕ ರೇಂಜರ್‌ಗಳು ಸೋಮವಾರ, ಪಿಒಜೆಕೆ ನಲ್ಲಿ ಕಾನೂನುಬಾಹಿರವಾಗಿ ನಿಯೋಜಿಸಲ್ಪಟ್ಟರು. ಹಲವಾರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದರು ಮತ್ತು ಇದರಿಂದ ಅನೇಕ ಮಂದಿ ತೀವ್ರವಾಗಿ ಗಾಯಗೊಂಡರು. ಈ ಘಟನೆಯು ಪ್ರದೇಶದ ಹಲವಾರು ಸ್ಥಳೀಯರನ್ನು ಗಾಯಗೊಳಿಸಿತು. ಸಾವಿರಾರು ಸ್ಥಳೀಯರು ವಿದ್ಯುತ್ ಬಿಲ್‌ಗಳ ಮೇಲಿನ ತೆರಿಗೆಗಳು, ಸಬ್ಸಿಡಿಗಳಲ್ಲಿ ಕಡಿತ ಮತ್ತು ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳ ಸವಲತ್ತುಗಳು ಮತ್ತು ಸವಲತ್ತುಗಳನ್ನು ಕೊನೆಗೊಳಿಸುವುದರ ವಿರುದ್ಧ ತಮ್ಮ ಬೇಡಿಕೆಗಳನ್ನು ಎತ್ತಲು ಬೀದಿಗಿಳಿದಿದ್ದರು.

Continue Reading

ದೇಶ

Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಭೇದ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?

Narendra Modi: ಮುಸ್ಲಿಂ ವಿರೋಧಿ ಎಂಬ ಹಣೆಪಟ್ಟಿಯಿಂದ ಸಂಪೂರ್ಣವಾಗಿ ಮುಕ್ತರಾಗುವಲ್ಲಿ ಏಕೆ ಯಶಸ್ವಿಯಾಗಿಲ್ಲ ಎಂಬ ಸಂದರ್ಶಕರ ಪ್ರಶ್ನೆಗೆ ಉತ್ತರಿಸಿದ ಮೋದಿ, ಇದು ಮುಸ್ಲಿಂ ಎಂಬ ಪ್ರಶ್ನೆಯಲ್ಲ. 2002ರ ನಂತರ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ನಡೆಯಿತು. ನಮ್ಮ ಮನೆಯ ಸುತ್ತಮುತ್ತ ಎಲ್ಲರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರು. ನಮ್ಮ ಮನೆಯಲ್ಲೂ ಈದ್‌ ಆಚರಿಸಲಾಗುತ್ತಿತ್ತು. ಈದ್‌ ಸಂದರ್ಭದಲ್ಲಿ ನಮ್ಮ ಮನೆಗಳಲ್ಲಿ ಅಡುಗೆ ಮಾಡುತ್ತಿರಲಿಲ್ಲ. ಎಲ್ಲಾ ಮುಸ್ಲಿಮರ ಮನೆಗಳಿಂದ ಆಹಾರ ಬರುತ್ತಿತ್ತು. ನಾನು ಅಂತಹ ವ್ಯವಸ್ಥೆಯಲ್ಲೇ ಬೆಳೆದಿದ್ದು ಎಂದು ಸ್ಪಷ್ಟನೆ ಕೊಟ್ಟರು.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಮುಸ್ಲಿಂ ವಿರೋಧಿ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಮೋದಿ ಟಾಂಗ್‌ ಕೊಟ್ಟಿದ್ದು, ಹಿಂದೂ ಮುಸ್ಲಿಂ ಅಂತ ತಾರತಮ್ಯ ಮಾಡಿದ ದಿನ ನಾನು ರಾಜಕೀಯ ಬದುಕಿಗೆ ಅನರ್ಹನಾಗುತ್ತೇನೆ. ನಾನು ನನ್ನ ಜೀವನದಲ್ಲಿ ಎಂದಿಗೂ ಹಿಂದೂ-ಮುಸ್ಲಿಂ(Hindu-Muslim) ಎಂದು ಭೇದ ಮಾಡೋದಿಲ್ಲ ಎಂಬುದು ನನ್ನ ಬದುಕಿನ ಧ್ಯೇಯ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ಎಂದಿಗೂ ಹಿಂದೂ ಮುಸ್ಲಿಂ ಎಂದು ಹೇಳುವುದಿಲ್ಲ. ಹಿಂದು ಮುಸ್ಲಿಂ ಅಂತ ಹೇಳಿಕೊಂಡು ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಜೀವಕ್ಕೆ ಅರ್ಹನಾದ ವ್ಯಕ್ತಿಯಾಗುವುದಿಲ್ಲ. ನಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ ಎಂದರು. ಮುಸ್ಲಿಂ ವಿರೋಧಿ ಎಂಬ ಹಣೆಪಟ್ಟಿಯಿಂದ ಸಂಪೂರ್ಣವಾಗಿ ಮುಕ್ತರಾಗುವಲ್ಲಿ ಏಕೆ ಯಶಸ್ವಿಯಾಗಿಲ್ಲ ಎಂಬ ಸಂದರ್ಶಕರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಮುಸ್ಲಿಂ ಎಂಬ ಪ್ರಶ್ನೆಯಲ್ಲ. 2002ರ ನಂತರ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ನಡೆಯಿತು. ನಮ್ಮ ಮನೆಯ ಸುತ್ತಮುತ್ತ ಎಲ್ಲರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರು. ನಮ್ಮ ಮನೆಯಲ್ಲೂ ಈದ್‌ ಆಚರಿಸಲಾಗುತ್ತಿತ್ತು. ಈದ್‌ ಸಂದರ್ಭದಲ್ಲಿ ನಮ್ಮ ಮನೆಗಳಲ್ಲಿ ಅಡುಗೆ ಮಾಡುತ್ತಿರಲಿಲ್ಲ. ಎಲ್ಲಾ ಮುಸ್ಲಿಮರ ಮನೆಗಳಿಂದ ಆಹಾರ ಬರುತ್ತಿತ್ತು. ನಾನು ಅಂತಹ ವ್ಯವಸ್ಥೆಯಲ್ಲೇ ಬೆಳೆದಿದ್ದು. ನನ್ನ ಅನೇಕ ಸ್ನೇಹಿತರು ಮುಸ್ಲಿಮರೇ ಆಗಿದ್ದಾರೆ ಎಂದು ಸ್ಪಷ್ಟನೆ ಕೊಟ್ಟರು.

ರಾಜಸ್ಥಾನದಲ್ಲಿ ಸಾರ್ವಜನಿಕ ಭಾಷಣದ ವೇಳೆ ರಾಹುಲ್‌ ಗಾಂಧಿಯವರ ಸಂಪತ್ತಿನ ಹಂಚಿಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, “ಮೊದಲು ಅವರ ಸರ್ಕಾರ ಇದ್ದಾಗ ದೇಶದ ಸಂಪತ್ತಿನ ಮೇಲೆ ಮೊದಲ ಹಕ್ಕು ಮುಸ್ಲಿಮರದ್ದು ಎಂದು ಹೇಳಿದ್ದರು. ಹಾಗಿದ್ದರೆ ನಿಮ್ಮ ಸಂಪತ್ತನ್ನು ಕಿತ್ತು ಯಾರಿಗೆ ನೀಡಲು ಕಾಂಗ್ರೆಸ್‌ ಬಯಸುತ್ತಿದೆ ಎಂದು ತಿಳಿಯಿತೇ? ಯಾರಿಗೆ ಅಧಿಕ ಮಕ್ಕಳಿರುತ್ತಾರೋ, ಯಾರು ಒಳನುಸುಳುಕೋರರು ಆಗಿರುತ್ತಾರೋ ಅಂತವರಿಗೆ ಹಂಚುತ್ತಾರೆ. ನಿಮಗಿದು ಒಪ್ಪಿಗೆಯೇ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

ಕಾಂಗ್ರೆಸ್‌ನವರಿಗೆ ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣು ಬಿದ್ದಿದೆ. ಮಾತೆಯರು, ಭಗಿನಿಯರ ಚಿನ್ನವನ್ನು ದೋಚುವ ದುರುದ್ದೇಶ ಇವರದ್ದು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲʼʼ ಎಂದು ಮೋದಿ ಹೇಳಿದ್ದರು. ಇದಾದ ಬಳಿಕ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಮುಸ್ಲಿಮರ ವಿರುದ್ಧವಾಗಿದೆ ಎಂಬುದನ್ನು ಸಾಬೀತು ಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿತ್ತು.

Continue Reading

ಪ್ರಮುಖ ಸುದ್ದಿ

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

Kangana Ranaut: ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

VISTARANEWS.COM


on

Kangana Ranaut
Koo

ಬೆಂಗಳೂರು: ಬಾಲಿವುಡ್ ನಟಿ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಲೋಕಸಭಾ (Lok Sabha Election) ಅಭ್ಯರ್ಥಿ ಕಂಗನಾ ರಣಾವತ್​ (Kangana Ranaut) ಮೇ 14 ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

ಕ್ವೀನ್ ಸಿನಿಮಾದ ನಟಿ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 98 ಲಕ್ಷ ರೂ ಮೌಲ್ಯದ ಬಿಎಂಡಬ್ಲ್ಯು, 58 ಲಕ್ಷ ರೂ ಮೌಲ್ಯದ ಮರ್ಸಿಡಿಸ್ ಬೆಂಜ್ ಮತ್ತು 3.91 ಕೋಟಿ ರೂ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಅವರಲ್ಲಿದೆ. ಇದಲ್ಲದೆ, ಅವರು 53,000 ರೂ.ಗಳ ಮೌಲ್ಯದ ವೆಸ್ಪಾ ಸ್ಕೂಟರ್ ಅನ್ನು ಹೊಂದಿದ್ದಾರೆ. ಅಫಿಡವಿಟ್ ಪ್ರಕಾರ, ಅವರು 2 ಲಕ್ಷ ರೂ ನಗದು ಮತ್ತು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದಾರೆ, 17 ಕೋಟಿ ರೂ.ಗಳ ಸಾಲವಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

2022-23ರ ಆರ್ಥಿಕ ವರ್ಷದಲ್ಲಿ ಅವರ ಆದಾಯ 4 ಕೋಟಿ ರೂ.ಗಳಾಗಿದ್ದರೆ, ಹಿಂದಿನ ವರ್ಷ ಅವರು 12.3 ಕೋಟಿ ರೂಪಾಯಿ ಸಂಪಾದಿಸಿದ್ದಾರೆ. ಕಂಗನಾ ರಣಾವತ್ ಅವರ ಅಫಿಡವಿಟ್ ಪ್ರಕಾರ, ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಅವರು ಎಂಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಚಂಡೀಗಢದ ಖಾಸಗಿ ಶಾಲೆಯಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರುವುದು ತನ್ನ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಎಂದು ಅವರು ಘೋಷಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Narendra Modi: ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಆದಾಯವು 2018-19ರಲ್ಲಿ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂ.ಗೆ ಏರಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಲ್ಲಿಸಿದ್ದ ಅಫಿಡವಿಟ್​ನಲ್ಲಿ ಅವರು ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.

ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಅಫಿಡವಿಟ್​ನಲ್ಲಿ ಅವರು ಒಟ್ಟು 3.02 ಕೋಟಿ ರೂ.ಗಳ ಆಸ್ತಿ ಪ್ರಕಟಿಸಿದ್ದಾರೆ. ಅದರಲ್ಲಿ ಬಹುಪಾಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ. ಅಂದರೆ 2.86 ಕೋಟಿ ರೂ.ಗಳ ಸ್ಥಿರ ಠೇವಣಿ ಇಟ್ಟಿದ್ದಾರೆ. (Fixed Deposit) ಅವರ ಕೈಯಲ್ಲಿ ಒಟ್ಟು ₹ 52,920 ನಗದು ಗಾಂಧಿನಗರ ಮತ್ತು ವಾರಣಾಸಿಯ ಎರಡು ಬ್ಯಾಂಕ್ ಖಾತೆಗಳಲ್ಲಿ ಉಳಿದ ₹ 80,304 ಉಳಿಕೆಯಿದೆ.

ಪ್ರಧಾನಿ ಮೋದಿಯ ನಾಮಪತ್ರದ ​ ವಿವರ ಇಲ್ಲಿದೆ

ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಒಟ್ಟು ಆದಾಯ 2018-19ರಲ್ಲಿ ಇದ್ದ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂಪಾಯಿಗೆ ಏರಿದೆ.

ಶೈಕ್ಷಣಿಕ ಅರ್ಹತೆ

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪೂರ್ಣಗೊಳಿಸಿದ್ದೇನೆ ಎಂದು ಪ್ರಧಾನಿ ಘೋಷಿಸಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗುತ್ತಿರುವ ವಾರಾಣಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ನಾನು ಭಾವಪರವಶನಾಗಿದ್ದೇನೆ. ನಿಮ್ಮ ಪ್ರೀತಿಯ ನೆರಳಿನಲ್ಲಿ 10 ವರ್ಷಗಳು ಹೇಗೆ ಕಳೆದವು ಎಂದು ನನಗೆ ತಿಳಿದಿರಲಿಲ್ಲ. ‘ಆಜ್ ಮಾ ಗಂಗಾ ನೆ ಮುಜೆ ಗಾಡ್ ಲೇ ಲಿಯಾ ಹೈ’ (ಇಂದು, ತಾಯಿ ಗಂಗಾ ನನ್ನನ್ನು ದತ್ತು ತೆಗೆದುಕೊಂಡಿದ್ದಾಳೆ) ಎಂದು ಹೇಳಿದ್ದಾರೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಹಂತದ ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು

Continue Reading
Advertisement
viral video shakti scheme women fight
ವೈರಲ್ ನ್ಯೂಸ್5 mins ago

Viral video: ಚಪ್ಪಲಿಯಲ್ಲಿ ಬಡಿದಾಡಿ ಅಂಗಿ ಹರಿದುಕೊಂಡು ಮಹಿಳೆಯರ ʼಶಕ್ತಿʼ ಪ್ರದರ್ಶನ!

Narendra Modi
ದೇಶ8 mins ago

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Rishabh Pant
ಕ್ರೀಡೆ22 mins ago

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

LIC
ವಾಣಿಜ್ಯ26 mins ago

LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Mobile Phone Recharges:
ದೇಶ48 mins ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ1 hour ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

blackmail case kgf
ಕೋಲಾರ1 hour ago

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Madhuri Dixit birthday extend wishes
ಬಾಲಿವುಡ್1 hour ago

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Prajwal Revanna Case Can women trust your government Writers open letter to Siddaramaiah
ರಾಜಕೀಯ1 hour ago

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Acharya Shankara Jayanthyutsava programme at Ranebennur
ಹಾವೇರಿ1 hour ago

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ20 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌