Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ - Vistara News

Lok Sabha Election 2024

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

Lok Sabha Election 2024: ಈಗಾಗಲೇ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್‌ ಬಾಕಿ ಕ್ಷೇತ್ರಗಳಿಗೂ ಅಂತಿಮ ಮಾಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಹ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ 13 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM


on

Lok Sabha Election 2024 Congress finalises list of 13 seats
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಕಣ ಮತ್ತಷ್ಟು ರಂಗೇರಿದೆ. ಶನಿವಾರ (ಮಾ. 16) ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಮೂರೂ ಪಕ್ಷಗಳು ಹೈ ಅಲರ್ಟ್‌ ಆಗಿವೆ. ಇನ್ನು ನಾಳೆ ಎರಡೂ ರಾಷ್ಟ್ರೀಯ ಪಕ್ಷಗಳಿಂದ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದು ಬಾಕಿ ಕ್ಷೇತ್ರಗಳ ಆಕಾಂಕ್ಷಿತ ಅಭ್ಯರ್ಥಿಗಳ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಕಾಂಗ್ರೆಸ್‌ನಲ್ಲಿ (Congress Karnataka) 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಬಾಕಿ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

ಈಗಾಗಲೇ ದೆಹಲಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಹೈಕಮಾಂಡ್ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡಿದೆ. ಬಿಜೆಪಿ ಈಗಾಗಲೇ ಕರ್ನಾಟಕದಲ್ಲಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿತ್ತು. ಈಗ ಬಾಕಿ ಕ್ಷೇತ್ರಗಳಿಗೆ ಅಂತಿಮ ಮಾಡಿ ಘೋಷಣೆ ಮಾಡುವುದಷ್ಟೇ ಬಾಕಿ ಇದೆ. ಸೋಮವಾರ (ಮಾ. 18) ಸಂಜೆ ವೇಳೆಗೆ ಬಹುತೇಕ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಕಾಂಗ್ರೆಸ್‌ ಸಹ ಬಹುತೇಕ ಪಟ್ಟಿಯನ್ನು ಅಂತಿಮ ಮಾಡಿದ್ದಾಗಿ ಹೇಳಿಕೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ?

ಈಗಾಗಲೇ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್‌ ಬಾಕಿ ಕ್ಷೇತ್ರಗಳಿಗೂ ಅಂತಿಮ ಮಾಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಹ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ 13 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಬಾಕಿ ಪಟ್ಟಿಯು ಮಾ. 19ರ ನಂತರ ಫೈನಲ್‌ ಆಗಲಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

  • ಬೆಂಗಳೂರು ಉತ್ತರ – ಪ್ರೊ. ರಾಜೀವ್ ಗೌಡ
  • ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ
  • ಬೆಂಗಳೂರು ಕೇಂದ್ರ – ಹ್ಯಾರಿಸ್
  • ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ
  • ಚಾಮರಾಜನಗರ – ಸುನಿಲ್ ಬೋಸ್
  • ಉಡುಪಿ ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
  • ಚಿತ್ರದುರ್ಗ – ಚಂದ್ರಪ್ಪ
  • ದಕ್ಷಿಣ ಕನ್ನಡ – ಸೊರಕೆ
  • ರಾಯಚೂರು – ಕುಮಾರ್ ನಾಯಕ
  • ಕೊಪ್ಪಳ – ರಾಘವೇಂದ್ರ ಹಿಟ್ನಾಲ್ ವರ್ಸಸ್ ಬಸನಗೌಡ ಬಾದರ್ಲಿ
  • ಬೀದರ್ – ರಾಜಶೇಖರ ಪಾಟೀಲ್
  • ಬಳ್ಳಾರಿ – ನಾಗೇಂದ್ರ ವರ್ಸಸ್ ವೆಂಕಟೇಶ್ ಪ್ರಸಾದ್ ವರ್ಸಸ್ ವಿ.ಎಸ್. ಉಗ್ರಪ್ಪ
  • ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ

ನಮ್ಮ ಅಭ್ಯರ್ಥಿಗಳು ಬಹುತೇಕ ಫೈನಲ್‌ ಎಂದಿದ್ದ ಡಿಕೆಶಿ

“ನಾವು ನಮ್ಮ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದ್ದೇವೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ನನಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಮಾ. 16ರಂದು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಕರ್ನಾಟಕದಲ್ಲಿನ ಮತದಾನದ ವಿವರ; ಇಲ್ಲಿದೆ ನೋಡಿ ವಿಡಿಯೊ

“ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಇಲ್ಲಿ ನಾವು ಹೋರಾಟ ಮಾಡಬೇಕು. ಅದನ್ನು ಸಂಭ್ರಮಿಸಿ, ಆನಂದಿಸಬೇಕು. ನಾವು ಮಾಡಿರುವ ಸಾಧನೆ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು 20ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ. ನಾವು ನಮ್ಮ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದ್ದೇವೆ” ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಚುನಾವಣೆ ಘೋಷಣೆ ಬೆನ್ನಲ್ಲೇ ಕುರುಡು ಕಾಂಚಾಣದ ಕುಣಿತ; ಬೆಂಗಳೂರಲ್ಲಿ 13 ಲಕ್ಷ ರೂ. ಜಪ್ತಿ

ಮಾ. 19ರ ಸಿಇಸಿ ಸಭೆ ಬಳಿಕ ಅಂತಿಮ ನಿರ್ಣಯ

“ಭಾರತ ಜೋಡೊ ಯಾತ್ರೆ ಸಮಾರೋಪ ಹಾಗೂ ಇಂಡಿಯಾ ಒಕ್ಕೂಟ ಸಭೆ ಹಿನ್ನೆಲೆಯಲ್ಲಿ ಸಿಇಸಿ ಸಭೆ ಮುಂದೂಡಲಾಗಿದೆ. ಮಾ. 19ರಂದು ಸಿಇಸಿ ಸಭೆ ನಡೆಯುವ ಸಾಧ್ಯತೆ ಇದೆ. ನಂತರ ಉಳಿದ ಅಭ್ಯರ್ಥಿ ಅಂತಿಮ ಮಾಡಲಾಗುವುದು. ನೀವು ಬಿಜೆಪಿಯಲ್ಲಿ ನೋಡುತ್ತಿರುವ ಭಿನ್ನಮತ ಕಾಂಗ್ರೆಸ್ ಪಕ್ಷದಲ್ಲಿ ಆಗುವುದಿಲ್ಲ” ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದರು. ಹೀಗಾಗಿ ಕಾಂಗ್ರೆಸ್‌ ಸೋಮವಾರ ತನ್ನ ಇನ್ನೊಂದು ಪಟ್ಟಿಯನ್ನು ಬಿಡುಗಡೆ ಮಾಡುತ್ತದೆಯೋ ಅಥವಾ ಮತ್ತೆರಡು ದಿನ ಕಾಯಲಿದೆಯೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

CM Siddaramaiah: ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್‌ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ, ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

how many seats will the Congress have in the Lok Sabha elections CM Siddaramaiah statement
Koo

ಬೆಂಗಳೂರು: ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಮೀಟ್ ದ ಪ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ಬಂದರು. ಅಲ್ಲದೆ, ಈ ವೇಳೆ ಕೇಂದ್ರ ಸರ್ಕಾರದ ಬಗ್ಗೆಯೂ ಕಿಡಿಕಾರಿದರು. ಇದೇ ವೇಳೆ, ಲೋಕಸಭಾ ಚುನಾವಣೆ (Lok Sabha Election 2024) ಫಲಿತಾಂಶದ ಬಗ್ಗೆಯೂ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್‌ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸಂಪುಟ ಆಗುತ್ತಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ, ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ

ಬಿಜೆಪಿಯ ನಿರಂತರ ಅಪ ಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಅಂಶಗಳ ಸಮೇತ ವಿವರಿಸಿದರು.

how many seats will the Congress have in the Lok Sabha elections CM Siddaramaiah statement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ, 56274 ಕೋಟಿ ರೂಪಾಯಿ ಖರ್ಚು ಮಾಡಿದೆವು. ಅಂದರೆ ಬಜೆಟ್‌ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನೀರಾವರಿಗೆ 16360 ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ, 18198 ಕೋಟಿ ರೂಪಾಯಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೂ 9661 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ಬಿಜೆಪಿಯವರ ಹೇಳಿಕೆಯಂತೆ ಖಜಾನೆ ಖಾಲಿ ಆಗಿದ್ದರೆ ಇಷ್ಟೆಲ್ಲ ಖರ್ಚು ಮಾಡಲು ಸಾಧ್ಯವಿತ್ತೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

how many seats will the Congress have in the Lok Sabha elections CM Siddaramaiah statement

ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಡ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬಸವರಾಜ ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲಿಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು.

ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳಿಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ. ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ಕಲ್ಯಾಣ, ಕೃಷಿ ಸೇರಿ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿ ಕೆಲಸಗಳು ಯಥೇಚ್ಚವಾಗಿ ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ

ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ, ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದಕ್ಕೆ ಐದೂ ಜಾರಿ ಮಾಡಿದ್ದೇವೆ. ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು. ಅಕ್ಕಿ ಸಂಗ್ರಹ ಇದ್ದರೂ ಕೊಡಲಿಲ್ಲ. ಅಕ್ಕಿ ಕೊಡದೆ ಇರಲು ಮೇಲಿನಿಂದ ಆದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದರು. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ನಾಡಿನ ಜನತೆಯ ಖಾತೆಗೆ ಹಣ ಜಮೆ ಮಾಡಿದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

ನಮ್ಮ ಕಾಲದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ನಿಂತಿದೆ ಎಂದು ಹೇಳೋದಿಲ್ಲ. ಆದರೆ ಪ್ರಮಾಣ ಕಡಿಮೆ ಮಾಡಲು ನಿಷ್ಠುರವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. 40% ತನಿಖೆಗೆ ಶುರು ಮಾಡಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Continue Reading

ದೇಶ

Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

Lok Sabha Election 2024: ಪಡಿಲ ಮಹಾದೇವ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಭಾರಿ ಬೆಂಬಲಿಗರು ಸೇರಿದ್ದರು, ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

VISTARANEWS.COM


on

Lok Sabha Election 2024
Koo

ಉತ್ತರಪ್ರದೇಶ: ಲೋಕಸಭೆ ಚುನಾವಣೆ(Lok Sabha Election 2024) ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಚುನಾವಣೆ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ರಾಜಕೀಯ ನಾಯಕರು ಒಂದರ ಮೇಲೊಂದರಂತೆ ರ್ಯಾಲಿ, ಸಾರ್ವಜನಿಕ ಸಭೆ ನಡೆಸುವ ಮೂಲಕ ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ. ನಿನ್ನೆ ಉತ್ತರಪ್ರದೇಶ(Uttara Pradesh)ದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ಮತ್ತು ಅಖಿಲೇಶ್‌ ಯಾದವ್‌(Akhilesh Yadav) ಭಾಗಿಯಾಗಿದ್ದ ಚುನಾವಣಾ ರ್ಯಲಿಯಲ್ಲಿ ದಾಖಲೆ ಪ್ರಮಾಣದಲ್ಲಿ ಜನಸ್ತೋಮ ಸೇರಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಫುಲ್‌ಫುರದಲ್ಲಿ ಸ್ವತಃ ನಾಯಕರೇ ಆಘಾತಕ್ಕೀಡಾಗುವಂತಹ ರೀತಿಯಲ್ಲಿ ಜನ ಭಾಗಿಯಾಗಿದ್ದರು. ನೆರೆದಿರುವ ಜನರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಪಡಿಲ ಮಹಾದೇವ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಭಾರಿ ಬೆಂಬಲಿಗರು ಸೇರಿದ್ದರು, ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

ಭಾಷಣ ಮಾಡದೇ ವೇದಿಕೆಯಿಂದ ನಿರ್ಗಮಿಸಿದ ರಾಹುಲ್‌, ಅಖಿಲೇಶ್‌

ಭಾರೀ ಜನಸ್ತೋಮ ಕಂಡು ದಂಗಾಗಿದ್ದ ರಾಹುಲ್‌ ಮತ್ತು ಅಖಿಲೇಶ್‌ ವೇದಿಕೆಯಿಂದ ನಿರ್ಗಮಿಸುವುದೇ ಸೂಕ್ತ ಎಂದು ಭಾವಿಸಿದರು. ಉದ್ರಿಕ್ತ ಜನ ಬ್ಯಾರಿಕೇಟ್‌ಗಳನ್ನು ಮುರಿದು ಒಳಗೆ ಪ್ರವೇಶಿಸಿದ್ದರು. ಅಲ್ಲದೇ ಕಹಲವು ವೇದಿಕೆಗೆ ಹತ್ತಲೂ ಯತ್ನಿಸಿದ್ದರು. ಕೆಲವರು ವೇದಿಕೆ ಏರುವಲ್ಲಿ ಯಶಸ್ವಿ ಆಗಿದ್ದರು. ಕಾರ್ಯಕರ್ತರ ಈ ರೀತಿಯಾದ ಅನುಚಿತ ವರ್ತನೆಯಿಂದ ಕುಪಿತಗೊಂಡ ಇಬ್ಬರೂ ನಾಯಕರು ಏನೂ ಮಾತನಾಡಲಿಲ್ಲ. ತಾವು ಮಾಡಬೇಕಾಗಿದ್ದ ಭಾಷಣವನ್ನೂ ಮಾಡದೇ ಇಬ್ಬರೂ ನಾಯಕರು ವೇದಿಕೆಯಿಂದ ನಿರ್ಗಮಿಸಿ ಬಳಿಕ ಇಬ್ಬರೂ ನಾಯಕರು ಇಲ್ಲಿಂದ ಹೆಲಿಕಾಪ್ಟರ್‌ನಲ್ಲಿ ತೆರಳಿದರು.

ಗಲಾಟೆ ಎಷ್ಟು ದೊಡ್ಡದಾಗಿದೆ ಎಂದರೆ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಯಾವುದೇ ಭಾಷಣ ಮಾಡದೆ ಸ್ಥಳದಿಂದ ನಿರ್ಗಮಿಸಿದರು. ಫುಲ್ಪುರ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಮತ್ತು ಅಖಿಲೇಶ್ ಜಂಟಿ ಸಾರ್ವಜನಿಕ ಸಭೆ ನಡೆಯಬೇಕಿತ್ತು. ರಾಹುಲ್ ಗಾಂಧಿ ಅವರು ಪ್ರಯಾಗ್‌ರಾಜ್‌ನ ಪಕ್ಷದ ಅಭ್ಯರ್ಥಿ ಉಜ್ವಲ್ ರಾಮನ್‌ಸಿಂಗ್‌ಗೆ ಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.

ಇದನ್ನೂ ಓದಿ:Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

ಕಾಂಗ್ರೆಸ್-ಸಮಾಜವಾದಿ ಪಕ್ಷದ ಸಹಭಾಗಿತ್ವವನ್ನು ಬೆಂಬಲಿಸಲು ನಮ್ಮ ಸಾವಿರಾರು ಕಾರ್ಯಕರ್ತರು ಇಲ್ಲಿದ್ದಾರೆ. ಮತಗಟ್ಟೆಗಳಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ನಿಂತು ಇಲ್ಲಿನ ಅಭ್ಯರ್ಥಿಯನ್ನು 5 ಲಕ್ಷ ಮತಗಳಿಂದ ಗೆಲ್ಲಿಸುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ, ಇಲ್ಲಿ ನಮ್ಮ ಅಭ್ಯರ್ಥಿ ಉಜ್ವಲ್ ರಮಣ್‌ಸಿಂಗ್ ಇದ್ದಾರೆ, ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಿ ಎಂದಷ್ಟೇ ಹೇಳಿ ವೇದಿಕೆಯಿಂದ ನಿರ್ಗಮಿಸಿದರು.

Continue Reading

Lok Sabha Election 2024

Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

Lok Sabha Election 2024: ಲೋಕಸಭೆ ಚುನಾವಣೆ ಸಮಯದಂದು ಚಾಮರಾಜನಗರದ ಇಂಡಿಗನತ್ತದಲ್ಲಿ ಮತ ಯಂತ್ರ ಪೀಸ್‌ ಪೀಸ್‌ ಮಾಡಿ ಮತಗಟ್ಟೆ ಧ್ವಂಸ ಮಾಡಿ ಬಂಧಿತರಾಗಿದ್ದ 46 ಮಂದಿಗೆ ಜಾಮೀನು ಸಿಕ್ಕಿದೆ.

VISTARANEWS.COM


on

By

Lok Sabha Election 2024
Koo

ಚಾಮರಾಜನಗರ: ಲೋಕಸಭೆ ಚುನಾವಣೆಯ (Lok Sabha Election 2024) ಮತದಾನದ ಸಮಯದಲ್ಲಿ ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದರು. ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 46 ಬಂಧಿತ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್ ಬಂಧಿತರಿಗೆ ಜಾಮೀನು ನೀಡಿದ್ದಾರೆ. ಮತಗಟ್ಟೆ ಧ್ವಂಸ ಪ್ರಕರಣದಲ್ಲಿ 26 ಪುರುಷರು, 20 ಮಹಿಳೆಯರು ಬಂಧಿತರಾಗಿದ್ದರು. ಇದೀಗ ಎಲ್ಲರು ಜಾಮೀನು ಪಡೆದು ಹೊರಬಂದಿದ್ದಾರೆ. ಇದೇ ವೇಳೆ ತಮಗೆ ಮೂಲ ಸೌಕರ್ಯ ಕಲ್ಪಿಸಿ ಕೊಡಿ ಎಂದು ಇಂಡಿಗನತ್ತ ಗ್ರಾಮದ ಮಹಿಳೆಯರು ಕಣ್ಣೀರಿಟ್ಟರು.

Lok Sabha Election 2024 Villagers vandalise polling booth in Chamarajanagar

ಏನಿದು ಪ್ರಕರಣ?

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಳೆದ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ (First phase of polling) ನಡೆದಿತ್ತು. ಆ ದಿನ ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha constituency) ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿತ್ತು. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿತ್ತು.

ಎಷ್ಟು ಬಾರಿ ಮನವಿ ಮಾಡಿದರೂ ಈ ಗ್ರಾಮಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಅದಾದ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದರು.

ಮತಯಂತ್ರ ಧ್ವಂಸ ಮಾಡಿದ್ದ ಗ್ರಾಮಸ್ಥರು

ಇನ್ನು ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದರು. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿತ್ತು. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದರು.

Lok Sabha Election 2024 Villagers vandalise polling booth in Chamarajanagar

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದರು. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿತ್ತು. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿತ್ತು. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದರು.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

85 ಮಂದಿಯಲ್ಲಿ ಮತ ಚಲಾಯಿಸಿದ್ದು ಇಬ್ಬರೇ!

ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸಿಕೆರೆ ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರ ಮಾಡಲಾಗಿತ್ತು. ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಕೇವಲ ಇಬ್ಬರು ಮತದಾನ ಮಾಡಿದ್ದರು. ಉಳಿದಂತೆ ಮತಗಟ್ಟೆಗಳತ್ತ ಯಾರೊಬ್ಬರೂ ಸುಳಿದಿರಲಿಲ್ಲ.

ನೀರು, ರಸ್ತೆ, ವಿದ್ಯುತ್‌ ಏನೂ ಇಲ್ಲ!

ಕನಿಷ್ಠ ಮೂಲಭೂತ ಸೌಕರ್ಯವನ್ನೂ ನೀಡಲಾಗಿಲ್ಲ. ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಎಲ್ಲವೂ ಇಲ್ಲಿ ಮರೀಚಿಕೆಯಾಗಿದೆ. ಕೆಲವು ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೂ, ಯಾವೊಂದು ಭರವಸೆ ಸಿಗದೇ ಇರುವ ಹಿನ್ನೆಲೆಯಲ್ಲಿ ಮತದಾನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಾಲಿವುಡ್

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Lok Sabha Election 2024: ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 Akshay Kumar casts vote for the first time
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.  ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮುಂಬೈನಲ್ಲಿ ಮತ ಚಲಾಯಿಸಿದರು. ನಟ ಈ ಹಿಂದೆ ಕೆನಡಾದ ಪೌರತ್ವವನ್ನು ಮಾತ್ರ ಹೊಂದಿದ್ದರು. 

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ವೋಟ್‌ ಮಾಡಿದ ಬಳಿಕ ಅಕ್ಷಯ್‌ ಕುಮಾರ್‌ ಮಾತನಾಡಿ ʻʻನನ್ನ ಭಾರತ ಅಭಿವೃದ್ಧಿ ಮತ್ತು ಬಲಿಷ್ಠವಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಭಾರತವು ನನಗೆಸರಿ ಎನಿಸುವದಕ್ಕೆ ಮತ ಚಲಾಯಿಸಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಇನ್ನು ಅಮಿತಾಭ್‌ ಕೂಡ ಮತ ಚಲಾಯಿಸುವಂತೆ ಸೋಷಿಯಲ್‌ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ. ʻʻಅಮಿತಾಭ್‌ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಕಾಡಿನಲ್ಲಿರುವ ಪ್ರಾಣಿಗಳು ಅಭಿ ತೋ ಪಾರ್ಟಿ ಶುರು ಹುಯಿ ಹೈ ಎಂಬ ಜನಪ್ರಿಯ ಹಾಡಿಗೆ ನೃತ್ಯ ಮಾಡುವುದು ಇದೆ. ಪೋಸ್ಟ್ ಅನ್ನು ಹಂಚಿಕೊಂಡ ಅವರು, “ನಾಳೆ ಮುಂಬೈ/ಮಹಾರಾಷ್ಟ್ರಕ್ಕೆ ನಿಮ್ಮ ದಿನ. ನಿಮ್ಮ ಹಕ್ಕನ್ನು ಚಲಾಯಿಸಿ..” ಎಂದರು.

ಆಯುಷ್ಮಾನ್ ಕೂಡ ವಿಡಿಯೊ ಮಾಡಿ, “ಸ್ನೇಹಿತರೇ, ಮತದಾನ ಮಾಡುವ ಸಮಯ ಬಂದಿದೆ. ಹೌದು, ಲೋಕಸಭೆ ಚುನಾವಣೆ ಹಂತ ಹಂತವಾಗಿ ನಡೆಯುತ್ತಿದೆ, ಮತ್ತು ಈಗ ಇದು ನಿಮ್ಮ ಸರದಿ. ಪ್ರತಿ ಮತವೂ ಮುಖ್ಯವಾಗಿದೆ ಏಕೆಂದರೆ ಯಾವ ನಾಯಕರು ದೇಶವನ್ನು ಮುನ್ನಡೆಸುತ್ತಾರೆ ಎಂಬುದನ್ನು ನೀವು ನಿರ್ಧರಿಸುತ್ತೀರಿ. ನಿಮ್ಮ ಮತವು ನಿಮ್ಮ ಧ್ವನಿಯಾಗಿದೆ, ಮತ್ತು ನಿಮ್ಮ ಧ್ವನಿಯನ್ನು ಎಣಿಕೆ ಮಾಡಿ, ಏಕೆಂದರೆ ನಾವು ನಮ್ಮ ದೇಶದ ಉಜ್ವಲ ಭವಿಷ್ಯವನ್ನು ರೂಪಿಸಬಹುದುʼʼಎಂದಿದ್ದಾರೆ. ರಣವೀರ್‌, ಕರಣ್‌ ಜೋಹರ್‌ ಸೇರಿದಂತೆ ಅನೇಕ ನಟರು ಮನವಿ ಮಾಡಿದರು.

ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

Continue Reading
Advertisement
Prajwal Revanna Case One more SPP appointed for SIT cases Govt gears up for arguments in High Court
ಕ್ರೈಂ14 mins ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

MS Dhoni Retirement
ಕ್ರಿಕೆಟ್18 mins ago

MS Dhoni Retirement: ಧೋನಿ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಚೆನ್ನೈ ಫ್ರಾಂಚೈಸಿ

Kannada New Movie sanju weds geetha another movie came
ಸ್ಯಾಂಡಲ್ ವುಡ್21 mins ago

Kannada New Movie: `ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ಅದ್ಧೂರಿ ಚಿತ್ರ!

HD Revanna
ಪ್ರಮುಖ ಸುದ್ದಿ23 mins ago

HD Revanna: ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಎಚ್‌ಡಿ ರೇವಣ್ಣಗೆ ಜಾಮೀನು, ಬಿಗ್‌ ರಿಲೀಫ್

IPL 2024
ಕ್ರೀಡೆ58 mins ago

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

how many seats will the Congress have in the Lok Sabha elections CM Siddaramaiah statement
Lok Sabha Election 20241 hour ago

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Yami Gautam welcome baby boy
ಬಾಲಿವುಡ್1 hour ago

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Liquid Nitrogen Paan
ದೇಶ1 hour ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ2 hours ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ2 hours ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ24 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌