Site icon Vistara News

Lok Sabha Election 2024: ನಾಳೆಯಿಂದ ಕಾಂಗ್ರೆಸ್‌ನಲ್ಲಿ ನಾಮಪತ್ರ ಜಾತ್ರೆ; ಯಾವ ಅಭ್ಯರ್ಥಿಯಿಂದ ಎಂದು ಸಲ್ಲಿಕೆ?

Lok Sabha Election 2024 Congress to file nominations from tomorrow

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಗಾಗಲೇ ಕರ್ನಾಟಕದಲ್ಲಿ ಮೂರೂ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿವೆ. ಇನ್ನು ಉಮೇದುವಾರಿಕೆ ಸಲ್ಲಿಸುವ ಪ್ರಕ್ರಿಯೆ ಶುರುವಾಗುತ್ತಿದೆ. ನಾಳೆಯಿಂದ (ಏಪ್ರಿಲ್‌ 1) ಕಾಂಗ್ರೆಸ್ (Congress Karnataka) ಅಭ್ಯರ್ಥಿಗಳ ನಾಮಪತ್ರ ಜಾತ್ರೆ ಶುರುವಾಗಲಿದೆ. ಸೋಮವಾರ ಬೆಂಗಳೂರು ದಕ್ಷಿಣ, ಹಾಸನ, ಮಂಡ್ಯ ಕ್ಷೇತ್ರದಲ್ಲಿ ಕೈ ಪಕ್ಷದ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬೆಳಗ್ಗೆ ಹನ್ನೊಂದು ಗಂಟೆಗೆ ಸೌಮ್ಯಾ ರೆಡ್ಡಿ ಅವರು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದು, ನಾಮಪತ್ರ ಸಲ್ಲಿಕೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಸ್ಥಿತರಿರಲಿದ್ದಾರೆ. ಬಳಿಕ ಅಲ್ಲಿಂದ ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರಿನಿಂದ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ನಾಮಪತ್ರವನ್ನು ಸಲ್ಲಿಸಲಿದ್ದು, ಅಲ್ಲಿಯೂ ಡಿ.ಕೆ. ಶಿವಕುಮಾರ್‌ ಭಾಗಿಯಾಗಲಿದ್ದಾರೆ. ಅಲ್ಲಿಂದ ನೇರವಾಗಿ ಹಾಸನ ಕ್ಷೇತ್ರಕ್ಕೆ ಡಿಕೆಶಿ ಹೋಗಲಿದ್ದಾರೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಏಪ್ರಿಲ್‌ 2ರಿಂದ ಉಮೇದುವಾರಿಕೆ ಸಲ್ಲಿಸುವವರ ಪಟ್ಟಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

ಕಾಂಗ್ರೆಸ್‌ನಿಂದ ಸ್ಟಾರ್‌ ಪ್ರಚಾರಕರ (Congress Star campaigners) ಪಟ್ಟಿ ಬಿಡುಗಡೆ ಮಾಡಲಾಗಿದೆ. ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್‌ಗೆ (Nasir Hussain) ಸ್ಥಾನ ಕಲ್ಪಿಸಲಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ನಾಸಿರ್ ಹುಸೇನ್ ವಿವಾದಕ್ಕೊಳಗಾಗಿದ್ದರು. ಅಲ್ಲದೆ, ಇದನ್ನು ಪ್ರಶ್ನೆ ಮಾಡಿದ್ದ ಮಾಧ್ಯಮಗಳ ಮೇಲೂ ಹರಿಹಾಯ್ದಿದ್ದರು. ಆದರೆ, ಈಗ ಅವರನ್ನು ಪಕ್ಷದ ಸ್ಟಾರ್‌ ಪ್ರಚಾರಕರ ಪಟ್ಟಿಗೆ ಸೇರಿಸಲಾಗಿದೆ.

ಟಿಕೆಟ್ ವಂಚಿತ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಎಲ್. ಹನುಮಂತಯ್ಯ ಅವರಿಗೂ ಸ್ಟಾರ್ ಕ್ಯಾಂಪೇನರ್ ಸ್ಥಾನವನ್ನು ಕೊಡಲಾಗಿದೆ. ಈ ಮೂಲಕ ಅಸಮಾಧಾನಿತರನ್ನು ಸಮಾಧಾನ ಪಡಿಸುವ ಪ್ರಯತ್ನವನ್ನು ಕಾಂಗ್ರೆಸ್‌ ಮಾಡುತ್ತಿದೆ.

ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರು ಇವರು

ಇವರಲ್ಲಿ ಕೆಲವು ಸಚಿವರನ್ನು ಆಯ್ಕೆ ಮಾಡಿದ್ದರೆ, ಮತ್ತೆ ಕೆಲವರು ಹಿರಿಯ ಶಾಸಕರಿಗೆ ಮಣೆ ಹಾಕಲಾಗಿದೆ. ಇದರ ಜತೆಗೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳಾಗಿ ಕೈ ತಪ್ಪಿ ಅಸಮಾಧಾನಗೊಂಡಿರುವ ನಾಯಕರಿಗೂ ಇಲ್ಲಿ ಸ್ಥಾನ ಕಲ್ಪಿಸಲಾಗಿದೆ. ಈ ಮೂಲಕ ಪಕ್ಷವು ನಿಮ್ಮ ಸೇವೆಯನ್ನು ಪರಿಗಣಿಸುತ್ತದೆ ಎಂಬ ಸಂದೇಶವನ್ನು ನೀಡಲು ಕಾಂಗ್ರೆಸ್‌ ಮುಂದಾಗಿದೆ.

Exit mobile version