Lok Sabha Election 2024: ಕೋಟ ಶ್ರೀನಿವಾಸ ಪೂಜಾರಿಗೆ ತಿಂಗಳಲ್ಲಿ ಇಂಗ್ಲಿಷ್ ಕಲಿಸುವೆನೆಂದ ಬೆಳಗಾವಿ ಟ್ರೈನರ್! - Vistara News

Lok Sabha Election 2024

Lok Sabha Election 2024: ಕೋಟ ಶ್ರೀನಿವಾಸ ಪೂಜಾರಿಗೆ ತಿಂಗಳಲ್ಲಿ ಇಂಗ್ಲಿಷ್ ಕಲಿಸುವೆನೆಂದ ಬೆಳಗಾವಿ ಟ್ರೈನರ್!

Lok Sabha Election 2024: ಇಂಗ್ಲಿಷ್‌ ಭಾಷೆ ಬರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಿಂಜರಿಕೆ ಬೇಡ. ನಾನು ಅವರಿಗೆ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಹೇಳಿಕೊಡುತ್ತೇನೆ ಎಂದು ಬೆಳಗಾವಿಯ ಇಂಗ್ಲಿಷ್‌ ಟ್ರೈನರ್‌ ಒಬ್ಬರು ಹೇಳಿದ್ದಾರೆ.

VISTARANEWS.COM


on

Kota Srinivas Poojary and spoken English
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಲೋಕಸಭಾ ಚುನಾವಣಾ (Lok Sabha Election 2024) ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಅಲ್ಲದೆ, ರಾಜಕೀಯ ಮುಖಂಡರ ವಾಕ್ಸಮರಗಳು ಶುರುವಾಗಿವೆ. ಈ ಮಧ್ಯೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ (Udupi Chikkamagaluru Lok Sabha constituency) ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಅವರಿಗೆ ಹಿಂದಿ, ಇಂಗ್ಲಿಷ್ ಬರುವುದಿಲ್ಲ. ಅವರಿಗೆ ಮತ ಹಾಕಬೇಡಿ ಎಂಬ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ (Jayaprakash Hegde) ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಹೆಗ್ಡೆ ವಿರುದ್ಧ ಬಿಜೆಪಿ ದೂರನ್ನೂ ಕೊಟ್ಟಿದೆ. ಈಗ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಇಂಗ್ಲಿಷ್ ಟ್ರೆನರ್‌ವೊಬ್ಬರು ಮುಂದೆ ಘೋಷಿಸಿದ್ದಾರೆ.

Lok Sabha Election 2024 and English Trainer Manjunath offer to Kota Srinivas Poojary for English training
ಜಿ.ಎಲ್. ಮಂಜುನಾಥ

ಜಿ.ಎಲ್. ಮಂಜುನಾಥ ಎಂಬ ಇಂಗ್ಲಿಷ್ ಟ್ರೈನರ್‌ ಈಗ ಈ ಬಗ್ಗೆ ಹೇಳಿದ್ದಾರೆ. ಮೂಲತಃ ಹಾಸನದವರಾಗಿರುವ ಮಂಜುನಾಥ್‌ ಬೆಳಗಾವಿಯಲ್ಲಿ ಕಳೆದ 20 ವರ್ಷಗಳಿಂದ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿಯನ್ನು ನಡೆಸುತ್ತಿದ್ದಾರೆ. ಇಂಗ್ಲಿಷ್‌ ಭಾಷೆ ಬರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಿಂಜರಿಕೆ ಬೇಡ. ನಾನು ಅವರಿಗೆ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಹೇಳಿಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಜಯಪ್ರಕಾಶ್‌ ಹೆಗ್ಡೆ ಹೇಳಿದ್ದೇನು?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಮಾರ್ಚ್‌ 22ರ ಶುಕ್ರವಾರ ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಮಾತನಾಡುವಾಗ, “ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕನ್ನಡ ಬಿಟ್ಟರೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲ. ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ. ಹೀಗಾಗಿ ಅವರಿಗೆ ಮತ ಹಾಕಬೇಡಿ” ಎಂದು ಹೇಳಿದ್ದರು. ಈ ಹೇಳಿಕೆಯು ಸಾಕಷ್ಟು ವಿವಾದವನ್ನು ಹುಟ್ಟುಹಾಕಿದೆ. ಅಲ್ಲದೆ, ಈ ಬಗ್ಗೆ ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ ದೂರನ್ನೂ ನೀಡಿದೆ. ಭಾಷೆಯ ಹೆಸರಿನಲ್ಲಿ ಮತಯಾಚಿಸಿ ಪ್ರತಿಸ್ಪರ್ಧಿಯನ್ನು ಗೆಲ್ಲಿಸಬೇಡಿ ಎಂದು ಹೇಳಿಕೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ‌ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ದೂರು ಕೊಟ್ಟ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಶಾಸಕ ಎಸ್. ಸುರೇಶ್‌ ಕುಮಾರ್, ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ನಮ್ಮ ಪಕ್ಷದ ಅಭ್ಯರ್ಥಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಭಾಷೆ ಬರಲ್ಲ, ಮತ ಹಾಕಬೇಡಿ ಅಂದಿದ್ದಾರೆ. ಈ ಹೇಳಿಕೆಯನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಜಯಪ್ರಕಾಶ್ ಹೆಗ್ಡೆ ಅವರು ಆ ಹೇಳಿಕೆ ನೀಡಿ ಜನರಿಗೆ ಅವರ ಮೇಲಿದ್ದ ಗೌರವವನ್ನು ಅವರೇ ಕಡಿಮೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: Lok Sabha Election 2024: ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ್‌ ಹೆಗ್ಡೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬಯಸಿದಲ್ಲಿ ಇಂಗ್ಲಿಷ್‌ ಕಲಿಸುವೆ

ಈಗ ಈ ಹೇಳಿಕೆಯು ವಿವಾದದ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಜುನಾಥ್‌, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇಂಗ್ಲಿಷ್ ಕಲಿಕೆ ಬಗ್ಗೆ ಹಿಂಜರಿಕೆ ಬೇಡ, ಅವರು ಬಯಸಿದಲ್ಲಿ ತಾವು ಇಂಗ್ಲಿಷ್‌ ಅನ್ನು ಹೇಳಿಕೊಡುವುದಾಗಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Lok Sabha Election: ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಶನಿವಾರ ಸಂಜೆಯೇ ಮತಗಟ್ಟೆ ಸಮೀಕ್ಷೆಗಳ ವರದಿಗಳು ಪ್ರಕಟವಾಗುವ ಕಾರಣ ಸಂಜೆಯೇ ಚುನಾವಣೆ ಫಲಿತಾಂಶದ ಅಂದಾಜು ಸಿಗಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಇಂದು (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ. ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇಂದು ಸಂಜೆ ಎಕ್ಸಿಟ್‌ ಪೋಲ್‌

ಶನಿವಾರ ಸಂಜೆ 6 ಗಂಟೆಗೆ ಮತದಾನ ಮುಗಿಯಲಿದ್ದು, 6.30ರ ಸುಮಾರಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಲಿವೆ. ಹಾಗಾಗಿ, ರಾಜಕೀಯ ನಾಯಕರು, ತಜ್ಞರು, ನಾಗರಿಕರು ಸೇರಿದಂತೆ ಎಲ್ಲರ ಗಮನ ಈಗ ಎಕ್ಸಿಟ್ ಪೋಲ್‌ಗಳತ್ತ ಇದೆ. ಜೂನ್‌ 1ರಂದು ಸಂಜೆ 6.30ರ ಹೊತ್ತಿಗೆ ವಿವಿಧ ಮಾಧ್ಯಮಗಳ ಎಕ್ಸಿಟ್‌ ಪೋಲ್‌ ಪ್ರಕಟವಾಗಲಿದೆ. ಕಳೆದ ಅನೇಕ ವರ್ಷಗಳಲ್ಲಿ ಎಕ್ಸಿಟ್ ಪೋಲ್‌ಗಳು ಮತದಾರರ ಚಿತ್ತವನ್ನು ಅಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣಾ ಆಯೋಗದ ಅಧಿಕೃತ ಘೋಷಣೆಯ ಮೊದಲೇ ಚುನಾವಣಾ ಫಲಿತಾಂಶದ ನಿಖರವಾದ ವಿವರಣೆ ಲಭ್ಯವಾಗುತ್ತದೆ.

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Continue Reading

Lok Sabha Election 2024

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

ಲೋಕಸಭಾ ಚುನಾವಣೆ ಕೊನೆಯ ಹಂತದಲ್ಲಿದೆ. ಈಗ ಎಲ್ಲರ ದೃಷ್ಟಿ ಫಲಿತಾಂಶದತ್ತ ನೆಟ್ಟಿದೆ. ಈ ನಡುವೆ ಎಕ್ಸಿಟ್ ಪೋಲ್ ನುಡಿಯುವ ಭವಿಷ್ಯದ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ. ಕಳೆದ ನಾಲ್ಕು ಲೋಕ ಸಭಾ ಚುನಾವಣೆಯಲ್ಲಿ ಎಕ್ಸಿಟ್ ಪೋಲ್ (Exit Poll) ನುಡಿದಿರುವ ಭವಿಷ್ಯ ಎಷ್ಟು ನಿಜವಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ. ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

Exit Polls
Koo

ಲೋಕಸಭೆ ಚುನಾವಣೆ-2024ರ (Loksabha election-2024) ಕೊನೆಯ ಹಂತದ ಮತದಾನ (voting) ಮುಗಿದ ಬಳಿಕ ಪ್ರಸಾರವಾಗಲಿರುವ ಎಕ್ಸಿಟ್ ಪೋಲ್ ಗಳ (Exit Poll) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಜೂನ್ 1ರಂದು ಎಂಟು ರಾಜ್ಯಗಳ (states) 59 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಸಂಜೆ 6:30ಕ್ಕೆ ಮತಗಟ್ಟೆ ಸಮೀಕ್ಷೆ ಪ್ರಕಟವಾಗಲಿದೆ.

ಅಭಿಪ್ರಾಯ ಸಂಗ್ರಹಕ್ಕಿಂತ (opinion polls) ಎಕ್ಸಿಟ್ ಪೋಲ್ ಭಿನ್ನವಾಗಿರುತ್ತದೆ. ಎಕ್ಸಿಟ್ ಪೋಲ್ ಮತದಾನ ಮುಗಿದ ಅನಂತರ ತೆಗೆದುಕೊಳ್ಳಲಾಗುವ ಮತದಾರರ ಸಮೀಕ್ಷೆಯಾಗಿದೆ. ಜನರು ಹೇಗೆ ಮತ ಚಲಾಯಿಸಿದ್ದಾರೆ ಎಂಬ ಟ್ರೆಂಡ್ ಇದು ನೀಡುತ್ತದೆ.

ನಿರ್ದಿಷ್ಟ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯು ತನ್ನ ಪ್ರತಿಸ್ಪರ್ಧಿಗಿಂತ ಮುಂದಿದ್ದಾರೆ ಎಂಬ ನಿಖರವಾದ ಮಾಹಿತಿಯನ್ನು ಇದು ಒದಗಿಸುತ್ತದೆ. ಚುನಾವಣೆ ಆರಂಭಕ್ಕೂ ಮುನ್ನ ಅಭಿಪ್ರಾಯ ಸಂಗ್ರಹಣೆ ನಡೆಸಲಾಗುತ್ತದೆ. ಇದಕ್ಕಾಗಿ ಜನ ಯಾವ ಪಕ್ಷಕ್ಕೆ ಮತ ಹಾಕಬೇಕು ಎಂದು ಮತಗಟ್ಟೆಯವರು ಕೇಳುತ್ತಾರೆ. ಆದರೆ ಎಕ್ಸಿಟ್ ಪೋಲ್‌ಗಳಲ್ಲಿ ಜನರು ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂಬುದನ್ನು ಕಂಡುಕೊಳ್ಳುತ್ತಾರೆ.

ಎಕ್ಸಿಟ್ ಪೋಲ್‌ಗಳು ಎಷ್ಟು ನಿಖರವಾಗಿರುತ್ತದೆ?

ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳುತ್ತವೆ. ಆದರೆ ಅದರ ನಿಖರತೆಯು ಭೌಗೋಳಿಕ ವ್ಯಾಪ್ತಿ ಮತ್ತು ಮತದಾರರ ನಿಷ್ಕಪಟತೆಯಂತಹ ಬಹು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ.

ಸಾಮಾನ್ಯವಾಗಿ ಜನರು ಗುಂಪುಗಳಲ್ಲಿ ಮತ ಚಲಾಯಿಸಿದಾಗ ಗಾಳಿ ಯಾವ ಕಡೆಗೆ ಬೀಸುತ್ತಿದೆ ಎಂಬುದನ್ನು ಅಳೆಯುವುದು ಸುಲಭ. ಆದರೆ ಒಂದು ಭಾಗದ ಜನರು ತಮ್ಮ ಒಲವನ್ನು ತೋರಿಸದಿರಲು ನಿರ್ಧರಿಸಿದರೆ ಅಲ್ಲಿಯೇ ಸಮೀಕ್ಷೆದಾರರು ಸಂಖ್ಯೆಗಳನ್ನು ತಪ್ಪಾಗಿ ಬಿಡುತ್ತದೆ. ಎಕ್ಸಿಟ್ ಪೋಲ್‌ಗಳು ಕೆಲವೊಮ್ಮೆ ಸರಿ ಮತ್ತು ಕೆಲವೊಮ್ಮೆ ತಪ್ಪಾಗಿವೆ.

ಕಳೆದ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳು ಏನು ಭವಿಷ್ಯ ನುಡಿದಿವೆ ಮತ್ತು ನಿಜವಾದ ಫಲಿತಾಂಶಗಳು ಹೇಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

2019ರ ಎಕ್ಸಿಟ್ ಪೋಲ್‌ಗಳು

ಇಂಡಿಯಾ ಟುಡೇ- ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಎನ್ ಡಿ ಎ: 339-365, ಯುಪಿಎ: 77-108
ನ್ಯೂಸ್ 24-ಟುಡೇಸ್ ಚಾಣಕ್ಯ ಪ್ರಕಾರ ಎನ್ ಡಿ ಎ-350, ಯುಪಿಎ-95
ನ್ಯೂಸ್ 18-ಐಪಿಎಸ್ ಒಎಸ್ ಪ್ರಕಾರ ಎನ್ ಡಿ ಎ- 336, ಯುಪಿಎ- 124
ಟೈಮ್ಸ್ ನೌ- ವಿಎಂಆರ್ ಪ್ರಕಾರ ಎನ್ ಡಿ ಎ- 306, ಯುಪಿಎ-132
ಇಂಡಿಯಾ ಟಿವಿ-ಸಿಎನ್ ಎಕ್ಸ್ ಪ್ರಕಾರ ಎನ್ ಡಿಎ-300, ಯುಪಿಎ-120
ಎಬಿಪಿ-ಸಿಎಸ್ ಡಿಎಸ್ ಪ್ರಕಾರ ಎನ್ ಡಿಎ- 277, ಯುಪಿಎ- 130
ಇಂಡಿಯಾ ನ್ಯೂಸ್-ಪೋಲ್ ಸ್ಟಾರ್ಟ್ ಪ್ರಕಾರ ಎನ್ ಡಿಎ- 287, ಯುಪಿಎ- 130
2019ರ ಅಂತಿಮ ಫಲಿತಾಂಶ ಹೀಗಿತ್ತು: ಎನ್ ಡಿ ಎ-353, ಯುಪಿಎ-91

2014ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್– ಸಿಎಸ್ ಡಿಎಸ್–ಲೋಕ್ ನೀತಿ ಪ್ರಕಾರ ಎನ್ ಡಿ ಎ – 276, ಯುಪಿಎ -97, ಇತರೆ-148
ಇಂಡಿಯಾ ಟುಡೇ–ಸಿಸೆರೊ ಪ್ರಕಾರ ಎನ್ ಡಿ ಎ-272, ಯುಪಿಎ-115, ಇತರೆ- 156
ಸುದ್ದಿ 24–ಚಾಣಕ್ಯ ಪ್ರಕಾರ ಎನ್‌ಡಿಎ-340, ಯುಪಿಎ-70, ಇತರೆ-133
ಟೈಮ್ಸ್ ನೌ–ಒ ಆರ್ ಜಿ ಪ್ರಕಾರ ಎನ್‌ಡಿಎ- 249, ಯುಪಿಎ-148, ಇತರೆ- 146
ಎಬಿಪಿ ನ್ಯೂಸ್–ನೀಲ್ಸನ್ ಪ್ರಕಾರ ಎನ್‌ಡಿಎ-274, ಯುಪಿಎ-97, ಇತರೆ-165
ಎನ್ ಡಿ ಟಿವಿ –ಹಂಸ ಸಂಶೋಧನೆ ಪ್ರಕಾರ ಎನ್‌ಡಿಎ-279, ಯುಪಿಎ-103, ಇತರೆ-161
2014ರ ಫಲಿತಾಂಶ ಹೀಗಿತ್ತು: ಎನ್‌ಡಿಎ-336, ಯುಪಿಎ-66, ಇತರೆ-147 ಇದರಲ್ಲಿ ಬಿಜೆಪಿ 282, ಕಾಂಗ್ರೆಸ್ 44 ಸ್ಥಾನಗಳನ್ನು ಗಳಿಸಿತ್ತು.

2009ರ ಎಕ್ಸಿಟ್ ಪೋಲ್‌ಗಳು

ಸಿ ಎನ್ ಎನ್-ಐಬಿಎನ್ – ದೈನಿಕ್ ಭಾಸ್ಕರ್ ಪ್ರಕಾರ ಯುಪಿಎ 185– 205, ಎನ್‌ಡಿಎ 165– 185, ತೃತೀಯ ರಂಗ 110– 130, ನಾಲ್ಕನೇ ರಂಗ 25–35
ಸ್ಟಾರ್-ನೀಲ್ಸನ್ ಪ್ರಕಾರ ಯುಪಿಎ 199, ಎನ್‌ಡಿಎ 196, ತೃತೀಯ ರಂಗ 100, ನಾಲ್ಕನೇ ರಂಗ 36
ಭಾರತ ಟಿವಿ – ಸಿ ವೋಟರ್ ಪ್ರಕಾರ ಯುಪಿಎ 189–201, ಎನ್‌ಡಿಎ 183–195, ತೃತೀಯ ರಂಗ 105–121
2009ರ ಫಲಿತಾಂಶ ಹೀಗಿತ್ತು: ಯುಪಿಎ-262, ಎನ್‌ಡಿಎ-159, ತೃತೀಯ ರಂಗ-79, ನಾಲ್ಕನೇ ರಂಗ-27. ಇದರಲ್ಲಿ ಕಾಂಗ್ರೆಸ್- 206, ಬಿಜೆಪಿ 116 ಸ್ಥಾನಗಳನ್ನು ಗೆದ್ದುಕೊಂಡಿತ್ತು.

2004ರ ಎಕ್ಸಿಟ್ ಪೋಲ್‌ಗಳು

ಎನ್ ಡಿ ಟಿವಿ- ಎಸಿ ನೀಲ್ಸನ್ ಪ್ರಕಾರ ಎನ್ ಡಿ ಎ 230-250, ಕಾಂಗ್ರೆಸ್ 190-205, ಇತರೆ 100-120
ಆಜ್ತಕ್ ಒಆರ್ ಜಿ-ಮಾರ್ಗ್ ಪ್ರಕಾರ ಎನ್ ಡಿ ಎ 248, ಕಾಂಗ್ರೆಸ್-190, ಇತರೆ-105
ಸ್ಟಾರ್‌ನ್ಯೂಸ್ ಸಿ-ವೋಟರ್ ಪ್ರಕಾರ ಎನ್ ಡಿ ಎ 263-275, ಕಾಂಗ್ರೆಸ್ 174-186, ಇತರೆ 86-98
2004ರ ಫಲಿತಾಂಶ ಹೀಗಿತ್ತು: ಯುಪಿಎ- 208, ಎನ್‌ಡಿಎ- 181, ಎಡರಂಗ- 59. ಇದರಲ್ಲಿ ಕಾಂಗ್ರೆಸ್ 145, ಬಿಜೆಪಿ 138 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಎಷ್ಟು ನಿಖರ?

ಕಳೆದ ನಾಲ್ಕು ಬಾರಿಯ ಲೋಕಸಭೆ ಚುನಾವಣೆಗಳ ಮತಗಟ್ಟೆ ಸಮೀಕ್ಷೆಗಳಲ್ಲಿ ಮೂರು ಬಾರಿ ಬಹುತೇಕ ನಿಖರವಾಗಿತ್ತು. ಆದರೆ 2004ರಲ್ಲಿ ಮಾತ್ರ ಸಮೀಕ್ಷೆ ಸುಳ್ಳಾಗಿತ್ತು. ಇದೀಗ 2024 ಸಮೀಕ್ಷೆ ಕುತೂಹಲ ಮೂಡಿಸಿದೆ.

Continue Reading

ಪ್ರಮುಖ ಸುದ್ದಿ

Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Modi Meditation: ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಗುರುವಾರದಿಂದ (ಮೇ 30) 45 ಗಂಟೆಗಳವರೆಗೆ ಧ್ಯಾನ ಆರಂಭಿಸಿದ್ದಾರೆ. ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ.

VISTARANEWS.COM


on

Modi Meditation
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) 45 ಗಂಟೆಗಳ ಧ್ಯಾನ ಆರಂಭಿಸಿದ್ದಾರೆ. ಸುಮಾರು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ಮೋದಿ ಧ್ಯಾನದಲ್ಲಿ (Modi Meditation) ತೊಡಗಿಕೊಂಡಿದ್ದಾರೆ. ಇದರ ಬೆನ್ನಲ್ಲೇ, “ಮೋದಿ ಅವರು ಮನೆಯಲ್ಲಿಯೇ ಧ್ಯಾನ ಮಾಡಬಹುದಿತ್ತು. ಕನ್ಯಾಕುಮಾರಿಯಲ್ಲಿ ಧ್ಯಾನದ ಹೆಸರಿನಲ್ಲಿ ಡ್ರಾಮಾ ಮಾಡುವ ಅವಶ್ಯಕತೆ ಇರಲಿಲ್ಲ” ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.

ಇಂಡಿಯಾ ಟಿವಿಗೆ ನೀಡಿದ ಸಂದರ್ಶನದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಧ್ಯಾನದ ಕುರಿತು ಮಾತನಾಡಿದರು. “ನರೇಂದ್ರ ಮೋದಿ ಅವರು ಮನೆಯಲ್ಲಿಯೇ 45 ಗಂಟೆ ಧ್ಯಾನ ಮಾಡಬಹುದಿತ್ತು. ಕನ್ಯಾಕುಮಾರಿಗೆ ಹೋಗುವ ಅನಿವಾರ್ಯತೆ ಏನಿತ್ತು? ನರೇಂದ್ರ ಮೋದಿ ಅವರ ಭದ್ರತೆಗೆ 10 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಷ್ಟೊಂದು ಡ್ರಾಮಾ ಏಕೆ ಬೇಕಿತ್ತು? ಅವರು ಮನೆಯಲ್ಲಿಯೇ ಪೂಜೆ, ಧ್ಯಾನ ಮಾಡಬಹುದಿತ್ತು” ಎಂಬುದಾಗಿ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಹಾರ ಸೇವಿಸಲ್ಲ ಮೋದಿ

ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ. ಜ್ಯೂಸ್‌, ಹಾಲಿನಲ್ಲಿಯೇ ಎರಡು ದಿನ ಕಳೆಯಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಜನವರಿಯಲ್ಲಿ ರಾಮಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿಯೂ ನರೇಂದ್ರ ಮೋದಿ ಅವರು 11 ದಿನಗಳ ಉಪವಾಸ ಕೈಗೊಂಡಿದ್ದರು. ಹಾಸಿಗೆಯ ಮೇಲೆ ಮಲಗುವುದನ್ನು ನಿಲ್ಲಿಸಿದ್ದರು. ನೆಲದ ಮೇಲೆ ಬಟ್ಟೆ ಹಾಸಿಕೊಂಡು ನಿದ್ದೆ ಮಾಡಿದ್ದರು. ಈ ಅವಧಿಯಲ್ಲಿ ಅವರು ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸಿದ್ದರು. ಹಣ್ಣುಗಳನ್ನು ಮಾತ್ರ ಸೇವಿಸಿದ್ದರು.

ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಮೋದಿ ಅವರು ಎರಡು ದಿನ ಧ್ಯಾನ ಮಾಡುವ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತಲೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Lok Sabha Election: ನಾಳೆ ಕೊನೆಯ ಹಂತದ ಮತದಾನ; ಮೋದಿ, ಕಂಗನಾ ಸೇರಿ ಹಲವರ ಭವಿಷ್ಯ ನಿರ್ಧಾರ

Continue Reading

ದೇಶ

Lok Sabha Election: ನಾಳೆ ಕೊನೆಯ ಹಂತದ ಮತದಾನ; ಮೋದಿ, ಕಂಗನಾ ಸೇರಿ ಹಲವರ ಭವಿಷ್ಯ ನಿರ್ಧಾರ

Lok Sabha Election: ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಇದರೊಂದಿಗೆ ಲೋಕಸಭೆ ಚುನಾವಣೆ ಮುಗಿಯಲಿದ್ದು, ಜೂನ್‌ 4ರ ಫಲಿತಾಂಶದತ್ತ ಎಲ್ಲ ಚಿತ್ತ ವಾಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶದ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಶನಿವಾರ (ಜೂನ್‌ 1) ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರ ಗಮನವೀಗ ಫಲಿತಾಂಶದ ಕಡೆ ವಾಲಿದೆ. ಶನಿವಾರ 7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ.

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಕಣದಲ್ಲಿರುವ ಪ್ರಮುಖರು

ನರೇಂದ್ರ ಮೋದಿ, ವಾರಾಣಸಿ

ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. 2014ರಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡುತ್ತಿದ್ದು, ಕ್ಕಾಂಗ್ರೆಸ್ ಪಕ್ಷವು ಅಜಯ್ ರೈ ಅವರನ್ನು ಮೂರನೇ ಬಾರಿಗೆ ಕಣಕ್ಕಿಳಿಸಿದೆ.

ಕಂಗನಾ ರಣಾವತ್‌, ಮಂಡಿ

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ನಟಿ ಕಂಗನಾ ರಣಾವತ್ ಅವರನ್ನು ಕಣಕ್ಕಿಳಿಸಿದೆ. ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಕಾಂಗ್ರೆಸ್ ಭದ್ರಕೋಟೆಯಾದ ಮಂಡಿಯಲ್ಲಿ ಕಂಗನಾ ಸ್ಪರ್ಧಿಸುತ್ತಿದ್ದಾರೆ.

ಚರಣ್‌ಜೀತ್‌ ಸಿಂಗ್‌ ಚನ್ನಿ, ಜಲಂಧರ್

ಪಂಜಾಬ್‌ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಕಣದಲ್ಲಿದ್ದಾರೆ. ಚನ್ನಿ, ಜಲಂಧರ್ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಪವನ್ ಕುಮಾರ್ ಟಿನು ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ

ಅನುರಾಗ್ ಠಾಕೂರ್, ಹಮೀರ್‌ಪುರ‌

ಹಿಮಾಚಲ ಪ್ರದೇಶದ ಹಮೀರ್‌ಪುರ ಕ್ಷೇತ್ರದಿಂದ ಬಿಜೆಪಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸ್ಪರ್ಧೆ ಮಾಡುತ್ತಿದ್ದಾರೆ. 2008ರ ಉಪಚುನಾವಣೆಯಲ್ಲಿ ಅನುರಾಗ್ ಮೊದಲ ಬಾರಿಗೆ ಗೆದಿದ್ದು, 5ನೇ ಬಾರಿ ಈ ಕ್ಷೇತ್ರದಿಂದ ಅನುರಾಗ್ ಠಾಕೂರ್ ಸ್ಪರ್ಧೆ ಮಾಡುತ್ತಿದ್ದಾರೆ.

ಅಭಿಷೇಕ್ ಬ್ಯಾನರ್ಜಿ, ಡೈಮಂಡ್‌ ಹಾರ್ಬರ್

ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಕಣಕ್ಕಿಳಿದಿದ್ದಾರೆ. ಡೈಮಂಡ್ ಹಾರ್ಬರ್ ತೃಣಮೂಲ ಕಾಂಗ್ರೆಸ್‌ನ ಭದ್ರಕೋಟೆ. ಈ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಅಭಿಷೇಕ್ ಬ್ಯಾನರ್ಜಿ, ಸಿಪಿಐ(ಎಂ)ನ ಪ್ರತೀಕುರ್ ರಹಮಾನ್ ಮತ್ತು ಬಿಜೆಪಿಯ ಅಭಿಜಿತ್ ದಾಸ್ ಕಣದಲ್ಲಿದ್ದಾರೆ.

ಮೀಸಾ ಭಾರ್ತಿ, ಪಾಟಲಿಪುತ್ರ

ಬಿಹಾರದ ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರಿ ಮೀಸಾ ಭಾರ್ತಿ ಆರ್‌ಜೆಡಿ ಪಕ್ಷದಿಂದ ಕಣದಲ್ಲಿದ್ದಾರೆ. 2014ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ರಾಮ್ ಕೃಪಾಲ್ ಯಾದವ್ ಇವರ ವಿರುದ್ಧ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ: PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

Continue Reading
Advertisement
Karnataka Weather Forecast
ಮಳೆ23 mins ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ53 mins ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Lok Sabha Election
ದೇಶ2 hours ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ2 hours ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ7 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ7 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು9 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ9 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ10 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ10 hours ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌