ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಉತ್ಸಾಹಿ ಮತದಾರರೊಬ್ಬರು ಶಸ್ತ್ರಚಿಕಿತ್ಸೆಗೂ ಮುನ್ನ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಮುರಳಿಧರ್ ಎಂಬುವವರು ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆಗಿದೆ. 39 ವರ್ಷದ ಎಚ್.ಎನ್ ಮುರಳಿಧರ್ ಶುಕ್ರವಾರ ಮಧ್ಯಾಹ್ನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅನಾರೋಗ್ಯದ ನಡುವೆಯೂ ನೋವಿನಲ್ಲೂ ಮತಕೇಂದ್ರಕ್ಕೆ ಬಂದು ಮತವನ್ನು ಚಲಾಯಿಸಿದ್ದಾರೆ.
ಮನಿಪಾಲ್ ಆಸ್ಪತ್ರೆ ವೈಟ್‌ಫೀಲ್ಡ್‌ನ ಯೂರೋಲಾಜಿ, ರೋಬೋಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮುರಳಿಧರ್‌ಗೆ ಮೂತ್ರದ್ವಾರದಲ್ಲಿ 6 MM ಕಲ್ಲಿದೆ. ಹೀಗಾಗಿ ಮಧ್ಯಾಹ್ನ ಡಿಜೆ ಸ್ಟೆಂಟಿಂಗ್ ಸರ್ಜರಿ ಮಾಡಬೇಕಿದೆ. ಸರ್ಜರಿಗೂ ಮುನ್ನ ಖುದ್ದು ಆಂಬ್ಯುಲೆನ್ಸ್ ಮೂಲಕ ಬಂದ ಮುರಳಿಧರ್ ಅವರು ಮತದಾನ ಮಾಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದರೂ, ಡೋಂಟ್ ಕೇರ್ ಮಾಡದ ಮುರಳಿಧರ್ ಶಸ್ತ್ರಚಿಕಿತ್ಸೆಗೂ ಮುನ್ನ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ.
ಇದನ್ನೂ ಓದಿ: Lok Sabha Election 2024: ಮತದಾರರು ಜಸ್ಟ್ ಮಿಸ್; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ
ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.
ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.
ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್ ರೇಟ್ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ