ಬೆಂಗಳೂರು: ಲೋಕಸಭೆ ಚುನಾವಣೆ (Lok sabha Election 2024) ಹಿನ್ನೆಲೆಯಲ್ಲಿ ಶೇ 100ಕ್ಕೆ 100ರಷ್ಟು ಮತದಾನ (Voting) ಆಗಬೇಕೆಂದು, ಚುನಾವಣಾ ಆಯೋಗ ನಾನಾ ಕಸರತ್ತುಗಳನ್ನು ಮಾಡುತ್ತಿದೆ. ಸದ್ಯ ಚುನಾವಣಾ ಆಯೋಗಕ್ಕೆ ಸಾಥ್ ನೀಡಿರುವ ನಂದಿ ಹಿಲ್ಸ್ (Nandi hills) ಮತ್ತು ಬನ್ನೇರುಘಟ್ಟ ಜೈವಿಕ ಉದ್ಯಾನವನ (Bannerghatta National Park) ಆಡಳಿತ ಮಂಡಳಿ ಮತದಾನದ ದಿನದಂದು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿದೆ.
ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ರಾಜಕೀಯ ಪಕ್ಷಗಳಂತೆ ಚುನಾವಣಾ ಆಯೋಗವೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮತದಾನ ನಡೆಯುವ (Voting Day) ಆ ಎರಡು ದಿನವೂ ಸಾರ್ವತ್ರಿಕ ರಜೆಯನ್ನು (Government Holiday) ಘೋಷಿಸಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು (Paid leave) ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ಏಪ್ರಿಲ್ 26 ರಂದು ಅಂದರೆ ನಾಳೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. 2ನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ದಿನಗಳಂದು ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.
ರಜೆ ಸಿಕ್ಕ ಖುಷಿಯಲ್ಲಿ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗದೆ ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ. ಹೀಗಾಗಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಝೂ, ಸಫಾರಿ ಮತ್ತು ಚಿಟ್ಟೆ ಪಾರ್ಕ್ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುವುದಿಲ್ಲ. ಏಪ್ರಿಲ್ 26ರಂದು ಮತದಾನ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ ಘೋಷಿಸಲಾಗಿದೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಜನರು ಸಕ್ರಿಯವಾಗಿ ಭಾಗಿಯಾಗಲೆಂದು ರಜೆ ಘೋಷಣೆ ಮಾಡಲಾಗಿದೆ.
ಮತದಾನದ ಪ್ರಮಾಣ ಹೆಚ್ಚಳ ಮಾಡುವ ದೃಷ್ಟಿಯಿಂದ ಏಪ್ರಿಲ್ 26ರಂದು ಬನ್ನೇರುಘಟ್ಟ ಪಾರ್ಕ್ ರಜೆ ಇರಲಿದೆ. 26 ಬದಲಾಗಿ ಏಪ್ರಿಲ್ 30ರಂದು ಪಾರ್ಕ್ ತೆರೆಯಲಿದೆ. ಬನ್ನೇರುಘಟ್ಟ ಪಾರ್ಕ್ ಪ್ರತಿ ಮಂಗಳವಾರ ರಜೆ ಇರುತ್ತಿತ್ತು. ಆದರೆ 26ರ ರಜೆಯನ್ನು ಸರಿದೂಗಿಸುವ ಸಲುವಾಗಿ ಏಪ್ರಿಲ್ 30ರಂದು ಪ್ರವಾಸಿಗರ ವೀಕ್ಷಣೆಗೆ ಲಭ್ಯ ಇರಲಿದೆ.
ಇದನ್ನೂ ಓದಿ: Voter ID: ವೋಟರ್ ಐಡಿ ಕಾರ್ಡ್ ಸಿಕ್ಕಿಲ್ಲವೆ? ಡೋಂಟ್ ವರಿ. ಈ 12 ದಾಖಲೆಗಳಲ್ಲಿ ಒಂದಿದ್ದರೆ ಸಾಕು!
ಏ.25ರ ಸಂಜೆಯಿಂದಲೇ ನಂದಿ ಬೆಟ್ಟ ಕ್ಲೋಸ್
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು (ಏ.25) ಸಂಜೆ ಐದು ಗಂಟೆಯಿಂದ ನಂದಿ ಬೆಟ್ಟಕ್ಕೆ ನಿಷೇಧ ಹೇರಲಾಗಿದೆ. ನಂದಿಗಿರಿಧಾಮ ನಿಷೇಧ ಏರಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.
ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 7 ಗಂಟೆವರೆಗೂ ನಂದಿ ಹಿಲ್ಸ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧವಿದೆ. ಮತದಾನಕ್ಕೆಂದು ರಜೆ ಜತೆಗೆ ವೀಕೆಂಡ್ ಇರುವುದರಿಂದ ಮತದಾನ ಬಿಟ್ಟು ನಂದಿ ಹಿಲ್ಸ್‌ಗೆ ಮೋಜು ಮಸ್ತಿ ಮಾಡಲು ಪ್ರವಾಸಿಗರ ದಂಡು ಬರುತ್ತದೆ. ಇದನ್ನೂ ತಪ್ಪಿಸಲು ವಿಶ್ವವಿಖ್ಯಾತ ನಂದಿಗಿರಿಧಾಮದ ಪ್ರವೇಶ ಬಂದ್ ಮಾಡಲಾಗುತ್ತಿದೆ.
ಏಪ್ರಿಲ್ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ
1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)
2.ಹಾಸನ (ಸಾಮಾನ್ಯ)
3.ದಕ್ಷಿಣ ಕನ್ನಡ (ಸಾಮಾನ್ಯ)
4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)
5. ತುಮಕೂರು (ಸಾಮಾನ್ಯ)
6.ಮಂಡ್ಯ (ಸಾಮಾನ್ಯ)
7.ಮೈಸೂರು-ಕೊಡಗು (ಸಾಮಾನ್ಯ)
8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)
9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)
10 ಬೆಂಗಳೂರು ಉತ್ತರ (ಸಾಮಾನ್ಯ)
11. ಬೆಂಗಳೂರು ಕೇಂದ್ರ (ಸಾಮಾನ್ಯ)
12. ಬೆಂಗಳೂರು ದಕ್ಷಿಣ (ಸಾಮಾನ್ಯ)
13.ಚಿಕ್ಕಬಳ್ಳಾಪುರ (ಸಾಮಾನ್ಯ)
14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)
ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ
1.ಚಿಕ್ಕೋಡಿ (ಸಾಮಾನ್ಯ)
2.ಬೆಳಗಾವಿ (ಸಾಮಾನ್ಯ)
3.ಬಾಗಲಕೋಟೆ (ಸಾಮಾನ್ಯ)
4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)
5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)
6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)
7.ಬೀದರ್ (ಸಾಮಾನ್ಯ)
8.ಕೊಪ್ಪಳ (ಸಾಮಾನ್ಯ)
9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)
10. ಹಾವೇರಿ (ಸಾಮಾನ್ಯ)
11. ಧಾರವಾಡ (ಸಾಮಾನ್ಯ)
12.ಉತ್ತರ ಕನ್ನಡ (ಸಾಮಾನ್ಯ)
13.ದಾವಣಗೆರೆ (ಸಾಮಾನ್ಯ)
14.ಶಿವಮೊಗ್ಗ (ಸಾಮಾನ್ಯ)
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ