Site icon Vistara News

Lok Sabha Election 2024: ಐವರು ಕಾಂಗ್ರೆಸ್‌ ಕಾರ್ಯಾಧ್ಯಕ್ಷರ ನೇಮಕ; ಯಾರು ಔಟ್?‌ ಯಾರು ಇನ್?

Appointment of Congress Working President Tanveer sait Manjunath Bhandary Vinay Kulakarni and GC Chandrashekhar

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಭಾರಿ ತಂತ್ರಗಾರಿಕೆಯಲ್ಲಿ ತೊಡಗಿರುವ ಕಾಂಗ್ರೆಸ್‌ (Congress Karnataka) ಈಗ ಪಕ್ಷದೊಳಗೆ ಮೇಜರ್‌ ಸರ್ಜರಿ ಮಾಡಿದೆ. ಕೊನೆಗೂ ಕೆಪಿಸಿಸಿ ಕಾರ್ಯಾಧ್ಯಕ್ಷರ ಬದಲಾವಣೆಯನ್ನು ಮಾಡಿದೆ. ಐವರು ನೂತನ ಕಾರ್ಯಾಧ್ಯಕ್ಷರ ನೇಮಕ (Congress Working President) ಮಾಡಿರುವ ಕಾಂಗ್ರೆಸ್‌, ಸಮುದಾಯವಾರು ಪ್ರಾತಿನಿಧ್ಯ ನೀಡಿದೆ. ಮುಸ್ಲಿಂ, ಒಕ್ಕಲಿಗ, ವೀರಶೈವ ಲಿಂಗಾಯತ, ಬಂಟ್ಸ್‌ ಹಾಗೂ ದಲಿತ ಬಲಗೈ ಸಮುದಾಯದ ನಾಯಕರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಶಾಸಕ ತನ್ವೀರ್ ಸೇಠ್, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಶಾಸಕ ವಿನಯ್ ಕುಲಕರ್ಣಿ, ಮುಖಂಡರಾದ ಮಂಜುನಾಥ ಭಂಡಾರಿ ಹಾಗೂ ವಸಂತ ಕುಮಾರ್ ಅವರನ್ನು ನೂತನ ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಇದನ್ನೂ ಓದಿ: Lok Sabha Election 2024: ಕೋಲಾರ ಟಿಕೆಟ್‌ ಮಿಸ್‌; ಸಿಟ್ಟೆದ್ದು ದೆಹಲಿಗೆ ದೌಡಾಯಿಸಿದ ಮುನಿಸ್ವಾಮಿ!

ಸಂಘಟನಾತ್ಮಕ ಬದಲಾವಣೆ

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂಘಟನಾತ್ಮಕ ಬದಲಾವಣೆ ಮಾಡಲು ಕಾಂಗ್ರೆಸ್‌ ಈ ತಂತ್ರವನ್ನು ಮಾಡಿದೆ. ಹೀಗಾಗಿ ಸಮುದಾಯವಾರು ಪ್ರಾತಿನಿಧ್ಯವನ್ನು ನೀಡಲಾಗಿದೆ. ಜತೆಗೆ ಸಚಿವ ಸ್ಥಾನದಿಂದ ವಂಚಿತರಾದವರು ಹಾಗೂ ಲೋಕಸಭೆ ಟಿಕೆಟ್‌ ಮಿಸ್‌ ಆದವರಿಗೆ ಸ್ಥಾನ ಕಲ್ಪಿಸಲಾಗಿದೆ. ಆ ಮೂಲಕ ಸಮಾಧಾನ ಪಡಿಸುವ ಯತ್ನವೂ ನಡೆದಿದೆ.

ಯಾವ ನಾಯಕರು ಯಾವ ಸಮುದಾಯದವರು?

ವಸಂತ್‌ ಕುಮಾರ್

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರ ನೇಮಕ

ಇನ್ನು ಇದೇ ವೇಳೆ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನು ಸಹ ನೇಮಿಸಿ ಆದೇಶವನ್ನು ಹೊರಡಿಸಲಾಗಿದೆ. ಅಧ್ಯಕ್ಷರನ್ನಾಗಿ ವಿನಯ್ ಕುಮಾರ್ ಸೊರಕೆ ಅವರನ್ನು ಆಯ್ಕೆ ಮಾಡಲಾಗಿದ್ದರೆ, ಸಹ ಅಧ್ಯಕ್ಷರಾಗಿ ಎಲ್. ಹನುಮಂತಯ್ಯ ಹಾಗೂ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ಅವರನ್ನು ನೇಮಿಸಿ ಆದೇಶವನ್ನು ಹೊರಡಿಸಲಾಗಿದೆ.

ಇವರೇ ನಿರ್ಗಮಿತ ಕಾರ್ಯಾಧ್ಯಕ್ಷರು

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ನಲ್ಲೀಗ ‘ಕೋ ಆಪರೇಷನ್’ ಪಾಲಿಟಿಕ್ಸ್‌! ಇದು ಡಿಕೆಶಿ ಮಾಸ್ಟರ್‌ ಸ್ಟ್ರೋಕ್

ಇವರು ಈ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರು. ಇವರಲ್ಲಿ ಸತೀಶ್‌ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ ಅವರು ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಬೇಕು. ಉಳಿಕೆ ನಾಯಕರಿಗೆ, ಪಕ್ಷದ ನಿಷ್ಠಾವಂತರಿಗೆ ಮಣೆ ಹಾಕಬೇಕು ಎಂಬ ಕೂಗು ಕೇಳಿ ಬಂದಿತ್ತು. ಕಳೆದ ಎರಡು ತಿಂಗಳ ಹಿಂದೆಯೇ ಈ ಬಗ್ಗೆ ನಿರ್ಣಯ ಮಾಡಲಾಗಿತ್ತು ಎನ್ನಲಾಗಿದ್ದು, ಶನಿವಾರ (ಮಾ. 23) ಅಧಿಕೃತ ಆದೇಶ ಹೊರಬಿದ್ದಿದೆ.

Exit mobile version