Site icon Vistara News

Lok Sabha Election 2024: ಏಪ್ರಿಲ್‌ 26ರಂದು ಬೆಂಗಳೂರಲ್ಲಿ ಐಟಿ ಕಂಪನಿಗಳಿಗೆ ಕಡ್ಡಾಯ ರಜೆ; ತುಷಾರ್ ಗಿರಿನಾಥ್ ಆದೇಶ

Lok Sabha Election

Lok Sabha Election 2024: First Phase Of Voting Tomorrow; Preparations On Full Swing

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಖಾಡಕ್ಕಿಳಿದಿವೆ. ಎಲ್ಲ ಕಡೆಯೂ ಮತ ಬೇಟೆ ಭರದಿಂದ ಸಾಗಿದೆ. ಇನ್ನು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದೆ. ಈ ದಿನ (Voting Day) ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಇನ್ನು ಐಟಿ – ಬಿಟಿ (IT BT Sector) ಮಂದಿ ಮತದಾನದ ವೇಳೆ ಹಿಂದೇಟು ಹಾಕಬಾರದು. ಎಲ್ಲರೂ ಮತ ಚಲಾವಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಅಂದು ಕಡ್ಡಾಯವಾಗಿ ರಜೆ ನೀಡಬೇಕು ಎಂದು ಬಿಬಿಎಂಪಿ ಆಯುಕ್ತ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ (Tushar Girinath) ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ಮತದಾನದ ದಿನದಂದು ಸಂಬಳ ಸಹಿತ ರಜೆ ನೀಡಲು ಐಟಿ ಕಂಪನಿಗಳು ಸಹ ಒಪ್ಪಿಗೆ ನೀಡಿವೆ.

ಮತದಾನ ಸಂಬಂಧ ಐಟಿಬಿಟಿ ಕಂಪನಿಗಳಿಗೆ ಬಿಬಿಎಂಪಿಯಿಂದ ಆದೇಶವನ್ನು ರವಾನೆ ಮಾಡಲಾಗಿದೆ. ಮತದಾನದ ದಿನ ಕಂಪನಿಗಳು ಕಡ್ಡಾಯವಾಗಿ ರಜೆ ನೀಡಬೇಕು. ಸಿಬ್ಬಂದಿ ಮತದಾನ ಮಾಡುವ ಸಂಬಂಧ ರಜೆಯನ್ನು ಕೊಡಬೇಕು. ಈಗಾಗಲೇ ರಾಜ್ಯ ಸರ್ಕಾರ ಕೂಡ ರಜೆಯನ್ನು ಘೋಷಣೆ ಮಾಡಿದೆ. ಅಲ್ಲದೆ, ಈ ಸಂಬಂಧ ಬಿಬಿಎಂಪಿಯಿಂದ ಔಟರ್ ರಿಂಗ್‌ರೋಡ್ ಅಸೋಸಿಯೇಷನ್‌ಗೆ ಪತ್ರವೂ ರವಾನೆಯಾಗಿದೆ.

ಇನ್ನು ಮತದಾನ ಹೆಚ್ಚಳ ಸಂಬಂಧ ಐಟಿ ಬಿಟಿ ಕಂಪನಿಗಳ ಜತೆಗೆ ಬಿಬಿಎಂಪಿ ಇಂದು (ಮಂಗಳವಾರ) ಸಭೆ ನಡೆಸಲಾಗಿದೆ. ಸಭೆ ಮಾಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಅಲ್ಲದೆ, ತಮ್ಮ ತಮ್ಮ ನೌಕರರು ತಪ್ಪದೇ ಮತದಾನ ಮಾಡಲು ಯಾವ ರೀತಿ ಪ್ರೋತ್ಸಾಹವನ್ನು ನೀಡಬಹುದು ಎಂಬ ಬಗ್ಗೆಯೂ ಚರ್ಚೆಗಳು ನಡೆಯಿತು.

ಒಪ್ಪಿದ ಐಟಿ ಬಿಟಿ ಕಂಪನಿಗಳು

ಮತದಾನದ ದಿನದಂದು ಸಂಬಳ ಸಹಿತ ರಜೆ ನೀಡಲು ಐಟಿ ಕಂಪನಿಗಳು ಸಹ ಒಪ್ಪಿಗೆ ನೀಡಿವೆ. ಬಿಬಿಎಂಪಿ ಜತೆ ನಡೆದ ಸಭೆಯಲ್ಲಿ ಪೇಡ್ ಲೀವ್‌ಗೆ ಒಪ್ಪಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 5 ಸಾವಿರಕ್ಕೂ ಅಧಿಕ ಐಟಿ ಬಿಟಿ ಕಂಪನಿಗಳು ಬಿಬಿಎಂಪಿ ಮನವಿಗೆ ಸ್ಪಂದಿಸಿವೆ.

ಕರ್ನಾಟಕದಲ್ಲಿ ಮತದಾನ ನಡೆಯುವ 2 ದಿನವೂ ಸಾರ್ವತ್ರಿಕ ರಜೆ ಘೋಷಣೆ

ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮತದಾನ ನಡೆಯುವ (Voting Day) ಆ ಎರಡು ದಿನವೂ ಸಾರ್ವತ್ರಿಕ ರಜೆಯನ್ನು (Government Holiday) ಘೋಷಿಸಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು (Paid leave) ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಈಗಾಗಲೇ ಆದೇಶಿಸಿದ್ದಾರೆ.

ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆದರೆ, 2ನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ದಿನಗಳಂದು ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದರು.

ದೇಶದಲ್ಲಿ ಏಳು ಹಂತದಲ್ಲಿ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್‌ 19ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಎರಡು ಮತ್ತು ಮೂರನೇ ಹಂತದಲ್ಲಿ ತಲಾ 14 ಜಿಲ್ಲೆಗಳಂತೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್‌ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ

1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)

2.ಹಾಸನ (ಸಾಮಾನ್ಯ)

3.ದಕ್ಷಿಣ ಕನ್ನಡ (ಸಾಮಾನ್ಯ)

4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)

5..ತುಮಕೂರು (ಸಾಮಾನ್ಯ)

6.ಮಂಡ್ಯ (ಸಾಮಾನ್ಯ)

7.ಮೈಸೂರು-ಕೊಡಗು (ಸಾಮಾನ್ಯ)

8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)

9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)

10 ಬೆಂಗಳೂರು ಉತ್ತರ (ಸಾಮಾನ್ಯ)

11. ಬೆಂಗಳೂರು ಕೇಂದ್ರ (ಸಾಮಾನ್ಯ)

12. ಬೆಂಗಳೂರು ದಕ್ಷಿಣ (ಸಾಮಾನ್ಯ)

13.ಚಿಕ್ಕಬಳ್ಳಾಪುರ (ಸಾಮಾನ್ಯ)

14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)\

Lok Sabha Election 2024 Karnataka declares 2 day general holiday

ಎರಡನೇ ಹಂತದ ಮತದಾನದ ವಿವರ ಹೀಗಿದೆ

ಚುನಾವಣೆ ಘೋಷಣೆ: ಮಾರ್ಚ್‌ 16

ಗಜೆಟ್‌ ನೋಟಿಫಿಕೇಶನ್‌: ಮಾರ್ಚ್‌ 28

ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ: ಏಪ್ರಿಲ್‌ 04

ನಾಮಪತ್ರ ಪರಿಶೀಲನೆ: ಏಪ್ರಿಲ್‌ 05

ನಾಮಪತ್ರ ಹಿಂದೆಗೆತಕ್ಕೆ ಕೊನೆ ದಿನ: ಏಪ್ರಿಲ್‌ 08

ಮತದಾನದ ದಿನಾಂಕ: ಏಪ್ರಿಲ್‌ 26, ಶುಕ್ರವಾರ

ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ

1.ಚಿಕ್ಕೋಡಿ (ಸಾಮಾನ್ಯ)

2.ಬೆಳಗಾವಿ (ಸಾಮಾನ್ಯ)

3.ಬಾಗಲಕೋಟೆ (ಸಾಮಾನ್ಯ)

4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)

5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)

6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)

7.ಬೀದರ್ (ಸಾಮಾನ್ಯ)

8,ಕೊಪ್ಪಳ (ಸಾಮಾನ್ಯ)

9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)

10. ಹಾವೇರಿ (ಸಾಮಾನ್ಯ)

11. ಧಾರವಾಡ (ಸಾಮಾನ್ಯ)

12.ಉತ್ತರ ಕನ್ನಡ (ಸಾಮಾನ್ಯ)

13.ದಾವಣಗೆರೆ (ಸಾಮಾನ್ಯ)

14.ಶಿವಮೊಗ್ಗ (ಸಾಮಾನ್ಯ)

ಎರಡನೇ ಹಂತದ ಮತದಾನದ ವಿವರ ಹೀಗಿದೆ

ಚುನಾವಣೆ ಘೋಷಣೆ: ಮಾರ್ಚ್‌ 16

ಗಜೆಟ್‌ ನೋಟಿಫಿಕೇಶನ್‌: ಏಪ್ರಿಲ್‌ 12

ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕ: ಏಪ್ರಿಲ್‌ 19

ನಾಮಪತ್ರ ಪರಿಶೀಲನೆ: ಏಪ್ರಿಲ್‌ 20

ನಾಮಪತ್ರ ಹಿಂದೆಗೆತಕ್ಕೆ ಕೊನೆ ದಿನ: ಏಪ್ರಿಲ್‌ 22

ಮತದಾನದ ದಿನಾಂಕ: ಮೇ 07, ಮಂಗಳವಾರ

ಇದನ್ನೂ ಓದಿ: Lok Sabha Election 2024: ಡಿಕೆಶಿ – ಎಚ್‌ಡಿಕೆ ವೈಯಕ್ತಿಕ ಕಾದಾಟಕ್ಕೆ ಇದೇ ಕಾರಣ! ಏನಿದು ಇನ್‌ಸೈಡ್‌ ಕಹಾನಿ?

ಈಗ ರಾಜ್ಯದ ರಾಜಕೀಯ ಸ್ಥಿತಿ ಗತಿ ಹೇಗಿದೆ?

ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಎಲ್ಲ ಕಡೆ ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ಪ್ರಬಲ ಪೈಪೋಟಿ ಇದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆದ್ದಿದ್ದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಲಾ ಒಂದು ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆದಿದ್ದರು.

ಈ ಬಾರಿ ಬಿಜೆಪಿ ಮತ್ತು ಜೆಡಿಎಸ್‌ ಗಳು ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದು 28 ಕ್ಷೇತ್ರಗಳನ್ನು ಹಂಚಿಕೊಂಡಿವೆ. ಬಿಜೆಪಿ 25 ಮತ್ತು ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಹೇಳಲಾಗಿದೆ. (ಇನ್ನೂ ಅಂತಿಮವಾಗಿಲ್ಲ.) ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ಹೋರಾಟ ನಡೆಯಲಿದೆ.

Exit mobile version