Lok Sabha Election 2024: ಡಿ.ಕೆ. ಸುರೇಶ್‌ ಆಪ್ತರ ಮನೆ ಮೇಲೆ ಐಟಿ ರೇಡ್;‌ ಕಾಂಗ್ರೆಸ್‌ ಪ್ರತಿಭಟನೆ, ವಾಗ್ವಾದ - Vistara News

Lok Sabha Election 2024

Lok Sabha Election 2024: ಡಿ.ಕೆ. ಸುರೇಶ್‌ ಆಪ್ತರ ಮನೆ ಮೇಲೆ ಐಟಿ ರೇಡ್;‌ ಕಾಂಗ್ರೆಸ್‌ ಪ್ರತಿಭಟನೆ, ವಾಗ್ವಾದ

Lok Sabha Election 2024: ಕೋಣನಕುಂಟೆ, ಅಂಜಾನಪುರ ಹಾಗೂ ಅವಲಹಳ್ಳಿ ಭಾಗದಲ್ಲಿ ಐಟಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಗಂಗಾಧರ್‌ ಮಾತ್ರವಲ್ಲದೆ ಇನ್ನೂ ಹಲವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರೆಲ್ಲರೂ ಡಿ.ಕೆ. ಸುರೇಶ್​ ಆಪ್ತರು ಎಂದು ತಿಳಿದುಬಂದಿದೆ. ಗೊಟ್ಟಿಗೆರೆ ಬ್ಲ್ಯಾಕ್ ಕಾಂಗ್ರೆಸ್ ‌ಅಧ್ಯಕ್ಷ ಶ್ರೀಧರ್, ಡಿ.ಕೆ. ಸುರೇಶ್ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಸೇರಿ ಮತ್ತಿತರರ ಮನೆಗಳ ಮೇಲೆ ಐಟಿ ರೇಡ್‌ ನಡೆದಿದೆ.

VISTARANEWS.COM


on

Lok Sabha Election 2024 DK Shivakumar IT raids on Suresh close aides and Congress protests
ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆ ಮುಂದೆ ಜಮಾಯಿಸಿರುವ ಕಾಂಗ್ರೆಸ್ ಕಾರ್ಯಕರ್ತರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಐಟಿ ದಾಳಿಗಳು ಮುಂದುವರಿದಿವೆ. ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣದ ವಹಿವಾಟು ನಡೆಯುವ ಹಿನ್ನೆಲೆಯಲ್ಲಿ ಪೊಲೀಸರ ಸಹಿತ ಚುನಾವಣಾ ಆಯೋಗವು ಹದ್ದಿನ ಕಣ್ಣಿಟ್ಟಿದೆ. ಇನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ (ಏಪ್ರಿಲ್‌ 24) ಮುಂಜಾನೆ ಸಂಸದ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್​ (DK Suresh) ಆಪ್ತ, ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ​ ಮನೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ದಾಳಿ (IT Raid) ಮಾಡಿದ್ದಾರೆ.

ಮುಂಜಾನೆ 4 ಗಂಟೆ ವೇಳೆಗೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಗಂಗಾಧರ್‌ ಅವರ ಮನೆಯಲ್ಲಿ ಕೆಲವು ಗಂಟೆಗಳ ಕಾಲ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆದರೆ, ಯಾವೆಲ್ಲ ದಾಖಲೆಗಳು ಲಭ್ಯವಾಗಿವೆ? ಹಣ ಸಿಕ್ಕಿವೆಯಾ? ಮುಂದಿನ ಕ್ರಮ ಏನು ಎಂಬ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿ ಸರ್ವೆ; ಹೆಚ್ಚಿದ್ದರೆ ವಶಕ್ಕೆ;‌ ಕೇಂದ್ರ ಸಚಿವರ ಎಚ್ಚರಿಕೆ

ಯಾರ ಯಾರ ಮನೆ ಮೇಲೆ‌ ಐಟಿ ರೇಡ್

ಕೋಣನಕುಂಟೆ, ಅಂಜಾನಪುರ ಹಾಗೂ ಅವಲಹಳ್ಳಿ ಭಾಗದಲ್ಲಿ ಐಟಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಗಂಗಾಧರ್‌ ಮಾತ್ರವಲ್ಲದೆ ಇನ್ನೂ ಹಲವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರೆಲ್ಲರೂ ಡಿ.ಕೆ. ಸುರೇಶ್​ ಆಪ್ತರು ಎಂದು ತಿಳಿದುಬಂದಿದೆ. ಗೊಟ್ಟಿಗೆರೆ ಬ್ಲ್ಯಾಕ್ ಕಾಂಗ್ರೆಸ್ ‌ಅಧ್ಯಕ್ಷ ಶ್ರೀಧರ್, ಡಿ.ಕೆ. ಸುರೇಶ್ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಸೇರಿ ಮತ್ತಿತರರ ಮನೆಗಳ ಮೇಲೆ ಐಟಿ ರೇಡ್‌ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಕಾಂಗ್ರೆಸ್ ಮುಖಂಡ, ಡಿ.ಕೆ. ಸುರೇಶ್ ಅವರ ಆಪ್ತರಾದ ಗಂಗಾಧರ್ ಹಾಗೂ ಇತರರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಇದು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಟ್ಟಿಹಾಕುವ ಪ್ರಯತ್ನ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೋಣನಕುಂಟೆ ಬ್ಲಾಕ್‌ನಲ್ಲಿರುವ ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಧರಣಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತಿದ್ದೇವೆ. ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮನೆ ಮೇಲೆ ಐಟಿ ದಾಳಿಗಳು ನಡೆಯುತ್ತಿವೆ. ಗಂಗಾಧರ್ ಅವರು ಹಣಕಾಸಿನ ವಿಚಾರದಲ್ಲಿ ಅನುಕೂಲಸ್ಥರು. ಸಾಕಷ್ಟು ಜಮೀನು ಇದೆ. ಬೇರೆ ಪಕ್ಷದಲ್ಲಿ ಇವರಿಗಂತೆ ಶ್ರೀಮಂತರು ಇದ್ದಾರೆ. ಅವರ ಮನೆಗಳ ಮೇಲೆ ದಾಳಿಯಾಗಿಲ್ಲ. ಕೇವಲ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಯುತ್ತಿದೆ. ಡಿ.ಕೆ ಸುರೇಶ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಆಪ್ತರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಕಿಡಿಕಾರಿದ್ದಾರೆ.

ಇದನ್ನೂ ಓದಿ: Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

ಗಂಗಾಧರ್ ಅವರ ಜತೆಗೆ ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಸುರೇಶ್ ಅವರ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಸೇರಿದಂತೆ ಹಲವರ ಮನೆ ಮೇಲೆ ದಾಳಿ ಮಾಡಲಾಗಿದೆ. ಇದು ಉದ್ದೇಶಪೂರ್ವಕ ದಾಳಿ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

ಕಳೆದ 3 ದಿನಗಳಿಂದ 16 ಕಡೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದಾರೆ. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿವೆ. ಒಟ್ಟಾರೆ 21.15 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳಲಾಗಿದೆ.

ಉದ್ಯಮಿಗಳು, ಚಿನ್ನಾಭರಣ ಮಳಿಗೆ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹದಿನಾರು ಕಡೆ ಸೇರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಗಳು ಇಲ್ಲದ ಚಿನ್ನಾಭರಣಗಳು ಪತ್ತೆಯಾಗಿವೆ.

2 ದಿನಗಳಲ್ಲಿ 16 ಕಡೆ ದಾಳಿ; ಸಿಕ್ಕ ಚಿನ್ನ, ನಗದು ಎಷ್ಟು?

1) 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆ
– ಶಂಕರಪುರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

2) 3 ಕೋಟಿ 39 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ 800 ಗ್ರಾಂ ಚಿನ್ನ ಪತ್ತೆ
ಶಾರದಾದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

3) 2 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 400 ಗ್ರಾಂ ಪತ್ತೆ
ಮರ್ಕೈಂಟಲ್ ಬ್ಯಾಂಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

4) 5 ಕೋಟಿ 33 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ 598 ಗ್ರಾಂ ಚಿನ್ನ ಪತ್ತೆ
ಜಯನಗರ 3ನೇ ಬ್ಲಾಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

5) 84 ಲಕ್ಷ ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆ
ಸಾರಸ್ವತ ಬ್ಯಾಂಕ್, ಚಾಮರಾಜಪೇಟೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

6) 3 ಲಕ್ಷ 34 ಸಾವಿರ ರೂಪಾಯಿ ಮೌಲ್ಯದ 6.38 ಕ್ಯಾರೆಟ್ ವಜ್ರ ಪತ್ತೆ
ಅಂಚೆ ಕಚೇರಿ ಬಳಿ, ಬಸವನಗುಡಿ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

7) 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ ಪತ್ತೆ
ಮಾತಾ ಶಾರದಾ ದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

8) 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆ
ಜಯನಗರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

ಇದನ್ನೂ ಓದಿ: VVPAT Verification: ಇವಿಯಂ-ವಿವಿಪ್ಯಾಟ್‌ ತಾಳೆ ಪ್ರಕರಣ; ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸೇರಿದಂತೆ ಹಲವು ಕಡೆ ದಾಳಿ ನಡೆದಿದ್ದು, ಈ ಕ್ಷೇತ್ರವೊಂದರಲ್ಲೇ ಸರಿ ಸುಮಾರು 21.15 ಕೋಟಿ ರೂಪಾಯಿಯಷ್ಟು ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಎಷ್ಟು ನಗದು ಪತ್ತೆಯಾಗಿದೆ ಎಂಬ ಬಗ್ಗೆ ಇನ್ನೂ ಐಟಿ ಅಧಿಕಾರಿಗಳು ಮಾಹಿತಿಯನ್ನು ಹಂಚಿಕೊಂಡಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

Narendra Modi: Narendra Modi: ರಾಮಲಲ್ಲಾ ದರ್ಶನ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ಕೈಗೊಳ್ಳುತ್ತಿದ್ದಾರೆ. ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಮೋದಿ ರೋಡ್‌ ಶೋ ಕೈಗೊಂಡರು. ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಲ್ಲೆಡೆ ಜೈಶ್ರೀರಾಮ್‌ ಎಂಬ ಘೋಷಣೆಗಳು ಮೊಳಗಿದವು.

VISTARANEWS.COM


on

Narendra Modi
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಕಳೆದ ಜನವರಿ 22ರಂದು ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ನರೇಂದ್ರ ಮೋದಿ ಅವರೀಗ ಮತ್ತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದೇ ವೇಳೆ ಅವರು ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸುವ ಜತೆಗೆ ದೀರ್ಘದಂಡ ನಮಸ್ಕಾರ ಹಾಕಿದರು.

ಕಳೆದ ಜನವರಿ 22ರಂದು ನರೇಂದ್ರ ಮೋದಿ ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ಮಾಡಿದ ಬಳಿಕ ಮಾಡಿದ ಬಳಿಕ ರಾಮಮಂದಿರಕ್ಕೆ ಮೊದಲ ಬಾರಿ ಭೇಟಿ ನೀಡಿದರು.

ರಾಮನಗರಿ ಅಯೋಧ್ಯೆಯಲ್ಲಿ ಭರ್ಜರಿ ರೋಡ್‌ ಶೋ ಕೈಗೊಳ್ಳುವ ಮೊದಲು ಮೋದಿ ಅವರು ರಾಮಲಲ್ಲಾನಿಗೆ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಮಮಂದಿರದ ಸುತ್ತ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಅಯೋಧ್ಯೆ ಭೇಟಿ ನೀಡುವ ಮೊದಲು ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ದೌರಾಹ್ರ ಲೋಕಸಭೆ ಕ್ಷೇತ್ರದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡರು.

ರಾಮಲಲ್ಲಾ ದರ್ಶನದ ಬಳಿಕ ಮೋದಿ ಅವರು ಅಯೋಧ್ಯೆಯಲ್ಲಿ ಸುಮಾರು ಎರಡು ಕಿಲೋಮೀಟರ್‌ವರೆಗೆ ರೋಡ್‌ ಶೋ ನಡೆಸಿದರು. ಮಾರ್ಗದುದ್ದಕ್ಕೂ ನೆರೆದಿದ್ದ ಜನ ಹೂಮಳೆ ಸುರಿಸಿ ಅಭಿಮಾನ ಮೆರೆದರು.

ರೋಡ್‌ ಶೋಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಕೂಡ ಸಾಥ್‌ ನೀಡಿದ್ದಾರೆ. ಇನ್ನು, ರೋಡ್‌ ಶೋ ಉದ್ದಕ್ಕೂ ಜನ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Continue Reading

ದೇಶ

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Narendra Modi: ಉತ್ತರ ಪ್ರದೇಶದ ದೌರಾಹ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರ‍್ಯಾಲಿ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, “ದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಜನರಿಗೆ ತಲುಪುತ್ತಿವೆ. ಮುಸ್ಲಿಂ ಸಹೋದರ-ಸಹೋದರಿಯರು ಕೂಡ ನೋಡುತ್ತಿದ್ದಾರೆ. ಪಿಎಂ ಆವಾಸ್‌ ಯೋಜನೆ, ಉಜ್ವಲ ಯೋಜನೆ ಸೇರಿ ಎಲ್ಲ ಯೋಜನೆಗಳ ಸೌಲಭ್ಯಗಳು ಮುಸ್ಲಿಮರಿಗೂ ತಲುಪುತ್ತಿವೆ” ಎಂದು ತಿಳಿಸಿದರು.

VISTARANEWS.COM


on

Narendra Modi
Koo

ಲಖನೌ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಮೇ 5) ಉತ್ತರ ಪ್ರದೇಶದಲ್ಲಿ (Uttar Pradesh) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ದೌರಾಹ್ರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಅದರಲ್ಲೂ, “ಮುಸ್ಲಿಮರು ಈಗ ಮತಬ್ಯಾಂಕ್‌ನ ಗುತ್ತಿಗೆದಾರರಿಂದ ಪ್ರತ್ಯೇಕವಾಗಿದ್ದಾರೆ. ಅವರು ಅಭಿವೃದ್ಧಿಯ ಪರವಾಗಿದ್ದಾರೆ” ಎಂದು ಕಾಂಗ್ರೆಸ್‌ಗೆ ಮೋದಿ ಟಾಂಗ್‌ ಕೊಟ್ಟರು.

“ದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಜನರಿಗೆ ತಲುಪುತ್ತಿವೆ. ಮುಸ್ಲಿಂ ಸಹೋದರ-ಸಹೋದರಿಯರು ಕೂಡ ನೋಡುತ್ತಿದ್ದಾರೆ. ಪಿಎಂ ಆವಾಸ್‌ ಯೋಜನೆ, ಉಜ್ವಲ ಯೋಜನೆ ಸೇರಿ ಎಲ್ಲ ಯೋಜನೆಗಳ ಸೌಲಭ್ಯಗಳು ಮುಸ್ಲಿಮರಿಗೂ ತಲುಪುತ್ತಿವೆ. ಯಾವುದೇ ಭೇದ-ಭಾವ ಇಲ್ಲದೆ, ಪ್ರತಿಯೊಬ್ಬರಿಗೂ ಯೋಜನೆಗಳು ತಲುಪುತ್ತವೆ. ಹಾಗಾಗಿ, ಮುಸ್ಲಿಮರು ಕೂಡ ಮತಬ್ಯಾಂಕ್‌ನ ಗುತ್ತಿಗೆದಾರರ ಸಹವಾಸ ಬಿಟ್ಟಿದ್ದಾರೆ” ಎಂದು ಹೇಳಿದರು.

“ಮುಸ್ಲಿಮರನ್ನು ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮತಬ್ಯಾಂಕ್‌ಗಾಗಿ ಬಳಸಿಕೊಂಡವು. ಆದರೆ, ಈಗ ಮುಸ್ಲಿಮರು ಅಂತ ತುಷ್ಟೀಕರಣದ ಕುತಂತ್ರದಿಂದ ಹೊರಬಂದಿದ್ದಾರೆ. ಆದರೆ, ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮಾತ್ರ ಈಗಲೂ ಓಲೈಕೆಯಲ್ಲಿಯೇ ತೊಡಗಿವೆ. ಮುಸ್ಲಿಮರನ್ನು ಮತ ಬ್ಯಾಂಕ್‌ಗಾಗಿಯೇ ಬಳಸಿಕೊಳ್ಳಲು ಯತ್ನಿಸುತ್ತಿವೆ. ಇದೇ ಕಾರಣಕ್ಕಾಗಿಯೇ, ಮುಸ್ಲಿಂ ಲೀಗ್‌ನ ಪ್ರತಿರೂಪದಂತಿರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ” ಎಂಬುದಾಗಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

“2014ಕ್ಕಿಂತ ಮೊದಲು ದೇಶದಲ್ಲಿ ತುಷ್ಟೀಕರಣದ ಆಡಳಿತ ನಡೆಯುತ್ತಿತ್ತು. ಉಗ್ರವಾದದ ವಿರುದ್ಧ ಕ್ರಮ ತೆಗೆದುಕೊಳ್ಳಲು ತನಿಖಾ ಸಂಸ್ಥೆಗಳಿಗೆ ಅಧಿಕಾರವೇ ಇರಲಿಲ್ಲ. ಇನ್ನು, ಸಮಾಜವಾದಿ ಪಕ್ಷವಂತೂ ಉಗ್ರರ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆಯುತ್ತಿತ್ತು. ಆದರೀಗ ಉಗ್ರರನ್ನು ಹೆಡೆಮುರಿ ಕಟ್ಟಲಾಗುತ್ತಿದೆ. ನನಗೆ ಕುಟುಂಬ ಇಲ್ಲ. ಆದರೆ, ದೇಶದ ಜನರೇ ನನ್ನ ಕುಟುಂಬ. ಜನರ ಏಳಿಗೆಗಾಗಿ, ವಿಕಸಿತ ಭಾರತದ ನಿರ್ಮಾಣಕ್ಕಾಗಿ ನಾನು ನಿರಂತರವಾಗಿ ಶ್ರಮಿಸುತ್ತೇನೆ” ಎಂದರು.

ಇದನ್ನೂ ಓದಿ: Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Continue Reading

Lok Sabha Election 2024

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Lok Sabha Election 2024: ಬಿಜೆಪಿ ಜಾತಿ – ಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು, ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

VISTARANEWS.COM


on

Lok Sabha Election 2024 Narendra Modi cant become PM again says CM Siddaramaiah
Koo

ಹರಿಹರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರೋಧಿ ಅಲೆ ಜೋರಾಗಿದೆ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಆ ಪಕ್ಷದ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತಯಾಚಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯ 25 ಸಂಸದರು ರಾಜ್ಯಕ್ಕಾಗಿರುವ ಅನ್ಯಾಯವನ್ನು ಎಂದೂ ಪ್ರಶ್ನಿಸಲಿಲ್ಲ. ಅವರಲ್ಲಿ ಹಲವರನ್ನು ಈ ಬಾರಿ ಬಿಜೆಪಿಯವರೇ ಕೈಬಿಟ್ಟಿದ್ದಾರೆ. ಈ ಹಿಂದೆ ಇದ್ದ ಬಿಜೆಪಿ ಸಂಸದರು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದೇ, ಬಿಜೆಪಿಯವರೇ ಈ ಬಾರಿ ಹಲವರನ್ನು ಕೈಬಿಟ್ಟಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ

ಹರಿಹರ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆ ಹಾಗೂ ಸುಮಾರು 5 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಒದಗಿಸುವ ಏತ ನೀರಾವರಿ ಯೋಜನೆಗೆ ಚುನಾವಣೆ ನಂತರ ಚಾಲನೆ ನೀಡಲಾಗುವುದು. ನಾನು ನುಡಿದ ಮಾತಿನಂತೆ ನಡೆಯುವವನು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆಂದು ತಿಳಿಸಿದಂತೆ 8 ತಿಂಗಳ ಒಳಗೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಜನರ ಪ್ರಶಂಸೆಯನ್ನು ಗಳಿಸಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ರೈತ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್, ಶೂ ಭಾಗ್ಯ, ಶಾದಿ ಭಾಗ್ಯಗಳಂತಹ ಜನಪರ ಯೋಜನೆಗಳನ್ನು ಕಾಂಗ್ರೆಸ್ ನೀಡಿದೆ ಎಂದು ಹೇಳಿದರು.

ಯಪ್ಪಾ ಯಪ್ಪಾ ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ

ಬಿಜೆಪಿ ಜಾತಿ – ಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು, ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ. ಸಂವಿಧಾನದ ಮೀಸಲಾತಿ ಪ್ರಮಾಣದಲ್ಲಿ ಶೇ. 10ರಷ್ಟನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಸೃಷ್ಟಿಸಿದರು. ಆದರೆ, ಸಂವಿಧಾನದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿಯನ್ನು ಕೊಡಬಹುದಾಗಿದೆ. ಮೋದಿಯವರು ಸಂವಿಧಾನವನ್ನು ಪೂರ್ಣ ತಿಳಿದಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾವು ಅಧಿಕಾರಕ್ಕೆ ಬಂದರೆ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದೇವೆಯೇ ಹೊರತು. ಒಬ್ಬರ ಮೀಸಲಾತಿಯನ್ನು ಕಿತ್ತು ಮತ್ತೊಬ್ಬರಿಗೆ ಕೊಡುತ್ತೇವೆ ಎಂದು ಎಲ್ಲಿಯೂ ಹೇಳಿಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ

ಬಿಜೆಪಿ ಹಾಗೂ ಆರ್‌ಎಸ್ಎಸ್ ಮೀಸಲಾತಿಯನ್ನು ಬೆಂಬಲಿಸಲಿಲ್ಲ. ಆದ್ದರಿಂದ ಮೀಸಲಾತಿ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಮಂಡಲ್ ವರದಿಯಂತೆ ಉನ್ನತ ಶಿಕ್ಷಣಸಂಸ್ಥೆಗಳಲ್ಲಿ ಮೀಸಲಾತಿ ತರಲು ಬಿಜೆಪಿ ವಿರೋಧಿಸಿದರು. ಮಂಡಲ್ ಪಂಚಾಯಿತಿ, ನಗರ ಸಭೆಗಳಲ್ಲಿ ಮಹಿಳೆಯರು, ದಲಿತರು, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಮೀಸಲಾತಿ ನೀಡಿಕೆಯನ್ನು ಎತ್ತಿಹಿಡಿಯಿತು. ಚುನಾವಣೆ ಬಂದಾಗ ಮಾತ್ರ ಮೋದಿಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ ಎಂದು ಟೀಕಿಸಿದರು.

ಮೋದಿಯವರು ನೀಡಿದ ಭರವಸೆ ಈಡೇರಿಸಲಿಲ್ಲ

ಮೋದಿಯವರು ಹತ್ತು ವರ್ಷಗಳ ಕಾಲ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ರೈತರ ಸಾಲ ಮನ್ನಾ ಮಾಡದೇ ಅದಾನಿ ಹಾಗೂ ಅಂಬಾನಿ ಕೈಗಾರಿಕೋದ್ಯಮಿಗಳಿಗೆ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ಶ್ರೀಮಂತರ ಪರವಾಗಿರುವವರು. ಆದರೆ, ಇವರು ಬಡವರ ಪರವಾಗಿ ಇರುವವರು ಎಂದು ಮೋಸ ಹೋಗಿದ್ದಾಯ್ತು. ನಂಬಿಕೆ ದ್ರೋಹ ಎಸಗಿದ ಮೋದಿಯವರಿಗೆ ಮತ ಹಾಕಬೇಕೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದು ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ

ನಮ್ಮ ಸರ್ಕಾರ ಇರುವವರೆಗೆ ಜನತೆಯ ಆಶೋತ್ತರಗಳನ್ನು ಈಡೇರಿಸಲಾಗುವುದು. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದು ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ. ನಮಗೆ ತೊಂದರೆ ಕೊಡಲು ವಿನಯ್ ಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದಾರೆ. ಅವರು ಗೆಲ್ಲುವುದಿಲ್ಲ. ಏಕೆಂದರೆ ಬಿಜೆಪಿ ಜತೆಗೆ ಶಾಮೀಲಾಗಿದ್ದಾರೆ. ಕನಕ ಗುರುಪೀಠದ ನಿರಂಜನಾನಂದಾಪುರಿ ಸ್ವಾಮಿಗಳು ಮತ್ತು ನಾನು ವಿನಯ್ ಕುಮಾರ್ ಅವರೊಂದಿಗೆ ಮಾತನಾಡಿ, ನಿಲ್ಲುವುದು ಬೇಡ ಸಲಹೆ ನೀಡಿದಾಗ ಒಪ್ಪಿಕೊಂಡು ಈಗ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಕರ್ನಾಟಕದಲ್ಲಿ ನಾನು ಬೇಕೋ, ವಿನಯ್ ಕುಮಾರ್ ಬೇಕೋ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಕೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಕೇಸ್‌; ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ನಾನೇ ಚುನಾವಣೆಗೆ ನಿಂತಿದ್ದೇನೆ ಎಂದು ತಿಳಿಯಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಕೊಡುವ ಮತ ಸಿದ್ದರಾಮಯ್ಯಗೆ ಕೊಡುವ ಮತ. ನನಗೆ ಶಕ್ತಿ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಮ್ಮ ಅಭ್ಯರ್ಥಿ ವಿದ್ಯಾವಂತೆ. ಸಂಸತ್ತಿನಲ್ಲಿ ನಿಮ್ಮ ಪರವಾಗಿ ಮಾತನಾಡುವ ಶಕ್ತಿ ಇದೆ. ಅದಕ್ಕಾಗಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಿ. ಅವರು ಗೆದ್ದರೆ, ನಾನೇ ಗೆದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

Continue Reading

ದೇಶ

Radhika Khera: ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಪಕ್ಷದಲ್ಲಿ ವಿರೋಧ; ಕಾಂಗ್ರೆಸ್‌ ತೊರೆದ ನಾಯಕಿ!

Radhika Khera: ಛತ್ತೀಸ್‌ಗಢ ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರ ಅವರು ಪಕ್ಷವನ್ನು ತೊರೆದಿದ್ದಾರೆ. ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲಿಯೇ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Radhika Khera
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರ (Radhika Khera) ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪಕ್ಷದಲ್ಲಿ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಣ್ಣುಮಕ್ಕಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿದ ಇವರೀಗ ರಾಜೀನಾಮೆ ನೀಡಿದ್ದಾರೆ. “ನಾನು ರಾಮಮಂದಿರಕ್ಕೆ (Ram Mandir) ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಹಾಗಾಗಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ” ಎಂಬುದಾಗಿ ರಾಧಿಕಾ ಖೇರ ತಿಳಿಸಿದ್ದಾರೆ.

“ಪ್ರತಿಯೊಬ್ಬ ಹಿಂದುವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ, ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22 ವರ್ಷದ ನಿಷ್ಠಾವಂತಳಾಗಿ ದುಡಿದಿದ್ದೇನೆ. ಆದರೆ, ನಾನು ಹಿಂದು ಆಗಿ ರಾಮಮಂದಿರಕ್ಕೆ ಭೇಟಿ ನೀಡುವುದನ್ನು ತಡೆಯಲು ನನಗೇ ಆಗಲಿಲ್ಲ. ಪಕ್ಷದಲ್ಲಿ ಮಾತ್ರ, ನಾನು ರಾಮಮಂದಿರಕ್ಕೆ ಹೋಗಿದ್ದೇ ಅಪರಾಧ ಎಂಬಂತೆ ಬಿಂಬಿಸಲಾಗಿದೆ. ಇದಕ್ಕಾಗಿಯೇ ನನ್ನನ್ನು ಗುರಿಯಾಗಿಸಿ ಟೀಕಿಸಲಾಗಿದೆ. ಹಾಗಾಗಿ, ನಾನು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಛತ್ತೀಸ್‌ಗಢ ಕಾಂಗ್ರೆಸ್‌ನ ಪ್ರಮುಖ ನಾಯಕಿಯಾಗಿದ್ದ ರಾಧಿಕಾ ಖೇರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಧಿಕಾ ಖೇರ ಅವರು ಬಿಜೆಪಿ ಸೇರುತ್ತಾರೋ, ಇಲ್ಲವೇ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೋ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಕಲ್ಕಿ ದೇವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಕ್ಕೆ ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ ಅವರನ್ನು ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ಶ್ರೀ ಕಲ್ಕಿ ಧಾಮ ನಿರ್ಮಾಣ ಟ್ರಸ್ಟ್‌ ಚೇರ್ಮನ್‌ ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಾಂಗ್ರೆಸ್‌ ನಾಯಕರೂ ಆಗಿದ್ದರು. ಇವರನ್ನು ಕೆಲ ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ಕಲ್ಕಿ ದೇವಾಲಯಕ್ಕೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಉಚ್ಚಾಟನೆ ಮಾಡಿತ್ತು.

ಇದರ ಕುರಿತು ನರೇಂದ್ರ ಮೋದಿ ಮಾತನಾಡಿದ್ದರು. “ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕಾಗಿ ಹೋರಾಡಿದರು. ಇದಕ್ಕೂ ಮೊದಲಿನ ಸರ್ಕಾರಗಳು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕೆ ಅವಕಾಶ ಕೊಡಲಿಲ್ಲ. ಕಾನೂನು ಹೋರಾಟವನ್ನೂ ಪ್ರಮೋದ್‌ ಕೃಷ್ಣಂ ಅವರು ಮಾಡಬೇಕಾಯಿತು. ಕಲ್ಕಿ ಮಂದಿರ ನಿರ್ಮಾಣವಾದರೆ ಕಾನೂನು ಸುವ್ಯಸ್ಥೆಗೆ ಧಕ್ಕೆಯುಂಟಾಗುತ್ತದೆ ಎಂದರು. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಿ ಕಲ್ಕಿ ಮಂದಿರ ನಿರ್ಮಾಣಕ್ಕೆ ಶಂಕುಸ್ತಾಪನೆ ನೆರವೇರಿಸಲಾಗುತ್ತದೆ” ಎಂದು ಪ್ರತಿಪಕ್ಷಗಳಿಗೆ ಮೋದಿ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದರು.

ಇದನ್ನೂ ಓದಿ: Keshav Maharaj: ರಾಮಮಂದಿರಕ್ಕೆ ಭೇಟಿ ನೀಡಿದ ಕೇಶವ್​ ಮಹರಾಜ್

Continue Reading
Advertisement
Dina bhavishya
ಭವಿಷ್ಯ11 mins ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Ramanagara News
ಕರ್ನಾಟಕ5 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ5 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ5 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ6 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ6 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ6 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ6 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ6 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ6 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ11 mins ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ9 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ11 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ11 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌