Lok sabha election: ತಮಿಳುನಾಡಿನಲ್ಲಿ ಬಿಜೆಪಿ ಆಗಲಿದೆ 2ನೇ ಅತಿದೊಡ್ಡ ಪಕ್ಷ; ಸಮೀಕ್ಷೆ ಹೇಳೋದಿಷ್ಟು - Vistara News

Lok Sabha Election 2024

Lok sabha election: ತಮಿಳುನಾಡಿನಲ್ಲಿ ಬಿಜೆಪಿ ಆಗಲಿದೆ 2ನೇ ಅತಿದೊಡ್ಡ ಪಕ್ಷ; ಸಮೀಕ್ಷೆ ಹೇಳೋದಿಷ್ಟು

Loksabha election-2024: ಇತಿಹಾಸದಲ್ಲೇ ತಮಿಳುನಾಡಿನಲ್ಲಿ ಖಾತೆ ತೆರೆಯದ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂಬುದಾಗಿ ಸಮೀಕ್ಷೆಯೊಂದು ಹೇಳಿದ್ದು ಈಗ ಸಾಕಷ್ಟು ಕುತೂಹಲ ಮೂಡಿಸಿದೆ.

VISTARANEWS.COM


on

Lok Sabha election-2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಮಿಳುನಾಡು: ಲೋಕಸಭಾ ಚುನಾವಣೆಯಲ್ಲಿ (Lok sabha election-2024) ಈ ಬಾರಿ ತಮಿಳುನಾಡಿನ (tamilnadu) ಕೊಯಮುತ್ತೂರಿನಲ್ಲಿ (coimbatore) ಕಣಕ್ಕೆ ಇಳಿದಿರುವ ಕೆ. ಅಣ್ಣಾಮಲೈ (K. Annamalai) ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ (bjp) ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎಂದು ಟೈಮ್ಸ್ ನೌ-ಇಟಿಜಿ (times know-ETG) ಸಂಶೋಧನಾ ಸಮೀಕ್ಷೆ ಹೇಳಿದೆ.

ತಮಿಳುನಾಡಿನಲ್ಲಿ ಅಣ್ಣಾಮಲೈ ನೇತೃತ್ವದ ಬಿಜೆಪಿ ಡಿಎಂಕೆ ಅನಂತರ ಮತ ಹಂಚಿಕೆಯಲ್ಲಿ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಟೈಮ್ಸ್ ನೌ-ಇಟಿಜಿ_ಸಂಶೋಧನಾ ಸಮೀಕ್ಷೆಯ ಅಂಕಿ ಅಂಶಗಳ ಪ್ರಕಾರ ತಮಿಳುನಾಡಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಶೇ. 19ರಷ್ಟು ಮತವನ್ನು ಬಾಚಿಕೊಳ್ಳಲಿದ್ದು ಡಿಎಂಕೆಗೆ ಭಾರೀ ಹೊಡೆತ ನೀಡುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ಡಿಎಂಕೆಯು ಶೇ. 26ರಷ್ಟು ಮತಗಳನ್ನು ಪಡೆದರೆ ಮಿತ್ರಪಕ್ಷ ಕಾಂಗ್ರೆಸ್ ಶೇ.18ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ. ಬಿಜೆಪಿ ಶೇ.19 ಮತ ಗಳಿಸಿದರೆ ಎಐಎಡಿಎಂಕೆ ಶೇ. 17 ಮತ್ತು ಇತರರು ಶೇ. 20ರಷ್ಟು ಮತಗಳಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: K. Annamalai: ಬದುಕು ಬದಲಿಸಿದ ಮಾನಸ ಸರೋವರ ಯಾತ್ರೆ! ಕೆ.ಅಣ್ಣಾಮಲೈ ಕುರಿತ ಕುತೂಹಲಕರ ಸಂಗತಿಗಳಿವು

ಅಂಕಿ ಅಂಶ ಏನು ಹೇಳುತ್ತದೆ ?

ಸಮೀಕ್ಷೆಯ ಪ್ರಕಾರ ಡಿಎಂಕೆ 20- 21 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಮಿತ್ರಪಕ್ಷಗಳು 5- 7 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. 2019ರ ಲೋಕಸಭೆ ಚುನಾವಣೆಯಲ್ಲಿ ಖಾತೆ ತೆರೆಯಲು ವಿಫಲವಾಗಿರುವ ಬಿಜೆಪಿ ಈ ಬಾರಿ ಮಾತ್ರ 2 -6 ಸ್ಥಾನಗಳನ್ನು ಗೆಲ್ಲಲಿದೆ ಎನ್ನಲಾಗುತ್ತದೆ.

ಮೋಡಿ ಮಾಡುವ ಮೋದಿ ಅಲೆ

ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲಿ ಪ್ರಭಾವ ಬೀರಿದೆ ಎನ್ನಲಾಗಿದೆ. ಸಮೀಕ್ಷೆಯ ಪ್ರಕಾರ ಪ್ರಧಾನಿಯ ಚಿತ್ರಣವು ದಕ್ಷಿಣ ಭಾರತದಲ್ಲಿ ಮತದಾನದ ಮಾದರಿಯ ಮೇಲೆ ಗಣನೀಯವಾಗಿ ಪ್ರಭಾವ ಬೀರುತ್ತದೆ. ಶೇ.23ರಷ್ಟು ಮತದಾರರು ಪ್ರಧಾನಿಯವರ ವ್ಯಕ್ತಿತ್ವವನ್ನು ಆಧರಿಸಿ ತಮ್ಮ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಶೇಕಡಾ 19 ರಷ್ಟು ಜನರು ಮತ ಚಲಾಯಿಸುವಾಗ ಪ್ರಾದೇಶಿಕ ನಾಯಕರನ್ನು ಪರಿಗಣಿಸುವುದಾಗಿ ಹೇಳಿದ್ದರೆ, ಆದರೆ ಶೇಕಡಾ 17 ರಷ್ಟು ಜನರು ಸಂಸದರ ಚಿತ್ರದ ಪ್ರಾಮುಖ್ಯತೆಯನ್ನು ಉಲ್ಲೇಖಿಸಿದ್ದಾರೆ. ಸಮೀಕ್ಷೆಯ ಪ್ರಕಾರ ಧರ್ಮದ ವಿಚಾರ ಇಲ್ಲಿ ಅಷ್ಟಾಗಿ ಪ್ರಭಾವ ಬೀರಿಲ್ಲ. ಕೇವಲ ಏಳು ಶೇಕಡಾ ಮತದಾರರು ಮಾತ್ರ ಇದಕ್ಕೆ ಆದ್ಯತೆ ನೀಡುವುದಾಗಿ ಹೇಳಿದ್ದಾರೆ.

ಹೇಗಿದೆ ಅಣ್ಣಾಮಲೈ ಕ್ಷೇತ್ರ ?

ಕೊಯಮತ್ತೂರು ಕ್ಷೇತ್ರದಲ್ಲಿ ಡಿಎಂಕೆ ನಾಯಕ ಗಣಪತಿ ಪಿ. ರಾಜ್ ಕುಮಾರ್ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ , ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಎಐಎಡಿಎಂಕೆಯ ಸಿಂಗೈ ರಾಮಚಂದ್ರನ್ ಕಣಕ್ಕೆ ಇಳಿದಿದ್ದು, ಈ ಕ್ಷೇತ್ರ ಭಾರೀ ಪೈಪೋಟಿಗೆ ಸಾಕ್ಷಿಯಾಗಲಿದೆ.

ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕೆ ಇಳಿದಿದ್ದರೂ ಗೆಲವು ಸಾಧಿಸಿಲ್ಲ. ಭಾರಿ ಮತಗಳ ಅಂತರದಿಂದ ಸೋಲು ಅನುಭವಿಸಿತ್ತು. ಆದರೆ ಈ ಬಾರಿ ಗೆಲುವಿನ ನಿರೀಕ್ಷೆ ಮೂಡಿಸಿರುವುದು ಬಿಜೆಪಿ ಅಭ್ಯರ್ಥಿಯಾಗಿರುವ ಕೆ. ಅಣ್ಣಾಮಲೈ. ಆದರೂ ಇಲ್ಲಿ ಗೆಲುವು ಅಷ್ಟು ಸುಲಭವೇನಲ್ಲ. ಯಾಕೆಂದರೆ ಡಿಎಂಕೆ, ಎಐಎಡಿಎಂಕೆ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸಿದೆ.

ಹಿಂದೆ ಇಲ್ಲಿ ಏನಾಗಿದೆ ?

2014 ಮತ್ತು 2019ರ ಎರಡು ಲೋಕಸಭಾ ಚುನಾವಣೆಗಳಲ್ಲಿ ಕೊಯಮತ್ತೂರಿನ ಬಿಜೆಪಿ ಅಭ್ಯರ್ಥಿಯಾಗಿದ್ದ ಜಾರ್ಖಂಡ್ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಸತತ ಸೋಲು ಅನುಭವಿಸಿದ್ದರು. 2014ರಲ್ಲಿ ಎಐಎಡಿಎಂಕೆಯ ಪಿ. ನಾಗರಾಜನ್ ಅವರು ಸಿ.ಪಿ. ರಾಧಾಕೃಷ್ಣನ್ ಅವರನ್ನು ಸೋಲಿಸಿ 42,016 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

2019ರಲ್ಲಿ ಸಿ.ಪಿ. ರಾಧಾಕೃಷ್ಣನ್ ಅವರ ವಿರುದ್ಧ ಕಣಕ್ಕೆ ಇಳಿದಿದ್ದ ಸಿಪಿಐ (ಎಂ) ಸಂಸದ ಪಿ.ಆರ್. ನಟರಾಜನ್ ಅವರು 1,79,143 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. ಒಟ್ಟು ಚಲಾವಣೆಯಾದ ಮತಗಳಲ್ಲಿ ಸಿ.ಪಿ.ರಾಧಾಕೃಷ್ಣನ್ ಅವರು ಶೇ. 31.3. ಹಾಗೂ ಪಿ.ಆರ್.ನಟರಾಜನ್ ಶೇ.45.7ರಷ್ಟು ಮತಗಳನ್ನು ಪಡೆದಿದ್ದರು. ಒಂದು ವೇಳೆ ಇಲ್ಲಿ ಈ ಬಾರಿ ಬಿಜೆಪಿ ಗೆಲವು ಸಾಧಿಸಿದರೆ ಬಹುದೊಡ್ಡ ಇತಿಹಾಸವೇ ಸೃಷ್ಟಿಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

Amit Shah: ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಗಊ ಮತ್ತು ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿಯನ್ನು ರದ್ದುಗೊಳಿಸುವಂತೆ ಅಮಿತ್‌ ಶಾ ಈ ವಿಡಿಯೋದಲ್ಲಿ ಕರೆ ನೀಡಿದ್ದಾರೆ ಎಂದು ಹೇಳಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿತ್ತು.

VISTARANEWS.COM


on

Amit Shah doctored video case
Koo

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Home minister Amit Shah) ಅವರ ವಿಡಿಯೋವನ್ನು ತಿರುಚಿ (doctored video case) ಪ್ರಸಾರ ಮಾಡುತ್ತಿರುವ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (Aam Admi Party- AAP) ಮತ್ತು ಕಾಂಗ್ರೆಸ್‌ (congress) ಪಕ್ಷಕ್ಕೆ ಸಂಬಂಧಿಸಿದ ಮೂವರನ್ನು ಬಂಧಿಸಲಾಗಿದೆ.

ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಗಊ ಮತ್ತು ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿಯನ್ನು ರದ್ದುಗೊಳಿಸಲಾಗುವುದು ಎಂದು ಅಮಿತ್‌ ಶಾ ಈ ವಿಡಿಯೋದಲ್ಲಿ ಕರೆ ನೀಡಿದ್ದಾರೆ ಎಂದು ಹೇಳಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿತ್ತು. ಪ್ರಕರಣದಲ್ಲಿ ಅಹಮದಾಬಾದ್ ಸೈಬರ್ ಕ್ರೈಂ ವಿಭಾಗದ ಪೊಲೀಸರು ಇಬ್ಬರನ್ನು ಬಂಧಿಸಿದ್ದರೆ, ಮತ್ತೊಬ್ಬ ವ್ಯಕ್ತಿಯನ್ನು ಅಸ್ಸಾಂನಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ನಕಲಿ ವೀಡಿಯೊವನ್ನು ಕಾಂಗ್ರೆಸ್ ಹರಡುತ್ತಿದೆ ಎಂದು ಅಮಿತ್‌ ಶಾ, ದೂಷಿಸಿದ್ದಾರೆ. ಇದು ಆ ಪಕ್ಷದ ಹತಾಶೆ ಮತ್ತು ನಿರಾಶೆಯ ಫಲಿತಾಂಶವಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವರ ಈ ತಿರುಚಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಜೆಪಿಯು ಮೀಸಲಾತಿಯನ್ನು ರದ್ದುಗೊಳಿಸಲು ತಯಾರಿ ನಡೆಸುತ್ತಿದೆ ಎಂದು ಹೇಳಿಕೊಂಡು ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಮಂಗಳವಾರ ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವರು, “ಬಿಜೆಪಿ 400 ಸ್ಥಾನಗಳನ್ನು ದಾಟಿದ ನಂತರ ಮೀಸಲಾತಿಯನ್ನು ಕೊನೆಗೊಳಿಸುತ್ತದೆ ಎಂದು ಕಾಂಗ್ರೆಸ್ ತಪ್ಪು ಮಾಹಿತಿಯನ್ನು ಹರಡುತ್ತಿದೆ” ಎಂದು ಹೇಳಿದರು. “ಈ ಆರೋಪ ಸುಳ್ಳು ಮತ್ತು ಆಧಾರರಹಿತವಾಗಿವೆ. ಬಿಜೆಪಿಯು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ಬೆಂಬಲಿಸುತ್ತದೆ ಮತ್ತು ಯಾವಾಗಲೂ ರಕ್ಷಕನಾಗಿ ತನ್ನ ಪಾತ್ರವನ್ನು ನಿರ್ವಹಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಾಗಿನಿಂದ ರಾಜಕೀಯವನ್ನು ಇನ್ನಷ್ಟು ತಳಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು. “ನಕಲಿ ವೀಡಿಯೊಗಳನ್ನು ಪ್ರಸಾರ ಮಾಡುವ ಮೂಲಕ ಸಾರ್ವಜನಿಕ ಬೆಂಬಲವನ್ನು ಪಡೆಯುವ ಅವರ ಪ್ರಯತ್ನವು ಖಂಡನೀಯ. ಭಾರತೀಯ ರಾಜಕೀಯದಲ್ಲಿ ಯಾವುದೇ ಪಕ್ಷವು ಎಂದಿಗೂ ಹೀಗೆ ಮಾಡಬಾರದು ಎಂದು ನಾನು ನಂಬುತ್ತೇನೆ” ಎಂದಿದ್ದಾರೆ.

ಏತನ್ಮಧ್ಯೆ, ನಕಲಿ ವೀಡಿಯೋವನ್ನು ಹಂಚಿಕೊಂಡ ಆರೋಪದ ಮೇಲೆ ಮಹಾರಾಷ್ಟ್ರ ಯೂತ್ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಮತ್ತು ಇತರ 16 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಗೊತ್ತಾಗಿದೆ. ಮುಂಬೈ ಬಿಜೆಪಿ ಕಾರ್ಯಾಧ್ಯಕ್ಷ ಪ್ರತೀಕ್ ಕರ್ಪೆ ಅವರು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಸೈಬರ್ ಪೊಲೀಸ್ ಠಾಣೆಯಲ್ಲಿ ಸೋಮವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

Continue Reading

ದೇಶ

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Lok Sabha Election 2024: ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ಎಡಿಆರ್‌ ವರದಿ ತಿಳಿಸಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶಾದ್ಯಂತ ಬೇಸಿಗೆಯ ಬಿಸಿಲಿನಷ್ಟೇ ಲೋಕಸಭೆ ಚುನಾವಣೆ (Lok Sabha Election 2024) ಕಾವು ಕೂಡ ಜೋರಾಗಿದೆ. ರಾಜಕೀಯ ನಾಯಕರ ಅಬ್ಬರದ ಸಮಾವೇಶಗಳು, ಪ್ರಚಾರದ ಭರಾಟೆ, ತೀಕ್ಷ್ಣ ಹೇಳಿಕೆಗಳು, ಪ್ರತಿಸ್ಪರ್ಧಿಗಳ ವಿರುದ್ಧ ಮಾಡುವ ಆರೋಪಗಳು ಸುದ್ದಿಯಾಗುತ್ತಿವೆ. ಇನ್ನು ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಇದಕ್ಕಾಗಿ ಅಭ್ಯರ್ಥಿಗಳು, ನಾಯಕರು ಇನ್ನಿಲ್ಲದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ (Criminal Case) ದಾಖಲಾಗಿವೆ ಎಂದು ತಿಳಿದುಬಂದಿದೆ.

ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಹಾಗೂ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮೂರನೇ ಹಂತದ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ ಎಂದು ತಿಳಿದುಬಂದಿದೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ನೀಡಿರುವ ಮಾಹಿತಿ ಆಧರಿಸಿ ವರದಿ ತಯಾರಿಸಲಾಗಿದೆ.

Lok Sabha Election-2024

ಬಿಜೆಪಿಯಿಂದ ಸ್ಪರ್ಧಿಸಿದ 82 ಅಭ್ಯರ್ಥಿಗಳಲ್ಲಿ 22 ಮಂದಿ ವಿರುದ್ಧ ಕ್ರಿಮಿನಲ್‌ ಕೇಸ್‌ ಇವೆ. ಇನ್ನು ಕಾಂಗ್ರೆಸ್‌ನ 68 ಅಭ್ಯರ್ಥಿಗಳ ಪೈಕಿ 26, ಆರ್‌ಜೆಡಿಯ ಮೂರಕ್ಕೆ ಮೂವರ ವಿರುದ್ಧವೂ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಶಿವಸೇನೆ (ಉದ್ಧವ್‌ ಬಾಳಾಸಾಹೇಬ್‌ ಠಾಕ್ರೆ) ಶೇ.80, ಎನ್‌ಸಿಪಿ (ಶರದ್‌ ಪವಾರ್)‌ ಶೇ.67, ಸಮಾಜವಾದಿ ಪಾರ್ಟಿ ಶೇ.50, ಜೆಡಿಯು ಶೇ.33 ಹಾಗೂ ತೃಣಮೂಲ ಕಾಂಗ್ರೆಸ್‌ನ ಶೇ.17ರಷ್ಟು ಅಭ್ಯರ್ಥಿಗಳು ಕ್ರಿಮಿನಲ್‌ ಕೇಸ್‌ ಹೊಂದಿದ್ದಾರೆ ಎಂಬುದು ವರದಿ ಮೂಲಕ ಬಹಿರಂಗವಾಗಿದೆ.

ಇವರ ಆಸ್ತಿ-ಪಾಸ್ತಿ ಎಷ್ಟು?

ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಇವರಲ್ಲಿ 292 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಇವರಲ್ಲಿ ಬಿಜೆಪಿಯ 77, ಕಾಂಗ್ರೆಸ್‌ನ 60 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಗೋವಾದ ಪಲ್ಲವಿ ಶ್ರೀನಿವಾಸ್‌ ಡೆಂಪೊ ಅವರ ಆಸ್ತಿಯ ಮೌಲ್ಯವು 1,361 ಕೋಟಿ ರೂ. ಆಗಿದ್ದು, ಇವರೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಇನ್ನು ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಸ್ತಿಯ ಮೌಲ್ಯವು 424 ಕೋಟಿ ರೂ. ಆಗಿದ್ದು, ಎರಡನೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಶಾಹು ಶಹಾಜಿ ಅವರು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದು, ಇವರ ಆಸ್ತಿ ಮೌಲ್ಯ 342 ಕೋಟಿ ರೂ. ಆಗಿದೆ. ಇವರು ಮೂರನೇ ಶ್ರೀಮಂತ ಅಭ್ಯರ್ಥಿ ಆಗಿದ್ದಾರೆ.

ಇದನ್ನೂ ಓದಿ: Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Continue Reading

ದೇಶ

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Narendra Modi: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳ ಪಟ್ಟಿಯಲ್ಲಿ ಬರುವುದಿಲ್ಲ. ಇದು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ಹಾಗಾಗಿ, ಯಾವುದೇ ರಾಜ್ಯ ಸರ್ಕಾರಗಳು ಸಿಎಎ ಜಾರಿಯನ್ನು ತಡೆಯುವ ಹಾಗೂ 370ನೇ ವಿಧಿಯನ್ನು ಮತ್ತೆ ಜಾರಿಗೆ ತರುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಿಯಾಗುತ್ತಿದೆ. ರಾಜಕಾರಣಿಗಳ ಹೇಳಿಕೆಗಳು, ಅವರು ಮಾತನಾಡುವ ವಿಷಯಗಳು ಇನ್ನಷ್ಟು ಕಾವು ಪಡೆದುಕೊಳ್ಳುತ್ತಿವೆ. “ನಾವು ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರುತ್ತೇವೆ. ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯನ್ನು ತಡೆಯುತ್ತೇವೆ” ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಇದರ ಬೆನ್ನಲ್ಲೇ, ಪ್ರತಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸವಾಲು ಹಾಕಿದ್ದಾರೆ. “ತಾಕತ್ತಿದ್ದವರು 370ನೇ ವಿಧಿಯನ್ನು ಮತ್ತೆ ಜಾರಿಗೆ ತರಲಿ. ತಾಕತ್ತಿದ್ದವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಡೆಯಲಿ” ಎಂದು ನ್ಯೂಸ್‌ 18ಗೆ ನೀಡಿದ ಸಂದರ್ಶನದ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯಾಗಲು ಬಿಡುವುದಿಲ್ಲ. ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರಲಾಗುವುದು” ಎಂಬುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿರುವ ಕುರಿತು ಸಂದರ್ಶನದ ವೇಳೆ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ನಾನು ಕಾಂಗ್ರೆಸ್‌ ಸೇರಿ ಯಾವುದೇ ಪ್ರತಿಪಕ್ಷಗಳಿಗೆ ಸವಾಲು ಹಾಕುತ್ತೇನೆ. ತಾಕತ್ತಿದ್ದವರು 370ನೇ ವಿಧಿಯನ್ನು ಜಾರಿಗೆ ತರಲಿ. ಹಾಗೆಯೇ, ಸಿಎಎ ಜಾರಿಯನ್ನು ಯಾರಿಗೂ ತಡೆಯಲು ಆಗುವುದಿಲ್ಲ” ಎಂದು ಹೇಳಿದರು.

“ಯಾರು ಸಂವಿಧಾನವನ್ನು ಸರಿಯಾಗಿ ಓದಿರುತ್ತಾರೋ, ಯಾರು ಒಕ್ಕೂಟ ವ್ಯವಸ್ಥೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುತ್ತಾರೋ, ಅವರು ಇಂತಹ ಹೇಳಿಕೆ ನೀಡುವುದಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ರಾಜ್ಯಗಳ ಪಟ್ಟಿಯಲ್ಲಿ ಇವು ಬರುವುದಿಲ್ಲ. ನರೇಂದ್ರ ಮೋದಿ ಕೂಡ ಯಾವುದೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ, ಇಂತಹ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ” ಎಂದು ತಿಳಿಸಿದರು.

“ಯಾವುದೇ ರಾಜ್ಯಗಳಿಗೆ 370ನೇ ವಿಧಿ ಮರು ಜಾರಿಗೊಳಿಸಲು ಆಗುವುದಿಲ್ಲ. ಕಾಂಗ್ರೆಸ್‌ ಸೇರಿ, ಯಾವುದೇ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ. ತಾಕತ್ತಿದ್ದರೆ, 370ನೇ ವಿಧಿಯನ್ನು ಮತ್ತೆ ಜಾರಿಗೊಳಿಸುತ್ತೇವೆ ಎಂದು ಘೋಷಿಸಲಿ ನೋಡೋಣ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೆಸರು ಹೇಳಿಕೊಂಡು ನಮ್ಮ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ, ಸ್ವಾತಂತ್ರ್ಯದ ಬಳಿಕ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವು ಜಮ್ಮು-ಕಾಶ್ಮೀರದಲ್ಲಿ ಅನ್ವಯವಾಗಿರಲಿಲ್ಲ. 370ನೇ ವಿಧಿ ರದ್ದುಗೊಳಿಸಿ, ನಾವು ಅಂಬೇಡ್ಕರ್‌ ಸಂವಿಧಾನವು ಜಮ್ಮು-ಕಾಶ್ಮೀರದಲ್ಲೂ ಜಾರಿಯಾಗುವಂತೆ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

Continue Reading

Lok Sabha Election 2024

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Lok Sabha Election 2024: ಒಂದೇ ಕುಟುಂಬದ ಐದು ಮಂದಿಗಾಗಿ ಲೇಹ್ ಜಿಲ್ಲೆಯ ವಾಶಿ ಎಂಬ ಹಳ್ಳಿಯಲ್ಲಿಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ.

VISTARANEWS.COM


on

By

Lok Sabha Election-2024
Koo

ಶ್ರೀನಗರ: ಲೋಕಸಭಾ ಚುನಾವಣೆ 2024 (Lok Sabha Election-2024) ಹಲವು ವಿಶೇಷಗಳಿಗೆ ಸಾಕ್ಷಿಯಾಗಿದೆ. ಇದರಲ್ಲಿ ಕೇವಲ ಐದು ಮಂದಿ ಮತದಾರರಿಗಾಗಿ (voters) ಮತದಾನ ಕೇಂದ್ರವನ್ನು (voting booth) ತೆರೆದಿರುವುದು ಕೂಡ ಒಂದು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನ (Ladakh) ಲೇಹ್ (Leh) ಜಿಲ್ಲೆಯ ವಾಶಿ (Washi ) ಎಂಬ ದೂರದ ಹಳ್ಳಿಯಲ್ಲಿ ಒಂದು ಕುಟುಂಬದ ಐದು ಸದಸ್ಯರಿಗೆ ಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಡಾಖ್ ನ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಯತೀಂದ್ರ ಎಂ. ಮರಾಲ್ಕರ್, ಲೇಹ್‌ನಿಂದ ಸುಮಾರು 170 ಕಿ.ಮೀ. ದೂರದಲ್ಲಿರುವ ನುಬ್ರಾದ ವಾಶಿ ಎಂಬ ದೂರದ ಹಳ್ಳಿಯಲ್ಲಿ ಟೆಂಟ್ ಅಡಿಯಲ್ಲಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election 2024: ಎಲೆಕ್ಷನ್‌ ಹೊತ್ತಲ್ಲೇ ಕಾಂಗ್ರೆಸ್‌ಗೆ ಬಿಗ್‌ ಶಾಕ್! ಕನ್ಹಯ್ಯ ಕುಮಾರ್‌ಗೆ ಸ್ವಪಕ್ಷದಲ್ಲೇ ವಿರೋಧ

ಮೇ 20ರಂದು ಮತದಾನ

ಲಡಾಖ್ ಲೋಕಸಭಾ ಸ್ಥಾನಕ್ಕೆ ಮೇ 20ರಂದು 5ನೇ ಹಂತದಲ್ಲಿ ಮತದಾನ ನಡೆಯಲಿದೆ. ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ಅನಂತರ ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯವನ್ನು ಎರಡು ಯುಟಿಗಳಾಗಿ ವಿಭಜಿಸಿದಬಳಿಕ ಶೀತ ಮರುಭೂಮಿ ಪ್ರದೇಶದಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.


ಐವರು ಮತದಾರರು

ಒಂದೇ ಕುಟುಂಬದ ಐವರು ಗ್ರಾಮದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದು, ಟೆಂಟ್‌ ಹಾಕಿದ ಮತಗಟ್ಟೆ ಅವರ ಮನೆ ಬಾಗಿಲಿಗೆ ಬಂದಿದೆ ಎಂದು ಮಾರಲ್ಕರ್ ಹೇಳಿದರು.

ಕುಟುಂಬವು ಆರು ಸದಸ್ಯರನ್ನು ಒಳಗೊಂಡಿದೆ ಮತ್ತು ಅವರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಕುಟುಂಬದ ಮುಖ್ಯಸ್ಥ ರೈತನಾಗಿದ್ದಾನೆ.

ಲಡಾಖ್ ನಲ್ಲಿ 1,82,571 ಮತದಾರರು

ಲಡಾಖ್ ಯುಟಿಯು ಎರಡು ಜಿಲ್ಲೆಗಳನ್ನು ಒಳಗೊಂಡಿದೆ. ಮುಸ್ಲಿಂ ಪ್ರಾಬಲ್ಯದ ಕಾರ್ಗಿಲ್ ಮತ್ತು ಬೌದ್ಧ ಪ್ರಾಬಲ್ಯದ ಲೇಹ್. 91,703 ಪುರುಷರು ಮತ್ತು 90868 ಮಹಿಳೆಯರು ಸೇರಿದಂತೆ ಒಟ್ಟು 1,82,571 ಮತದಾರರು ಇಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

577 ಮತಗಟ್ಟೆಗಳು

ಚುನಾವಣಾ ಆಯೋಗವು ಯುಟಿಯಾದ್ಯಂತ 577 ಮತಗಟ್ಟೆಗಳನ್ನು ಸ್ಥಾಪಿಸಿದೆ. ಇದರಲ್ಲಿ 33 ನಗರ ಮತ್ತು 544 ಗ್ರಾಮೀಣ ಪ್ರದೇಶಗಳಲ್ಲಿ ಸೇರಿವೆ. ಲಡಾಖ್‌ನಲ್ಲಿ ಕೆಲವು ಮತಗಟ್ಟೆಗಳ ದುರ್ಗಮತೆಯನ್ನು ಗಮನದಲ್ಲಿಟ್ಟುಕೊಂಡು ದೂರದ ಹಳ್ಳಿಗಳಿಗೆ ಚುನಾವಣಾ ಸಾಮಗ್ರಿಗಳು ಮತ್ತು ಸಿಬ್ಬಂದಿಯನ್ನು ವಿಮಾನದಲ್ಲಿ ರವಾನಿಸಲಾಗುತ್ತದೆ.

Continue Reading
Advertisement
Amit Shah doctored video case
ದೇಶ1 min ago

Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

National Commission for Women enters Prajwal Hassan Pen Drive Case Letter to DG to submit report within 3 days
ಕ್ರೈಂ2 mins ago

Hassan Pen Drive Case: ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

T20 World Cup 2024
ಕ್ರೀಡೆ15 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್​, ದಕ್ಷಿಣ ಆಫ್ರಿಕಾ

America Shootout
ವಿದೇಶ25 mins ago

America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

Hassan Pen Drive Case does not work as a discharge petal says DK Shivakumar
ರಾಜಕೀಯ1 hour ago

Hassan Pen Drive Case: ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಅಸೆಂಬ್ಲಿಗೆ ಬರುವಂತೆ ಎಚ್‌ಡಿಕೆಗೆ ಡಿಕೆಶಿ ಸವಾಲು

Toyota Kirloskar Motor Introduces New G-AT Grade of Toyota Rumion
ದೇಶ2 hours ago

Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

Rohit Sharma Birthday
ಕ್ರೀಡೆ2 hours ago

Rohit Sharma Birthday: ಬೌಲರ್​ ಆಗಿದ್ದ ರೋಹಿತ್​ ಹಿಟ್​ಮ್ಯಾನ್​ ಆಗಿದ್ದೇಗೆ?; ಕ್ರಿಕೆಟ್​ ಜರ್ನಿಯೇ ರೋಚಕ

covishield vaccine
ದೇಶ2 hours ago

Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Supreme Court
ದೇಶ2 hours ago

Supreme Court: 14 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿ, ಬಳಿಕ ನಿರ್ಧಾರ ವಾಪಸ್‌ ಪಡೆದ ಸುಪ್ರೀಂ

Ballari City MLA Nara Bharat Reddy Election Campaign for Ballari Lok Sabha Constituency Congress Candidate E Tukaram
ಬಳ್ಳಾರಿ2 hours ago

Lok Sabha Election 2024: ಬಳ್ಳಾರಿಗೆ ಕೈಗಾರಿಕೆಗಳನ್ನು ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷದ್ದು: ನಾರಾ ಭರತ್ ರೆಡ್ಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ10 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌