ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ (Lok Sabha Election 2024) ಮತದಾನ ಇಂದು ಬೆಳಗ್ಗೆ 7ರಿಂದ ಆರಂಭವಾಯಿತು. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಎಲ್ಲ ಬಗೆಯ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.
ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?
ರಾಜ್ಯದಲ್ಲಿ ಬೆಳಗಾವಿ ಸೇರಿ 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ (lok sabha election 2024) ಮಂಗಳವಾರ ನಡೆಯುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಧ್ಯಾಹ್ನ 3ಗಂಟೆವರೆಗೆ ಅಂದಾಜು ಶೇ.54.20 ಮತದಾರರು (Voter Turnout) ಹಕ್ಕು ಚಲಾಯಿಸಿದ್ದಾರೆ. ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ಎಂಬ ಮಾಹಿತಿ ಇಲ್ಲಿದೆ.
Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?
ಶಿವಮೊಗ್ಗದ ಶುಭಂ ಹೋಟೆಲ್‌ನಲ್ಲಿ, ಮತದಾನದ ಪ್ರಮಾಣ ಹೆಚ್ಚಿಸಿ, ಜಾಗೃತಿ ಮೂಡಿಸಲು ಸ್ಪೆಷಲ್ ಆಫರ್ ನೀಡಲಾಯಿತು. ಬೆಳಗ್ಗೆ 7ರಿಂದ ಮಧ್ಯಾಹ್ನ 12 ಗಂಟೆವರೆಗೆ ಫ್ರೀ ಟಿಫನ್ ನೀಡಲಾಯಿತು. ಬೆಳಗ್ಗೆಯಿಂದ 5 ಸಾವಿರಕ್ಕೂ ಹೆಚ್ಚು ಮತದಾರರು ಫ್ರೀ ಟಿಫನ್ ಸವಿದರು. ಪಲಾವ್, ದೋಸೆ, ಬಿಸಿಬೇಳೆಬಾತ್, ಕಾಫಿ ತಿಂಡಿ ಫ್ರೀ ನೀಡಲಾಗಿದೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 11 ಗಂಟೆಗೆ ಶೇ.26.46 ಮತದಾನ ಆಗಿದೆ. ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದಲ್ಲಿ 15.66 ರಷ್ಟು ಮತದಾನ ಪ್ರಮಾಣ ದಾಖಲಾಗಿದೆ. ಬಿಸಿಲಿನ ತಾಪಮಾನ ಏರಿಕೆಯಾದ ಬೆನ್ನಲ್ಲೇ ಮತದಾನ ಪ್ರಮಾಣ ಕುಸಿತವಾಗಿದೆ. ಸದ್ಯ ಜಿಲ್ಲೆಯಾದ್ಯಂತ 37 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪಮಾನವಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಗೋನವಾಟ್ಲಾ ತಾಂಡಾದಲ್ಲಿನ ಬೂತ್‌ನಲ್ಲಿ ಮತದಾರರನ್ನು ಲಂಬಾಣಿ, ಯಾದವ ಸಂಪ್ರದಾಯದ ಉಡುಗೆ ತೊಡುಗೆ ಧರಿಸಿ, ಸಾಂಪ್ರದಾಯಿಕ ಎಥ್ನಿಕ್ ಬೂತ್ ಮತಗಟ್ಟೆಗಳನ್ನು ನಿರ್ಮಿಸಿ ಸ್ವಾಗತಿಸಲಾಯಿತು.
ಬೆಳಗ್ಗೆ 11 ಗಂಟೆವರೆಗೆಗೆ ಶಿವಮೊಗ್ಗ ಕ್ಷೇತ್ರದಲ್ಲಿ 27.21 % ರಷ್ಟು ಮತದಾನವಾಗಿದೆ. ಕಲಬುರಗಿಯಲ್ಲಿ ಬೆಳಗ್ಗಿನಿಂದ 11 ಗಂಟೆವರೆಗೆ ಶೇ.22.63 ಮತದಾನವಾಗಿದೆ.