ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ (Lok Sabha Election 2024) ಮತದಾನ ಇಂದು ಬೆಳಗ್ಗೆ 7ರಿಂದ ಆರಂಭವಾಯಿತು. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಎಲ್ಲ ಬಗೆಯ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ 9 ಮತಗಳನ್ನು ಮಹಿಳೆಯರು ಚಲಾಯಿಸಿದರು. ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯಿಂದ “ನವದುರ್ಗೆ ಮತದಾನ” ಕಾನ್ಸೆಪ್ಟ್ ಹಿನ್ನಲೆಯಲ್ಲಿ ಈ ಮತದಾನ ನಡೆಯಿತು.
ಲೋಕಸಭೆ ಚುನಾವಣೆ- ಎರಡನೇ ಹಂತದ ಮತದಾನಕ್ಕೆ ಮುನ್ನ ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಶಿಕಾರಿಪುರ ಪಟ್ಟಣದಲ್ಲಿರುವ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.