ಬೆಳಗಾವಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ವಾಕ್ಸಮರಗಳು ಜೋರಾಗಿವೆ. ಒಮ್ಮೊಮ್ಮೆ ವೈಯಕ್ತಿಕ ಮಟ್ಟಕ್ಕೂ ಇಳಿಯುತ್ತಿದೆ. ಅಲ್ಲದೆ, ಕುಟುಂಬದ ಮೇಲಿನ ಆರೋಪಗಳೂ ಜೋರಾಗುತ್ತಿವೆ. ಈಗ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ (Belagavi Lok Sabha constituency) ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಅಬ್ಬರದ ಪ್ರಚಾರ ಶುರುವಾಗಿದೆ. ಹೀಗೆ ಪ್ರಚಾರ ಭಾಷಣದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shettar) ವಿರುದ್ಧ ಮಾತನಾಡಿದ್ದರು. ಬೀಗರಿಗೆ ಟಿಕೆಟ್ ತಪ್ಪಿಸಿದ ಅವರೊಬ್ಬರ ಸ್ವಾರ್ಥ ರಾಜಕಾರಣಿ ಎಂದು ಹೇಳಿದ್ದರು. ಇದಕ್ಕೆ ಈಗ ಸಂಸದೆ ಮಂಗಳಾ ಅಂಗಡಿ (Mangala Angadi) ತಿರುಗೇಟು ನೀಡಿದ್ದು, ಘನತೆಯಿಂದ ರಾಜಕಾರಣ ಮಾಡಿ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸಿರುವ ಮಂಗಳಾ ಅಂಗಡಿ, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ತಮ್ಮ ಕುಟುಂಬದ ಬಗ್ಗೆ ಅವಮಾನಕಾರಿಯಾಗಿ ಮಾತನಾರುವುದು ಸರಿಯಲ್ಲ. ಈ ರೀತಿ ಕೀಳಾಗಿ ಮಾತನಾಡಬೇಡಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಮಂಗಳಾ ಅಂಗಡಿ ಹೇಳಿದ್ದೇನು?
“ಪಕ್ಷ ಮೊದಲು, ಕುಟುಂಬ ನಂತರ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ನಮ್ಮ ಕುಟುಂಬ ಯಾವತ್ತೂ ಬಿಜೆಪಿ ಸಿದ್ಧಾಂತ ನಂಬಿ ರಾಜಕೀಯ ಮಾಡಿದೆ. ಸುರೇಶ ಅಂಗಡಿ (Suresh Angadi) ಅವರು ಸಹ ಬದುಕಿನುದ್ದಕ್ಕೂ ಬಿಜೆಪಿ ತತ್ವದಂತೆ ಬದುಕಿದ ಧೀಮಂತ ರಾಜಕಾರಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತ್ತು. ಅದನ್ನು ಸಮರ್ಥವಾಗಿ ನಿಭಾಯಿಸಿದ ತೃಪ್ತಿ ಇದೆ. ಈ ಬಾರಿ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದ ತಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ. “ಪಕ್ಷ ಮೊದಲು, ಕುಟುಂಬ ನಂತರ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ನಮ್ಮ ಕುಟುಂಬ ಯಾವತ್ತೂ ಬಿಜೆಪಿ ಸಿದ್ಧಾಂತ ನಂಬಿ ರಾಜಕೀಯ ಮಾಡಿದೆ. ಸುರೇಶ ಅಂಗಡಿ ಅವರು ಸಹ ಬದುಕಿನುದ್ದಕ್ಕೂ ಬಿಜೆಪಿ ತತ್ವದಂತೆ ಬದುಕಿದ ಧೀಮಂತ ರಾಜಕಾರಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತ್ತು. ಅದನ್ನು ಸಮರ್ಥವಾಗಿ ನಿಭಾಯಿಸಿದ ತೃಪ್ತಿ ಇದೆ. ಈ ಬಾರಿ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದ ತಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನರ ಮನಸಿನಲ್ಲಿ ಸಂಶಯ ಹುಟ್ಟಿಸುವ ಕ್ಷುಲ್ಲಕ ಹೇಳಿಕೆ ಕೊಡುವ ಬದಲು ಸಚಿವ ಸ್ಥಾನಕ್ಕೆ ಗೌರವ ತರುವ ಮಾತು ಆಡಬೇಕು. ಅಷ್ಟಕ್ಕೂ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಂತೆ ಕೇವಲ ಕ್ಷುಲ್ಲಕ ವಿಷಯದ ರಾಜಕಾರಣ ಮಾಡುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್. ಇನ್ನು ಮುಂದಾದರೂ ರಾಷ್ಟ್ರದ ಅಭಿವೃದ್ಧಿ, ರಾಷ್ಟ್ರೀಯತೆ, ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಜನರ ಬೇಕು– ಬೇಡಿಕೆಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲಿದರೆ ಜನರ ಬದುಕು ಹಸನುಗೊಳಿಸುವ ಕೆಲಸ ಆದೀತು.
ಇದನ್ನೂ ಓದಿ: Lok Sabha Election 2024: ಸಿ.ಪಿ. ಯೋಗೇಶ್ವರ್ ಪುತ್ರಿ ಕಾಂಗ್ರೆಸ್ ಸೇರ್ಪಡೆ? ಅಪ್ಪ – ಮಗಳನ್ನು ದೂರ ಮಾಡಲ್ಲವೆಂದ ಡಿಕೆಶಿ
ಟಿಕೆಟ್ ಕಿತ್ತುಕೊಂಡಿದ್ದಾರೆ ಎಂಬ ಕ್ಷುಲ್ಲಕ ಹೇಳಿಕೆಗಳಿಗೆ ನಾನು ಪ್ರಜ್ಞಾವಂತ ಪ್ರಜೆಯಾಗಿ ಉತ್ತರಿಸಲಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೇ ಸಲ ಶಾಸಕಿ ಆಗುತ್ತಲೇ ಸಚಿವೆಯೂ ಆಗಿದ್ದಾರೆ. ಜಿಲ್ಲೆಯಲ್ಲಿ ನಿಮಗಿಂತ ಹಿರಿಯರಾದ ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ ಅವರಿಂದ ಸಚಿವ ಸ್ಥಾನ ಕಿತ್ತುಕೊಂಡವರು ನೀವು. ಆದರೆ, ಈ ವಿಷಯವನ್ನು ಈವರೆಗೆ ನಾವು ಪ್ರಸ್ತಾಪ ಮಾಡಿರಲಿಲ್ಲ. ಜಿಲ್ಲೆಯ ಜನರಿಗೆ ಈ ವಿಷಯ ಚೆನ್ನಾಗಿ ಗೊತ್ತಿದೆ. ಆದ್ದರಿಂದ ಇನ್ನು ಮುಂದೆ ಲಕ್ಷ್ಮಿ ಅವರು ವೈಯಕ್ತಿಕ ವಿಚಾರ ಬಿಟ್ಟು ಸಮಷ್ಟಿ ಪ್ರಜ್ಞೆಯಿಂದ ರಾಜಕೀಯ ಮಾಡುವುದನ್ನು ರೂಢಿ ಮಾಡಿಕೊಳ್ಳುವುದು ಒಳಿತು” ಎಂದು ಮಂಗಳಾ ಅಂಗಡಿ ಗುಡುಗಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ ಅಭ್ಯರ್ಥಿಯಾಗುವ ಮೂಲಕ ಸ್ವಾರ್ಥ ರಾಜಕಾರಣಿ ಎಂದು ನಿರೂಪಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಅಭ್ಯರ್ಥಿ ವಿರುದ್ಧ ಶನಿವಾರ (ಮಾ. 30) ಕಿಡಿಕಾರಿದ್ದರು.