Site icon Vistara News

Lok Sabha Election 2024: ರೋಡ್‌ ಶೋ, ಬೃಹತ್‌ ಸಮಾವೇಶ! ಇಂದು ಉಮೇದುವಾರಿಕೆ ಸಲ್ಲಿಸಿದ ಘಟಾನುಘಟಿ ನಾಯಕರು

Lok Sabha Elections 2024 NDA Top leaders file nominations today

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಕಾವು ಏರತೊಡಗಿದೆ. ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಗುರುವಾರ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಸೇರಿದಂತೆ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್‌.ಡಿ. ಕುಮಾರಸ್ವಾಮಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಸೂರ್ಯ, ಚಿತ್ರದುರ್ಗದಿಂದ ಗೋವಿಂದ ಕಾರಜೋಳ, ಹಾಸನದಿಂದ ಪ್ರಜ್ವಲ್‌ ರೇವಣ್ಣ ಹಾಗೂ ದಕ್ಷಿಣ ಕನ್ನಡದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಎನ್‌ಡಿಎ ಅಭ್ಯರ್ಥಿಗಳು ರೋಡ್‌ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಅಲ್ಲದೆ, ಬೃಹತ್‌ ಸಭೆಗಳನ್ನು ಆಯೋಜಿಸಿ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತ್ತೊಮ್ಮೆ ನರೇಂದ್ರ ಮೋದಿ ಆಡಳಿತ ಬರಲು ಎಲ್ಲರೂ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.

Lok Sabha Elections 2024 NDA Top leaders file nominations today

Lok Sabha Election 2024: ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನೆರೆಯ ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮೈಸೂರು – ಕೊಡಗು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಬೃಹತ್‌ ಸಮಾವೇಶವನ್ನು ನಡೆಸಿ ಶಕ್ತಿ ಪ್ರದರ್ಶನ ಮಾಡಲಾಯಿತು.

ಇದನ್ನೂ ಓದಿ: Lok Sabha Election 2024: ತೇಜಸ್ವಿ ಸೂರ್ಯಗೆ ʼರೋಡ್‌ ಶೋʼ ಕಂಟಕ? ನಾಮಪತ್ರ ರದ್ದು ಕೋರಿ ಆಯೋಗಕ್ಕೆ ಮೊರೆ

ರೋಡ್ ಶೋ ಮೂಲಕ ತೆರಳಿ ತೇಜಸ್ವಿ ಸೂರ್ಯ ನಾಮಪತ್ರ

ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಜಯನಗರ 4ನೇ ಬ್ಲಾಕಿನ ಮಯ್ಯಾಸ್ ಹೋಟೆಲ್‍ನಿಂದ ರೋಡ್ ಶೋ ಮೂಲಕ ಹೊರಟು ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Lok Sabha Elections 2024 NDA Top leaders file nominations today

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪ್ರತಾಪ ಸಿಂಹ, ರಾಜ್ಯಸಭಾ ಸದಸ್ಯ ಜಗ್ಗೇಶ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಶರವಣ, ಜೆಡಿಎಸ್ ಬೆಂಗಳೂರು ಮಹಾನಗರ ಅಧ್ಯಕ್ಷ ರಮೇಶ್ ಗೌಡ, ಜೆಡಿಎಸ್ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ತುಳಸಿರಾಮ್ ಅವರು ಹಾಜರಿದ್ದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಪಕ್ಷದ ಮಾಜಿ ಮಹಾಪೌರರು, ಉಪ ಮಹಾಪೌರರು, ಬಿ.ಬಿ.ಎಂ.ಪಿ. ನಿಕಟಪೂರ್ವ ಸದಸ್ಯರು, ಪಕ್ಷದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಕೋಷ್ಠಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Election 2024: ಕಣ್ಣೀರು ಹಾಕಿದ ನಿಖಿಲ್‌ ಕುಮಾರಸ್ವಾಮಿ; ಚನ್ನಪಟ್ಟಣದಿಂದ ಸ್ಪರ್ಧಿಸುವ ಸುಳಿವು?

ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಗಿರಿನಗರದ ಶ್ರೀ ಗಣೇಶ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದರು. ಗಿರಿನಗರದ ಭಾಗದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿ ಶುಭ ಹಾರೈಸಿದರು.

ಚಿತ್ರದುರ್ಗದಲ್ಲಿ ಉಮೇದುವಾರಿಕೆ ಸಲ್ಲಿಸಿದ ಗೋವಿಂದ ಕಾರಜೋಳ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಚಿತ್ರದುರ್ಗದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗಾಂಧಿ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ಗುರುವಾರ ನಾಮಪತ್ರ ಸಲ್ಲಿಸಿದರು.

Lok Sabha Elections 2024 NDA Top leaders file nominations today

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಎಂ ಚಂದ್ರಪ್ಪ, ಗಾಲಿ ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್, ಮಾಜಿ ಶಾಸಕರಾದ ಜಿ.ಎಚ್ ತಿಪ್ಪಾರೆಡ್ಡಿ, ಎಸ್. ತಿಪ್ಪೇಸ್ವಾಮಿ, ಎಸ್.ಕೆ. ಬಸವರಾಜನ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ಚಿದಾನಂದ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಹನುಮಂತೆ ಗೌಡ್ರು, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಮಾಜಿ ಸಂಸದರಾದ ಜನಾರ್ದನಸ್ವಾಮಿ, ಜೆಡಿಎಸ್ ಮುಖಂಡರಾದ ಕಾಂತರಾಜ್, ಯಶೋಧರ್, ರವೀಶ್, ರವೀಂದ್ರ, ತಿಪ್ಪೇಸ್ವಾಮಿ, ಮುಂತಾದ ಬಿಜೆಪಿ ಹಾಗೂ ಜೆಡಿಎಸ್ ಜಿಲ್ಲಾ ಹಾಗು ರಾಜ್ಯ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತಿತರ ಮುಖಂಡರು ಹಾಜರಿದ್ದರು.

Lok Sabha Elections 2024 NDA Top leaders file nominations today

ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಹಾಸನ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ಎನ್‍ಡಿಎ ಮಿತ್ರಕೂಟಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬ ಭಾವನೆ ಜನರಲ್ಲಿದೆ. 2047ರಲ್ಲಿ ಭಾರತವು ವಿಕಸಿತ ಭಾರತವಾಗುವ ಕನಸನ್ನು ನನಸು ಮಾಡಲು ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿದರು.

ಇದನ್ನೂ ಓದಿ: Lok Sabha Election 2024: ಶುರುವಾಯ್ತಾ ಕಣ್ಣೀರು ಪಾಲಿಟಿಕ್ಸ್‌? ಪ್ರಚಾರದಲ್ಲಿ ಅತ್ತೇಬಿಟ್ಟರು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್!

Lok Sabha Elections 2024 NDA Top leaders file nominations today

ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೊಂದಿಗೆ ಗುರುವಾರ ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಸೇರಿದ್ದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕರಾದ ಸುನಿಲ್ ಕುಮಾರ್ ಕಾರ್ಕಳ, ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ರಾಜೇಶ್ ನಾಯಕ್ ಯು, ಉಮಾನಾಥ್ ಕೋಟ್ಯಾನ್, ಕು. ಭಾಗೀರಥಿ ಮರುಳ್ಯ, ಪ್ರತಾಪ್ ಸಿಂಹ ನಾಯಕ್, ಭರತ್ ಶೆಟ್ಟಿ ವೈ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರಮುಖರಾದ ಪ್ರಮೋದ್ ಮದ್ವರಾಜ್ ಹಾಗೂ ಜೆಡಿಎಸ್ ಪಕ್ಷದ ಪ್ರಮುಖರು, ಸಾವಿರಾರು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Lok Sabha Elections 2024 NDA Top leaders file nominations today

ನಾಮಪತ್ರ ಸಲ್ಲಿಸಿದ ಡಾ. ಸಿ.ಎನ್.ಮಂಜುನಾಥ್

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಸಿ.ಎನ್.ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ ನಂತರ ಸಮಾವೇಶ ಸ್ಥಳದವರೆಗೂ ಭವ್ಯ ಮೆರವಣಿಗೆಯಲ್ಲಿ ತೆರಳಿದರು. ಶಾಸಕರಾದ ಮುನಿರತ್ನ, ಅಶ್ವಥ್ ನಾರಾಯಣ, ಎಂ.ಕೃಷ್ಣಪ್ಪ, ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ನಟಿಯರಾದಂತಹ ಶೃತಿ ಹಾಗೂ ಅಪಾರ ಸಂಖ್ಯೆಯ ಮುಖಂಡರು ಸಮಾವೇಶದಲ್ಲಿ ಭಾಗವಹಿಸಿದರು.

Exit mobile version