Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ - Vistara News

Lok Sabha Election 2024

Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Lok Sabha Election 2024: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತ್‌ನ ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕಂಡರಿ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ್ದಾರೆ. ಸುತ್ತ ನೆರೆದಿದ್ದ ಸಾವಿರಾರು ಜನರತ್ತ ಕೈ ಬೀಸುತ್ತ ಮತದಾನ ಕೇಂದ್ರಕ್ಕೆ ತೆರಳಿ ವೋಟು ಮಾಡಿದರು. ರಸ್ತೆಯುದ್ದಕ್ಕೂ ನಿಂತಿದ್ದ ಜನರು ಮೋದಿ ಪರ ಘೋಷಣೆ ಕೂಗಿದರು.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಂಧಿನಗರ: ಲೋಕಸಭಾ ಚುನಾವಣೆ (Lok Sabha Election 2024)ಯ ಮೂರನೇ ಹಂತದ ಮತದಾನ ಆರಂಭವಾಗಿದೆ. 93 ಕ್ಷೇತ್ರಗಳಲ್ಲಿ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಅದರಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಗುಜರಾತ್‌ನ ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕಂಡರಿ ಶಾಲೆ (Nishan Higher Secondary School)ಯ ಮತದಾನ ಕೇಂದ್ರದಲ್ಲಿ ಬೆಳಗ್ಗೆ 7.45ರ ಸುಮಾರಿಗೆ ತಮ್ಮ ಹಕ್ಕು ಚಲಾಯಿಸಿದರು. ಕೇಂದ್ರ ಸಚಿವ ಅಮಿತ್‌ ಶಾ (Amit Shah) ಅವರೊಂದಿಗೆ ಆಗಮಿಸಿದ ಅವರು ಸುತ್ತ ನೆರೆದಿದ್ದ ಸಾವಿರಾರು ಜನರತ್ತ ಕೈ ಬೀಸುತ್ತ ಮತದಾನ ಕೇಂದ್ರಕ್ಕೆ ತೆರಳಿ ವೋಟು ಮಾಡಿದರು. ಈ ಮಧ್ಯೆ ಎಲ್ಲರೂ ಮತದಾನ ಮಾಡುವಂತೆ ಅವರು ಕನ್ನಡದಲ್ಲೇ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮತದಾನ ಕೇಂದ್ರದ ಬಳಿಗೆ ಪ್ರಧಾನಿ ಸುಮಾರು 7.30ರ ಹೊತ್ತಿಗೆ ಆಗಮಿಸಿದ್ದರು. ಅಮಿತ್‌ ಶಾ ಪ್ರಧಾನಿಯನ್ನು ಸ್ವಾಗತಿಸಿದರು. ಬಳಿಕ ಇಬ್ಬರು ನಾಯಕರು ಸುತ್ತ ನೆರೆದಿದ್ದ ಸಾವರ್ಜನಿಕರತ್ತ ಕೈ ಬೀಸುತ್ತ ಮತಗಟ್ಟೆಗೆ ತೆರಳಿದರು. ರಸ್ತೆಯುದ್ದಕ್ಕೂ ನಿಂತಿದ್ದ ಜನರು ಮೋದಿ ಪರ ಘೋಷಣೆ ಕೂಗಿದರು. ಈ ಮಧ್ಯೆ ಅಭಿಮಾನಿಗಳಿಗೆ ಮೋದಿ ಆಟೋಗ್ರಾಫ್‌ ನೀಡುವುದನ್ನೂ ಮರೆಯಲಿಲ್ಲ. ಅಮಿತ್‌ ಶಾ ಸ್ಪರ್ಧಿಸುತ್ತಿರುವ ಗಾಂಧಿನಗರದಲ್ಲಿಯೂ ಇಂದು ಮತದಾನ ನಡೆಯಲಿದ್ದು, ಕೆಲ ಹೊತ್ತಿನಲ್ಲೇ ಅವರು ಹಕ್ಕು ಚಲಾಯಿಸಲಿದ್ದಾರೆ.

ಹಕ್ಕು ಚಲಾಯಿಸಿದ ಗಣ್ಯರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ಮತ ಚಲಾಯಿಸಿದರು. ಅಜಿತ್ ಅವರ ಪತ್ನಿ ಸುನೇತ್ರಾ ಮತ್ತು ತಾಯಿ ಕೂಡ ಬಾರಾಮತಿಯ ಕಟೇವಾಡಿ ಮತಗಟ್ಟೆಯಲ್ಲಿ ಬೆಳಿಗ್ಗೆ ಮತದಾನ ಮಾಡಿದರು.

ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಲು ಕರೆ

ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ ಅವರು, ಈ ಮೂರನೇ ಹಂತದಲ್ಲಿ ಎಲ್ಲರೂ ಹಕ್ಕು ಚಲಾಯಿಸುವ ಮೂಲಕ ದಾಖಲೆ ಪ್ರಮಾಣದ ಮತದಾನಕ್ಕೆ ಕಾರಣವಾಗಬೇಕು ಎಂದು ಕರೆ ನೀಡಿದ್ದಾರೆ. ʼʼಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

ಕರ್ನಾಟಕ ಸೇರಿ ಒಟ್ಟು 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದೆ. ಇದರಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೂ ಸೇರಿವೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

ಮತದಾನ ನಡೆಯುವ ರಾಜ್ಯಗಳು

ನಗರ್ ಹವೇಲಿ ಮತ್ತು ದಮನ್ ಮತ್ತು ದಿಯು (2), ಅಸ್ಸಾಂ (4), ಬಿಹಾರ (5), ಛತ್ತೀಸ್‌ಗಢ (7), ದಾದ್ರಾ, ಗೋವಾ (2), ಗುಜರಾತ್ (25), ಕರ್ನಾಟಕ (14), ಮಹಾರಾಷ್ಟ್ರ (11), ಮಧ್ಯಪ್ರದೇಶ (8), ಉತ್ತರ ಪ್ರದೇಶ (10) ಮತ್ತು ಪಶ್ಚಿಮ ಬಂಗಾಳ (4)ಗಳಲ್ಲಿ ಮತದಾನ ನಡೆಯುತ್ತಿದೆ. ಸೂರತ್ ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆಲುವು ಸಾಧಿಸಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರಕ್ಕೂ ಇಂದೇ ಮತದಾನ ನಿಗದಿಯಾಗಿತ್ತು. ಆದರೆ ಪ್ರತಿಕೂಲ ಹವಾಮಾನ ಕಾರಣದಿಂದ ಚುನಾವಣಾ ಆಯೋಗ ಇತ್ತೀಚೆಗೆ ಇದನ್ನು ಮೇ 25ಕ್ಕೆ ಮುಂದೂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

lok sabha Election : ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದರು.

VISTARANEWS.COM


on

Lok Sabha Election
Koo

ರಾಂಚಿ: ಲೋಕ ಸಭಾ ಚುನಾವಣೆ (Lok Sabha Election) ಕೊನೇ ಹಂತದ ಮತದಾದನ ಹಿನ್ನೆಲೆಯಲ್ಲಿ ಜಾರ್ಖಂಡ್​ನಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಆಡಳಿತಾರೂಢ ಜಾರ್ಖಂಡ್​ ಮುಕ್ತಿ ಮೋರ್ಚಾದ (ಜೆಎಮ್​ಎಮ್​) ವಿರುದ್ಧ ಹಲವಾರು ಆರೋಪಗಳನ್ನು ಮಾಡಿದರು. ಜಾರ್ಖಂಡ್​ನ ದುಮ್ಕಾದಲ್ಲಿ ಮಂಗಳವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದೂ ಧರ್ಮಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ‘ಲವ್ ಜಿಹಾದ್’ ಆರಂಭಗೊಂಡಿರುವುದೇ ಜಾರ್ಖಂಡ್​ನಿಂದ ಎಂದು ಹೇಳಿಕೆ ನೀಡಿದ್ದಾರೆ.

ಜೆಎಂಎಂ ನಿರಂತರವಾಗಿ ಕೋಮುವಾದಿ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ ಮೋದಿ, ಜಾರ್ಖಂಡ್​ ನ ಒಂದು ಜಿಲ್ಲೆಯಲ್ಲಿ ಭಾನುವಾರದ ಸಾಂಪ್ರದಾಯಿಕ ರಜಾದಿನವನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಹೇಳಿದರು. ವಾಸ್ತವದಲ್ಲಿ ಭಾನುವಾರ ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಕ್ರಿಶ್ಚಿಯನ್ ಸಮುದಾಯಕ್ಕೆ ಸಂಬಂಧಿಸಿದೆ. 200-300 ವರ್ಷಗಳಿಂದ ರಜಾದಿನವಾಗಿ ಪರಿಗಣಿಸಲಾಗಿದೆ. ಈಗ ಅದನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಲೂಟಿ ಆರೋಪಗಳು

ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಜೆಎಂಎಂ ಮತ್ತು ಕಾಂಗ್ರೆಸ್ ಮಿತಿಮೀರಿದ ಲೂಟಿಯಲ್ಲಿ ತೊಡಗಿವೆ ಎಂದು ಆರೋಪಿಸಿದರು, ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ಅವರು ಪ್ರತಿಜ್ಞೆ ಮಾಡಿದರು.

ಇದನ್ನೂ ಓದಿ: Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

2014ಕ್ಕೂ ಮೊದಲು ಕಾಂಗ್ರೆಸ್ ದಿನದ 24 ಗಂಟೆಯೂ ಲೂಟಿಯಲ್ಲಿ ತೊಡಗಿದ್ದರಿಂದ ಹಗರಣಗಳು ಸಾಮಾನ್ಯವಾಗಿದ್ದವು, ಆದರೆ ತಾವು ಅಧಿಕಾರಕ್ಕೆ ಬಂದ ನಂತರ ಅದನ್ನು ನಿಲ್ಲಿಸಿಸಲಾಯಿತು ಎಂದು ಹೇಳಿದರು

ನುಸುಳುಕೋರರ ಸಮಸ್ಯೆ

ಒಳನುಸುಳುವಿಕೆಯಿಂದಾಗಿ ಸಂತಾಲ್ ಪರಗಣಗಳಲ್ಲಿ ಬುಡಕಟ್ಟು ಜನಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೋದಿ ಆರೋಪಿಸಿದರು. ಜಾರ್ಖಂಡ್​ನಲ್ಲಿ ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟವು “ನುಸುಳುಕೋರರನ್ನು ಪೋಷಿಸುತ್ತಿದೆ” ಎಂದು ಅವರು ಆರೋಪಿಸಿದರು. ಬುಡಕಟ್ಟು ಜನರ ಭೂಮಿಯನ್ನು ನುಸುಳುಕೋರರು ವಶಪಡಿಸಿಕೊಳ್ಳುತ್ತಿದ್ದಾರೆ. ಅವರು ಮಹಿಳೆಯರಿಗೆ ಅಪಾಯವನ್ನುಂಟು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಜಾರ್ಖಂಡ್​ನಲ್ಲಿ ದೊಡ್ಡ ಬಿಕ್ಕಟ್ಟು ತಲೆದೋರಿದೆ. ಅದುವೇ ಒಳನುಸುಳುವಿಕೆ. ಸಂತಾಲ್ ಪರಗಣಗಳು ಒಳನುಸುಳುವಿಕೆಯ ಸವಾಲನ್ನು ಎದುರಿಸುತ್ತಿವೆ. ಅನೇಕ ಪ್ರದೇಶಗಳಲ್ಲಿ, ಬುಡಕಟ್ಟು ಜನರ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ ಮತ್ತು ಒಳನುಸುಳುವವರ ಸಂಖ್ಯೆ ಹೆಚ್ಚುತ್ತಿದೆ. ನುಸುಳುಕೋರರು ಬುಡಕಟ್ಟು ಜನರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ಬುಡಕಟ್ಟು ಹೆಣ್ಣುಮಕ್ಕಳು ನುಸುಳುಕೋರರ ದಾಳಿಗೆ ಗುರಿಯಾಗಿದ್ದಾರೆ. ಅವರ ಭದ್ರತೆ ಮತ್ತು ಸುರಕ್ಷತೆ ಅಪಾಯದಲ್ಲಿದೆ. ಅವರ ಜೀವವೂ ಅಪಾಯದಲ್ಲಿದೆ” ಎಂದು ಅವರು ಹೇಳಿದರು.

2022 ರ ಘಟನೆಗಳನ್ನು ಉಲ್ಲೇಖಿಸಿದ ಮೋದಿ, “ಬುಡಕಟ್ಟು ಹೆಣ್ಣುಮಕ್ಕಳನ್ನು 50 ತುಂಡುಗಳಾಗಿ ಕತ್ತರಿಸಲಾಗುತ್ತಿದೆ. ಜೀವಂತವಾಗಿ ಸುಡಲಾಗುತ್ತಿದೆ ನಾಲಿಗೆಯನ್ನು ಹೊರತೆಗೆಯಲಾಗಿದೆ. ಬುಡಕಟ್ಟು ಹೆಣ್ಣುಮಕ್ಕಳನ್ನು ಗುರಿಯಾಗಿಸುತ್ತಿರುವ ಈ ಜನರು ಯಾರು? ಜೆಎಂಎಂ ಸರ್ಕಾರ ಅವರನ್ನು ಏಕೆ ಪೋಷಿಸುತ್ತಿದೆ ಎಂದು ಮೋದಿ ಪ್ರಶ್ನಿಸಿದರು. ಮುಂದಿನ ಐದು ವರ್ಷಗಳಲ್ಲಿ ದೇಶವು ಹಿಂದಿನ ದಶಕಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಸಾಕ್ಷಿಯಾಗಲಿದೆ ಎಂದು ಅವರು ಭರವಸೆ ನೀಡಿದರು.

Continue Reading

Lok Sabha Election 2024

Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

Lok Sabha Election : ಕನ್ಯಾಕುಮಾರಿಯಲ್ಲಿ, ಪಿಎಂ ಮೋದಿ ರಾಕ್ ಮೆಮೋರಿಯಲ್​ಗೆ ಭೇಟಿ ನೀಡಲಿದ್ದಾರೆ ಮತ್ತು ಮೇ 30 ರ ಸಂಜೆಯಿಂದ ಜೂನ್ 1 ರವರೆಗೆ ಧ್ಯಾನ ಮಂಟಪದಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ಕಾಗಿ ಕಳೆದ ಮೂರ್ನಾಲ್ಕು ತಿಂಗಳಿಂದ ದೇಶಾದ್ಯಂತ ಸಂಚರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೊನೇ ಹಂತದ ಚುನಾವಣಾ ಪ್ರಚಾರ ಮುಗಿದ ಬಳಿಕ ಅಂದರೆ ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಶ್ವ ಪ್ರಸಿದ್ಧ ವಿವೇಕಾನಂದ ರಾಕ್ ಮೆಮೋರಿಯಲ್ ಗೆ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಆಗಮಿಸಲಿದ್ದಾರೆ. 73 ವರ್ಷದ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳವಾದ ಸ್ಮಾರಕದಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕನ್ಯಾಕುಮಾರಿಯಲ್ಲಿ, ಪಿಎಂ ಮೋದಿ ರಾಕ್ ಮೆಮೋರಿಯಲ್​ಗೆ ಭೇಟಿ ನೀಡಲಿದ್ದಾರೆ ಮತ್ತು ಮೇ 30 ರ ಸಂಜೆಯಿಂದ ಜೂನ್ 1 ರವರೆಗೆ ಧ್ಯಾನ ಮಂಟಪದಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ.

ಸ್ವಾಮಿ ವಿವೇಕಾನಂದ ರಾಕ್ ಮೆಮೋರಿಯಲ್ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ಸಮುದ್ರದ ಮಧ್ಯದಲ್ಲಿದೆ. ಇದರು ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲಾ ಪ್ರತಿಮೆಗೆ ಹತ್ತಿರದಲ್ಲಿದೆ. ಮೂರನೇ ಅವಧಿಗೆ ಪ್ರಧಾನಿಯಾಗುವ ಕನಸು ಹೊಂದಿರುವ ನರೇಂದ್ರ ಮೋದಿ ಗುರುವಾರ ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಿದ್ದಾರೆ. ಬಳಿಕ ಜೂನ್ 1 ರಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಇದನ್ನೂ ಓದಿ: T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

ಏಳು ಹಂತಗಳಲ್ಲಿ ನಿಗದಿಯಾದ ಲೋಕಸಭಾ ಚುನಾವಣೆ ಜೂನ್ 1 ರಂದು ಕೊನೆಗೊಳ್ಳಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. 2019 ರ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿ ಕೇಸರಿ ಬಟ್ಟೆ ಧರಿಸಿ ಕೇದಾರನಾಥ ಬಳಿಯ ಪವಿತ್ರ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಈ ಫೋಟೊ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿತ್ತು.

ಈ ತಿಂಗಳ ಆರಂಭದಲ್ಲಿ, ಪ್ರಧಾಣಿ ಮೋದಿ ಅವರು ನೀಡಿದ ವಿಶೇಷ ಸಂದರ್ಶನದಲ್ಲಿ, ಚುನಾವಣಾ ಲೆಕ್ಕಾಚಾರಗಳು ನಮ್ಮ ಪರವಾಗಿ ಹೆಚ್ಚು ವಾಲುತ್ತಿವೆ. ನಾನು ಅದರ ಬಗ್ಗೆ ಏನನ್ನೂ ಹೇಳಬೇಕಾಗಿಲ್ಲ. ನಾವು ಮೇಲುಗೈ ಸಾಧಿಸಿದ್ದೇವೆ. ಮತ್ತು ಅದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದರು. ಚುನಾವಣಾ ಸೋಲುಗಳು ಮತ್ತು ಹಲವರ ಪಕ್ಷಾಂತರಗಳಿಂದ ಕಂಗೆಟ್ಟಿರುವ ಕಾಂಗ್ರೆಸ್, ಬಿಜೆಪಿಯನ್ನು ಎದುರಿಸುವ ಶಕ್ತಿ ಕಳೆದುಕೊಂಡಿದೆ ಎಂದು ಹೇಳಿದ್ದರು.

ತಮ್ಮ ಹೊಸ ಸರ್ಕಾರದ ಮೊದಲ 100 ದಿನಗಳ ಕ್ರಿಯಾ ಯೋಜನೆಯನ್ನು ರೂಪಿಸಲು ತಮ್ಮ ಸಚಿವರಿಗೆ ನಿಯೋಜಿಸಿದ್ದೇನೆ ಎಂದು ಪ್ರಧಾನಿ ಹೇಳಿದ್ದರು.

Continue Reading

ದೇಶ

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

Narendra Modi: ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬಾಹ್ಯ ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇತ್ತೀಚೆಗೆ, ಪಾಕಿಸ್ತಾನದ ಕೆಲ ನಾಯಕರು ಇಬ್ಬರ ಪರವಾಗಿ ಪೋಸ್ಟ್‌ ಮಾಡಿದ್ದರು. ಹಾಗಾಗಿ, ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದರೂ ರಾಜಕೀಯ ನಾಯಕರ ಅಬ್ಬರದ ಹೇಳಿಕೆ, ಟೀಕೆ, ವ್ಯಂಗ್ಯ, ವಾಗ್ವಾದಗಳು ನಿಲ್ಲುತ್ತಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. “ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ಪ್ರಧಾನಿ ಹೇಳಿದ್ದಾರೆ.

ಐಎಎನ್‌ಎಸ್‌ ಸುದ್ದಿಸಂಸ್ಥೆಗೆ ಸಂದರ್ಶನ ನೀಡುವ ವೇಳೆ ಮೋದಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಪಾಕಿಸ್ತಾನದ ನಾಯಕರ ಬೆಂಬಲದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ, “ನಾನು ಪ್ರಧಾನಿ ಸ್ಥಾನ ಹೊಂದಿದ್ದು, ಅಂತಹ ವಿಷಯಗಳ ಬಗ್ಗೆ ಮಾತನಾಡಬಾರದು. ಆದರೆ, ನಿಮ್ಮ ಕಾಳಜಿ ನನಗೆ ಅರ್ಥವಾಗುತ್ತದೆ. ಕೆಲವರು ನಮ್ಮ ವಿರುದ್ಧ ದ್ವೇಷ ಕಾರುತ್ತಾರೆ. ಆ ದ್ವೇಷ ಕಾರುವವರೇ ನಮ್ಮ ನಾಯಕರಿಗೆ ಬೆಂಬಲ ಸೂಚಿಸುತ್ತಾರೆ. ಆಯ್ಕೆಯ ಆಧಾರದ ಮೇಲೆಯೇ ದ್ವೇಷ ಕಾರುವವರು ಬೆಂಬಲ ನೀಡುತ್ತಾರೆ. ಈ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದರು.

ಏನಿದು ಪ್ರಕರಣ?

ಮೇ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್‌ ಅವರು ರಾಹುಲ್‌ ಗಾಂಧಿ ಅವರ ಪೋಸ್ಟ್‌ಅನ್ನು ಹಂಚಿಕೊಂಡು, ಅವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಕ್ಕಾಗಲೂ ಚೌಧರಿ ಫವಾದ್‌ ಪ್ರತಿಕ್ರಿಯಿಸಿದ್ದರು. ಆಗ ಅವರು, “ಅರವಿಂದ್‌ ಕೇಜ್ರಿವಾಲ್‌ ಬಿಡುಗಡೆಯಾಗಿದ್ದಾರೆ. ಇದರಿಂದ ಮೋದಿ ಮತ್ತೊಂದು ಯುದ್ಧ ಸೋತಂತಾಗಿದೆ. ಇದು ಭಾರತಕ್ಕೆ ಶುಭ ಸುದ್ದಿ” ಎಂದಿದ್ದರು. ಚುನಾವಣೆ ವೇಳೆಯೂ, “ದ್ವೇಷ ಹಾಗೂ ತೀವ್ರವಾದದ ವಿರುದ್ಧ ಶಾಂತಿ ಹಾಗೂ ಸಾಮರಸ್ಯ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ” ಎಂದು ಚೌಧರಿಯು ಕೇಜ್ರಿವಾಲ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದರು.

ಮಣಿಶಂಕರ್‌ ಅಯ್ಯರ್‌ಗೆ ಟಾಂಗ್‌ ಕೊಟ್ಟಿದ್ದ ಮೋದಿ

ಕೆಲ ದಿನಗಳ ಹಿಂದೆ ಇಂಡಿಯಾ ಟಿವಿ ಚಾನೆಲ್‌ ಜತೆ ಸಂವಾದ ನಡೆಸುವ ವೇಳೆ, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತು ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಅವರು ಮಾರ್ಮಿಕವಾಗಿ ಉತ್ತರ ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟಿದ್ದರು.

ಇದನ್ನೂ ಓದಿ: Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Continue Reading

ದೇಶ

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

INDIA Bloc: ಜೂನ್ 4ರಂದು‌ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಇದಕ್ಕಾಗಿ ಜೂನ್‌ 1ರ ಸಭೆಯು ಮಹತ್ವ ಪಡೆದುಕೊಂಡಿದೆ. ಇನ್ನು, 1ರಂದು ಇಂಡಿಯಾ ಒಕ್ಕೂಟದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮೊದಲೇ ತಿಳಿದಿತ್ತು. ಆದರೆ, ಸಭೆ ನಡೆಯುವ ದಿನವೇ ಬೇರೆ ರಾಜ್ಯಗಳಂತೆ ಪಶ್ಚಿಮ ಬಂಗಾಳದಲ್ಲೂ ಮತದಾನ ನಡೆಯುವ ಕಾರಣ ಬರಲು ಆಗುವುದಿಲ್ಲ ಎಂಬುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

VISTARANEWS.COM


on

INDIA Bloc
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದು ನಿಂತಿದೆ. ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆ ಮುಗಿಯಲಿದೆ. ಇನ್ನು, ಕೊನೆಯ ಹಂತದ ಮತದಾನದ ದಿನವಾದ ಜೂನ್‌ 1ರಂದೇ ಇಂಡಿಯಾ ಒಕ್ಕೂಟದ (INDIA Bloc) ಪಕ್ಷಗಳ ಸಭೆ ನಡೆಯಲಿದೆ. ಆದರೆ, ಇಂಡಿಯಾ ಒಕ್ಕೂಟದ ಮಹತ್ವದ ಸಭೆಗೆ ಗೈರಾಗಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಿಳಿಸಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇಂಡಿಯಾ ಒಕ್ಕೂಟದ ಪಕ್ಷಗಳ ಸಭೆಗೆ ಗೈರಾಗುವ ಕುರಿತು ಕೋಲ್ಕೊತಾದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಮತಾ ಬ್ಯಾನರ್ಜಿ ಅವರೇ ಹೇಳಿದ್ದಾರೆ. “ಜೂನ್‌ 1ರಂದು ಇಂಡಿಯಾ ಒಕ್ಕೂಟದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮೊದಲೇ ತಿಳಿದಿತ್ತು. ಆದರೆ, ಜೂನ್‌ 1ರಂದು ಬೇರೆ ರಾಜ್ಯಗಳಂತೆ ಪಶ್ಚಿಮ ಬಂಗಾಳದಲ್ಲೂ ಮತದಾನ ನಡೆಯುವ ಕಾರಣ ಬರಲು ಆಗುವುದಿಲ್ಲ ಎಂಬುದಾಗಿ ತಿಳಿಸಿದ್ದೇನೆ. ಈಗ ರೆಮಾಲ್‌ ಚಂಡಮಾರುತವು ಕೂಡ ರಾಜ್ಯವನ್ನು ಬಾಧಿಸುತ್ತಿದೆ. ಇಂಡಿಯಾ ಒಕ್ಕೂಟದ ಸಭೆಯಲ್ಲಿ ಪಾಲ್ಗೊಳ್ಳುವ ಬದಲು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ರಾಜ್ಯದ ಜನರೇ ನನ್ನ ಮೊದಲ ಆದ್ಯತೆ” ಎಂಬುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆ ಏಕೆ?

ಜೂನ್‌ 1ರಂದು ಲೋಕಸಭೆ ಚುನಾವಣೆ ಸಮಾರೋಪಗೊಳ್ಳಲಿದೆ. ಕಾಂಗ್ರೆಸ್‌, ಸಿಪಿಎಂ ಸೇರಿ ಹಲವು ಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ. ಜೂನ್‌ 4ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಇದಕ್ಕಾಗಿ ಜೂನ್‌ 1ರ ಸಭೆಯು ಮಹತ್ವ ಪಡೆದುಕೊಂಡಿದೆ. ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವು ಹೆಚ್ಚು ಸ್ಥಾನಗಳನ್ನು ಗೆದ್ದರೆ ಮುಂದೆ ಹೇಗೆ ತೀರ್ಮಾನ ತೆಗೆದುಕೊಳ್ಳಬೇಕು? ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೇಗೆ ಇರಬೇಕು? ಹಿನ್ನಡೆಯಾದರೆ ಏನು ಮಾಡಬೇಕು ಎಂಬುದು ಸೇರಿ ಹಲವು ವಿಷಯಗಳ ಕುರಿತು ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳ ನಾಯಕರು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಫಲೋಡಿ ಸಟ್ಟಾ ಬಜಾರ್‌ ಸಮೀಕ್ಷೆ ಪ್ರಕಟಿಸಿದೆ. ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

Continue Reading
Advertisement
Credit Card Safety Tips
ಮನಿ ಗೈಡ್4 mins ago

Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Karnataka weather Forecast
ಮಳೆ8 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Child Trafficking Racket
ಪ್ರಮುಖ ಸುದ್ದಿ22 mins ago

Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

Prajwal Revanna Case
ಕರ್ನಾಟಕ29 mins ago

Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

Summer Dress Fashion
ಫ್ಯಾಷನ್53 mins ago

Summer Dress Fashion: ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

Harish Poonja
ಕರ್ನಾಟಕ1 hour ago

Harish Poonja: ಪೊಲೀಸರಿಗೆ ಧಮ್ಕಿ ಪ್ರಕರಣ; ಶಾಸಕ ಹರೀಶ್‌ ಪೂಂಜಾ, 40 ಮಂದಿ ವಿರುದ್ಧ ಚಾರ್ಜ್‌ಶೀಟ್‌

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

Fraud Case in kalaburagi
ಕಲಬುರಗಿ1 hour ago

Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

Money Guide
ಮನಿ-ಗೈಡ್2 hours ago

Money Guide: ಬ್ಯಾಂಕ್‌ ಖಾತೆ, ಮ್ಯೂಚುವಲ್‌ ಫಂಡ್‌ ಹೊಂದಿದ್ದೀರಾ? ಹಾಗಾದರೆ ಮೊದಲು ಈ ಕೆಲಸ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು9 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌