Site icon Vistara News

Lok Sabha Election 2024: ಏಪ್ರಿಲ್‌ 14ರಂದು ಮಂಗಳೂರಿಗೆ ಮೋದಿ; ದಾಖಲೆ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿ!

Lok Sabha Election 2024 and Modi In Karnataka

PM Narendra Modi to visit Mysuru, Mangaluru in Karnataka Today For Lok Sabha election campaign

ಮಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಯಾವ ಕ್ಷೇತ್ರದಲ್ಲಿ ಯಾರಿಂದ ಪ್ರಚಾರ ನಡೆಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಈ ನಡುವೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭೇಟಿ ನೀಡುತ್ತಿದ್ದು, ಏಪ್ರಿಲ್ 14 ರಂದು ಮಂಗಳೂರಿನಲ್ಲಿ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನಲ್ಲಿ ಬೆಳಗ್ಗೆ ಕಾರ್ಯಕರ್ತರನ್ನು ಉದ್ದೇಶಿಸಿ ಸಭೆ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡಂತೆ ರೋಡ್ ಶೋವನ್ನು ಆಯೋಜನೆ ಮಾಡಲಾಗಿದೆ.

ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ

ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌, ಏಪ್ರಿಲ್‌ 14ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ನಡೆಸಲಿದ್ದಾರೆ. ಇಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಈ ಸಮಾವೇಶಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ಏಪ್ರಿಲ್ 14 ರಂದು ಬೆಂಗಳೂರಿಗೆ ನರೇಂದ್ರ ಮೋದಿ ಬರುವವರಿದ್ದಾರೆ. ಅದೇ ದಿನ ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಕರಾವಳಿಯಲ್ಲಿ ಇಲ್ಲಿಯವರೆಗೆ ಸೇರದಷ್ಟು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸುನಿಲ್‌ ಕುಮಾರ್‌ ಹೇಳಿದರು.

ಇದನ್ನೂ ಓದಿ: Lok Sabha Election 2024: ಎಚ್‌ಡಿಕೆ ಕಾಣೆಯಾಗಿದ್ದಾರೆ! ಇನ್ನು ಜನರಿಗೆ ಸಿಗ್ತಾರಾ; ಏನಿದು ಪೋಸ್ಟರ್?

ಬಿಜೆಪಿಯಿಂದ ಪ್ರಚಾರ ಅಭಿಯಾನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಪ್ರಚಾರ ಅಭಿಯಾನಯನ್ನು ಮಾಡುತ್ತಿದ್ದೇವೆ. ದೊಡ್ಡ ಕಾರ್ಯಕ್ರಮಗಳನ್ನು ಮಾಡುವ ಬದಲು ಮನೆ ಮನೆಗೆ ತೆರಳುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಏಪ್ರಿಲ್ 10 ,11ಕ್ಕೆ ರಾಜ್ಯದ ಎಲ್ಲ ಕಡೆಗಳಲ್ಲಿ ಬೂತ್ ಮಟ್ಟದ ಸಭೆ ನಡೆಯಲಿದೆ. ಈ ವರ್ಷ ಮೂರು ಕಾರಣಕ್ಕಾಗಿ ಚುನಾವಣಾ ಮತ ಕೇಳಲು ಹೋಗುತ್ತಿದ್ದೇವೆ. “ಸುರಕ್ಷಿತ ಭಾರತ, ಸಾಂಸ್ಕೃತಿಕ ಭಾರತ, ವಿಕಸಿತ ಭಾರತ” ಎಂಬ ಮೂರು ವಿಷಯದಿಂದ ಚುನಾವಣೆಯನ್ನು ಎದುರಿಸುತ್ತಿದ್ದೇವೆ ಎಂದು ಸುನಿಲ್‌ ಕುಮಾರ್‌ ಮಾಹಿತಿ ನೀಡಿದರು.

ಕಾಂಗ್ರೆಸ್‌ ಬಂದ ಮೇಲೆ ಮತ್ತೆ ನಕ್ಸಲ್‌ ಚಟುವಟಿಕೆ

ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ನಕ್ಸಲ್ ಚುಟುವಟಿಕೆ ಮತ್ತೆ ಕಾಣಿಸುತ್ತಿದೆ. ಬಿಜೆಪಿ ಸರ್ಕಾರವು ನಕ್ಸಲ್ ಚಟುವಟಿಕೆಯನ್ನು ನಿಯಂತ್ರಣ ಮಾಡಿತ್ತು. ಆದರೆ, ಈಗ ಮತ್ತೆ ಕಾಣಿಸಿಕೊಂಡಿದೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಸುನಿಲ್‌ ಕುಮಾರ್‌ ಹೇಳಿದರು.

Exit mobile version