ನವದೆಹಲಿ: ಅನಾರೋಗ್ಯದ ಕಾರಣದಿಂದ ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಆಯೋಜಿಸಿರುವ ಕಾಂಗ್ರೆಸ್‌ನ ಚುನಾವಣಾ ರ‍್ಯಾಲಿಯಲ್ಲಿ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಭಾಗವಹಿಸುತ್ತಿಲ್ಲ ಎಂದು ಹಿರಿಯ ಮುಖಂಡ ಜೈರಾಮ್ ರಮೇಶ್ (Jairam Ramesh) ತಿಳಿಸಿದ್ದಾರೆ (Lok Sabha Election 2024). ವಿಪಕ್ಷದ ʼಇಂಡಿಯಾʼ ಒಕ್ಕೂಟಕ್ಕೆ ಬಲ ತುಂಬಲು ಭಾನುವಾರ ಮಧ್ಯಪ್ರದೇಶದ ಸತ್ನಾ ಮತ್ತು ಜಾರ್ಖಂಡ್‌ನ ರಾಂಚಿಯಲ್ಲಿ ಬೃಹತ್ ರ‍್ಯಾಲಿ ಆಯೋಜಿಸಲಾಗಿದೆ.
ʼʼರಾಹುಲ್ ಗಾಂಧಿ ಅವರಿಗೆ ಅನಾರೋಗ್ಯ ಎದುರಾಗಿದೆ. ಹೀಗಾಗಿ ಅವರು ಮನೆಯಿಂದ ಎಲ್ಲೂ ಹೊರಗೆ ಹೋಗಿಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸತ್ನಾ ಮತ್ತು ರಾಂಚಿಯಲ್ಲಿ ನಡೆಯುವ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆʼʼ ಎಂದು ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.
श्री राहुल गांधी आज सतना और रांची में चुनाव प्रचार के लिए पूरी तरह से तैयार थे, जहां INDIA की रैली हो रही है। लेकिन वह अचानक बीमार हो गए हैं और फिलहाल नई दिल्ली से बाहर नहीं जा सकते हैं। कांग्रेस अध्यक्ष श्री मल्लिकार्जुन खरगे जी अवश्य सतना में जनसभा को संबोधित करने के बाद रांची…
— Jairam Ramesh (@Jairam_Ramesh) April 21, 2024
ʼಇಂಡಿಯಾʼ ಒಕ್ಕೂಟದ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಸೇರಿದಂತೆ ಹಲವು ಮುಖಂಡರ ಪೋಸ್ಟರ್‌ಗಳನ್ನು ರಾಂಚಿಯಲ್ಲಿ ಅಳವಡಿಸಲಾಗಿದೆ.
ರಾಂಚಿಯಲ್ಲಿ ನಡೆಯಲಿರುವ ರ‍್ಯಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೆ ಸಮಾಜವಾದಿ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಮತ್ತು ಕಲ್ಪನಾ ಸೊರೆನ್ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ.
ಸಂವಿಧಾನಕ್ಕೆ ಅಪಾಯ
ಸತ್ನಾದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆ, ಮೋದಿ ಮತ್ತು ಅಮಿತ್ ಶಾ ಸರ್ಕಾರ ಮರಳಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಸಂವಿಧಾನ ಕಣ್ಮರೆಯಾಗಲಿದೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ ಅವರು, “ನೀವು ಸಂವಿಧಾನ, ಮಹಿಳೆಯರು, ಕಾರ್ಮಿಕರು ಮತ್ತು ರೈತರ ಮತದಾನದ ಹಕ್ಕನ್ನು ಜೀವಂತವಾಗಿಡಲು ಬಯಸಿದರೆ, ಕಾಂಗ್ರೆಸ್ ಮತ್ತು ಕೈ ಚಿಹ್ನೆಗೆ ಮತ ಚಲಾಯಿಸಿ” ಎಂದು ಖರ್ಗೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿದ್ಧಾರ್ಥ್ ಖುಶ್ವಾ ಪರ ಖರ್ಗೆ ಮತ ಯಾಚಿಸಿದ್ದಾರೆ.
ಇದನ್ನೂ ಓದಿ: Lok Sabha Election: ಬಿಜೆಪಿಗೆ 350 ಸೀಟು ಖಚಿತ ಎಂದ ಖ್ಯಾತ ಅರ್ಥಶಾಸ್ತ್ರಜ್ಞ; ಅವರ ಪ್ರಿಡಿಕ್ಷನ್ ಹೀಗಿದೆ
ಇತರ ಪಕ್ಷಗಳಲ್ಲಿರುವ ಭ್ರಷ್ಟರನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಂಡಿದ್ದಕ್ಕಾಗಿ ಖರ್ಗೆ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಭ್ರಷ್ಟರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಅಮಿತ್ ಶಾ ಅವರು ʼಭ್ರಷ್ಟರನ್ನು ತೊಳೆಯುವ ವಾಷಿಂಗ್ ಮಷಿನ್ʼ ಹೊಂದಿದ್ದಾರೆ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ. ಇದರ ಜತೆಗೆ ದೇಶದಲ್ಲಿ ತಾಂಡವವಾಡುತ್ತಿರುವ ನಿರುದ್ಯೋಗ ಸಮಸ್ಯೆಯೂ ಈ ಲೋಕಸಭಾ ಚುನಾವಣೆಯ ಪ್ರಮುಖ ಚರ್ಚಾ ವಿಷಯವಾಗಿ ಬದಲಾಗಿದೆ ಎಂದು ಅವರು ಹೇಳಿದ್ದಾರೆ. ಸತ್ನಾ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ.