Site icon Vistara News

Lok Sabha Election 2024: ರಾಜಕೀಯ ಭಾಷಣವನ್ನು ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣ ಎಕ್ಸ್‌ಗೆ ಸೂಚಿಸಿದ ಚುನಾವಣಾ ಆಯೋಗ

Lok Sabha Election 2024

Lok Sabha Election 2024

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಗೆ ದಿನ ಗಣನೆ ಆರಂಭವಾಗಿದೆ. ಮೊದಲ ಹಂತದ ಮತದಾನ ಏಪ್ರಿಲ್‌ 19ರಂದು ನಡೆಯಲಿದ್ದು, ಇದಕ್ಕಾಗಿ ರಾಜಕೀಯ ಪಕ್ಷಗಳು ಭರದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿವೆ. ಈ ಮಧ್ಯೆ ಚುನಾವಣಾ ಆಯೋಗ (Election Commission)ದ ಆದೇಶದಂತೆ ಸಾಮಾಜಿಕ ಜಾಲತಾಣ ಎಕ್ಸ್‌ ರಾಜಕಾರಣಿಗಳು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಭಾಷಣವನ್ನು ಒಳಗೊಂಡಿರುವ ಕೆಲವು ಪೋಸ್ಟ್‌ಗಳನ್ನು ತೆಗೆದು ಹಾಕಿದೆ. ಆದರೆ ಎಲಾನ್‌ ಮಸ್ಕ್‌ ಒಡೆತನದ ಎಕ್ಸ್‌ ಈ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದೆ.

ಈ ಬಗ್ಗೆ ಎಕ್ಸ್‌ ಅಭಿಪ್ರಾಯ ವ್ಯಕ್ತಪಡಿಸಿ, “ಚುನಾವಣಾ ಆಯೋಗವು ಈ ಆದೇಶಗಳನ್ನು ಹಿಂತೆಗೆದುಕೊಳ್ಳಬೇಕುʼʼ ಎಂದು ಆಗ್ರಹಿಸಿದೆ. ʼʼಆದೇಶಗಳಿಗೆ ಅನುಸಾರವಾಗಿ ಪೋಸ್ಟ್‌ಗಳನ್ನು ತೆಗೆದು ಹಾಕಿದ್ದೇವೆ. ಆದಾಗ್ಯೂ ನಾವು ಈ ಕ್ರಮಗಳನ್ನು ಒಪ್ಪುವುದಿಲ್ಲʼʼ ಎಂದು ಹೇಳಿದೆ.

7 ಹಂತಗಳಲ್ಲಿ ಮತದಾನ

ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ ಏಪ್ರಿಲ್‌ 19ರಂದು ಆಯೋಜಿಸಲಾಗಿದೆ. ಮೊದಲ ಹಂತ: ಏಪ್ರಿಲ್‌ 19– 102 ಕ್ಷೇತ್ರಗಳು, 2ನೇ ಹಂತ: ಏಪ್ರಿಲ್‌ 26– 89 ಕ್ಷೇತ್ರಗಳು, 3ನೇ ಹಂತ: ಮೇ 7– 94 ಕ್ಷೇತ್ರಗಳು, 4ನೇ ಹಂತ: ಮೇ 13– 96 ಕ್ಷೇತ್ರಗಳು, 5ನೇ ಹಂತ: ಮೇ 20– 49 ಕ್ಷೇತ್ರಗಳು, 6ನೇ ಹಂತ: ಮೇ 25– 57 ಕ್ಷೇತ್ರಗಳು, 7ನೇ ಹಂತ: ಜೂನ್‌ 1– 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಹೊರಬೀಳಲಿದೆ.

97 ಕೋಟಿ ನೋಂದಣಿ ಮಾಡಿಕೊಂಡ ಮತದಾರರು

97 ಕೋಟಿ ಮತದಾರರು ಈ ನೋಂದಣಿ ಮಾಡಿಕೊಂಡಿದ್ದಾರೆ. 10.5 ಲಕ್ಷ ಮತಗಟ್ಟೆಗಳನ್ನು ರಚಿಸಲಾಗುತ್ತದೆ. 55 ಲಕ್ಷ ಮತಯಂತ್ರಗಳನ್ನು ಚುನಾವಣೆಗಾಗಿ ಬಳಸಿಕೊಳ್ಳುತ್ತೇವೆ. ಇದುವರೆಗೆ 100 ಅಧಿಕ ವಿಧಾನಸಭೆ ಚುನಾವಣೆಗಳನ್ನು ಯಶಸ್ವಿಯಾಗಿ ಆಯೋಜಿಸಿದ ಕೀರ್ತಿ ಚುನಾವಣಾ ಆಯೋಗದ್ದಾಗಿದೆ. ಈ ಬಾರಿ 18-19 ವರ್ಷದ 1.89 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 85 ವರ್ಷ ದಾಟಿದವರು ಮನೆಯಿಂದಲೇ ಮತದಾನ ಮಾಡಲಿದ್ದಾರೆ. ವಿಶೇಷ ಚೇತನರಿಗೂ ಕೂಡ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

ಪಾರದರ್ಶಕ ಚುನಾವಣೆ

ಚುನಾವಣೆ ಆಯೋಗವು ಪಾರದರ್ಶಕವಾಗಿ, ಸುಸಜ್ಜಿತವಾಗಿ ನಡೆಸಲು ಚುನಾವಣೆ ಆಯೋಗವು ಬದ್ಧವಾಗಿದೆ. ಇದಕ್ಕಾಗಿ, ದೇಶಾದ್ಯಂತ ಚುನಾವಣಾ ಆಯೋಗದ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಸೇರಿ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದಾರೆ. 

ಇದನ್ನೂ ಓದಿ: Assembly Elections: 4 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ; ಇಲ್ಲಿದೆ ವಿವರ

2014ರ ಲೋಕಸಭೆ ಚುನಾವಣೆಯು 9 ಹಂತಗಳಲ್ಲಿ ನಡೆದಿತ್ತು. ಮೇ 16ರಂದು ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು. ಮಾರ್ಚ್‌ 5ರಂದು ಚುನಾವಣೆ ಆಯೋಗವು ಚುನಾವಣೆ ದಿನಾಂಕ ಘೋಷಣೆ ಮಾಡಿತ್ತು. ಇನ್ನು, 2019ರಲ್ಲಿ 7 ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಏಪ್ರಿಲ್‌ 11ರಿಂದ ಮೇ 19ರ ಅವಧಿಯಲ್ಲಿ ಮತದಾನ ನಡೆದಿತ್ತು. ಮೇ 23ರಂದು ಫಲಿತಾಂಶ ಪ್ರಕಟವಾಗಿತ್ತ. ಚುನಾವಣೆ ಆಯೋಗವು ಮಾರ್ಚ್‌ 10ರಂದು ಚುನಾವಣೆ ದಿನಾಂಕ ಘೋಷಣೆ ಮಾಡಿತ್ತು.

Exit mobile version