Lok Sabha Election 2024: ನಾಳೆಯೇ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ; ಯಾರೆಲ್ಲ ಪ್ರಮುಖರು ಭಾಗಿ? - Vistara News

Lok Sabha Election 2024

Lok Sabha Election 2024: ನಾಳೆಯೇ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ; ಯಾರೆಲ್ಲ ಪ್ರಮುಖರು ಭಾಗಿ?

Lok Sabha Election 2024: ಹಲವು ತಿಂಗಳಿನಿಂದ ಕುತೂಹಲಕ್ಕೆ ಕಾರಣವಾಗಿದ್ದ ಸುಮಲತಾ ಅಂಬರೀಶ್‌ ಅವರ ನಡೆ ಕೊನೆಗೂ ಬಹಿರಂಗವಾಗಿದೆ. ಬಿಜೆಪಿ ಸೇರ್ಪಡೆಯಾಗುತ್ತಿರುವ ಬಗ್ಗೆ ಅವರು ಸುದ್ದಿಗೋಷ್ಠಿ ಕರೆದು ಘೋಷಣೆ ಮಾಡಿದ್ದರು. ಈಗ ಅವರ ಪಕ್ಷ ಸೇರ್ಪಡೆ ದಿನಾಂಕವು ಘೋಷಣೆಯಾಗಿದೆ. ಬಿಜೆಪಿಯ ಹಲವು ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.

VISTARANEWS.COM


on

Lok Sabha Election 2024 Sumalatha Ambareesh to join BJP tomorrow Who are the main participants
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್‌ (Sumalatha Ambareesh) ಅವರು ಸ್ಪರ್ಧೆಯಿಂದ ಹಿಂದೆ ಸರಿದು, ಬಿಜೆಪಿ ಸೇರ್ಪಡೆ ಬಗ್ಗೆ ಬುಧವಾರವಷ್ಟೇ ಘೋಷಿಸಿದ್ದರು. ಈಗ ಅವರ ಪಕ್ಷ ಸೇರ್ಪಡೆ ದಿನಾಂಕವೂ ನಿಗದಿಯಾಗಿದೆ. ನಾಳೆ (ಶುಕ್ರವಾರ) ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ಬೆಂಬಲಿಗರೊಂದಿಗೆ ಬಿಜೆಪಿಯನ್ನು ಸೇರಲಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುಮಲತಾ ಅಂಬರೀಶ್‌ ಅವರು ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ, ಆರ್.‌ ಅಶೋಕ್‌, ಮಾಜಿ ಸಿಎಂ ಬಿ.ಎಸ್‌. ಬಿ.ಎಸ್.‌ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.

ಮೋದಿಯನ್ನು ಮನಸಾರೆ ಹೊಗಳಿದ್ದ ಸುಮಲತಾ

ಬುಧವಾರ (ಮಾ. 3) ಸಭೆ ನಡೆಸಿ ಮಾತನಾಡಿದ್ದ ಸುಮಲತಾ ಅಂಬರೀಶ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮನಸಾರೆ ಹೊಗಳಿದ್ದರು. ಕಾಂಗ್ರೆಸ್‌ ಪಕ್ಷವನ್ನು ನನ್ನನ್ನು ತಿರಸ್ಕಾರ ಮಾಡಿದ್ದರೂ ಬಿಜೆಪಿ ಹಾಗೂ ಮೋದಿ ಅವರು ನನ್ನನ್ನು ಪುರಸ್ಕರಿಸಿದರು. ನನಗೆ ಎಲ್ಲಿಲ್ಲದ ಗೌರವವನ್ನು ಕೊಟ್ಟರು. ನಾನೊಬ್ಬ ಸ್ವತಂತ್ರ ಸಂಸದೆಯಾಗಿದ್ದರೂ ನನ್ನ ಕ್ಷೇತ್ರಕ್ಕೆ 4 ಸಾವಿರ ಕೋಟಿ ರೂಪಾಯಿ ಅನುದಾನವನ್ನು ನೀಡಿದರು. ಈ ಕಾರಣದಿಂದಲೇ ನಾನು ಬಿಜೆಪಿ ಸೇರ್ಪಡೆಯಾಗಲು ನಿರ್ಧಾರ ಮಾಡಿದ್ದೇನೆ. ಅಲ್ಲದೆ, ಈ ಬಾರಿಯ ಈ ಚುನಾವಣೆಯಿಂದ ಮಾತ್ರವೇ ಹಿಂದೆ ಸರಿಯುವುದಾಗಿ ಘೋಷಿಸುತ್ತಿದ್ದೇನೆ ಎಂದು ಹೇಳಿದ್ದರು.

ಕಳೆದ ಬಾರಿ ನಾನು ಐತಿಹಾಸಿಕವಾಗಿ ಗೆಲುವು ಸಾಧಿಸಿದರೂ ಈ ಬಾರಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇನೆ. ಬಿಜೆಪಿ ಜತೆ ಜೆಡಿಎಸ್‌ ಮೈತ್ರಿ ಆಗಿದೆ. ಮೈತ್ರಿ ಒಪ್ಪಂದದ ಪ್ರಕಾರ ಆ ಪಕ್ಷದವರಿಗೆ ಬಿಟ್ಟುಕೊಡಲಾಗಿದೆ ಎಂದು ಹೇಳಿದರು. ಅಲ್ಲದೆ, ನಾನೀಗ ಬಿಜೆಪಿ ಸೇರುತ್ತಿರುವುದರಿಂದ ಪಕ್ಷದ ನೀತಿಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕಿದೆ. ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಿಲ್ಲ. ಪಕ್ಷದ ಚೌಕಟ್ಟಿನೊಳಗೆ ಚರ್ಚೆ ಮಾಡಿ ಹೇಳಬೇಕಾಗುತ್ತದೆ ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಸಾಕಷ್ಟು ಮಾರ್ಗದರ್ಶನವನ್ನು ನೀಡಿದ್ದಾರೆ. ನನಗೆ ಯಾವ ಕೆಲಸ ಆಗಬೇಕಿದ್ದರೂ ಮಾಡಿಕೊಟ್ಟಿದ್ದಾರೆ. ಕ್ಷೇತ್ರದ ಜನರ ಸಲುವಾಗಿ ಬಿಜೆಪಿಯ ಯಾವುದೇ ಸಚಿವಾಲಯಕ್ಕೆ ಹೋದರೂ ನನ್ನ ಮನವಿಗೆ ಸ್ಪಂದಿಸಿದ್ದಾರೆ. ಆದರೆ, ಅಂಬರೀಶ್‌ ಅವರು ದಶಕಗಳ ಕಾಲ ಕಾಂಗ್ರೆಸ್‌ಗೆ ದುಡಿದರೂ ಅವರು ನಮ್ಮನ್ನು ಗೌರವಿಸಲೇ ಇಲ್ಲ. ಕಾಂಗ್ರೆಸ್‌ನಲ್ಲಿ ಅಂಬರೀಶ್‌ ಹಾಗೂ ನಮಗೆ ಅಪಮಾನ ಮಾಡಲಾಗಿದೆ. ನನನ್ನು ಬೇಡ ಎಂದ ಪಕ್ಷಕ್ಕೆ ನಾನು ಹೋಗಲಾರೆ. ಅದೇ ಕಾರಣಕ್ಕಾಗಿ ನನ್ನ ಕ್ಷೇತ್ರದ ಅಭಿವೃದ್ಧಿಗೆ ಬೆಂಗಾವಲಾಗಿ ನಿಂತ ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದ್ದರು.

ದೇಶಕ್ಕೆ ಬೇಕು ನರೇಂದ್ರ ಮೋದಿ

ಇಂದು ದೇಶಕ್ಕೆ ಉತ್ತಮ ಪ್ರಧಾನಿ ಸಿಕ್ಕಿದ್ದಾರೆ. ದೇಶ ಸಂಕಷ್ಟದ ಕಾಲದಲ್ಲಿದ್ದಾಗ ಅವರು ಅಧಿಕಾರವನ್ನು ವಹಿಸಿಕೊಂಡರು. ಆರ್ಥಿಕತೆಯಲ್ಲಿ ದೇಶವನ್ನು ಉತ್ತಮ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. ಇಷ್ಟು ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ನರೇಂದ್ರ ಮೋದಿ ಅವರ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕಿ ಇಲ್ಲ. ಅವರು ತಮ್ಮ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟಿದ್ದಾರೆ. ಅಂಥವರನ್ನು ನಾವು ಬೆಂಬಲಿಸಬೇಕು. ದೇಶಕ್ಕಾಗಿ ನಾವು ಮೋದಿ ಅವರನ್ನು ಆಯ್ಕೆ ಮಾಡಬೇಕು. ಅಲ್ಲದೆ, ನಾನು ಪಕ್ಷೇತರ ಸಂಸದೆಯಾಗಿದ್ದರೂ ಅವರು ನನಗೆ ಸಾಕಷ್ಟು ಗೌರವವನ್ನು ನೀಡಿದ್ದಾರೆ. ಮಂಡ್ಯದಲ್ಲಿ ಸ್ಪರ್ಧೆ ವಿಚಾರ ಬಂದಾಗ ನನ್ನನ್ನು ಕರೆಸಿಕೊಂಡು ಪಕ್ಷೇತರವಾಗಿ ಸ್ಪರ್ಧೆ ಮಾಡುವುದು ಬೇಡ ಎಂದು ಹೇಳಿದ್ದಾರೆ. ನನ್ನ ಕ್ಷೇತ್ರದ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಿಕೊಟ್ಟರು. ಒಬ್ಬ ಪ್ರಧಾನಿಯೇ ಹೀಗೆ ಗೌರವ ಕೊಡುವಾಗ ನನಗೆ ಇನ್ನೇನು ಬೇಕು? ಹೀಗಾಗಿ ಈ ತೀರ್ಮಾನವನ್ನು ಕೈಗೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್‌ ಹೇಳಿದ್ದರು.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಮಣಿಸಲು ಬಿಜೆಪಿ ಹೈಕಮಾಂಡ್‌ ಪ್ಲ್ಯಾನ್;‌ ಟಾರ್ಗೆಟ್‌ ಡಿಕೆಶಿ!

ಅಭಿಮಾನಿಗಳ ಬೇಸರದ ಬಗ್ಗೆ ಸುಮಲತಾ ಹೇಳಿದ್ದೇನು?

ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಕೆಲವರು ಅಸಮಾಧಾನವನ್ನು ಹೊರಹಾಕಿದರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅಂಬರೀಶ್‌, ಕೆಲವರು ಅಸಮಾಧಾನವನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ನಾನು ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ಮತ್ತೆ ಕೆಲವರು ಚಪ್ಪಾಳೆ, ಶಿಳ್ಳೆ ಹಾಕಿ ಸಂಭ್ರಮಿಸಿದರು. ಅದು ನಿಮಗೆ ಕೇಳಲಿಲ್ಲವೇ? ಎಂದು ಮರು ಪ್ರಶ್ನೆಯನ್ನು ಹಾಕಿದರು. ನೋಡಿ, ಯಾವುದೇ ವಿಷಯದಲ್ಲಿಯಾದರೂ ಯಾರನ್ನೂ ನೂರಕ್ಕೆ ನೂರು ಮೆಚ್ಚಿಸಲು ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರಿಗೆ ಈಗ ಅಸಮಾಧಾನ ಆಗಿರಬಹುದು. ಆದರೆ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಅಂಬರೀಶ್‌ ಅವರ ಅಭಿಮಾನಿಗಳು ಸದಾ ನನ್ನ ಬೆನ್ನ ಹಿಂದೆ ಇರಲಿದ್ದಾರೆ ಎಂಬ ನಂಬಿಕೆ ನನಗೆ ಇದೆ. ಈ ಹಿನ್ನೆಲೆಯಲ್ಲಿ ನಾನು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್‌ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Amit Shah: ಸ್ವಾತಂತ್ರ್ಯದ ಬಳಿಕ ಜಮ್ಮು-ಕಾಶ್ಮೀರವು ಭಾರತದ ಜತೆ ವಿಲೀನಗೊಂಡಿದೆ. ಹೀಗಿರುವಾಗ ಪಾಕ್‌ ಆಕ್ರಮಿತ ಕಾಶ್ಮೀರವು ನಮ್ಮದಾಗಿರದೆ ಇರಲು ಹೇಗೆ ಸಾಧ್ಯ? ಅದು ನಮ್ಮದೇ ಎಂದು ಎಎನ್‌ಐಗೆ ನೀಡಿದ ಸಂದರ್ಶನದ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

VISTARANEWS.COM


on

Amit Shah
Koo

ನವದೆಹಲಿ: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (PoK) ಜನ ದಂಗೆ ಎದ್ದಿದ್ದಾರೆ. ಪಾಕಿಸ್ತಾನ ಸರ್ಕಾರದ ವಿರುದ್ಧವೇ ಜನ ಸಮರ ಸಾರಿದ್ದು, ಭಾರತದ ಜತೆ ವಿಲೀನಗೊಳಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಇನ್ನು, ಪಾಕಿಸ್ತಾನದ ಬಳಿ ಅಣುಬಾಂಬ್‌ ಇದೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಹೇಳಿದ್ದಾರೆ. ಇದರ ಬೆನ್ನಲ್ಲೇ, “ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಎಂದಿಗೂ ಭಾರತದ್ದೇ. ಅದನ್ನು ಭಾರತದ ಜತೆ ವಿಲೀನಗೊಳಿಸುವುದು ನಮ್ಮ ಬದ್ಧತೆಯಾಗಿದೆ” ಎಂದು ಅಮಿತ್‌ ಶಾ (Amit Shah) ಪುನರುಚ್ಚರಿಸಿದ್ದಾರೆ.

ಎಎನ್‌ಐಗೆ ಅಮಿತ್‌ ಶಾ ಅವರು ಸಂದರ್ಶನ ನೀಡಿದ್ದು, ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಪಿಒಕೆ ಕುರಿತ ಪ್ರಶ್ನೆಗೆ ಅವರು, “ಪಾಕ್‌ ಆಕ್ರಮಿತ ಕಾಶ್ಮೀರವು ಭಾರತದ ಜತೆ ವಿಲೀನವಾಗಬೇಕು ಎಂಬುದು ಬಿಜೆಪಿ ಮಾತ್ರವಲ್ಲ, ಅದು ದೇಶದ, ಸಂವಿಧಾನದ ಬದ್ಧತೆಯಾಗಿದೆ. ಪಾಕ್‌ ಆಕ್ರಮಿತ ಕಾಶ್ಮೀರದ ಮೇಲೆ ಭಾರತದ ಹಕ್ಕಿದೆ. ಇದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಅದನ್ನು ಹೇಗೆ ಭಾರತದ ಜತೆ ವಿಲೀನಗೊಳಿಸಬೇಕು ಎಂಬುದೇ ನಮ್ಮ ಮುಂದಿರುವ ಪ್ರಶ್ನೆಯಾಗಿದೆ” ಎಂದು ತಿಳಿಸಿದರು.

ಫಾರೂಕ್‌ ಅಬ್ದುಲ್ಲಾಗೆ ಚಾಟಿ

ಪಾಕಿಸ್ತಾನವನ್ನು ಗೌರವಿಸಬೇಕು ಎಂದು ಹೇಳಿದ ಫಾರೂಕ್‌ ಅಬ್ದುಲ್ಲಾ ಅವರಿಗೆ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನ ಅಣುಬಾಂಬ್‌ ಹೊಂದಿದೆ. ಅದಕ್ಕೆ ಭಾರತ ಗೌರವ ನೀಡಬೇಕು ಎಂಬುದಾಗಿ ಫಾರೂಕ್‌ ಅಬ್ದುಲ್ಲಾ ಹಾಗೂ ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಅದರೆ, ಅಣ್ವಸ್ತ್ರ ಸಾಮರ್ಥ್ಯ ಹೊಂದಿರುವ, 130 ಕೋಟಿ ಜನಸಂಖ್ಯೆಯ ಭಾರತವು ತನ್ನ ಹಕ್ಕನ್ನು ಪ್ರತಿಪಾದಿಸಲು ಪಾಕಿಸ್ತಾನಕ್ಕೆ ಹೆದರಬೇಕೇ? ರಾಹುಲ್‌ ಗಾಂಧಿ ಅವರು ಇದಕ್ಕೆ ಉತ್ತರ ನೀಡಬೇಕು. ಪಾಕಿಸ್ತಾನವನ್ನು ಗೌರವಿಸಬೇಕಾ? ಪಾಕ್‌ ಆಕ್ರಮಿತ ಕಾಶ್ಮೀರವನ್ನು ಬಿಟ್ಟುಕೊಡಬೇಕಾ ಎಂಬುದರ ಕುರಿತು ರಾಹುಲ್‌ ಗಾಂಧಿ ಉತ್ತರಿಸಲಿ” ಎಂದರು.

ಮೋದಿಯೇ ಪ್ರಧಾನಿ

ನರೇಂದ್ರ ಮೋದಿ ಅವರು 75 ವರ್ಷ ದಾಟಿದ ಬಳಿಕ ಪ್ರಧಾನಿ ಸ್ಥಾನದಲ್ಲಿ ಮುಂದುವರಿಯಲ್ಲ ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನೀಡಿದ ಹೇಳಿಕೆಗೆ ಅಮಿತ್‌ ಶಾ ಪ್ರತಿಕ್ರಿಯಿಸಿದರು. “ಆಮ್‌ ಆದ್ಮಿ ಪಕ್ಷವು ದೇಶಾದ್ಯಂತ ಕೇವಲ 22 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಹಾಗಾಗಿ, ಅರವಿಂದ್‌ ಕೇಜ್ರಿವಾಲ್‌ ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ನರೇಂದ್ರ ಮೋದಿ ಅವರು 2029ರವರೆಗೂ ಪ್ರಧಾನಿಯಾಗಿ ಇರುತ್ತಾರೆ. ಅದರ ನಂತರವೂ ಅವರು ನಮ್ಮನ್ನು ಮುನ್ನಡೆಸಲಿದ್ದಾರೆ” ಎಂದು ಹೇಳಿದರು.

“ಕಳೆದ 10 ವರ್ಷಗಳಲ್ಲಿ ಮೋದಿ ಅವರು ದೇಶವನ್ನು ಏಳಿಗೆಯತ್ತ ಕೊಂಡೊಯ್ದಿದ್ದಾರೆ. ಇದೇ ಕಾರಣಕ್ಕಾಗಿ ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳುತ್ತಿದ್ದೇವೆ. ಪಶ್ಚಿಮ ಬಂಗಾಳದಲ್ಲಿಯೇ 24-30 ಕ್ಷೇತ್ರಗಳಲ್ಲಿ ಜಯ ನಮ್ಮದಾಗಲಿದೆ” ಎಂದರು. ಮೀಸಲಾತಿ ರದ್ದತಿ ಬಗ್ಗೆ ಮಾತನಾಡಿದ ಅವರು, “ಕಳೆದ 10 ವರ್ಷಗಳಿಂದ ನಮ್ಮ ಬಹುಮತದ ಸರ್ಕಾರ ಇದೆ. ಆದರೆ, ನಾವು ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Continue Reading

ರಾಜಕೀಯ

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ ಕೃಷ್ಣ ಜನ್ಮಭೂಮಿ ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ.

VISTARANEWS.COM


on

By

Himanta Biswa Sarma
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok sabha election) ಈ ಬಾರಿ ಹಲವು ನಿರ್ಣಾಯಕ ಕಾರಣಗಳಿಗಾಗಿ ಭಾರತೀಯ ಜನತಾ ಪಕ್ಷಕ್ಕೆ (BJP) ಸಂಸತ್ತಿನಲ್ಲಿ (Parliament) 400 ಸ್ಥಾನಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ (ayodhya) ರಾಮಮಂದಿರವನ್ನು (ram mandir) ನಿರ್ಮಿಸಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆದ ಅನಂತರ ಮಥುರಾದ (Mathura) ಕೃಷ್ಣ ಜನ್ಮಭೂಮಿ (Krishna Janmabhoomi) ಸ್ಥಳದಲ್ಲಿ ಮತ್ತು ವಾರಣಾಸಿಯ ಜ್ಞಾನವಾಪಿ ಮಸೀದಿಯ (Gyanvapi Mosque) ಸ್ಥಳದಲ್ಲಿ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರವನ್ನು (ಪಿಒಜೆಕೆ) ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತದಲ್ಲಿ ಸೇರಿಸಲಾಗುವುದು ಎಂದು ಹೇಳಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ ಎಂದು ದೂರಿದ್ದಾರೆ.

ಪಿಒಕೆ ನಮ್ಮದು ಎಂಬ ಚರ್ಚೆಯೇ ಆಗಿಲ್ಲ

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ, ಒಂದು ಕಾಶ್ಮೀರ ಭಾರತದಲ್ಲಿ ಮತ್ತು ಇನ್ನೊಂದು ಪಾಕಿಸ್ತಾನದಲ್ಲಿದೆ ಎಂದು ನಮಗೆ ಹೇಳಲಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹೊಂದಿದೆ ಎಂದು ನಮ್ಮ ಸಂಸತ್ತಿನಲ್ಲಿ ಎಂದಿಗೂ ಚರ್ಚಿಸಲಾಗಿಲ್ಲ, ಅದು ನಿಜವಾಗಿ ನಮ್ಮದು. ಇದೀಗ ಪಿಒಕೆಯಲ್ಲಿ ಪ್ರತಿದಿನ ಆಂದೋಲನ ನಡೆಯುತ್ತಿದ್ದು, ಜನರು ತಮ್ಮ ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಪಾಕಿಸ್ತಾನದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಮೋದಿಜೀ 400 ಸೀಟುಗಳನ್ನು ಪಡೆದರೆ ಪಿಒಕೆ ಕೂಡ ಭಾರತಕ್ಕೆ ಸೇರುತ್ತದೆ. ಇದು ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರವು ಮೀಸಲಾತಿಗೆ ಹೆಚ್ಚಿನ ಬಲವನ್ನು ನೀಡಲು ಕೆಲಸ ಮಾಡುತ್ತಿದೆ ಎಂದು ಪ್ರತಿಪಾದಿಸಿದ ಅವರು, ಪ್ರಧಾನಿ ಮೋದಿ ಸ್ವತಃ ಒಬಿಸಿ ವರ್ಗದಿಂದ ಬಂದವರು. ಬಿಜೆಪಿ 10 ವರ್ಷ ಅಧಿಕಾರದಲ್ಲಿದೆ. ನಮ್ಮ ಸರ್ಕಾರ ಮೀಸಲಾತಿಗೆ ಹೆಚ್ಚಿನ ಬಲ ನೀಡುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ಆರಂಭಿಸಿರುವ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಮತ್ತು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (ಪಿಒಜೆಕೆ) ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಇದು ಭಾರತವಾಗಿದೆ ಮತ್ತು ಯಾವಾಗಲೂ ಇರುತ್ತದೆ ಎಂದು ಪುನರುಚ್ಚರಿಸಿದ್ದಾರೆ.

ಪಿಒಕೆ ಜನರು ತಮ್ಮ ಪರಿಸ್ಥಿತಿಯನ್ನು ಹೋಲಿಸಿ ನೋಡಬೇಕು. ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುತ್ತಿರುವ ಜನರು ಸ್ಪಷ್ಟ ಪ್ರಗತಿಯನ್ನು ಸೂಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

ಪಾಕಿಸ್ತಾನದ ಅರೆಸೈನಿಕ ರೇಂಜರ್‌ಗಳು ಸೋಮವಾರ, ಪಿಒಜೆಕೆ ನಲ್ಲಿ ಕಾನೂನುಬಾಹಿರವಾಗಿ ನಿಯೋಜಿಸಲ್ಪಟ್ಟರು. ಹಲವಾರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದರು ಮತ್ತು ಇದರಿಂದ ಅನೇಕ ಮಂದಿ ತೀವ್ರವಾಗಿ ಗಾಯಗೊಂಡರು. ಈ ಘಟನೆಯು ಪ್ರದೇಶದ ಹಲವಾರು ಸ್ಥಳೀಯರನ್ನು ಗಾಯಗೊಳಿಸಿತು. ಸಾವಿರಾರು ಸ್ಥಳೀಯರು ವಿದ್ಯುತ್ ಬಿಲ್‌ಗಳ ಮೇಲಿನ ತೆರಿಗೆಗಳು, ಸಬ್ಸಿಡಿಗಳಲ್ಲಿ ಕಡಿತ ಮತ್ತು ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳ ಸವಲತ್ತುಗಳು ಮತ್ತು ಸವಲತ್ತುಗಳನ್ನು ಕೊನೆಗೊಳಿಸುವುದರ ವಿರುದ್ಧ ತಮ್ಮ ಬೇಡಿಕೆಗಳನ್ನು ಎತ್ತಲು ಬೀದಿಗಿಳಿದಿದ್ದರು.

Continue Reading

ದೇಶ

Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಭೇದ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?

Narendra Modi: ಮುಸ್ಲಿಂ ವಿರೋಧಿ ಎಂಬ ಹಣೆಪಟ್ಟಿಯಿಂದ ಸಂಪೂರ್ಣವಾಗಿ ಮುಕ್ತರಾಗುವಲ್ಲಿ ಏಕೆ ಯಶಸ್ವಿಯಾಗಿಲ್ಲ ಎಂಬ ಸಂದರ್ಶಕರ ಪ್ರಶ್ನೆಗೆ ಉತ್ತರಿಸಿದ ಮೋದಿ, ಇದು ಮುಸ್ಲಿಂ ಎಂಬ ಪ್ರಶ್ನೆಯಲ್ಲ. 2002ರ ನಂತರ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ನಡೆಯಿತು. ನಮ್ಮ ಮನೆಯ ಸುತ್ತಮುತ್ತ ಎಲ್ಲರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರು. ನಮ್ಮ ಮನೆಯಲ್ಲೂ ಈದ್‌ ಆಚರಿಸಲಾಗುತ್ತಿತ್ತು. ಈದ್‌ ಸಂದರ್ಭದಲ್ಲಿ ನಮ್ಮ ಮನೆಗಳಲ್ಲಿ ಅಡುಗೆ ಮಾಡುತ್ತಿರಲಿಲ್ಲ. ಎಲ್ಲಾ ಮುಸ್ಲಿಮರ ಮನೆಗಳಿಂದ ಆಹಾರ ಬರುತ್ತಿತ್ತು. ನಾನು ಅಂತಹ ವ್ಯವಸ್ಥೆಯಲ್ಲೇ ಬೆಳೆದಿದ್ದು ಎಂದು ಸ್ಪಷ್ಟನೆ ಕೊಟ್ಟರು.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಮುಸ್ಲಿಂ ವಿರೋಧಿ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಮೋದಿ ಟಾಂಗ್‌ ಕೊಟ್ಟಿದ್ದು, ಹಿಂದೂ ಮುಸ್ಲಿಂ ಅಂತ ತಾರತಮ್ಯ ಮಾಡಿದ ದಿನ ನಾನು ರಾಜಕೀಯ ಬದುಕಿಗೆ ಅನರ್ಹನಾಗುತ್ತೇನೆ. ನಾನು ನನ್ನ ಜೀವನದಲ್ಲಿ ಎಂದಿಗೂ ಹಿಂದೂ-ಮುಸ್ಲಿಂ(Hindu-Muslim) ಎಂದು ಭೇದ ಮಾಡೋದಿಲ್ಲ ಎಂಬುದು ನನ್ನ ಬದುಕಿನ ಧ್ಯೇಯ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ಎಂದಿಗೂ ಹಿಂದೂ ಮುಸ್ಲಿಂ ಎಂದು ಹೇಳುವುದಿಲ್ಲ. ಹಿಂದು ಮುಸ್ಲಿಂ ಅಂತ ಹೇಳಿಕೊಂಡು ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಜೀವಕ್ಕೆ ಅರ್ಹನಾದ ವ್ಯಕ್ತಿಯಾಗುವುದಿಲ್ಲ. ನಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ ಎಂದರು. ಮುಸ್ಲಿಂ ವಿರೋಧಿ ಎಂಬ ಹಣೆಪಟ್ಟಿಯಿಂದ ಸಂಪೂರ್ಣವಾಗಿ ಮುಕ್ತರಾಗುವಲ್ಲಿ ಏಕೆ ಯಶಸ್ವಿಯಾಗಿಲ್ಲ ಎಂಬ ಸಂದರ್ಶಕರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಮುಸ್ಲಿಂ ಎಂಬ ಪ್ರಶ್ನೆಯಲ್ಲ. 2002ರ ನಂತರ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ನಡೆಯಿತು. ನಮ್ಮ ಮನೆಯ ಸುತ್ತಮುತ್ತ ಎಲ್ಲರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರು. ನಮ್ಮ ಮನೆಯಲ್ಲೂ ಈದ್‌ ಆಚರಿಸಲಾಗುತ್ತಿತ್ತು. ಈದ್‌ ಸಂದರ್ಭದಲ್ಲಿ ನಮ್ಮ ಮನೆಗಳಲ್ಲಿ ಅಡುಗೆ ಮಾಡುತ್ತಿರಲಿಲ್ಲ. ಎಲ್ಲಾ ಮುಸ್ಲಿಮರ ಮನೆಗಳಿಂದ ಆಹಾರ ಬರುತ್ತಿತ್ತು. ನಾನು ಅಂತಹ ವ್ಯವಸ್ಥೆಯಲ್ಲೇ ಬೆಳೆದಿದ್ದು. ನನ್ನ ಅನೇಕ ಸ್ನೇಹಿತರು ಮುಸ್ಲಿಮರೇ ಆಗಿದ್ದಾರೆ ಎಂದು ಸ್ಪಷ್ಟನೆ ಕೊಟ್ಟರು.

ರಾಜಸ್ಥಾನದಲ್ಲಿ ಸಾರ್ವಜನಿಕ ಭಾಷಣದ ವೇಳೆ ರಾಹುಲ್‌ ಗಾಂಧಿಯವರ ಸಂಪತ್ತಿನ ಹಂಚಿಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, “ಮೊದಲು ಅವರ ಸರ್ಕಾರ ಇದ್ದಾಗ ದೇಶದ ಸಂಪತ್ತಿನ ಮೇಲೆ ಮೊದಲ ಹಕ್ಕು ಮುಸ್ಲಿಮರದ್ದು ಎಂದು ಹೇಳಿದ್ದರು. ಹಾಗಿದ್ದರೆ ನಿಮ್ಮ ಸಂಪತ್ತನ್ನು ಕಿತ್ತು ಯಾರಿಗೆ ನೀಡಲು ಕಾಂಗ್ರೆಸ್‌ ಬಯಸುತ್ತಿದೆ ಎಂದು ತಿಳಿಯಿತೇ? ಯಾರಿಗೆ ಅಧಿಕ ಮಕ್ಕಳಿರುತ್ತಾರೋ, ಯಾರು ಒಳನುಸುಳುಕೋರರು ಆಗಿರುತ್ತಾರೋ ಅಂತವರಿಗೆ ಹಂಚುತ್ತಾರೆ. ನಿಮಗಿದು ಒಪ್ಪಿಗೆಯೇ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

ಕಾಂಗ್ರೆಸ್‌ನವರಿಗೆ ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣು ಬಿದ್ದಿದೆ. ಮಾತೆಯರು, ಭಗಿನಿಯರ ಚಿನ್ನವನ್ನು ದೋಚುವ ದುರುದ್ದೇಶ ಇವರದ್ದು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲʼʼ ಎಂದು ಮೋದಿ ಹೇಳಿದ್ದರು. ಇದಾದ ಬಳಿಕ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಮುಸ್ಲಿಮರ ವಿರುದ್ಧವಾಗಿದೆ ಎಂಬುದನ್ನು ಸಾಬೀತು ಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿತ್ತು.

Continue Reading

ಪ್ರಮುಖ ಸುದ್ದಿ

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

Kangana Ranaut: ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

VISTARANEWS.COM


on

Kangana Ranaut
Koo

ಬೆಂಗಳೂರು: ಬಾಲಿವುಡ್ ನಟಿ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಲೋಕಸಭಾ (Lok Sabha Election) ಅಭ್ಯರ್ಥಿ ಕಂಗನಾ ರಣಾವತ್​ (Kangana Ranaut) ಮೇ 14 ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

ಕ್ವೀನ್ ಸಿನಿಮಾದ ನಟಿ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 98 ಲಕ್ಷ ರೂ ಮೌಲ್ಯದ ಬಿಎಂಡಬ್ಲ್ಯು, 58 ಲಕ್ಷ ರೂ ಮೌಲ್ಯದ ಮರ್ಸಿಡಿಸ್ ಬೆಂಜ್ ಮತ್ತು 3.91 ಕೋಟಿ ರೂ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಅವರಲ್ಲಿದೆ. ಇದಲ್ಲದೆ, ಅವರು 53,000 ರೂ.ಗಳ ಮೌಲ್ಯದ ವೆಸ್ಪಾ ಸ್ಕೂಟರ್ ಅನ್ನು ಹೊಂದಿದ್ದಾರೆ. ಅಫಿಡವಿಟ್ ಪ್ರಕಾರ, ಅವರು 2 ಲಕ್ಷ ರೂ ನಗದು ಮತ್ತು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದಾರೆ, 17 ಕೋಟಿ ರೂ.ಗಳ ಸಾಲವಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

2022-23ರ ಆರ್ಥಿಕ ವರ್ಷದಲ್ಲಿ ಅವರ ಆದಾಯ 4 ಕೋಟಿ ರೂ.ಗಳಾಗಿದ್ದರೆ, ಹಿಂದಿನ ವರ್ಷ ಅವರು 12.3 ಕೋಟಿ ರೂಪಾಯಿ ಸಂಪಾದಿಸಿದ್ದಾರೆ. ಕಂಗನಾ ರಣಾವತ್ ಅವರ ಅಫಿಡವಿಟ್ ಪ್ರಕಾರ, ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಅವರು ಎಂಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಚಂಡೀಗಢದ ಖಾಸಗಿ ಶಾಲೆಯಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರುವುದು ತನ್ನ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಎಂದು ಅವರು ಘೋಷಿಸಿದ್ದಾರೆ.

Continue Reading
Advertisement
Tips For Healthy Skin
ಆರೋಗ್ಯ2 mins ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ8 mins ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest15 mins ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ28 mins ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ39 mins ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ40 mins ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

SBI Rates
ವಾಣಿಜ್ಯ1 hour ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

EPF Withdrawal Rule
ಮನಿ ಗೈಡ್1 hour ago

EPF Withdraw Rule: ಪಿಎಫ್‌ ಮುಂಗಡ ಹಣ ಪಡೆಯುವುದು ಈಗ ಮತ್ತಷ್ಟು ಸುಲಭ; ಹೊಸ ಬದಲಾವಣೆಯ ಸಂಪೂರ್ಣ ಮಾಹಿತಿ

IND vs AUS Test
ಕ್ರೀಡೆ2 hours ago

IND vs AUS Test: ಈ ಬಾರಿಯ ಬಾರ್ಡರ್– ಗಾವಸ್ಕರ್ ಟೆಸ್ಟ್​ ಸರಣಿಯಲ್ಲಿ ಭಾರತೀಯರಿಗೆ ಸಿಗಲಿದೆ ವಿಶೇಷ ಆಸನ ವ್ಯವಸ್ಥೆ

Karnataka Weather
ಕರ್ನಾಟಕ2 hours ago

Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ13 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ15 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌