Lok Sabha Election 2024: ಕಾಂಗ್ರೆಸ್‌ನಿಂದ 'ತೆರಿಗೆ ಭಯೋತ್ಪಾದನೆ' ಅಸ್ತ್ರ; ಬಿಜೆಪಿ ಕಟ್ಟಬೇಕಾದ ತೆರಿಗೆ ಲೆಕ್ಕ ಬಿಚ್ಚಿಟ್ಟ ಸಿಎಂ - Vistara News

Lok Sabha Election 2024

Lok Sabha Election 2024: ಕಾಂಗ್ರೆಸ್‌ನಿಂದ ‘ತೆರಿಗೆ ಭಯೋತ್ಪಾದನೆ’ ಅಸ್ತ್ರ; ಬಿಜೆಪಿ ಕಟ್ಟಬೇಕಾದ ತೆರಿಗೆ ಲೆಕ್ಕ ಬಿಚ್ಚಿಟ್ಟ ಸಿಎಂ

Lok Sabha Election 2024: ಕೇಂದ್ರ ಸರ್ಕಾರವು ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆ ಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ಯಡಿಯೂರಪ್ಪ ಡೈರಿಗಳಾಗಲಿ, ನರೇಂದ್ರ ಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ ‘’ಬಿರ್ಲಾ-ಸಹಾರಾ’’ ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Lok Sabha Election 2024 Tax terrorism weapon from Congress CM reveals tax payable by BJP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವ ಆರೋಪದ ಮೇಲೆ 1823 ಕೋಟಿ ರೂಪಾಯಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ಜಾರಿ ಮಾಡಿರುವ ಕ್ರಮಕ್ಕೆ ಕಾಂಗ್ರೆಸ್‌ ಕೆಂಡಾಮಂಡಲವಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಲಾಗುತ್ತಿದೆ. ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು, ಇದನ್ನು ‘ತೆರಿಗೆ ಭಯೋತ್ಪಾದನೆ’ಗೆ ಹೋಲಿಕೆ ಮಾಡಿದ್ದಾರೆ.

ಕೇಂದ್ರ ಸರ್ಕಾರವು ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಪ್ರಕಟಣೆಯಲ್ಲೇನಿದೆ?

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ಧ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ.

ಬಿಜೆಪಿಯು 4263 ಕೋಟಿ ರೂಪಾಯಿ ಪಾವತಿಸಬೇಕು!

ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವ ಆರೋಪ ಹೊರಿಸಿ ರೂ. 1823 ಕೋಟಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದೆ. 2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ ರೂ.4.5 ಲಕ್ಷ ಮತ್ತು ವಿಳಾಸವೇ ಇಲ್ಲದ 1297 ದಾನಿಗಳಿಂದ ರೂ.42 ಕೋಟಿ ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ. ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ 4263 ಕೋಟಿ ರೂಪಾಯಿಯನ್ನು ಪಾವತಿಸಬೇಕಾಗಿದೆ.

ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು?

ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅತಿ ಕ್ರಿಯಾಶಾಲಿಯಾಗಿರುವ ಐಟಿ ಇಲಾಖೆಯು ಟಿಎಂಸಿ, ಸಿಪಿಐ ಸೇರಿದಂತೆ ಬೇರೆ ವಿರೋಧ ಪಕ್ಷಗಳ ಮೇಲೆಯೂ ತೆರಿಗೆ ಭಯೋತ್ಪಾದನೆಯ ಅಸ್ತ್ರ ಪ್ರಯೋಗ ಮಾಡಿದೆ. ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು ಎನ್ನುವುದನ್ನು ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ.

ಕಣ್ಣಿಗೆ ಬೀಳದ ಡೈರಿಗಳು

ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆ ಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ಯಡಿಯೂರಪ್ಪ ಡೈರಿಗಳಾಗಲಿ, ನರೇಂದ್ರ ಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ ‘’ಬಿರ್ಲಾ-ಸಹಾರಾ’’ ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ?

ತೆರಿಗೆ ವಂಚನೆಯ ಸುಳ್ಳು ಆರೋಪ

ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್ ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಆಡಳಿತಾರೂಢ ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವ ಜತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ.

ಕಮಿಷನ್ ಹಣ ಎಷ್ಟು?

ಕಳೆದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂಪಾಯಿಯಷ್ಟು ಬ್ಯಾಂಕ್ ಸಾಲವನ್ನು‌ ಮನ್ನಾ ಮಾಡಿರುವ ಬಿಜೆಪಿ ಸರ್ಕಾರ ಅವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗುತ್ತದೆ.

ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್ ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ.

ಇದನ್ನೂ ಓದಿ: Lok Sabha Election 2024: ಡಿಕೆ ಬ್ರದರ್ಸ್‌ ಕೋಟೆಗೆ ಲಗ್ಗೆ ಇಡಲಿರುವ ಅಮಿತ್ ಶಾ; ಏ. 2ಕ್ಕೆ ರೋಡ್‌ ಶೋ

ಬಿಜೆಪಿಯಲ್ಲಿದ್ದುಕೊಂಡು ಜನರ ಹಣ ಲೂಟಿ ಮಾಡಬಹುದು

ಬಿಜೆಪಿ ಅಂದ್ರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್‌ ಮಷಿನ್‌ ಆಗಿದೆ. ಭ್ರಷ್ಟರು ತಾವು ಮಾಡಿದ ಮಹಾಪಾಪಗಳ ಮೇಲಿನ ತನಿಖೆಯಿಂದ ತಪ್ಪಿಸಿಕೊಳ್ಳಬೇಕಾದರೆ, ಶಿಕ್ಷೆಯಿಂದ ಪಾರಾಗಬೇಕಾದರೆ ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂತಾನೆ ಶುದ್ಧವಾಗುತ್ತದೆ. ಅಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು. ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ. ಯಾವ ತನಿಖಾ ಸಂಸ್ಥೆಯೂ ಹುಡುಕಿಕೊಂಡು ಬರುವುದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮತ್ತು ಅಧಿಕಾರವನ್ನು ಉಳಿಸಿಕೊಂಡಿದ್ದೇ ಇಂತಹ ಕಳ್ಳ-ಖದೀಮರ ಲೂಟಿಯ ಹಣದಿಂದ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕದಲ್ಲಿ ನಡೆಸುತ್ತಾ ಬಂದ ಆಪರೇಷನ್ ಕಮಲ.

400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಎದೆ ತಟ್ಟಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳನ್ನು ಹಣಿಯಲು ಈ ರೀತಿಯ ಅಕ್ರಮ ಕೃತ್ಯಗಳಿಗೆ ಇಳಿದಿರುವುದನ್ನು ನೋಡಿದರೆ ಅವರಿಗೆ ಗೋಡೆ ಮೇಲಿನ ಬರಹ ಸ್ಪಷ್ಟವಾಗಿ ಕಾಣತೊಡಗಿದೆ ಎಂದರ್ಥ. ಅರಸನ ಮೈಮೇಲಿನ ಬಟ್ಟೆ ಒಂದೊಂದಾಗಿ ಕಳಚಿ ಬೀಳುತ್ತಿದೆ. ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ ಮತ್ತು ಅದರ ತಥಾಕಥಿತ ನಾಯಕರೆಲ್ಲರೂ ಬೆತ್ತಲೆಯಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Supriya Sule:ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ.

VISTARANEWS.COM


on

Supriya Sule
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಇದೀಗ ಇದರ ಬೆನ್ನಲ್ಲೇ ಭಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಮತಯಂತ್ರ(EVM)ಗಳನ್ನು ಕೂಡಿಟ್ಟಿದ್ದ ಸ್ಟ್ರಾಂಗ್‌ ರೂಂ(Strong room)ನ ಸಿಸಿಟಿವಿ ಕ್ಯಾಮೆರಾ ಸುಮಾರು 45ನಿಮಿಷಗಳ ಕಾಲ ಸ್ವಿಚ್‌ ಆಫ್‌ ಆಗಿತ್ತು ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಸುಪ್ರಿಯಾ ಸುಳೆ(Supriya Sule) ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಸುಳೆ ಆರೋಪವೇನು?

ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ. ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು, ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸ್ಪಷ್ಟನೆ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

EC ಪ್ರತಿಕ್ರಿಯೆ ಏನು?

ಸುಪ್ರಿಯಾ ಸುಳೆ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಕವಿತಾ ದ್ವಿವೇದಿ, ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಇವಿಎಂಗಳನ್ನು ಇರಿಸಲಾಗಿರುವ ಗೋದಾಮಿನಲ್ಲಿ ಸಿಸಿಟಿವಿ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ, ಎಲ್ಲಾ ಡೇಟಾ ಸುರಕ್ಷಿತವಾಗಿದೆ, ಸ್ವಲ್ಪ ಸಮಯದವರೆಗೆ ಮಾನಿಟರ್‌ ಅನ್ನು ಮುಚ್ಚಲಾಗಿತ್ತು. ಅದರ ಹೊರತಾಗಿ ಎಲ್ಲಾ ದತ್ತಾಂಶಗಳು ಸುರಕ್ಷಿತವಾಗಿದೆ ಎಂದು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಬಾರಾಮತಿಯಲ್ಲಿ ಕ್ಷೇತ್ರದಲ್ಲಿ ಪವಾರ್‌ ವರ್ಸಸ್‌ ಪವಾರ್‌ ಸೆಣಸಾಟ ಇದ್ದು, ಇದೊಂದು ಪ್ರತಿಷ್ಠೆಯ ಕಣವಾಗಿದೆ. ಮೇ 7ರಂದು ಮತದಾನ ನಡೆದಿದ್ದು, ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಪರಸ್ಪರ ಎದುರಾಳಿಗಳಾಗಿ ಕಣದಲ್ಲಿದ್ದಾರೆ.

Continue Reading

Lok Sabha Election 2024

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

CM Siddaramaiah: ರಾಜ್ಯದಲ್ಲಿ ನನಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಆದರೆ, ನನ್ನನ್ನು ಸ್ಟಾರ್‌ ಪ್ರಚಾರಕನನ್ನಾಗಿ ಮಾಡಿಯಾಗಿದೆ. ಜತೆಗೆ ಹೈಕಮಾಂಡ್‌ನವರು ಪ್ರಚಾರಕ್ಕೆ ಬರುವಂತೆ ಕರೆದಿದ್ದಾರೆ. ಪ್ರಚಾರಕ್ಕೆ ಹೋಗಲು ವೈಯಕ್ತಿಕವಾಗಿ ನನಗೆ ಇಷ್ಟ ಇಲ್ಲ ಎಂದು ಹೊರ ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹೋಗುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಹೈಕಮಾಂಡ್‌ ಒತ್ತಾಯ ಇರುವುದರಿಂದ ಪ್ರಚಾರಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ ಎಂಬ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.

VISTARANEWS.COM


on

I dont want to go to other states for Lok Sabha Election 2024 campaign for Congress says CM Siddaramaiah
Koo

ಮೈಸೂರು: ಹೊರ ರಾಜ್ಯಗಳ ಲೋಕಸಭಾ ಚುನಾವಣೆಗೆ (Lok Sabha Election 2024) ನನ್ನನ್ನು ಸ್ಟಾರ್ ಪ್ರಚಾರಕನನ್ನಾಗಿ ಮಾಡಿದ್ದಾರೆ. ಸಾಮಾನ್ಯವಾಗಿ ನಾನು ಹೊರ ರಾಜ್ಯಗಳಿಗೆ ಹೋಗಲ್ಲ. ನನಗೆ ಅದು ಇಷ್ಟವೂ ಆಗುವುದಿಲ್ಲ. ಇಲ್ಲೇ ಬೇಕಾದಷ್ಟು ಕೆಲಸ ಇದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ನನಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಆದರೆ, ನನ್ನನ್ನು ಸ್ಟಾರ್‌ ಪ್ರಚಾರಕನನ್ನಾಗಿ ಮಾಡಿಯಾಗಿದೆ. ಜತೆಗೆ ಹೈಕಮಾಂಡ್‌ನವರು ಪ್ರಚಾರಕ್ಕೆ ಬರುವಂತೆ ಕರೆದಿದ್ದಾರೆ. ಪ್ರಚಾರಕ್ಕೆ ಹೋಗಲು ವೈಯಕ್ತಿಕವಾಗಿ ನನಗೆ ಇಷ್ಟ ಇಲ್ಲ ಎಂದು ಹೊರ ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹೋಗುವ ವಿಚಾರವಾಗಿ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ನಮ್ಮ ಸರ್ಕಾರ ಸುಭದ್ರವಾಗಿದೆ. ಹೊರಗೂ, ಒಳಗೂ ಭಿನ್ನಮತ ಇಲ್ಲ. ಒಳಜಗಳ ಇದ್ದರೆ ಲೋಕಸಭೆ ಚುನಾವಣೆಯಲ್ಲಿ ಇಷ್ಟೊಂದು ಒಗ್ಗಟ್ಟಿನಿಂದ ಕೆಲಸ ಮಾಡಲು ಆಗುತ್ತಿತ್ತಾ? ಸರ್ಕಾರ ಸುಭದ್ರವಾಗಿದೆ. ಇನ್ನೂ ಏಕನಾಥ್ ಶಿಂಧೆ ಸರ್ಕಾರ ಇರುತ್ತದೆಯೋ? ಇಲ್ಲವೋ ನೋಡಿಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕುಮಾರಸ್ವಾಮಿಗೆ ಸಿಎಂ ತಿರುಗೇಟು

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರದ್ದು ಯಾವಾಗಲೂ ಹಿಟ್ ಆ್ಯಂಡ್ ರನ್ ಕೇಸ್. ಅವರ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ಹೇಳಿದರು.

ಇದನ್ನೂ ಓದಿ: HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

ಎಂಎಲ್‌ಸಿ ಚುನಾವಣೆಯಲ್ಲಿ ಉತ್ತಮ ವಾತಾವರಣ

ಎಂಎಲ್‌ಸಿ ಚುನಾವಣೆಯಲ್ಲಿ ನಮಗೆ ವಾತಾವರಣ ಉತ್ತಮವಾಗಿದೆ. ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿ ಘೋಷಿಸಿದ್ದೇವೆ. ಇದರಿಂದ ಮತ ಕೇಳಲು ಸಮಯ ಸಿಕ್ಕಿದೆ. ಮೈತ್ರಿಯಿಂದ ನಮಗೆ ಎಫೆಕ್ಟ್ ಆಗಲ್ಲ. ಪಾರ್ಲಿಮೆಂಟ್ ಚುನಾವಣೆಯಲ್ಲೂ ಮೈತ್ರಿ ಆಗಿತ್ತು. ಆದರೆ, ನಮಗೆ ಯಾವುದೇ ಪರಿಣಾಮ ಆಗಲಿಲ್ಲ. ಈ ಚುನಾವಣೆಯಲ್ಲಿ ಪದವೀಧರರು, ಶಿಕ್ಷಕರು, ಮತದಾರರು ರಾಜಕೀಯವಾಗಿ ಪ್ರಬುದ್ಧರಿದ್ದಾರೆ. ಯಾವುದು ಸರಿ, ಸರಿಯಲ್ಲ ಎಂಬುದನ್ನು ತೀರ್ಮಾನ ಮಾಡುತ್ತಾರೆ. ಕೇಂದ್ರ ಸರ್ಕಾರ 10 ವರ್ಷದಲ್ಲಿ ಏನೂ ಮಾಡಿಲ್ಲ. ನಮ್ಮ ಸರ್ಕಾರದ ಸಾಧನೆಗಳನ್ನು ತುಲನೆ ಮಾಡುವ ಶಕ್ತಿ ಮತದಾರರಿಗೆ ಇದೆ ಎಂದು ಹೇಳಿದರು.


Continue Reading

ಪ್ರಮುಖ ಸುದ್ದಿ

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

PM Narendra Modi: ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

VISTARANEWS.COM


on

pm narendra modi nomination
Koo

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ (Lok Sabha Election 2024) ನಾಮಪತ್ರ (Narendra modi nomination) ಸಲ್ಲಿಸಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಈ ಸಂದರ್ಭದಲ್ಲಿ ಅವರೊಂದಿಗೆ ಇದ್ದರು. ನಿನ್ನೆ ಪ್ರಧಾನಿ ಮೋದಿ ವಾರಾಣಸಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದರು.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

ಪಂಡಿತ್ ಗಣೇಶ್ವರ ಶಾಸ್ತ್ರಿ: ಬ್ರಾಹ್ಮಣ ಸಮುದಾಯದ ಸದಸ್ಯ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದವರು.

ಬೈಜನಾಥ್ ಪಟೇಲ್: ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು.

ಲಾಲ್‌ಚಂದ್ ಕುಶ್ವಾಹಾ: ಲಾಲ್‌ಚಂದ್ ಕುಶ್ವಾಹಾ ಕೂಡ ಒಬಿಸಿ ಸಮುದಾಯದವರು.

ಸಂಜಯ್ ಸೋಂಕರ್: ಇವರು ದಲಿತ ಸಮುದಾಯದಿಂದ ಬಂದವರು.

“… ನಮಗೆ ಬೆಳಿಗ್ಗೆ ಮಾಹಿತಿ ಸಿಕ್ಕಿತು. ಪಕ್ಷದ ಕಾರ್ಯಕರ್ತನಾಗಿ ನನಗೆ ವಹಿಸಿದ ಕೆಲಸಗಳನ್ನು ಮಾಡುತ್ತಿದ್ದೇನೆ. ನನಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ…, ”ಎಂದು ಸೋಂಕರ್ ಮಾಧ್ಯಮಗಳಿಗೆ ತಿಳಿಸಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ, ಪ್ರಧಾನಿ ಮೋದಿಯವರ ಪ್ರತಿಪಾದಕರು ಕೃಷಿ ವಿಜ್ಞಾನಿ, ಬಿಎಚ್‌ಯು ಮಹಿಳಾ ಮಹಾವಿದ್ಯಾಲಯದ ಮಾಜಿ ಪ್ರಾಂಶುಪಾಲರು, ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ವಾರಣಾಸಿ ಘಾಟ್‌ಗಳ ಮುಖ್ಯ ದಹನಕಾರ ಹೀಗೆ ವಿವಿಧ ಹಿನ್ನೆಲೆಗಳಿಂದ ಬಂದವರಾಗಿದ್ದರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ನಾಮಪತ್ರ ಸಲ್ಲಿಕೆಯ ಸಮಯ ನಿಗದಿ ಹೇಗೆ?

ಪ್ರಧಾನಿ ಮೋದಿ ನಾಮಪತ್ರವನ್ನು ಬೆಳಗ್ಗೆ 11:40 ರಿಂದ ಮಧ್ಯಾಹ್ನ 12:00 ರ ಅವಧಿಯಲ್ಲಿ ಸಲ್ಲಿಸುತ್ತಿದ್ದಾರೆ. ಈ ಸಮಯವು ಮಂಗಳಕರವಾದ ಪುಷ್ಯ ನಕ್ಷತ್ರ ಮತ್ತು ಗಂಗಾ ಸಪ್ತಮಿಯೊಂದಿಗೆ ಹೊಂದಿಕೆಯಾಗುತ್ತದೆ. ಜ್ಯೋತಿಷಿ ಪಂ. ರಿಷಿ ದ್ವಿವೇದಿ ಅವರ ಪ್ರಕಾರ, ಈ ತಾರಾ ಜೋಡಣೆಯು ಶುಭ ಮತ್ತು ಇಷ್ಟಾರ್ಥಗಳ ನೆರವೇರಿಕೆಯನ್ನು ಸೂಚಿಸುತ್ತದೆ. ಪುಷ್ಯ ನಕ್ಷತ್ರದ ಸಮಯದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವುದು ಅವುಗಳ ಯಶಸ್ವಿ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ನಂಬಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Continue Reading

ಪ್ರಮುಖ ಸುದ್ದಿ

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

PM Narendra Modi: ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರಿಗೆ ನಾಲ್ಕು ಪ್ರತಿಪಾದಕರು (proposers) ಬೇಕು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ದಿನಗಳಿಂದಲೂ ಮೋದಿಯವರಿಗೆ ಆಪ್ತರಾದವರು ಎನ್ನಲಾಗಿದೆ.

VISTARANEWS.COM


on

pm narendra modi nomination varanasi
Koo

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ (Lok Sabha Election 2024) ನಾಮಪತ್ರ ಸಲ್ಲಿಸುತ್ತಿದ್ದಾರೆ. ರಾಜನಾಥ್ ಸಿಂಗ್, ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರು, 12 ರಾಜ್ಯಗಳ ಸಿಎಂಗಳು ಮತ್ತು ಎನ್‌ಡಿಎ ಮೈತ್ರಿಕೂಟದ ನಾಯಕರು ಅವರೊಂದಿಗೆ ಭಾಗವಹಿಸುತ್ತಿದ್ದಾರೆ.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರಿಗೆ ನಾಲ್ಕು ಪ್ರತಿಪಾದಕರು (proposers) ಬೇಕು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ದಿನಗಳಿಂದಲೂ ಮೋದಿಯವರಿಗೆ ಆಪ್ತರಾದವರು ಎನ್ನಲಾಗಿದೆ.

ಪಂಡಿತ್ ಗಣೇಶ್ವರ ಶಾಸ್ತ್ರಿ: ಬ್ರಾಹ್ಮಣ ಸಮುದಾಯದ ಸದಸ್ಯ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದವರು.

ಬೈಜನಾಥ್ ಪಟೇಲ್: ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು.

ಲಾಲ್‌ಚಂದ್ ಕುಶ್ವಾಹಾ: ಲಾಲ್‌ಚಂದ್ ಕುಶ್ವಾಹಾ ಕೂಡ ಒಬಿಸಿ ಸಮುದಾಯದವರು.

ಸಂಜಯ್ ಸೋಂಕರ್: ಇವರು ದಲಿತ ಸಮುದಾಯದಿಂದ ಬಂದ ಹಿರಿಯ ನಾಯಕ.

ನಾಮಪತ್ರ ಸಲ್ಲಿಕೆಯ ಸಮಯ ನಿಗದಿ ಹೇಗೆ?

ಪ್ರಧಾನಿ ಮೋದಿ ನಾಮಪತ್ರವನ್ನು ಬೆಳಗ್ಗೆ 11:40 ರಿಂದ ಮಧ್ಯಾಹ್ನ 12:00 ರ ಅವಧಿಯಲ್ಲಿ ಸಲ್ಲಿಸುತ್ತಿದ್ದಾರೆ. ಈ ಸಮಯವು ಮಂಗಳಕರವಾದ ಪುಷ್ಯ ನಕ್ಷತ್ರ ಮತ್ತು ಗಂಗಾ ಸಪ್ತಮಿಯೊಂದಿಗೆ ಹೊಂದಿಕೆಯಾಗುತ್ತದೆ. ಜ್ಯೋತಿಷಿ ಪಂ. ರಿಷಿ ದ್ವಿವೇದಿ ಅವರ ಪ್ರಕಾರ, ಈ ತಾರಾ ಜೋಡಣೆಯು ಶುಭ ಮತ್ತು ಇಷ್ಟಾರ್ಥಗಳ ನೆರವೇರಿಕೆಯನ್ನು ಸೂಚಿಸುತ್ತದೆ. ಪುಷ್ಯ ನಕ್ಷತ್ರದ ಸಮಯದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವುದು ಅವುಗಳ ಯಶಸ್ವಿ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ನಂಬಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Continue Reading
Advertisement
Job News
ಉದ್ಯೋಗ40 mins ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

kurkure divorce viral news
ವೈರಲ್ ನ್ಯೂಸ್41 mins ago

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Supriya Sule
ದೇಶ50 mins ago

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Road Accident
ಕ್ರೈಂ1 hour ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

HD Revanna released from jail Revanna Go straight to HD Deve Gowda house
ಕ್ರೈಂ1 hour ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್1 hour ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ1 hour ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

pm narendra modi nomination
ಪ್ರಮುಖ ಸುದ್ದಿ2 hours ago

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Viral Video
Latest2 hours ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ10 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ20 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ20 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ21 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ21 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ21 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌