ಲೋಕಸಭಾ ಚುನಾವಣೆ 2024ರ (Lok Sabha Election 2024) 3ನೇ ಹಂತದ (3rd phase) ಮತದಾನ (voting) ಮೇ 7ರಂದು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 95 ಸ್ಥಾನಗಳಿಗೆ ನಡೆಯಲಿದೆ. ಈ ಬಾರಿ ಕಣದಲ್ಲಿರುವ ಹಲವು ಪ್ರಮುಖ ನಾಯಕರ ಅದೃಷ್ಟ ಪರೀಕ್ಷೆ ನಡೆಯಲಿದೆ.
ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಂಡಾಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ( KS Eshwarappa), ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia), ಡಿಂಪಲ್ ಯಾದವ್ (Dimple Yadav), ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮತ್ತು ಸುಪ್ರಿಯಾ ಸುಳೆ (Supriya Sule) ಸೇರಿದ್ದಾರೆ.
2024 ರ ಲೋಕಸಭಾ ಚುನಾವಣೆಯ 3ನೇ ಹಂತದಲ್ಲಿ ಸ್ಪರ್ಧಿಸುವ ಪ್ರಮುಖ ಪಕ್ಷಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ಸಮಾಜವಾದಿ ಪಕ್ಷ (ಎಸ್‌ಪಿ), ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸೇರಿವೆ.
ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
ಅಮಿತ್ ಶಾ
ಕೇಂದ್ರ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಗಾಂಧಿನಗರದಿಂದ ಎರಡನೇ ಬಾರಿಗೆ ಕಣಕ್ಕಿಳಿದಿರುವ ಅಮಿತ್ ಶಾ ಅವರಿಗೆ ಕಾಂಗ್ರೆಸ್‌ನ ಸೋನಾಲ್ ಪಟೇಲ್ ಸ್ಪರ್ಧೆ ನೀಡುತ್ತಿದ್ದಾರೆ. 1989ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಅಜೇಯವಾಗಿದೆ. 2019ರ ಚುನಾವಣೆಯಲ್ಲಿ ಅಮಿತ್ ಶಾ ಅವರು 5.55 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ಸಿ.ಜೆ. ಚಾವ್ಡಾ ಅವರನ್ನು ಸೋಲಿಸಿದ್ದರು.
ಡಿಂಪಲ್ ಯಾದವ್
ಎಸ್‌ಪಿ ಅಭ್ಯರ್ಥಿ ಡಿಂಪಲ್ ಯಾದವ್ ಅವರು 2024ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ‘ಮೈನ್‌ಪುರಿ’ಯಿಂದ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರ ಸಮಾಜವಾದಿ ಪಕ್ಷದ ಭದ್ರಕೋಟೆ. ಡಿಂಪಲ್ ಯಾದವ್ ಅವರು ಎಸ್ಪಿ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರ ಪತ್ನಿ. 2022ರಲ್ಲಿ ಎಸ್‌ಪಿ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಮರಣದ ಅನಂತರ ಅವರ ಸೊಸೆ ಡಿಂಪಲ್ ಯಾದವ್ ಅವರು ಉಪಚುನಾವಣೆಯಲ್ಲಿ ಇಲ್ಲಿಂದ ಗೆದ್ದಿದ್ದರು. ಡಿಂಪಲ್ ಯಾದವ್ ಅವರು ಮೂರು ಬಾರಿ ಸಂಸದರಾಗಿದ್ದಾರೆ. ಇವರ ವಿರುದ್ಧ ಬಿಜೆಪಿ ಅಭ್ಯರ್ಥಿ ಜೈವೀರ್ ಸಿಂಗ್ ಕಣದಲ್ಲಿ ಇದ್ದಾರೆ.
ಜ್ಯೋತಿರಾದಿತ್ಯ ಸಿಂಧಿಯಾ
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು 2024ರ ಲೋಕಸಭಾ ಚುನಾವಣೆಯ 3ನೇ ಹಂತದಲ್ಲಿ ಮೇ 7ರಂದು ನಡೆಯಲಿರುವ ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ನ ರಾವ್ ಯದ್ವೇಂದ್ರ ಸಿಂಗ್ ಅವರ ವಿರುದ್ಧ ಕಣದಲ್ಲಿ ಇದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿಯ ಕೃಷ್ಣ ಪಾಲ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಸೋಲಿಸಿದ್ದರು. ಆ ಬಳಿಕ ಸಿಂಧಿಯಾ ಬಿಜೆಪಿ ಸೇರಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ವಿದಿಶಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಮಧ್ಯಪ್ರದೇಶದಲ್ಲಿ ಬಹುಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರು ವಿದಿಶಾ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ವಿರುದ್ಧ ಶಿವರಾಜ್ ಸಿಂಗ್ ಚೌಹಾಣ್ ಸ್ಪರ್ಧಿಸುತ್ತಿದ್ದಾರೆ.
ಸುಪ್ರಿಯಾ ಸುಳೆ
ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರು ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಪವಾರ್ vs ಪವಾರ್ ಈ ಬಾರಿಯ ವಿಶೇಷ. ಬಿಜೆಪಿ ನೇತೃತ್ವದ ಎನ್‌ಡಿಎ ಸೇರಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಈಗ ಸುಪ್ರಿಯಾ ಸುಳೆ ವಿರುದ್ಧ ಸ್ಪರ್ಧಿಸಿದ್ದಾರೆ. ಹಾಗಾಗಿ ಫಲಿತಾಂಶ ಭಾರಿ ಕುತೂಹಲ ಮೂಡಿಸಿದೆ. ಹಾಲಿ ಸಂಸದೆ ಸುಪ್ರಿಯಾ ಸುಳೆ ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು.
ಕರ್ನಾಟಕದಲ್ಲಿ ಬಿಜೆಪಿ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ಅವರು ಈ ಬಾರಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕೆ ಇಳಿದಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿಸ ಸಂಸದ ಬಿ ವೈ ರಾಘವೇಂದ್ರ ಸ್ಪರ್ಧಿಸುತ್ತಿದ್ದಾರೆ.
3ನೇ ಹಂತದ ಚುನಾವಣೆ ನಡೆಯಲಿರುವ ಕ್ಷೇತ್ರಗಳು
ಅಸ್ಸಾಂ: ಧುಬ್ರಿ, ಕೊಕ್ರಜಾರ್, ಬರ್ಪೇಟಾ, ಗೌಹಾಟಿ, ಬಿಹಾರದ ಝಂಜರ್ಪುರ್, ಸುಪೌಲ್, ಅರಾರಿಯಾ, ಮಾಧೆಪುರ, ಖಗಾರಿಯಾ
ಛತ್ತೀಸ್‌ಗಢ: ಸರ್ಗುಜಾ, ರಾಯ್‌ಗಢ, ಜಾಂಜ್‌ಗೀರ್-ಚಂಪಾ, ಕೊರ್ಬಾ, ಬಿಲಾಸ್‌ಪುರ್, ದುರ್ಗ್, ರಾಯ್‌ಪುರ್.
ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು
ಗೋವಾ: ಉತ್ತರ ಗೋವಾ, ದಕ್ಷಿಣ ಗೋವಾ, ಗುಜರಾತ್ ನ ಕಚ್ಛ್, ಬನಸ್ಕಾಂತ, ಪಟಾನ್, ಮಹೇಶಾನಾ, ಸಬರ್ಕಾಂತ, ಗಾಂಧಿನಗರ, ಅಹಮದಾಬಾದ್ ಪೂರ್ವ, ಅಹಮದಾಬಾದ್ ಪಶ್ಚಿಮ, ಸುರೇಂದ್ರನಗರ, ರಾಜ್‌ಕೋಟ್, ಪೋರಬಂದರ್, ಜಾಮ್‌ನಗರ, ಜುನಾಗಢ, ಅಮ್ರೇಲಿ, ಭಾವನಗರ, ಆನಂದ್, ಖೇಡಾ, ಪಂಚಮಹಲ್, ದಾಹೋದ್, ವಡೋದರ, ಛೋಟಾ ಉದಯಪುರ, ಭರೂಚ್, ಭರೂಚ್, ನವಸಾರಿ, ವಲ್ಸಾದ್
ಕರ್ನಾಟಕ: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ
ಮಧ್ಯಪ್ರದೇಶ: ಬೇತುಲ್, ಮೊರೆನಾ, ಭಿಂಡ್, ಗ್ವಾಲಿಯರ್, ಗುಣ, ಸಾಗರ್, ವಿದಿಶಾ, ಭೋಪಾಲ್, ರಾಜ್‌ಗಢ್, ಬೇತುಲ್
ಮಹಾರಾಷ್ಟ್ರ: ಬಾರಾಮತಿ, ರಾಯಗಢ, ಧರಾಶಿವ, ಲಾತೂರ್ (SC), ಸೋಲಾಪುರ (SC), ಮಾಧಾ, ಸಾಂಗ್ಲಿ, ರತ್ನಗಿರಿ-ಸಿಂಧುದುರ್ಗ, ಕೊಲ್ಲಾಪುರ, ಹತ್ಕನಂಗಲೆ
ಉತ್ತರ ಪ್ರದೇಶ: ಸಂಭಾಲ್, ಹತ್ರಾಸ್, ಆಗ್ರಾ (SC), ಫತೇಪುರ್ ಸಿಕ್ರಿ, ಫಿರೋಜಾಬಾದ್, ಮೈನ್‌ಪುರಿ, ಇಟಾಹ್, ಬುಡೌನ್, ಅಯೋನ್ಲಾ, ರಾಯ್ ಬರೇಲಿ
ಪಶ್ಚಿಮ ಬಂಗಾಳ: ಮಾಲ್ಡಾ ಉತ್ತರ, ಮಾಲ್ಡಾ ದಕ್ಷಿಣ, ಜಂಗಿಪುರ, ಮುರ್ಷಿದಾಬಾದ್
ಕಣದಲ್ಲಿ 1,351 ಅಭ್ಯರ್ಥಿಗಳು
ಮೇ 7ರಂದು ನಡೆಯಲಿರುವ ಮೂರನೇ ಹಂತದ ಲೋಕಸಭೆ ಚುನಾವಣೆಯಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 1,351 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.
ಇದನ್ನೂ ಓದಿ: Amethi Unrest: ಕಾಂಗ್ರೆಸ್ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ
ಅತೀ ಹೆಚ್ಚು ನಾಮಪತ್ರ
ಮೂರನೇ ಹಂತದಲ್ಲಿ ಗುಜರಾತ್ 26 ಸಂಸದೀಯ ಕ್ಷೇತ್ರಗಳಿಂದ ಗರಿಷ್ಠ 658 ನಾಮನಿರ್ದೇಶನಗಳನ್ನು ಹೊಂದಿತ್ತು, ಅನಂತರ ಮಹಾರಾಷ್ಟ್ರವು 11 ಸ್ಥಾನಗಳಿಂದ 519 ನಾಮನಿರ್ದೇಶನಗಳನ್ನು ಹೊಂದಿದೆ. ಮಹಾರಾಷ್ಟ್ರದ ಒಸ್ಮಾನಾಬಾದ್ ಕ್ಷೇತ್ರಕ್ಕೆ ಗರಿಷ್ಠ 77 ನಾಮಪತ್ರಗಳು ಬಂದಿದ್ದು, ಛತ್ತೀಸ್‌ಗಢದ ಬಿಲಾಸ್‌ಪುರ ಕ್ಷೇತ್ರಕ್ಕೆ 68 ನಾಮಪತ್ರಗಳು ಬಂದಿವೆ ಎಂದು ಚುನಾವಣಾ ಸಮಿತಿ ತಿಳಿಸಿದೆ.