Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು! - Vistara News

Lok Sabha Election 2024

Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

Lok Sabha Election 2024: ಜನರು ಬಿಸಿಲನ್ನೂ ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಇದೇ ವೇಳೆ ತುಮಕೂರಿನಲ್ಲಿ ಮತ ಚಲಾಯಿಸಿ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮತ್ತೊಂದು ಕಡೆ ಕೊಡಗಿನ ವಿರಾಜಪೇಟೆಯಲ್ಲಿಯೂ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

VISTARANEWS.COM


on

Lok Sabha Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು/ ಕೊಡಗು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನಕ್ಕೆ (First phase of polling) ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರು ಬಿಸಿಲನ್ನೂ ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಇದೇ ವೇಳೆ ತುಮಕೂರಿನಲ್ಲಿ ಮತ ಚಲಾಯಿಸಿ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮತ್ತೊಂದು ಕಡೆ ಕೊಡಗಿನ ವಿರಾಜಪೇಟೆಯಲ್ಲಿಯೂ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಇಹಲೋಕ ತ್ಯಜಿಸಿದ್ದಾರೆ.

ತುಮಕೂರಲ್ಲಿ ಹೃದಯಾಘಾತಕ್ಕೆ ವ್ಯಕ್ತಿ ಬಲಿ

ತುಮಕೂರು ನಗರದ ಎಸ್.ಎಸ್.ಪುರಂನಲ್ಲಿ ಮತ ಚಲಾಯಿಸಿ ಮನೆಗೆ ಬಂದಿದ್ದ ರಮೇಶ್ (54) ಎಂಬುವವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Lok Sabha Election 2024 Two die of heart attack in Tumakuru and Kodagu

ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದ ರಮೇಶ್ ಅವರು ಶುಕ್ರವಾರ ಬೆಳಗ್ಗೆ ನಗರದ ಎಸ್.ಎಸ್. ಪುರಂನಲ್ಲಿರುವ ಎಸ್‌ವಿಕೆ ಸ್ಕೂಲ್‌ನಲ್ಲಿರುವ ಮತಗಟ್ಟೆ ಸಂಖ್ಯೆ 149ರಲ್ಲಿ ಪತ್ನಿಯ ಜತೆ ಹೋಗಿ ಮತ ಚಲಾಯಿಸಿ ಬಂದಿದ್ದರು. ಮನೆಗೆ ಬಂದವರಿಗೆ ತೀವ್ರ ಎದೆ ನೋವು ಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೊಡಗಿನಲ್ಲಿ ಮತದಾನಕ್ಕೆ ನಿಂತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ವೀರಾಜಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮದ ಮತಗಟ್ಟೆ ಸಮೀಪ ಮತ ಹಾಕಲು ಸರತಿ ಸಾಲಿನಲ್ಲಿ ನಿಂತಿದ್ದ ಪದಾರ್ಥಿ ಮನೋಹರ (58) ಎಂಬುವವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

Lok Sabha Election 2024 Two die of heart attack in Tumakuru and Kodagu
ಪದಾರ್ಥಿ ಮನೋಹರ

ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election 2024: ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ; 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳ ಸ್ಪರ್ಧೆ

Lok Sabha Election 2024: ಮತದಾನ ಕೇಂದ್ರಗಳಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದ್ದು, ಮೇ 17ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.

ಮತದಾನ ನಡೆಯುವ 14 ಕ್ಷೇತ್ರಗಳು ಯಾವುವು?

ಮೇ 7 ರಂದು ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಿದ್ದು, ಶಾಂತಿಯುತ ಚುನಾವಣೆ ನಡೆಸಲು ಸುಮಾರು 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಘಟಾನುಘಟಿಗಳು ಸ್ಪರ್ಧಿಸಿರುವ‌ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಒಟ್ಟು 2.59 ಕೋಟಿ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.

227 ಅಭ್ಯರ್ಥಿಗಳು ಸ್ಪರ್ಧೆ

ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ
ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206
ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತಿ ಹೆಚ್ಚು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ.

ಮತಗಟ್ಟೆಗಳಲ್ಲಿ ಮತದಾರರಿಗೆ ಮೂಲಸೌಕರ್ಯ

ತಾಪಮಾನ ಹೆಚ್ಚಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಆಯೋಗ ಮತದಾನದ ದಿನದಂದು ಮತಗಟ್ಟೆಯಲ್ಲಿ ಮತದಾರರಿಗಾಗಿ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಒಆರ್‌ಎಸ್ ಜ್ಯೂಸ್, ಕುಳಿತುಕೊಳ್ಳಲು ಕಾಯ್ದಿರಿಸಿದ ಕೊಠಡಿಗಳು, ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಆಂಬ್ಯುಲೆನ್ಸ್ ವಾಹನಗಳು ಮುಂತಾದ ಹಲವು ಮೂಲ ಸೌಲಭ್ಯಗಳನ್ನು ಒದಗಿಸಿದೆ. ಇನ್ನು ದೃಷ್ಟಿಹೀನ ಮತದಾರರ ಸಹಾಯಕ್ಕಾಗಿ ಬ್ರೈಲ್ ಸೌಲಭ್ಯವುಳ್ಳ ಇವಿಎಂ ಗಳನ್ನು ಮತಗಟ್ಟೆಗಳಲ್ಲಿ ಅಳವಡಿಸಲಾಗಿದೆ.

ಇದನ್ನೂ ಓದಿ | ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಮತದಾರರ ಗುರುತಿನ ಚೀಟಿ ಕಡ್ಡಾಯ

ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್‌ ಸ್ಲಿಪ್‌ ಜತೆಗೆ ಮತದಾರರ ಗುರುತಿನ ಚೀಟಿ,
ಆಧಾರ್‌ಕಾರ್ಡ್, ನರೇಗಾ ಜಾಬ್‌ ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್‌ಬುಕ್, ಕಾರ್ಮಿಕ ಸಚಿವರು ನೀಡುವ
ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೆಸೆನ್ಸ್, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಪಿಂಚಣಿಯ ದಾಖಲೆ,
ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ
ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದು.

Continue Reading

ಕರ್ನಾಟಕ

Lok Sabha Election: ನಾಳೆ ವೋಟಿಂಗ್; ನಿಮ್ಮ ‘ಮತ’ ಕಳವಾದರೆ ಏನು ಮಾಡಬೇಕು? ಇಲ್ಲಿದೆ ಉತ್ತರ

Lok Sabha Election 2024: ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆಯಲಿದೆ. ಹಾಗಾಗಿ, ಇನ್ನೂ ಮತದಾರರಲ್ಲಿ (voters) ಹಲವು ಪ್ರಶ್ನೆಗಳು, ಗೊಂದಲಗಳು ಕಾಡುತ್ತಿರುತ್ತವೆ. ಇದರಲ್ಲಿ ನಮ್ಮ ಮತವನ್ನು (vote) ಬೇರೆಯವರು ಚಲಾವಣೆ ಮಾಡಿದರೆ ಏನಾಗುತ್ತದೆ, ಈ ಸಂದರ್ಭದಲ್ಲಿ ನಾವು ಏನು ಮಾಡಬೇಕು ಎಂಬುದು ಕೂಡ ಒಂದು.

ದೇಶದ ಬಹುದೊಡ್ಡ ಚುನಾವಣೆಗಾಗಿ ಚುನಾವಣಾ ಅಧಿಕಾರಿಗಳು (election officers), ವಿವಿಧ ಪಕ್ಷಗಳ ಅಭ್ಯರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಈಗಾಗಲೇ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದರಲ್ಲಿ ಬಹುದೊಡ್ಡ ಪಾಲುದಾರ ಪ್ರತಿಯೊಬ್ಬ ಮತದಾರ. ಅವರ ಅಧಿಕಾರ, ಹಕ್ಕನ್ನು ಬೇರೆಯವರು ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

Voter Slip

ಬೇರೆಯವರು ನಮ್ಮ ಮತ ಚಲಾಯಿಸಬಹುದೇ?

ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ನಿಮ್ಮ ಮತವನ್ನು ಟೆಂಡರ್ಡ್ ಬ್ಯಾಲೆಟ್ ಪೇಪರ್ ಎಂದು ಗುರುತಿಸಲಾಗುತ್ತದೆ ಮತ್ತು ಪ್ರತ್ಯೇಕವಾಗಿ ಇರಿಸಲಾಗುತ್ತದೆ.

ತಕ್ಷಣ ದೂರು ನೀಡಿ

ಮತಗಟ್ಟೆ ಅಧಿಕಾರಿಯು ಮತಗಟ್ಟೆಯೊಳಗೆ ಬರುವಾಗ ನಿಮ್ಮ ಮತವು ಈಗಾಗಲೇ ಚಲಾವಣೆಯಾಗಿದೆ ಎಂದು ತಿಳಿಸಿದರೆ ಭಾರತೀಯ ಚುನಾವಣಾ ಕಾಯಿದೆ 1961ರ ಅಡಿಯಲ್ಲಿ ಯಾರಾದರೂ ನಿಮ್ಮ ಹೆಸರಿನಲ್ಲಿ ಮತ ಚಲಾಯಿಸಿದರೆ ತಕ್ಷಣ ಸ್ಥಳದಲ್ಲಿರುವ ಪ್ರಿಸೈಡಿಂಗ್ ಅಧಿಕಾರಿಗೆ ದೂರು ನೀಡಿ. ಆಗ ಟೆಂಡರ್ಡ್ ಮತವನ್ನು ಚಲಾಯಿಸಲು ಕಾನೂನು ನಿಮಗೆ ಅವಕಾಶ ನೀಡುತ್ತದೆ.

ಚುನಾವಣಾ ನಿಯಮಗಳ ನಿಯಮ 49ಪಿ ಪ್ರಕಾರ ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ನಿಮಗೆ ನೀಡಲಾಗುತ್ತದೆ ಮತ್ತು ಟೆಂಡರ್ ಮಾಡಿದ ಮತಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸಹಿ ಮಾಡಬೇಕಾಗುತ್ತದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಇದನ್ನು ಮಾಡಲು ಸಾಧ್ಯವಿಲ್ಲ. ಟೆಂಡರ್ ಮಾಡಿದ ಮತಪತ್ರವು ಬ್ಯಾಲೆಟ್ ಯೂನಿಟ್‌ನಲ್ಲಿ ಪ್ರದರ್ಶಿಸಲಾದ ಬ್ಯಾಲೆಟ್ ಪೇಪರ್‌ನಂತೆಯೇ ಇರುತ್ತದೆ. ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ಪ್ರಿಸೈಡಿಂಗ್ ಅಧಿಕಾರಿಗೆ ಮರಳಿ ನೀಡಬೇಕು.

ಹೇಗೆ ಮತ ಹಾಕುವುದು?

ಬಾಣದ ಕ್ರಾಸ್ ಮಾರ್ಕ್ ರಬ್ಬರ್ ಸ್ಟಾಂಪ್ ಸಹಾಯದಿಂದ ನಿಮ್ಮ ಅಭ್ಯರ್ಥಿಯ ಆಯ್ಕೆಯನ್ನು ಗುರುತಿಸಿದ ಅನಂತರ ನೀವು ಟೆಂಡರ್ ಮಾಡಿದ ಮತಪತ್ರವನ್ನು ಪ್ರಿಸೈಡಿಂಗ್ ಅಧಿಕಾರಿಗೆ ಹಸ್ತಾಂತರಿಸಬೇಕು. ಅವರು ಅದನ್ನು ಪ್ರತ್ಯೇಕ ಕವರ್‌ನಲ್ಲಿ ಇಡುತ್ತಾರೆ.

ಚಾಲೆಂಜ್ಡ್ ವೋಟ್

ಟೆಂಡರ್ ಮಾಡಿದ ಬ್ಯಾಲೆಟ್ ಪೇಪರ್ ಅನ್ನು ಚಾಲೆಂಜ್ಡ್ ವೋಟ್ ಎಂದೂ ಕರೆಯುತ್ತಾರೆ. ಬಳಿಕ ನಿಮ್ಮ ಜಾಗದಲ್ಲಿ ಯಾರು ಮತ ಹಾಕಿದ್ದಾರೆ ಎಂಬುದನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ಅದನ್ನು ತೆಗೆದು ನಿಮ್ಮ ಮತವನ್ನು ಎಣಿಕೆಗೆ ಹಾಕಲಾಗುತ್ತದೆ.

ಗುರುತಿನ ಪುರಾವೆ ನೀಡಬೇಕು

ಮತದಾರರಾಗಿ ನಿಮ್ಮ ಗುರುತಿನ ಬಗ್ಗೆ ಯಾವುದೇ ಅಭ್ಯರ್ಥಿಯ ಪೋಲಿಂಗ್ ಏಜೆಂಟ್‌ ಪ್ರಶ್ನಿಸಿದರೆ ಚುನಾವಣಾ ಅಧಿಕಾರಿಗಳು ನಿಮ್ಮ ಗುರುತಿನ ಪುರಾವೆಯನ್ನು ಕೇಳುತ್ತಾರೆ. ಇದಕ್ಕಾಗಿ ನೀವು ಎಪಿಕ್ ಅಥವಾ ಪಾಸ್‌ಪೋರ್ಟ್, ರೇಷನ್ ಕಾರ್ಡ್‌ನಂತಹ ಯಾವುದೇ ದಾಖಲೆಯನ್ನು ಹೊಂದಿರಬೇಕು. ಆದರೂ ಅವರು ಸವಾಲು ಮಾಡಿ ಮತದಾನಕ್ಕೆ ಅನುಮತಿ ನೀಡದೇ ಇದ್ದರೆ ಪ್ರಿಸೈಡಿಂಗ್ ಅಧಿಕಾರಿಯಿಂದ ಲಿಖಿತ ದೂರನ್ನು ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ.

ಎಷ್ಟು ಮತದಾರರು?

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸುಮಾರು 97 ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಭಾರತದಲ್ಲಿ 96.88 ಕೋಟಿ ಜನರು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ, ಇದು ವಿಶ್ವದ ಅತಿದೊಡ್ಡ ಮತದಾರರ ಪೂಲ್ ಆಗಿದೆ. ಆಯೋಗದ ಪ್ರಕಾರ, 2019 ರ ಲೋಕಸಭಾ ಚುನಾವಣೆ ಬಳಿಕ ನೋಂದಾಯಿತ ಮತದಾರರ ಸಂಖ್ಯೆ ಶೇ. 6ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Continue Reading

ಕರ್ನಾಟಕ

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Voter list: ಕರ್ನಾಟಕ ಸೇರಿ ದೇಶದ ಹಲವೆಡೆ ಮಂಗಳವಾರ ಮತದಾನ ನಡೆಯಲಿದ್ದು, ಮತದಾರರಾರೂ ತಮ್ಮ ಹಕ್ಕು ಚಲಾವಣೆಗೆ ಉತ್ಸಾಹಿತರಾಗಿದ್ದಾರೆ. ಯಾವುದಕ್ಕೂ ಮತಗಟ್ಟೆಗೆ ಹೊರಡುವ ಮುನ್ನ ಮತದಾನ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಒಮ್ಮೆ ಚೆಕ್ ಮಾಡುವುದು ಉತ್ತಮ. ಮನೆಯಲ್ಲೇ ಕುಳಿತು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ.

VISTARANEWS.COM


on

Lok Sabha Election-2024
Koo

ಬೆಂಗಳೂರು: ಲೋಕಸಭಾ ಚುನಾವಣೆಯ (lok sabha election) ಮೂರನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ ಮಂಗಳವಾರವೇ ನಡೆಯಲಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲೊಮ್ಮೆ (voter list) ನಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಉತ್ತಮ. ಇದಕ್ಕಾಗಿ ಮತಗಟ್ಟೆಗೆ (election booth) ಹೋಗಬೇಕಾದ ಅವಶ್ಯಕತೆ ಈಗಿಲ್ಲ. ಸ್ಮಾರ್ಟ್ ಫೋನ್ (smart phone) ಕೈಯಲ್ಲಿ ಇದ್ದರೆ ಸಾಕು ಮನೆಯಲ್ಲೇ ಕುಳಿತು ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ನಲ್ಲಿರುವ ಆನ್ ಲೈನ್ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ ನಡೆಸಿ ಮತಗಟ್ಟೆಯ ಕುರಿತಾದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈಗ ಅವಕಾಶವಿದೆ.

ಹೇಗೆ ನೋಡುವುದು?

ಸ್ಮಾರ್ಟ್ ಫೋನ್ ನಲ್ಲಿ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ಅನ್ನು ತೆರೆಯಿರಿ. ಬಳಿಕ ಅಲ್ಲಿ ಕೇಳಿರುವ ಅಗತ್ಯ ಮಾಹಿತಿಗಳನ್ನು ನಮೂದಿಸಿ. ಮುಖ್ಯವಾಗಿ ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿದ ಬಳಿಕ ಮತದಾರರ ಪಟ್ಟಿಯಲ್ಲಿ ದಾಖಲಾಗಿರುವಂತೆ ನಿಮ್ಮ ಪೂರ್ಣ ಹೆಸರು ಮತ್ತು ತಂದೆಯ ಹೆಸರನ್ನು ನಮೂದಿಸಬೇಕು. ಬಳಿಕ ಹುಟ್ಟಿದ ದಿನಾಂಕವನ್ನು ಹಾಕಿ ಎಪಿಕ್ (ಎಪಿಐಸಿ) ಸಂಖ್ಯೆಯನ್ನು ಹಾಕಿದ ಬಳಿಕ ಸರ್ಚ್ ಬಟನ್ ಒತ್ತಿದರೆ ಫಲಿತಾಂಶ ಪುಟ ತೆರೆದುಕೊಳ್ಳುತ್ತದೆ.

Lok Sabha Election-2024

ಏನು ಮಾಹಿತಿ ?

ನಿಮ್ಮ ಹೆಸರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಇದ್ದರೆ ಎಪಿಕ್ ಸಂಖ್ಯೆ, ವಿಳಾಸ ಮತ್ತು ಮತಗಟ್ಟೆಯ ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯವಾಗುತ್ತದೆ. ಮತಗಟ್ಟೆಯ ಸ್ಥಳವನ್ನು ಮ್ಯಾಪ್ ಮೂಲಕ ಕ್ಲಿಕ್ ಮಾಡಿ ನೋಡಲು ಅವಕಾಶವೂ ಇಲ್ಲಿ ಇದೆ.

ಎಸ್ ಎಂಎಸ್ ಮೂಲಕ ಪರಿಶೀಲಿಸಿ

ವೆಬ್ ಪೋರ್ಟಲ್ ಮಾತ್ರವಲ್ಲ ಈ ಎಲ್ಲ ಮಾಹಿತಿಯನ್ನು ಎಸ್ ಎಂಎಸ್ ಮೂಲಕವೂ ಪರಿಶೀಲನೆ ನಡೆಸಬಹುದು.
ಇದಕ್ಕಾಗಿ ಮೊಬೈಲ್ ಫೋನ್ ನಿಂದ 59191 ಕ್ಕೆ ಎಪಿಕ್ ಸಂಖ್ಯೆಯನ್ನು ಹೊಂದಿರುವ ಎಸ್ ಎಂಎಸ್ ಕಳುಹಿಸಿ ಅಥವಾ ಮತದಾರರ ಸಹಾಯವಾಣಿ 1800-111-950ಕ್ಕೆ ಕರೆ ಮಾಡಿ ಕೂಡ ಮಾಹಿತಿ ತಿಳಿದುಕೊಳ್ಳಬಹುದು.

ಯಾವಾಗ ಕೊನೆ ದಿನ?

ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆಗೆ ಮತದಾನದ ಹಿಂದಿನ ದಿನ ಕೊನೆಯ ದಿನವಾಗಿದೆ. ಒಂದು ವೇಳೆ ಹೆಸರು ಇಲ್ಲದೇ ಇದ್ದರೆ ಹೊಸ ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚುನಾವಣಾ ಆಯೋಗದ ವೆಬ್ ಸೈಟ್ ಅಥವಾ ಮತದಾರರ ಸೇವಾ ಪೋರ್ಟಲ್ ಗೆ ಭೇಟಿ ನೀಡಬಹುದು.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

Continue Reading

ಪ್ರಮುಖ ಸುದ್ದಿ

CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

CM Siddaramaiah: ಮಹಿಳೆಯರ ಸಬಲೀಕರಣ ಕಾಂಗ್ರೆಸ್‌ ಸರ್ಕಾರದ ಉದ್ಧೇಶವಾಗಿದ್ದು, ಮಹಿಳೆಯರು ತಮ್ಮ ಕೈ ಬಲಪಡಿಸುವವರ ಕೈ ಹಿಡಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಕರ್ನಾಟಕದಲ್ಲಿ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬಹಿರಂಗ ಪತ್ರ ಪರೆದಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ತಾವು ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ, ನುಡಿದಂತೆ ನಡೆದಿದ್ದೇವೆ ಎಂದು ಹೇಳಿರುವ ಅವರು, ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸುವಂತೆ ಮಹಿಳೆಯರಲ್ಲಿ ಕೋರಿದ್ದಾರೆ.

ಮಹಿಳೆಯರ ಸಬಲೀಕರಣದ ಕೆಲಸ ದೀರ್ಘಕಾಲೀನವಾದುದು. ಈ ಪ್ರಯತ್ನ ಮುಂದುವರಿದುಕೊಂಡು ಹೋಗಬೇಕಾದರೆ ಮಹಿಳೆಯರು ತಮ್ಮ ಕೈ ಬಲಪಡಿಸುವವರ ಕೈ ಹಿಡಿಯಬೇಕು ಎಂದು ಸಿಎಂ ಕೋರಿದ್ದಾರೆ. ಸಿದ್ದರಾಮಯ್ಯ ಅವರು ನಾಡಿನ ಮಹಿಳೆಯರಿಗೆ ಬರೆದಿರುವ ಪತ್ರದ ಯಥಾವತ್‌ ಮಾಹಿತಿ ಇಲ್ಲಿದೆ.

ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ,

ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ. ‘‘ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ’’ ಎಂದು ಖಡಾಖಂಡಿತವಾಗಿ ಸಾರಿದ ಮನುಶಾಸ್ತ್ರವನ್ನು ನಂಬಿರುವ ಭಾರತೀಯ ಜನತಾ ಪಕ್ಷ ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸ್ಥಾನಮಾನ ನೀಡಬೇಕೆಂದು ಸಾರಿದ ಸಂವಿಧಾನಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಗಳ ನಡುವೆ ಇಂದಿನ ಮಹಿಳೆಯರು ಆಯ್ಕೆ ಮಾಡಬೇಕಾಗಿದೆ.

ಭಾರತೀಯ ಜನತಾ ಪಕ್ಷ ಮತ್ತು ಅದರ ಮಾತೃಸಂಸ್ಥೆಯಾದ ಆರ್‌ಎಸ್‌ಎಸ್‌ನ ಸಿದ್ಧಾಂತ ಮತ್ತು ನಡವಳಿಕೆ ಸ್ಪಷ್ಟವಾಗಿ ಮಹಿಳಾ ವಿರೋಧಿಯಾದುದು. ಗುಜರಾತ್‌ನಿಂದ ಮಣಿಪುರದವರೆಗೆ ಇದಕ್ಕೆ ನಿದರ್ಶನಗಳನ್ನು ಕಾಣಬಹುದು. ಕರ್ನಾಟಕದಲ್ಲಿ ಸ್ತ್ರೀಪೀಡಕರ ಜತೆಗೆ ಬಿಜೆಪಿ ಕೈಜೋಡಿಸಿರುವುದು ಇತ್ತೀಚಿನ ಉದಾಹರಣೆ. ಕಾಯಾ ವಾಚಾ ಮನಸಾ ಬಿಜೆಪಿ ಮಹಿಳಾ ವಿರೋಧಿ ಪಕ್ಷ.

ನಮ್ಮ ಸರ್ಕಾರ ‘ʼಗೃಹಲಕ್ಷ್ಮಿ’ʼ ಮತ್ತು ‘ʼಶಕ್ತಿʼ ಯೋಜನೆಗಳನ್ನು ಶುರುಮಾಡಿದ ದಿನದಿಂದಲೂ ಬಿಜೆಪಿ ನಾಯಕರು ಇದರ ವಿರುದ್ಧ ಅಪಪ್ರಚಾರದ ಆಂದೋಲನವನ್ನು ಪ್ರಾರಂಭಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗುತ್ತಿದೆ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇನ್ನೂ ಮುಂದಕ್ಕೆ ಹೋಗಿ ಈ ರೀತಿಯ ನೆರವು ನೀಡಿದರೆ ಹೆಣ್ಣುಮಕ್ಕಳು ಮನೆಬಿಟ್ಟು ಹಾದಿ ತಪ್ಪುತ್ತಾರೆ ಎಂದು ತೀರಾ ಕ್ಷುಲ್ಲಕತನದ ಆರೋಪ ಮಾಡಿದ್ದಾರೆ.

ಬಿಜೆಪಿ ನಾಯಕರ ವಿರೋಧಕ್ಕೆ ಮುಖ್ಯ ಕಾರಣ ಮಹಿಳೆಯರ ಸಬಲೀಕರಣವಾಗಬಾರದೆಂಬ ದುಷ್ಟ ಉದ್ದೇಶ. ಮಹಿಳಾ ಸಬಲೀಕರಣವನ್ನು ಕಾಂಗ್ರೆಸ್ ಪಕ್ಷ ಎಂದೂ ರಾಜಕೀಯ ಕಾರ್ಯಕ್ರಮವಾಗಿ ನೋಡಿಲ್ಲ, ಅದು ನಮ್ಮ ಪಾಲಿಗೆ ಸಾಮಾಜಿಕ ಜವಾಬ್ದಾರಿ. ನಮ್ಮ ಪಕ್ಷ ಮತ್ತು ಸರ್ಕಾರ ಮಹಿಳಾ ಪರವಾಗಿ ನಿಂತಿರುವುದಕ್ಕೆ 2013-18ರ ಅವಧಿಯ ನಮ್ಮ ಹಳೆಯ ಸರ್ಕಾರ ಮತ್ತು ಕಳೆದ ಹತ್ತು ತಿಂಗಳ ಅವಧಿಯ ನಮ್ಮ ಹೊಸ ಸರ್ಕಾರದ ಸಾಧನೆಗಳು ಸಾಕ್ಷಿ.

ಐದು ವರ್ಷಗಳ ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದೆವು. ಸ್ನಾತಕೋತ್ತರ ಪದವಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ಸ್ತ್ರೀ ಶಕ್ತಿ ಸಂಘಗಳ ಆವರ್ತ ನಿಧಿ 5000 ರೂ.ಗಳಿಂದ 25 ಸಾವಿರಕ್ಕೆ ಏರಿಕೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡುವ ಮಾತೃಪೂರ್ಣ, ತಾಯಿ ಮತ್ತು ಮಗುವಿಗಾಗಿಯೇ 20 ವಿಶೇಷ ಆಸ್ಪತ್ರೆಗಳ ಪ್ರಾರಂಭ, ಮಹಿಳಾ ಉದ್ಯಮಿಗಳಿಗೆ ಆರು ಪ್ರತ್ಯೇಕ ಕೈಗಾರಿಕಾ ಪಾರ್ಕ್… ಹೀಗೆ ಮಹಿಳೆಯರ ಹಿತವನ್ನೇ ಗುರಿಯಾಗಿಟ್ಟುಕೊಂಡು ಜಾರಿಗೊಳಿಸಿರುವ ಯೋಜನೆಗಳ ಫಲವನ್ನು ನೀವು ಪಡೆದಿದ್ದೀರಿ.

ನಮ್ಮ ಈಗಿನ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳು ಸೇರಿದಂತೆ ಒಟ್ಟು ಯೋಜನೆಗಳಲ್ಲಿ ಮಹಿಳೆಯರ ಅಭಿವೃದ್ದಿಗೆ ಆದ್ಯತೆ ನೀಡಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ 1.21 ಕೋಟಿ ಮನೆ ಯಜಮಾನಿಗೆ ತಿಂಗಳಿಗೆ ರೂ.2000 ಜಮೆ ಆಗುತ್ತಿದೆ. ಶಕ್ತಿ ಯೋಜನೆಯಡಿ ಇಲ್ಲಿಯ ವರೆಗೆ 201 ಕೋಟಿಗೂ ಅಧಿಕ ಬಾರಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗೆ ಅನುಕೂಲವಾಗಲಿ ಎಂಬ ಉದ್ದೇಶದೊಂದಿಗೆ ರಾಜ್ಯದಲ್ಲಿ 4,000 ಕೂಸಿನ ಮನೆಗಳ ಸ್ಥಾಪಿಸಿದ್ದೇವೆ, ಶುಚಿ ಯೋಜನೆಯಡಿ 19,27,355 ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ನೀಡಿದ್ದೇವೆ. ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರೂ.86,423 ಕೋಟಿ ಅನುದಾನ ಒದಗಿಸಲಾಗಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಯಜಮಾನಿಗೆ ಪ್ರತಿವರ್ಷ ಒಂದು ಲಕ್ಷ ರೂಪಾಯಿ ನೆರವು ನೀಡುವ ಮಹಾಲಕ್ಷ್ಮಿ ಯೋಜನೆಯನ್ನು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ. ಇದರ ಜೊತೆಯಲ್ಲಿ ದೇಶದ ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿ, ಆಶಾ, ಅಂಗನವಾಡಿ ಮತ್ತು ಮಧ್ಯಾಹ್ನದ ಬಿಸಿ ಊಟದ ಕಾರ್ಯಕರ್ತೆಯರ ವೇತನ ದ್ವಿಗುಣ, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಸಾವಿತ್ರಿ ಬಾಯಿ ಪುಲೆ ಅವರ ಹೆಸರಲ್ಲಿ ಕನಿಷ್ಠ ಒಂದು ಮಹಿಳಾ ಹಾಸ್ಟೆಲ್ ಸ್ಥಾಪನೆಯೂ ಸೇರಿದಂತೆ ಪ್ರಣಾಳಿಕೆಯಲ್ಲಿ ನೀಡಿರುವ ಮಹಿಳಾ ಪರ ಯೋಜನೆಗಳನ್ನೆಲ್ಲವನ್ನೂ ಖಂಡಿತ ಜಾರಿಗೆ ತರಲಿದ್ದೇವೆ.

ಇಂದಿರಾಗಾಂಧಿ ಎಂಬ ಉಕ್ಕಿನ ಮಹಿಳೆಯನ್ನು ದೇಶಕ್ಕೆ ಕೊಟ್ಟ ಪಕ್ಷ ಕಾಂಗ್ರೆಸ್. ಅವರು ಪಕ್ಷದ ಅಧ್ಯಕ್ಷೆಯಾಗಿ ಮತ್ತು ದೇಶದ ಪ್ರಧಾನಿಯಾಗಿ ಸುಮಾರು ಮೂರು ದಶಕಗಳ ಕಾಲ ದೇಶಕ್ಕೆ ಮಾಡಿರುವ ಸೇವೆ ಅನುಪಮವಾದುದು. ಪಕ್ಷದ ಸಾರಥ್ಯ ವಹಿಸಿಕೊಂಡ ದಿನದಿಂದ ಸೋನಿಯಾ ಗಾಂಧಿಯವರು ಮಹಿಳೆಯರ ಸಬಲೀಕರಣಕ್ಕಾಗಿ ಪಕ್ಷ ಮತ್ತು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದಾರೆ. ಇವರು ಪ್ರಾರಂಭದಿಂದಲೇ ಮಹಿಳೆಯರ ರಾಜಕೀಯ ಮೀಸಲಾತಿ ಪರ ದನಿ ಎತ್ತುತ್ತಾ ಬಂದಿದ್ದಾರೆ.

ಪಂಚಾಯತ್ ರಾಜ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿಯನ್ನು ಕರ್ನಾಟಕದಲ್ಲಿ ಜಾರಿಗೆ ತಂದಿರುವ ಶ್ರೇಯಸ್ಸು ನಮಗೆ ಸಲ್ಲಬೇಕು. ಈಗಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಮ್ಮ ಪಕ್ಷ ಆರು ಮಹಿಳೆಯರಿಗೆ ಅವಕಾಶ ಕಲ್ಪಿಸಿದೆ. ರಾಜ್ಯದ ಮಟ್ಟಿಗೆ ಇದೊಂದು ದಾಖಲೆ. ಪಕ್ಷಭೇದ ಮರೆತು ಇವರನ್ನು ಗೆಲ್ಲಿಸುವ ಮೂಲಕ ಮಹಿಳಾ ಶಕ್ತಿಯ ಪ್ರದರ್ಶನವನ್ನು ಜಗತ್ತಿಗೆ ತೋರಿಸಬೇಕಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೇರೆ ರಾಜಕೀಯ ಪಕ್ಷಗಳು ಕೂಡಾ ಮಹಿಳೆಯರಿಗೆ ಅವಕಾಶ ನೀಡಲು ಒತ್ತಡ ಹೇರಿದಂತಾಗುತ್ತದೆ.

ಇದನ್ನೂ ಓದಿ | Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

ಸುಮಾರು ಐದು ಸಾವಿರ ವರ್ಷಗಳಿಂದ ನಿರಂತರವಾಗಿ ತಾರತಮ್ಯ, ಶೋಷಣೆ ಮತ್ತು ಅವಕಾಶಗಳ ವಂಚನೆಗೆ ತುತ್ತಾಗಿರುವ ಮಹಿಳೆಯರ ಸಬಲೀಕರಣದ ಕೆಲಸ ದೀರ್ಘಕಾಲೀನವಾದುದು. ಈ ಪ್ರಯತ್ನ ಮುಂದುವರಿದುಕೊಂಡು ಹೋಗಬೇಕಾದರೆ ಮಹಿಳೆಯರು ತಮ್ಮ ಕೈ ಬಲಪಡಿಸುವವರ ಕೈ ಹಿಡಿಯಬೇಕು, ಬೆಂಬಲಿಸಬೇಕು. ಇಂತಹದ್ದೊಂದು ಅವಕಾಶವನ್ನು ಈ ಲೋಕಸಭಾ ಚುನಾವಣೆ ಮಹಿಳೆಯರಿಗೆ ನೀಡಿದೆ. ಈ ಚುನಾವಣೆಯಲ್ಲಿ ನಿಮ್ಮ ಬೆಂಬಲದ ಬಲವನ್ನು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ನೀಡಿ ಗೆಲ್ಲಿಸಿ. ನಮ್ಮನ್ನು ಹರಸಿ, ಹಾರೈಸಬೇಕೆಂದು ಕೋರುತ್ತೇನೆ. ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿಯೇ ಮಹಿಳೆಯರ ಗೆಲುವಿದೆ ಎಂದು ಪತ್ರದಲ್ಲಿ ಸಿಎಂ ತಿಳಿಸಿದ್ದಾರೆ.

Continue Reading
Advertisement
Lok Sabha Election 2024
ಪ್ರಮುಖ ಸುದ್ದಿ7 mins ago

Lok Sabha Election 2024: ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ; 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳ ಸ್ಪರ್ಧೆ

IPL 2024
ಪ್ರಮುಖ ಸುದ್ದಿ46 mins ago

IPL 2024 : ಕೆಕೆಆರ್​ನಲ್ಲಿ ನಾಯಕ ಶ್ರೇಯಸ್​ ಮಾತು ಯಾರೂ ಕೇಳುತ್ತಿಲ್ಲ!

Bomb Threat
ದೇಶ47 mins ago

ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Prajwal Revanna Case Delete vulgar video and avoid legal action says SIT chief
ಹಾಸನ1 hour ago

Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

IPL 2024
ಕ್ರೀಡೆ1 hour ago

IPL 2024 : ಹಳೆ ಸೇಡು; ರಾಹುಲ್ ವಿರುದ್ಧವೇ ತಿರುಗಿಬಿದ್ದ ನವಿನ್​ ಉಲ್ ಹಕ್​

Prajwal Revanna Case HD Deve Gowda takes a big decision
ಕ್ರೈಂ1 hour ago

Prajwal Revanna Case: ‌ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಮಹತ್ವದ ಫರ್ಮಾನು ಹೊರಡಿಸಿದ ಎಚ್‌.ಡಿ. ದೇವೇಗೌಡ!

Ramana Avatara Movie
ಕರ್ನಾಟಕ2 hours ago

Ramana Avatara Movie: ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ; ‘ರಾಮನ ಅವತಾರ’ ಚಿತ್ರ ನಿಷೇಧಿಸಲು ಆಗ್ರಹ!

Lok Sabha Election
ಕರ್ನಾಟಕ2 hours ago

Lok Sabha Election: ನಾಳೆ ವೋಟಿಂಗ್; ನಿಮ್ಮ ‘ಮತ’ ಕಳವಾದರೆ ಏನು ಮಾಡಬೇಕು? ಇಲ್ಲಿದೆ ಉತ್ತರ

farmer commits suicide in Kabbigere Gollarhatti village
ಕರ್ನಾಟಕ2 hours ago

Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

All preparations in Yallapur assembly constituency for Lok Sabha election says Ajjappa Sogalada
ಉತ್ತರ ಕನ್ನಡ2 hours ago

Lok Sabha Election 2024: ಲೋಕಸಭಾ ಚುನಾವಣೆಗೆ ಯಲ್ಲಾಪುರದಲ್ಲಿ ಸಕಲ ಸಿದ್ಧತೆ: ಅಜ್ಜಪ್ಪ ಸೊಗಲದ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ4 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ4 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ17 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌