ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಕರ್ನಾಟಕದ ಮೊದಲ ಹಂತದ ಮತದಾನ 14 ಕ್ಷೇತ್ರಗಳಲ್ಲಿ ಇಂದು ಮುಂಜಾನೆಯಿಂದ ಚುರುಕಾಗಿ ನಡೆದಿದ್ದು. ಸಂಜೆ 6 ಗಂಟೆಯವರೆಗೆ ಸರಾಸರಿ ಶೇ.69.23 ಮತದಾನ ನಡೆದಿದೆ.
ಮಹಿಳೆಯರಿಗಾಗಿ ವಿಶೇಷವಾಗಿ ಸಿದ್ಧಪಡಿಸಲಾದ ಪಿಂಕ್ ಬೂತ್‌ಗಳಲ್ಲಿ ಕೂಡ ಮತದಾರರಿಂದ ಉತ್ತಮ ಸ್ಪಂದನ ವ್ಯಕ್ತವಾಯಿತು. ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜಿನ ಮತಗಟ್ಟೆ.
ಜೆ.ಪಿ ನಗರದಲ್ಲಿ `ಕಾಂತಾರ’ ಬೆಡಗಿ ಸಪ್ತಮಿ ಗೌಡ ಹಾಗೂ ಅವರ ತಂದೆ ಎಸ್.ಕೆ ಉಮೇಶ ಮತ ಚಲಾಯಿಸಿದರು.
ಚಿತ್ರದುರ್ಗ ನಗರದ ಸರಸ್ವತಿ ಕಾನೂನು ಕಾಲೇಜಿನ ಮತಗಟ್ಟೆಯಲ್ಲಿ ಏಳು ಸುತ್ತಿನ ಕೋಟೆ ಮಾದರಿಯಲ್ಲಿ ನಿರ್ಮಿಸಲಾದ ಮತಗಟ್ಟೆ ಎಲ್ಲರ ಗಮನ ಸೆಳೆಯಿತು.
ಮಂಗಳೂರಿನ ಕಂಕನಾಡಿಯ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ರಂಪಾಟ ನಡೆಸಲು ಮುಂದಾದಾಗ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಮತದಾನ ಮಾಡಿದ ಬಳಿಕ ಕ್ರಿಕೆಟಿಗ ರಾಹುಲ್ ದ್ರಾವಿಡ್, “ಚುನಾವಣಾ ಆಯೋಗ ಚೆನ್ನಾಗಿ ವ್ಯವಸ್ಥೆ ಮಾಡಿದೆ. ಯುವಕರು, ಯುವತಿಯರು ಮತದಾನ ಮಾಡಲು ಮುಂದೆ ಬನ್ನಿ. ಬೆಂಗಳೂರಲ್ಲಿ ಇನ್ನೂ ಜಾಸ್ತಿ ಜನ ಬರಬೇಕು” ಎಂದು ಕರೆ ನೀಡಿದರು.