Lok Sabha Election 2024: ಮಹಿಳೆಯರು ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು; ಆಕಾಶದಲ್ಲಿ ಹಾರಾಡೋಕೂ ಗೊತ್ತೆಂದ ಗಾಯತ್ರಿ - Vistara News

Lok Sabha Election 2024

Lok Sabha Election 2024: ಮಹಿಳೆಯರು ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು; ಆಕಾಶದಲ್ಲಿ ಹಾರಾಡೋಕೂ ಗೊತ್ತೆಂದ ಗಾಯತ್ರಿ

Lok Sabha Election 2024: ಲೋಕಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ನಾಯಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಮಹಿಳೆಯರ ವಿರುದ್ಧ ಅವರು ಲಘುವಾಗಿ ಮಾತನಾಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಗಾಯತ್ರಿ ಸಿದ್ದೇಶ್ವರ್‌ ಬಗ್ಗೆ ಮಾತನಾಡುವಾಗ, ಅವರು ಅಡುಗೆ ಮಾಡಲು ಲಾಯಕ್ಕು ಎಂದು ಹೇಳಿದ್ದರು. ಇದಕ್ಕೆ ಈಗ ಗಾಯತ್ರಿ ಸಹಿತ ಬಿಜೆಪಿ ನಾಯಕರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಗಾಯತ್ರಿ ಸಿದ್ದೇಶ್ವರ್‌ ಸಹ ಶಾಮನೂರಿಗೆ ತಿರುಗೇಟು ನೀಡಿದ್ದು, ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲಿಯೂ ಇದ್ದಾರೆ. ನಮಗೆ ಅಡುಗೆ ಮಾಡುವುದೂ ಗೊತ್ತಿದೆ. ಆಕಾಶದಲ್ಲಿ ಹಾರಾಟ ನಡೆಸಲೂ ಗೊತ್ತಿದೆ ಎಂದು ಹೇಳಿದ್ದಾರೆ.

VISTARANEWS.COM


on

Lok Sabha Election 2024 Women are only for cook says Shamanur Shivashankarappa and Gayatri says women knows how to fly in the sky
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಲೋಕಸಭಾ ಚುನಾವಣೆ (Lok Sabha Election 2024) ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳ ನಾಯಕರ ಮಾತುಗಳು ಎಲ್ಲೆ ಮೀರುತ್ತಿವೆ. ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಲು ಶುರು ಮಾಡಿದ್ದಾರೆ. ಈಗ ಈ ಸಾಲಿಗೆ ಮಾಜಿ ಸಚಿವ, ಹಿರಿಯ ರಾಜಕಾರಣಿ, ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರೂ ಸೇರಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದ (Davangere Lok Sabha constituency) ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ (Gayatri Siddeshwar) ವಿರುದ್ಧ ಮಾತನಾಡುವಾಗ, “ಮಹಿಳೆಯರು ಅಡುಗೆ ಮಾಡಲು ಲಾಯಕ್ಕು” ಎಂಬಂತೆ ಹೇಳಿದ್ದಾರೆ. ಇದೀಗ ವ್ಯಾಪಕ ಆಕ್ರೋಶ ಹಾಗೂ ಟೀಕೆಗೆ ಗುರಿಯಾಗಿದೆ. ಇದಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್‌ (Malavika Avinash) ಸಹ ಕಿಡಿಕಾರಿದ್ದು, ನಿಮ್ಮ ಮನೆಯ ಸೊಸೆಯನ್ನೂ ಕಣಕ್ಕಿಳಿಸಿದ್ದನ್ನು ಮರೆತಿದ್ದೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸ್ವತಃ ಗಾಯತ್ರಿ ಸಿದ್ದೇಶ್ವರ್‌ ಮಾತನಾಡಿ, ಮಹಿಳೆಯರಿಗೆ ಅಡುಗೆ ಮಾಡೋಕೂ ಗೊತ್ತು, ಆಕಾಶದಲ್ಲಿ ಹಾರಾಡೋಕೂ ಗೊತ್ತು ಎಂದು ತಿರುಗೇಟು ನೀಡಿದ್ದಾರೆ.

ದಾವಣಗೆರೆ ಬಂಟರ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕಾಂಗ್ರೆಸ್‌ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಗಾಯತ್ರಿ ಸಿದ್ದೇಶ್ವರ್‌ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾತನಾಡಲು ಬಾರದ ಗಾಯತ್ರಿ ಸಿದ್ದೇಶ್ವರ್‌ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ಸಿಗರ ‘ಕೈ’ ಮೇಲಿದೆ ಎಂಬುದನ್ನು ನಾವು ತೋರಿಸಬೇಕು ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

ಈ ಹಿಂದೆ ಗೆದ್ದಾಗ ಮೋದಿಗೆ ಹೂ ಕೊಟ್ಟಿದ್ರಾ?

ಗಾಯತ್ರಿ ಸಿದ್ದೇಶ್ವರ್‌ ಅವರು ತಾವು ದಾವಣಗೆರೆಯಿಂದ ಗೆದ್ದು ನರೇಂದ್ರ ಮೋದಿ ಅವರಿಗೆ ಕಮಲದ ಹೂವನ್ನು ಅರ್ಪಿಸುತ್ತೇನೆ ಎಂದು ಹೇಳುತ್ತಾರೆ. ಹಾಗಾದರೆ, ಈ ಹಿಂದೆ ಗೆದ್ದಿದ್ದು ನೀವೇ (ಬಿಜೆಪಿಯವರೇ) ಅಲ್ಲವೇ? ಆಗ ಏನು ನೀವು ಕಮಲದ ಹೂವನು ಕೊಟ್ಟಿದ್ದಿರಾ? ಎಂದು ಶಾಮನೂರು ಶಿವಶಂಕರಪ್ಪ ಪ್ರಶ್ನೆ ಮಾಡಿದ್ದಾರೆ.

ವಿರೋಧ ಪಕ್ಷದವರು ಮೋದಿ.. ಮೋದಿ ಅಂತಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಏನು ಕೊಡುಗೆಯನ್ನು ಕೊಟ್ಟಿದ್ದಾರೆ? ನಮ್ಮ ರಾಜ್ಯಕ್ಕೆ ಬರಬೇಕಾದ ಹಣವನ್ನು ನೀಡದೆ ಅನ್ಯಾಯ ಮಾಡಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ.

ಗಾಯತ್ರಿ ಸಿದ್ದೇಶ್ವರ್‌ ಕೆಂಡಾಮಂಡಲ

ಶಾಮನೂರು ಶಿವಶಂಕರಪ್ಪ ಅವರ ಈ ಹೇಳಿಕೆಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇಂದು ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಮುನ್ನುಗ್ಗುತ್ತಿದ್ದಾರೆ. ಆಗಸದಲ್ಲಿ ಹಾರುವ ಹಂತವನ್ನು ತಲುಪಿದ್ದಾರೆ. ಎಲ್ಲ ಕ್ಷೇತ್ರದಲ್ಲಿ ಅವರ ಕೊಡುಗೆ ಇದೆ. ಈ ವಿಚಾರ ಅಜ್ಜನಿಗೆ ಗೊತ್ತಿಲ್ಲವೆಂದು ಅನ್ನಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ತಾಯಿಯಾದವಳು ಅಡುಗೆ ಮಾಡಿ, ಕೈ ತುತ್ತು ಕೊಡುವ ಪ್ರೀತಿ ಅವರಿಗೆ ಗೊತ್ತಿಲ್ಲ. ಹಾಗಾದರೆ ಮಹಿಳೆಯರು ಅಡುಗೆ ಮಾಡೋಕೆ ಮಾತ್ರ ಸೀಮಿತವೇ? ಮಹಿಳೆ ಅಡುಗೆಯನ್ನೂ ಮಾಡುತ್ತಾಳೆ, ಆಕಾಶದಲ್ಲೂ ಹಾರಾಡುತ್ತಾಳೆ. ಇಂಥ ಹೇಳಿಕೆ ನೀಡುವ ಮೂಲಕ ಶಾಮನೂರು ಶಿವಶಂಕರಪ್ಪ ಅವರು ಮಹಿಳೆಯರಿಗೆ ಅಗೌರವ ತೋರಿದ್ದಾರೆ ಎಂದು ಗಾಯತ್ರಿ ಸಿದ್ದೇಶ್ವರ್‌ ಆಕ್ರೋಶವನ್ನು ಹೊರಹಾಕಿದರು.

ನಿಮ್ಮ ಸೊಸೆಯನ್ನೂ ಕಣಕ್ಕಿಳಿಸಿಲ್ಲವೇ? ಶಾಮನೂರುಗೆ ಮಾಳವಿಕಾ ಪ್ರಶ್ನೆ

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದೊಂದು ಕೆಟ್ಟ ಹೇಳಿಕೆ ಎಂದಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಹಿರಿಯ ರಾಜಕಾರಣಿಯಾಗಿದ್ದಾರೆ. ಅವರಿಗೆ ಬುದ್ಧಿ ಹೇಳುವ ವಯಸ್ಸು ನನ್ನದಲ್ಲ. ಆದರೆ, ಅವರ ಮಾತಿಗೆ ವಿರೋಧ ವ್ಯಕ್ತಪಡಿಸುತ್ತೇನೆ. ನಮ್ಮ‌ ಪಕ್ಷದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರ ಬಗ್ಗೆ ಕೆಟ್ಟ ಹೇಳಿಕೆ ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ತಮ್ಮ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಿದ್ದಾರೆ. ಅಂಥದರಲ್ಲಿ ಈ ರೀತಿ ಹೇಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನಮ್ಮ ದೇಶದಲ್ಲಿ ಎಲ್ಲ ಕೆಲಸ ಮಾಡುವ ಮಹಿಳೆಯರಿದ್ದಾರೆ. ಅವರು ಮನೆಯಲ್ಲಿರಲು ಲಾಯಕ್ಕು ಅಂತ ಹೇಳಿರುವುದು ಸರಿಯಲ್ಲ. ಅವರ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಆಗಿದ್ದರು. ಅವರ ಪಕ್ಷದಿಂದ ಮಹಿಳೆಯೊಬ್ಬರು ಪ್ರಧಾನಿ ಕೂಡ ಆಗಿದ್ದರು. ಅಂಥದ್ದರಲ್ಲಿ ಈ ರೀತಿ ಹೇಳಿಕೆ ಸರಿಯಲ್ಲ. ಗಾಯತ್ರಿ ಸಿದ್ದೇಶ್ವರ್ ಅವರು ಹೇಳಿದ ಒಂದು ಮಾತನ್ನು ಇಲ್ಲಿ ಉಲ್ಲೇಖಿಸುತ್ತೇನೆ. ಇಲ್ಲಿಯವರೆಗೂ ಮನೆ ಜವಾಬ್ದಾರಿ ನೋಡಿಕೊಳ್ಳುತ್ತಿದೆ. ಇನ್ನು ಮುಂದೆ ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾಋೆ. ಕ್ಷೇತ್ರದ ಜನತೆ ಅವರನ್ನು ಗೆಲ್ಲಿಸಿ ಕಳಿಸುವ ನಿರ್ಧಾರ ಮಾಡಿದ್ದಾರೆ ಎಂದು ಮಾಳವಿಕಾ ಅವಿನಾಶ್‌ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ‌ ಅವರು ಮಹಿಳಾ ಪರ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಯೋಜನೆಗಳನ್ನು ತಂದಿದ್ದಾರೆ. ಮಹಿಳೆಯರಿಗಾಗಿ ನಾರಿ ಶಕ್ತಿ ವಂದನ್ ಕಾರ್ಯಕ್ರಮವನ್ನು ಯೋಜಿಸಿದ್ದಾರೆ. ರಾಜಕೀಯ ಮೀಸಲಾತಿಯನ್ನು ಕೂಡ ತಂದಿದ್ದಾರೆ. ಮಹಿಳೆಯರ ಬಗ್ಗೆ ಮಾತನಾಡುವ ಕೆಟ್ಟ ಚಾಳಿ ಕಾಂಗ್ರೆಸ್‌ಗಿದೆ. ಸೋಲುವ ಹತಾಶೆಯಿಂದ ಈ ರೀತಿ ಹೇಳಿಕೆ ನೀಡಿದ್ದಾರೆ. ಕೂಡಲೇ ಶಾಮನೂರು ಶಿವಶಂಕರಪ್ಪ ಅವರು ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

Lok Sabha Election 2024: ಲೋಕಸಭೆ ಚುನಾವಣೆ ಸಮಯದಂದು ಚಾಮರಾಜನಗರದ ಇಂಡಿಗನತ್ತದಲ್ಲಿ ಮತ ಯಂತ್ರ ಪೀಸ್‌ ಪೀಸ್‌ ಮಾಡಿ ಮತಗಟ್ಟೆ ಧ್ವಂಸ ಮಾಡಿ ಬಂಧಿತರಾಗಿದ್ದ 46 ಮಂದಿಗೆ ಜಾಮೀನು ಸಿಕ್ಕಿದೆ.

VISTARANEWS.COM


on

By

Lok Sabha Election 2024
Koo

ಚಾಮರಾಜನಗರ: ಲೋಕಸಭೆ ಚುನಾವಣೆಯ (Lok Sabha Election 2024) ಮತದಾನದ ಸಮಯದಲ್ಲಿ ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದರು. ಮತಗಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 46 ಬಂಧಿತ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್ ಬಂಧಿತರಿಗೆ ಜಾಮೀನು ನೀಡಿದ್ದಾರೆ. ಮತಗಟ್ಟೆ ಧ್ವಂಸ ಪ್ರಕರಣದಲ್ಲಿ 26 ಪುರುಷರು, 20 ಮಹಿಳೆಯರು ಬಂಧಿತರಾಗಿದ್ದರು. ಇದೀಗ ಎಲ್ಲರು ಜಾಮೀನು ಪಡೆದು ಹೊರಬಂದಿದ್ದಾರೆ. ಇದೇ ವೇಳೆ ತಮಗೆ ಮೂಲ ಸೌಕರ್ಯ ಕಲ್ಪಿಸಿ ಕೊಡಿ ಎಂದು ಇಂಡಿಗನತ್ತ ಗ್ರಾಮದ ಮಹಿಳೆಯರು ಕಣ್ಣೀರಿಟ್ಟರು.

Lok Sabha Election 2024 Villagers vandalise polling booth in Chamarajanagar

ಏನಿದು ಪ್ರಕರಣ?

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಳೆದ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ (First phase of polling) ನಡೆದಿತ್ತು. ಆ ದಿನ ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha constituency) ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿತ್ತು. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿತ್ತು.

ಎಷ್ಟು ಬಾರಿ ಮನವಿ ಮಾಡಿದರೂ ಈ ಗ್ರಾಮಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಅದಾದ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದರು.

ಮತಯಂತ್ರ ಧ್ವಂಸ ಮಾಡಿದ್ದ ಗ್ರಾಮಸ್ಥರು

ಇನ್ನು ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದರು. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿತ್ತು. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದರು.

Lok Sabha Election 2024 Villagers vandalise polling booth in Chamarajanagar

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದರು. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿತ್ತು. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿತ್ತು. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದರು.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

85 ಮಂದಿಯಲ್ಲಿ ಮತ ಚಲಾಯಿಸಿದ್ದು ಇಬ್ಬರೇ!

ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸಿಕೆರೆ ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರ ಮಾಡಲಾಗಿತ್ತು. ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಕೇವಲ ಇಬ್ಬರು ಮತದಾನ ಮಾಡಿದ್ದರು. ಉಳಿದಂತೆ ಮತಗಟ್ಟೆಗಳತ್ತ ಯಾರೊಬ್ಬರೂ ಸುಳಿದಿರಲಿಲ್ಲ.

ನೀರು, ರಸ್ತೆ, ವಿದ್ಯುತ್‌ ಏನೂ ಇಲ್ಲ!

ಕನಿಷ್ಠ ಮೂಲಭೂತ ಸೌಕರ್ಯವನ್ನೂ ನೀಡಲಾಗಿಲ್ಲ. ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಎಲ್ಲವೂ ಇಲ್ಲಿ ಮರೀಚಿಕೆಯಾಗಿದೆ. ಕೆಲವು ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೂ, ಯಾವೊಂದು ಭರವಸೆ ಸಿಗದೇ ಇರುವ ಹಿನ್ನೆಲೆಯಲ್ಲಿ ಮತದಾನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಾಲಿವುಡ್

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Lok Sabha Election 2024: ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 Akshay Kumar casts vote for the first time
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.  ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮುಂಬೈನಲ್ಲಿ ಮತ ಚಲಾಯಿಸಿದರು. ನಟ ಈ ಹಿಂದೆ ಕೆನಡಾದ ಪೌರತ್ವವನ್ನು ಮಾತ್ರ ಹೊಂದಿದ್ದರು. 

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ವೋಟ್‌ ಮಾಡಿದ ಬಳಿಕ ಅಕ್ಷಯ್‌ ಕುಮಾರ್‌ ಮಾತನಾಡಿ ʻʻನನ್ನ ಭಾರತ ಅಭಿವೃದ್ಧಿ ಮತ್ತು ಬಲಿಷ್ಠವಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಭಾರತವು ನನಗೆಸರಿ ಎನಿಸುವದಕ್ಕೆ ಮತ ಚಲಾಯಿಸಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಇನ್ನು ಅಮಿತಾಭ್‌ ಕೂಡ ಮತ ಚಲಾಯಿಸುವಂತೆ ಸೋಷಿಯಲ್‌ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ. ʻʻಅಮಿತಾಭ್‌ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಕಾಡಿನಲ್ಲಿರುವ ಪ್ರಾಣಿಗಳು ಅಭಿ ತೋ ಪಾರ್ಟಿ ಶುರು ಹುಯಿ ಹೈ ಎಂಬ ಜನಪ್ರಿಯ ಹಾಡಿಗೆ ನೃತ್ಯ ಮಾಡುವುದು ಇದೆ. ಪೋಸ್ಟ್ ಅನ್ನು ಹಂಚಿಕೊಂಡ ಅವರು, “ನಾಳೆ ಮುಂಬೈ/ಮಹಾರಾಷ್ಟ್ರಕ್ಕೆ ನಿಮ್ಮ ದಿನ. ನಿಮ್ಮ ಹಕ್ಕನ್ನು ಚಲಾಯಿಸಿ..” ಎಂದರು.

ಆಯುಷ್ಮಾನ್ ಕೂಡ ವಿಡಿಯೊ ಮಾಡಿ, “ಸ್ನೇಹಿತರೇ, ಮತದಾನ ಮಾಡುವ ಸಮಯ ಬಂದಿದೆ. ಹೌದು, ಲೋಕಸಭೆ ಚುನಾವಣೆ ಹಂತ ಹಂತವಾಗಿ ನಡೆಯುತ್ತಿದೆ, ಮತ್ತು ಈಗ ಇದು ನಿಮ್ಮ ಸರದಿ. ಪ್ರತಿ ಮತವೂ ಮುಖ್ಯವಾಗಿದೆ ಏಕೆಂದರೆ ಯಾವ ನಾಯಕರು ದೇಶವನ್ನು ಮುನ್ನಡೆಸುತ್ತಾರೆ ಎಂಬುದನ್ನು ನೀವು ನಿರ್ಧರಿಸುತ್ತೀರಿ. ನಿಮ್ಮ ಮತವು ನಿಮ್ಮ ಧ್ವನಿಯಾಗಿದೆ, ಮತ್ತು ನಿಮ್ಮ ಧ್ವನಿಯನ್ನು ಎಣಿಕೆ ಮಾಡಿ, ಏಕೆಂದರೆ ನಾವು ನಮ್ಮ ದೇಶದ ಉಜ್ವಲ ಭವಿಷ್ಯವನ್ನು ರೂಪಿಸಬಹುದುʼʼಎಂದಿದ್ದಾರೆ. ರಣವೀರ್‌, ಕರಣ್‌ ಜೋಹರ್‌ ಸೇರಿದಂತೆ ಅನೇಕ ನಟರು ಮನವಿ ಮಾಡಿದರು.

ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

Continue Reading

ದೇಶ

Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

Lok Sabha Election 2024:ಎರಡು ನಿಮಿಷಗಳ ಅವಧಿಯ ವೀಡಿಯೊದಲ್ಲಿ, ರಾಜನ್‌ ಸಿಂಗ್‌, ಬಿಜೆಪಿ ಅಭ್ಯರ್ಥಿ ಮುಖೇಶ್ ರಜಪೂತ್ ಅವರಿಗೆ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ (ಇವಿಎಂ) ಕನಿಷ್ಠ 8 ಬಾರಿ ಮತ ಚಲಾಯಿಸುವುದನ್ನು ಕಾಣಬಹುದು. ರಜಪೂತ್ ಉತ್ತರ ಪ್ರದೇಶದ ಫರೂಕಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಎಆರ್ ಒ ಪ್ರತೀತ್ ತ್ರಿಪಾಠಿ ಅವರ ದೂರಿನ ಆಧಾರದ ಮೇಲೆ ನಯಾ ಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

VISTARANEWS.COM


on

Lok sabha Election 2024
Koo

ಉತ್ತರ ಪ್ರದೇಶ: ಚುನಾವಣೆ(Lok Sabha Election 2024) ಬಂತೆಂದರೆ ಸಾಕು ಮತಯಂತ್ರ(EVMs)ಗಳ ಕಾರ್ಯಕ್ಷಮತೆ ಬಗ್ಗೆ ಆಗಾಗ ಅನುಮಾನಗಳು ಕೇಳಿ ಬರುವುದು ಸಾಮಾನ್ಯ. ಇದಕ್ಕೆ ಪೂರಕ ಎಂಬಂತೆ ಕೆಲವೊಮ್ಮೆ ಮತಯಂತ್ರಗಳ ಕ್ಷಮತೆ ಮೇಲೆ ಅನುಮಾನ ಹುಟ್ಟಿಸುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ವಿಡಿಯೋ ಹರಿದಾಡುತ್ತಿದ್ದು, ಮತಗಟ್ಟೆಯೊಂದರಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಒಬ್ಬನೇ ವ್ಯಕ್ತಿ ಹಲವು ಬಾರಿ ಮತಹಾಕಿದ್ದಾನೆ. ಈ ವಿಡಿಯೋ ವೈರಲ್‌(Viral Video) ಆಗುತ್ತಿದ್ದಂತೆ ಪೊಲೀಸರು ಆ ವ್ಯಕ್ತಿಯನ್ನು ಅರೆಸ್ಟ್‌ ಮಾಡಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಉತ್ತರಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಾಜನ್‌ ಸಿಂಗ್‌ ಎಂಬ ಯುವಕ ತಾನು ಮತ ಚಲಾಯಿಸುವ ವಿಡಿಯೋವನ್ನು ರೆಕಾರ್ಡ್‌ ಮಾಡಿದ್ದಾರೆ. ಈ ವಿಡಿಯೋವನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳ ಹಲವಾರು ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡ ನಂತರ ಆರೋಪಿ ರಾಜನ್ ಸಿಂಗ್ ಎನ್ನುವಾತನನ್ನು ವಶಕ್ಕೆ ಪಡೆಯಲಾಗಿದೆ.

ಎರಡು ನಿಮಿಷಗಳ ಅವಧಿಯ ವೀಡಿಯೊದಲ್ಲಿ, ರಾಜನ್‌ ಸಿಂಗ್‌, ಬಿಜೆಪಿ ಅಭ್ಯರ್ಥಿ ಮುಖೇಶ್ ರಜಪೂತ್ ಅವರಿಗೆ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ (ಇವಿಎಂ) ಕನಿಷ್ಠ 8 ಬಾರಿ ಮತ ಚಲಾಯಿಸುವುದನ್ನು ಕಾಣಬಹುದು. ರಜಪೂತ್ ಉತ್ತರ ಪ್ರದೇಶದ ಫರೂಕಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಎಆರ್ ಒ ಪ್ರತೀತ್ ತ್ರಿಪಾಠಿ ಅವರ ದೂರಿನ ಆಧಾರದ ಮೇಲೆ ನಯಾ ಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನು ರಾಜನ್‌ ಸಿಂಗ್‌ ವಿರುದ್ಧ ಸೂಚನೆ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 171F (ಚುನಾವಣೆಗಳಿಗೆ ಸಂಬಂಧಿಸಿದ ಅಪರಾಧ), ಐಪಿಸಿ ಸೆಕ್ಷನ್ 419 (ವ್ಯಕ್ತಿಯಿಂದ ವಂಚನೆಗೆ ಶಿಕ್ಷೆ), ಸೆಕ್ಷನ್ 128, 132, ಮತ್ತು 136 ಸೇರಿದಂತೆ ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯಿದೆ (ಮತದಾನದ ಗೌಪ್ಯತೆಯನ್ನು ಕಾಪಾಡುವುದು, ಚುನಾವಣೆಗಳಲ್ಲಿ ವಂಚನೆ ಮತ್ತು ಇತರ ಚುನಾವಣಾ ಅಪರಾಧಗಳಿಗೆ ಸಂಬಂಧಿಸಿದೆ) ಮತ್ತು ಇತರೆ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಆಯೋಗ ಕೂಡ ಈ ವಿಷಯದ ಬಗ್ಗೆ ಗಮನಹರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಘಟನೆ ನಡೆದಾಗ ಮತಗಟ್ಟೆಯಲ್ಲಿ ಹಾಜರಿದ್ದ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ಹೊರಡಿಸಲಾಗಿದೆ.

ಇದನ್ನೂ ಓದಿ:Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Continue Reading

ದೇಶ

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Lok Sabha Election 2024: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

VISTARANEWS.COM


on

Lok Sabha Election 2024
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ. ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

4ನೇ ಹಂತದಲ್ಲಿ ಹೆಚ್ಚಿದ ಮತದಾನ

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಮೂರು ಹಂತಗಳಿಗಿಂತ ಗರಿಷ್ಠ ಮತದಾನ ದಾಖಲಾಗಿದೆ. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Continue Reading
Advertisement
Payal Rajput Accuses Rakshana Producers Of Not Clearing Her Dues
ಟಾಲಿವುಡ್11 mins ago

Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

Salman Khan Ultimate Sex Symbol Says Malaika Arora
ಬಾಲಿವುಡ್14 mins ago

Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Ebrahim Raisi
ವಿದೇಶ16 mins ago

Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

One year for the government Cm Siddaramaiah reveals many dreams and media interaction live
ರಾಜಕೀಯ25 mins ago

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

Drowned in water
ಬೆಂಗಳೂರು43 mins ago

Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

gold rate today sai pallavi
ಚಿನ್ನದ ದರ1 hour ago

Gold Rate Today: 22 ಕ್ಯಾರಟ್‌ ಚಿನ್ನದ ಬೆಲೆ 500 ರೂ. ಏರಿಕೆ; ಇಂದಿನ ಬಂಗಾರದ ಧಾರಣೆ ಹೀಗಿದೆ

Murder case
ದೇಶ1 hour ago

Murder Case: ತಾಜ್‌ ಮಹಲ್‌ ಸಮೀಪದಲ್ಲೇ ಘೋರ ಕೃತ್ಯ; ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

Mohan Lal watching dr rajkumars super hit song
ಮಾಲಿವುಡ್1 hour ago

Mohan Lal: ಅಣ್ಣಾವ್ರ ಹಾಡನ್ನು ಎಂಜಾಯ್‌ ಮಾಡಿದ ಮೋಹನ್ ಲಾಲ್; ವಿಡಿಯೊ ವೈರಲ್‌!

Lok Sabha Election 2024
Lok Sabha Election 20242 hours ago

Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

actor Chetan Kumar Ahimsa
ಸಿನಿಮಾ2 hours ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ22 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ23 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌