Site icon Vistara News

Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

Lok Sabha Election

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ಕಾಗಿ ಕಳೆದ ಮೂರ್ನಾಲ್ಕು ತಿಂಗಳಿಂದ ದೇಶಾದ್ಯಂತ ಸಂಚರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೊನೇ ಹಂತದ ಚುನಾವಣಾ ಪ್ರಚಾರ ಮುಗಿದ ಬಳಿಕ ಅಂದರೆ ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಶ್ವ ಪ್ರಸಿದ್ಧ ವಿವೇಕಾನಂದ ರಾಕ್ ಮೆಮೋರಿಯಲ್ ಗೆ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಆಗಮಿಸಲಿದ್ದಾರೆ. 73 ವರ್ಷದ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳವಾದ ಸ್ಮಾರಕದಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕನ್ಯಾಕುಮಾರಿಯಲ್ಲಿ, ಪಿಎಂ ಮೋದಿ ರಾಕ್ ಮೆಮೋರಿಯಲ್​ಗೆ ಭೇಟಿ ನೀಡಲಿದ್ದಾರೆ ಮತ್ತು ಮೇ 30 ರ ಸಂಜೆಯಿಂದ ಜೂನ್ 1 ರವರೆಗೆ ಧ್ಯಾನ ಮಂಟಪದಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ.

ಸ್ವಾಮಿ ವಿವೇಕಾನಂದ ರಾಕ್ ಮೆಮೋರಿಯಲ್ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ಸಮುದ್ರದ ಮಧ್ಯದಲ್ಲಿದೆ. ಇದರು ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲಾ ಪ್ರತಿಮೆಗೆ ಹತ್ತಿರದಲ್ಲಿದೆ. ಮೂರನೇ ಅವಧಿಗೆ ಪ್ರಧಾನಿಯಾಗುವ ಕನಸು ಹೊಂದಿರುವ ನರೇಂದ್ರ ಮೋದಿ ಗುರುವಾರ ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಿದ್ದಾರೆ. ಬಳಿಕ ಜೂನ್ 1 ರಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಇದನ್ನೂ ಓದಿ: T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

ಏಳು ಹಂತಗಳಲ್ಲಿ ನಿಗದಿಯಾದ ಲೋಕಸಭಾ ಚುನಾವಣೆ ಜೂನ್ 1 ರಂದು ಕೊನೆಗೊಳ್ಳಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. 2019 ರ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿ ಕೇಸರಿ ಬಟ್ಟೆ ಧರಿಸಿ ಕೇದಾರನಾಥ ಬಳಿಯ ಪವಿತ್ರ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಈ ಫೋಟೊ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿತ್ತು.

ಈ ತಿಂಗಳ ಆರಂಭದಲ್ಲಿ, ಪ್ರಧಾಣಿ ಮೋದಿ ಅವರು ನೀಡಿದ ವಿಶೇಷ ಸಂದರ್ಶನದಲ್ಲಿ, ಚುನಾವಣಾ ಲೆಕ್ಕಾಚಾರಗಳು ನಮ್ಮ ಪರವಾಗಿ ಹೆಚ್ಚು ವಾಲುತ್ತಿವೆ. ನಾನು ಅದರ ಬಗ್ಗೆ ಏನನ್ನೂ ಹೇಳಬೇಕಾಗಿಲ್ಲ. ನಾವು ಮೇಲುಗೈ ಸಾಧಿಸಿದ್ದೇವೆ. ಮತ್ತು ಅದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದರು. ಚುನಾವಣಾ ಸೋಲುಗಳು ಮತ್ತು ಹಲವರ ಪಕ್ಷಾಂತರಗಳಿಂದ ಕಂಗೆಟ್ಟಿರುವ ಕಾಂಗ್ರೆಸ್, ಬಿಜೆಪಿಯನ್ನು ಎದುರಿಸುವ ಶಕ್ತಿ ಕಳೆದುಕೊಂಡಿದೆ ಎಂದು ಹೇಳಿದ್ದರು.

ತಮ್ಮ ಹೊಸ ಸರ್ಕಾರದ ಮೊದಲ 100 ದಿನಗಳ ಕ್ರಿಯಾ ಯೋಜನೆಯನ್ನು ರೂಪಿಸಲು ತಮ್ಮ ಸಚಿವರಿಗೆ ನಿಯೋಜಿಸಿದ್ದೇನೆ ಎಂದು ಪ್ರಧಾನಿ ಹೇಳಿದ್ದರು.

Exit mobile version