Parliament Flashback: ಉಡುಪಿಯಲ್ಲಿ ಗುರುವಿಗೇ ಸೋಲಿನ ರುಚಿ ತೋರಿಸಿದ್ದ ಆಸ್ಕರ್‌ ಫೆರ್ನಾಂಡಿಸ್‌! - Vistara News

Lok Sabha Election 2024

Parliament Flashback: ಉಡುಪಿಯಲ್ಲಿ ಗುರುವಿಗೇ ಸೋಲಿನ ರುಚಿ ತೋರಿಸಿದ್ದ ಆಸ್ಕರ್‌ ಫೆರ್ನಾಂಡಿಸ್‌!

Parliament Flashback: ಡಾ. ಟಿ ಎ ಪೈ ಅವರು ಖ್ಯಾತ ವೈದ್ಯ, ಶಿಕ್ಷಣ ತಜ್ಞ ಮತ್ತು ಅರ್ಥ ಶಾಸ್ತ್ರಜ್ಞರೆಂದು ಖ್ಯಾತಿ ಪಡೆದವರು. ಆಧುನಿಕ ಮಣಿಪಾಲದ ನಿರ್ಮಾತೃರು. ಇಂಥ ಶ್ರೇಯಸ್ಸಿನ ಪೈ ಅವರು 1977ರಲ್ಲಿ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಪ್ರಚಂಡ ಜಯ ದಾಖಲಿಸಿದರು. ಆದರೆ ಇವರ ಬಗ್ಗೆ ವೈಯಕ್ತಿಕ ಕಾರಣಕ್ಕೆ ಮುನಿಸು ಹೊಂದಿದ್ದ ಇಂದಿರಾ ಗಾಂಧಿ ಅವರು 1980ರ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿದರು. ಆಗ ಆಸ್ಕರ್‌ ಫರ್ನಾಂಡಿಸ್‌ಗೆ ಚಾನ್ಸ್‌ ಸಿಕ್ಕಿತು.

VISTARANEWS.COM


on

Parliament Flashback
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಸ್ಕರ್‌ ಫರ್ನಾಂಡಿಸ್‌ (Oscar Fernandes) ಅವರು ಉಡುಪಿ ಪುರಸಭೆ ಸದಸ್ಯರಾಗಿದ್ದರು. ಆದರೆ ಆಕಸ್ಮಿಕವಾಗಿ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಟಿಕೆಟ್‌ ಸಿಕ್ಕಿತು. ಅತಿರಥ ಮಹಾರಥರನ್ನೇ ಸೋಲಿಸಿ ಆಸ್ಕರ್‌ ಫರ್ನಾಂಡಿಸ್‌ ದಶಕಗಳ ಕಾಲ ಸಂಸದರಾಗಿ, ಕೇಂದ್ರ ಸಚಿವರಾಗಿ ಮೆರೆದರು! (Parliament Flashback).

ಡಾ. ಟಿ.ಎ. ಪೈ ಅವರು ಖ್ಯಾತ ವೈದ್ಯ, ಶಿಕ್ಷಣ ತಜ್ಞ ಮತ್ತು ಅರ್ಥ ಶಾಸ್ತ್ರಜ್ಞರೆಂದು ಖ್ಯಾತಿ ಪಡೆದವರು. ಆಧುನಿಕ ಮಣಿಪಾಲದ ನಿರ್ಮಾತೃರು. ಇಂದು ಮಣಿಪಾಲ ಆರೋಗ್ಯ ಮತ್ತು ಶಿಕ್ಷಣದಲ್ಲಿ ವಿಶ್ವ ಪ್ರಸಿದ್ಧಿ ಪಡೆಯಲು ಡಾ. ಟಿ.ಎ. ಪೈ ಅವರೇ ಕಾರಣರು. ಇಂಥ ಶ್ರೇಯಸ್ಸಿನ ಪೈ ಅವರು 1977ರಲ್ಲಿ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪ್ರಚಂಡ ಜಯ ದಾಖಲಿಸಿದರು. ಆದರೆ ಇವರ ಬಗ್ಗೆ ವೈಯಕ್ತಿಕ ಕಾರಣಕ್ಕೆ ಮುನಿಸು ಹೊಂದಿದ್ದ ಇಂದಿರಾ ಗಾಂಧಿ ಅವರು 1980ರ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿದರು. ಅಷ್ಟೇ ಅಲ್ಲ ಇವರ ಶಿಷ್ಯರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಅವರಿಗೆ ಟಿಕೆಟ್‌ ನೀಡಿ ಅಚ್ಚರಿ ಮೂಡಿಸಿದರು.

ಪುರಸಭೆ ಸದಸ್ಯರಾಗಿದ್ದ ಆಸ್ಕರ್‌

ಪುರಸಭೆ ಸದಸ್ಯರಾಗಿ ಉಡುಪಿಗೆ ಸೀಮಿತರಾಗಿ ಓಡಾಡಿಕೊಂಡಿದ್ದ, ಲೋಕಸಭೆಯ ಕನಸೂ ಕಾಣದಿದ್ದ ಯುವಕ ಆಸ್ಕರ್‌ ಫೆರ್ನಾಂಡಿಸ್‌ ರಾತ್ರಿಬೆಳಗಾಗುವಷ್ಟರಲ್ಲಿ ಫೇಮಸ್‌ ಆಗಿ ಬಿಟ್ಟರು. ಟಿ.ಎ. ಪೈ ಅವರು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಪಕ್ಷದಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಅಂದ ಹಾಗೆ ಈ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಎನ್ನುವುದು ಇಂದಿರಾ ಗಾಂಧಿ ಅವರ ವಿರುದ್ಧ ಬಂಡೆದ್ದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಸ್ಥಾಪಿಸಿದ ಪಕ್ಷವಾಗಿತ್ತು.

ಅಂದಿನ ಚುನಾವಣೆಯಲ್ಲಿ ಟಿ.ಎ. ಪೈ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು! ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ.ಎಸ್‌. ಆಚಾರ್ಯ ಎರಡನೇ ಸ್ಥಾನ ಪಡೆದರು. ಆಸ್ಕರ್‌ ಫೆರ್ನಾಂಡಿಸ್‌ ಸಂಸದರಾಗಿ ಆಯ್ಕೆಯಾದರು.

ನ್ಯಾ. ಕೆ.ಎಸ್‌. ಹೆಗ್ಡೆ ಅವರನ್ನೇ ಸೋಲಿಸಿದರು!

ಮುಂದಿನ 1984ರ ಚುನಾವಣೆಯಲ್ಲಿ ಆಸ್ಕರ್‌ ಫರ್ನಾಂಡಿಸ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನ್ಯಾ. ಕೆ.ಎಸ್‌. ಹೆಗ್ಡೆ ಅವರನ್ನೇ ಸೋಲಿಸಿದರು. ನ್ಯಾ. ಹೆಗ್ಡೆ ಅವರು 1977ರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಜನತಾ ಪರಿವಾರದ ಅಭ್ಯರ್ಥಿಯಾಗಿ ಗೆದ್ದಿದ್ದರು. ಹೀಗೆ ಆಸ್ಕರ್‌ ಫರ್ನಾಂಡಿಸ್‌ ನಿರಂತರ ನಾಲ್ಕು ಬಾರಿ ಉಡುಪಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಆದರೆ 1998ರಲ್ಲಿ ಬಿಜೆಪಿಯ ಐ.ಎಂ. ಜಯರಾಂ ಶೆಟ್ಟಿ ಅವರೆದುರು ಆಸ್ಕರ್‌ ಫೆರ್ನಾಂಡಿಸ್‌ ಸೋತು ಹೋದರು. ಮತ್ತೆಂದೂ ಅವರು ಲೋಕಸಭೆಗೆ ಸ್ಪರ್ಧಿಸಲು ಹೋಗಲಿಲ್ಲ. ಬದಲಿಗೆ ನಾಲ್ಕು ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದರು.

ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಆಪ್ತರಾಗಿದ್ದ ಆಸ್ಕರ್‌, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮುಖ ಖಾತೆಯನ್ನು ನಿರ್ವಹಿಸಿದ್ದರು. 2021ರಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದರು.

ಧಾರವಾಡದಲ್ಲಿ ಸತತ 4 ಬಾರಿ ಗೆಲುವು ಸಾಧಿಸಿರುವ ಪ್ರಹ್ಲಾದ್ ಜೋಶಿ!

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ಸತತವಾಗಿ ಒಟ್ಟು ನಾಲ್ಕು ಬಾರಿ ಗೆದ್ದ ದಾಖಲೆ ಜೋಶಿಯವರದು. 2004ರಲ್ಲಿ ಪ್ರಹ್ಲಾದ ಜೋಶಿ ಅವರು ಮೊದಲ ಬಾರಿ ಧಾರವಾಡ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬಿ.ಎಸ್.ಪಾಟೀಲ್ ಅವರನ್ನು 83,078 ಮತಗಳ ಅಂತರದಿಂದ ಸೋಲಿಸಿ ಲೋಕಸಭೆ ಪ್ರವೇಶಿಸಿದರು. ಮೊದಲು ಧಾರವಾಡ ಉತ್ತರ ಮತ್ತು ಧಾರವಾಡ ದಕ್ಷಿಣ ಎಂಬ ಎರಡು ಪ್ರತ್ಯೇಕ ಲೋಕಸಭೆ ಕ್ಷೇತ್ರಗಳಿದ್ದವು. ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಇದು ಧಾರವಾಡ ಕ್ಷೇತ್ರ ಎಂದಾಯಿತು. 2009ರಲ್ಲಿ ಪ್ರಹ್ಲಾದ ಜೋಶಿ ಅವರು ಕಾಂಗ್ರೆಸ್ ನ ವಿನಯ್ ಕುಲಕರ್ಣಿ ಅವರನ್ನು 1,37,663 ಮತಗಳ ಅಂತರದಿಂದ ಸೋಲಿಸಿದರು.

2014ರಲ್ಲಿ ಜೋಶಿ ಅವರು ಕಾಂಗ್ರೆಸ್‌ನ ವಿನಯ್ ಕುಲಕರ್ಣಿ ಅವರನ್ನು 1,13,657 ಮತಗಳ ಅಂತರದಿಂದ ಮತ್ತೊಮ್ಮೆ ಪರಾಭವಗೊಳಿಸಿದರು. 2019ರಲ್ಲಿ ಅವರು 2,05,072 ಮತಗಳಿಂದ ಗೆದ್ದು ಕಾಂಗ್ರೆಸ್ ವಿನಯ್ ಕುಲಕರ್ಣಿ ಅವರಿಗೆ ಹ್ಯಾಟ್ರಿಕ್ ಸೋಲಿನ ರುಚಿ ತೋರಿಸಿದರು!

ಈದ್ಗಾ ಹೋರಾಟದಲ್ಲಿ ಮುಂಚೂಣಿ

90ರ ದಶಕದ ಆರಂಭದಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸುವ ಹೋರಾಟದಲ್ಲಿ ಪ್ರಹ್ಲಾದ್ ಜೋಶಿ ಅವರು ಮುಂಚೂಣಿಯಲ್ಲಿದ್ದರು. ಕಾಶ್ಮೀರ ಉಳಿಸಿ ಆಂದೋಲನದಲ್ಲೂ ಅವರು ಸಕ್ರಿಯರಾಗಿದ್ದರು. 2014ರಿಂದ 2016ರ ಅವಧಿಯಲ್ಲಿ ಜೋಶಿ ಅವರು ರಾಜ್ಯ ಬಿಜೆಪಿ ಅಧ್ಯಕ್ಷರೂ ಆಗಿದ್ದರು. ಜೋಶಿ ಅವರು ಈಗ ಕೇಂದ್ರದ ನರೇಂದ್ರ ಮೋದಿ ಸಂಪುಟದಲ್ಲಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳಂಥ ಮಹತ್ವದ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೋರ್ ಟೀಮ್‌ನಲ್ಲಿ ಪ್ರಹ್ಲಾದ್ ಜೋಶಿ ಅವರೂ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ: Parliament Flashback: ಧಾರವಾಡದಲ್ಲಿ ಸತತ 4 ಬಾರಿ ಗೆಲುವು ಸಾಧಿಸಿರುವ ಪ್ರಲ್ಹಾದ್ ಜೋಶಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Narendra Modi: ಕರ್ನಾಟಕ ಸರ್ಕಾರವು ಮುಸ್ಲಿಮರಿಗೆ ಮೀಸಲಾತಿ ನೀಡುವ ದಿಸೆಯಲ್ಲಿ ಆ ಧರ್ಮದ ಎಲ್ಲರನ್ನೂ ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯೇ ಮಾಹಿತಿ ನೀಡಿದೆ. “ಮೀಸಲಾತಿ ನೀಡಲು ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿ ಕೆಟಗರಿಗೆ ಸೇರಿಸಿದೆ. ಇದು ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ಧವಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಒಬಿಸಿ ಮೀಸಲಾತಿ ನೀಡಬೇಕೇ ಹೊರತು, ಇಡೀ ಧರ್ಮವನ್ನೇ ಒಬಿಸಿಗೆ ಸೇರಿಸಿರುವುದು ಸರಿಯಲ್ಲ” ಎಂದು ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ. ಈಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ಭೋಪಾಲ್‌: ಎಲ್ಲ ಧರ್ಮಗಳಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ನೀಡಬೇಕಾದ ಒಬಿಸಿ ಮೀಸಲಾತಿ ಪಟ್ಟಿಗೆ (OBC Reservation) ಕರ್ನಾಟಕ ಸರ್ಕಾರವು (Karnataka Government) ಎಲ್ಲ ಮುಸ್ಲಿಮರನ್ನು ಸೇರಿಸಿದೆ. ಇದರ ವಿರುದ್ಧ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗವು (NCBC) ಅಸಮಾಧಾನ ವ್ಯಕ್ತಪಡಿಸಿದೆ. “ಇದು ಸಾಮಾಜಿಕ ನ್ಯಾಯ ತತ್ವದ ವಿರುದ್ಧವಾದ ನಡೆ” ಎಂದಿದೆ. ಇದರ ಬೆನ್ನಲ್ಲೇ, ಒಬಿಸಿ ಪಟ್ಟಿಗೆ ಮುಸ್ಲಿಮರನ್ನು ಸೇರಿಸಿದ ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇತರೆ ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್‌ ಎಂದಿಗೂ ಶತ್ರು” ಎಂದು ಪ್ರಧಾನಿ ಟೀಕಿಸಿದ್ದಾರೆ.

ಮಧ್ಯಪ್ರದೇಶದ ಸಾಗರ್‌ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಒಬಿಸಿ ಮೀಸಲಾತಿ ಕುರಿತು ನರೇಂದ್ರ ಮೋದಿ ಮಾತನಾಡಿದರು. “ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದ ಎಲ್ಲರನ್ನೂ ಕಾಂಗ್ರೆಸ್‌ ಸರ್ಕಾರವು ಒಬಿಸಿ ಪಟ್ಟಿಗೆ ಸೇರಿಸಿದೆ. ಆ ಮೂಲಕ ಧರ್ಮದ ಆಧಾರದ ಮೇಲೆ ಹಿಂಬಾಗಿಲಿನಿಂದ ಮೀಸಲು ನೀಡಿದೆ. ಭವಿಷ್ಯದ ಪೀಳಿಗೆಗಳನ್ನು ನಾಶಪಡಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದೆ. ಅದರಲ್ಲೂ, ಕಾಂಗ್ರೆಸ್‌ ಎಂದಿಗೂ ಒಬಿಸಿ ಸಮುದಾಯದವರ ಶತ್ರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ಮೋದಿ ಕುಟುಕಿದ್ದಾರೆ.

“ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ನಮ್ಮ ಸಂವಿಧಾನವು ನಿರ್ಬಂಧಿಸುತ್ತದೆ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಇದರ ವಿರುದ್ಧ ನಿಲುವು ತಾಳಿದ್ದರು. ಆದರೆ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕೆಲ ವರ್ಷಗಳ ಹಿಂದೆಯೇ ಕಾಂಗ್ರೆಸ್‌ ನಿರ್ಣಯ ತೆಗೆದುಕೊಂಡಿತ್ತು. ಇಂತಹ ಕಳ್ಳಾಟಗಳ ಮೂಲಕ ಕಾಂಗ್ರೆಸ್‌ ಜನರನ್ನು ಮೂರ್ಖರನ್ನಾಗಿಸಲು ಯತ್ನಿಸುತ್ತಿದೆ. ಆದರೆ, ಒಬಿಸಿ ಸಮುದಾಯದವರ ಹಕ್ಕುಗಳನ್ನು ಕಸಿದುಕೊಂಡ ಕಾಂಗ್ರೆಸ್‌ಗೆ ಜನರೇ ಸರಿಯಾದ ಪಾಠ ಕಲಿಸಬೇಕು” ಎಂದು ಮೋದಿ ಚಾಟಿ ಬೀಸಿದ್ದಾರೆ.

ದಾಖಲೆ ಕೊಟ್ಟ ಎನ್‌ಸಿಬಿಸಿ

ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯು ದಾಖಲೆಗಳನ್ನೂ ನೀಡಿದೆ. ಮಾಹಿತಿ ಪ್ರಕಾರ, “ಕರ್ನಾಟಕಲ್ಲಿ ಮುಸ್ಲಿಮರ ಸಂಖ್ಯೆ ಶೇ.12.92ರಷ್ಟಿದೆ. ಕೆಟಗರಿ II-B ಅನ್ವಯ ಕರ್ನಾಟಕದಲ್ಲಿರುವ ಎಲ್ಲ ಮುಸ್ಲಿಮರು ಒಬಿಸಿ ಕೆಟಗರಿ ವ್ಯಾಪ್ತಿಗೆ ಸೇರುತ್ತಾರೆ. ಕೆಟಗರಿ 1ರಲ್ಲಿ 17 ಮುಸ್ಲಿಂ ಸಮುದಾಯಗಳು, 2ಎ ಕೆಟಗರಿಯಲ್ಲಿ 19 ಮುಸ್ಲಿಂ ಸಮುದಾಯಗಳು ಬರುತ್ತವೆ. ಇದು ಸಾಮಾಜಿಕ ನ್ಯಾಯ ತತ್ವದ ವಿರುದ್ಧದ ತೀರ್ಮಾನವಾಗಿದೆ” ಎಂಬುದಾಗಿ ಎನ್‌ಸಿಬಿಸಿ ತಿಳಿಸಿದೆ.

“ಹಿಂದುಗಳು, ಮುಸ್ಲಿಮರು ಸೇರಿ ಎಲ್ಲ ಧರ್ಮಗಳಲ್ಲಿಯೇ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯದವರಿಗೆ ಮಾತ್ರ ಒಬಿಸಿ ಮೀಸಲಾತಿ ನೀಡಲಾಗುತ್ತಿದೆ. ಆದರೆ, ಒಂದಿಡೀ ಧರ್ಮಕ್ಕೇ ಒಬಿಸಿ ಮೀಸಲಾತಿ ನೀಡುವುದು ಆ ಮೀಸಲಾತಿಯ ತತ್ವಕ್ಕೆ ವಿರುದ್ಧವಾಗಿದೆ. ಆದರೆ, ಎಲ್ಲ ಮುಸ್ಲಿಂ ಸಮುದಾಯದವರನ್ನು ಒಬಿಸಿಗೆ ಸೇರ್ಪಡೆ ಮಾಡುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಒಬಿಸಿ ಕೆಟಗರಿ ವ್ಯಾಪ್ತಿಯ ಹಿಂದುಳಿದ ಸಮುದಾಯದವರ ಹಕ್ಕುಗಳನ್ನು ಕಸಿದುಕೊಂಡಿದೆ. ಹಾಗೆಯೇ, ಮೀಸಲಾತಿ ನೀಡಿರುವ ಕುರಿತು ಯಾವುದೇ ಮಾಹಿತಿಯನ್ನೂ ರಾಜ್ಯ ಸರ್ಕಾರ ಒದಗಿಸಿಲ್ಲ” ಎಂಬುದಾಗಿ ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ.

ಮೀಸಲಾತಿ ಕೊಟ್ಟಿದ್ದು ನಿಜ ಎಂದ ಸಿದ್ದರಾಮಯ್ಯ

ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಕೊಟ್ಟಿದ್ದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ” ಈ ಕುರಿತು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಲಾಗಿರುವುದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರವ ನರೇಂದ್ರ ಮೋದಿ ಅವರ ಸರ್ಕಾರವಾಗಲಿ ಇಲ್ಲಿಯ ವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: Muslims OBC Quota: ಎಲ್ಲ ಮುಸ್ಲಿಮರನ್ನು ಒಬಿಸಿಗೆ ಸೇರಿಸಿದ ಸಿದ್ದರಾಮಯ್ಯ ಸರ್ಕಾರ; ರಾಷ್ಟ್ರೀಯ ಆಯೋಗ ಕೆಂಡ!

Continue Reading

ದೇಶ

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

ರಾಹುಲ್‌ ಗಾಂಧಿ ಅವರು ಗಂಡಸು ಹೌದೋ, ಅಲ್ಲವೋ ಎಂಬುದನ್ನು ತಿಳಿಯಲು ಬಿಜೆಪಿ ನಾಯಕರು ತಮ್ಮ ತಾಯಿ, ಪುತ್ರಿಯರನ್ನು ಅವರ ಜತೆ ಮಲಗಿಸಬೇಕು ಎಂದು ಗುಜರಾತ್‌ ಕಾಂಗ್ರೆಸ್‌ ನಾಯಕ ಪ್ರತಾಪ್‌ ದುಧನ್‌ ಹೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇವರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Pratap Dudhat
Koo

ಗಾಂಧಿನಗರ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದ ಸೃಷ್ಟಿಸುತ್ತಿವೆ. ಪ್ರತಿಪಕ್ಷ ನಾಯಕರ ವಿರುದ್ಧ ಮಾತನಾಡುವ ಭರದಲ್ಲಿ ಅವಾಚ್ಯ, ಅಶ್ಲೀಲ ಪದಗಳ ಬಳಕೆ, ಏಕವಚನದಲ್ಲಿಯೇ ದಾಳಿ ಮಾಡುವುದು ಸೇರಿ ಹಲವು ರೀತಿಯ ಹೇಳಿಕೆಗಳು ಜನರಲ್ಲಿ ಅಸಹ್ಯ ಮೂಡಿಸಿವೆ. ಇದರ ಬೆನ್ನಲ್ಲೇ, ಗುಜರಾತ್‌ ಕಾಂಗ್ರೆಸ್‌ ನಾಯಕ (Gujarat Congress Leader) ಪ್ರತಾಪ್‌ ದುಧತ್‌ (Pratap Dudhat) ಅವರು ನೀಡಿದ ಹೇಳಿಕೆಯು ಭಾರಿ ವಿವಾದ ಭುಗಿಲೆಬ್ಬಿಸಿದೆ. “ರಾಹುಲ್‌ ಗಾಂಧಿ ಅವರು ಗಂಡಸೋ ಅಥವಾ ನಪುಂಸಕರೋ ಎಂಬುದನ್ನು ತಿಳಿಯಲು, ನಿಮ್ಮ ತಾಯಿ, ಪುತ್ರಿಯರನ್ನು ಅವರ ಜತೆ ಮಲಗಿಸಿ” ಎಂಬುದಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವುದು ಭಾರಿ ಸಂಚಲನ ಮೂಡಿಸಿದೆ.

ಚುನಾವಣಾ ಸಭೆಯೊಂದರಲ್ಲಿ ಮಾತನಾಡಿದ ಪ್ರತಾಪ್‌ ದುಧತ್‌, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು. “ಬಿಜೆಪಿ ನಾಯಕರು ಯಾವಾಗಲೂ ರಾಹುಲ್‌ ಗಾಂಧಿ ಅವರ ಮದುವೆ ಬಗ್ಗೆ ಮಾತನಾಡುತ್ತಾರೆ. ಅಷ್ಟಕ್ಕೂ, ರಾಹುಲ್‌ ಗಾಂಧಿ ಅವರು ಗಂಡಸೋ ಅಥವಾ ನಪುಂಸಕರೋ ಎಂಬುದನ್ನು ತಿಳಿಯಲು ನಿಮ್ಮ ಪುತ್ರಿಯರು, ತಾಯಿಯನ್ನು ಅವರ ಜತೆ ಮಲಗಿಸಿ. ಆಗ ನಿಮಗೆ ರಾಹುಲ್‌ ಗಾಂಧಿ ಗಂಡಸು ಹೌದೋ, ಅಲ್ಲವೋ ಎಂಬುದು ಗೊತ್ತಾಗುತ್ತದೆ” ಎಂದು ಹೇಳಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದ್ದು, ಕಾಂಗ್ರೆಸ್ ನಾಯಕನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಾಪ್‌ ದುಧತ್‌ ಅವರ ವಿಡಿಯೊ ವೈರಲ್‌ ಆಗುತ್ತಲೇ ಜನ ಪ್ರತಿಕ್ರಿಯಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. “ದೇಶದ ಹೆಣ್ಣುಮಕ್ಕಳಿಗೆ ಕಾಂಗ್ರೆಸ್‌ ಕೊಡುವ ಗೌರವ ಹೇಗಿದೆ ನೋಡಿ” ಎಂಬುದಾಗಿ ಒಬ್ಬರು ಟೀಕಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 25 ಕ್ಷೇತ್ರಗಳಲ್ಲೂ ಗೆಲ್ಲಬಾರದು ಎಂದು ತೀರ್ಮಾನಿಸಿದೆ. ಇದೇ ಕಾರಣಕ್ಕಾಗಿ ಆ ಪಕ್ಷದ ನಾಯಕರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮತಗಳನ್ನು ಕೇಳಲು ಬಂದಾಗ ಇಂತಹ ನಾಯಕರಿಗೆ ಹೆಣ್ಣುಮಕ್ಕಳು ಸರಿಯಾಗಿ ಪಾಠ ಕಲಿಸಬೇಕು” ಎಂದು ಇನ್ನೊಬ್ಬರು ಹೇಳಿದ್ದಾರೆ. ಅಷ್ಟೇ ಅಲ್ಲ, “ಈ ಕಾಂಗ್ರೆಸ್ ನಾಯಕನ ವಿರುದ್ಧ ಕೇಸ್‌ ದಾಖಲಿಸಬೇಕು”, “ಹೆಣ್ಣುಮಕ್ಕಳ ಬಗ್ಗೆ ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡಿ, ಮಾತಾಡಿಯೇ ಕಾಂಗ್ರೆಸ್‌ ಸೋಲಿಗೆ ಕಾರಣರಾಗಿದ್ದಾರೆ”, “ಕಾಂಗ್ರೆಸ್‌ನಲ್ಲಿ ಟಿಕೆಟ್‌ ಗಿಟ್ಟಿಸಿಕೊಳ್ಳಲು ಹೀಗೆ ಮಾತನಾಡುವುದೇ ಮೊದಲ ಅರ್ಹತೆ ಇರಬೇಕು” ಎಂಬುದು ಸೇರಿ ನೂರಾರು ಜನ ಕಾಂಗ್ರೆಸ್‌ ನಾಯಕನ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ನಾಯಕ ಸುರ್ಜೇವಾಲಾ ಅವರ ವಿವಾದಾತ್ಮಕ ಹೇಳಿಕೆ ಬಳಿಕ ಟಿಎಂಸಿಗೂ ಸಂಕಷ್ಟ

Continue Reading

Lok Sabha Election 2024

Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

Lok Sabha Election 2024: ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಶಿವಕುಮಾರ್‌ ಎಲ್ಲಿಯೂ ಎಚ್ಚರ ತಪ್ಪಬಾರದು ಎಂಬ ನಿಟ್ಟಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ಅಪಾರ್ಟ್‌ಮೆಂಟ್‌ಗಳಿಗೂ ಭೇಟಿ ನೀಡಿ ಮತ ಯಾಚನೆ ಮಾಡುತ್ತಿದ್ದಾರೆ. ಡಿಕೆಶಿ ಮುಂದಿನ ಸಿಎಂ ಎಂಬ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ. ಈ ನಡುವೆ ತಮ್ಮ ಪರವಾಗಿ ಖ್ಯಾತ ಸಿನಿಮಾ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಕರೆತರಲು ಡಿ.ಕೆ. ಸುರೇಶ್‌ ಪ್ಲ್ಯಾನ್‌ ಮಾಡಿದ್ದರು ಎನ್ನಲಾಗಿದೆ. ದರ್ಶನ್ ಬರುವ ಸುಳಿವು ಸಿಗುತ್ತಿದ್ದಂತೆ ಅಲರ್ಟ್‌ ಆದ ಮುನಿರತ್ನ ಅವರು ಯಾವುದೇ ಕಾರಣಕ್ಕೂ ಕ್ಷೇತ್ರಕ್ಕೆ ಬಂದು ಮತ ಯಾಚನೆ ಮಾಡಬಾರದು ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Lok Sabha Election 2024 Munirathna stops Darshan from campaigning for DK Suresh
Koo

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣಾ (Lok Sabha Election 2024) ಕಣ ಕರ್ನಾಟಕದ ಮಟ್ಟಿಗೆ ರಂಗೇರಿದೆ. ಹಲವು ಕಡೆ ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿದೆ. ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bangalore Rural Lok Sabha constituency) ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಪರಸ್ಪರರನ್ನು ಸೋಲಿಸಲು ನಾನಾ ಕಸರತ್ತುಗಳು ನಡೆಯುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್‌ (DK Brothers) ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕಲು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಪಣತೊಟ್ಟಿದ್ದಾರೆ. ಪ್ರಚಾರಕ್ಕಾಗಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Challenging Star Darshan) ಅವರನ್ನು ಕರೆತರಲು ಡಿ.ಕೆ. ಸುರೇಶ್‌ (DK Suresh) ಪ್ಲ್ಯಾನ್‌ ಮಾಡಿದ್ದರು ಎಂಬುದು ತಿಳಿಯುತ್ತಿದ್ದಂತೆ ಚುರುಕಾದ ಮುನಿರತ್ನ, ದರ್ಶನ್‌ ಬಾರದಂತೆ ತಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಅವರಿಗೆ ಸೋಲೇ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈ ಬಾರಿ ಬಿಜೆಪಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸುವ ಮೂಲಕ ಪ್ರಬಲ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಇದು ಕ್ಷೇತ್ರದಲ್ಲಿ ಸಂಚಲನವನ್ನುಂಟು ಮಾಡಿತ್ತು. ಅಲ್ಲದೆ, ಕಮಲ-ದಳ ನಾಯಕರು ಒಟ್ಟಾಗಿ ಡಿಕೆ ಸಹೋದರರನ್ನು ಸೋಲಿಸಲು ಪಣ ತೊಟ್ಟಿದ್ದರು.

ಲೆಕ್ಕಾಚಾರವೇ ಉಲ್ಟಾ

ಇದರಿಂದ ಎಚ್ಚೆತ್ತ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಶಿವಕುಮಾರ್‌ ಎಲ್ಲಿಯೂ ಎಚ್ಚರ ತಪ್ಪಬಾರದು ಎಂಬ ನಿಟ್ಟಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ಅಪಾರ್ಟ್‌ಮೆಂಟ್‌ಗಳಿಗೂ ಭೇಟಿ ನೀಡಿ ಮತ ಯಾಚನೆ ಮಾಡುತ್ತಿದ್ದಾರೆ. ಡಿಕೆಶಿ ಮುಂದಿನ ಸಿಎಂ ಎಂಬ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ. ಈ ನಡುವೆ ತಮ್ಮ ಪರವಾಗಿ ಖ್ಯಾತ ಸಿನಿಮಾ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಕರೆತರಲು ಡಿ.ಕೆ. ಸುರೇಶ್‌ ಪ್ಲ್ಯಾನ್‌ ಮಾಡಿದ್ದರು ಎನ್ನಲಾಗಿದೆ. ಕಾರಣ, ದರ್ಶನ್‌ ಅವರಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅವರದ್ದೇ ಆದ ಫ್ಯಾನ್ಸ್‌ ಫಾಲೋವರ್ಸ್‌ಗಳಿದ್ದಾರೆ. ಒಂದು ವೇಳೆ ದರ್ಶನ್‌ ಬಂದು ಪ್ರಚಾರ ಮಾಡಿದರೆ ಯುವ ಸಮುದಾಯದ ಮತಗಳನ್ನು ಸೆಳೆಯಬಹುದು ಎಂಬ ಲೆಕ್ಕಾಚಾರಗಳನ್ನು ಹಾಕಿಕೊಳ್ಳಲಾಗಿತ್ತು ಎನ್ನಲಾಗಿದೆ.

ದರ್ಶನ್‌ ಬಾರದಂತೆ ತಡೆದ ಮುನಿರತ್ನ

ಬೆಂಗಳೂರು ಗ್ರಾಮಾಂತರಕ್ಕೆ ದರ್ಶನ್ ಬರುವ ಸುಳಿವು ಸಿಗುತ್ತಿದ್ದಂತೆ ಅಲರ್ಟ್‌ ಆದ ಮುನಿರತ್ನ ಅವರು ಯಾವುದೇ ಕಾರಣಕ್ಕೂ ಕ್ಷೇತ್ರಕ್ಕೆ ಬಂದು ಮತಯಾಚನೆ ಮಾಡಬಾರದು ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ದರ್ಶನ್‌ ಅವರ ಹಲವು ಸಿನಿಮಾಗಳಿಗೆ ನಿರ್ಮಾಪಕರಾಗಿರುವ ಮುನಿರತ್ನ ಅವರು ದರ್ಶನ್‌ಗೆ ಒಳ್ಳೆಯ ಸ್ನೇಹಿತರು ಕೂಡಾ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಅವರ ಮಾತನ್ನು ಒಪ್ಪಿ ದರ್ಶನ್‌ ಅವರು ಪ್ರಚಾರಕ್ಕೆ ಬರುವುದರಿಂದ ಹಿಂದೆ ಸರಿದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

ಮುನಿರತ್ನಗೆ ಜಿದ್ದು ಏಕೆ?

ಡಿಕೆ ಬ್ರದರ್ಸ್‌ ಅನ್ನು ಸೋಲಿಸಬೇಕು ಎಂದು ಶಾಸಕ ಮುನಿರತ್ನ ಅವರಿಗೆ ಜಿದ್ದು ತುಸು ಹೆಚ್ಚಾಗಿಯೇ ಇದೆ. ಇದಕ್ಕೆ ಕಾರಣ ಇಲ್ಲವೆಂದಲ್ಲ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮುನಿರತ್ನ ಅವರನ್ನು ಸೋಲಿಸಬೇಕು ಎಂದು ಡಿಕೆ ಸಹೋದರರು ಪಣ ತೊಟ್ಟಿದ್ದರು. ಈ ನಿಟ್ಟಿನಲ್ಲಿ ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಮುನಿರತ್ನ ಗೆಲುವು ಸಾಧಿಸಿದ್ದರು. ಇನ್ನು ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಆರ್‌ ಆರ್‌ ನಗರಕ್ಕೆ ಕೊಟ್ಟ ಅನುದಾನವನ್ನು ಡಿ.ಕೆ. ಶಿವಕುಮಾರ್‌ ವಾಪಸ್‌ ಪಡೆದುಕೊಂಡಿದ್ದರು. ಇದೆಲ್ಲ ರೀತಿಯಲ್ಲಿ ಮುನಿರತ್ನ ಅವರಿಗೆ ಡಿ.ಕೆ. ಸಹೋದರರ ಮೇಲೆ ಸಿಟ್ಟಿದೆ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಡಿಕೆ ಬ್ರದರ್ಸ್‌ಗೆ ಸೋಲಿನ ರುಚಿ ತೋರಿಸಲು ಪಣತೊಟ್ಟಿದ್ದಾರೆ ಎನ್ನಲಾಗಿದೆ.

Continue Reading

Lok Sabha Election 2024

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Lok Sabha Election 2024: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಮತ ಹಾಕುವವರಿಗೆ ಆಫರ್ ಮೇಲೆ ಆಫರ್‌ಗಳು ಬರುತ್ತಿವೆ. ಈ ಬಗ್ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೇ ಮತದಾನ ಮಾಡಿದವರಿಗೆ ಆಫರ್ ನೀಡಲಾಗಿದೆ. ಬಹುತೇಕ ಹೋಟೆಲ್‌ಗಳಲ್ಲಿ 10% ಆಫರ್ ನೀಡಲಾಗಿದೆ. ಮತ ಚಲಾವಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ ನಮ್ಮದೊಂದು ಸಣ್ಣ ಪ್ರಯತ್ನ ಎಂದು ಹೋಟೆಲ್‌ ಮಾಲೀಕರು ಹೇಳುತ್ತಾರೆ.

VISTARANEWS.COM


on

Lok Sabha Election 2024 Vote on April 26 and get 10 percent discount on these hotels
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಹೆಚ್ಚಳ ಮಾಡಲು ನಾನಾ ಕಸರತ್ತುಗಳು ನಡೆಯುತ್ತಿವೆ. ಸರ್ಕಾರಿ ಕಚೇರಿ, ಐಟಿ ಕಂಪನಿಗಳಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಕೆಲವು ಹೋಟೆಲ್‌ ಮಾಲೀಕರು ತಮ್ಮದೊಂದು ಪ್ರಯತ್ನಕ್ಕೆ ಕೈಹಾಕಿದ್ದಾರೆ. ಏಪ್ರಿಲ್‌ 26ರ ಮೊದಲ ಹಂತದ ಚುನಾವಣೆ ದಿನ ಬೆಂಗಳೂರಿನಲ್ಲಿ ಮತ ಹಾಕಿ, ತಮ್ಮ ಹೋಟೆಲ್‌ಗಳಿಗೆ ಬಂದರೆ ಶೇಕಡಾ 10ರಷ್ಟು ರಿಯಾಯಿತಿ (Discounts in Hotels) ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮತ ಹಾಕಿ, ಬೆರಳು ತೋರಿಸಿ. ಪ್ರತಿ ಐಟಂ ಮೇಲೆ ಶೇಕಡಾ 10 ಡಿಸ್ಕೌಂಟ್‌ ಪಡೆಯಿರಿ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಮತ ಹಾಕುವವರಿಗೆ ಆಫರ್ ಮೇಲೆ ಆಫರ್‌ಗಳು ಬರುತ್ತಿವೆ. ಈ ಬಗ್ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೇ ಮತದಾನ ಮಾಡಿದವರಿಗೆ ಆಫರ್ ನೀಡಲಾಗಿದೆ. ಬಹುತೇಕ ಹೋಟೆಲ್‌ಗಳಲ್ಲಿ 10% ಆಫರ್ ನೀಡಲಾಗಿದೆ. ಮತ ಚಲಾವಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ ಅವರಲ್ಲಿ ಜಾಗೃತಿ ಮೂಡಿಸಲು (Voter awareness) ನಮ್ಮದೊಂದು ಸಣ್ಣ ಪ್ರಯತ್ನ ಎಂದು ಹೋಟೆಲ್‌ ಮಾಲೀಕರು ಹೇಳುತ್ತಾರೆ.

ನಿಸರ್ಗ ಗ್ರ್ಯಾಂಡ್‌, ಕೆಫೆ ಉಡುಪಿ ರುಚಿ, ಅಯ್ಯಂಗಾರ್‌ ವೆನ್‌ ಫ್ರೆಶ್‌, ಕಾಮತ್‌ ಸೇರಿದಂತೆ ಹಲವು ಹೋಟೆಲ್‌ಗಳು ಆಫರ್‌ಗಳನ್ನು ನೀಡಿವೆ.

Lok Sabha Election 2024 Vote on April 26 and get 10 percent discount on these hotels

ಏ.26ರಂದು ಬೆಂಗಳೂರು ಸೇರಿ 3 ನಗರಗಳಲ್ಲಿ ಮತದಾರರಿಗೆ ರ‍್ಯಾಪಿಡೋದಿಂದ ಉಚಿತ ರೈಡ್‌ ಆಫರ್‌

ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತದಾನ ಪ್ರೋತ್ಸಾಹಿಸಲು ಉಚಿತ ಹಾಗೂ ರಿಯಾಯಿತಿ ದರದಲ್ಲಿ ಊಟ, ತಿಂಡಿ ವಿತರಣೆಗೆ ಹಲವು ಹೋಟೆಲ್‌ಗಳಲ್ಲಿ ಮುಂದಾಗಿದೆ. ಅದೇ ರೀತಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲು ಅನುಕೂಲವಾಗಲು ಭಾರತದ ಅಗ್ರಗಣ್ಯ ಪ್ರಯಾಣ ಅಪ್ಲಿಕೇಶನ್ ರ‍್ಯಾಪಿಡೋ ಸಂಸ್ಥೆ “ಸವಾರಿ ಜಿಮ್ಮೆದಾರಿ ಕಿ” ಉಪಕ್ರಮದ ಭಾಗವಾಗಿ ಏ.26ರಂದು ಬೆಂಗಳೂರು, ಮೈಸೂರು ಹಾಗೂ ಮಂಗಳೂರು ನಗರದಲ್ಲಿ ಮತದಾರರಿಗೆ ರ‍್ಯಾಪಿಡೋ ಉಚಿತ ಬೈಕ್‌ ಸವಾರಿ (Rapido Bike Taxi) ಒದಗಿಸುವಾಗಿ ಘೋಷಿಸಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಸೌಲಭ್ಯ ಸಿಗಲಿದೆ.

ಭಾರತದ ಚುನಾವಣಾ ಆಯೋಗ (ಇಸಿಐ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದೊಂದಿಗೆ ರ‍್ಯಾಪಿಡೋ, ಭಾರತದ ಸಾರ್ವತ್ರಿಕ ಚುನಾವಣೆ-2024 ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಒದಗಿಸಲು ನಿರ್ಧರಿಸಿದೆ. ಹೀಗಾಗಿ ಏ.26ರಂದು ಬೆಂಗಳೂರಿನ ಮತದಾರರು ರ‍್ಯಾಪಿಡೋ ಉಚಿತ ಸವಾರಿ ಅನುಕೂಲ ಪಡೆಯಬಹುದಾಗಿದೆ.

ಮತದಾನದ (ಏ.26) ದಿನದಂದು, ಮತದಾರರು ‘VOTENOW’ ಕೋಡ್ ಅನ್ನು ಬಳಸಿಕೊಂಡು ರ‍್ಯಾಪಿಡೋ ಅಪ್ಲಿಕೇಶನ್‌ನಲ್ಲಿ ಉಚಿತ ಸವಾರಿಗಳನ್ನು ಪಡೆಯಬಹುದು ಮತ್ತು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಬಹುದು. ಈ ಉಪಕ್ರಮವು ನಿವಾಸಿಗಳ ಮತದಾನದ ಹಕ್ಕು ಚಲಾವಣೆ ಸುಲಭಗೊಳಿಸುವ ಗುರಿ ಹೊಂದಿದೆ. ಚುನಾವಣಾ ದಿನದಂದು ಉಚಿತ ಸವಾರಿಗಳನ್ನು ಒದಗಿಸಲು 100ಕ್ಕೂ ಹೆಚ್ಚು ನಗರಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕ್ಯಾಪ್ಟನ್‌ಗಳನ್ನು ರ‍್ಯಾಪಿಡೋ ನಿಯೋಜಿಸುತ್ತದೆ. ಭಾರತದ ಚುನಾವಣಾ ಆಯೋಗ ಬೆಂಬಲದೊಂದಿಗೆ, ರ‍್ಯಾಪಿಡೋ ಕರ್ನಾಟಕದ ಮತದಾರರಿಗೆ ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳಾದ್ಯಂತ ಚುನಾವಣಾ ದಿನದಂದು ಉಚಿತ ಬೈಕ್ ಟ್ಯಾಕ್ಸಿ ಸವಾರಿಗಳನ್ನು ನೀಡಲಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗಿನ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಧನಾತ್ಮಕ ಬದಲಾವಣೆಯನ್ನು ಪ್ರೇರೇಪಿಸುವ ಬದ್ಧತೆ ಹೊಂದಿದೆ. ಈ ಕುರಿತು ರ‍್ಯಾಪಿಡೋ ಸಹ-ಸಂಸ್ಥಾಪಕ ಪವನ್ ಗುಂಟುಪಲ್ಲಿ ಮಾತನಾಡಿ, “ಭಾರತೀಯ ಸಾರ್ವತ್ರಿಕ ಚುನಾವಣೆ 2024 ರಲ್ಲಿ ಮತದಾನ ಮಾಡುವ ಮೂಲಕ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನ ಪ್ರತಿಯೊಬ್ಬ ಮತದಾರರು ತಮ್ಮ ನಾಗರಿಕ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಲು ನಾವು ಈ ಉಪಕ್ರಮವನ್ನು ಕೈಗೊಳ್ಳುತ್ತಿದ್ದೇವೆ. ಬೆಂಗಳೂರಿನ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ನಿಯೋಜಿಸಿದ್ದೇವೆ. ವಿಶೇಷವಾಗಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಸಮಾನ ಅವಕಾಶ ಹೊಂದಿದ್ದಾರೆ ಎಂದು ನಾವು ನಿರ್ದಿಷ್ಟವಾಗಿ ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ಅವರಿಗೆ ಉಚಿತ ಆಟೋ ಮತ್ತು ಕ್ಯಾಬ್ ಸವಾರಿಗಳನ್ನು ವಿಸ್ತರಿಸುವ ಮೂಲಕ, ನಾವು ಒಳಗೊಳ್ಳುವಿಕೆ ಮತ್ತು ಸಾಮಾಜಿಕ ಜವಾಬ್ದಾರಿಗೆ ನಮ್ಮ ಬದ್ಧತೆಯನ್ನು ದ್ವಿಗುಣಗೊಳಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಮುಂದುವರೆದು, ಈ ಉಚಿತ ಸವಾರಿಗಳನ್ನು ನೀಡುವ ಮೂಲಕ, ನಾವು ಕರ್ನಾಟಕದಲ್ಲಿ ನಮ್ಮ ರ‍್ಯಾಪಿಡೋ ನಾಯಕರು ಕೇವಲ ಚಾಲಕರಿಗಿಂತ ಹೆಚ್ಚಿನ ಮತದಾರರು, ಹೆಚ್ಚಿನ ಮತದಾನವನ್ನು ಸಕ್ರಿಯಗೊಳಿಸುತ್ತಾರೆ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಹೆಚ್ಚು ಪ್ರಾತಿನಿಧಿಕ ಚುನಾವಣಾ ವ್ಯವಸ್ಥೆಯನ್ನು ಉತ್ತೇಜಿಸುತ್ತಾರೆ ಎಂದರು.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗೆ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಬದಲಾವಣೆಯನ್ನು ಪ್ರೇರೇಪಿಸುವ ಬ್ರಾಂಡ್ ಆಗಿರುವ ಅದರ ಬದ್ಧತೆಯನ್ನು ಒತ್ತಿಹೇಳುತ್ತದೆ. ಈ ರೀತಿಯ ಉಪಕ್ರಮಗಳ ಮೂಲಕ, ರ‍್ಯಾಪಿಡೋ ದೇಶಾದ್ಯಂತ ಜನರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಯನ್ನು ಮಾಡುವ ತನ್ನ ಸಮರ್ಪಣೆಯನ್ನು ಪ್ರದರ್ಶಿಸುವುದನ್ನು ಮುಂದುವರೆಸಿದೆ. ಈ ಉಪಕ್ರಮವು ತಮ್ಮ ಮತ ಚಲಾಯಿಸುವ ಮೂಲಕ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಕರ್ನಾಟಕದ ಮತದಾರರ ಜನಸಂಖ್ಯೆಯನ್ನು ಸಶಕ್ತಗೊಳಿಸಲು ಮತ್ತು ಉತ್ತೇಜಿಸಲು ರ‍್ಯಾಪಿಡೋ ಅವರ ಸಮರ್ಪಣೆಯನ್ನು ಒತ್ತಿಹೇಳುತ್ತದೆ.

ಇದನ್ನೂ ಓದಿ | Bike Taxi Services: ಬೈಕ್ ಟ್ಯಾಕ್ಸಿ ಸವಾರರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ

ನಾಗರಿಕ ಒಗ್ಗೂಡುವಿಕೆ ಪೂರ್ವಭಾವಿ ಹೆಜ್ಜೆಯಲ್ಲಿ, ರ‍್ಯಾಪಿಡೋ ತನ್ನ ಎಲ್ಲಾ ಸಂಪನ್ಮೂಲಗಳನ್ನು ಭಾರತೀಯ ಚುನಾವಣಾ ಆಯೋಗದೊಂದಿಗೆ (ಇಸಿಐ) ಕೈಜೋಡಿಸುವ ಮೂಲಕ ಬೆಂಗಳೂರಿನ ಮತದಾರರಿಗೆ ಉಚಿತ ಬೈಕ್ ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ರೈಡ್‌ಗಳನ್ನು ನೀಡುತ್ತಿದೆ

Continue Reading
Advertisement
Narsingh Yadav
ಕ್ರೀಡೆ2 mins ago

Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

Narendra Modi
ದೇಶ17 mins ago

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Neha Murder Case
ಕರ್ನಾಟಕ35 mins ago

Neha Murder Case: ಹುಬ್ಬಳ್ಳಿಯಲ್ಲಿ ಸಿಐಡಿ ಸ್ಥಳ ಮಹಜರು; ಫಯಾಜ್‌ನ ಗಲ್ಲಿಗೇರಿಸಲು ಎಬಿವಿಪಿ ಕಾರ್ಯಕರ್ತರ ಆಗ್ರಹ

IPL 2024
ಕ್ರೀಡೆ37 mins ago

IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

Pratap Dudhat
ದೇಶ46 mins ago

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

Lok Sabha Election 2024 Munirathna stops Darshan from campaigning for DK Suresh
Lok Sabha Election 202457 mins ago

Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

Money Guide
ಮನಿ-ಗೈಡ್1 hour ago

Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Karnataka Weather
ಕರ್ನಾಟಕ1 hour ago

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Lok Sabha Election 2024 Vote on April 26 and get 10 percent discount on these hotels
Lok Sabha Election 20242 hours ago

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Actress Saree Fashion
ಫ್ಯಾಷನ್2 hours ago

Actress Saree Fashion: ಟ್ರೆಂಡಿ ಸನ್‌ ಶೇಡ್‌ ಸೀರೆಯಲ್ಲಿ ನಟಿ ತೇಜಸ್ವಿನಿ ಶರ್ಮಾ ಸಮ್ಮರ್‌ ಲುಕ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌