PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ… - Vistara News

Lok Sabha Election 2024

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

PM Narendra Modi Live : ಭಾನುವಾರ (ಏಪ್ರಿಲ್‌ 28) ಬೆಳಗಾವಿಯಲ್ಲಿ ಸಮಾವೇಶ ಪೂರ್ಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇದರ ಲೈವ್‌ ವಿಡಿಯೊ ಇಲ್ಲಿದೆ.

VISTARANEWS.COM


on

PM Narendra Modi Live in Sirsi campaign meeting here
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ (ಉತ್ತರ ಕನ್ನಡ): ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Modi in Karnataka) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅಂತೆಯೇ ಮೊದಲು ಬೆಳಗಾವಿ ಸಮಾವೇಶದಲ್ಲಿ ಪಾಲ್ಗೊಂಡು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದಾರೆ. ಈ ಸಮಾವೇಶದ ನೇರ ಪ್ರಸಾರವನ್ನು (Narendra Modi Live) ಇಲ್ಲಿ ವೀಕ್ಷಿಸಿ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಭಾನುವಾರ ಬೆಳಗ್ಗೆ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ನರೇಂದ್ರ ಮೋದಿ ಅವರು ಭಾಷಣ ಮಾಡಿ, ಈಗ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election: ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ; ಬಂಗಾಳದಲ್ಲಿ ಹೆಚ್ಚು

Lok Sabha Election: ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಈಗ ನಾಲ್ಕನೇ ಹಂತದಲ್ಲಿ ಶೇ.62ರಷ್ಟು ಮತದಾನ ದಾಖಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ (Voter Turnout) ದಾಖಲಾಗಿದೆ. 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಬಿಸಿಲನ್ನೂ ಲೆಕ್ಕಿಸದೆ ಜನ ಮತದಾನ ಮಾಡಿದರು. ಕೆಲವು ಕಡೆ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆಯಿತು.

ಯಾವ ರಾಜ್ಯದಲ್ಲಿ ಎಷ್ಟು ಮತದಾನ?

ಸಂಜೆ 5 ಗಂಟೆ ಸುಮಾರಿಗೆ ಆಂಧ್ರಪ್ರದೇಶದಲ್ಲಿ ಶೇ.68.04, ಬಿಹಾರ ಶೇ.54.14, ಜಮ್ಮು ಮತ್ತು ಕಾಶ್ಮೀರ ಶೇ.35.75, ಜಾರ್ಖಂಡ್ ಶೇ.63.14, ಮಧ್ಯಪ್ರದೇಶ ಶೇ.68.01, ಮಹಾರಾಷ್ಟ್ರ ಶೇ.52.49, ಒಡಿಶಾ ಶೇ.62.96, ತೆಲಂಗಾಣ ಶೇ.61.16, ಉತ್ತರ ಪ್ರದೇಶ ಶೇ.56.35, ಪಶ್ಚಿಮ ಬಂಗಾಳದಲ್ಲಿ ಶೇ.75.66ರಷ್ಟು ಮತದಾನ ದಾಖಲಾಗಿದೆ. ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು.

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಐದನೇ ಹಂತದ ಮತದಾನವು ಮೇ 20ರಂದು ನಡೆಯಲಿದೆ. ಜೂನ್‌ 1ರಂದು ಕೊನೆಯ ಅಥವಾ ಏಳನೇ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು ದೇಶಾದ್ಯಂತ ಒಟ್ಟು 96 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಎನ್‌ಡಿಎ ಒಟ್ಟು 97 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಒಂದೊಂದು ಕ್ಷೇತ್ರಗಳಲ್ಲಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಅಠಾವಳೆ) ಪಕ್ಷ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಮತ್ತು ಬಿಜೆಪಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೈತ್ರಿಕೂಟಕ್ಕೆ ಸವಾಲೊಡ್ಡಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಎನ್‌ಡಿಎ ಮೈತ್ರಿಕೂಟ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇನ್ನು ಈ ಹಂತದಲ್ಲಿ ಮತ್ತೊಂದು ಆಸಕ್ತಿಕರ ವಿಚಾರವೇನೆಂದರೆ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಅತಿ ದೊಡ್ಡ ಪಾಲುದಾರ ಪಕ್ಷವಾಗಿದ್ದು, ಕಳೆದ ಹಂತಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಬಿಜೆಪಿ ಒಟ್ಟು 25ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಮಿತ್ರ ಪಕ್ಷ ಟಿಡಿಪಿಗೆ ಬಿಟ್ಟುಕೊಟ್ಟಿದೆ. ಇನ್ನು ಎನ್‌ಡಿಎ ಯ ಇತರೆ ಸದಸ್ಯ ಪಕ್ಷಗಳು ಈ ಹಂತದಲ್ಲಿ ಮೂರು ಅಥವಾ ಅದಕ್ಕಿಂತಲೂ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದೇ ರೀತಿಯ ಸೀಟು ಹಂಚಿಕೆಯನ್ನು ಐದನೇ ಮತ್ತು ಏಳನೇ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

Continue Reading

ದೇಶ

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Modi Roadshow Live: ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ಇದಕ್ಕೂ ಮೊದಲು ಅವರು ಸೋಮವಾರವೇ ಮೋದಿ ಅವರು ವಾರಾಣಸಿಯಲ್ಲಿ ರೋಡ್‌ ಶೋ ಮೂಲಕ ಅಲೆ ಸೃಷ್ಟಿಸಿದ್ದಾರೆ.

VISTARANEWS.COM


on

Modi Roadshow Live
Koo

ವಾರಾಣಸಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಶತಾಯ ಗತಾಯ ಹ್ಯಾಟ್ರಿಕ್‌ ಸಾಧಿಸುವ ಉತ್ಸಾಹದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಯಲ್ಲಿ ಬೃಹತ್‌ ರೋಡ್‌ ಶೋ (Modi Roadshow Live) ಕೈಗೊಂಡಿದ್ದಾರೆ. ಬನಾರಸ್‌ ಹಿಂದು ವಿಶ್ವವಿದ್ಯಾಲಯದ ಗೇಟ್‌ನಿಂದ ರೋಡ್‌ ಶೋ ಆರಂಭವಾಗದ್ದು, ಕಾಶಿ ವಿಶ್ವನಾಥ ಧಾಮದ ಗೇಟ್ ಸಂಖ್ಯೆ 4ರಲ್ಲಿ ರೋಡ್‌ ಶೋ ಮುಕ್ತಾಯಗೊಳ್ಳಲಿದೆ. ಮೋದಿ ಅವರನ್ನು ಕಣ್ತುಂಬಿಕೊಳ್ಳಲು ರಸ್ತೆಯುದ್ದಕ್ಕೂ ಸಾವಿರಾರು ಜನ ನೆರೆದಿದ್ದಾರೆ. ಮೋದಿ ಅವರಿಗೆ ಸಿಎಂ ಯೋಗಿ ಆದಿತ್ಯನಾಥ್‌ ಅವರು ಕೂಡ ಸಾಥ್‌ ನೀಡಿದ್ದಾರೆ.

ವಾರಣಾಸಿ ಲೋಕಸಭಾ ಕ್ಷೇತ್ರದ ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರು ರೋಡ್‌ಶೋನ ಭಾಗವಾಗಿದ್ದಾರೆ. ಮಹಿಳೆಯರ ಸಾಂಸ್ಕೃತಿಕ ನೃತ್ಯ, ಜೈ ಶ್ರೀರಾಮ್‌ ಎಂಬ ಘೋಷಣೆಗಳು ಸಾಮಾನ್ಯ ಎಂಬಂತಾಗಿದೆ. ನರೇಂದ್ರ ಮೋದಿ ಪರವೂ ಜನ ಘೋಷಣೆಗಳನ್ನು ಮೊಳಗಿಸಿದ್ದಾರೆ. ರೋಡ್‌ ಶೋ ಹಿನ್ನೆಲೆಯಲ್ಲಿ ವಾರಾಣಸಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪುಗಳು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸಿವೆ. ಸುಮಾರು ಐದು ಕಿಲೋಮೀಟರ್ ಉದ್ದದ ರೋಡ್ ಶೋ ಮಿನಿ ಇಂಡಿಯಾ ಮತ್ತು ಉತ್ತರ ಪ್ರದೇಶದ ಸಂಸ್ಕೃತಿಗಳ ಒಂದು ನೋಟವನ್ನು ನೀಡಿದೆ.

ಮಂಗಳವಾರ (ಮೇ 14) ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

Continue Reading

ದೇಶ

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Viral Video:ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು.

VISTARANEWS.COM


on

Viral Video
Koo

ನವದೆಹಲಿ: ರಾಷ್ಟ್ರೀಯ ಜನತಾ ದಳ(RJD) ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌(Lalu Prasad Yadav) ಪುತ್ರ ತೇಜ್‌ ಪ್ರತಾಪ್‌ ಯಾದವ್‌(Tej Pratap Yadav) ಮತ್ತೆ ವಿವಾದಕ್ಕೀಡಾಗುವ ಮೂಲಕ ಸುದ್ದಿಯಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ(Lok Sabha Election 2024)ಪಾಟಲೀಪುರದಿಂದ ಕಣಕ್ಕಿಳಿಸಿರುವ ಸಹೋದರಿ ಮೀಸಾ ಭಾರತಿ ಪರ ಪ್ರಚಾರಕ್ಕೆಂದು ಆಗಮಿಸಿದ್ದ ತೇಜ್‌ ಪ್ರತಾಪ್‌ ಯಾದವ್‌ ಜೊತೆಗಿದ್ದ ಬೆಂಬಲಿಗನನ್ನು ವೇದಿಕೆಯಿಂದ ತಳ್ಳುವ ಮೂಲಕ ದರ್ಪ ಮೆರೆದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ವಿಡಿಯೋದಲ್ಲಿ ಏನಿದೆ?

ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ತೇಜ್‌ ಪ್ರತಾಪ್‌ ವರ್ತನೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಪ್ರೀತಿ ಗಾಂಧಿ, ತೇಜ್‌ ಪ್ರತಾಪ್‌ ಯಾವುದಕ್ಕೂ ಅರ್ಹನಲ್ಲ. ಸ್ವಪಕ್ಷ ಕಾರ್ಯಕರ್ತನ ಮೇಲೆಯೇ ಬಹಳ ಕ್ರೂರವಾಗಿ ಹಲ್ಲೆ ಮಾಡುತ್ತಾರೆ. ಇದು ಮಾತು ಮತ್ತು ಕೃತಿಗಿರುವ ವ್ಯತ್ಯಾಸ ಎಂದು ಕಿಡಿ ಕಾರಿದ್ದಾರೆ.

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ತೆನಾಲಿ ಮತಗಟ್ಟೆಯಲ್ಲಿ ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾರೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಇದನ್ನೂ ಓದಿ:Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

ಏಟು ಬೀಳುತ್ತಿದ್ದಂತೆ ಮತದಾರನೂ ತಿರುಗಿ ಶಾಸಕನ ಕಪಾಳಕ್ಕೆ ಹೊಡೆದಿದ್ದಾನೆ. ಇದರ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

Continue Reading

ದೇಶ

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Rahul Gandhi:ರಾಯ್‌ ಬರೇಲಿಯಲ್ಲಿ ಇಂದು ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಆಪ್ತ ಕೆ.ಎಲ್‌ ಶರ್ಮಾ ಜೊತೆ ಭಾಗಿಯಾದ ರಾಹುಲ್‌ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಭಾಷಣದ ಕೊನೆಯಲ್ಲಿ ಕಾರ್ಯಕರ್ತರು ರಾಹುಲ್‌ ಗಾಂಧಿಯವರನ್ನು ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಗ ವೇದಿಕೆಯಲ್ಲಿದ್ದ ಪ್ರಿಯಾಂಕಾ, ರಾಹುಲ್‌ ಬಳಿಗೆ ಬಂದು ಸಭಿಕರು ಏನೋ ಕೇಳುತ್ತಿದ್ದಾರೆ ನೋಡಿ ಅಂದಿದ್ದಾರೆ. ತಕ್ಷಣ ರಾಹುಲ್‌ ಏನು ಎಂದು ಪ್ರಶ್ನಿಸಿದ್ದಾರೆ. ಆಗ ಕಾರ್ಯಕರ್ತರು ನಿಮ್ಮ‌ ಮದುವೆ ಯಾವಾಗ ಎಂದು ಮತ್ತೊಮ್ಮೆ ಕೇಳಿದ್ದಾರೆ. ಆಗ ನಗುತ್ತಾ ಉತ್ತರಿಸಿದ ಅಬ್‌ ಜಲ್ದೀ ಹೀ ಕರ್ನೀ ಪಡೇಗಿ(ಬೇಗ ಮದುವೆ ಆಗ್ಲೇ ಬೇಕಿದೆ) ಎಂದು ಹೇಳಿದ್ದಾರೆ.

VISTARANEWS.COM


on

Rahul Gandhi
Koo

ರಾಯ್‌ಬರೇಲಿ: ಸದಾ ರಾಜಕೀಯದಲ್ಲಿ ಸಕ್ರಿಯರಾಗಿರುವ ಕಾಂಗ್ರೆಸ್‌ ಮುಖಂಡ(Congress Leader) ರಾಹುಲ್‌ ಗಾಂಧಿ(Rahul Gandhi) ಇನ್ನೂ ಎಲಿಜಿಬಲ್‌ ಬ್ಯಾಚುರಲ್‌ ಆಗಿಯೇ ಉಳಿದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರು ಯಾವಾಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ ಎಂಬ ಪ್ರಶ್ನೆ ಅವರ ಬೆಂಬಲಿಗರಲ್ಲಿ ಇದ್ದೇ ಇದೆ. ಆದರೂ ಅದ್ಯಾವುದಕ್ಕೂ ತಲೆಗೆಡಿಸಿಕೊಳ್ಳದ ರಾಹುಲ್‌ ಆ ಬಗ್ಗೆ ಮೌನ ತಳೆದಿದ್ದರು. ಈ ಬಾರಿ ಲೋಕಸಭಾ ಚುನಾವಣೆ(Lok Sabha Election 2024)ಯಲ್ಲಿ ರಾಯ್‌ ಬರೇಲಿಯಿಂದಲೂ ಕಣಕ್ಕಿಳಿದಿರುವ ರಾಹುಲ್‌ ಗಾಂಧಿ ಇಂದು ಭಾಗಿಯಾದ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ತಮ್ಮ ಮದುವೆ ಬಗ್ಗೆ ಮೌನ ಮುರಿದಿದ್ದಾರೆ.

ರಾಯ್‌ ಬರೇಲಿಯಲ್ಲಿ ಇಂದು ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಆಪ್ತ ಕೆ.ಎಲ್‌ ಶರ್ಮಾ ಜೊತೆ ಭಾಗಿಯಾದ ರಾಹುಲ್‌ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಭಾಷಣದ ಕೊನೆಯಲ್ಲಿ ಕಾರ್ಯಕರ್ತರು ರಾಹುಲ್‌ ಗಾಂಧಿಯವರನ್ನು ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಗ ವೇದಿಕೆಯಲ್ಲಿದ್ದ ಪ್ರಿಯಾಂಕಾ, ರಾಹುಲ್‌ ಬಳಿಗೆ ಬಂದು ಸಭಿಕರು ಏನೋ ಕೇಳುತ್ತಿದ್ದಾರೆ ನೋಡಿ ಅಂದಿದ್ದಾರೆ. ತಕ್ಷಣ ರಾಹುಲ್‌ ಏನು ಎಂದು ಪ್ರಶ್ನಿಸಿದ್ದಾರೆ. ಆಗ ಕಾರ್ಯಕರ್ತರು ನಿಮ್ಮ‌ ಮದುವೆ ಯಾವಾಗ ಎಂದು ಮತ್ತೊಮ್ಮೆ ಕೇಳಿದ್ದಾರೆ. ಆಗ ನಗುತ್ತಾ ಉತ್ತರಿಸಿದ ಅಬ್‌ ಜಲ್ದೀ ಹೀ ಕರ್ನೀ ಪಡೇಗಿ(ಬೇಗ ಮದುವೆ ಆಗ್ಲೇ ಬೇಕಿದೆ) ಎಂದು ಹೇಳಿದ್ದಾರೆ.

ರಾಯ್ ಬರೇಲಿಯಲ್ಲಿ ರಾಹುಲ್‌ ಭಾವುಕ ಮಾತು

ರಾಯ್‌ಬರೇಲಿಯ ಮಹಾರಾಜ್‌ಗಂಜ್‌ನಲ್ಲಿ ಭಾವನಾತ್ಮಕವಾಗಿ ಮಾತನಾಡಿದ ರಾಹುಲ್‌ ಗಾಂಧಿ, ರಾಯ್‌ ಬರೇಲಿಯ ಜೊತೆ ನಮಗೆ 100 ವರ್ಷಗಳ ನಂಟಿದೆ. ಕೆಲವು ದಿನಗಳ ಹಿಂದೆ ನಾನು ನನ್ನ ಅಮ್ಮನ ಜೊತೆ ಕುಳಿತು ಮಾತನಾಡುವಾಗ ನನಗೆ ಇಬ್ಬರು ತಾಯಂದಿರು ಒಬ್ಬರು ಸೋನಿಯಾ ಮತ್ತೊಬ್ಬರು ಇಂದಿರಾ ಗಾಂಧಿ ಎಂದು ಹೇಳಿದ್ದೆ. ಆ ಮಾತು ನನ್ನ ತಾಯಿಗೆ ಇಷ್ಟ ಆಗಿರಲಿಲ್ಲ. ನಾನು ಆಮೇಲೆ ನಿಧಾನವಾಗಿ ಅವರಿಗೆ ವಿವರಿಸಿದೆ.. ತನ್ನ ಮಕ್ಕಳಿಗೆ ಸರಿಯಾದ ದಾರಿ ತೋರಿಸಿ ಅವರನ್ನು ರಕ್ಷಿಸುವವಳೇ ನಿಜವಾದ ತಾಯಿ. ನನ್ನ ಇಬ್ಬರು ತಾಯಂದಿರೂ ನನಗೆ ಅದನ್ನು ಮಾಡಿದ್ದಾರೆ. ಈ ಕ್ಷೇತ್ರ ನನ್ನ ಇಬ್ಬರೂ ತಾಯಂದಿರಿಗೂ ಕರ್ಮಭೂಮಿ. ಹೀಗಾಗಿಯೇ ನಾನು ರಾಯ್‌ ಬರೇಲಿಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದರು

ಇದನ್ನೂ ಓದಿ:Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

ಬಿಜೆಪಿ ಮತ್ತು ಆರ್‌ ಎಸ್‌ಎಸ್‌ ಸಂವಿಧಾನವನ್ನು ಕೊನೆಗೊಳಿಸುವುದಾಗಿ ಘೋಷಿಸಿದೆ. ಅವರು ಅಧಿಕಾರಕ್ಕೆ ಬಂದ ಕೂಡಲೇ ಸಂವಿಧಾನವನ್ನೇ ಬದಲಿಸುತ್ತೇವೆ ಎಂದಿದ್ದರು. ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ನಾನು ಘೋಷಿಸುತ್ತೇನೆ ಎಂದರು

Continue Reading
Advertisement
Pratibha Puraskar
ಕರ್ನಾಟಕ15 mins ago

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

HD Revanna Bail Revanna will not leave the country condition imposed by the court
ಕ್ರೈಂ43 mins ago

HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

Dust Storm
ಪ್ರಮುಖ ಸುದ್ದಿ53 mins ago

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

CopConnect cyber security caffe inauguration by Dr Nagalakshmi Chaudhary at bengaluru
ಬೆಂಗಳೂರು56 mins ago

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

35 crore crop damage insurance deposit for farmers of Yallapur constituency says MLA Shivaram Hebbar
ಉತ್ತರ ಕನ್ನಡ1 hour ago

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Bilhara village farmer grew bumper mango on barren land
ಕರ್ನಾಟಕ1 hour ago

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Metro Penalty
ಬೆಂಗಳೂರು1 hour ago

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

IPL 2024
ಪ್ರಮುಖ ಸುದ್ದಿ1 hour ago

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

Chandrayaan 4
ದೇಶ1 hour ago

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

CBSE Class 10 Results
ಮಂಡ್ಯ1 hour ago

CBSE Class 10 Results: ಸತತ 9ನೇ ಬಾರಿಗೆ ಶೇ.100 ಫಲಿತಾಂಶ; ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಅಮೋಘ ಸಾಧನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ2 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ2 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ3 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ3 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ4 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ10 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ15 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ16 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌