ಶಿರಸಿ (ಉತ್ತರ ಕನ್ನಡ): ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್ 28) ಹಾಗೂ ಸೋಮವಾರ (ಏಪ್ರಿಲ್ 29) ರಾಜ್ಯದಲ್ಲಿ ನರೇಂದ್ರ ಮೋದಿ (Modi in Karnataka) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅಂತೆಯೇ ಮೊದಲು ಬೆಳಗಾವಿ ಸಮಾವೇಶದಲ್ಲಿ ಪಾಲ್ಗೊಂಡು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದಾರೆ. ಈ ಸಮಾವೇಶದ ನೇರ ಪ್ರಸಾರವನ್ನು (Narendra Modi Live) ಇಲ್ಲಿ ವೀಕ್ಷಿಸಿ.
ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್ಕಮ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.
Live : ಶಿರಸಿಯಲ್ಲಿ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಶ್ರೀ @narendramodi#DhanyavadaModiji #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
— BJP Karnataka (@BJP4Karnataka) April 28, 2024
https://t.co/JoZrh1PWA6
ಏಪ್ರಿಲ್ 28ರಂದು ಎಲ್ಲೆಲ್ಲಿ ರ‍್ಯಾಲಿ?
ಭಾನುವಾರ ಬೆಳಗ್ಗೆ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ನರೇಂದ್ರ ಮೋದಿ ಅವರು ಭಾಷಣ ಮಾಡಿ, ಈಗ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.
ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ
ಏಪ್ರಿಲ್ 29ರಂದು ಒಂದೇ ಸಮಾವೇಶ
ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.