Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್ - Vistara News

Lok Sabha Election 2024

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

Prajwal Revanna Pen Drive: ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

VISTARANEWS.COM


on

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಪೆನ್‌ಡ್ರೈವ್‌ ಬಹಿರಂಗಗೊಂಡ (Prajwal Revanna Pen Drive) ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಶನಿವಾರ (ಏಪ್ರಿಲ್‌ 27) ಘೋಷಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (Dr G Parameshwar) ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರದಿಂದ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್‌, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಕೇಸ್ ಅನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇನ್ನು ಕೆಲವೇ ಸಮಯದಲ್ಲಿ ಅಧಿಕೃತವಾಗಿ ಎಸ್‌ಐಟಿ ರಚನೆ ಮಾಡಿ ಆದೇಶವನ್ನು ಹೊರಡಿಸಲಾಗುವುದು. ಎಡಿಜಿಪಿ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿದೆ ಎಂದು ಹೇಳಿದರು.

ಎಸ್‌ಐಟಿಗೆ ಪರಮಾಧಿಕಾರ

ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಪ್ರಜ್ವಲ್ ರೇವಣ್ಣ ಅವರು ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗದವರು ಸಂಪರ್ಕಿಸುತ್ತಿದ್ದಾರೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ. ಇದರಲ್ಲಿ ಸರ್ಕಾರದಿಂದ ಯಾವುದೇ ರೀತಿಯಾದಂತಹ ಹಸ್ತಕ್ಷೇಪ ಇರುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ವಿದೇಶದಿಂದ ಕರೆ ತರಲಾಗುತ್ತದೆಯೇ?

ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್‌ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟ ವಿಚಾರವಾಗಿದೆ. ಇನ್ನು ವಿದೇಶದಲ್ಲಿರುವ ಅವರನ್ನು ಕರೆತರುವ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳೇ ತೀರ್ಮಾನ ಮಾಡಬೇಕು. ಪ್ರಕರಣದಲ್ಲಿ ಸತ್ಯ ಕಂಡುಬಂದರೆ ಅವರ ರೀತಿಯಲ್ಲಿ ಅವರು ಕ್ರಮ ವಹಿಸುತ್ತಾರೆ. ಇದರಲ್ಲಿ ಸರ್ಕಾರದಿಂದ ಯಾವುದೇ ನಿರ್ದೇಶನ ಇರುವುದಿಲ್ಲ. ಹೀಗೇ ತನಿಖೆ ನಡೆಸಬೇಕು ಎಂದು ನಾವು ಹೇಳುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಎಸ್‌ಐಟಿ ತನಿಖೆ ಬಗ್ಗೆ ಘೋಷಿಸಿದ್ದ ಸಿಎಂ

ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಮಾಧ್ಯಮ ಪ್ರಕಟಣೆ ಮೂಲಕ ಘೋಷಣೆ ಮಾಡಿದ್ದರು. ಭಾನುವಾರ ಈ ಸಂಬಂಧ ಅಧಿಕೃತ ಆದೇಶ ಹೊರಬರಬೇಕಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ. ಈ ಸಂಬಂಧ ಮಹಿಳಾ ಆಯೋಗ ಸಹ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದು, ತನಿಖೆ ನಡೆಸುವಂತೆ ಕೋರಿತ್ತು.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೊಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Narendra Modi: ಪಶ್ಚಿಮ ಬಂಗಾಳದ ಬರಾಕ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಬ್ಬರದ ಪ್ರಚಾರ ಕೈಗೊಂಡರು. ಇದೇ ವೇಳೆ ಟಿಎಂಸಿ ಸರ್ಕಾರದ ವಿರುದ್ಧ ಅವರು ವಾಗ್ಬಾಣ ಪ್ರಯೋಗಿಸಿದರು. ರೋಡ್‌ ಕೂಡ ಕೈಗೊಂಡು ಜನರ ವಿಶ್ವಾಸ ಗಳಿಸಲು ಯತ್ನಿಸಿದರು.

VISTARANEWS.COM


on

Narendra Modi
Koo

ಕೋಲ್ಕೊತಾ: ಲೋಕಸಭೆ ಚುನಾವಣೆಯ (Lok Sabha Election 2024) ಮೂರು ಹಂತದ ಮತದಾನ ಮುಗಿದು, ನಾಲ್ಕನೇ ಹಂತದ ಮತದಾನಕ್ಕೆ ಕೆಲವೇ ಗಂಟೆ ಬಾಕಿ ಇವೆ. ಇದರ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಶ್ಚಿಮ ಬಂಗಾಳದಲ್ಲಿ (West Bengal) ಅಬ್ಬರದ ಪ್ರಚಾರ ಮಾಡಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (TMC) ವಿರುದ್ಧ ವಾಗ್ದಾಳಿ ನಡೆಸುವ ಜತೆಗೆ ಮೋದಿ ಅವರು ಪಶ್ಚಿಮ ಬಂಗಾಳಕ್ಕಾಗಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದರು.

ಪಶ್ಚಿಮ ಬಂಗಾಳದ ಪರಾಕ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಅವರು, “ನಾನು ಪಶ್ಚಿಮ ಬಂಗಾಳದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡುತ್ತಿದ್ದೇನೆ. ನಾನು ಇರುವವರೆಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡಲು ಬಿಡಲ್ಲ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಲು ಬಿಡುವುದಿಲ್ಲ. ನೀವು ರಾಮನವಮಿಯನ್ನು ಆಚರಿಸುವುದನ್ನು ತಡೆಯಲು ಯಾರಿಂದಲೂ ಆಗಲ್ಲ. ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಬಿಡುವುದಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಯಾರಿಂದಲೂ ಬದಲಿಸಲು ಬಿಡಲ್ಲ” ಎಂದು ಮೋದಿ ಅವರು ಐದು ಗ್ಯಾರಂಟಿಗಳನ್ನು ಘೋಷಿಸಿದರು.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ

ಭಾಷಣದ ವೇಳೆ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. “ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್‌ನ ಒಂದು ಕುಟುಂಬದ ಸದಸ್ಯರು ದೇಶವನ್ನು ದಶಕಗಳವರೆಗೆ ಆಳಿದರು. ಆದರೆ, ಅವರು ಪೂರ್ವ ಭಾರತದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದರು. ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ ಸೇರಿ ಹಲವು ರಾಜ್ಯಗಳ ಅಭಿವೃದ್ಧಿಯನ್ನು ಕಾಂಗ್ರೆಸ್‌ ಕಡೆಗಣಿಸಿತು. ಆದರೆ, ನೀವು 2014ರಲ್ಲಿ ಮೋದಿಯನ್ನು ಆಯ್ಕೆ ಮಾಡಿದಿರಿ. ಹಾಗಾಗಿ, ಈಗ ಇಡೀ ದೇಶವೇ ಏಳಿಗೆ ಹೊಂದುತ್ತಿದೆ. ಆರ್ಥಿಕತೆಯಲ್ಲಿ ನಾವು ದಾಪುಗಾಲು ಇಡುತ್ತಿದ್ದೇವೆ” ಎಂದರು.

ಪ್ರಧಾನಿ ರೋಡ್‌ ಶೋ

ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರಕ್ಕೂ ಮೋದಿ ಚಾಟಿ ಬೀಸಿದರು. “ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಒಂದು ಕಾಲದಲ್ಲಿ ವೈಜ್ಞಾನಿಕ ಆವಿಷ್ಕಾರಗಳಿಗೆ ಬಂಗಾಳ ಖ್ಯಾತಿಯಾಗಿತ್ತು. ಆದರೆ, ಈಗ ರಾಜ್ಯದಲ್ಲಿ ಬಾಂಬ್‌ ತಯಾರಿಕೆ ಉದ್ಯಮವೇ ಹುಟ್ಟಿಕೊಂಡಿದೆ. ಒಂದು ಕಾಲದಲ್ಲಿ ಬಂಗಾಳದಲ್ಲಿ ಒಳನುಸುಳುಕೋರರ ವಿರುದ್ಧ ಕ್ರಾಂತಿ ನಡೆದಿತ್ತು. ಈಗ ನುಸುಳುಕೋರರಿಗೆ ರಾಜ್ಯದಲ್ಲಿ ರಕ್ಷಣೆ ನೀಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು. ಅಲ್ಲದೆ, ಬರಾಕ್‌ಪುರದಲ್ಲಿ ಮೋದಿ ಅಬ್ಬರದ ರೋಡ್‌ ಶೋ ಕೂಡ ಕೈಗೊಂಡರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ ಎಂದು ಎಚ್ಚರಿಸಿದ್ದ ಕಾಂಗ್ರೆಸ್‌ ನಾಯಕರ ಮಣಿಶಂಕರ್‌ ಅಯ್ಯರ್‌ ಅವರಿಗೆ ಯೋಗಿ ಆದಿತ್ಯನಾಥ್‌ ತಿರುಗೇಟು ನೀಡಿದರು. “ನಾವೇನೂ ಅಣುಬಾಂಬ್‌ಗಳನ್ನು ಫ್ರಿಡ್ಜ್‌ನಲ್ಲಿ ಇರಿಸಲು ತಯಾರಿಸಿಲ್ಲ. ಇದು ಹೊಸ ಭಾರತ. ನಮ್ಮ ತಂಟೆಗೆ ಬಂದರೆ ಯಾರನ್ನೂ ನಾವು ಬಿಡುವುದಿಲ್ಲ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ಭಾರತ ಕಳೆದ 10 ವರ್ಷಗಳಲ್ಲಿ ಕಂಡುಕೊಂಡಿದೆ” ಎಂದು ಹೇಳಿದರು.

VISTARANEWS.COM


on

Yogi Adityanath
Koo

ನವದೆಹಲಿ: ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಪಾಕಿಸ್ತಾನದ ಬಳಿ ಅಣುಬಾಂಬ್‌ಗಳು ಇವೆ, ನಾವು ಆ ರಾಷ್ಟ್ರವನ್ನು ಗೌರವಿಸಬೇಕು” ಎಂದು ಮಣಿಶಂಕರ್‌ ಅಯ್ಯರ್‌ ನೀಡಿದ ಹೇಳಿಕೆಯಿಂದ ಖುದ್ದು ಕಾಂಗ್ರೆಸ್‌ ಪಕ್ಷವೇ ಅಂತರ ಕಾಯ್ದುಕೊಂಡಿದೆ. ಇದರ ಬೆನ್ನಲ್ಲೇ, ಮಣಿಶಂಕರ್‌ ಅಯ್ಯರ್‌ ಅವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರು ತಿರುಗೇಟು ನೀಡಿದ್ದು, “ನಮ್ಮ ಬಳಿಯ ಅಣುಬಾಂಬ್‌ಗಳು ಫ್ರಿಡ್ಜ್‌ನಲ್ಲಿ ಇಡಲು ತಯಾರಿಸಿದ್ದೇವೆಯೇ” ಎಂದಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ನ ಆಪ್‌ ಕಿ ಅದಾಲತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯೋಗಿ ಆದಿತ್ಯನಾಥ್‌, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದರು. “ನಾವೇನೂ ಫ್ರಿಡ್ಜ್‌ನಲ್ಲಿ ಇರಿಸಲು ಅಣುಬಾಂಬ್‌ ತಯಾರಿಸಿಲ್ಲ. ಇದು ನವ ಭಾರತ. ಹೊಸ ಭಾರತವು ಯಾರ ತಂಟೆಗೂ ಹೋಗುವುದಿಲ್ಲ. ಹಾಗಂತ, ನಮ್ಮ ತಂಟೆಗೆ ಬಂದರೆ ಸುಮ್ಮನೆ ಇರುವುದಿಲ್ಲ. ನಮ್ಮ ತಂಟೆಗೆ ಬಂದವರ ಮನೆಗೆ ನುಗ್ಗಿ ಪ್ರತ್ಯುತ್ತರ ನೀಡುವ ಸಾಮರ್ಥ್ಯ ಹೊಂದಿದ್ದೇವೆ” ಎಂದು ಹೇಳಿದರು.

“ಮನೆಗೆ ನುಗ್ಗಿ ಪ್ರತ್ಯುತ್ತರ ನೀಡುವುದನ್ನು ಭಾರತ ಸಾಬೀತುಪಡಿಸಿದೆ. ಇದಕ್ಕೂ ಮೊದಲು ದೇಶದ ಹಲವೆಡೆ ಸ್ಫೋಟಗಳು ಸಂಭವಿಸಿದವು. ಮುಂಬೈ, ಅಯೋಧ್ಯೆ, ದೆಹಲಿ, ಕಾಶಿ, ಲಖನೌ, ವಾರಾಣಸಿ, ಗೋರಖ್‌ಪುರ ಸೇರಿ ಹಲವೆಡೆ ದಾಳಿಗಳು ನಡೆದವು. ದೇಶದ ಸಂಸತ್‌ ಮೇಲೆಯೇ ದಾಳಿ ನಡೆಯಿತು. ವಿವಿಧ ಸಂದರ್ಭಗಳಲ್ಲಿ ಹಲವು ರೀತಿಯ ದಾಳಿ ನಡೆದವು. ಆದರೆ, ಕಳೆದ 10 ವರ್ಷಗಳಲ್ಲಿ ಉಗ್ರವಾದ, ನಕ್ಸಲ್‌ವಾದವನ್ನು ನಿಗ್ರಹಿಸಲಾಗಿದೆ. ಭಾರತದಲ್ಲಿ ಜೋರಾಗಿ ಪಟಾಕಿ ಸಿಡಿದರೂ, ಇದರ ಹಿಂದೆ ನಮ್ಮ ಕೈವಾಡವಿಲ್ಲ ಎಂದು ಪಾಕಿಸ್ತಾನ ಹೇಳುತ್ತದೆ. ಇದು ಭಾರತದ ತಾಕತ್ತು. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಅಂತಹ ಸಾಮರ್ಥ್ಯ ಬೆಳೆಸಿಕೊಂಡಿದೆ” ಎಂದು ತಿಳಿಸಿದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

Continue Reading

ದೇಶ

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Narendra Modi: ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ ಎಂದು ಅರವಿಂದ್‌ ಕೇಜ್ರಿವಾಲ್‌ ಅವರು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಇದನ್ನೇ ಹೇಳಿದ್ದಾರೆ.

VISTARANEWS.COM


on

Narendra Modi
Koo

ಹೈದರಾಬಾದ್: ಅಬಕಾರಿ ನೀತಿ ಜಾರಿ ಹಗರಣದಲ್ಲಿ ಜೈಲುಪಾಲಾಗಿ, ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿ ಹೊರಬರುತ್ತಲೇ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ.

“ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನಾನೊಂದು ವಿಷಯ ತಿಳಿಸುತ್ತೇನೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಾರೆ ಹಾಗೂ ಮೂರನೇ ಅವಧಿಯನ್ನು ಅವರು ಪೂರ್ಣಗೊಳಿಸುತ್ತಾರೆ. ಇಂಡಿಯಾ ಒಕ್ಕೂಟವೂ ಅಷ್ಟೇ, ಮೋದಿ ಅವರಿಗೆ 75 ವರ್ಷ ತುಂಬುತ್ತದೆ ಎಂಬ ಖುಷಿ ಬೇಡ. 75 ವರ್ಷ ದಾಟಿದ ನಂತರ ಎಲ್ಲೂ ಪ್ರಧಾನಿಯಾಗಬಾರದು ಎಂಬ ನಿಯಮಗಳು ಬಿಜೆಪಿ ಸಂವಿಧಾನದಲ್ಲಿ ಪ್ರಸ್ತಾಪಿಸಿಲ್ಲ. ಹಾಗಾಗಿ, ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುವುದು ನಿಶ್ಚಿತ” ಎಂದು ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‌ನಡ್ಡಾ ಕೂಡ ಪ್ರತಿಕ್ರಿಯೆ

ಅರವಿಂದ್‌ ಕೇಜ್ರಿವಾಲ್‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. “ನರೇಂದ್ರ ಮೋದಿ ಅವರನ್ನು ಸೋಲಿಸಲಾಗದವರು ಈಗ ವಯಸ್ಸಿನ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಆದರೆ, ಪ್ರಧಾನಿಯಾಗಿ ಮುಂದುವರಿಯಲು ವಯಸ್ಸಿನ ಮಿತಿ ಕುರಿತು ಬಿಜೆಪಿ ಸಂವಿಧಾನದಲ್ಲಿ ಉಲ್ಲೇಖವಾಗಿಲ್ಲ. ನರೇಂದ್ರ ಮೋದಿ ಅವರೇ ನಮ್ಮ ನಾಯಕ ಹಾಗೂ ಭವಿಷ್ಯದಲ್ಲೂ ಅವರೇ ನಾಯಕರಾಗಿ ಇರಲಿದ್ದಾರೆ” ಎಂದಿದ್ದಾರೆ.

ಕೇಜ್ರಿವಾಲ್‌ ನಡೆಸಿದ ವಾಗ್ದಾಳಿ ಹೀಗಿತ್ತು…

ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್‌, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. “ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Lok Sabha Election: ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಕರ್ನಾಟಕ ಸೇರಿ ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೂರನೇ ಹಂತದ ಮತದಾನವು ಮೇ 7ರಂದು ನಡೆದಿದ್ದು, ಮತದಾನ ಪ್ರಮಾಣದ (Voter Turnout) ಕುರಿತು ಚುನಾವಣೆ ಆಯೋಗವು ನಿಖರ ಮಾಹಿತಿ ಒದಗಿಸಿದೆ. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ ಎಂಬುದಾಗಿ ಚುನಾವಣೆ ಆಯೋಗವು (Election Commission) ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ

ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಪಶ್ಚಿಮ ಬಂಗಾಳ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿಯೇ ಮತದಾನ ನಡೆದಿತ್ತು.

ರಾಜ್ಯವಾರು ಮತದಾನ ಪ್ರಮಾಣ

ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಇದು ಕೂಡ 2019ರ ಲೋಕಸಭೆ ಚುನಾವಣೆಗಿಂತ ಕಡಿಮೆ ಪ್ರಮಾಣದ ಮತದಾನವಾಗಿದೆ ಎಂದು ತಿಳಿದುಬಂದಿದೆ. ಏಪ್ರಿಲ್‌ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದ್ದು, ಇದುವರೆಗೆ ಮೂರು ಹಂತಗಳ ಮತದಾನ ಮುಕ್ತಾಯವಾಗಿದೆ. ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ಜಿಲ್ಲಾವಾರು ಮತದಾನ ಪ್ರಮಾಣ

ಮೇ 13ರಂದು 4ನೇ ಹಂತದ ಮತದಾನ

ಮೇ 13ರಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. 10 ರಾಜ್ಯಗಳ 96 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading
Advertisement
Job Alert
ಉದ್ಯೋಗ19 mins ago

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Dead Body Found
ಕ್ರೈಂ27 mins ago

Dead Body Found : ಡ್ಯಾಂನಲ್ಲಿ ಬಿದ್ದಿತ್ತು ವ್ಯಕ್ತಿ ಶವ; ರೈಲು ಬೋಗಿ ಒಳಗೆ ಕೊಳೆಯುತ್ತಿತ್ತು ಮಹಿಳೆಯ ಡೆಡ್‌ಬಾಡಿ

Narendra Modi
ದೇಶ32 mins ago

Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Prajwal Revanna Case Preetham Gowda close aides arrested and Congress hits back at BJP
ಕ್ರೈಂ34 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಹಂಚಿಕೆ ಕೇಸ್‌; ಪ್ರೀತಂ ಗೌಡ ಅತ್ಯಾಪ್ತರ ಸೆರೆ: ಬಿಜೆಪಿಗೆ ಚೆಕ್‌ಮೇಟ್‌?

Mother's Day
ಮಹಿಳೆ49 mins ago

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Prajwal Revanna Case Two people of pen drive allottees arrested
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

karnataka Rain Effected
ಮಳೆ1 hour ago

Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

Pavithra Jayaram Trinayani serial Fame No More
ಕಿರುತೆರೆ1 hour ago

Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

six seats of Karnataka Legislative Council Elections to be held on June 3
ರಾಜಕೀಯ2 hours ago

Karnataka Legislative Council: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಐದಲ್ಲ 4 ಕ್ಷೇತ್ರ; ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ತೀರ್ಮಾನ?

IPL 2024
ಕ್ರಿಕೆಟ್2 hours ago

IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Two people of pen drive allottees arrested
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ9 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು23 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

ಟ್ರೆಂಡಿಂಗ್‌