Rahul Gandhi: ರಾಹುಲ್‌ ಗಾಂಧಿಗೆ ಸ್ವಂತ ಕಾರು, ಮನೆ ಇಲ್ಲ; ಇಲ್ಲಿದೆ ಕಾಂಗ್ರೆಸ್‌ ಮುಖಂಡ ಘೋಷಿಸಿದ ಆಸ್ತಿ ವಿವರ - Vistara News

Lok Sabha Election 2024

Rahul Gandhi: ರಾಹುಲ್‌ ಗಾಂಧಿಗೆ ಸ್ವಂತ ಕಾರು, ಮನೆ ಇಲ್ಲ; ಇಲ್ಲಿದೆ ಕಾಂಗ್ರೆಸ್‌ ಮುಖಂಡ ಘೋಷಿಸಿದ ಆಸ್ತಿ ವಿವರ

Rahul Gandhi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೇ 3ರಂದು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಚುನಾವಣಾ ಆಯೋಗಕ್ಕೆ ನೀಡಿರುವ ಅಫಿಡವಿಟ್‌ನಲ್ಲಿ ರಾಹುಲ್ ಗಾಂಧಿ ತಮ್ಮ ಬಳಿ ಎಷ್ಟು ಆಸ್ತಿ ಇದೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಅವರು 20.04 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ. ಈ ಪೈಕಿ 9.24 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ. ಸ್ಥಿರಾಸ್ತಿಯ ಮೌಲ್ಯ 11.15 ಕೋಟಿ ರೂ. ಅಚ್ಚರಿ ಎಂದರೆ ಅವರು ಒಂದು ಸ್ವಂತ ಮನೆ ಹೊಂದಿಲ್ಲ. ಅವರು ಕಾರು ಅಥವಾ ಇತರ ವಾಹನವನ್ನೂ ಖರೀದಿ ಮಾಡಿಲ್ಲ. 

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಲೋಕಸಭೆ ಚುನಾವಣೆ (Lok Sabha Election)ಯಲ್ಲಿ ಈ ಹಿಂದೆ ಕೇರಳದ ವಯನಾಡಿನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮೇ 3ರಂದು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದಲೂ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಚುನಾವಣಾ ಆಯೋಗಕ್ಕೆ ನೀಡಿರುವ ಅಫಿಡವಿಟ್‌ನಲ್ಲಿ ರಾಹುಲ್ ಗಾಂಧಿ ತಮ್ಮ ಬಳಿ ಎಷ್ಟು ಆಸ್ತಿ ಇದೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಅವರು 20.04 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ.

ಚರಾಸ್ತಿ ಹಾಗೂ ಸ್ಥಿರಾಸ್ತಿ ಸೇರಿ ರಾಹುಲ್‌ ಗಾಂಧಿ ಒಟ್ಟು 20.04 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಈ ಪೈಕಿ 9.24 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ. ಇದರಲ್ಲಿ 3 ಕೋಟಿ 81 ಲಕ್ಷದ 33 ಸಾವಿರ ರೂ. ಮೌಲ್ಯದ ಷೇರುಗಳು ಮತ್ತು 15 ಲಕ್ಷದ 21 ಸಾವಿರ ರೂ. ಮೌಲ್ಯದ ಚಿನ್ನದ ಬಾಂಡ್‌ಗಳು ಸೇರಿವೆ. ಸ್ಥಿರಾಸ್ತಿಯ ಮೌಲ್ಯ 11.15 ಕೋಟಿ ರೂ. ಇನ್ನು ರಾಹುಲ್‌ ಗಾಂಧಿ ಅವರ ಬಳಿ 55 ಸಾವಿರ ರೂ. ನಗದು ಇದೆ. ಎಸ್‌ಬಿಐ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳ ಉಳಿತಾಯ ಖಾತೆಗಳಲ್ಲಿ 26.25 ಲಕ್ಷ ರೂ. ಠೇವಣಿ ಇಟ್ಟಿದ್ದಾರೆ. ಸ್ಥಿರಾಸ್ತಿ ಪೈಕಿ 9 ಕೋಟಿ 4 ಲಕ್ಷ 89 ಸಾವಿರ ರೂ. ಮೌಲ್ಯದ ಸ್ವ-ಖರೀದಿ ಆಸ್ತಿ ಹಾಗೂ 2 ಕೋಟಿ 10 ಲಕ್ಷ 13 ಸಾವಿರ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ಸೇರಿದೆ.

ವಾಹನವಿಲ್ಲ

ಅಚ್ಚರಿ ಎಂದರೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಒಂದು ಸ್ವಂತ ಮನೆ ಹೊಂದಿಲ್ಲ. ಅವರು ಕಾರು ಅಥವಾ ಇತರ ವಾಹನವನ್ನೂ ಖರೀದಿ ಮಾಡಿಲ್ಲ. ಆದರೆ ಗುರುಗ್ರಾಮದಲ್ಲಿ 9.04 ಕೋಟಿ ರೂ. ಮೌಲ್ಯದ ಸ್ವಂತ ಕಚೇರಿಯೊಂದನ್ನು ಹೊಂದಿದ್ದಾರೆ. ಹೊಸದಿಲ್ಲಿಯ ಮೆಹ್ರೌಲಿಯ ಸುಲ್ತಾನ್‌ಪುರ ಗ್ರಾಮದಲ್ಲಿ ಸುಮಾರು 3.778 ಎಕರೆ ಕೃಷಿ ಭೂಮಿ ಇದ್ದು, ಇದು ರಾಹುಲ್‌ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರಿನಲ್ಲಿದೆ. ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಟ್ರಿನಿಟಿ ಕಾಲೇಜಿನಲ್ಲಿ ಎಂ.ಫಿಲ್ ಪದವಿ ಪಡೆದಿದ್ದಾರೆ. ಅಲ್ಲದೆ ಫ್ಲೋರಿಡಾದ ರೋಲಿನ್ಸ್ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿಯನ್ನು ಪಡೆದಿರುವುದು ಅಫಿಡವಿಟ್‌ನ ವಿವರದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

ರಾಯ್‌ ಬರೇಲಿಯಲ್ಲಿ ನಾಮ ಪತ್ರ

ಸುಮಾರು 20 ವರ್ಷಗಳ ಕಾಲ ಸೋನಿಯಾ ಗಾಂಧಿ ಅಧಿಕಾರದಲ್ಲಿದ್ದ ಉತ್ತರ ಪ್ರದೇಶದ ರಾಯ್​ ಬರೇಲಿಯಲ್ಲಿ ಶುಕ್ರವಾರ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಸಿದ್ದರು. ರಾಹುಲ್ ಗಾಂಧಿ ತಮ್ಮ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದರು. ರಾಹುಲ್ ಗಾಂಧಿ ಅವರ ಎದುರಾಳಿಯಾಗಿ ಬಿಜೆಪಿಯಿಂದ ದಿನೇಶ್ ಪ್ರತಾಪ್ ಸಿಂಗ್ ಸ್ಪರ್ಧಿಸಲಿದ್ದಾರೆ. ಇಲ್ಲಿ ಮೇ 20ರಂದು 5ನೇ ಹಂತದಲ್ಲಿ ಮತದಾನ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PM Narendra Modi: “ನನ್ನನ್ನು ದೇವರೇ ಈ ಭೂಮಿಗೆ ಕಳಿಸಿದ್ದಾನೆ..”; ಭಾರೀ ಸದ್ದು ಮಾಡ್ತಿದೆ ಮೋದಿಯ ಈ ವಿಡಿಯೊ

PM Narendra Modi: ಇತ್ತೀಚೆಗೆ ಪತ್ರಕರ್ತೆ ರುಬಿಕಾ ಲಿಯಾಖತ್‌ ಅವರ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಹೀಗೆ ಮಾತನಾಡುತ್ತಾ ನಾನು ಸಾಮಾನ್ಯರಂತೆ ಹುಟ್ಟಿಲ್ಲ. ದೇವರೇ ನನ್ನನ್ನು ಭೂಮಿಗೆ ಜನರ ಸೇವೆಗಾಗಿ ಕಳುಹಿಸಿದ್ದಾನೆ ಎಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಅಲ್ಲದೇ ಇದೇ ಕಾರಣದಿಂದಾಗಿ ನನ್ನಲ್ಲಿ ಇಷ್ಟೊಂದು ಶಕ್ತಿ ಸಾಮರ್ಥ್ಯ ಇದೆ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024)ಯ ಗುಂಗಿನಲ್ಲಿರುವ ರಾಜಕೀಯ ಮುಖಂಡರು ಪರ – ವಿರೋಧ ಹೇಳಿಕೆ, ವಿವಾದಾತ್ಮಕ ಮಾತುಗಳ ಮೂಲಕ ಸುದ್ದಿಯಾಗುವುದು ಸಹಜ. ತಾವು ನೀಡಿರುವ ಹೇಳಿಕೆಗಳಿಂದಲೇ ಹಲವು ದಿನಗಳ ಕಾಲ ಟ್ರೋಲ್‌ ಆಗೋದೂ ಇದೆ. ಇದೀಗ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌(Viral Video) ಆಗುತ್ತಿದ್ದು, ಹಲವರು ಹಲವು ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಮೋದಿ ಹೇಳಿದ್ದೇನು?

ಇತ್ತೀಚೆಗೆ ಪತ್ರಕರ್ತೆ ರುಬಿಕಾ ಲಿಯಾಖತ್‌ ಅವರ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಹೀಗೆ ಮಾತನಾಡುತ್ತಾ “”ನಾನು ಸಾಮಾನ್ಯರಂತೆ ಹುಟ್ಟಿಲ್ಲ. ದೇವರೇ ನನ್ನನ್ನು ಈ ಭೂಮಿಗೆ ಜನರ ಸೇವೆಗಾಗಿ ಕಳುಹಿಸಿದ್ದಾನೆ ಎಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಅಲ್ಲದೇ ಇದೇ ಕಾರಣದಿಂದಾಗಿ ನನ್ನಲ್ಲಿ ಇಷ್ಟೊಂದು ಶಕ್ತಿ ಸಾಮರ್ಥ್ಯ ಇದೆ ಎಂದು ಅನಿಸುತ್ತಿದೆʼʼ ಎಂದು ಹೇಳಿದ್ದಾರೆ.

ಸಂದರ್ಶನದ ನಡುವೆ ರುಬಿಕಾ ಅವರು ನಿಮಗೆ ಸುಸ್ತು ಅನ್ನೋದೇ ಆಗೋದಿಲ್ವಾ ಎಂದು ಪ್ರಶ್ನೆ ಕೇಳಿದ್ದಾರೆ. ಆಗ ಆ ಪ್ರಶ್ನೆಗೆ ಉತ್ತರಿಸುತ್ತಾ, “”ನಾನು ಎಲ್ಲರಂತೆ ಸಾಮಾನ್ಯವಾಗಿ ಹುಟ್ಟಿದ್ದೇನೆಂದು ಭಾವಿಸುವ ಬದಲಾಗಿ ದೇವರ ಕಾರ್ಯವನ್ನು ಪೂರೈಸಲು ಜನಿಸಿದ್ದೇನೆ ಎಂದು ಭಾವಿಸುತ್ತೇನೆ. ನನಗೆ ಗೊತ್ತಿಲ್ಲ, ನಾನು ಅಂದುಕೊಂಡಿದ್ದೂ ತಪ್ಪು ಕಲ್ಪನೆಯೂ ಆಗಿರಬಹುದು. ಅಥವಾ ನನ್ನ ಹೇಳಿಕೆಗೆ ಟೀಕೆಯೂ ವ್ಯಕ್ತವಾಗಬಹುದು. ಆದರೆ ನಾನು ಯಾವಾಗಲೂ ಹಾಗೆಯೇ ಭಾವಿಸುತ್ತೇನೆʼʼ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದಿರುವ ಈ ಸಂದರ್ಶನದ ಕ್ಲಿಪಿಂಗ್ಸ್‌ ಅನ್ನು ಸ್ವತಃ ರುಬಿಕಾ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಪ್ರಧಾನಮಂತ್ರಿಗಳೇ ನಿಮಗೆ ಆಯಾಸ ಆಗುವುದಿಲ್ಲವೇ” ಎಂದ್ ಕ್ಯಾಪ್ಶನ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ರುಬಿಕಾ ಬದಲಾಗಿ ಬೇರೆ ಪತ್ರಕರ್ತರು ಆ ಜಾಗದಲ್ಲಿ ಇರುತ್ತಿದ್ದರೆ ಆ ರೀತಿ ಪ್ರಶ್ನೆ ಕೇಳುತ್ತಿರಲಿಲ್ಲ ಎಂದು ಒಬ್ಬರು ಕಮೆಂಟ್‌ ಮಾಡಿದರೆ, ಪ್ರಧಾನಿಗೆ ಆಯಾಸ ಹೇಗೆ ಆಗಲು ಸಾಧ್ಯ? ಅವರ ಬಳಿ ಕಾರು, ಬಂಗಲೆ ಆಳು-ಕಾಳು ಜೊತೆಗಿರುವಾಗ ಎಂದು ಮತ್ತೊಬ್ಬರು ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ರುಬಿಕಾ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ. ಬಹಳಷ್ಟು ಮಂದಿ, “”ಹೌದು. ಮೋದಿಯನ್ನು ಭಗವಂತನೇ ಈ ಭೂಮಿಗೆ ಕಳುಹಿಸಿದ್ದಾನೆ. ಏನೀಗ? ಮೋದಿ ಅವರು ನಿಸ್ವಾರ್ಥವಾಗಿ ಜನ ಸೇವೆ ಮಾಡುತ್ತಿಲ್ಲವೇʼʼ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

ಮತ್ತೊಂದೆಡೆ ಒಡಿಶಾದಲ್ಲಿರುವ ಐತಿಹಾಸಿಕ ಪುರಿ ಜಗನ್ನಾಥನೇ ಪ್ರಧಾನಿ ನರೇಂದ್ರ ಮೋದಿ ಅವರ ಭಕ್ತ ಎಂಬುದಾಗಿ ಬಿಜೆಪಿ ನಾಯಕ, ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ವಿವಾದ ಉಂಟಾದ ಬೆನ್ನಲ್ಲೇ, ಸಂಬಿತ್‌ ಪಾತ್ರಾ ಅವರು ತಮ್ಮ ಹೇಳಿಕೆ ಕುರಿತಂತೆ ಕ್ಷಮೆ ಕೇಳಿದ್ದಾರೆ. ಹಾಗೆಯೇ, ಅಂತಹ ಹೇಳಿಕೆ ನೀಡಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಕೂಡ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

Continue Reading

Lok Sabha Election 2024

Hemant Soren: ಹೇಮಂತ್‌ ಸೊರೆನ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Hemant Soren: ಅಕ್ರಮವಾಗಿ ಹಣ ವರ್ಗಾವಣೆ, ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ಬುಧವಾರ (ಮೇ 22) ನಿರಾಕರಿಸಿದೆ.

VISTARANEWS.COM


on

Hemant Soren
Koo

ನವದೆಹಲಿ: ಅಕ್ರಮವಾಗಿ ಹಣ ವರ್ಗಾವಣೆ, ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್‌ (Hemant Soren) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮತ್ತೊಮ್ಮೆ ಹಿನ್ನಡೆಯಾಗಿದೆ. ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ಬುಧವಾರ (ಮೇ 22) ನಿರಾಕರಿಸಿದೆ. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ್ದ ಕೋರ್ಟ್‌ ಮಂಗಳವಾರ ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿತ್ತು. ಜಾರ್ಖಂಡ್‌ನಲ್ಲಿ ಮೇ 25 ಮತ್ತು ಜೂನ್ 1ರಂದು ಚುನಾವಣೆ ನಡೆಯಲಿದ್ದು, ಪ್ರಚಾರ ನಡೆಸಲು ಜಾಮೀನು ನೀಡಬೇಕೆಂದು ಕೋರಿ ಸೊರೆನ್‌ ಮನವಿ ಸಲ್ಲಿಸಿದ್ದರು.

ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಪ್ರಚಾರಕ್ಕಾಗಿ ಮೇ 10ರಂದು ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಹೀಗಾಗಿ ಇದೇ ಮಾದರಿಯಲ್ಲಿ ಸೊರೆನ್‌ ಕೂಡ ಅರ್ಜಿ ಸಲ್ಲಿಸಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಅವರಿಗಿಂತ ಹೇಮಂತ್ ಸೊರೆನ್ ಅವರ ಪ್ರಕರಣವನ್ನು ಭಿನ್ನ ಎಂದಿರುವ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಮೇ 10ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದಾಗ, ಅವರು ವಿಚಾರಣಾ ನ್ಯಾಯಾಲಯದಿಂದ ನಿಯಮಿತ ಜಾಮೀನು ಕೋರಿರಲಿಲ್ಲ ಮತ್ತು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅವರ ವಿರುದ್ಧ ಯಾವುದೇ ನ್ಯಾಯಾಂಗ ಆದೇಶವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: Hemant Soren: ಹೇಮಂತ್‌ ಸೊರೆನ್‌ ಬಂಧನಕ್ಕಿಲ್ಲ ತಡೆ, 5 ದಿನ ಕಸ್ಟಡಿಗೆ; ಚಂಪಯಿ ಪದಗ್ರಹಣ

ಅಕ್ರಮವಾಗಿ ಹಣ ವರ್ಗಾವಣೆ, ಭೂ ಅವ್ಯವಹಾರ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರಿಗೆ 9 ಬಾರಿ ಸಮನ್ಸ್‌ ಜಾರಿಗೊಳಿಸಿದ್ದರು. ಆದರೆ ಹೇಮಂತ್‌ ಸೊರೆನ್‌ ಅವರು ಪ್ರತಿ ಬಾರಿ ಸಮನ್ಸ್‌ ನೀಡಿದಾಗಲೂ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇ.ಡಿ ಅಧಿಕಾರಿಗಳು ಮನೆಗೆ ಲಗ್ಗೆ ಇಡುತ್ತಾರೆ ಎಂಬುದನ್ನು ಅರಿತಿದ್ದ ಅವರು ದೆಹಲಿಗೆ ತೆರಳಿ, ಗೌಪ್ಯ ಸ್ಥಳದಲ್ಲಿದ್ದರು. ಆದರೆ ಇ.ಡಿ ಅಧಿಕಾರಿಗಳು ಕೊನೆಗೂ ಹೇಮಂತ್‌ ಸೊರೆನ್‌ ಅವರನ್ನು ಈ ವರ್ಷದ ಜನವರಿ 31ರಂದು ಬಂಧಿಸಿದ್ದರು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೆನ್‌ ಅವರು ರಾಜೀನಾಮೆ ನೀಡಿದ್ದರು.

Continue Reading

ದೇಶ

Prashant Kishor: 3ನೇ ಅವಧಿಯ ಮೋದಿ ಸರ್ಕಾರದಿಂದ ಈ 4 ಕ್ರಾಂತಿಕಾರಕ ಬದಲಾವಣೆ; ಪ್ರಶಾಂತ್‌ ಕಿಶೋರ್‌ ಭವಿಷ್ಯ

Prashant Kishor: ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಗದ್ದುಗೆ ಏರುವುದು ಖಚಿತ. ಆದರೆ ಮೂರನೇ ಬಾರಿಯ ಆಡಳಿತದಲ್ಲಿ ಕನಿಷ್ಠ ನಾಲ್ಕು ಬದಲಾವಣೆಗಳನ್ನೂ ಪ್ರಧಾನಿ ಮೋದಿ ತಂದೇ ತರುತ್ತಾರೆ. ಭ್ರಷ್ಟಾಚಾರ ನಿಗ್ರಹಕ್ಕೆ ಹೆಚ್ಚಿನ ಒತ್ತು ನೀಡುವ ಮೋದಿ ಸರ್ಕಾರ, ರಚನಾತ್ಮಕ ಮತ್ತು ಕಾರ್ಯಾತ್ಮಕ ಬದಲಾವಣೆಗಳನ್ನು ತರಲಿದೆ ಎಂದು ಹೇಳಿದ್ದಾರೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024) ಫಲಿತಾಂಶದ ಬಗ್ಗೆ ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಚುನಾವಣೆ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಇದೀಗ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರ ಮೂವನೆ ಅವಧಿ ಆಡಳಿತದ ಬಗ್ಗೆ ಮಾತನಾಡಿದ್ದಾರೆ. ಮೂರನೇ ಅವಧಿಯ ಮೋದಿ ಸರ್ಕಾರದಲ್ಲಿ ಒಟ್ಟು ನಾಲ್ಕು ಬದಲಾವಣೆಗಳಾಗಲಿವೆ ಎಂದು ಹೇಳಿಕೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಗದ್ದುಗೆ ಏರುವುದು ಖಚಿತ. ಆದರೆ ಮೂರನೇ ಬಾರಿಯ ಆಡಳಿತದಲ್ಲಿ ಕನಿಷ್ಠ ನಾಲ್ಕು ಬದಲಾವಣೆಗಳನ್ನೂ ಪ್ರಧಾನಿ ಮೋದಿ ತಂದೇ ತರುತ್ತಾರೆ. ಭ್ರಷ್ಟಾಚಾರ ನಿಗ್ರಹಕ್ಕೆ ಹೆಚ್ಚಿನ ಒತ್ತು ನೀಡುವ ಮೋದಿ ಸರ್ಕಾರ, ರಚನಾತ್ಮಕ ಮತ್ತು ಕಾರ್ಯಾತ್ಮಕ ಬದಲಾವಣೆಗಳನ್ನು ತರಲಿದೆ ಎಂದು ಹೇಳಿದ್ದಾರೆ.

ನನ್ನ ಊಹೆಯ ಪ್ರಕಾರ ಪ್ರಧಾನಿ ಮೋದಿ ನೇತೃತ್ವದ 3.0 ಸರ್ಕಾರ ಬಹಳಷ್ಟು ಸದ್ದು ಮಾಡಲಿದೆ. ಕೇಂದ್ರದಲ್ಲಿ ಅಧಿಕಾರ ಮತ್ತು ಸಂಪನ್ಮೂಲ ಎರಡಕ್ಕೂ ಹೆಚ್ಚಿನ ಒತ್ತು ನೀಡಲಾಗುತ್ತದೆ. ರಾಜ್ಯಗಳ ಆರ್ಥಿಕ ಸ್ವಾವಲಂಬನೆಯನ್ನು ಮೊಟಕುಗೊಳಿಸುವ ಸಾಧ್ಯತೆ ಇದೆ. ಅಲ್ಲದೇ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ಅಡಿಯಲ್ಲಿ ತಂದರೂ ಅಚ್ಚರಿ ಇಲ್ಲ ಎಂದು ಹೇಳುವ ಮೂಲಕ ಶಾಕ್‌ ಕೊಟ್ಟಿದ್ದಾರೆ.

ಪ್ರಸ್ತುತ ಪೆಟ್ರೋಲ್‌, ಡೀಸೆಲ್‌, ATF ಮತ್ತು ನೈಸರ್ಗಿಕ ಅನಿಲಗಳು ಜಿಎಸ್‌ಟಿ ಅಡಿಯಲ್ಲಿ ಬರುತ್ತಿರಲಿಲ್ಲ. ಅವುಗಳಿಗೆ ವ್ಯಾಟ್‌, ಕೇಂದ್ರ ತೆರಿಗೆ ಮತ್ತು ಅಬಕಾರಿ ಟ್ಯಾಕ್ಸ್‌ ವಿಧಿಸಲಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಯಡಿಯಲ್ಲಿ ತರಬೇಕೆಂಬುದು ಕೈಗಾರಿಕೆಗಳ ಬಹುದಿನದ ಬೇಡಿಕೆ ಆಗಿದೆ. ಹೀಗಾಗಿ ಕೇಂದ್ರ ಸರ್ಕಾರ ಈ ಬಾರಿ ಈ ಬೇಡಿಕೆ ಪೂರೈಸುವ ಸಾಧ್ಯತೆ ಇದ್ದು, ಇದರಿಂದ ರಾಜ್ಯ ಸರ್ಕಾರಗಳ ಆದಾಯಕ್ಕೆ ಬಹುದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗುವ ಸಾಧ್ಯತೆ ಇದೆ. ಅದೂ ಅಲ್ಲದೇ ಈ ನೀತಿಯಿಂದ ಕೇಂದ್ರದ ಮೇಲೆ ರಾಜ್ಯ ಸರ್ಕಾರಗಳು ಇನ್ನು ಹೆಚ್ಚಾಗಿ ಅವಲಂಬನೆ ಆಗುವ ಸಾಧ್ಯತೆ ಇದೆ.

ಇನ್ನು ಕೇಂದ್ರವು ಸಂಪನ್ಮೂಲಗಳ ವಿಕೇಂದ್ರೀಕರಣವನ್ನು ವಿಳಂಬಗೊಳಿಸಬಹುದು ಮತ್ತು ರಾಜ್ಯಗಳ ಬಜೆಟ್ ಸಾಲವನ್ನು ಕಠಿಣಗೊಳಿಸಬಹುದು ಎಂದು ಕಿಶೋರ್ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಜಾಗತಿಕ ಮಟ್ಟದಲ್ಲಿ, ದೇಶಗಳೊಂದಿಗೆ ವ್ಯವಹರಿಸುವಾಗ ಭಾರತದ ದೃಢತೆ ಹೆಚ್ಚಾಗುತ್ತದೆ ಅವರು ಹೇಳಿದರು.

ನಿನ್ನೆ ಪತ್ರಕರ್ತೆ ಬರ್ಖಾ ದತ್‌ ಜೊತೆ ಮಾತನಾಡಿದ್ದ ಪ್ರಶಾಂತ್‌ ಕಿಶೋರ್‌, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲೆ ಜನ ಸಿಟ್ಟಾಗಿದ್ದಾರೆ ಎಂಬುದು ಎಲ್ಲೂ ಕೇಳಿಲ್ಲ, ನೋಡಿಲ್ಲ. ಹಾಗಾಗಿ, ಅವರೇ ಪ್ರಧಾನಿಯಾಗುವುದು ನಿಶ್ಚಿತ ಎಂದಿದ್ದರು. ಅಲ್ಲದೇ ದೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಂತಹ ಅಲೆ ಇಲ್ಲ. ನರೇಂದ್ರ ಮೋದಿ ಅವರ ಬಗ್ಗೆ ಜನರಿಗೆ ಈಗಲೂ ವಿಶ್ವಾಸವಿದೆ. ಜನರು ಮೋದಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರಬಹುದು, ಒಂದಷ್ಟು ಭರವಸೆಗಳು ಈಡೇರಿದೆ ಇರಬಹುದು. ಆದರೆ, ಮೋದಿ ಜನರಿಗೆ ಖಂಡಿತವಾಗಿಯೂ ಸಿಟ್ಟಿಲ್ಲ ಎಂದಿದ್ದರು.

ಇದನ್ನೂ ಓದಿ:Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

ಇನ್ನು ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

ದೇಶ

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

Lok Sabha Election 2024: ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಒಂದೆಡೆ ಲೋಕಸಭೆ ಚುನಾವಣೆ(Lok Sabha Election 2024)ಯ ಕಾವು ಹೆಚ್ಚಾಗ್ತಿದೆ. ಮತ್ತೊಂದೆಡೆ ನಾಯಕರು ಮಾಡುತ್ತಿರುವ ಎಡವಟ್ಟುಗಳೂ ದಿನಕ್ಕೊಂದು ಘಟನೆಯಂತೆ ಕಣ್ಣಮುಂದೆ ಬರುತ್ತಿರುತ್ತವೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶ(Andra Pradesh)ದಲ್ಲಿ ಮತದಾನಕ್ಕಾಗಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನೋರ್ವ ಕಪಾಳಮೋಕ್ಷ(Slapped) ಮಾಡಿದ ವಿಚಾರ ಬಹಳ ಸುದ್ದಿಯಾಗಿತ್ತು. ಇದೀಗ ಮತ್ತೋರ್ವ ಶಾಸಕ ವಿವಿಪ್ಯಾಟ್‌(VVPAT) ಅನ್ನೇ ಎತ್ತಿ ನೆಲಕ್ಕೆ ಬಡಿಯುವ ಮೂಲಕ ಎಲ್ಲರನ್ನು ಆಘಾತಕ್ಕೊಳಪಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral video) ಆಗುತ್ತಿದೆ

ಘಟನೆ ವಿವರ:

ಆಂಧ್ರಪ್ರದೇಶದ ಪಲ್ವೈ ಗೇಟ್‌ ಮತಗಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳಿಗೆ ನಡೆದ ಮತದಾನದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಂದು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆದಿದ್ದು, ಅನೇಕ ಕಡೆಗಳಲ್ಲಿ ಹಿಂಸಾಚಾರ, ಅನುಚಿತ ಘಟನೆಗಳು ವರದಿಯಾಗಿದ್ದವು.

ಟಡಿಎಂ ಖಂಡನೆ:

ಇನ್ನು ವಿಡಿಯೋ ವೈರಲ್‌ ಆಗುತ್ತಿದ್ದಂತೆ ತೆಲುಗು ದೇಶಂ ಪಕ್ಷದ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಲು ಖಚಿತ ಎಂಬುದು ಮನವರಿಕೆ ಅಗುತ್ತಿದ್ದಂತೆ YSRCP ಮುಖಂಡರು ಈ ರೀತಿ ದಾಂದಲೆ ಎಬ್ಬಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಉತ್ರ ನಾರಾ ಲೋಕೇಶ್‌ ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದು, YSRCP ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮತಯಂತ್ರವನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು. ಸೋಲಿನ ಭಯದಿಂದ ಹೀಗೆಲ್ಲ ವರ್ತಿಸುತ್ತಿದ್ದಾರೆ. ಜೂ.4ರಂದು ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ:ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

ಒಂದಲ್ಲ.. ಎರಡಲ್ಲಾ.. ಬರೋಬ್ಬರಿ 7ಮತಯಂತ್ರ ಧ್ವಂಸ

ಇನ್ನು ಈ ಬಗ್ಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ್ದು, ಶಾಸಕ ರೆಡ್ಡಿ ಬರೋಬ್ಬರಿ 7 ಮತಗಟ್ಟೆಗಳಲ್ಲಿ ಮತಯಂತ್ರಗಳನ್ನು ಧ್ವಂಸಗೊಳಿಸುರುವ ವಿಡಿಯೋ ನಮಗೆ ಸಿಕ್ಕಿದೆ. ಎಲ್ಲಾ ಮತಗಟ್ಟೆಗಳ ವಿಡಿಯೋಗಳನ್ನು ಜಿಲ್ಲಾ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್‌ ಕುಮಾರ್‌ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದೆ.

Continue Reading
Advertisement
Virat kohli
ಕ್ರೀಡೆ7 mins ago

Virat kohli : ಐಪಿಎಲ್​ನಲ್ಲಿ 8000 ರನ್ ಬಾರಿಸಿ ದಾಖಲೆ ಬರೆದ ಕೊಹ್ಲಿ

Harish Poonja case Belthangady BJP MLA Harish Poonja arrested for taunting police
ರಾಜಕೀಯ25 mins ago

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾರನ್ನು ಅರೆಸ್ಟ್‌ ಮಾಡದೇ ವಾಪಸ್‌ ಹೋದ ಪೊಲೀಸರು!

MLC Election South West Graduate Constituency bjp Candidate Dr Dhananjaya Sarji pressmeet
ರಾಜಕೀಯ29 mins ago

MLC Election: ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಡಾ. ಧನಂಜಯ ಸರ್ಜಿ

Fodder Bank inauguration at kasaba
ತುಮಕೂರು30 mins ago

Tumkur News: ಮೇವು ಬ್ಯಾಂಕ್ ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್

YIPP co founder Nikhil Kamath
ಕರ್ನಾಟಕ32 mins ago

Bengaluru News: ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮುಂದಾದ ವೈಐಪಿಪಿ ಸಹ ಸಂಸ್ಥಾಪಕ ನಿಖಿಲ್ ಕಾಮತ್

Virat Kohli
ಪ್ರಮುಖ ಸುದ್ದಿ40 mins ago

Virat kohli : ಕೊಹ್ಲಿಗೆ ಭಯೋತ್ಪಾದಕರ ಬೆದರಿಕೆ ಸುದ್ದಿ; ಸ್ಪಷ್ಟನೆ ನೀಡಿದ ಗುಜರಾತ್​ ಕ್ರಿಕೆಟ್​​ ಸಂಸ್ಥೆ

Jayashree Gurannavar
ಕ್ರೈಂ58 mins ago

Jayashree Gurannavar: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ನಿಧನ

CGI Technology In Film
ಸಿನಿಮಾ59 mins ago

CGI Technology In Film: ʼವೆಸ್ಟ್‌ವರ್ಲ್ಡ್‌ʼನಿಂದ ʼಅವತಾರ್‌ʼ ಚಿತ್ರದವರೆಗೆ ಸಿಜಿಐ ತಂತ್ರಜ್ಞಾನದ ರೋಚಕ ಹಾದಿ! ವಿಡಿಯೊಗಳಿವೆ

Bus Siege Andhra Pradesh bus seized in Gadag and 49 tourists in trouble
ಗದಗ1 hour ago

Bus seized: ಆಂಧ್ರ ಸಿಎಂ ಕ್ಷೇತ್ರದ ಪ್ರವಾಸಿಗರು ಗದಗಿನಲ್ಲಿ ಲಾಕ್‌; ಇಡೀ ರಾತ್ರಿ ಆರ್‌ಟಿಒ ಕಚೇರಿಯಲ್ಲಿ ಕಳೆದ 49 ಮಂದಿ!

Shah Rukh Khan
ಪ್ರಮುಖ ಸುದ್ದಿ1 hour ago

Shah Rukh Khan : ಶಾರುಖ್​ ಖಾನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ14 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ6 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌