RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು! - Vistara News

Lok Sabha Election 2024

RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

ಆರ್‌ಎಸ್‌ಎಸ್ ಮತ್ತು ಬಿಜೆಪಿ (RSS V/S BJP) ನಡುವೆ ಯಾವುದೇ ಬಿರುಕು ಇಲ್ಲ. ಮೋಹನ್ ಭಾಗವತ್ ಅವರು ನಿಜವಾದ ಸೇವಕ ಎಂದಿಗೂ ಅಹಂಕಾರ ಪಡುವುದಿಲ್ಲ ಎಂದು ಹೇಳಿರುವುದು ಒಂದು ಸಂದೇಶವಾಗಿದೆ ಎಂದು ಆರ್‌ಎಸ್‌ಎಸ್‌ ಹೇಳಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಯ ಅನಂತರ ಭಾಗವತ್ ಅವರು ನೀಡಿದ ಭಾಷಣಕ್ಕೆ ಹೆಚ್ಚಿನ ವ್ಯತ್ಯಾಸವಿಲ್ಲ ಎಂದು ಆರ್‌ಎಸ್‌ಎಸ್‌ ಹೇಳಿದೆ.

VISTARANEWS.COM


on

RSS V/S BJP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (loksabha election) ಕೇಸರಿ ಪಕ್ಷವು (BJP) ಸ್ಪಷ್ಟ ಬಹುಮತದ ಕೊರತೆಯನ್ನು ಅನುಭವಿಸಿದ ಅನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಸೇರಿದಂತೆ ಹಲವು ಆರ್ ಎಸ್ ಎಸ್ ನಾಯಕರು ನೀಡಿರುವ ಹೇಳಿಕೆಗಳು ಪ್ರಧಾನಿ (PM) ನರೇಂದ್ರ ಮೋದಿ (narendra modi) ಅಥವಾ ಬಿಜೆಪಿಯನ್ನು ಗುರಿಯಾಗಿಸಿಕೊಂಡಿವೆ ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ನಡುವೆ, ಈ ಚರ್ಚೆಗಳಿಗೆ ಆರ್‌ಎಸ್‌ಎಸ್‌ ಸ್ಪಷ್ಟನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಆರ್ ಆರ್ ಎಸ್ ಎಸ್ ನಡುವೆ ಉಂಟಾಗಬಹುದಾದ ಬಿರುಕುಗಳ ಸಂಭಾವ್ಯತೆಯನ್ನು ಹೋಗಲಾಡಿಸುವ ಪ್ರಯತ್ನವನ್ನು ಆರ್‌ಎಸ್‌ಎಸ್ ಮಾಡಿದೆ. ಆರ್ ಎಸ್ ಎಸ್ ಮತ್ತು ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆಗಸ್ಟ್ 31ರಿಂದ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್ ಎಸ್ ಎಸ್ ತನ್ನ ಅಂಗಸಂಸ್ಥೆಗಳಾದ ಸಂಘಟನೆಯೊಂದಿಗೆ ನಡೆಸುವ ಮೂರು ದಿನಗಳ ವಾರ್ಷಿಕ ಸಮನ್ವಯ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಬಿಜೆಪಿ ಅಧ್ಯಕ್ಷರು ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಭೆಗೆ ಹಾಜರಾಗುವ ನಿರೀಕ್ಷೆಯಿದೆ ಎಂದು ಆರ್ ಎಸ್ ಎಸ್ ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವೆ ಯಾವುದೇ ಬಿರುಕು ಇಲ್ಲ. ಮೋಹನ್ ಭಾಗವತ್ ಅವರು ನಿಜವಾದ ಸೇವಕ ಎಂದಿಗೂ ಅಹಂಕಾರ ಪಡುವುದಿಲ್ಲ ಎಂದು ಹೇಳಿರುವುದು ಒಂದು ಸಂದೇಶವಾಗಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಯ ಅನಂತರ ಭಾಗವತ್ ಅವರು ನೀಡಿದ ಭಾಷಣಕ್ಕೆ ಹೆಚ್ಚಿನ ವ್ಯತ್ಯಾಸವಿಲ್ಲ. ಯಾವುದೇ ಸಂದರ್ಭವಾಗಿರಲಿ ಅದು ರಾಷ್ಟ್ರೀಯ ಚುನಾವಣೆಯಂತಹ ಪ್ರಮುಖ ಘಟನೆಯನ್ನು ಉಲ್ಲೇಖಿಸುತ್ತದೆ. ಗೊಂದಲವನ್ನು ಸೃಷ್ಟಿಸಲು ಅದನ್ನು ತಪ್ಪಾಗಿ ಅರ್ಥೈಸಲಾಗಿದೆ. ಭಾಗವತ್ ಅವರು ನೀಡಿರುವ ʼದುರಹಂಕಾರʼ ಕುರಿತ ಹೇಳಿಕೆಯು ಪ್ರಧಾನಿ ನರೇಂದ್ರ ಮೋದಿ ಅಥವಾ ಯಾವುದೇ ಬಿಜೆಪಿ ನಾಯಕರನ್ನು ಉದ್ದೇಶಿಸಿಲ್ಲ ಎಂದು ಆರ್ ಎಸ್ ಎಸ್ ಮೂಲಗಳು ತಿಳಿಸಿವೆ.

ತಮ್ಮ ಭಾಷಣದಲ್ಲಿ ಭಾಗವತ್ ಅವರು ಒಂದು ವರ್ಷದ ಅನಂತರವೂ ಮಣಿಪುರದಲ್ಲಿ ಶಾಂತಿ ಸ್ಥಾಪನೆ ಆಗದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಫಲಿತಾಂಶಗಳು ಪ್ರಕಟವಾದ ಅನಂತರ ಚುನಾವಣಾ ಪ್ರಕ್ರಿಯೆಗಳ ಮೇಲೆ ಅನಗತ್ಯವಾಗಿ ಚಿಂತಿಸುವ ಬದಲು ಮುಂದುವರಿಯುವತ್ತ ಗಮನ ಹರಿಸುವಂತೆ ಒತ್ತಾಯಿಸಿದ್ದರು.

ಬಿಜೆಪಿ ಮತ್ತು ಪ್ರಧಾನಿ ಮೋದಿಯನ್ನು ಟೀಕಿಸಲು ವಿರೋಧ ಪಕ್ಷದ ನಾಯಕರು ಅವರ ಈ ಹೇಳಿಕೆಗಳನ್ನು ಬಳಸಿಕೊಂಡರು. ಇದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಪ್ರತಿಕ್ರಿಯಿಸಿ ಪ್ರಧಾನ ಮಂತ್ರಿಯವರಿಗೆ ಆತ್ಮಸಾಕ್ಷಿ ಇದ್ದಿದ್ದರೆ ಮಣಿಪುರದ ಜನರ ಬೇಡಿಕೆಗಳನ್ನು ಆಲಿಸಲು ಹೋಗುತ್ತಿದ್ದರು ಎಂದು ಹೇಳಿದ್ದಾರೆ. ಈ ಟೀಕೆಗಳಿಗೆ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್, ಗೊಂದಲವನ್ನು ಬಿತ್ತುವ ರಾಜಕೀಯ ಪ್ರೇರಿತ ಪ್ರಯತ್ನ ಇದು ಎಂದು ಹೇಳಿ ತಳ್ಳಿಹಾಕಿವೆ.

ಬಿಜೆಪಿಯ ಚುನಾವಣಾ ಕಾರ್ಯವೈಖರಿಯನ್ನು ಟೀಕಿಸಿದ್ದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಅವರು ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ, “ಸೊಕ್ಕಿನವರನ್ನು ಭಗವಾನ್‌ ಶ್ರೀರಾಮ 241 ಸ್ಥಾನಗಳಲ್ಲಿ ನಿಲ್ಲಿಸಿದ್ದಾನೆ” ಎಂದು ಹೇಳಿದ್ದು ಮತ್ತಷ್ಟು ವಿವಾದ ಹೆಚ್ಚಿಸಿತ್ತು. ಬಳಿಕ ಅವರು ಬಿಜೆಪಿಯ ಚುನಾವಣಾ ಯಶಸ್ಸು ಮತ್ತು ಪ್ರಧಾನಿ ಮೋದಿಯವರ ಮರುಚುನಾವಣೆಯಿಂದ ದೇಶವು ಸಂತೃಪ್ತವಾಗಿದೆ ಎಂದು ತಮ್ಮ ಹೇಳಿಕೆಯನ್ನು ಬದಲಾಯಿಸಿಕೊಂಡರು.

ಭಾಗವತ್ ಅವರ ಭಾಷಣದ ಮೇಲಿನ ಚರ್ಚೆಗೆ ಸಂಬಂಧಿಸಿ ಸ್ಪಷ್ಟೀಕರಣಕ್ಕಾಗಿ ಅಧಿಕೃತ ಸಂಘದ ಪದಾಧಿಕಾರಿಗಳನ್ನು ಉಲ್ಲೇಖಿಸಲು ಕುಮಾರ್ ಸಲಹೆ ನೀಡಿದ್ದಾರೆ. ಕುಮಾರ್ ಅವರ ಅಭಿಪ್ರಾಯಗಳು ವೈಯಕ್ತಿಕ ಮತ್ತು ಸಾಂಸ್ಥಿಕ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಆರ್‌ಎಸ್‌ಎಸ್ ಪುನರುಚ್ಚರಿಸಿದೆ.

ಬಿಜೆಪಿಯ ಚುನಾವಣಾ ಕಾರ್ಯತಂತ್ರದಲ್ಲಿ ಆರ್‌ಎಸ್‌ಎಸ್ ತೊಡಗಿಸಿಕೊಂಡಿರುವ ಕುರಿತು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್ ಅಧಿಕಾರಿಯೊಬ್ಬರು, ನೇರ ಪ್ರಚಾರಕ್ಕಿಂತ ಜಾಗೃತಿ ಮೂಡಿಸುವಲ್ಲಿ ತಮ್ಮ ಪಾತ್ರವನ್ನು ಒತ್ತಿ ಹೇಳಿದರು. ದೇಶದಾದ್ಯಂತ ನಾವು ದೆಹಲಿಯಲ್ಲಿಯೇ ಒಂದು ಲಕ್ಷಕ್ಕೂ ಹೆಚ್ಚು ಸಣ್ಣ ಗುಂಪು ಸಭೆಗಳನ್ನು ಒಳಗೊಂಡಂತೆ ಹಲವಾರು ಸಭೆಗಳನ್ನು ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

ಕೇಂದ್ರ ಸಚಿವ ಸಂಪುಟಕ್ಕೆ ಜೆ.ಪಿ. ನಡ್ಡಾ ಸೇರ್ಪಡೆಗೊಂಡ ಅನಂತರ ಹೊಸ ಬಿಜೆಪಿ ಅಧ್ಯಕ್ಷರನ್ನು ನೇಮಿಸಬೇಕಿದೆ. ಆರ್‌ಎಸ್‌ಎಸ್ ಸಮಾಲೋಚನಾ ಪ್ರಕ್ರಿಯೆಯಲ್ಲಿ ತಮ್ಮ ನಿರಂತರ ಪಾಲ್ಗೊಳ್ಳುವಿಕೆಯನ್ನು ಬಿಜೆಪಿ ದೃಢಪಡಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Narendra Modi: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾರಾಣಸಿಯಿಂದ ಮೂರನೇ ಬಾರಿಗೆ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದಾರೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (PM Kisan Nidhi Samman) ಯೋಜನೆಯ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದ ಬಳಿಕ ಅವರು ಮಾತನಾಡಿದರು. “ಲೋಕಸಭೆ ಚುನಾವಣೆಯಲ್ಲಿ ನೀವು ನನ್ನನ್ನು ಮೂರನೇ ಬಾರಿಗೆ ಸಂಸದನಾಗಿ ಮಾತ್ರವಲ್ಲ, ಮೂರನೇ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮಗೆ ನನ್ನ ಧನ್ಯವಾದಗಳು” ಎಂದು ಹೇಳಿದರು.

“ಕಳೆದ 60 ವರ್ಷದಲ್ಲಿಯೇ ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರವನ್ನು ಸತತ ಮೂರನೇ ಬಾರಿಗೆ ಆಯ್ಕೆ ಮಾಡಿರಲಿಲ್ಲ. ಆದರೆ, ದೇಶದ ಜನರು ನನ್ನನ್ನು ಸತತ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ನೇಮಕ ಮಾಡಿದ್ದಾರೆ. ವಾರಾಣಸಿಯ ಜನರೂ ನನ್ನ ಜತೆ ನಿಂತಿದ್ದಾರೆ. ಇದು ಐತಿಹಾಸಿಕವಾಗಿದ್ದು, ಮುಂದಿನ 5 ವರ್ಷಗಳವರೆಗೆ ನಿಮ್ಮ ಸೇವೆ ಮಾಡುತ್ತೇನೆ. ವಿಕಸಿತ ಭಾರತದ ನಿರ್ಮಾಣಕ್ಕಾಗಿ ಶ್ರಮ ವಹಿಸುತ್ತೇನೆ. ರೈತರು, ಯುವಕರು ಹಾಗೂ ಮಹಿಳೆಯರು ದೇಶದ ಮೂರು ಸ್ತಂಭಗಳಾಗಿದ್ದು, ಇವರೆಲ್ಲರ ಏಳಿಗೆಗೆ ಆಡಳಿತ ನಡೆಸುತ್ತೇವೆ” ಎಂದು ತಿಳಿಸಿದರು.

“ಕೇಂದ್ರದಲ್ಲಿ ನಮ್ಮ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ದೇಶದ 9.26 ಕೋಟಿ ರೈತರಿಗೆ ಹಣಕಾಸು ನೆರವು ನೀಡುವ ಕಡತಕ್ಕೆ ನಾನು ಮೊದಲು ಸಹಿ ಹಾಕಿದೆ. ಆ ಮೂಲಕ ರೈತರಿಗೆ ಅನುಕೂಲ ಮಾಡುವುದು ನಮ್ಮ ಉದ್ದೇಶವಾಗಿತ್ತು. ಇನ್ನು ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಬಡವರಿಗೆ 3 ಕೋಟಿ ಬಡವರಿಗೆ ಮನೆ ನಿರ್ಮಿಸುವ ಕುರಿತು ಕೂಡ ತೀರ್ಮಾನಿಸಲಾಗಿದೆ. ಲಕ್‌ಪತಿ ದೀದಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದರಿಂದ ರೈತರು ಸಕಲ ರೀತಿಯಲ್ಲಿ ಏಳಿಗೆ ಹೊಂದಲಿದ್ದಾರೆ” ಎಂದರು.

“ಮೂರನೇ ಅವಧಿಯಲ್ಲಿ ದೇಶದ ಏಳಿಗೆಗೆ ಜತೆಗೆ ವಾರಾಣಸಿಯನ್ನೂ ಇನ್ನಷ್ಟು ಅಭಿವೃದ್ಧಿ ಮಾಡಲಾಗುವುದು. ಈಗಾಗಲೇ ಕಾಶಿಯ ಯುವಕ, ಯುವತಿಯರು, ರೈತರ ಏಳಿಗೆಗೆ ಹತ್ತಾರು ಕ್ರಮಗಳು, ರೈಲು ನಿಲ್ದಾಣ ಅಭಿವೃದ್ಧಿ, ಸಾಂಸ್ಕೃತಿಕ ಹಿರಿಮೆ, ಪರಂಪರೆಯನ್ನು ಮರುಕಳಿಸಲಾಗಿದೆ. ಧಾರ್ಮಿಕ ನಗರಿಯು ಅಭಿವೃದ್ಧಿಯ ನಗರವಾಗಿಯೂ ರೂಪುಗೊಂಡಿದ್ದನ್ನು ಎಲ್ಲರೂ ಕಾಣಬಹುದು. ಕಾಶಿ ವಿಶ್ವನಾಥನ ಕೃಪಾಶೀರ್ವಾದದಿಂದ ಮುಂದಿನ ವರ್ಷಗಳಲ್ಲಿಯೂ ಏಳಿಗೆಗೆ ಶ್ರಮ ವಹಿಸುತ್ತೇವೆ. ನನಗೆ ಆಶೀರ್ವಾದ ಮಾಡಿದ ಎಲ್ಲರಿಗೂ ಮತ್ತೊಮ್ಮೆ ಹೃದಯಾಂತರಾಳದ ಧನ್ಯವಾದ” ಎಂದು ಹೇಳಿದರು.

ಇದನ್ನೂ ಓದಿ: ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Continue Reading

ರಾಜಕೀಯ

Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

Opposition Leader: ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಪ್ರತಿಪಕ್ಷ ಅತ್ಯಂತ ಕಡಿಮೆ ಸ್ಥಾನಗಳನ್ನು ಗಳಿಸಿದ್ದರಿಂದ ಅಧಿಕೃತವಾಗಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಿರಲಿಲ್ಲ. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿವೆ.

VISTARANEWS.COM


on

By

Leader of the Opposition
Koo

ಲೋಕಸಭೆ ಚುನಾವಣೆ (loksabha election) ಫಲಿತಾಂಶ ಹೊರಬಿದ್ದು ಹದಿನೈದು ದಿನ ಕಳೆದಿದೆ. ಈಗ ಭಾರಿ ಚರ್ಚೆಯಲ್ಲಿರುವ ವಿಷಯ ವಿರೋಧ ಪಕ್ಷದ ನಾಯಕನ (Opposition Leader) ಸ್ಥಾನದ್ದು. ಯಾಕೆಂದರೆ 10 ವರ್ಷಗಳ ಬಳಿಕ ದೇಶದ ಕೆಳಮನೆಯಲ್ಲಿ (loksabha) ಪ್ರತಿಪಕ್ಷದ ನಾಯಕ ತನ್ನ ಸ್ಥಾನವನ್ನು ಅಲಂಕರಿಸಲಿದ್ದಾರೆ. 2014ರಿಂದ ಈ ಹುದ್ದೆ ಖಾಲಿಯಿತ್ತು. ಆದರೆ ಈ ಬಾರಿ ಕಾಂಗ್ರೆಸ್ (congress) ಸಾಕಷ್ಟು ಸ್ಥಾನಗಳನ್ನು ಗಳಿಸಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಶೀಘ್ರದಲ್ಲಿ ನಡೆಯಲಿದೆ.

ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ವಿಶೇಷವೆಂದರೆ, ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಇಂತಹ ಘಟನೆ ನಡೆದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿದೆ.

ವಿರೋಧ ಪಕ್ಷದ ಮೊದಲ ನಾಯಕ

ಪಂಡಿತ್ ಜವಾಹರಲಾಲ್ ನೆಹರೂ ಪ್ರಧಾನಿ ಆಗಿದ್ದ ಮೊದಲ, ಎರಡನೇ ಮತ್ತು ಮೂರನೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನ ಹುದ್ದೆ ಖಾಲಿ ಉಳಿದಿತ್ತು. ನಾಲ್ಕನೇ ಲೋಕಸಭೆಯಲ್ಲಿ ದೇಶದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದ್ದು ರಾಮ್ ಸುಭಾಗ್ ಅವರು ಈ ಸ್ಥಾನ ಪಡೆದರು.

ಎಂಟು ಬಾರಿ ಸ್ಥಾನ ಖಾಲಿಯಾಗಿತ್ತು

ಐದು, ಏಳು ಮತ್ತು ಎಂಟನೇ ಲೋಕಸಭೆಯಲ್ಲಿ ಈ ಹುದ್ದೆ ಖಾಲಿ ಉಳಿದಿತ್ತು. 16ನೇ ಲೋಕಸಭೆ ಚುನಾವಣೆ 2014 ಮತ್ತು 17ನೇ ಲೋಕಸಭೆ 2019ರಲ್ಲಿ ವಿರೋಧ ಪಕ್ಷಗಳು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. 18ನೇ ಲೋಕಸಭೆಯಲ್ಲಿ ಪ್ರಪ್ರಥಮ ಬಾರಿಗೆ ನರೇಂದ್ರ ಮೋದಿ ವಿರುದ್ಧ ಅಧಿಕೃತವಾಗಿ ಪ್ರತಿಪಕ್ಷ ನಾಯಕನನ್ನು ನೇಮಿಸುವ ಅವಕಾಶ ವಿಪಕ್ಷಗಳಿಗೆ ಸಿಕ್ಕಿದೆ. ಲೋಕಸಭೆಯಲ್ಲಿ ಒಟ್ಟು ಎಂಟು ಬಾರಿ ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿ ಉಳಿದಿತ್ತು.

10 ವರ್ಷಗಳ ಅನಂತರ ಕಾಂಗ್ರೆಸ್‌ಗೆ ಅವಕಾಶ

2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 240 ಸ್ಥಾನಗಳನ್ನು ಪಡೆದುಕೊಂಡಿದೆ. ಆದರೆ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) 292 ಲೋಕಸಭಾ ಸ್ಥಾನಗಳೊಂದಿಗೆ ಸಂಪೂರ್ಣ ಬಹುಮತವನ್ನು ಪಡೆದುಕೊಂಡಿದೆ. ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಪಡೆಯಲು ಶಕ್ತವಾಗಿತ್ತು. ಆದರೆ ಈ ಬಾರಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಷ್ಟು ಸ್ಥಾನಗಳನ್ನು ಪಡೆದಿದೆ.

ಇದನ್ನೂ ಓದಿ: Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ವಿರೋಧ ಪಕ್ಷದ ನಾಯಕನಿಗೆ ಸಿಗುವ ಸೌಲಭ್ಯಗಳೇನು?

ವಿರೋಧ ಪಕ್ಷದ ನಾಯಕನ ಹುದ್ದೆಯು ಕ್ಯಾಬಿನೆಟ್ ಸಚಿವರಿಗೆ ಸಮಾನವಾಗಿದೆ. ಅವರು ಕೇಂದ್ರ ಸಚಿವರಿಗೆ ಸಮಾನವಾದ ಸಂಬಳ, ಭತ್ಯೆಗಳು ಮತ್ತು ಇತರ ಸೌಲಭ್ಯಗಳನ್ನು ಪಡೆಯುತ್ತಾರೆ. ವಸತಿ ಮತ್ತು ಚಾಲಕನೊಂದಿಗೆ ಕಾರನ್ನು ಒದಗಿಸಲಾಗುತ್ತದೆ. ವಿರೋಧ ಪಕ್ಷದ ನಾಯಕರಿಗೂ ಸಿಬ್ಬಂದಿ ಸಿಗುತ್ತಾರೆ. ವಿರೋಧ ಪಕ್ಷದ ನಾಯಕರು ಸಾರ್ವಜನಿಕ ಖಾತೆಗಳು, ಸಾರ್ವಜನಿಕ ಉದ್ಯಮಗಳು ಮತ್ತು ಅಂದಾಜುಗಳಂತಹ ಪ್ರಮುಖ ಸಮಿತಿಗಳ ಸದಸ್ಯರಾಗಿರುತ್ತಾರೆ. ಅವರು ಹಲವಾರು ಇತರ ಜಂಟಿ ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ.

ಸಿಬಿಐ, ಎನ್‌ಎಚ್‌ಆರ್‌ಸಿ, ಕೇಂದ್ರ ಜಾಗೃತ ಆಯೋಗ, ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರನ್ನು ನೇಮಿಸುವ ಆಯ್ಕೆ ಸಮಿತಿಗಳಲ್ಲಿ ವಿರೋಧ ಪಕ್ಷದ ನಾಯಕನನ್ನು ಸದಸ್ಯರನ್ನಾಗಿ ಮಾಡಲಾಗುತ್ತದೆ. ಸಂಸತ್ತಿನಲ್ಲಿ ಸರ್ಕಾರದ ನೀತಿಗಳನ್ನು ಟೀಕಿಸುವ ಸ್ವಾತಂತ್ರ್ಯ ವಿರೋಧ ಪಕ್ಷದ ನಾಯಕನಿಗೆ ಇರುತ್ತದೆ.

Continue Reading

ಪ್ರಮುಖ ಸುದ್ದಿ

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

DK Shivakumar: ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಬಳಸಿ ಇವಿಎಂಗಳನ್ನು (EVMs) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಕೂಡ ಇವಿಎಂಗಳ (Electronic Voting Machine) ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಎಲಾನ್‌ ಮಸ್ಕ್‌ ಅವರು ಹೇಳಿರೋದನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಕೂಡ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ.

ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಎಲಾನ್‌ ಮಸ್ಕ್‌ ಏನು ಹೇಳಿದ್ದರು?

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್‌ ಮಸ್ಕ್‌ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆಶಿ ಅವರು ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

Continue Reading

Lok Sabha Election 2024

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Rajat sharma: ಕಾಂಗ್ರೆಸ್ ನಾಯಕರಾದ ರಾಗಿಣಿ ನಾಯಕ್, ಜೈರಾಮ್ ರಮೇಶ್ ಮತ್ತು ಪವನ್ ಖೇರಾ ವಿರುದ್ಧ ಹಿರಿಯ ಪತ್ರಕರ್ತ ರಜತ್ ಶರ್ಮಾ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಲೋಕಸಭೆ ಚುನಾವಣೆ ಫಲಿತಾಂಶದ ದಿನ (Lok Sabha Election Result) ತಮ್ಮ ಕಾರ್ಯಕ್ರಮದ ವೇಳೆ “ನಿಂದನೀಯ ಭಾಷೆ” ಬಳಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಆರೋಪ‌ ಮಾಡಿದ್ದಾರೆಂದು ದೂರಿದ್ದಾರೆ.

VISTARANEWS.COM


on

By

Lok Sabha Election Result
Koo

ಲೋಕಸಭೆ ಚುನಾವಣೆ ಫಲಿತಾಂಶದ (Lok Sabha Election Result) ದಿನ ತಮ್ಮ ಕಾರ್ಯಕ್ರಮದ ವೇಳೆ “ನಿಂದನೀಯ ಭಾಷೆ” (abusive language) ಬಳಸಿದ್ದಾರೆಂದು ಆರೋಪಿಸಿದ್ದ ಕಾಂಗ್ರೆಸ್ (congress) ನಾಯಕರಾದ ರಾಗಿಣಿ ನಾಯಕ್ (Ragini Nayak), ಜೈರಾಮ್ ರಮೇಶ್ (Jairam Ramesh) ಮತ್ತು ಪವನ್ ಖೇರಾ (Pawan Khera) ಅವರ ವಿರುದ್ಧ ಹಿರಿಯ ಪತ್ರಕರ್ತ (journalist) ರಜತ್ ಶರ್ಮಾ (Rajat Sharma) ದೆಹಲಿ ಹೈಕೋರ್ಟ್‌ನಲ್ಲಿ (delhi high court) ಮಾನನಷ್ಟ ಮೊಕದ್ದಮೆ (defamation suit) ದಾಖಲಿಸಿದ್ದಾರೆ.

ರಜತ್ ಶರ್ಮಾ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಟ್ವೀಟ್‌ಗಳು ಮತ್ತು ವಿಡಿಯೋಗಳನ್ನು ತೆಗೆದುಹಾಕಬೇಕು, ರಾಜಕೀಯ ನಾಯಕರು ಅವರ ವಿರುದ್ಧ ಆರೋಪ ಮಾಡುವುದನ್ನು ತಡೆಯುವಂತೆ, ಮಾನನಷ್ಟ ಪರಿಹಾರ ನೀಡುವಂತೆ ಶರ್ಮಾ ಅವರ ವಕೀಲರು ನ್ಯಾಯಾಲಯವನ್ನು ಕೋರಿದ್ದಾರೆ.

ಈ ಕುರಿತು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ರಜತ್ ಶರ್ಮಾ ಪರ ವಕೀಲರ ವಾದಗಳನ್ನು ಆಲಿಸಿದ ಅನಂತರ ಮಧ್ಯಂತರ ವಿಚಾರಣೆಗಾಗಿ ಆದೇಶವನ್ನು ಕಾಯ್ದಿರಿಸಿದರು. ಎರಡು ಪಕ್ಷದವರ ವಾದವನ್ನು ಆಲಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇಂಡಿಪೆಂಡೆಂಟ್ ನ್ಯೂಸ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ (ಇಂಡಿಯಾ ಟಿವಿ) ಅಧ್ಯಕ್ಷ ಮತ್ತು ಸಂಪಾದಕ-ಮುಖ್ಯಸ್ಥ ರಜತ್ ಶರ್ಮಾ ಕೂಡ ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದರು.

2024ರ ಲೋಕಸಭಾ ಚುನಾವಣೆಯ ಮತ ಎಣಿಕೆಯ ದಿನದಂದು ಕಾರ್ಯಕ್ರಮದ ಚರ್ಚೆಯ ಸಂದರ್ಭದಲ್ಲಿ ರಾಷ್ಟ್ರೀಯ ದೂರದರ್ಶನದಲ್ಲಿ ರಜತ್ ಶರ್ಮಾ ತಮ್ಮನ್ನು ನಿಂದಿಸಿದ್ದಾರೆ ಎಂದು ರಾಗಿಣಿ ನಾಯಕ್ ಆರೋಪಿಸಿದ ಅನಂತರ ಈ ವಿವಾದ ಹುಟ್ಟಿಕೊಂಡಿತು.

ಚುನಾವಣಾ ಫಲಿತಾಂಶ ಬಂದ ಜೂನ್ 4ರ ಸಂಜೆ ವಾಹಿನಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಕಾಂಗ್ರೆಸ್ ನಾಯಕರು ಜೂನ್ 10 ಮತ್ತು 11ರಂದು ಮಾನಹಾನಿಕರ ಟ್ವೀಟ್ ಮಾಡಲು ಆರಂಭಿಸಿದ್ದಾರೆ ಎಂದು ಶರ್ಮಾ ಪರ ವಕೀಲರು ಹೇಳಿದ್ದಾರೆ.

ಶರ್ಮಾ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಮಣಿಂದರ್ ಸಿಂಗ್, ಶೋನ ಕ್ಲಿಪ್ ಅನ್ನು ಪ್ರಸಾರ ಮಾಡಲಾಗುತ್ತಿದೆ. ಅದರಲ್ಲಿ ನಿಂದನೆಯನ್ನು ಸೇರಿಸಲಾಗಿದೆ. ಆದರೆ ಮೂಲ ತುಣುಕಿನಲ್ಲಿ ಅಂತಹ ಯಾವುದೇ ಆಕ್ಷೇಪಾರ್ಹ ವಿಷಯವನ್ನು ಹೊಂದಿಲ್ಲ ಎಂದು ಪ್ರತಿಪಾದಿಸಿದರು.

ನ್ಯಾಯಾಲಯದ ಪರಿಶೀಲನೆಗಾಗಿ ಅವರು ವೀಡಿಯೊ ಕ್ಲಿಪ್ ಅನ್ನು ಸಹ ಪ್ಲೇ ಮಾಡಿದರು.

ಯಾವುದೇ ನಿಂದನೆ ಇಲ್ಲ. ಲೈವ್ ಶೋ ನಡೆದ ಆರು ದಿನಗಳ ಅನಂತರ ಅವರು ರಾಗಿಣಿ ನಾಯಕ್ ವಿರುದ್ಧ ಶರ್ಮಾ ನಿಂದನೆ ಮಾಡಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ. ಅವರು ಜೂನ್ 11ರಂದು ಪತ್ರಿಕಾಗೋಷ್ಠಿ ನಡೆಸಿ ಆರೋಪಿಸಿದ್ದರು.


ಕಾರ್ಯಕ್ರಮವು ನೇರ ಪ್ರಸಾರವಾಗಿದೆ. ಅವರು ಜೂನ್ 10 ರ ರಾತ್ರಿಯವರೆಗೆ ಆರು ದಿನಗಳವರೆಗೆ ಯಾವುದೇ ಅಸಮಾಧಾನವನ್ನು ಹೊಂದಿರಲಿಲ್ಲ. ಆ ಬಳಿಕ ಇದ್ದಕ್ಕಿದ್ದಂತೆ ಆರೋಪಿಸಿದ್ದೇಕೆ ಎಂದು ಸಿಂಗ್ ವಾದಿಸಿದರು.

ಇದನ್ನೂ ಓದಿ: Suresh Gopi: ಇಂದಿರಾ ಗಾಂಧಿ ಭಾರತದ ಮಾತೆ ಎಂದ ಬಿಜೆಪಿ ಸಂಸದ ಸುರೇಶ್‌ ಗೋಪಿ

ಕಳೆದ ನಾಲ್ಕು ದಶಕಗಳಲ್ಲಿ ಗಳಿಸಿದ ಪತ್ರಕರ್ತನ ಪ್ರತಿಷ್ಠೆಗೆ ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹುಸಿ ಆರೋಪ ನಷ್ಟವನ್ನುಂಟು ಮಾಡುತ್ತಿದ್ದು, ತಕ್ಷಣವೇ ಟ್ವೀಟ್‌ಗಳನ್ನು ತೆಗೆದುಹಾಕಬೇಕೆಂದು ರಜತ್ ಶರ್ಮಾ ಪರ ವಕೀಲರು ಮನವಿ ಮಾಡಿದರು.

ಇದು ಲೈವ್ ಶೋ ಆಗಿತ್ತು ಮತ್ತು ಲಕ್ಷಾಂತರ ಜನರು ಇದನ್ನು ವೀಕ್ಷಿಸುತ್ತಾರೆ. ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಇದ್ದರೆ ನಿರಂತರ ನಿಂದನೆ ಎದುರಿಸಬೇಕಾಗುತ್ತದೆ. ಹೀಗಾಗಿ ತಕ್ಷಣವೇ ಅದನ್ನು ತೆಗೆದುಹಾಕಬೇಕು. ನಾನು ಯಾರನ್ನೂ ಬೈಯುವುದಕ್ಕೆ ಅಥವಾ ನಿಂದಿಸುವುದಕ್ಕೆ ಹೆಸರಾಗಿಲ್ಲ. ನಾನು ನನ್ನ ಸುಸಂಸ್ಕೃತ ನಡವಳಿಕೆಗೆ ಹೆಸರುವಾಸಿಯಾಗಿದ್ದೇನೆ ಎಂದು ರಜತ್ ಶರ್ಮಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.

Continue Reading
Advertisement
Karnataka Weather Forecast
ಮಳೆ10 mins ago

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Narendra Modi
ದೇಶ24 mins ago

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Electric Shock
ವಿಜಯಪುರ37 mins ago

Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Woman having headache. stressed, Migraine, World Brain Tumor day
ಆರೋಗ್ಯ44 mins ago

Migraine Problem: ಮೈಗ್ರೇನ್‌ ಉಪಶಮನಕ್ಕೆ ರೋಸ್‌ಮೆರಿ ಸುಗಂಧ ತೈಲ ಮದ್ದು!

Indian Women
ವಿದೇಶ58 mins ago

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

Pavithra Gowda
ಪ್ರಮುಖ ಸುದ್ದಿ1 hour ago

Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

International Yoga Day 2024
ಫ್ಯಾಷನ್1 hour ago

International Yoga Day 2024: ಯುವತಿಯರ ಯೋಗಾಭ್ಯಾಸಕ್ಕೆ ಸಾಥ್‌ ನೀಡುವ 3 ಶೈಲಿಯ ಫ್ಯಾಷನ್‌ವೇರ್ಸ್

wild animals Attack
ಕೊಡಗು1 hour ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್2 hours ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ2 hours ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌