ನವದೆಹಲಿ: ಬಹುಜನ ಸಮಾಜ ಪಕ್ಷದಿಂದ ಅಮಾನತುಗೊಂಡಿದ್ದ ಸಂಸದ ಡ್ಯಾನಿಶ್ ಅಲಿ(Suspended BSP Leader Danish Ali) ಅವರು ಅಧಿಕೃತವಾಗಿ ಕಾಂಗ್ರೆಸ್‌ಗೆ(Congress ) ಸೇರ್ಪಡೆಯಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರ ಕಾಂಗ್ರೆಸ್ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ನಂತರ ಮಾತನಾಡಿದ ಡ್ಯಾನಿಶ್ ಅಲಿ, ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನಿಸಿ, “ವಿಭಜಕ” ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ದೇಶದ ಅತ್ಯಂತ ಹಳೆಯ ಪಕ್ಷದ ಜತೆ ಕೈಜೋಡಿಸುವುದು ಬಹು ಮುಖ್ಯ ಎಂದು ಹೇಳಿದರು.
ಡ್ಯಾನಿಶ್ ಅಲಿ ಅವರು ಉತ್ತರ ಪ್ರದೇಶದ ಅಮ್ರೋಹಾ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 2023ರ ಡಿಸೆಂಬರ್ 9ರಂದು ಪಕ್ಷ ವಿರೋಧಿ ಚಟುವಟಿಕೆಯ ಆರೋಪದ ಮೇರೆಗೆ ಸಂಸದ ಡ್ಯಾನಿಶ್ ಅಲಿ ಅವರನ್ನು ಬಹುಜನ ಸಮಾಜ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು. ಒಂದು ಕಾಲದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ (Former PM HD Deve Gowda) ನಿಕಟವರ್ತಿಯಾಗಿದ್ದರು.
ಇದನ್ನೂ ಓದಿ ದೇವೇಗೌಡರ ನಿಕಟವರ್ತಿ ಡ್ಯಾನಿಶ್ ಅಲಿ ಬಿಎಸ್‌ಪಿಯಿಂದ ಉಚ್ಚಾಟನೆ
Honoured to get blessings of epitome of sacrifice, Smt #SoniaGandhi for my 2nd #LokSabhaElection from #Amroha. Her heart beats for India’s poor. It was NAC headed by her that piloted landmark pro-poor & transparency laws like MNREGA, #RTI, Right to Education, Food Security Bill. pic.twitter.com/AAesBjF2FH
— Kunwar Danish Ali (@KDanishAli) March 14, 2024
ಬಿಎಸ್‌ಪಿಯ ಸಂಸದ ಡ್ಯಾನಿಶ್ ಅಲಿ (BSP MP Danish Ali) ಅವರಿಗೆ ಭಾರತೀಯ ಜನತಾ ಪಾರ್ಟಿಯ ಸಂಸದ ರಮೇಶ್ ಬಿಧುರಿ (BJP MP Ramesh Bidhuri) ಅವರು ಸಂಸತ್ತಿನಲ್ಲಿ ‘ಉಗ್ರ’ (Terrorist) ಎಂದು ಕರೆದಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೇ ರೀತಿಯ ನಡವಳಿಕೆಯನ್ನು ಮತ್ತೊಮ್ಮೆ ಪ್ರದರ್ಶಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗವುದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Lok Sabha Speaker Om Birla) ಅವರು ಸಂಸದ ಬಿಧುರಿ ಅವರಿಗೆ ಆಗ ಎಚ್ಚರಿಕೆ ನೀಡಿದ್ದರು. ಜತೆಗೆ, ಬಿಜೆಪಿ ಕೂಡ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು. ಆದರೆ, ಪ್ರತಿಪಕ್ಷಗಳು (Opposition Parties)ಇಷ್ಟೇ ತೃಪ್ತಿಯಾಗದೇ ಬಿಧುರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು. ಲೋಕಸಭೆಯಲ್ಲಿ ಪ್ರತಿ ಪಕ್ಷಗಳ ಸಂಸದರ ವಿರುದ್ಧ ಸಣ್ಣ ಪುಟ್ಟ ಕಾರಣಗಳಿಗೆ ಕಠಿಣ ಕ್ರಮ ಕೈಗೊಳ್ಳುವ ಓಂ ಬಿರ್ಲಾ ಅವರು, ಬಿಜೆಪಿಯ ಸಂಸದರ ವಿರುದ್ಧ ಕೇವಲ ‘ಎಚ್ಚರಿಕೆ’ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದವು. ಲೋಕಸಭೆಯಲ್ಲಿ ಚಂದ್ರಯಾನ ಯಶಸ್ಸಿನ ಕುರಿತು ಚರ್ಚೆ ನಡೆಯುತ್ತಿತ್ತು. ಈ ವೇಳೆ, ರಮೇಶ್ ಬಿಧುರಿ ಅವರು ಡ್ಯಾನಿಶ್ ಅಲಿ ವಿರುದ್ದ ಪದೇ ಪದೇ ನಿಂದಿಸಿದ್ದರು.