Site icon Vistara News

Vistara news polling booth: ಬಿಜೆಪಿಗೇ ಬೆಂಗಳೂರು ‘ಉತ್ತರಾಧಿಕಾರ’; ಕಮಲ – ಕೈ ನಡುವೆ ಅಜಗಜಾಂತರ!

Vistara News polling booth Bangalore North Lok Sabha constituency People support for BJP

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಮಂಗಳವಾರ (ಮಾ. 12) ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್‌ ಬೂತ್‌ನಲ್ಲಿ (Vistara news polling booth) ಜನ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ವಿಸ್ತಾರ ಪೋಲಿಂಗ್‌ ಬೂತ್‌ಗೆ ಸಾವಿರಾರು ಕರೆಗಳು ಬಂದಿದ್ದು, ಅವುಗಳಲ್ಲಿ ಒಟ್ಟು 6121 ಕರೆಗಳ ಸ್ವೀಕರಿಸಲಾಗಿದೆ. ಇವರಲ್ಲಿ ಶೇಕಡಾ 81ರಷ್ಟು ಮತಗಳು ಬಿಜೆಪಿ ಪರವಾಗಿ ಚಲಾವಣೆಯಾಗಿದೆ.

ಬೆಂಗಳೂರು ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿ ಪರವೇ ಹೆಚ್ಚಿನ ಒಲವನ್ನು ಜನರು ತೋರಿದ್ದಾರೆ. ಈಗ ಹಾಲಿ ಸಂಸದರಾಗಿ ಡಿ.ವಿ. ಸದಾನಂದ ಗೌಡ ಅವರು ಇದ್ದಾರೆ. ಇವರನ್ನು ಬದಲು ಮಾಡುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಡಿವಿಎಸ್‌ ಸಹ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿರುವುದಾಗಿ ಘೋಷಣೆ ಮಾಡಿದ್ದರು. ಆದರೆ, ಈ ಮಧ್ಯೆ ನಡೆದ ಕೆಲವು ರಾಜಕೀಯ ಬದಲಾವಣೆಯಲ್ಲಿ ಅವರು ತಮ್ಮ ಮನಸ್ಸನ್ನು ಬದಲು ಮಾಡಿದ್ದು, ತಾವೂ ಆಕಾಂಕ್ಷಿ ಎಂದು ಹೇಳುತ್ತಿದ್ದಾರೆ. ಈ ಎಲ್ಲ ಗೊಂದಲಗಳ ನಡುವೆ ಮತದಾರ ಮಾತ್ರ ತನ್ನ ನಿರ್ಧಾರವನ್ನು ಅಚಲವಾಗಿ ಇಟ್ಟುಕೊಂಡಿದ್ದು, ಅಭ್ಯರ್ಥಿ ಯಾರೇ ಆಗಲಿ, ನಮ್ಮ ಮತ ಬಿಜೆಪಿಗೆ ಎಂಬ ಉತ್ತರವನ್ನು ನೀಡಿದ್ದಾರೆ.

ಬಿಜೆಪಿಗೇ ಅತಿ ಹೆಚ್ಚು ಮತ!

ಬೆಂಗಳೂರು ಉತ್ತರದಲ್ಲಿ ಬಿಜೆಪಿಗೆ 4941 ಮತದಾರರಿಂದ ವೋಟ್ ಬಂದಿದೆ. ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದೆಯಾದರೂ ಫಲಿತಾಂಶದಲ್ಲಿ ಅಜಗಜಾಂತರ ವ್ಯತ್ಯಾಸ ಇದೆ. ಕಾಂಗ್ರೆಸ್‌ಗೆ 1120 ಮತಗಳು ಮಾತ್ರ ಬಂದಿವೆ. ಇನ್ನು ಇತರರಿಗೆ 60 ಮತಗಳನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತದಾರರು ನೀಡಿದ್ದಾರೆ. ಆದರೆ, ಡಿ.ವಿ. ಸದಾನಂದಗೌಡ, ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಪರ ಹಲವರು ಕರೆ ಮಾಡಿ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ.

ಪಕ್ಷಗಳು ಪಡೆದ ಶೇಕಡಾವಾರು ಮತ

ಚಾಲ್ತಿಯಲ್ಲಿರುವ ಬಿಜೆಪಿ ನಾಯಕರು ಯಾರು?

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ: Vistara news polling booth: ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮೇಲುಗೈ; ಪುತ್ತಿಲಗೆ ಜನಬೆಂಬಲ!

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

Exit mobile version