Site icon Vistara News

Vistara news polling booth: ಹುಬ್ಬಳ್ಳಿ-ಧಾರವಾಡಕ್ಕೆ ಜೋಶಿ ಜೋಶ್‌; ಕಾಂಗ್ರೆಸ್‌ಗೆ 2ನೇ ಪ್ಲೇಸ್‌!

Pralhad Joshi win in Vistara News polling booth with clear majority

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಶುಕ್ರವಾರ (ಮಾ. 15) ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಸಿದ ಪೋಲಿಂಗ್‌ ಬೂತ್‌ನಲ್ಲಿ (Vistara news polling booth) ಬಿಜೆಪಿಯೇ ಅತಿ ದೊಡ್ಡ ಪಕ್ಷ ಎಂದು ಜನರು ತೀರ್ಮಾನ ಪ್ರಕಟಿಸಿದ್ದಾರೆ. ವಿಸ್ತಾರ ಪೋಲಿಂಗ್ ಬೂತ್‌ನ 5ನೇ ದಿನವೂ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾವಿರಾರು ಕರೆಗಳು ಬಂದಿವೆ. ಇದರಲ್ಲಿ ಬಿಜೆಪಿಗೆ ಶೇ. 60ರಷ್ಟು ಮತಗಳು ಬಂದರೆ, ನಂತರದ ಸ್ಥಾನವನ್ನು ಕಾಂಗ್ರೆಸ್‌ ಪಡೆದುಕೊಂಡಿದೆ.

ಹೀಗಾಗಿ ಹುಬ್ಬಳ್ಳಿ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ – ಕಾಂಗ್ರೆಸ್‌ ನಡುವೆ 60-40 ಕದನ ಏರ್ಪಟ್ಟಿದೆ. ಒಟ್ಟಾರೆ ಫಲಿತಾಂಶದ ಚಿತ್ರಣವೇನೆಂದರೆ ಸತತ 6ನೇ ಬಾರಿಗೆ ಸಂಸದರಾಗುವತ್ತ ಪ್ರಲ್ಹಾದ್ ಜೋಶಿ ದಾಪುಗಾಲಿಡುತ್ತಿದ್ದಾರೆ. ವಿಸ್ತಾರ ಪೋಲಿಂಗ್‌ ಬೂತ್‌ನಲ್ಲಿ ಒಟ್ಟು 6,920 ಕರೆಗಳನ್ನು ಸ್ವೀಕಾರ ಮಾಡಲಾಗಿದೆ. ಹುಬ್ಬಳ್ಳಿ – ಧಾರವಾಡ ಕ್ಷೇತ್ರದಲ್ಲಿ ಬಿಜೆಪಿಗೆ 4,152 ಮತಗಳು ಬಂದಿದ್ದರೆ, ಕಾಂಗ್ರೆಸ್‌ಗೆ 2,768 ಮತಗಳು ಲಭ್ಯವಾಗಿವೆ.

ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಯಾಗಲು ಪೈಪೋಟಿ

ಕರ್ನಾಟಕದಲ್ಲಿ ಬಿಜೆಪಿಯಿಂದ 20 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್‌ ಅನೌನ್ಸ್‌ ಮಾಡಲಾಗಿದೆ. ಅದರಲ್ಲಿ ಹುಬ್ಬಳ್ಳಿ ಧಾರವಾಡ ಕ್ಷೇತ್ರವೂ ಒಂದು. ಹೀಗಾಗಿ ಪ್ರಲ್ಹಾದ್ ಜೋಶಿಯವರಿಗೆ ಟಿಕೆಟ್‌ ಸಿಕ್ಕಿಯಾಗಿದ್ದು, ಅವರು ಪ್ರಚಾರದಲ್ಲಿಯೂ ನಿರತರಾಗಿದ್ದಾರೆ. ಇನ್ನು ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಯಾಗಲು ತೀವ್ರ ಪೈಪೋಟಿ ಏರ್ಪಟ್ಟಿದೆ. ವಿನೋದ್ ಅಸೂಟಿ, ರಜತ್​ ಉಳ್ಳಾಗಡ್ಡಿ ಮಠ, ಮೋಹನ್ ಲಿಂಬಿಕಾಯಿ ಹಾಗೂ ವಿಜಯ್‌ ಕುಲಕರ್ಣಿ ಅವರು ಕಾಂಗ್ರೆಸ್‌ನಿಂದ ಟಿಕೆಟ್‌ ಬಯಸಿದ್ದಾರೆ.

ಪಕ್ಷಗಳು ಪಡೆದ ಶೇಕಡಾವಾರು ಮತ!

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ: Vistara news polling booth: ಕೋಲಾರದಲ್ಲಿ ಮೈತ್ರಿಗೆ ಮಹಾ ಬಲ; ಕಾಂಗ್ರೆಸ್‌ ಆಗಲಿದೆಯೇ ಸಬಲ?

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಈಗಾಗಲೇ ಮಂಡ್ಯ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಬಳ್ಳಾರಿ, ಶಿವಮೊಗ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಸಮೀಕ್ಷೆ ಮುಕ್ತಾಯಗೊಂಡಿವೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

Exit mobile version