Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್! Vistara News

ದೇಶ

Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!

Money Guide: ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮ ಆಗಿರಬೇಕು ಎಂದಾದರೆ, ವೃತ್ತಿಯ ಆರಂಭದಿಂದಲೇ ಉಳಿತಾಯವನ್ನು ಆರಂಭಿಸಿ.

VISTARANEWS.COM


on

savings
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಣವನ್ನು ಉಳಿತಾಯ (Money Saving) ಮಾಡುವುದೂ ಒಂದು ಕಲೆ. ದುಡಿಮೆಯ ದಿನಗಳಲ್ಲಿ ಒಂದಿಷ್ಟು ಹಣವನ್ನು ಉಳಿತಾಯದ ಮಾಡಿದರೆ, ನಿವೃತ್ತಿಯ ದಿನಗಳನ್ನು (Retirement Life) ನೆಮ್ಮದಿಯಾಗಿ ಕಳೆಯಬಹುದು. ಇಲ್ಲದಿದ್ದರೆ, ದುಡಿಯುವ ಕಸುವು ಇಲ್ಲದ ಸಮಯದಲ್ಲಿ ಹಣಕ್ಕಾಗಿ ಪರದಾಡಬೇಕಾಗುತ್ತದೆ. ಹಾಗಾಗಿ, ನಿಮ್ಮ ವೃತ್ತಿಯ ಆರಂಭದ ದಿನಗಳಿಂದಲೇ ನಿವೃತ್ತಿಯ ಬಗ್ಗೆ ಪ್ಲ್ಯಾನ್ ಮಾಡಿ(Plan for Retirement life), ಹಣವನ್ನು ಉಳಿತಾಯ ಮಾಡಬೇಕು. ನಿವೃತ್ತಿಯ ಅಂಚಿಗೆ ಬರುವಷ್ಟರಲ್ಲಿ ದೊಡ್ಡ ಮೊತ್ತದ ಉಳಿತಾಯ ನಿಮಗಾಗಿ ಕಾಯುತ್ತಿರುತ್ತದೆ. ಹಾಗಾಗಿ, ಈಗನಿಂದಲೇ ನೀವು ಉಳಿತಾಯ ಮತ್ತು ನಿವೃತ್ತಿಯ ದಿನಗಳಿಗಾಗಿ ಹೂಡಿಕೆಯ ಪ್ಲ್ಯಾನ್ ಮಾಡುವುದು ಶುರು ಮಾಡಿ(Money Guide).

ನಿವೃತ್ತಿಗಾಗಿ ಹಣ ಉಳಿಸುವ ಮಾರ್ಗಗಳು….

1.ಉಳಿತಾಯ ಬೇಗ ಆರಂಭಿಸಿ

ಉತ್ತಮ ನಿವೃತ್ತಿ ಜೀವನಕ್ಕಾಗಿ ವೃತ್ತಿ ಆರಂಭದ ದಿನಗಳಿಂದಲೇ ಉಳಿತಾಯವನ್ನು ಆರಂಭಿಸಬೇಕು. ಚಿಕ್ಕ ಮೊತ್ತದ ಸೇವಿಂಗ್ ಕೂಡ ನಿವೃತ್ತಿ ಹೊತ್ತಿಗೆ ಬಹುದೊಡ್ಡ ಮೊತ್ತವಾಗಿ ಬದಲಾಗಿರುತ್ತದೆ.

2.ಟಾರ್ಗೆಟ್ ಸೆಟ್ ಮಾಡಿಕೊಳ್ಳಿ

ನಿಮ್ಮ ನಿರೀಕ್ಷಿತ ವೆಚ್ಚಗಳು ಮತ್ತು ಜೀವನಶೈಲಿಯ ಆಧಾರದ ಮೇಲೆ ನಿವೃತ್ತಿಗಾಗಿ ನಿಮಗೆ ಎಷ್ಟು ಹಣ ಬೇಕು ಎಂದು ನಿರ್ಧರಿಸಿ. ಹಣದುಬ್ಬರ ಮತ್ತು ಆರೋಗ್ಯ ವೆಚ್ಚಗಳಂತಹ ಅಂಶಗಳನ್ನು ಪರಿಗಣಿಸಿ ಸೇವಿಂಗ್ ಆರಂಭಿಸಿ. ಸ್ಪಷ್ಟವಾದ ನಿವೃತ್ತಿ ಗುರಿಯನ್ನು ಹಾಕಿಕೊಳ್ಳುವುದರಿಂದ ಹಣ ಉಳಿಕೆಯಲ್ಲಿ ಸ್ಪಷ್ಟತೆ ದೊರೆಯುತ್ತದೆ.

3.ರಿಟೈರ್‌ಮೆಂಟ್ ಬಜೆಟ್ ತಯಾರಿಸಿ

ನಿಮ್ಮ ಸದ್ಯದ ಆದಾಯ ಮತ್ತು ವೆಚ್ಚದ ಅನುಸಾರ ನಿಮ್ಮ ನಿವೃತ್ತಿಯ ಬಜೆಟ್ ತಯಾರಿಸಿ. ಅನವಶ್ಯವಾಗಿ ಎಲ್ಲೆಲ್ಲಿ ಹಣ ಪೋಲಾಗುತ್ತಿದೆ ಎಂದು ಗುರುತಿಸಿಕೊಳ್ಳಿ ಮತ್ತು ಅಂಥ ಹಣವನ್ನು ಉಳಿಕೆಯ ಪಟ್ಟಿಗೆ ಸೇರಿಸಿ. ಈ ಮೂಲಕ ರಿಟೈರ್ ಫಂಡ್ ಕ್ರೋಡೀಕರಿಸಬಹುದು.

4.ರಿಟೈರ್‌ಮೆಂಟ್ ಅಕೌಂಟ್!

ಭಾರತದಲ್ಲಿ ನಾನಾ ಅಕೌಂಟ್‌ಗಳು ಚಾಲ್ತಿಯಲ್ಲಿವೆ. ಅವುಗಳ ಮೂಲಕ ರಿಟೈರ್ಮೆಂಟ್ ಪ್ಲ್ಯಾನ್ ಮಾಡಬಹುದು. ಇಪಿಎಫ್, ಪಿಪಿಎಫ್, ಎನ್‌ಪಿಎಸ್, ಎಫ್‌ಡಿ ಇತ್ಯಾದಿ ಖಾತೆಗಳ ಮೂಲಕ ಸೇವಿಂಗ್‌ ಹೆಚ್ಚಿಸುತ್ತಾ ಹೋದಂತೆ ನಿವೃತ್ತಿ ಸಮಯದಯಲ್ಲಿ ತುಂಬಾ ಸಹಕಾರಿಯಾಗುತ್ತದೆ.

5.ಹೂಡಿಕೆ ಮಾಡಿ

ಷೇರುಗಳು, ನಿರ್ದಿಷ್ಟ ಆದಾಯ ತರುವ ಹೂಡಿಕೆಗಳು, ರಿಯಲ್ ಎಸ್ಟೇಟ್ ಸೇರಿದಂತೆ ಇನ್ನಿತರ ಹೂಡಿಕೆಗಳನ್ನು ಆಯ್ದುಕೊಳ್ಳಬಹುದು. ನೀವು ಯಾವುದೇ ರೀತಿಯ ಹೂಡಿಕೆಯ ಸಾಧನವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ, ಅದಕ್ಕಿಂತ ಮುಂಚೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರಿಯರಿ.

6.ಅನವಶ್ಯ ವೆಚ್ಚ ಬೇಡ

ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮವಾಗಿರಬೇಕು ಎಂದಾದರೆ, ಈಗಿನಿಂದಲೂ ಅನವಶ್ಯ ವೆಚ್ಚಗಳನ್ನು ದೂರ ಮಾಡಿ. ನಿಮ್ಮ ರಿಟೈರ್ಮೆಂಟ್‌ ಖಾತೆಗಳಿಗೆ ಆಟೋಮೆಟಿಕ್ ಆಗಿ ದುಡ್ಡು ಪೇ ಆಗುವ ಹಾಗೆ ಮಾಡಿ. ನಿಮ್ಮ ಸಂಬಳದಲ್ಲಿ ಇನ್‌ಕ್ರಿಮೆಂಟ್ ಆದಾಗಲೆಲ್ಲ. ಈ ರೀತಿಯ ಪರಿಹಾರವನ್ನು ಕಂಡುಕೊಳ್ಳಬಹುದು.

7.ಪರ್ಯಾಯ ಉಳಿತಾಯ

ಮ್ಯೂಚವಲ್ ಫಂಡ್ಸ್, ಷೇರುಗಳು, ಬಾಂಡ್‌ಗಳಂಥ ಪರ್ಯಾಯ ಉಳಿತಾಯದ ಮಾರ್ಗಗಳನ್ನು ಹುಡುಕಿಕೊಳ್ಳಬಹುದು. ಕೇವಲ ಹಣವನ್ನು ಫಿಕ್ಸೆಡ್ ಡಿಪಾಸೆಟ್ ಮಾಡುವುದು ಮಾತ್ರವೇ ಉಳಿತಾಯದ ಮಾರ್ಗವಲ್ಲ. ಉಳಿತಾಯದ ಜತೆಗೆ ಹಣ ಹೆಚ್ಚಾಗುವ ಮಾರ್ಗಗಳಿವೆ. ಅವುಗಳನ್ನು ಶೋಧಿಸಬಹುದು. ಆದರೆ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ.

8.ತೆರಿಗೆ ಮಾಹಿತಿ ಇರಲಿ

ತೆರಿಗೆ ಕಾನೂನುಗಳು, ಹೂಡಿಕೆ ಆಯ್ಕೆಗಳು ಮತ್ತು ನಿವೃತ್ತಿ ಯೋಜನೆ ತಂತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಅಪ್‌ಡೇಟೆಡ್ ಮಾಹಿತಿ ಇರುವುದು ಉತ್ತಮ. ತಿಳುವಳಿಕೆಯುಳ್ಳ ಹಣಕಾಸಿನ ನಿರ್ಧಾರಗಳನ್ನು ಮಾಡಲು ಈ ರೀತಿಯ ಅಪ್‌ಡೇಟೆಡ್ ಮಾಹಿತಿ ಇದ್ದರೆ ಬೆಸ್ಟ್ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ.

9.ರಿಟೈರ್ಮೆಂಟ್ ಫಂಡ್ ಮುಟ್ಟಬೇಡಿ

ಯಾವುದೇ ಕಾರಣಕ್ಕೂ ನಿಮ್ಮ ನಿವೃತ್ತಿ ಉಳಿತಾಯವನ್ನು ಇತರ ವೆಚ್ಚಗಳಿಗಾಗಿ ಬಳಸಲು ಹೋಗಲೇಡಿ. ಉಳಿತಾಯದ ಹಣವನ್ನು ಬಳಸಲಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ಮತ್ತೆ ನೀವು ಹಣವಿಲ್ಲದೇ ಪರದಾಡಬೇಕಾಗುತ್ತದೆ. ಹಾಗಾಗಿ, ಎಂಥದ್ದೇ ಸಂದರ್ಭದಲ್ಲಿ ನಿವೃತ್ತಿಗಾಗಿ ತೆಗೆದಿಟ್ಟ ಅಥವಾ ಸೇವಿಂಗ್ ಮಾಡಿದ ಹಣವನ್ನು ಸದ್ಯದ ವೆಚ್ಚಕ್ಕೆ ಬಳಸಲು ಮುಂದಾಗಬೇಡಿ.

ಈ ಸುದ್ದಿಯನ್ನೂ ಓದಿ: Money Guide: ಪಿಪಿಎಫ್‌, ಎನ್‌ಎಸ್‌ಸಿ, ಎಸ್‌ಸಿಎಸ್‌ಎಸ್‌ ಖಾತೆ ಸ್ಥಗಿತವಾಗದಂತೆ ನೋಡಿಕೊಳ್ಳಿ

10.ತುರ್ತು ನಿಧಿ ಇರಲಿ

ಅನಿರೀಕ್ಷಿತ ವೆಚ್ಚಗಳಿಗಾಗಿ ತುರ್ತು ನಿಧಿಯನ್ನು ನಿರ್ವಹಣೆ ಮಾಡುವುದು ಉತ್ತಮ. ಯಾಕೆಂದರೆ, ತುರ್ತು ನಿಧಿ ನಿಮ್ಮ ಬಳಿ ಇದ್ದರೆ ನೀವು ನಿಮ್ಮ ಸೇವಿಂಗ್ಸ್‌ ಅನ್ನು ವೆಚ್ಚಗಳಿಗೆ ಬಳಸಲು ಮುಂದಾಗುವುದಿಲ್ಲ. ಇಲ್ಲದಿದ್ದರೆ, ಉಳಿತಾಯದ ಹಣವನ್ನೇ ನೀವು ತುರ್ತು ಅಗತ್ಯಗಳಿಗೆ ಬಳಸುತ್ತೀರಿ. ಆಗ ನಿಮ್ಮ ನಿವೃತ್ತಿಯ ಎಲ್ಲ ಪ್ಲ್ಯಾನ್ ಹಾಳಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ladli Behna: ಒಂದೇ ಯೋಜನೆ ತಂದು ಮಧ್ಯಪ್ರದೇಶ ಗೆದ್ದ ಸಿಎಂ ಚೌಹಾಣ್;‌ ಏನಿದು ಲಾಡ್ಲಿ ಬೆಹ್ನಾ?

Ladli Behna: ಮಧ್ಯಪ್ರದೇಶದಲ್ಲಿ ಚುನಾವಣೆಗೂ ಮೊದಲು ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು. ಇದು ಬಿಜೆಪಿಗೆ ವರದಾನವಾಯಿತು ಎಂದು ಹೇಳಲಾಗುತ್ತಿದೆ.

VISTARANEWS.COM


on

Shivraj Singh Chouhan
Koo

ಭೋಪಾಲ್‌: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ (Madhya Pradesh Assembly Election 2023) ಆಡಳಿತಾರೂಢ ಬಿಜೆಪಿಯು ಚುನಾವಣೆ ಸಮೀಕ್ಷೆ, ಪಕ್ಷದ ಮುಖಂಡರ ನಿರೀಕ್ಷೆಯನ್ನೂ ಮೀರಿ ಮುನ್ನಡೆ ಸಾಧಿಸಿದೆ. ಒಟ್ಟು 230 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ. ಬಿಜೆಪಿಗೆ ಗೆಲುವಿಗೆ ಹಲವು ಕಾರಣಗಳನ್ನು ನೀಡಲಾಗುತ್ತಿದ್ದರೂ ಚುನಾವಣೆಗೆ ಮೊದಲು ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಅವರು ಜಾರಿಗೆ ತಂದ ಕೆಲ ಯೋಜನೆಗಳು ಗೆಲುವಿಗೆ (Madhya Pradesh Election Result 2023) ಮುಖ್ಯ ಕಾರಣ ಎಂದೇ ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ, ಲಾಡ್ಲಿ ಬೆಹನಾ (Ladli Behna) ಯೋಜನೆಯು ಮಧ್ಯಪ್ರದೇಶ ಹೆಣ್ಣುಮಕ್ಕಳ ಮನ ಗೆದ್ದಿತು ಎಂದು ಹೇಳಲಾಗುತ್ತಿದೆ.

ಏನಿದು ಲಾಡ್ಲಿ ಬೆಹನಾ ಸ್ಕೀಮ್?

ಮಧ್ಯಪ್ರದೇಶದಲ್ಲಿ ಬಡ ಹೆಣ್ಣುಮಕ್ಕಳಿಗೆ ಮಾಸಿಕ 1 ಸಾವಿರ ರೂ. ಸಹಾಯ ಧನ ನೀಡುವುದೇ ಲಾಡ್ಲಿ ಬೆಹನಾ ಯೋಜನೆಯಾಗಿದೆ. ಕಾಂಗ್ರೆಸ್‌ ಉಚಿತ ಕೊಡುಗೆಗಳ ಘೋಷಣೆಯನ್ನು ಮೊದಲೇ ಅರಿತಿದ್ದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು 2023ರ ಮಾರ್ಚ್‌ನಲ್ಲಿಯೇ ಲಾಡ್ಲಿ ಬೆಹನಾ ಯೋಜನೆಯನ್ನು ಜಾರಿಗೆ ತಂದರು. ಯೋಜನೆ ಜಾರಿಗೆ ತಂದು, ಬಡ ಹೆಣ್ಣುಮಕ್ಕಳ ಖಾತೆಗಳಿಗೆ ಮಾಸಿಕ 1 ಸಾವಿರ ರೂ. ಜಮೆ ಮಾಡಿಸಿದರು. ಆ ಮೂಲಕ ಸರ್ಕಾರವು ಮಹಿಳೆಯರ ಪರ ಇದೆ ಎಂಬ ಸಂದೇಶ ರವಾನಿಸಿದರು.

ಅಷ್ಟೇ ಅಲ್ಲ, ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗ ಲಾಡ್ಲಿ ಬೆಹನಾ ಯೋಜನೆ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ನೀಡುವ ಮಾಸಿಕ 1 ಸಾವಿರ ರೂ. ಸಹಾಯಧನದ ಮೊತ್ತವನ್ನು 1,250 ರೂ.ಗೆ ಏರಿಸಿದರು. ಅಲ್ಲದೆ, ಹೆಣ್ಣುಮಕ್ಕಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.35ರಷ್ಟು ಮೀಸಲಾತಿ ಘೋಷಿಸಿದರು. ಸಾವನ್‌ ತಿಂಗಳಲ್ಲಿ ಬಡವರಿಗೆ ಕೇವಲ 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಿದರು. ಇದರಿಂದಾಗಿ ಮಧ್ಯಪ್ರದೇಶದ ಮಹಿಳೆಯರು ಬಿಜೆಪಿ ಪರ ವಾಲಿದರು. ಕಾಂಗ್ರೆಸ್‌ ಗ್ಯಾರಂಟಿಗಳನ್ನೂ ಮೀರಿ ಅವರು ಬಿಜೆಪಿಗೆ ಮತ ಹಾಕಿದರು ಎಂದು ತಿಳಿದುಬಂದಿದೆ. ಇದರೊಂದಿಗೆ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಐದನೇ ಬಾರಿ ಸಿಎಂ ಆಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Telangana Election Results: ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ‘ಗ್ಯಾರಂಟಿ’ ವರದಾನ; ಗೆಲುವಿನ ಸೋಪಾನ

ಛತ್ತೀಸ್‌ಗಢ 11, ಮಧ್ಯಪ್ರದೇಶ 29, ಮಿಜೋರಾಂ 1, ರಾಜಸ್ಥಾನ 25 ಹಾಗೂ ತೆಲಂಗಾಣದ 17 ಲೋಕಸಭೆ ಕ್ಷೇತ್ರ ಸೇರಿ ಐದೂ ರಾಜ್ಯಗಳಲ್ಲಿ ಒಟ್ಟು 83 ಲೋಕಸಭೆ ಕ್ಷೇತ್ರಗಳಿವೆ. ಈ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಸಾಧ್ಯವಾಗಲಿದೆ. ಹಾಗೆಯೇ, ಜನರ ಒಲವು ಯಾವ ಪಕ್ಷದ ಕಡೆ ಇದೆ ಎಂಬುದರ ಮುನ್ಸೂಚನೆಯು ವಿಧಾನಸಭೆ ಚುನಾವಣೆಯಲ್ಲಿಯೇ ತಿಳಿಯಲಿದೆ. ಲೋಕಸಭೆ ಚುನಾವಣೆಯ ಪ್ರಚಾರಕ್ಕೂ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುನ್ನುಡಿ ಬರೆಯಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

Election Results 2023: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಬಿಜೆಪಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Narendra Modi
Koo

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ (Election Results 2023) ಸ್ಪಷ್ಟ ಚಿತ್ರಣ ದೊರೆಯುತ್ತಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಇನ್ನು ಛತ್ತೀಸ್‌ಗಢದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ತೀವ್ರ ಪೈಪೋಟಿ ಇದೆ. ಇದರ ಬೆನ್ನಲ್ಲೇ, ಭಾನುವಾರ ಸಂಜೆ (ಡಿಸೆಂಬರ್‌ 3) ದೆಹಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಏರುವುದು ಬಹುತೇಕ ನಿಶ್ಚಿತವಾಗಿದೆ. ಹಾಗಾಗಿ, ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಭಾನುವಾರ ಸಂಜೆ 5 ಗಂಟೆಯಿಂದಲೇ ಸಂಭ್ರಮಾಚರಣೆ ಆರಂಭವಾಗಲಿದೆ. ಸಿಹಿ ಹಂಚಿ, ಸಂಪ್ರದಾಯಿಕ ನೃತ್ಯ ಮಾಡಿ ಸಂಭ್ರಮಾಚರಣೆ ಮಾಡಲಾಗುತ್ತದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಂಜೆ 6.30ಕ್ಕೆ ಕಚೇರಿಗೆ ಆಗಮಿಸಲಿದ್ದಾರೆ. ಇದೇ ವೇಳೆ ಅವರು ಸಂಭ್ರಮಾಚರಣೆಯಲ್ಲಿ ಭಾಗವಹಿಸುವ ಜತೆಗೆ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದ ಒಟ್ಟು 230 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿಯು 157 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ 70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 116ರ ಮ್ಯಾಜಿಕ್‌ ನಂಬರ್‌ ಗಡಿ ದಾಟಿರುವ ಕಾರಣ ಗೆಲುವು ನಿಶ್ಚಿತವಾಗಿದೆ. ಇನ್ನು ರಾಜಸ್ಥಾನದಲ್ಲಿ 199 ಕ್ಷೇತ್ರಗಳ ಪೈಕಿ ಬಿಜೆಪಿಯು 109 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 74ರಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿಯೂ ಬಿಜೆಪಿಯು 100ರ ಮ್ಯಾಜಿಕ್‌ ನಂಬರ್‌ ಗಡಿ ದಾಟುವುದು ನಿಶ್ಚಿತವಾಗಿದೆ. ಅತ್ತ, ತೆಲಂಗಾಣದಲ್ಲಿ ಭರ್ಜರಿ ಗೆಲುವಿನತ್ತ ಮುನ್ನುಗ್ಗುತ್ತಿರುವ ಕಾರಣ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಅಲ್ಲದೆ, ಭಾನುವಾರ ಸಂಜೆಯೇ ಇಂಡಿಯಾ ಒಕ್ಕೂಟದ ಸಭೆ ಕೂಡ ಕರೆಯಲಾಗಿದೆ ಎಂದು ತಿಳಿದುಬಂದಿದೆ.

ಗೆಲುವಿನ ಕುರಿತು ಚೌಹಾಣ್‌ ಪ್ರತಿಕ್ರಿಯೆ

ಇದನ್ನೂ ಓದಿ: Telangana Election Results: ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ‘ಗ್ಯಾರಂಟಿ’ ವರದಾನ; ಗೆಲುವಿನ ಸೋಪಾನ

ಛತ್ತೀಸ್‌ಗಢ 11, ಮಧ್ಯಪ್ರದೇಶ 29, ಮಿಜೋರಾಂ 1, ರಾಜಸ್ಥಾನ 25 ಹಾಗೂ ತೆಲಂಗಾಣದ 17 ಲೋಕಸಭೆ ಕ್ಷೇತ್ರ ಸೇರಿ ಐದೂ ರಾಜ್ಯಗಳಲ್ಲಿ ಒಟ್ಟು 83 ಲೋಕಸಭೆ ಕ್ಷೇತ್ರಗಳಿವೆ. ಈ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಸಾಧ್ಯವಾಗಲಿದೆ. ಹಾಗೆಯೇ, ಜನರ ಒಲವು ಯಾವ ಪಕ್ಷದ ಕಡೆ ಇದೆ ಎಂಬುದರ ಮುನ್ಸೂಚನೆಯು ವಿಧಾನಸಭೆ ಚುನಾವಣೆಯಲ್ಲಿಯೇ ತಿಳಿಯಲಿದೆ. ಲೋಕಸಭೆ ಚುನಾವಣೆಯ ಪ್ರಚಾರಕ್ಕೂ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುನ್ನುಡಿ ಬರೆಯಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Telangana Results 2023 : ತೆಲಂಗಾಣದಲ್ಲಿ ಗೆದ್ದ‌ ಕೈ ಶಾಸಕರೆಲ್ಲರೂ ಹೈದರಾಬಾದ್‌ಗೆ ಶಿಫ್ಟ್

Telangana Results 2023 : ತೆಲಂಗಾಣದಲ್ಲಿ ಕಾಂಗ್ರೆಸ್‌ ವಿಜಯದ ಸನಿಹದಲ್ಲಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕರನ್ನು ಹೈದರಾಬಾದ್‌ ಗೆ ಬರುವಂತೆ ಸೂಚಿಸಲಾಗಿದೆ.

VISTARANEWS.COM


on

DK Shivakumar Telangana congress
ಹೈದರಾಬಾದ್‌ನ ಹೋಟೆಲ್‌ ಮುಂದೆ ಸಿದ್ಧವಾಗಿರುವ ಬಸ್‌ ಗಳು
Koo

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ (Telangana Results 2023) ಕಾಂಗ್ರೆಸ್‌ ಗೆಲುವಿನ ನಾಗಾಲೋಟದಲ್ಲಿದೆ. 119 ಕ್ಷೇತ್ರಗಳ ಪೈಕಿ 70ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಆಡಳಿತವನ್ನು ಕಳೆdದಕೊಳ್ಳುವುದು ಬಹುತೇಕ ನಿಶ್ಚಿತವಾಗಿದೆ.

ಈ ಹಂತದಲ್ಲಿ ಕಾಂಗ್ರೆಸ್‌ ತನ್ನೆಲ್ಲ ಸಂಭಾವ್ಯ ಶಾಸಕರನ್ನು ಹೈದರಾಬಾದ್‌ ಗೆ ಕರೆಸಿಕೊಳ್ಳಲಾಗಿದೆ. ಒಂದು ವೇಳೆ ಇನ್ನು ಫಲಿತಾಂಶದಲ್ಲಿ ಏನಾದರೂ ಏರುಪೇರು ಉಂಟಾದರೆ ಪರಿಸ್ಥಿತಿಯನ್ನು ಎದುರಿಸಲು ಈ ತಂತ್ರಗಾರಿಕೆ ಮಾಡಲಾಗಿದೆ. ಗೆಲುವು ಸನಿಹದಲ್ಲೇ ಇದ್ದರೂ ನಿರ್ಲಕ್ಷ್ಯ ಮಾಡುವುದು ಬೇಡ ಎಂಬ ಕಾರಣಕ್ಕಾಗಿ ಎಲ್ಲರನ್ನು ಒಂದೇ ಕಡೆ ಸೇರಿಸುವ ಪ್ಲ್ಯಾನ್‌ ಮಾಡಲಾಗಿದೆ.

ಅತಂತ್ರ ಪರಿಸ್ಥಿತಿ ಅಥವಾ ಸರಳ ಬಹುಮತ ಬಂದರೆ ಚೆಸ್ ಗೇಮ್ ಆಡಲು ಕಳುಹಿಸಿಕೊಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವ ಕರ್ನಾಟಕ ಕಾಂಗ್ರೆಸ್ ಟೀಮ್ ಸಜ್ಜಾಗಿ ನಿಂತಿದೆ. ಒಂದು ವೇಳೆ ಅವಶ್ಯ ಬಿದ್ದರೆ ಕಾಂಗ್ರೆಸ್‌ ನ ಎಲ್ಲ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಲು ಮೂರು ಬಸ್‌ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

ಡಿ.ಕೆ ಶಿವಕುಮಾರ್, ಸಚಿವರಾದ ಜಮೀರ್ ಅಹ್ಮದ್, ನಾಗೇಂದ್ರ, ಬೋಸರಾಜು. ಕೆ ಜೆ ಜಾರ್ಜ್ , ಎಂ.ಸಿ ಸುಧಾಕರ್, ಶಾಸಕರಾದ ರಿಜ್ವಾನ್ ಅರ್ಷದ್, ಪ್ರಿಯಾಕೃಷ್ಣ, ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಸೇರಿ ಹಲವು ನಾಯಕರು ಈಗ ಹೈದರಾಬಾದ್‌ನಲ್ಲೇ ಬೀಡುಬಿಟ್ಟಿದ್ದಾರೆ.

ಒಂದೊಮ್ಮೆ ಅಗತ್ಯಬಿದ್ದರೆ ರೆಸಾರ್ಟ್‌ ಗೆ ಕರೆದುಕೊಂಡು ಹೋಗಲು ಕೂಡಾ ವ್ಯವಸ್ಥೆ ಮಾಡಲಾಗಿದೆ. ಹೈದರಾಬಾದ್‌ ನ ಹೋಟೆಲ್‌ ಮುಂದೆ ನಿಂತಿರುವ ಬಸ್‌ಗಳನ್ನು ಈ ಕಾರಣಕ್ಕಾಗಿಯೇ ಸಿದ್ಧಪಡಿಸಿ ಇಡಲಾಗಿದೆ.

ತೆಲಂಗಾಣದ ಈಗಿನ ಮುನ್ನಡೆ ಪ್ರವೃತ್ತಿ ಹೇಗಿದೆ?

119 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 70 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಿ.ಆರ್‌ಎಸ್‌ 37ರಲ್ಲಿ, ಬಿಜೆಪಿ ಎಂಟು ಮತ್ತು ಎಐಎಂಐಎಂ ನಾಲ್ಕರಲ್ಲಿ ಮುನ್ನಡೆ ಸಾಧಿಸಿದೆ.

Continue Reading

ದೇಶ

Election Results 2023: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಹಿಂದಿಕ್ಕಿ ಬಿಜೆಪಿ ಮುನ್ನಡೆ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ (Chhattisgarh Election Results 2023) ಕಾಂಗ್ರೆಸ್ ಅನ್ನು ಹಿಂದಿಕ್ಕಿ ಬಿಜೆಪಿ ಮುನ್ನಡೆ ಸಾಧಿಸಿದೆ.

VISTARANEWS.COM


on

Assembly polls 2023, Chhattisgarh 71.48 and mizoram records 77.83 per cent voting
Koo

ರಾಯ್ಪುರ: ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ (Chhattisgarh Election Results 2023) ಕಾಂಗ್ರೆಸ್ ಅನ್ನು ಹಿಂದಿಕ್ಕಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬೆಳಗ್ಗಿನ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಬಲ ತೋರಿಸಿದ್ದವು. 10 ಗಂಟೆಯ ಹೊತ್ತಿಗೆ ಬಿಜೆಪಿ ಮೇಲುಗೈ ಸಾಧಿಸಿತು.

ಆರಂಭಿಕ ಟ್ರೆಂಡ್‌ಗಳು ಎಕ್ಸಿಟ್ ಪೋಲ್ ಭವಿಷ್ಯವಾಣಿಗಳಿಗೆ ಅನುಗುಣವಾಗಿದ್ದವು. ಆಡಳಿತಾರೂಢ ಪಕ್ಷ ತನ್ನ ಪ್ರತಿಸ್ಪರ್ಧಿ ಬಿಜೆಪಿಗಿಂತ ತುಸು ಮೇಲುಗೈ ಸಾಧಿಸಿತ್ತು. ನಂತರದ ಟ್ರೆಂಡ್‌ಗಳಲ್ಲಿ ಬಿಜೆಪಿ 49 ಹಾಗೂ ಕಾಂಗ್ರೆಸ್‌ 38 ಸ್ಥಾನಗಳಲ್ಲಿ ಮುನ್ನಡೆ ತೋರಿಸಿದವು. ಛತ್ತೀಸ್‌ಗಢ ಅಸೆಂಬ್ಲಿ 90 ಸ್ಥಾನಗಳನ್ನು ಹೊಂದಿದೆ. ಅಂಚೆ ಮತಪತ್ರಗಳು ಚಲಾವಣೆಯಾದ ಒಟ್ಟು ಮತಗಳಲ್ಲಿ ಅತ್ಯಂತ ಕಡಿಮೆ ಶೇಕಡಾವಾರು ಪ್ರಮಾಣವನ್ನು ಹೊಂದಿವೆ.

ನಾಲ್ಕು ಎಕ್ಸಿಟ್ ಪೋಲ್‌ಗಳು ಕಾಂಗ್ರೆಸ್ ಬಹುಮತದ ಗೆರೆ 46 ಸ್ಥಾನ ದಾಟುತ್ತದೆ ಎಂದು ನಿರೀಕ್ಷಿಸಿದ್ದವು. ಇನ್ನೆರಡು ಪೋಲ್‌ಗಳು 42-44 ಮತ್ತು ಉಳಿದ ಮೂರು 40ಕ್ಕಿಂತ ಹೆಚ್ಚು ಸ್ಥಾನ ನೀಡಿದ್ದವು. ಒಂಬತ್ತು ಎಕ್ಸಿಟ್ ಪೋಲ್‌ಗಳಲ್ಲಿ ಎರಡು ಮಾತ್ರ ಬಿಜೆಪಿಗೆ ರಾಜ್ಯವನ್ನು ಗೆಲ್ಲಲು ಅಗತ್ಯವಿರುವ 46+ ಸ್ಥಾನ ದೊರೆಯಲಿದೆ ಎಂದಿತ್ತು.

2013ರ ಜಿರಾಮ್ ಘಾಟಿ ಮಾವೋವಾದಿ ದಾಳಿಯ ನಂತರ ರಾಜ್ಯದಲ್ಲಿ ಪಕ್ಷವನ್ನು ಮರುನಿರ್ಮಾಣ ಮಾಡಿದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಟ್ರ್ಯಾಕ್ ರೆಕಾರ್ಡ್‌ನಲ್ಲಿ ಕಾಂಗ್ರೆಸ್ ಉನ್ನತ ಮಟ್ಟದ ನಾಯಕತ್ವವನ್ನು ಬಲಪಡಿಸಿಕೊಂಡಿದೆ. ನವೆಂಬರ್ 7 ಮತ್ತು 17ರಂದು ಇಲ್ಲಿ ಎರಡು ಹಂತಗಳಲ್ಲಿ ಚುನಾವಣೆಗಳು ನಡೆದವು. ಮತದಾನದ ಪ್ರಮಾಣ ಶೇಕಡಾ 76.31 ರಷ್ಟಿತ್ತು. ಇದು 2018ರ ಚುನಾವಣೆಯಲ್ಲಿ ದಾಖಲಾದ ಶೇಕಡಾ 76.88ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ.

Continue Reading
Advertisement
Police call off protest FIR against lawyer who slapped police
ಕರ್ನಾಟಕ7 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ9 mins ago

Ladli Behna: ಒಂದೇ ಯೋಜನೆ ತಂದು ಮಧ್ಯಪ್ರದೇಶ ಗೆದ್ದ ಸಿಎಂ ಚೌಹಾಣ್;‌ ಏನಿದು ಲಾಡ್ಲಿ ಬೆಹ್ನಾ?

Bobby Deol cries after paparazzi praise him as Animal
ಬಾಲಿವುಡ್12 mins ago

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

R Ashok
ಕರ್ನಾಟಕ25 mins ago

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Snehit Gowda and Namratha Gowda
ಬಿಗ್ ಬಾಸ್39 mins ago

BBK SEASON 10: ನಮ್ರತಾ ಮೇಲೆ ಸ್ಟ್ರಾಂಗ್​ ಫೀಲಿಂಗ್ಸ್ ಇದೆ ಎಂದ ಸ್ನೇಹಿತ್‌!

Narendra Modi
ದೇಶ47 mins ago

Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

DK Shivakumar Telangana congress
ಕರ್ನಾಟಕ1 hour ago

Telangana Results 2023 : ತೆಲಂಗಾಣದಲ್ಲಿ ಗೆದ್ದ‌ ಕೈ ಶಾಸಕರೆಲ್ಲರೂ ಹೈದರಾಬಾದ್‌ಗೆ ಶಿಫ್ಟ್

MLA T.B.Jayachandra spoke at the inauguration program of the new Para Medical College at Shira
ತುಮಕೂರು1 hour ago

Tumkur News: ಪ್ಯಾರಾ ಮೆಡಿಕಲ್ ಓದಿದವರಿಗೆ ವಿಫುಲ ಅವಕಾಶ: ಶಾಸಕ ಟಿ.ಬಿ.ಜಯಚಂದ್ರ

Shivamogga News Arrest of the accused who went missing after raping a young woman at Ripponpet
ಕ್ರೈಂ1 hour ago

Shivamogga News: ರಿಪ್ಪನ್‌ಪೇಟೆ; ಅತ್ಯಾಚಾರ ಎಸಗಿ ನಾಪತ್ತೆಯಾಗಿದ್ದ ಆರೋಪಿ ಬಂಧನ

Tumkur News Students can succeed when they utilize opportunities in the right way says Dr. Suresh D S
ತುಮಕೂರು1 hour ago

Tumkur News: ವಿದ್ಯಾರ್ಥಿಗಳು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು: ಡಾ. ಸುರೇಶ್

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ7 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ7 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ19 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌