Site icon Vistara News

Money Guide: ಸಿಬಿಲ್‌ ಸ್ಕೋರ್‌ ಕಡಿಮೆ ಇದ್ದರೆ ಚಿಂತೆ ಬೇಡ; ಈ ಟಿಪ್ಸ್‌ ಫಾಲೋ ಮಾಡಿ ಹೆಚ್ಚಿಸಿಕೊಳ್ಳಿ

Money Guide

Money Guide

ಬೆಂಗಳೂರು: ಯಾವುದೇ ಬ್ಯಾಂಕ್‌ನಿಂದ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ (ಕ್ರೆಡಿಟ್ ಇನ್ಫರ್ಮೇಷನ್ ಬ್ಯೂರೋ (ಇಂಡಿಯಾ) ಲಿಮಿಟೆಡ್-CIBIL) ಮುಖ್ಯವಾಗುತ್ತದೆ. ಅಂದರೆ ಉತ್ತಮ ಸಿಬಿಲ್ ಸ್ಕೋರ್ ಅನ್ನು ನೀವು ಹೊಂದಿದ್ದರೆ ಸುಲಭವಾಗಿ ಸಾಲ ಪಡೆಯಬಹುದು. ಹೀಗಾಗಿ ನಿಮ್ಮ ಸಿಬಿಲ್ ಸ್ಕೋರ್‌ ಅನ್ನು 750ಕ್ಕಿಂತ ಹೆಚ್ಚು ಕಾಯ್ದುಕೊಳ್ಳುವುದು ಅನಿವಾರ್ಯ. ಸಿಬಿಲ್ ಸ್ಕೋರ್ ಇಲ್ಲದಿದ್ದರೆ ನಿಮ್ಮ ಸಾಲದ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆಯಿದೆ. 300ರಿಂದ 900ರ ನಡುವೆ ಇರುವ ಸಿಬಿಲ್ ಸ್ಕೋರ್ ಹೆಚ್ಚಾದಷ್ಟೂ ಒಳ್ಳೆಯದು. ಹೀಗಾಗಿ ನಿಮ್ಮ ಕ್ರೆಡಿಟ್‌ ಸ್ಕೋರ್‌ ಅನ್ನು ಯಾವತ್ತೂ ಉತ್ತಮ ಸ್ಥಿತಿಯಲ್ಲಿಡಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ಹಾಗಾದರೆ ನಿಮ್ಮ ಸಿಬಿಲ್ ಸ್ಕೋರ್ ಕಡಿಮೆಯಿದ್ದರೆ ಅದನ್ನು ಹೇಗೆ ಸುಧಾರಿಸಬಹುದು? ಅದಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ (Money Guide).

ಹೀಗೆ ಸ್ಕೋರ್‌ ಹೆಚ್ಚಿಸಿ

ನಿಮ್ಮ ಬಿಲ್‌ಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಿ: ನಿಮ್ಮ ಕ್ರೆಡಿಟ್ ಸ್ಕೋರ್ ಅನ್ನು ನಿರ್ಧರಿಸುವಲ್ಲಿ ಪಾವತಿ ಇತಿಹಾಸವು ಅತ್ಯಂತ ನಿರ್ಣಾಯಕ ಅಂಶಗಳಲ್ಲಿ ಒಂದಾಗಿದೆ. ನಿಮ್ಮ ಇಎಂಐಗಳು ಮತ್ತು ಕ್ರೆಡಿಟ್ ಕಾರ್ಡ್ ಬಿಲ್‌ಗಳನ್ನು ನಿಯಮಿತವಾಗಿ ಪಾವತಿಸಿ; ಯಾವುದೇ ಕಾರಣಕ್ಕೂ ತಪ್ಪಿಸಬೇಡಿ ಮತ್ತು ವಿಳಂಬ ಮಾಡಬೇಡಿ.

ಮಿತಿಯನ್ನು ಹೆಚ್ಚು ಬಳಸಬೇಡಿ: ನಿಮ್ಮ ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚು ಬಳಸಬೇಡಿ ಮತ್ತು ನಿಮ್ಮ ಕ್ರೆಡಿಟ್ ಬಳಕೆಯ ಅನುಪಾತವನ್ನು (ಸಿಯುಆರ್) 30% ಒಳಗೆ ಇರಿಸಿಕೊಳ್ಳಲು ಪ್ರಯತ್ನಿಸಿ.

ಆಗಾಗ ಪರಿಶೀಲಿಸಿ: ನಿಮ್ಮ ಸಿಬಿಲ್ ಸ್ಕೋರ್ ಅನ್ನು ಆಗಾಗ ಪರಿಶೀಲಿಸಿ. ಇದರಿಂದ ನೀವು ಯಾವ ಮಟ್ಟದಲ್ಲಿದ್ದೀರಿ ಎಂಬುದು ತಿಳಿಯುತ್ತದೆ.

ಬೇರೆ ಬೇರೆ ಸಾಲಗಳಿಗೆ ಅರ್ಜಿ ಸಲ್ಲಿಸಬೇಡಿ: ಕಡಿಮೆ ಅವಧಿಯಲ್ಲಿ ಬೇರೆ ಬೇರೆ ಸಾಲಗಳು ಅಥವಾ ಕ್ರೆಡಿಟ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಬೇಡಿ.

ಚೆಕ್‌ ಬೌನ್ಸ್‌ ಆಗದಿರಲಿ: ಯಾವುದೇ ಕಾರಣಕ್ಕೂ ನಿಮ್ಮ ಚೆಕ್‌ ಬೌನ್ಸ್‌ ಆಗದಂತೆ ನೋಡಿಕೊಳ್ಳಿ.

ಪ್ರಯೋಜನಗಳು

ಹೆಚ್ಚಿನ ಸ್ಕೋರ್‌ ಇದ್ದಾಗ ನೀವು ಬ್ಯಾಂಕ್‌ ಜತೆಗೆ ಕಡಿಮೆ ಬಡ್ಡಿ ದರಕ್ಕೆ ಸಾಲ ಪಡೆಯಲು ಚೌಕಾಸಿ ಮಾಡಬಹುದು. ಬ್ಯಾಂಕ್‌ಗಳೂ ಹೆಚ್ಚಿನ ಸ್ಕೋರ್‌ ಇರುವವರಿಗೆ ಸಾಲ ಕೊಡಲು ಮುಂದಾಗುತ್ತವೆ. ಬ್ಯಾಂಕ್‌ ಬಾಜಾರ್‌ ಪ್ರಕಾರ, ಗೃಹ ಸಾಲ ಮತ್ತು ಕಾರು ಸಾಲಗಳ ಬಡ್ಡಿ ದರಗಳು ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಭಿನ್ನವಾಗಿದ್ದರೂ, ಗರಿಷ್ಠ ಸಿಬಿಲ್‌ ಸ್ಕೋರ್‌ ಇದ್ದರೆ ನೀವು ಬಡ್ಡಿ ದರದಲ್ಲಿ ರಿಯಾಯಿತಿ ಪಡೆಯುವ ಸಾಧ್ಯತೆ ಇದೆ. ಉತ್ತಮ ಕ್ರೆಡಿಟ್‌ ಸ್ಕೋರ್‌ ಇರುವವರಿಗೆ ಉತ್ತಮ ಕ್ರೆಡಿಟ್‌ ಕಾರ್ಡ್‌ ಆಫರ್‌ಗಳೂ ಲಭಿಸುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ ಬ್ಯಾಂಕ್‌ಗಳು ನೀವು ಈ ಹಿಂದೆ ಯಾವುದಾದರೂ ಸಾಲವನ್ನು ಮರು ಪಾವತಿಸದೆ ಸುಸ್ತಿ ಸಾಲಗಾರರಾಗಿದ್ದೀರಾ ಎಂಬುದನ್ನು ಸಿಬಿಲ್‌ ಮೂಲಕ ತಿಳಿದುಕೊಳ್ಳುತ್ತವೆ. ಆದ್ದರಿಂದ ಸಿಬಿಲ್‌ ಸ್ಕೋರ್‌ ಚೆನ್ನಾಗಿರುವಂತೆ ನೋಡಿಕೊಳ್ಳಿ ಎಂದು ತಜ್ಞರು ಸಲಹೆ ನೀಡುತ್ತಾರೆ. ಜತೆಗೆ ಈ ಕೆಳಗಿನ ಅನುಕೂಲಗಳು ಸಿಗುತ್ತವೆ.

ಪರಿಶೀಲಿಸುವ ವಿಧಾನ

ಇದನ್ನೂ ಓದಿ: EPF Accounts: ಇಪಿಎಫ್ ಖಾತೆಗಳ ಸ್ವಯಂಚಾಲಿತ ವರ್ಗಾವಣೆಗೂ ಇದೆ ಅವಕಾಶ; ಹೀಗೆ ಮಾಡಿ

Exit mobile version