ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ 18ನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್‌ನಲ್ಲಿ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಜಮೆ ಆಗಲಿದೆ. 17ನೇ ಕಂತು ಜೂನ್‌ನಲ್ಲಿ ರಿಲೀಸ್ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Money Guide).
3 ಕಂತುಗಳಲ್ಲಿ ಪಾವತಿ
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇ-ಕೆವೈಸಿ ಕಡ್ಡಾಯ
ಕಿಸಾನ್ ಸಮ್ಮಾನ್ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಮಾಡಬಹುದು.
ಹೆಸರು ನೋಂದಾಯಿಸುವ ವಿಧಾನ
- ಅಧಿಕೃತ ವೆಬ್ಸೈಟ್ pmkisan.gov.in ಭೇಟಿ ನೀಡಿ
- ‘New Farmer Registration’ ಆಯ್ಕೆ ಮೇಲೆ ಕಲಿಕ್ ಮಾಡಿ ಮತ್ತು ಆಧಾರ್ ಕಾರ್ಡ್ ನಂಬರ್ ನಮೂದಿಸಿ ಕ್ಯಾಪ್ಚ ಕೋಡ್ ಭರ್ತಿ ಮಾಡಿ
- ಅಗತ್ಯ ಮಾಹಿತಿ ತುಂಬಿ ‘Yes’ ಬಟನ್ ಕ್ಲಿಕ್ ಮಾಡಿ
- ಅರ್ಜಿ ಫಾರಂ ತುಂಬಿ, ಸೇವ್ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್ ಔಟ್ ತೆಗೆದಿಡಿ.
ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ
- ಅಧಿಕೃತ ವೆಬ್ಸೈಟ್ www.pmkisan.gov.inಗೆ ಭೇಟಿ ನೀಡಿ
- ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
- ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
- ‘Get report’ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
ಹೀಗೆ ಚೆಕ್ ಮಾಡಿ
ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.
- ಅಧಿಕೃತ ವೆಬ್ಸೈಟ್ pmkisan.gov.in ಭೇಟಿ ನೀಡಿ
- ಆಗ ಓಪನ್ ಆಗುವ ಪೇಜ್ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್ ಮಾಡಿ
- ರಿಜಿಸ್ಟ್ರೇಷನ್ ನಂಬರ್ ನಮೂದಿಸಿ, ಕ್ಯಾಪ್ಚ ಕೋಡ್ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್ ಮಾಡಿ
- ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್ ಮೇಲೆ ಮೂಡುತ್ತದೆ.
ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್ ನಂಬರ್ 155261 ಮತ್ತು 011-24300606 ಅನ್ನು ಸಂಪರ್ಕಿಸಿ.
ಇದನ್ನೂ ಓದಿ: LIC New Plan For Youths: ಎಲ್‌ಐಸಿಯಿಂದ ಯುವ ಜನರಿಗಾಗಿ ಹೊಸ ವಿಮಾ ಯೋಜನೆ; ಏನಿದರ ವಿಶೇಷತೆ?