Motivational story | ಕಹಿ ಸತ್ಯವನ್ನೇ ಹೇಳಿದರೂ ಅದನ್ನು ಹಿತವಾಗುವಂತೆ ಹೇಳಬಹುದು.. ಹೇಗೆ ಅಂತ ತಿಳೀಬೇಕಾ? ಈ ಕಥೆ ಓದಿ - Vistara News

ಪ್ರಮುಖ ಸುದ್ದಿ

Motivational story | ಕಹಿ ಸತ್ಯವನ್ನೇ ಹೇಳಿದರೂ ಅದನ್ನು ಹಿತವಾಗುವಂತೆ ಹೇಳಬಹುದು.. ಹೇಗೆ ಅಂತ ತಿಳೀಬೇಕಾ? ಈ ಕಥೆ ಓದಿ

ಕಹಿ ಸತ್ಯಗಳನ್ನು ಮುಖಕ್ಕೆ ಹೊಡೆದ ಹಾಗೂ ಹೇಳಬಹುದು. ಅಥವಾ ಹೃದಯಕ್ಕೆ ಹತ್ತಿರವಾಗಿ ಹಿತವಾಗಿಯೂ ಹೇಳಬಹುದು. ಇದು ಕೇವಲ ಅಕ್ಬರ್‌ ಬೀರಬಲ್ಲನ ಕಥೆಯಲ್ಲ. ಎಲ್ಲರ ಬದುಕಿನ ಕಥೆ.

VISTARANEWS.COM


on

how to say truth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ – motivational story
ದೊರೆ ಅಕ್ಬರ್ ಗೆ ಆವತ್ತು ಒಂದು ವಿಚಿತ್ರವಾದ ಕನಸು ಬಿತ್ತು. ಕನಸಿನಲ್ಲಿ ಅವನ ಎಲ್ಲ ಹಲ್ಲುಗಳು ಉದುರಿ ಹೋಗಿ ಒಂದು ಹಲ್ಲು ಮಾತ್ರ ಉಳಿದಿತ್ತು! ಕನ್ನಡಿ ನೋಡಿಕೊಂಡರೆ ತುಂಬ ಹೇಸಿಗೆಯಾಗುತ್ತಿತ್ತು.

ಬೆಳಗ್ಗೆ ಎದ್ದವನೇ ಆಸ್ಥಾನ ಜೋತಿಷಿಯನ್ನು ಕರೆಸಿಕೊಂಡು ಈ ಕನಸಿನ ಮರ್ಮವೇನು ಎಂದು ಕೇಳಿದ. ಜೋತಿಷಿ ತನ್ನ ಗ್ರಂಥಗಳನ್ನು ಪರಿಶೀಲಿಸಿ ಹೇಳಿದ: ದೊರೆಗಳೇ, ನಿಮ್ಮ ಕುಟುಂಬದವರೆಲ್ಲ ನಿಮ್ಮ ಕಣ್ಣಮುಂದೆಯೇ ಸತ್ತು ಹೋಗ್ತಾರೆ ಅನ್ನೋದರ ಸೂಚನೆ ಇದು ಅಂತ ಸ್ವಪ್ನ ಶಾಸ್ತ್ರ ಹೇಳುತ್ತದೆ.

ಅಕ್ಬರನಿಗೆ ತುಂಬ ಕೋಪ ಬಂತು. ಬೇಸರವೂ ಆಯಿತು. ಆ ಜೋತಿಷಿಯನ್ನು ಕಳುಹಿಸಿ ಬೇರೆ ಜೋತಿಷಿಗಳನ್ನು ಕರೆಸಿಕೊಂಡ. ಯಾರನ್ನೇ ಕೇಳಿದರೂ ಎಲ್ಲರೂ ಒಂದೇ ಅಭಿಪ್ರಾಯ ತಿಳಿಸಿದರು. ಫಲ ಜೋತಿಷದ ಪ್ರಕಾರ ಹೀಗೇ ಇದೆ ದೊರೆಗಳೇ ಅಂದರು. ಅವರ‍್ಯಾರಿಗೂ ಚಿಕ್ಕಾಸನ್ನೂ ಕೊಡದೆ ಕಳುಹಿಸಿಕೊಟ್ಟ ಅಕ್ಬರ್.

ಕೆಲವು ದಿನಗಳ ನಂತರ ಅಕ್ಬರನಿಗೆ ಬೀರಬಲ್ಲ ಎದುರಾದ. ಆಗ ಅಕ್ಬರ್ ಬೀರಬಲ್ಲನ ಮುಂದೆ ತನ್ನ ಕನಸಿನ ಕಥೆ ಹೇಳಿಕೊಂಡ. ಏನಿರಬಹುದು ಇದರ ಮರ್ಮ ಎಂದು ಪ್ರಸ್ನಿಸಿದ.

ಬೀರಬಲ್ಲ ಸ್ವಲ್ಪ ಹೊತ್ತು ಯೋಚನೆ ಮಾಡಿ ಹೇಳಿದ: ದೊರೆಗಳೇ ನೀವು ಈ ಸ್ವಪ್ನದ ಬಗ್ಗೆ ತುಂಬ ಚಿಂತೆ ಮಾಡಬೇಕಾಗಿಲ್ಲ. ಇದರ ಅರ್ಥ ಏನೆಂದರೆ, ನಿಮಗೆ ದೀರ್ಘಾಯುಷ್ಯವಿದೆ. ನಿಮ್ಮ ಕುಟುಂಬದ ಇತರ ಎಲ್ಲರಿಗಿಂತ ಹೆಚ್ಚು ಕಾಲ ನೀವು ಬದುಕುತ್ತೀರಿ.. ಅಂತ ಹೇಳುತ್ತದೆ ಫಲ ಜೋತಿಷ ಅಂದ.

ಬೀರಬಲ್ಲನ ಮಾತು ಕೇಳಿ ಅಕ್ಬರ್ ಗೆ ತುಂಬ ಖುಷಿಯಾಗಿ ಬಹುಮಾನಗಳನ್ನು ಕೊಟ್ಟ.

ನಿಜ ಅಂದರೆ ಜೋತಿಷಿಗಳು ಮತ್ತು ಬೀರಬಲ್ಲ ಹೇಳಿದ ಅಭಿಪ್ರಾಯಗಳಲ್ಲಿ ಯಾವುದೇ ವ್ಯತ್ಯಾಸ ಇರಲಿಲ್ಲ. ಆದರೆ, ಹೇಳಿದ ರೀತಿಯಲ್ಲಿ ವ್ಯತ್ಯಾಸ ಇತ್ತು ಅಷ್ಟೆ.

ಇದನ್ನೂ ಓದಿ | Motivational story | ಖಾಲಿ ಡಬ್ಬ ಕೊಟ್ಟ ಆ ಪುಟ್ಟ ಮಗಳು ಮತ್ತು ಅಸಹನೆಯಿಂದ ಕೆಂಡವಾದ ಅಪ್ಪ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ‌ ನೋಟೀಸ್

CM Siddaramaiah: ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

VISTARANEWS.COM


on

cm siddaramaiah MUDA scam
Koo

ಬೆಂಗಳೂರು: ಮುಡಾ ಹಗರಣದ (MUDA Scam) ವಿಚಾರದಲ್ಲಿ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರಕ್ಕೆ ರಾಜ್ಯಪಾಲರು (Governor) ನೋಟೀಸ್‌ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ನೀಡಬೇಕು ಎಂದು ಬಂದಿರುವ ಮನವಿ ಹಿನ್ನೆಲೆಯಲ್ಲಿ ನೋಟೀಸ್‌ (Notice) ನೀಡಲಾಗಿದೆ.

ಮುಡಾ ಪ್ರಕರಣದ ಮಾಹಿತಿ ದಾಖಲೆ ಸಹಿತ ನೀಡುವಂತೆ ಸರ್ಕಾರಕ್ಕೆ ರಾಜ್ಯಪಾಲರು ನೋಟೀಸ್ ಕಳಿಸಿದ್ದಾರೆ. ಟಿ.ಜೆ ಅಬ್ರಹಾಂ ಎಂಬ ಸಾಮಾಜಿಕ ಕಾರ್ಯಕರ್ತರು ಈ ಕುರಿತು ಖಾಸಗಿ ದೂರು ಸಲ್ಲಿಸಿದ್ದರು. ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿಯಲ್ಲಿ ಕೇಳಲಾಗಿತ್ತು. ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಬಳಿಕ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ಕಳುಹಿಸಲಾಗಿದೆ. ಅಬ್ರಹಾಂ ದೂರಿಗೆ ಸಂಬಂಧಿಸಿ ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಕೊಡುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಈಗಾಗಲೇ ರಾಜ್ಯಪಾಲರು ನೋಟೀಸ್‌ ಕಳುಹಿಸಬಹುದು ಎಂಬ ವದಂತಿಯ ಆಧಾರದಲ್ಲಿ ಕಾಂಗ್ರೆಸ್‌ ಮುಖಂಡರು ಸಿಡಿದೆದ್ದಿದ್ದಾರೆ. ನಿನ್ನೆ ಕಂದಾಯ ಸಚಿವ ಕೃಷ್ಣಭೈರೇಗೌಡರು, ʼರಾಜ್ಯಪಾಲರ ಮೂಲಕ ಸರಕಾರ ಅಸ್ಥಿರಗೊಳಿಸುವ ದಾರಿ ಹಿಡಿದರೆ ನಾವು ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದೇವೆʼ ಎಂದು ಎಚ್ಚರಿಸಿದ್ದರು.

ಇಡಿ ಜೊತೆಗೆ ರಾಜಭವನದ ದುರುಪಯೋಗ ಆಗುತ್ತಿದೆ ಎಂದು ಕಾಂಗ್ರೆಸ್‌ ಸಚಿವರು ಆರೋಪಿಸಿದ್ದರು. ಈ ನಡುವೆ ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ಇಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಇಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಈವರೆಗೂ ಅನುಮತಿ ಕೇಳಿಲ್ಲ.

ಇದರ ಮಧ್ಯೆಯೇ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಧಾನಿಗಳ ಜೊತೆ ಡಿಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕೇಂದ್ರ ಸರಕಾರವನ್ನು ಪ್ರಶ್ನಿಸಿ: ಸಿದ್ದರಾಮಯ್ಯ

ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕ ಅಧಿಕಾರ ಇದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ ಸಿ/ಎಸ್ ಟಿ ಕಲ್ಯಾಣದ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕೆಂದು ಕರೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ, ನಿಮಗೆ ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ಜಾರಿಗೆ ತಂದು ಕೇಂದ್ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 25ರಷ್ಟು ಅನುದಾನವನ್ನು ಮೀಸಲಿಡಿ, ಆ ಮೇಲೆ ನಮ್ಮನ್ನು ಪ್ರಶ್ನೆ ಮಾಡಲು ಬನ್ನಿ. ಅಲ್ಲಿಯ ವರೆಗೆ ಮೌನವಾಗಿರುವುದು ನಿಮಗೆ ಕ್ಷೇಮ ಎಂದಿದ್ದಾರೆ ಅವರು.

ಇದನ್ನೂ ಓದಿ: Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Continue Reading

ಪ್ರಮುಖ ಸುದ್ದಿ

SSLC Exam: ನಾಳೆಯಿಂದ SSLC ಪರೀಕ್ಷೆ-3 ಆರಂಭ; ಎಕ್ಸಾಮ್‌ ತೆಗೆದುಕೊಳ್ಳಲಿರುವ 97,933 ವಿದ್ಯಾರ್ಥಿಗಳು

SSLC Exam: ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ.

VISTARANEWS.COM


on

Students writing SSLC Exam in Examination centre
Koo

ಬೆಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆ-3 (SSLC Exam- 3) ನಾಳೆ (ಆಗಸ್ಟ್ 2) ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾದ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ದಿನಾಂಕ 02-08-2024ರಿಂದ ದಿನಾಂಕ:09-08-2024 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿದ್ದಾರೆ.

ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ.

ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ. ಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಹೇಳಿದೆ.

ಯಾರ್ಯಾರಿಗೆ ಪರೀಕ್ಷೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗದವರು, ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸಿದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಅದರಂತೆ ಆಗಸ್ಟ್‌ 2ರಿಂದ 9ರವರೆಗೆ ಪರೀಕ್ಷೆ ನಡೆಯಲಿದೆ. ಇದೀಗ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶಾಲಾ ಮುಖ್ಯೋಪಾಧ್ಯಾಯರು ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಒಂದು ವೇಳೆ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಪರಿಶೀಲನಾ ಶಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ತಪ್ಪದೇ ಪರಿಶೀಲಿಸಬೇಕು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ ಆ ವಿವರವನ್ನು ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಇವನ್ನು ಗಮನಿಸಿ

  • ಪ್ರವೇಶ ಪತ್ರದಲ್ಲಿ ಹಾಗೂ ಕೇಂದ್ರ ನಾಮಯಾದಿಪಟ್ಟಿಯಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ಇದಕ್ಕೆ ಮಂಡಳಿ ಜವಾಬ್ದಾರಿಯಲ್ಲ. ಹೀಗಾಗಿ ಪ್ರವೇಶ ಪತ್ರದಲ್ಲಿ ವಿದ್ಯಾರ್ತಿಯ ಫೋಟೊ ಇದೆ ಎನ್ನುವುದನ್ನು ಖಚಿತಪಡಿಸಿ. ಇಲ್ಲದಿದ್ದರೆ ಈಗಲೇ ಮಂಡಳಿಯ ಗಮನಕ್ಕೆ ತನ್ನಿ.
  • ಶಾಲಾ ಲಾಗಿನ್‌ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿ ಕೂಡಲೇ ವಿತರಿಸಬೇಕು ಮತ್ತು ಹಾಗೂ ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಪಾಲಿಸಲುತಿಳಿಸಬೇಕು.
  • ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪಾಸಾದ ವಿಷಯಕ್ಕೆ ಪರೀಕ್ಷೆ ಬರೆಯುವಂತೆ ಮುದ್ರಣವಾಗಿದ್ದಲ್ಲಿ ಪಾಸಾದ ಬಗ್ಗೆ ಚುಕ್ಕೆ ಗುರುತಿಲ್ಲದ ಫಲಿತಾಂಶ ಪಟ್ಟಿಯನ್ನು ಮುಖ್ಯಶಿಕ್ಷಕರು ದೃಢೀಕರಿಸಿ ಪರೀಕ್ಷೆ ಪ್ರಾರಂಭವಾಗುವುದಕ್ಕೆ ಮುಂಚಿತವಾಗಿ ಪರಿಶೀಲನಾ ಶಾಖೆಯ ಅಧಿಕಾರಿಗಳಿಗೆ ಕಳುಹಿಸಬೇಕು.
  • ಪ್ರವೇಶ ಪತ್ರವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ: SSLC Exam 3: SSLC ಫೇಲಾದವರಿಗೆ ಮತ್ತೊಂದು ಚಾನ್ಸ್;‌ 3ನೇ ಪರೀಕ್ಷೆಯ ನೋಂದಣಿ, ಪರೀಕ್ಷೆ ದಿನಾಂಕ ಘೋಷಣೆ

Continue Reading

ಭವಿಷ್ಯ

Dina Bhavishya: ವಿದೇಶ ಪ್ರವಾಸಕ್ಕೆ ಕಾಯುತ್ತಿರುವ ಈ ರಾಶಿಯವರಿಗೆ ಶುಭ ಸೂಚನೆ ಸಿಗಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಬುಧವಾರ ರಾತ್ರಿ 11:19 ಗಂಟೆಗೆ ಕರ್ಕ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯ ಉದ್ಯೋಗಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಇನ್ನು ಮಕರ ರಾಶಿಯವರಿಗೆ ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಕೆಲಸ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ವಿದೇಶ ಪ್ರವಾಸಕ್ಕೆ ಕಾಯುತ್ತಿರುವವರಿಗೆ ಶುಭ ಸೂಚನೆ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (01-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 15:28 ವಾರ: ಗುರುವಾರ
ನಕ್ಷತ್ರ: ಮೃಗಶಿರಾ 10:22 ಯೋಗ: ವ್ಯಾಘಾತ 12:48
ಕರಣ: ತೈತುಲ 15:28 ಅಮೃತಕಾಲ: ಬೆಳಗ್ಗೆ 01:32 ರಿಂದ 03:08
ದಿನದ ವಿಶೇಷ: ವಿದ್ಯಾನಿಧಿತೀರ್ಥರ ಆರಾಧನೆ, ಪ್ರದೋಷ

ಸೂರ್ಯೋದಯ : 05:54   ಸೂರ್ಯಾಸ್ತ : 07:12

ರಾಹುಕಾಲ: ಮಧ್ಯಾಹ್ನ 1:30 ರಿಂದ 03:00
ಗುಳಿಕಕಾಲ: ಬೆಳಗ್ಗೆ 9:00
ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00
ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ. ಆರ್ಥಿಕವಾಗಿ ಲಾಭ. ತಿಂಗಳ ಆರಂಭದ ದಿನವೇ ಉದ್ಯೋಗದ ಸ್ಥಳದಲ್ಲಿ ನೀವು ಕಿರಿಕಿರಿ ಅನುಭವಿಸುವ ಸಾಧ್ಯತೆ ಇರುವುದರಿಂದ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ, ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.
ನಿಮ್ಮ ಆಕರ್ಷಣೆಯ ವ್ಯಕ್ತಿತ್ವ, ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ವಿಶೇಷ ಅನುಕೂಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಜೀವನ ಸಂಗಾತಿಯೊಂದಿಗೆ ಸೇರಿ ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು ಮತ್ತು ಈ ಯೋಜನೆ ಯಶಸ್ವಿಯಾಗಲಿದೆ.
ಹತಾಶೆಯ ಭಾವನೆ ನಿಮ್ಮನ್ನು ಅವರಿಸಲು ಬಿಡಬೇಡಿ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಅನಿರೀಕ್ಷಿತ ಲಾಭದ ಮೂಲಕ ಆರ್ಥಿಕ ಬಲಗಳು ಸುಧಾರಿಸುತ್ತವೆ. ನಿಮ್ಮ ಸಹೋದ್ಯೋಗಿಗಳು ಎಂದಿಗಿಂತಲೂ ಉತ್ತಮವಾಗಿ ನಿಮ್ಮನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಧರ್ಮಕಾರ್ಯಗಳು/ ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳವ ಸಾಧ್ಯತೆ. ಅತಿಯಾದ ದ್ವೇಷದ ಭಾವನೆಯಿಂದ ನಿಮ್ಮ ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗುವ ಸಾಧ್ಯತೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಅನುಭವಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು.
ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಇದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸುವುದಷ್ಟೇ ಅಲ್ಲದೇ ನಿಮ್ಮ ತಪ್ಪು ತಿಳಿವಳಿಕೆಗಳನ್ನೂ ಹೋಗಲಾಡಿಸುತ್ತದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ದಿನದ ಮಟ್ಟಿಗೆ ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸ್ನೇಹಿತರ ಜೊತೆಗಿನ ನಿಮ್ಮ ಅಪಾರ್ಥ ಕೆಲವು ಅಹಿತಕರ ಪ್ರತಿಕ್ರಿಯೆಗಳನ್ನು ಉಂಟುಮಾಡಬಹುದು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಯಮದಿಂದ ವರ್ತಿಸಿ.
ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರಲಿದೆ. ಆರ್ಥಿವಾಗಿ ಉತ್ತಮ ಫಲ ಇರಲಿದೆ. ಆರೋಗ್ಯದ ಬಗೆಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಪ್ರಮುಖ ಕೆಲಸಗಳಲ್ಲಿ ವಿಳಂಬವಾಗುವ ಸಾಧ್ಯತೆ. ಅನೇಕ ಒತ್ತಡದಿಂದ ಹೊರಬರವಿರಿ. ಹಣಕಾಸಿನಲ್ಲಿ ಸುಧಾರಣೆ, ದೀರ್ಘಕಾಲದ ಬಾಕಿ ಮರುಪಾವತಿ ಆಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ.ಕು ಟುಂಬದಲ್ಲಿ ದಿನದ ಕೊನೆಯಲ್ಲಿ ಮನಸ್ತಾಪ ಆದಷ್ಟು ಮಾತಿಗೆ ವಿರಾಮವಿರಲಿ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಚಿಕ್ಕ ಪುಟ್ಟ ವಿಷಯಗಳಿಗೆ ತಲೆಕೆಡಿಸಿಕೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗಿಗಳಿಗೆ ಆಲಸ್ಯದಿಂದಾಗಿ ಕಿರಿಕಿರಿ ಅನುಭವಿಸುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಕರ: ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಕೆಲಸ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ವಿದೇಶ ಪ್ರವಾಸಕ್ಕೆ ಕಾಯುತ್ತಿರುವವರಿಗೆ ಶುಭ ಸೂಚನೆ ಸಿಗಲಿದೆ. ಸೃಜನಶೀಲ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು ಮತ್ತು ನೀವು ಹಣದ ಲಾಭವನ್ನು ಪಡೆಯಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆ ಇಮ್ಮಡಿ ಆಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ನಿಮ್ಮ ಆರೋಗ್ಯವು ಇಂದು ಉತ್ತಮವಾಗಿರಲಿದೆ. ನಿಮ್ಮಲ್ಲಿ ಚುರುಕುತನವನ್ನು ನೋಡಬಹುದು. ಕೆಲವು ಊಹೆಗಳು ಲಾಭ ತರುತ್ತವೆ. ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಕ್ರೀಡೆ

Paris Olympics 2024 Day 6: ಇಂದಿನಿಂದ ಅಥ್ಲೆಟಿಕ್ಸ್ ಆರಂಭ; ಭಾರತದ ಕ್ರೀಡಾ ಸ್ಪರ್ಧೆಗಳ ವಿವರ ಹೀಗಿದೆ

Paris Olympics 2024 Day 6: ಇಂದು ನಡೆಯುವ ಪುರುಷರ ಮತ್ತು ಮಹಿಳೆಯರ 20 ಕಿಮೀ ಓಟದ ನಡಿಗೆ ಸ್ಪರ್ಧೆಯಲ್ಲಿ ಐತಿಹಾಸಿಕ ಪದಕವೊಂದನ್ನು ನಿರೀಕ್ಷೆ ಮಾಡಲಾಗಿದೆ. ಅಕ್ಷದೀಪ್ ಸಿಂಗ್, ವಿಕಾಶ್ ಸಿಂಗ್ ,ಪರಮ್ಜೀತ್ ಸಿಂಗ್ ಬಿಷ್ತ್ ಪುರುಷರ ವಿಭಾಗದಲ್ಲಿ ಕಣಕ್ಕಿಳಿದರೆ, ಮಹಿಳಾ ವಿಭಾಗದಲ್ಲಿ ಏಕೈಕ ಓಟಗಾರ್ತಿ ಪ್ರಿಯಾಂಕಾ ಗೋಸ್ವಾಮಿ(priyanka goswami) ಸ್ಪರ್ಧಿಸಲಿದ್ದಾರೆ.

VISTARANEWS.COM


on

Paris Olympics 2024 Day 6
Koo

ಪ್ಯಾರಿಸ್​: ಒಲಿಂಪಿಕ್ಸ್​ನಲ್ಲಿ(Paris Olympics) ಬುಧವಾರ ನಡೆದಿದ್ದ ಹಲವು ಸ್ಪರ್ಧೆಗಳಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಫಲಿತಾಂಶ ದಾಖಲಿಸಿ, ಕೆಲವರು ಫೈನಲ್​, ಕ್ವಾರ್ಟರ್​ ಫೈನಲ್​ ಮತ್ತು ಪ್ರೀ ಕ್ವಾರ್ಟರ್​ ಫೈನಲ್​ ಪ್ರವೇಶಿಸಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಇದೀಗ ಇಂದು(ಗುರುವಾರ) ನಡೆಯುವ ಹಲವು(Paris Olympics 2024 Day 6) ವಿಭಾಗದ ಸ್ಪರ್ಧೆಗಳಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಲು ಭಾರತೀಯ ಕ್ರೀಡಾಪಟುಗಳು(India at Paris Olympics) ಸಜ್ಜಾಗಿದ್ದಾರೆ. ಇಂದು ಭಾರತೀಯ ಕ್ರೀಡಾಳುಗಳು ಕಣಕ್ಕಿಳಿಯುವ ಸ್ಪರ್ಧೆಗಳ ವಿವರ ಹೀಗಿದೆ.

ಅಥ್ಲೆಟಿಕ್ಸ್​ನಲ್ಲಿ ಪದಕ ನಿರೀಕ್ಷೆ


ಈ ಬಾರಿ ಪ್ಯಾರಿಸ್​ಗೆ ಕಳುಹಿಸಿದ 117 ಕ್ರೀಡಾಪಟುಗಳ ಪಟ್ಟಿಯಲ್ಲಿ ಅಥ್ಲೆಟಿಕ್ಸ್​ ದೊಡ್ಡ ತಂಡವಾಗಿದೆ. ಒಟ್ಟು 29 ಸ್ಪರ್ಧಿಗಳು ಭಾರತವನ್ನು ಈ ವಿಭಾಗದಿಂದ ಪ್ರತಿನಿಧಿಸಲಿದ್ದಾರೆ. ಇವರಿಂದ ಹಲವು ಪದಕಗಳನ್ನು ಕೂಡ ಈ ಬಾರಿ ನಿರೀಕ್ಷೆ ಮಾಡಲಾಗಿದೆ. 18 ಪುರುಷರು ಹಾಗೂ 11 ಮಹಿಳೆಯರು ಸೇರಿದ್ದಾರೆ. ಇಂದು ನಡೆಯುವ ಪುರುಷರ ಮತ್ತು ಮಹಿಳೆಯರ 20 ಕಿಮೀ ಓಟದ ನಡಿಗೆ ಸ್ಪರ್ಧೆಯಲ್ಲಿ ಐತಿಹಾಸಿಕ ಪದಕವೊಂದನ್ನು ನಿರೀಕ್ಷೆ ಮಾಡಲಾಗಿದೆ. ಅಕ್ಷದೀಪ್ ಸಿಂಗ್, ವಿಕಾಶ್ ಸಿಂಗ್ ,ಪರಮ್ಜೀತ್ ಸಿಂಗ್ ಬಿಷ್ತ್ ಪುರುಷರ ವಿಭಾಗದಲ್ಲಿ ಕಣಕ್ಕಿಳಿದರೆ, ಮಹಿಳಾ ವಿಭಾಗದಲ್ಲಿ ಏಕೈಕ ಓಟಗಾರ್ತಿ ಪ್ರಿಯಾಂಕಾ ಗೋಸ್ವಾಮಿ(priyanka goswami) ಸ್ಪರ್ಧಿಸಲಿದ್ದಾರೆ.

28 ವರ್ಷದ ಪ್ರಿಯಾಂಕಾ ಗೋಸ್ವಾಮಿ ಉತ್ತರಪ್ರದೇಶದ ಮುಜಫ‌ರ್‌ ನಗರದವರು. ಆರಂಭದಲ್ಲಿ ಜಿಮ್ನಾಸ್ಟ್‌ ಆಗಿದ್ದ ಅವರು ಆ ಬಳಿಕ ಅಥ್ಲೆಟಿಕ್ಸ್‌ಗೆ ಹೊರಳಿಕೊಂಡರು. 2022ರ ಕಾಮನ್‌ ವೆಲ್ತ್‌ ಗೇಮ್ಸ್​ ಮತ್ತು ಕಳೆದ ವರ್ಷ ನಡೆದಿದ್ದ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ ಕ್ರಮವಾಗಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು. ಅವರು ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಭಾರತದ ಹೊಸ ಆಶಾಕಿರಣವಾಗಿ ಗೋಚರಿಸಿದ್ದಾರೆ.

ಇದನ್ನೂ ಓದಿ Paris Olympics: ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಮುಗ್ಗರಿಸಿದ ಮಣಿಕಾ ಬಾತ್ರಾ

ವೇಳಾಪಟ್ಟಿ


ಅಥ್ಲೆಟಿಕ್ಸ್​

ಪುರುಷರ 20 ಕಿಮೀ ಓಟದ ನಡಿಗೆ, ಫೈನಲ್
ಅಕ್ಷದೀಪ್ ಸಿಂಗ್, ವಿಕಾಶ್ ಸಿಂಗ್ ,ಪರಮ್ಜೀತ್ ಸಿಂಗ್ ಬಿಷ್ತ್ (ಆರಂಭ; ಬೆಳಗ್ಗೆ 11 ಗಂಟೆ)

ಮಹಿಳೆಯರ 20 ಕಿಮೀ ಓಟದ ನಡಿಗೆ, ಫೈನಲ್
ಪ್ರಿಯಾಂಕಾ ಗೋಸ್ವಾಮಿ (ಆರಂಭ: ಮಧ್ಯಾಹ್ನ 12:50) 

ಆರ್ಚರಿ

ಪುರುಷರ ವೈಯಕ್ತಿಕ, 1/32 ಎಲಿಮಿನೇಷನ್ ಸುತ್ತು

ಪ್ರವೀಣ್ ರಮೇಶ್ ಜಾಧವ್ vs ಕೆಎಒ ವೆಂಚಾವ್(ಚೀನಾ). (ಆರಂಭ: ಮಧ್ಯಾಹ್ನ  2:31) 

ಸೈಲಿಂಗ್​ (ಹಾಯಿದೋಣಿ)


ಪುರುಷರ ಡಿಂಗಿ, ರೇಸ್​ 1

ವಿಷ್ಣು ಸರವಣನ್ (ಆರಂಭ: ಮಧ್ಯಾಹ್ನ  3:45) 

ಮಹಿಳೆಯರ ಡಿಂಗಿ, ರೇಸ್​ 1

ನೇತ್ರಾ ಕುಮನನ್‌

ಗಾಲ್ಫ್​


ಪುರುಷರ ವೈಯಕ್ತಿಕ ಸ್ಟ್ರೋಕ್ ಗೇಮ್​, ಸುತ್ತು 1

ಶುಭಂಕರ್ ಶರ್ಮಾ, ಗಗನ್ಜೀತ್ ಭುಲ್ಲರ್. (ಆರಂಭ: ಮಧ್ಯಾಹ್ನ  12:30) 

ಹಾಕಿ


ಪುರುಷರ, ಗುಂಪು ಬಿ.

ಭಾರತ vs ಬೆಲ್ಜಿಯಂ (ಆರಂಭ: ಮಧ್ಯಾಹ್ನ, 1:30)

ಶೂಟಿಂಗ್​


ಮಹಿಳೆಯರು 50 ಮೀ ರೈಫಲ್ 3 ತ್ರೀ ಪೊಸಿಶನ್‌ ಅರ್ಹತಾ ಸುತ್ತು

ಅಂಜುಮ್ ಮೌದ್ಗಿಲ್, ಸಿಫ್ಟ್ ಕೌರ್ ಸಮ್ರಾ (ಆರಂಭ: ಮಧ್ಯಾಹ್ನ, 3:30)

Continue Reading
Advertisement
cm siddaramaiah MUDA scam
ಪ್ರಮುಖ ಸುದ್ದಿ18 mins ago

CM Siddaramaiah: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ‌ ನೋಟೀಸ್

Students writing SSLC Exam in Examination centre
ಪ್ರಮುಖ ಸುದ್ದಿ42 mins ago

SSLC Exam: ನಾಳೆಯಿಂದ SSLC ಪರೀಕ್ಷೆ-3 ಆರಂಭ; ಎಕ್ಸಾಮ್‌ ತೆಗೆದುಕೊಳ್ಳಲಿರುವ 97,933 ವಿದ್ಯಾರ್ಥಿಗಳು

Health tips Kannada
ಆರೋಗ್ಯ1 hour ago

Health tips Kannada: ವೃತ್ತಿನಿರತ ತಾಯಂದಿರೇ, ಖಿನ್ನತೆ ಆವರಿಸಿಕೊಳ್ಳುವ ಮೊದಲೇ ಎಚ್ಚೆತ್ತುಕೊಳ್ಳಿ!

Vastu Tips
Latest2 hours ago

Vastu Tips: ಮನೆ ಖರೀದಿ ಮಾಡುವಾಗ ಈ ಸಂಗತಿಗಳನ್ನು ತಪ್ಪದೇ ಗಮನಿಸಿ

World Lung Cancer Day
ಆರೋಗ್ಯ2 hours ago

World Lung Cancer Day: ಶ್ವಾಸಕೋಶದ ಕ್ಯಾನ್ಸರ್‌ಗೆ ಪ್ರತಿವರ್ಷ 16 ಲಕ್ಷ ಮಂದಿ ಬಲಿ; ಇದರಿಂದ ಪಾರಾಗುವುದು ಹೇಗೆ?

ಮಳೆ2 hours ago

Karnataka Weather: ಇಂದು ಕೊಡಗು, ಬೆಳಗಾವಿ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

Paris Olympics 2024 Day 6
ಕ್ರೀಡೆ3 hours ago

Paris Olympics 2024 Day 6: ಇಂದಿನಿಂದ ಅಥ್ಲೆಟಿಕ್ಸ್ ಆರಂಭ; ಭಾರತದ ಕ್ರೀಡಾ ಸ್ಪರ್ಧೆಗಳ ವಿವರ ಹೀಗಿದೆ

Dina Bhavishya
ಭವಿಷ್ಯ3 hours ago

Dina Bhavishya: ವಿದೇಶ ಪ್ರವಾಸಕ್ಕೆ ಕಾಯುತ್ತಿರುವ ಈ ರಾಶಿಯವರಿಗೆ ಶುಭ ಸೂಚನೆ ಸಿಗಲಿದೆ

Kabini Dam
ಕರ್ನಾಟಕ8 hours ago

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

Shiradi Ghat
ಕರ್ನಾಟಕ8 hours ago

Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌