ʼಹಿಂದೂ ಸ್ತ್ರೀಯರನ್ನು ಕೆಣಕಿದರೆ, ನಿಮ್ಮ ಹೆಣ್ಣುಮಕ್ಕಳನ್ನು ರೇಪ್‌ ಮಾಡುತ್ತೇನೆʼ: ಉತ್ತರ ಪ್ರದೇಶದಲ್ಲಿ ಮಹಂತ ಹೇಳಿಕೆ - Vistara News

ದೇಶ

ʼಹಿಂದೂ ಸ್ತ್ರೀಯರನ್ನು ಕೆಣಕಿದರೆ, ನಿಮ್ಮ ಹೆಣ್ಣುಮಕ್ಕಳನ್ನು ರೇಪ್‌ ಮಾಡುತ್ತೇನೆʼ: ಉತ್ತರ ಪ್ರದೇಶದಲ್ಲಿ ಮಹಂತ ಹೇಳಿಕೆ

ಮಹರ್ಷಿ ಶ್ರೀ ಲಕ್ಷ್ಮಣದಾಸ್‌ ಉದಾಸೀನ್‌ ಆಶ್ರಮದ ಮಹಾಂತರಾದ ಬಜರಂಗ್‌ ಮುನಿ ದಾಸ್‌ ಅವರು ಮಹಿಳೆಯರ ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

assault
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೀತಾಪುರ: ಉತ್ತರಪ್ರದೇಶದ(Uttar Pradesh) ಖೈರಾಬಾದ್‌ನಲ್ಲಿ ಮಹರ್ಷಿ ಶ್ರೀ ಲಕ್ಷ್ಮಣ ದಾಸ ಉದಾಸಿನ್‌ ಆಶ್ರಮದ ಮಹಂತ ಭಜರಂಗ್‌ ಮುನಿ ದಾಸ್‌ ನಡೆಸಿದ ಮೆರವಣಿಗೆಯಲ್ಲಿ ಆಡಿರುವ ಮಾತು ವಿವಾದಕ್ಕೀಡಾಗಿದೆ. ʼಒಂದು ವೇಳೆ ನೀವು ಹಿಂದೂ ಹೆಣ್ಣುಮಕ್ಕಳನ್ನು ಚುಡಾಯಿಸಿದರೆ, ನಿಮ್ಮ ಮನೆಯ ಹೆಣ್ಣು ಮಕ್ಕಳನ್ನು ನಾನೇ ರೇಪ್‌ ಮಾಡುತ್ತೇನೆʼ ಎಂದು ಬಜರಂಗ್‌ ದಾಸ್‌ ಭಾಷಣದಲ್ಲಿ ತಿಳಿಸಿದ್ದಾರೆ.

ಭಜರಂಗ್‌ ಮುನಿ ದಾಸ್‌ ಖೈರಾಬಾದ್‌ನಲ್ಲಿ ಯುಗಾದಿ ಹಬ್ಬದಂದು ಮೆರವಣಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದೂ ಹೆಣ್ಣುಮಕ್ಕಳಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಈ ಮಾತನ್ನಾಡಿದ್ದಾರೆ. ಅಲ್ಲದೆ. ಒಂದು ಸಮುದಾಯದ ಹೆಣ್ಣುಮಕ್ಕಳಿಗೆ ʼrape threatʼ ನೀಡಿದ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವುದಷ್ಟೆ ಅಲ್ಲದೆ ಕಾನೂನು ಕ್ರಮಕ್ಕೂ ಕಾರಣವಾಗುತ್ತಿದೆ.

ಈ ಬಗ್ಗೆ ಸ್ಥಳೀಯ ಪೋಲಿಸರು ಕೂಡಲೇ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಕುರಿತು ಸೂಕ್ತ ಕಾರ್ಯಾಚರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌.ಐ. ರಾಜೀವ್‌ ದೀಕ್ಷಿತ್‌ ತಿಳಿಸಿದ್ದಾರೆ.

ಬಜರಂಗ್‌ ಮುನಿ ದಾಸ್‌ ಹೆಣ್ಣಿನ ಬಗ್ಗೆ ಅಸಭ್ಯವಾಗಿ ಮಾತಾನಾಡಿದ್ದು ರಾಷ್ಟ್ರೀಯ ಮಹಿಳಾ ಆಯೋಗ(National Commission for Women- NCW) ಕೆಂಗಣ್ಣಿಗೆ ಕಾರಣವಾಗಿದೆ. ʼಭಜರಂಗ್‌ ದಾಸ್‌ ಈ ರೀತಿಯ ಮಾತುಗಳನ್ನಾಡಿದ್ದು ಅಕ್ಷಮ್ಯ ಅಪರಾಧ, ಇದನ್ನು ಗಮನಿಸಿ ಯಾರೂ ಮೂಕಪ್ರೇಕ್ಷಕರಾಗಿರಬಾರದುʼ ಎಂದು ಹೇಳಿದೆ. ಹಾಗೂ ಈ ಪ್ರಕರಣದ ಕುರಿತು ಪೋಲಿಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಬಜರಂಗ್‌ ದಾಸ್‌ ಅವರಿಗೆ ಶಿಕ್ಷೆ ನೀಡುವಂತೆ NCW ಒತ್ತಾಯಿಸಿದೆ.

ಹೆಚ್ಚಿನ ಓದಿಗಾಗಿ: ಗೋರಖನಾಥ ದೇವಸ್ಥಾನ ದಾಳಿ ಪ್ರಕರಣ ವಿಚಾರಣೆಗೆ ಮುಂಬೈ ತಲುಪಿದ ಭಯೋತ್ಪಾದನಾ ನಿಗ್ರಹ ದಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

All Eyes on Raesi: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಮಾತ್ರವಲ್ಲ ಈ ಹಿಂದೆ ʼಆಲ್ ಐಸ್ ಆನ್ ರಫಾʼ ಎನ್ನುವ ಪೋಸ್ಟ್‌ ಹಂಚಿಕೊಂಡು ರಫಾ (ಪ್ಯಾಲೆಸ್ತೀನ್‌) ಜನರಿಗಾಗಿ ಕಂಬನಿ ಸುರಿಸಿದ್ದ ಸೆಲೆಬ್ರಿಟಿಗಳು ಈಗ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಸೆಲೆಬ್ರಿಟಿಗಳ ಇಬ್ಬಗೆಯ ನೀತಿಯನ್ನು ಹಲವರು ಪ್ರಶ್ನಿಸಿದ್ದಾರೆ.

VISTARANEWS.COM


on

All Eyes on Raesi
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭಯೋತ್ಪಾದಕರ ಗುಂಡಿನ ದಾಳಿಯ (Reasi terror attack) ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಜತೆಗೆ ಈ ಹಿಂದೆ ʼಆಲ್ ಐಸ್ ಆನ್ ರಫಾʼ ಎನ್ನುವ ಪೋಸ್ಟ್‌ ಹಂಚಿಕೊಂಡು ರಫಾ (ಪ್ಯಾಲೆಸ್ತೀನ್‌) ಜನರಿಗಾಗಿ ಕಂಬನಿ ಸುರಿಸಿದ್ದ ಸೆಲೆಬ್ರಿಟಿಗಳು ಈಗ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

ಇತ್ತೀಚೆಗೆ ಇಸ್ರೇಲ್‌ನ ವೈಮಾನಿಕ ದಾಳಿಯ ನಂತರ ದಕ್ಷಿಣ ಗಾಜಾದಲ್ಲಿ 45 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಬಳಿಕ ದಕ್ಷಿಣ ಗಾಜಾದ ರಫಾ ನಗರದಲ್ಲಿನ ನಿರಾಶ್ರಿತರ ಶಿಬಿರದಲ್ಲಿ ಡೇರೆಗಳ ಚಿತ್ರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದರಲ್ಲಿ ʼಆಲ್ ಐಸ್ ಆನ್ ರಫಾʼ ಎಂದು ಬರೆದು, ರಫಾ ನಿರಾಶ್ರಿತರಿಗೆ ಬೆಂಬಲ ವ್ಯಕ್ತಪಡಿಸಲಾಗಿತ್ತು. ಈ ಪೋಸ್ಟ್‌ ಅನ್ನು ಭಾರತದ ಸೆಲೆಬ್ರಿಟಿಗಳೂ ಹಂಚಿಕೊಂಡಿದ್ದರು. ಪ್ರಿಯಾಂಕಾ ಚೋಪ್ರಾ, ವರುಣ್ ಧವನ್, ಆಲಿಯಾ ಭಟ್, ಸಮಂತಾ ರುತ್ ಪ್ರಭು, ತ್ರಿಪ್ತಿ ಡಿಮ್ರಿ, ರಿಚಾ ಚಡ್ಡಾ, ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಮುಂತಾದ ಸೆಲೆಬ್ರಿಟಿಗಳು ʼಆಲ್ ಐಸ್ ಆನ್ ರಫಾʼ ಪೋಸ್ಟ್‌ ಹಂಚಿಕೊಂಡು ಕಂಬನಿ ಮಿಡಿದಿದ್ದರು. ಸದ್ಯ ಇವರೆಲ್ಲ ಭಾರತದಲ್ಲೇ ನಡೆದ ದುರಂತದ ಬಗ್ಗೆ ಮೌನ ವಹಿಸಿದ್ದು ನೆಟ್ಟಿಗರನ್ನು ಕೆರಳಿಸಿದೆ. ʼಆಲ್ ಐಸ್ ಆನ್ ರಿಯಾಸಿʼ ಎನ್ನುವ ಪೋಸ್ಟ್‌ ಈ ಸೆಲೆಬ್ರಿಟಿಗಳ ಸೋಷಿಯಲ್‌ ಮೀಡಿಯಾದಲ್ಲಿ ಯಾಕೆ ಕಾಣಿಸಿಕೊಂಡಿಲ್ಲ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಹಿಂದೂಗಳಿಗೆ ಯಾಕೆ ಮನಸ್ಸು ಮಿಡಿಯುತ್ತಿಲ್ಲ?

ʼʼದೂರದ ಪ್ಯಾಲೆಸ್ತೀನಿಯರಿಗಾಗಿ ಮಿಡಿದ ಸೆಲೆಬ್ರಿಟಿಗಳ ಮನಸ್ಸು ನಮ್ಮದೇ ದೇಶದ ಮುಗ್ಧರಿಗಾಗಿ ಯಾಕೆ ಮಿಡಿಯುತ್ತಿಲ್ಲ? ಭಯೋತ್ಪಾದನೆಗಾಗಿ ಬಲಿಯಾದ ಹಿಂದೂಗಳ ಬೆಂಬಲಕ್ಕೆ ಧಾವಿಸಲು ಸೆಲೆಬ್ರಿಟಿಗಳು ಮುಂದಾಗದಿರುವುದು ದುರಂತʼʼ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವರು ಸೋಷಿಯಲ್‌ ಮೀಡಿಯಾದ ಮೂಲಕ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ʼʼಎಲ್ಲರ ಕಣ್ಣು ರಫಾ ಮೇಲೆ ಎನ್ನುತ್ತಿದ್ದವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆʼʼ ಎಂದು ಒಬ್ಬರು ರಿಯಾಸಿ ದುರಂತದ ಫೋಟೊವನ್ನು ಪೋಸ್ಟ್‌ ಮಾಡಿ ಸಿನಿಮಾ ನಟ-ನಟಿಯರಿಗೆ ಝಾಡಿಸಿದ್ದಾರೆ.

ʼʼಕೆಲವು ದಿನಗಳ ಹಿಂದೆ ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಅವರ ಕಣ್ಣು ರಫಾದತ್ತ ನೆಟ್ಟಿತ್ತು. ಈಗ ಅವರ ಕಣ್ಣು ಮುಚ್ಚಿದೆ. ಅವರಿಗೆ ಮುಸ್ಲಿಂ ಭಯೋತ್ಪಾದಕರು ಹಿಂದೂ ಯಾತ್ರಾರ್ಥಿಗಳನ್ನು ಹತ್ಯೆ ಮಾಡಿರುವುದು ಕಾಣಿಸುತ್ತಿಲ್ಲʼʼ ಎಂದು ಇನ್ನೊಬ್ಬರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಜತೆಗೆ ರೋಹಿತ್‌ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್, ಮಾಧುರಿ ದೀಕ್ಷಿತ್‌ ಮುಂತಾದವರ ಮೌನವನ್ನೂ ಟೀಕಿಸಿದ್ದಾರೆ. ಒಟ್ಟಿನಲ್ಲಿ ಸೆಲೆಬ್ರಿಟಿಗಳ ಇಬ್ಬಗೆಯ ನೀತಿ ಮತ್ತೊಮ್ಮೆ ಬಟಾ ಬಯಲಾಗಿದೆ.

ಇದನ್ನೂ ಓದಿ: Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

Continue Reading

ಪ್ರಮುಖ ಸುದ್ದಿ

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

Amol Kale: ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ಅಧ್ಯಕ್ಷ ಅಮೋಲ್‌ ಕಾಳೆ ಅವರು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ್ದರು. ಎಂಸಿಎ ಕಾರ್ಯದರ್ಶಿ ಅಜಿಂಕ್ಯ ರಹಾನೆ ಸೇರಿ ಹಲವರ ಜತೆ ತೆರಳಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಂದ್ಯ ಮುಗಿದ ಬಳಿಕ ಕ್ರೀಡಾಂಗಣದಿಂದ ತೆರಳುವಾಗ ಅವರಿಗೆ ಹೃದಯ ಸ್ತಂಭನ ಉಂಟಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Amol Kale
Koo

ವಾಷಿಂಗ್ಟನ್:‌ ಅಮೆರಿಕದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ (T20 World Cup 2024)​ ಟೂರ್ನಿಯ ಭಾರತ ಹಾಗೂ ಪಾಕಿಸ್ತಾನ (India vs Pakistan Match) ನಡುವಿನ ರೋಚಕ ಪಂದ್ಯವನ್ನು ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ (MCA) ಅಧ್ಯಕ್ಷ ಅಮೋಲ್‌ ಕಾಳೆ (Amol Kale) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ನಡೆದ ಭಾನುವಾರವೇ (ಜೂನ್‌ 9) ಅಮೋಲ್‌ ಕಾಳೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ರೋಚಕ ಪಂದ್ಯವನ್ನು ವೀಕ್ಷಿಸಲು ಅಮೋಲ್‌ ಕಾಳೆ ಅವರು ನ್ಯೂಯಾರ್ಕ್‌ಗೆ ತೆರಳಿದ್ದರು. ಪಂದ್ಯ ವೀಕ್ಷಿಸಿದ ಬಳಿಕ ಅವರು ಸಹೋದ್ಯೋಗಿಗಳೊಂದಿಗೆ ಕ್ರೀಡಾಂಗಣದಿಂದ ವಾಪಸಾಗುವಾಗ ಹೃದಯ ಸ್ತಂಭನದಿಂದ (Cardiac Arrest) ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೋಲ್‌ ಕಾಳೆ ಅವರ ನಿಧನವನ್ನು ಮಹಾರಾಷ್ಟ್ರ ಪ್ರತಿಪಕ್ಷದ ಉಪ ನಾಯಕ ಜಿತೇಂದ್ರ ಅಹ್ವಾದ್‌ ಅವರು ಖಚಿತಪಡಿಸಿದ್ದಾರೆ. “ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ಅವರು ಉತ್ತಮ ಸಂಘಟಕರಾಗಿದ್ದರು. ಅವರ ಅಗಲಿಕೆಯಿಂದ ನನಗೆ ವೈಯಕ್ತಿಕ ನಷ್ಟವಾಗಿದೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಮೋಲ್‌ ಕಾಳೆ ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ.

47 ವರ್ಷದ ಅಮೋಲ್‌ ಕಾಳೆ ಅವರು 2022ರ ಅಕ್ಟೋಬರ್‌ನಿಂದಲೂ ಎಂಸಿಎ ಅಧ್ಯಕ್ಷರಾಗಿದ್ದರು. 2022ರ ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಕಾಳೆ ಅವರು ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಸಂದೀಪ್‌ ಪಾಟೀಲ್‌ ಅವರನ್ನು ಸೋಲಿಸಿದ್ದರು. ನಾಗ್ಪುರ ಮೂಲದವರಾದ ಅಮೋಲ್‌ ಕಾಳೆ ಅವರು ಉದ್ಯಮಿಯೂ ಆಗಿದ್ದಾರೆ. ಇವರು ಜೆ ಕೆ ಸೊಲ್ಯೂಷನ್ಸ್‌ ಪ್ರೈವೇಟ್‌ ಲಿಮಿಟೆಡ್‌ ಹಾಗೂ ಅರ್ಪಿತಾ ಎಂಟರ್‌ಪ್ರೈಸಸ್‌ನ ಸಂಸ್ಥಾಪಕರೂ ಆಗಿದ್ದಾರೆ.

ಭಾರತ ಹಾಗೂ ಪಾಕಿಸ್ತಾನದ ಪಂದ್ಯವು ಕಡಿಮೆ ಸ್ಕೋರಿಂಗ್ ಥ್ರಿಲ್ಲರ್ ಆಗಿತ್ತು. 2 ನೇ ಇನ್ನಿಂಗ್ಸ್ ನ ಅಂತಿಮ ಎಸೆತದವರೆಗೂ ಸಂಪೂರ್ಣವಾಗಿ ಸಾಗಿತು. ಪಾಕಿಸ್ತಾನಕ್ಕೆ 120 ಎಸೆತಗಳಲ್ಲಿ ಕೇವಲ 120 ರನ್​ಗಳ ಅಗತ್ಯವಿತ್ತು. ಈ ಸಮೀಕರಣ ಬರೆಯಲು ಸರಳವಾಗಿ ಕಂಡರೂ, ಅನುಷ್ಠಾನವು ಅತ್ಯಂತ ಕಳಪೆಯಾಗಿತ್ತು. ಕೊನೆಯಲ್ಲಿ ಗ್ರೀನ್ ಆರ್ಮಿ 6 ರನ್​ಗಳಿಂದ ಸೋತಿತು.

ಸದ್ಯ ‘ಎ’ ಗುಂಪಿನಲ್ಲಿ ಭಾರತ ಮತ್ತು ಆತಿಥೇಯ ಅಮೆರಿಕ ಆಡಿದ ಎರಡೂ ಪಂದ್ಯಗಳನ್ನು ಗೆದ್ದು ತಲಾ 4 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡಿದೆ. ಒಂದು ಪಂದ್ಯ ಗೆದ್ದ ಕೆನಾಡ ಮೂರನೇ ಸ್ಥಾನದಲ್ಲಿದೆ. ಗೆಲುವೇ ಕಾಣದ ಪಾಕಿಸ್ತಾನ 4ನೇ ಸ್ಥಾನಿಯಾಗಿದೆ. ಪಾಕ್​ ಮುಂದಿನ ಪಂದ್ಯದಲ್ಲಿ ಐರ್ಲೆಂಡ್​ ಮತ್ತು ಕೆನಡಾ ವಿರುದ್ಧ ಆಡಲಿದೆ. ಒಂದು ಗುಂಪಿನಿಂದ ಎರಡು ತಂಡಗಳು ಮಾತ್ರ ಸೂಪರ್ 8ಗೆ ಪ್ರವೇಶ ಪಡೆಯಲಿದೆ.

ಇದನ್ನೂ ಓದಿ: T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

Continue Reading

Lok Sabha Election 2024

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Narendra Modi: ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಮರಳಿ ಬಂದಿದ್ದು, ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಕೂಡಲೇ ಸೋಮವಾರ ಅವರು ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ ಮತ್ತು ಎಚ್‌.ಡಿ.ದೇವೇಗೌಡ ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

VISTARANEWS.COM


on

Narenda Modi
Koo

ನವದೆಹಲಿ: ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಕೂಡಲೇ ಅವರು ಸೋಮವಾರ (ಜೂನ್‌ 10) ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ (Pratibha Patil) ಮತ್ತು ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್‌ ಸಿಂಗ್‌ (Manmohan Singh) ಮತ್ತು ಎಚ್‌.ಡಿ.ದೇವೇಗೌಡ (HD Devegowda) ಅವರಿಗೆ ಕರೆ ಮಾಡಿ ಆಶೀರ್ವಾದ ಪಡೆದುಕೊಂಡರು.

ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು 30 ಕ್ಯಾಬಿನೆಟ್ ದರ್ಜೆಯ ಸಚಿವರು ಸೇರಿದಂತೆ ಇತರ 71 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರತಿಭಾ ಪಾಟೀಲ್‌ ಮತ್ತು ಮನಮೋಹನ್‌ ಸಿಂಗ್ ಇಬ್ಬರೂ ಯುಪಿಎ ಸರ್ಕಾರದ ಅವಧಿಯಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ದೇವೇಗೌಡ ಅವರು ಪ್ರಧಾನಿಯಾಗಿದ್ದರು.

ಸದ್ಯ ಬಿಜೆಪಿ ನೇತೃತ್ವದ ಎನ್‌ಡಿಎಗೆ ದೇವೇಗೌಡ ಅವರ ಜೆಡಿಎಸ್‌ ಬೆಂಬಲ ನೀಡಿದೆ. ಕರ್ನಾಟಕದಲ್ಲಿ ಮೂರು ಕಡೆ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿಗಳ ಪೈಕಿ ಇಬ್ಬರು ಜಯ ಗಳಿಸಿದ್ದಾರೆ. ಈ ಪೈಕಿ ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮೋದಿ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)ಯ ಸಚಿವರಾಗಿ ಅವರು ನಿಯುಕ್ತಿಗೊಂಡಿದ್ದಾರೆ.

ರಾಜ್ಯಕ್ಕೆ 5 ಸಚಿವ ಸ್ಥಾನ

ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ. ಕರ್ನಾಟಕದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತೆ ಹಣಕಾಸು ಖಾತೆ ನೀಡಲಾಗಿದ್ದು, ಕಳೆದ ಬಾರಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಪ್ರಲ್ಹಾದ್‌ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ ಖಾತೆ ನೀಡಲಾಗಿದೆ. ಇನ್ನು ಮಂಡ್ಯ ಸಂಸದ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಿಕ್ಕಿದೆ. ಕಳೆದ ಬಾರಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದ ಬೆಂ.ಉತ್ತರ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ, ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಸೋಮವಾರ (ಜೂನ್‌ 10) ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

Continue Reading

ದೇಶ

Rashtrapati Bhavan: ಮೋದಿ ಪ್ರಮಾಣ ವಚನ ಸಮಾರಂಭದ ವೇಳೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಪೊಲೀಸರ ಸ್ಪಷ್ಟನೆ

Rashtrapati Bhavan: ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ಚಿರತೆಯೊಂದು ಕಾಣಿಸಿಕೊಂಡಿತ್ತು ಎನ್ನುವ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ಅನೇಕರು ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ದೆಹಲಿ ಪೊಲೀಸರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅವರೇನು ಹೇಳಿದ್ದಾರೆ? ನಿಜವಾಗಿಯೂ ಅಲ್ಲಿ ಚಿರತೆ ಓಡಾಡಿತ್ತೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Rashtrapati Bhavan
Koo

ನವದೆಹಲಿ: ಎನ್‌ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಹಿತ ಸಚಿವರು ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನ (Rashtrapati Bhavan)ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಈ ಪ್ರಮಾಣ ವಚನ ಸಮಾರಂಭದ ತುಣುಕೊಂದು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಾರ್ಯಕ್ರಮ ನಡೆಯುತ್ತಿರುವಾಗ ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿಯೊಂದು ಅಡ್ಡಾಡುತ್ತಿರುವುದು ಕಂಡು ಬಂದಿರುವುದೇ ಇದಕ್ಕೆ ಪ್ರಮುಖ ಕಾರಣ. ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಅದನ್ನು ಚಿರತೆ ಎಂದು ಕರೆದಿದ್ದರು. ಈ ಮೂಲಕ ವ್ಯಾಪಕ ಚರ್ಚೆ ನಡೆದಿತ್ತು. ಇದೀಗ ದೆಹಲಿ ಪೊಲೀಸರು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಕೇವಲ ಬೆಕ್ಕು ಮತ್ತು ಯಾವುದೇ ಚಿರತೆ ಅಲ್ಲ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ (Viral News).

ಬಿಜೆಪಿಯ ದುರ್ಗಾ ದಾಸ್ ಉಯಿಕೆ ಅವರು ಕೇಂದ್ರ ಸಚಿವರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ, ವೇದಿಕೆಯ ಹಿನ್ನೆಲೆಯಲ್ಲಿ ಪ್ರಾಣಿಯೊಂದು ಓಡಾಡಿತ್ತು. ಹೆಚ್ಚಿನವರು ಇದನ್ನು ಆಗ ಗಮನಿಸಿರಲಿಲ್ಲ. ಬಳಿಕ ಇದನ್ನು ವಿಡಿಯೊದಲ್ಲಿ ಗುರುತಿಸಿದ ನೆಟ್ಟಿಗರು ಇದನ್ನು ಚಿರತೆ ಎಂದು ಕರೆದಿದ್ದರು. ಹೀಗಾಗಿ ಈ ಬಗ್ಗೆ ದೇಶಾದ್ಯಂತ ವ್ಯಾಪಕ ಚರ್ಚೆ ನಡೆದಿತ್ತು.

ಭಾರತದ ಪ್ರಧಾನ ಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸಹಜವಾಗಿ ಬಿಗಿ ಭದ್ರತೆಯ ಕಾರ್ಯಕ್ರಮವಾಗಿದ್ದು, ರಾಷ್ಟ್ರದ ಮುಖಂಡರು, ರಾಜಕೀಯ ನಾಯಕರು, ಉದ್ಯಮಿಗಳು, ಪ್ರಮುಖ ಚಲನಚಿತ್ರ ನಟರು ಸಾಕ್ಷಿಗಳಾಗಿದ್ದರು. ಇಷ್ಟೆಲ್ಲ ಭದ್ರತೆ ನಡುವೆಯೂ ಚಿರತೆ ಕಾಣಿಸಿಕೊಂಡಿದೆ ಎಂಬ ವಿಚಾರವೇ ಅನೇಕರಲ್ಲಿ ಭಯ ಹುಟ್ಟಿಸಿತ್ತು.

ಪೊಲೀಸರ ಸ್ಪಷ್ಟನೆ

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ದೆಹಲಿ ಪೊಲೀಸರು, ʼʼರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರದ ವೇಳೆ ಸೆರೆಯಾದ ಪ್ರಾಣಿಯ ಚಿತ್ರವನ್ನು ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು ಚಿರತೆ ಎಂದು ಕರೆದಿವೆ. ಆದರೆ ಇದು ನಿಜವಲ್ಲ. ಕ್ಯಾಮೆರಾದಲ್ಲಿ ಸೆರೆಯಾದ ಪ್ರಾಣಿ ಸಾಮಾನ್ಯ ಮನೆಯ ಬೆಕ್ಕು. ದಯವಿಟ್ಟು ಇಂತಹ ಕ್ಷುಲ್ಲಕ ವದಂತಿಗಳಿಗೆ ಕಿವಿಗೋಡಬೇಡಿ” ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಕವಿದಿದ್ದ ಆತಂಕದ ಕಾರ್ಮೋಡವನ್ನು ನಿವಾರಿಸಿದ್ದಾರೆ.

ಇದನ್ನೂ ಓದಿ: PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

ನೆಟ್ಟಿಗರ ಚರ್ಚೆ

ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನುವಾಗಲೇ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದ್ದವು. ಅನೇಕರು ಇದನ್ನು ನಂಬಿರಲಿಲ್ಲ. ಇನ್ನು ಕೆಲವರು, ವಿಸ್ತಾರವಾದ ರಾಜಪಥ ಹಾಗೂ ರಾಷ್ಟ್ರಪತಿ ಭವನದ ಆವರಣದಲ್ಲಿ ಚಿರತೆ ಬಂದು ಹುದುಗಿಕೊಂಡಿರುವ ಸಾಧ್ಯತೆಯನ್ನು ಅಲ್ಲಗೆಳೆಯಲಾಗುವುದಿಲ್ಲ. ʼಅಮೃತ್ ಉದ್ಯಾನ್ʼ ಎಂದು ಕರೆಯಲಾಗುವ ಉದ್ಯಾನ 15 ಎಕರೆಗಳಷ್ಟು ಹರಡಿದ್ದು, ಹಲವು ಕಡೆ ದಟ್ಟವಾದ ಕಾಡು ಇದೆ. ಈಸ್ಟ್ ಲಾನ್, ಸೆಂಟ್ರಲ್ ಲಾನ್, ಲಾಂಗ್ ಗಾರ್ಡನ್ ಮತ್ತು ಸರ್ಕ್ಯುಲರ್ ಗಾರ್ಡನ್ ಇದರ ಮೂಲ ಆಕರ್ಷಣೆಗಳಾಗಿವೆ. ಹರ್ಬಲ್ ಗಾರ್ಡನ್, ಟ್ಯಾಕ್ಟೈಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್ ಮತ್ತು ಆರೋಗ್ಯ ವನಗಳು ಇಲ್ಲಿವೆ. ಹೀಗಾಗಿ ಇಲ್ಲಿಂದ ಚಿರತೆ ಕಣ್ತಪ್ಪಿಸಿ ಬಂದಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದರು. ಸದ್ಯ ಗೊಂದಲ ನಿವಾರಣೆಯಾಗಿದೆ.

Continue Reading
Advertisement
Champions Trophy 2025
ಕ್ರಿಕೆಟ್4 mins ago

Champions Trophy 2025: ಲಾಹೋರ್​ನಲ್ಲಿ ಭಾರತದ ಪಂದ್ಯ ಆಯೋಜನೆಗೆ ಸಿದ್ಧತೆ ಆರಂಭಿಸಿದ ಪಾಕ್​ ಕ್ರಿಕೆಟ್​ ಮಂಡಳಿ

Drowned in water
ದಕ್ಷಿಣ ಕನ್ನಡ15 mins ago

Drowned in water : ಅಪ್ಪಳಿಸಿ ಬಂದ ರಕ್ಕಸ ಅಲೆಗೆ ಕೊಚ್ಚಿ ಹೋದ ಮಹಿಳೆ ಸಾವು; ಮೂವರ ರಕ್ಷಣೆ

Actor Darshan
ಕರ್ನಾಟಕ15 mins ago

Actor Darshan: ಕಳೆದ ವರ್ಷ ಮದುವೆಯಾಗಿದ್ದ ರೇಣುಕಾಸ್ವಾಮಿ ಪತ್ನಿ ಗರ್ಭಿಣಿ; ಸಾವಿನ ವಿಚಾರ ಆಕೆಗೆ ಗೊತ್ತೇ ಇಲ್ಲ!

Actor Darshan
ಕರ್ನಾಟಕ21 mins ago

Actor Darshan: ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್‌; ಪೊಲೀಸರು ಹೇಳಿದ್ದೇನು?

Pavithra Gowda
ಕರ್ನಾಟಕ37 mins ago

Pavithra Gowda: ಕೊಲೆ ಕೇಸ್;‌ ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

black magic
ದಕ್ಷಿಣ ಕನ್ನಡ47 mins ago

Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

Kamran Akmal
ಕ್ರಿಕೆಟ್54 mins ago

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Actor Darshan
ಕರ್ನಾಟಕ59 mins ago

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Saptami Gowda
ಸಿನಿಮಾ1 hour ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Actor Darshan
ಸಿನಿಮಾ1 hour ago

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Saptami Gowda
ಸಿನಿಮಾ1 hour ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಟ್ರೆಂಡಿಂಗ್‌