ರಾಜ್ಯಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್‌ಗೆ ಎರಡು ರಾಜ್ಯಗಳಲ್ಲಿ ತಲಾ ನಾಲ್ಕು ಸ್ಥಾನ, ಹರಿಯಾಣ, ಮಹಾರಾಷ್ಟ್ರ ಫಲಿತಾಂಶ ವಿಳಂಬ - Vistara News

ದೇಶ

ರಾಜ್ಯಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್‌ಗೆ ಎರಡು ರಾಜ್ಯಗಳಲ್ಲಿ ತಲಾ ನಾಲ್ಕು ಸ್ಥಾನ, ಹರಿಯಾಣ, ಮಹಾರಾಷ್ಟ್ರ ಫಲಿತಾಂಶ ವಿಳಂಬ

ಕರ್ನಾಟಕ ಮತ್ತು ರಾಜಸ್ಥಾನದ ಎಂಟು ರಾಜ್ಯಸಭೆ ಸ್ಥಾನಗಳಲ್ಲಿ ತಲಾ ನಾಲ್ಕನ್ನು ಬಿಜೆಪಿ ಹಾಗೂ ಕಾಂಗ್ರೆಸ್‌ ಗೆದ್ದಿವೆ. ಮಹಾರಾಷ್ಟ್ರ- ಹರಿಯಾಣ ಫಲಿತಾಂಶ ವಿಳಂಬವಾಗುತ್ತಿದೆ.

VISTARANEWS.COM


on

rajya sabha election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಜಸ್ಥಾನ ಹಾಗೂ ಕರ್ನಾಟಕ ರಾಜ್ಯಗಳಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ತಲಾ ನಾಲ್ಕು ಸ್ಥಾನಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡಿವೆ. ಹರಿಯಾಣ ಹಾಗೂ ಮಹಾರಾಷ್ಟ್ರದಲ್ಲಿ ಮತದಾನದ ವೇಳೆ ಶಾಸಕರು ನಿಯಮಾವಳಿ ಉಲ್ಲಂಘಿಸಿದ ಕಾರಣ, ಫಲಿತಾಂಶ ವಿಳಂಬವಾಗುತ್ತಿದೆ.

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಮೂರರಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಲೆಹರ್‌ ಸಿಂಗ್‌ ಸಿರೋಯಾ ಗೆದ್ದಿದ್ದಾರೆ. ಕಾಂಗ್ರೆಸ್‌ನಿಂದ ಜೈರಾಮ್‌ ರಮೇಶ್‌ ಆರಿಸಿ ಬಂದಿದ್ದಾರೆ.

ರಾಜಸ್ಥಾನದ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಶುಕ್ರವಾರ ಆಡಳಿತಾರೂಢ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳಾದ ರಣದೀಪ್ ಸುರ್ಜೆವಾಲಾ, ಮುಕುಲ್ ವಾಸ್ನಿಕ್ ಮತ್ತು ಪ್ರಮೋದ್ ತಿವಾರಿ, ಬಿಜೆಪಿ ಅಭ್ಯರ್ಥಿ ಘನಶ್ಯಾಮ್ ತಿವಾರಿ ಗೆದ್ದಿದ್ದಾರೆ. ಆದರೆ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ, ಮಾಧ್ಯಮ ದೊರೆ ಸುಭಾಷ್ ಚಂದ್ರ ಅವರು ಸೋತಿದ್ದಾರೆ.

ಮಹಾರಾಷ್ಟ್ರ, ಹರಿಯಾಣ ವಿಳಂಬ

ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಮತದಾನದ ವೇಳೆ ಶಾಸಕರು ನಿಯಮ ಉಲ್ಲಂಘಿಸಿದ ಕಾರಣ, ಈ ಮತಗಳನ್ನು ರದ್ದುಗೊಳಿಸಬೇಕು ಎಂದು ಬಿಜೆಪಿ ಪಟ್ಟುಹಿಡಿದಿದೆ. ಮಹಾರಾಷ್ಟ್ರದಲ್ಲಿ ಆಡಳಿತ ಒಕ್ಕೂಟ MVAಯ ಮೂವರು ಶಾಸಕರು ಮತ್ತು ಹರಿಯಾಣದಲ್ಲಿ ವಿರೋಧ ಪಕ್ಷ ಕಾಂಗ್ರೆಸ್‌ನ ಇಬ್ಬರು ಶಾಸಕರು ಬಹಿರಂಗವಾಗಿ ಮತಪತ್ರಗಳನ್ನು ಪ್ರದರ್ಶಿಸಿ ನಿಯಮಾವಳಿ ಉಲ್ಲಂಘಿಸಿದ್ದರು. ಈ ಮತಗಳನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗವನ್ನು ಬಿಜೆಪಿ ಒತ್ತಾಯಿಸಿದೆ. ಈ ಕಾರಣದಿಂದ ಈ ರಾಜ್ಯಗಳ ಫಲಿತಾಂಶ ವಿಳಂಬವಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

PM Narendra Modi: ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

VISTARANEWS.COM


on

PM Narendra Modi
Koo

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ(PM Narendra Modi) ತಮ್ಮ ಚುನಾವಣಾ ಪ್ರಚಾರ(Lok Sabha Elction 2024)ದ ವೇಳೆ, ರ್ಯಾಲಿಗಳಲ್ಲಿ ಅದೆಷ್ಟು ಅಬ್ಬರದ ಭಾಷಣದಲ್ಲಿ ತೊಡಗಿದ್ದರೂ ಎದುರಿಗೆ ನೆರೆದಿರುವ ಜನರ ಮೇಲೆ ಪ್ರತ್ಯೇಕ ಗಮನ ಇದ್ದೇ ಇರುತ್ತದೆ. ಕೆಲವೊಮ್ಮೆ ಸಭಿಕರ ನಡುವೆ ಏನಾದರೂ ವಿಚಾರಗಳು ಕಂಡು ಬಂದಲ್ಲಿ ತಕ್ಷಣ ಅಲ್ಲೇ ಅದಕ್ಕೆ ಪ್ರತಿಕ್ರಿಯಿಸಿ ಗಮನ ಸೆಳೆದದ್ದೂ ಇದೆ. ಇದೀಗ ಮತ್ತೆ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಕೃಪಾ ಶಂಕರ್‌ ಸಿಂಗ್‌ ಮತ್ತು ಬಿಪಿ ಸರೋಜ್‌ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಸಿಎಂ ಯೋಗಿ ಅವರ ಸಹಕಾರದೊಂದಿಗೆ ಇದೀ ಪೂರ್ವಾಂಚಲ ಪ್ರದೇಶದಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಈ ವೇಳೆ ಅವರು ಸಭೆಯ ನಡುವೆ ವಿಶೇಷ ಉಡುಗೆ ತೊಡುಗೆಯಲ್ಲಿ ಮಿಂಚುತ್ತಿದ್ದ ಇಬ್ಬರು ಬಾಲಕರನ್ನು ಗಮನಿಸಿ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದ ಮೋದಿ, “ನೀವು ಸಮಾಜವಾದಿ ಪಾರ್ಟಿಯ ʼಗೂಂಡಾರಾಜ್’ನ ಹಳೆಯ ದಿನಗಳನ್ನು ನೋಡಿದ್ದೀರಿ. ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಇದ್ದ ಗ್ಯಾಂಗ್‌ಗಳು, ಗಲಭೆಕೋರರು, ಮಾಫಿಯಾಗಳು, ಅಪಹರಣಕಾರರು ಮತ್ತು ಸುಲಿಗೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ” ಎಂದಿದ್ದಾರೆ.

“ಹತ್ತು ವರ್ಷಗಳ ಹಿಂದೆ ಇಲ್ಲಿ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನು ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಅಂತಹ ದುಷ್ಟರಿಗೆ ಸಹಕಾರ ನೀಡುತ್ತಿದ್ದವು” ಎಂದರು ಮೋದಿ.

“ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಆ ಪಕ್ಷಗಳು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು, ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು” ಎಂದರು ನುಡಿದರು.

ಇದನ್ನೂ ಓದಿ:Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

“ಸಿಎಎ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವ ನೀಡುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಇವರು ದೇಶದಲ್ಲಿ ನಿರಾಶ್ರಿತರಾಗಿ ದೀರ್ಘಕಾಲ ವಾಸಿಸಿದ್ದಾರೆ. ಇವರು ಧರ್ಮದ ಆಧಾರದ ಮೇಲೆ ಮಾಡಿದ ದೇಶ ವಿಭಜನೆಗೆ ಬಲಿಯಾದವರು. ಆದರೆ ವಿರೋಧ ಪಕ್ಷಗಳಾದ ಎಸ್‌ಪಿ ಮತ್ತು ಕಾಂಗ್ರೆಸ್ ಕಾನೂನಿನ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವ ಮೂಲಕ ಗಲಭೆಗಳನ್ನು ಪ್ರಚೋದಿಸುತ್ತಿವೆ. ಈ ನಿರಾಶ್ರಿತರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. ಅವರು ಉತ್ತರ ಪ್ರದೇಶ ಮತ್ತು ಇಡೀ ದೇಶದಲ್ಲಿ ಗಲಭೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು” ಎಂದು ಮೋದಿ ಆರೋಪಿಸಿದರು.

Continue Reading

ದೇಶ

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Sita Temple: ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ಬಿಜೆಪಿಯು ಹೆದರುವುದಿಲ್ಲ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನಿಗಾಗಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲಾಗಿದೆ. ಇನ್ನು, ಸೀತೆಯ ಜನ್ಮಸ್ಥಳದಲ್ಲಿ ಸೀತೆಗಾಗಿ ಮಂದಿರ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಇದನ್ನು ಮೋದಿ ಸಾಕಾರಗೊಳಿಸಲಿದ್ದಾರೆ ಎಂದು ಅಮಿತ್‌ ಶಾ ಹೇಳಿದ್ದಾರೆ.

VISTARANEWS.COM


on

Sita Temple
Koo

ಪಟನಾ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ (Ram Mandir) ನಿರ್ಮಾಣ ಮಾಡಲಾಗಿದ್ದು, ಕಳೆದ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಾರ್ಪಣೆ ಮಾಡಿದ್ದಾರೆ. ಕೋಟ್ಯಂತರ ಜನ ರಾಮಮಂದಿರಕ್ಕೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ಇದರ ಬೆನ್ನಲ್ಲೇ, “ಬಿಹಾರದ ಸೀತಾಮಡಿಯಲ್ಲಿ (Sitamarhi) ಬಿಜೆಪಿಯು ಸೀತೆಗಾಗಿ ಮಂದಿರ (Sita Temple) ನಿರ್ಮಿಸಲಾಗುವುದು” ಎಂದು ಕೇಂದ್ರ ಸಚಿವ ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

“ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ಬಿಜೆಪಿಯು ಹೆದರುವುದಿಲ್ಲ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನಿಗಾಗಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲಾಗಿದೆ. ಇನ್ನು, ಸೀತೆಯ ಜನ್ಮಸ್ಥಳದಲ್ಲಿ ಸೀತೆಗಾಗಿ ಮಂದಿರ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ರಾಮಮಂದಿರ ನಿರ್ಮಾಣ ಮಾಡಲು ಅಧಿಕಾರದಲ್ಲಿದ್ದವರು ದೂರದಲ್ಲೇ ಉಳಿದರು. ಆದರೆ, ಮೋದಿ ಅವರ ಕಾಲದಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಯಿತು. ಈಗ ಸೀತೆಗಾಗಿ ಯಾರಾದರೂ ರಾಮಮಂದಿರ ನಿರ್ಮಾಣ ಮಾಡಿದರೆ, ಅದು ನರೇಂದ್ರ ಮೋದಿ ಅವರು ಮಾತ್ರ” ಎಂದು ಬಿಹಾರದ ಸೀತಾಮಡಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಅಮಿತ್ ಶಾ ಹೇಳಿದ್ದಾರೆ.

ಸಮಾವೇಶದಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಜೆಡಿ ವಿರುದ್ಧ ಅಮಿತ್‌ ಶಾ ವಾಗ್ದಾಳಿ ನಡೆಸಿದರು. “ಲಾಲು ಪ್ರಸಾದ್ ಯಾದವ್‌ ಅವರು ಪವರ್‌ ಪಾಲಿಟಿಕ್ಸ್‌ನಿಂದಾಗಿ ಕಾಂಗ್ರೆಸ್‌ ಜತೆ ಸಂಖ್ಯ ಬೆಳೆಸಿದರು. ಲಾಲು ಪ್ರಸಾದ್‌ ಯಾದವ್‌ ಅವರು ತಮ್ಮ ಪುತ್ರನನ್ನು ಸಿಎಂ ಮಾಡಬೇಕು ಎಂಬ ಏಕಮಾತ್ರ ಉದ್ದೇಶದಿಂದ ಅವರು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡರು” ಎಂದು ಟೀಕಿಸಿದರು.

ಹಿಂದು ಗ್ರಂಥಗಳ ಪ್ರಕಾರ, ರಾಜ ಜನಕನು ಸೀತಾಮಡಿಯ ಜಮೀನೊಂದರಲ್ಲಿ ಉಳುಮೆ ಮಾಡುವಾಗ ಮಡಿಕೆಯೊಂದರಿಂದ ಭಗವಾನ್‌ ರಾಮನ ಪತ್ನಿ ಸೀತೆ ಉದ್ಭವಿಸಿದರು ಎಂದು ಹೇಳಲಾಗುತ್ತಿದೆ. ಹಾಗಾಗಿ, ಸೀತಾಮಡಿಯನ್ನು ಪವಿತ್ರ ಸ್ಥಾನ ಎಂದೇ ಹೇಳಲಾಗುತ್ತಿದೆ. ಸೀತಾಮಡಿಯು ಲೋಕಸಭೆ ಕ್ಷೇತ್ರವೂ ಆಗಿದೆ.

ಕೆಲ ದಿನಗಳ ಹಿಂದಷ್ಟೇ ರಾಮಮಂದಿರ ಕುರಿತು ನರೇಂದ್ರ ಮೋದಿ ಮಾತನಾಡಿದ್ದರು. “ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂಬುದಾಗಿ ಮನವಿ ಮಾಡಿದ್ದರು.

ಇದನ್ನೂ ಓದಿ: PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Continue Reading

ದೇಶ

Hoarding Collapse: 16 ಜನರ ಸಾವಿಗೆ ಕಾರಣವಾದ ಯಮಸ್ವರೂಪಿ ಹೋರ್ಡಿಂಗ್‌ ಕುಸಿತದ ವಿಡಿಯೊ ಇಲ್ಲಿದೆ!

Hoarding Collapse: ಮುಂಬೈ ಮಹಾ ನಗರಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಜಾಹೀರಾತು ಫಲಕ ಹಾಕಲಾಗಿದೆ ಎಂದು ಬಿಎಂಸಿ ಹೇಳಿದೆ. ಮುಂಬೈ ಪೊಲೀಸರು ಐಪಿಸಿ 304, 338, 337, ಮತ್ತು 34ರ ಅಡಿಯಲ್ಲಿ ಮಾಲೀಕ ಭವೇಶ್ ಭಿಡೆ ಮತ್ತು ಇತರರ ವಿರುದ್ಧ ಪಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಹೋರ್ಡಿಂಗ್‌ ಕುಸಿತದ ವಿಡಿಯೊ ಭಾರಿ ವೈರಲ್‌ ಆಗಿದೆ.

VISTARANEWS.COM


on

Hoarding Collapse
Koo

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಯಮಸ್ವರೂಪಿ ಹೋರ್ಡಿಂಗ್‌ ಕುಸಿದು (Hoarding Collapse) ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಘಾಟ್ಕೋಪರ್‌ (Ghatkopar) ಪೆಟ್ರೋಲ್‌ ಬಂಕ್‌ ಮೇಲೆ ಹೋರ್ಡಿಂಗ್‌ ಕುಸಿದ ಕಾರಣ 39 ಜನ ಗಾಯಗೊಂಡಿದ್ದಾರೆ. 80ಕ್ಕೂ ಅಧಿಕ ವಾಹನಗಳು ಸಂಪೂರ್ಣವಾಗಿ ಹಾನಿಯಾಗಿವೆ. ಇನ್ನೂ 14 ಜನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾರಿ ಮಳೆಯ ಮಧ್ಯೆಯೇ ಬೃಹತ್‌ ಹೋರ್ಡಿಂಗ್‌ ಕುಸಿದಿರುವ ಭೀಕರ ವಿಡಿಯೊ ಲಭ್ಯವಾಗಿದೆ. ಇದು ಈಗ ವೈರಲ್‌ (Viral Video) ಆಗಿದೆ.

ಮುಂಬಯಿಯಲ್ಲಿ ಏನಾಯಿತು?

ಮುಂಬೈನ ಘಾಟ್‌ಕೋಪರ್‌ನಲ್ಲಿ ಸೋಮವಾರ (ಮೇ 13) ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ 70 ಮೀಟರ್ ಎತ್ತರದ ಜಾಹೀರಾತು ಫಲಕ ಕುಸಿದಿದೆ. ಘಾಟ್‌ಕೋಪರ್‌ನ ಚೆಡ್ಡಾನಗರ ಜಂಕ್ಷನ್‌ನಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಅಕ್ರಮ ಹೋರ್ಡಿಂಗ್ ಬಿದ್ದಿದೆ. ಸೋಮವಾರ ಸಂಜೆ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, 64 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಲ್ಲಿ ಇನ್ನೂ ಸಿಲುಕಿರುವ ದೇಹಗಳನ್ನು ಹೊರತೆಗೆಯಲು ಎನ್‌ಡಿಆರ್‌ಎಫ್ ರಾತ್ರಿ ರಕ್ಷಣಾ ಕಾರ್ಯಾಚರಣೆಯನ್ನು ಅಗೆಯುವ ಯಂತ್ರಗಳೊಂದಿಗೆ ನಡೆಸಿತು.

ಇನ್ನೂ 20ರಿಂದ 30 ಜನರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ ಎಂದು ಬಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಪೆಟ್ರೋಲ್ ಪಂಪ್‌ನಲ್ಲಿ ಸಂಭವಿಸಿದ ಕುಸಿತದಿಂದಾಗಿ ಅವಶೇಷಗಳನ್ನು ತೆಗೆದುಹಾಕುವಲ್ಲಿ NDRF ಸಮಸ್ಯೆಗಳನ್ನು ಎದುರಿಸುತ್ತಿದೆ, ಇದು ಅಪಾಯಕಾರಿ ಪರಿಸ್ಥಿತಿಗೆ ಕಾರಣವಾಗಬಹುದು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಮೃತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದಾಗಿ ಘೋಷಿಸಿದರು. ಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಜಾಹೀರಾತು ಫಲಕ ಹಾಕಲಾಗಿದೆ ಎಂದು ಬಿಎಂಸಿ ಹೇಳಿದೆ. ಮುಂಬೈ ಪೊಲೀಸರು ಐಪಿಸಿ 304, 338, 337, ಮತ್ತು 34ರ ಅಡಿಯಲ್ಲಿ ಮಾಲೀಕ ಭವೇಶ್ ಭಿಡೆ ಮತ್ತು ಇತರರ ವಿರುದ್ಧ ಪಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜೀವಹಾನಿಗೆ ಸಂತಾಪ ಸೂಚಿಸಿರುವ ರಾಷ್ಟ್ರಪತಿ ಮುರ್ಮು, “ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಹಲವಾರು ಸಾವುನೋವುಗಳ ಸುದ್ದಿ ಅತ್ಯಂತ ದುಃಖಕರವಾಗಿದೆ. ನಾನು ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಗಾಯಗೊಂಡವರ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಯಶಸ್ಸಿಗೆ ಹಾರೈಸುತ್ತೇನೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Continue Reading

ದೇಶ

Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

Covaxin: ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

VISTARANEWS.COM


on

Covaxin
Koo

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದಲ್ಲದೆ, ‘ಹೊಸ-ಆರಂಭದ ಚರ್ಮ ಮತ್ತು ಸಬ್ಕ್ಯುಟೇನಿಯಸ್ ಅಸ್ವಸ್ಥತೆ’ 10.5 ಪ್ರತಿಶತ ಹದಿಹರೆಯದವರಲ್ಲಿ ಕಂಡುಬಂದಿದೆ, ಸಾಮಾನ್ಯ ಅಸ್ವಸ್ಥತೆ ಅಂದರೆ ಸಾಮಾನ್ಯ ಸಮಸ್ಯೆ 10.2 ಪ್ರತಿಶತ, ನರಮಂಡಲದ ಅಸ್ವಸ್ಥತೆ ಅಂದರೆ ನರ ಸಂಬಂಧಿತ ಸಮಸ್ಯೆ 4.7 ಪ್ರತಿಶತ. ಅದೇ ರೀತಿ ಶೇ.8.9ರಷ್ಟು ಯುವಜನರಲ್ಲಿ ಸಾಮಾನ್ಯ ಸಮಸ್ಯೆಗಳು, ಮಸ್ಕ್ಯುಲೋಸ್ಕೆಲಿಟಲ್ ಡಿಸಾರ್ಡರ್ಸ್ ಅಂದರೆ ಸ್ನಾಯುಗಳು, ನರಗಳು, ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಶೇ.5.8ರಷ್ಟು ಮತ್ತು ನರವ್ಯೂಹಕ್ಕೆ ಸಂಬಂಧಿಸಿದ ಸಮಸ್ಯೆಗಳು ಶೇ.5.5ರಲ್ಲಿ ಕಂಡುಬರುತ್ತವೆ.

ಇದಲ್ಲದೆ, ಹದಿಹರೆಯದವರಲ್ಲಿ 10.5 ಪ್ರತಿಶತದಷ್ಟು ಜನರು ‘ಹೊಸದಾಗಿ ಪ್ರಾರಂಭವಾಗುವ ಚರ್ಮ ಮತ್ತು ಚರ್ಮದ ಅಸ್ವಸ್ಥತೆ’, 10.2 ಸಾಮಾನ್ಯ ಅಸ್ವಸ್ಥತೆಗಳು ಅಂದರೆ ಸಾಮಾನ್ಯ ಅಸ್ವಸ್ಥತೆಗಳು, 4.7 ಪ್ರತಿಶತದಷ್ಟು ಜನರು ನರಮಂಡಲದ ಅಸ್ವಸ್ಥತೆಗಳನ್ನು ಹೊಂದಿರುವುದು ಕಂಡುಬಂದಿದೆ. ಅಂತೆಯೇ, 8.9 ಪ್ರತಿಶತದಷ್ಟು ಯುವಕರು ಸಾಮಾನ್ಯ ಸಮಸ್ಯೆಗಳನ್ನು ಹೊಂದಿದ್ದರು, 5.8 ಪ್ರತಿಶತದಷ್ಟು ಜನರು ಸ್ನಾಯು ಅಸ್ಥಿಪಂಜರದ ಅಸ್ವಸ್ಥತೆಗಳನ್ನು (ಸ್ನಾಯುಗಳು, ನರಗಳು, ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳು) ಮತ್ತು 5.5 ಪ್ರತಿಶತದಷ್ಟು ಜನರು ನರಮಂಡಲಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿದ್ದರು.

ವರದಿಯ ಪ್ರಕಾರ, ಕೋವಾಕ್ಸಿನ್ ಅಡ್ಡಪರಿಣಾಮಗಳು ಯುವತಿಯರಲ್ಲಿಯೂ ಕಂಡುಬಂದಿವೆ. 4.6 ರಷ್ಟು ಮಹಿಳೆಯರಲ್ಲಿ ಮುಟ್ಟಿನ ಸಮಸ್ಯೆಗಳು ವರದಿಯಾಗಿವೆ ಮತ್ತು 2.7 ಪ್ರತಿಶತದಷ್ಟು ಮಹಿಳೆಯರಲ್ಲಿ ಕಣ್ಣಿನ ಸಮಸ್ಯೆಗಳನ್ನು ತೋರಿಸಿದೆ. 0.6 ರಷ್ಟು ಜನರಲ್ಲಿ ಹೈಪೋಥೈರಾಯ್ಡಿಸಮ್ ಕಂಡುಬಂದಿದೆ.

ಇದನ್ನೂ ಓದಿ: GT vs SRH: ಇಂದು ಲ್ಯಾವೆಂಡರ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಗುಜರಾತ್​ ತಂಡ; ಇದರ ಉದ್ದೇಶವೇನು?

ಒಂದು ವರ್ಷದ ನಂತರ ಪರಿಣಾಮ

ಲಸಿಕೆ ಹಾಕಿದ ಒಂದು ವರ್ಷದ ನಂತರ ಇವರನ್ನು ಬಹುತೇಕರಲ್ಲಿ ಈ ಕಾಯಿಲೆಗಳು ಕಾಣಿಸಿಕೊಂಡಿದೆ. Covaxin ನ ಅಡ್ಡಪರಿಣಾಮಗಳ ಮಾದರಿಯು ಇತರ ಕರೋನಾ ಲಸಿಕೆಗಳ ಅಡ್ಡಪರಿಣಾಮಗಳ ಮಾದರಿಗಿಂತ ಭಿನ್ನವಾಗಿದೆ ಎಂದು ಅದು ಹೇಳುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಲಸಿಕೆಯ ಪರಿಣಾಮವನ್ನು ಆಳವಾಗಿ ತಿಳಿದಕೊಳ್ಳಲು ಅಧ್ಯಯನ ನಡೆಸಲಾಗುತ್ತಿದೆ ಎಂದು ಸಲಹೆ ನೀಡಲಾಗಿದೆ.

Continue Reading
Advertisement
BMW X3 xDrive20d
ಪ್ರಮುಖ ಸುದ್ದಿ37 seconds ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ3 mins ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Cannes 2024 Fashion celebrities trend
ಫ್ಯಾಷನ್8 mins ago

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

PM Narendra Modi
ದೇಶ12 mins ago

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

viral video
ಕ್ರಿಕೆಟ್16 mins ago

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Sita Temple
ದೇಶ18 mins ago

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Prajwal Revanna Case pen drive and hard disk were found during the raids in Hassan and Bengaluru
ಕ್ರೈಂ27 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Chandu Champion Injured Kartik Aaryan looks intense
ಸಿನಿಮಾ32 mins ago

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Money Guide
ಮನಿ-ಗೈಡ್41 mins ago

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Hoarding Collapse
ದೇಶ47 mins ago

Hoarding Collapse: 16 ಜನರ ಸಾವಿಗೆ ಕಾರಣವಾದ ಯಮಸ್ವರೂಪಿ ಹೋರ್ಡಿಂಗ್‌ ಕುಸಿತದ ವಿಡಿಯೊ ಇಲ್ಲಿದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Suspicious Case
ಬೆಂಗಳೂರು5 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಟ್ರೆಂಡಿಂಗ್‌