ನವದೆಹಲಿ: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ತೀರಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದರು.
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ ನೀತಿಯ ಅನುಸಾರ ರೈತರಿಗೆ ಆಗಬೇಕಾದ ಪಾವತಿಗಳ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ನಡೆಯುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: KSET 2024: ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ
ಪ್ರಸಕ್ತ ಸಕ್ಕರೆ ಋತುವಿನಲ್ಲಿ 1.05 ಲಕ್ಷ ಕೋಟಿ ರೂ. ಪಾವತಿಯೊಂದಿಗೆ ಶೇ.94.8 ಕ್ಕಿಂತ ಹೆಚ್ಚಿನ ಮೊತ್ತದ ಕಬ್ಬಿನ ಬಾಕಿ ತೀರಿಸಲಾಗಿದೆ ಎಂದರು.
ಇದನ್ನೂ ಓದಿ: KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ
ಕಬ್ಬು ಬೆಳೆಗಾರರ ಬಾಕಿಯನ್ನು ಅತಿ ಕಡಿಮೆ ಮಟ್ಟಕ್ಕೆ ತೆಗೆದುಕೊಂಡು ಹೋಗಲಾಗಿದೆ. ಪ್ರಧಾನಿ ಮೋದಿಯವರ ನೇತೃತ್ವದ ಸರ್ಕಾರ ರೈತಪರ ಕಾರ್ಯಕ್ರಮಗಳನ್ನು ಕೈಗೊಂಡ ಪರಿಣಾಮ 2021-22ರ ಸಕ್ಕರೆ ಋತುವಿನ ಶೇ. 99.99 ರಷ್ಟು ಕಬ್ಬಿನ ಬಾಕಿಯನ್ನು ತೀರಿಸಲಾಗಿದೆ ಎಂದು ಹೇಳಿದರು.