Explosives Found: ಪ್ರಧಾನಿ ಮೋದಿ ಹತ್ಯೆಗೆ ನಡೆಯಿತಾ ಸಂಚು? ಅವರ ರಾಜಸ್ಥಾನ ಭೇಟಿಗೂ 3 ದಿನ ಮೊದಲು ಸಾವಿರ ಕೆಜಿ ಸ್ಫೋಟಕ ಪತ್ತೆ - Vistara News

ದೇಶ

Explosives Found: ಪ್ರಧಾನಿ ಮೋದಿ ಹತ್ಯೆಗೆ ನಡೆಯಿತಾ ಸಂಚು? ಅವರ ರಾಜಸ್ಥಾನ ಭೇಟಿಗೂ 3 ದಿನ ಮೊದಲು ಸಾವಿರ ಕೆಜಿ ಸ್ಫೋಟಕ ಪತ್ತೆ

Explosives Found: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಗೆ ಚಾಲನೆ ನೀಡುವ ದಿಸೆಯಲ್ಲಿ ಮೋದಿ ಅವರು ಫೆಬ್ರವರಿ 12ರಂದು ರಾಜಸ್ಥಾನದ ದೌಸಾಗೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲೇ ಸ್ಫೊಟಕ ಪತ್ತೆಯಾಗಿರುವುದು ಹಲವು ಶಂಕೆ ಮೂಡಲು ಕಾರಣವಾಗಿದೆ.

VISTARANEWS.COM


on

Explosives Found In Rajasthan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮೂರು ದಿನ ಬಾಕಿ ಇರುವ ಮೊದಲೇ ರಾಜಸ್ಥಾನದ ದೌಸಾದಲ್ಲಿ ಒಂದು ಸಾವಿರ ಕೆ.ಜಿ ಸ್ಫೋಟಕ (Explosives Found) ಪತ್ತೆಯಾಗಿದ್ದು, ಹಲವು ಶಂಕೆ ವ್ಯಕ್ತವಾಗಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನ ದೌಸಾ-ಸೊಹ್ನಾ ರಸ್ತೆಯ ಲೋಕಾರ್ಪಣೆಗಾಗಿ ನರೇಂದ್ರ ಮೋದಿ ಅವರು ಫೆಬ್ರವರಿ ೧೨ರಂದು ದೌಸಾಗೆ ತೆರಳಲಿದ್ದಾರೆ. ಈಗ ಇದೇ ಪ್ರದೇಶದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ಇದರಿಂದಾಗಿ ಸ್ಫೋಟಕ್ಕಾಗಿ ಭಾರಿ ಸಂಚು ರೂಪಿಸಲಾಗಿದೆ ಎಂದೇ ಹೇಳಲಾಗುತ್ತಿದೆ.

ಸದರ್‌ ಪೊಲೀಸ್‌ ಠಾಣೆ ಅಧಿಕಾರಿಗಳು ಭಂಕ್ರಿ ರಸ್ತೆಯಲ್ಲಿ ಒಂದು ಸಾವಿರ ಕೆ.ಜಿ ಸ್ಫೋಟಕಗಳನ್ನು ಪತ್ತೆಹಚ್ಚಿದ್ದಾರೆ. ಹಾಗೆಯೇ, ದೌಸಾ ನಿವಾಸಿಯಾದ ರಾಜೇಶ್‌ ಮೀನಾ ಎಂಬಾತನನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮೋದಿ ಅವರ ಹತ್ಯೆಗೆ ಏನಾದರೂ ಸಂಚು ರೂಪಿಸಲಾಗಿದೆಯೇ ಎಂಬ ಕುರಿತು ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಯಾವ ಯಾವ ಸ್ಫೋಟಕ ಪತ್ತೆ?

೬೫ ಡಿಟೊನೇಟರ್‌ಗಳು, ೩೬೦ ಜಿಲೆಟಿನ್‌ ಕಡ್ಡಿಗಳಿರುವ ೪೦ ಬಾಕ್ಸ್‌ಗಳು, ೧೩ ಕನೆಕ್ಟಿಂಗ್‌ ವೈರ್‌ಗಳು ಸೇರಿ ಎಲ್ಲ ಸ್ಫೋಟಕಗಳು ಒಂದು ಕೆ.ಜಿ ತೂಕ ಹೊಂದಿವೆ. ಬೇರೆ ಮೂಲಗಳ ಪ್ರಕಾರ, ಇಷ್ಟೂ ಸ್ಫೋಟಕಗಳು ಗಣಿಗಾರಿಕೆಗಾಗಿ ಬಳಸಲು ಕೊಂಡೊಯ್ಯಲಾಗುತ್ತಿತ್ತು ಎನ್ನಲಾಗಿದೆ. ಆದರೆ, ಮೋದಿ ಭೇಟಿಯ ಕಾರಣದಿಂದಾಗಿ ದೌಸಾದಲ್ಲಿ ಇನ್ನಷ್ಟು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: PM Modi Speech In Rajya Sabha: ನೆಹರು, ಇಂದಿರಾ, ಖರ್ಗೆ, ಅಭಿವೃದ್ಧಿ; ಮೇಲ್ಮನೆಯಲ್ಲಿ ಮೋದಿ ಮಾತಿನ ಚಾಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Puri Jagannath Yatra: ಪುರಿ ಜಗನ್ನಾಥನ ಅದ್ದೂರಿ ರಥಯಾತ್ರೆ; ರಾಷ್ಟ್ರಪತಿ ಮುರ್ಮು ಉಪಸ್ಥಿತಿ

Puri Jagannath Yatra: ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು,, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆಯನ್ನು ವೀಕ್ಷಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆ ಮಾಡಿದ್ದು, ಸಾಮಾನ್ಯವಾಗಿ ಒಂದೇ ದಿನದಲ್ಲಿ ನಡೆಯುವ ಯಾತ್ರೆಯನ್ನು ಸುಗಮವಾಗಿ ನಡೆಸಲು ಒಡಿಶಾ ಸರ್ಕಾರ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Puri Jagannath Yatra
Koo

ಭುವನೇಶ್ವರ: ಜಗತ್ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಎರಡು ದಿನ ವಾರ್ಷಿಕ ರಥಯಾತ್ರೆ (Puri Jagannath Yatra) ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಬರೋಬ್ಬರಿ 53 ವರ್ಷಗಳ ನಂತರ ಜಗತ್ಪ್ರಸಿದ್ಧ ಜಗನ್ನಾಥನ ವಾರ್ಷಿಕ ರಥಯಾತ್ರೆ ನಡೆಯುತ್ತಿದೆ.

ಇನ್ನು ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು,, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆಯನ್ನು ವೀಕ್ಷಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆ ಮಾಡಿದ್ದು, ಸಾಮಾನ್ಯವಾಗಿ ಒಂದೇ ದಿನದಲ್ಲಿ ನಡೆಯುವ ಯಾತ್ರೆಯನ್ನು ಸುಗಮವಾಗಿ ನಡೆಸಲು ಒಡಿಶಾ ಸರ್ಕಾರ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಗನ್ನಾಥ ದೇವಾಲಯದ ಮೂರು ದೇವರುಗಳಾದ ಜಗನ್ನಾಥ, ಬಲರಾಮ್ ಮತ್ತು ಸುಭದ್ರಾ ಮೂರು ವಿಭಿನ್ನ ರಥಗಳಲ್ಲಿ ಸವಾರಿ ಮಾಡುತ್ತಾರೆ. ಈ ಕಾರಣಕ್ಕಾಗಿ ರಥಯಾತ್ರೆಯನ್ನು ರಥೋತ್ಸವ ಎಂದು ಕರೆಯುತ್ತಾರೆ. ಅವರ ವಿಭಿನ್ನ ರಥಗಳನ್ನು ನಂದಿಘೋಷ, ತಾಳಧ್ವಜ ಮತ್ತು ದೇವದಳನ ಎಂದು ಕರೆಯಲಾಗುತ್ತದೆ. ಭಗವಾನ್ ಜಗನ್ನಾಥನ ನಂದಿಘೋಷ ರಥವು ಹದಿನೆಂಟು ಚಕ್ರಗಳನ್ನು ಹೊಂದಿದೆ. ಭಗವಾನ್ ಬಲರಾಮನ ತಾಳಧ್ವಜ ರಥವು ಹದಿನಾರು ಚಕ್ರಗಳನ್ನು ಹೊಂದಿದೆ ಮತ್ತು ಸುಭದ್ರೆಯ ಪದ್ಮಧ್ವಜ ರಥವು ಹದಿನಾಲ್ಕು ಚಕ್ರಗಳನ್ನು ಹೊಂದಿದೆ.

ಗ್ರಹಗಳು ಮತ್ತು ನಕ್ಷತ್ರಪುಂಜಗಳ ಲೆಕ್ಕಾಚಾರದ ಪ್ರಕಾರ, ಈ ವರ್ಷ ಎರಡು ದಿನಗಳ ರಥಯಾತ್ರೆಗಳನ್ನು ಆಯೋಜಿಸಲಾಗಿದೆ ಎಂದು ತಜ್ಞರು ಹೇಳುತ್ತಾರೆ, ಆದರೆ ಈ ಹಿಂದೆ 1971 ರಲ್ಲಿ ಎರಡು ದಿನಗಳ ರಥಯಾತ್ರೆಯನ್ನು ಆಯೋಜಿಸಲಾಗಿತ್ತು. ಸಂಪ್ರದಾಯಕ್ಕೆ ಹೊರತಾಗಿ, ಮೂರು ಸಹೋದರ-ಸಹೋದರಿ ದೇವತೆಗಳಾದ ಭಗವಾನ್ ಶ್ರೀಕೃಷ್ಣ, ದೇವಿ ಸುಭದ್ರ ಮತ್ತು ಭಗವಾನ್ ಬಲಭದ್ರ ದೇವರಿಗೆ ಸಹ ಇಂದು ಭಾನುವಾರದಂದು ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಗಿದೆ.

ಇದನ್ನೂ ಓದಿ: Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Continue Reading

ದೇಶ

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Mahua Moitra: ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು.

VISTARANEWS.COM


on

Mahua Moitra
Koo

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (NCW Chief) ಅಧ್ಯಕ್ಷೆ ರೇಖಾ ಶರ್ಮಾ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಜುಲೈ 1ರಂದು ಜಾರಿಗೆ ಬಂದ ಹೊಸ ಕಾನೂನುಗಳ ಪೈಕಿ ಒಂದಾದ ಭಾರತೀಯ ನ್ಯಾಯ ಸಂಹಿತೆ (BNS) ಅನ್ವಯ ಮಹುವಾ ಮೊಯಿತ್ರಾ ಅವರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಮಹುವಾ ಮೊಯಿತ್ರಾ ಹೇಳಿದ್ದೇನು?

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 121 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ರೇಖಾ ಶರ್ಮಾ ಅವರು ಹತ್ರಾಸ್‌ಗೆ ಭೇಟಿ ನೀಡಿದ ವಿಡಿಯೊವನ್ನು ಮಹುವಾ ಮೊಯಿತ್ರಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, “ತಮ್ಮ ಬಾಸ್‌ನ ಪೈಜಾಮಾ ಹಿಡಿದುಕೊಳ್ಳುವುದರಲ್ಲಿಯೇ ಇವರು ನಿರತರಾಗಿದ್ದಾರೆ” ಎಂಬುದಾಗಿ ಟಿಎಂಸಿ ಸಂಸದೆ ಬರೆದುಕೊಂಡಿದ್ದರು.

ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು. ಅಲ್ಲದೆ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೂ ರಾಷ್ಟ್ರೀಯ ಮಹಿಳಾ ಆಯೋಗವು ಪತ್ರ ಬರೆದು, ಮಹುವಾ ಮೊಯಿತ್ರಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಮನವಿ ಮಾಡಿತ್ತು. ಈಗ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ವಿವಾದಗಳಿಗೂ ಮಹುವಾ ಮೊಯಿತ್ರಾ ಅವರಿಗೂ ಎಲ್ಲಿಲ್ಲದ ನಂಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ಗುರಿಯಾಗಿಸಿಕೊಂಡು ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಬಿಜೆಪಿಯ ನಿಶಿಕಾಂತ್‌ ದುಬೆ ಆರೋಪ ಮಾಡಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಇದರ ಕುರಿತು ತನಿಖೆ ಕೂಡ ನಡೆಸಲಾಗಿತ್ತು. “ಉದ್ಯಮಿ ದರ್ಶನ್‌ ಹಿರಾನಂದನಿ ಅವರಿಗೆ ಸಂಸತ್‌ ಐಡಿ ಹಾಗೂ ಪಾಸ್‌ವರ್ಡ್‌ ಕೊಟ್ಟಿದ್ದು ನಿಜ. ಆದರೆ, ಹಣ ಪಡೆದು ಪ್ರಶ್ನೆ ಕೇಳುವ ದಿಸೆಯಲ್ಲಿ ಐಡಿ, ಪಾಸ್‌ವರ್ಡ್‌ ಕೊಟ್ಟಿಲ್ಲ” ಎಂಬುದಾಗಿ ಮಹುವಾ ಮೊಯಿತ್ರಾ ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading

ಬಜೆಟ್ 2024

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ 15ರಿಂದ 22ರ ಅವಧಿಯ ನಡುವೆ ಬಜೆಟ್‌ (Union Budget 2024) ಮಂಡಿಸಲು ಸಿದ್ಧತೆ ನಡೆಸಿದ್ದು, ಈ ಸಂದರ್ಭದಲ್ಲಿ ಭಾರತದ ಕೇಂದ್ರ ಬಜೆಟ್ ಬಗ್ಗೆ ತಿಳಿದುಕೊಳ್ಳಬೇಕಾದ ಹತ್ತು ಪ್ರಮುಖ ಆಸಕ್ತಿದಾಯಕ ಸಂಗತಿಗಳಿವೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Union Budget 2024
Koo

ಲೋಕಸಭೆ ಚುನಾವಣೆ (lok sabha election) ಬಳಿಕ ಮೊದಲ ಬಾರಿಗೆ ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ಮೊದಲ ಬಜೆಟ್ (Union Budget 2024) ಮಂಡಿಸಲಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಕೇಂದ್ರ ಬಜೆಟ್ ಮಂಡನೆಯಾಗಲಿರುವ ಈ ಸಂದರ್ಭದಲ್ಲಿ ತಿಳಿದುಕೊಳ್ಳಬೇಕಾದ 10 ಆಸಕ್ತಿದಾಯಕ ಸಂಗತಿಗಳಿವೆ.

ಬಜೆಟ್ ಎಂಬ ಪದವು ಫ್ರೆಂಚ್ ಪದ ‘ಬೌಗೆಟ್’ನಿಂದ ಬಂದಿದೆ. ಇದರ ಅರ್ಥ ಸಣ್ಣ ಚೀಲ ಅಥವಾ ಚೀಲ ಎಂಬುದಾಗಿದೆ. ಸ್ವತಂತ್ರ ಪೂರ್ವ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಜೆಟ್ ಮಂಡಿಸಿದ್ದು ಜೇಮ್ಸ್ ವಿಲ್ಸನ್. ಭಾರತೀಯ ಕೌನ್ಸಿಲ್‌ನ ಹಣಕಾಸು ಸಚಿವರಾಗಿ ನೇಮಕಗೊಂಡ ಅವರು ಭಾರತೀಯ ವೈಸ್‌ರಾಯ್‌ಗೆ ಬಜೆಟ್ ಕುರಿತು ಸಲಹೆ ನೀಡಿದರು.

1860ರಲ್ಲಿ ಭಾರತದ ಮೊದಲ ಬಜೆಟ್ ಮಂಡನೆಯಾಗಿತ್ತು. ಸ್ಕಾಟಿಷ್ ಉದ್ಯಮಿಯಾಗಿದ್ದ ಜೇಮ್ಸ್ ವಿಲ್ಸನ್ ವ್ಯಾಪಾರ ಮತ್ತು ಹಣಕಾಸಿನ ಬಗ್ಗೆ ಅಪಾರ ತಿಳಿವಳಿಕೆ ಹೊಂದಿದ್ದರು. ಪ್ರಸಿದ್ಧ ಪತ್ರಿಕೆಯಾದ ದಿ ಎಕನಾಮಿಸ್ಟ್ ಮತ್ತು ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್‌ನ ಸಂಸ್ಥಾಪಕರಾಗಿದ್ದ ಅವರು ಬ್ರಿಟಿಷ್ ಸಂಸತ್ತಿನ ಸದಸ್ಯರಾಗಿದ್ದರು ಮತ್ತು ಯುಕೆ ಖಜಾನೆಯ ಹಣಕಾಸು ಕಾರ್ಯದರ್ಶಿ ಮತ್ತು ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿದ್ದರು.


ಕೇಂದ್ರ ಬಜೆಟ್‌ನ 10 ಪ್ರಮುಖ ಸಂಗತಿಗಳು

1. ಮೊದಲ ಬಜೆಟ್‌ ಮಂಡಿಸಿದ್ದು ಯಾರು?

ಸ್ವತಂತ್ರ ಭಾರತದ ಮೊದಲ ವಾರ್ಷಿಕ ಬಜೆಟ್ ಅನ್ನು ಆರ್.ಕೆ. ಷಣ್ಮುಖಂ ಚೆಟ್ಟಿಯವರು 1948ರ ಫೆಬ್ರವರಿ 28ರಂದು ಮಂಡಿಸಿದರು. ದೇಶ ಸ್ವತಂತ್ರಗೊಂಡ ಮೂರು ತಿಂಗಳ ಅನಂತರ ದೇಶದ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ 1947ರ ನವೆಂಬರ್ 26ರಂದು ಮಧ್ಯಂತರ ಬಜೆಟ್ ಮಂಡಿಸಲಾಯಿತು. ಇದು ಕೇವಲ ನಾಲ್ಕು ತಿಂಗಳವರೆಗೆ ಊರ್ಜಿತವಾಗಿತ್ತು.
ಪ್ರಧಾನಿಯೊಬ್ಬರು ಇದುವರೆಗೆ ಮೂರು ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಪಂಡಿತ್ ಜವಾಹರಲಾಲ್ ನೆಹರು ಅವರು 1958ರಲ್ಲಿ, ಪ್ರಧಾನಿ ಇಂದಿರಾ ಗಾಂಧಿ ಅವರು 1970ರಲ್ಲಿ ಬಜೆಟ್ ಮಂಡಿಸಿದರು. ಅನಂತರ ರಾಜೀವ್ ಗಾಂಧಿ ಅವರು 1987ರಲ್ಲಿ ಬಜೆಟ್ ಮಂಡಿಸಿದ್ದಾರೆ.

2. ಅತಿ ಉದ್ದದ ಬಜೆಟ್ ಭಾಷಣ ಯಾರದ್ದು?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020ರಲ್ಲಿ ಅತಿ ಉದ್ದದ ಬಜೆಟ್ ಭಾಷಣ ಮಾಡಿದ ದಾಖಲೆಯನ್ನು ಹೊಂದಿದ್ದಾರೆ. ಇದು 2 ಗಂಟೆ 42 ನಿಮಿಷಗಳು. ಅವರು ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಮಂತ್ರಿಯೂ ಆಗಿದ್ದಾರೆ.


3. ಕಾಗದ ರಹಿತ ಬಜೆಟ್‌

ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ 2021ರಲ್ಲಿ ಬಜೆಟ್ ಕಾಗದರಹಿತವಾಯಿತು.

4. ಗರಿಷ್ಠ ಬಜೆಟ್‌ ಯಾರದ್ದು?

ಗರಿಷ್ಠ ಸಂಖ್ಯೆಯ ಬಜೆಟ್‌ಗಳನ್ನು ಮಂಡಿಸಿದ ಕೀರ್ತಿ ಮಾಜಿ ವಿತ್ತ ಸಚಿವ ಮೊರಾಜಿ ದೇಸಾಯಿ ಅವರಿಗೆ ಸಲ್ಲುತ್ತದೆ. ಅವರು ಒಟ್ಟು 10 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಅನಂತರ ಪಿ. ಚಿದಂಬರಂ ಅವರು 9 ಬಾರಿ, ಪ್ರಣಬ್ ಮುಖರ್ಜಿ ಮತ್ತು ಯಶವಂತ್ ಸಿನ್ಹಾ ಅವರು ತಲಾ 8 ಬಾರಿ ಮತ್ತು ಮನಮೋಹನ್ ಸಿಂಗ್ ಅವರು 6 ಬಾರಿ ಬಜೆಟ್ ಮಂಡಿಸಿದ್ದಾರೆ.

5. ಬಜೆಟ್‌ ಮಂಡನೆ ಸಮಯ ಬದಲಾವಣೆ

ಭಾರತದಲ್ಲಿ ಯಾವಾಗಲೂ ಸಂಜೆ 5 ಗಂಟೆಗೆ ಬಜೆಟ್ ಮಂಡಿಸಲಾಗುತ್ತಿತ್ತು. ಆಯವ್ಯಯ ಪತ್ರಗಳನ್ನು ಬ್ರಿಟಿಷ್ ಪಾರ್ಲಿಮೆಂಟ್‌ನಲ್ಲಿ ಮತ್ತು ಲಂಡನ್‌ನಲ್ಲಿ ಮಂಡನೆ ಮಾಡುವಂತೆ ಈ ಅಭ್ಯಾಸವು ಮೊದಲು ಪ್ರಾರಂಭವಾಯಿತು. 1999ರವರೆಗೂ ಇದು ಪಾಲನೆಯಾಗುತ್ತಿತ್ತು. ಆದರೆ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದರು. ಆ ಬಳಿಕ ಈಗ ಮಧ್ಯಾಹ್ನವೇ ಬಜೆಟ್‌ ಮಂಡಿಸಲಾಗುತ್ತದೆ.

6. ಬಜೆಟ್‌ ದಿನ ಬದಲಾವಣೆ

2017ನೇ ವರ್ಷವು ಕೇಂದ್ರ ಬಜೆಟ್‌ಗೆ ಸಂಬಂಧಿಸಿದ ಎರಡು ಪ್ರಮುಖ ಬದಲಾವಣೆಗಳನ್ನು ಗುರುತಿಸಿದೆ. ವಾರ್ಷಿಕ ಬಜೆಟ್ ಮಂಡನೆ ದಿನಾಂಕವನ್ನು ಫೆಬ್ರವರಿ 28ರಿಂದ ಫೆಬ್ರವರಿ 1ಕ್ಕೆ ಬದಲಾಯಿಸಲಾಯಿತು. ಏಪ್ರಿಲ್ 1ರಿಂದ ಪ್ರಾರಂಭವಾಗುವ ಹಣಕಾಸು ವರ್ಷದ ಆರಂಭದ ಮೊದಲು ಸರ್ಕಾರದ ವಿವಿಧ ಯೋಜನೆಗಳಿಗೆ ಹಣ ಹಂಚಿಕೆಗೆ ಎಲ್ಲಾ ಸಂಸತ್ತಿನ ಅನುಮೋದನೆಗಳು ಜಾರಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಲು ಇದನ್ನು ಮಾಡಲಾಗಿದೆ. ಈ ಮೊದಲು ಫೆಬ್ರವರಿ 28 ಮತ್ತು ಹೊಸ ಹಣಕಾಸು ವರ್ಷ ಪ್ರಾರಂಭವಾಗಲು ಕೇವಲ ಒಂದು ತಿಂಗಳು ಬಾಕಿಯಿರುತ್ತಿತ್ತು. ಆಗ ಕೆಲವು ಅನುಮೋದನೆಗಳಿಗೆ ತೊಂದರೆಯಾಗುತ್ತಿತ್ತು. ರೈಲ್ವೆ ಬಜೆಟ್ ಅನ್ನು ಕೇಂದ್ರ ಬಜೆಟ್‌ನಲ್ಲಿ ವಿಲೀನಗೊಳಿಸಿದ ವರ್ಷವೂ ಇದೇ ಆಗಿತ್ತು.

7. ಮೊದಲ ಬಾರಿ ವೈಯಕ್ತಿಕ ತೆರಿಗೆ ಇಳಿಕೆ

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಮಂಡಿಸಿದ 1997-98ರ ಬಜೆಟ್ ವೈಯಕ್ತಿಕ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಿದ ಮೊದಲ ಬಜೆಟ್ ಆಗಿದೆ. ಅಂದಿನಿಂದ ಸಣ್ಣಪುಟ್ಟ ಬದಲಾವಣೆಗಳನ್ನು ಹೊರತುಪಡಿಸಿ ಆ ದರಗಳು ಇನ್ನೂ ಬದಲಾಗದೆ ಹಾಗೇ ಉಳಿದಿವೆ.

8. ಮನಮೋಹನ್‌ ಸಿಂಗ್‌ ಐತಿಹಾಸಿಕ ಬಜೆಟ್‌

ಮನಮೋಹನ್ ಸಿಂಗ್ ಅವರ 1991ರ ಬಜೆಟ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಐತಿಹಾಸಿಕ ಬಜೆಟ್ ಆಗಿದೆ. ಇದು ಭಾರತೀಯ ಆರ್ಥಿಕತೆಯನ್ನು ಉದಾರೀಕರಣಗೊಳಿಸಿತು. ಇದು ಭಾರತವನ್ನು ಉನ್ನತ ಬೆಳವಣಿಗೆಯ ಹಾದಿಯಲ್ಲಿ ಕೊಂಡೊಯ್ಯಲು ಪ್ರೇರಣೆಯಾಯಿತು ಮತ್ತು ವಿದೇಶಿ ಸ್ಪರ್ಧೆಗೆ ಭಾರತೀಯ ಕಂಪನಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿತು.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್


9. ಹಲ್ವಾ ಸಮಾರಂಭ

ಪ್ರತಿ ವರ್ಷ ಹಣಕಾಸು ಸಚಿವರು ಬಜೆಟ್ ಮಂಡಿಸುವ ಒಂದು ವಾರದ ಮೊದಲು ‘ಹಲ್ವಾ ಸಮಾರಂಭ’ ನಡೆಯುತ್ತದೆ. ಬಜೆಟ್ ಮುದ್ರಿಸಿದ ಸ್ಥಳದಲ್ಲಿ ‘ಹಲ್ವಾ’ ತಯಾರಿಸಿ ಎಲ್ಲರಿಗೂ ಬಡಿಸಲಾಗುತ್ತದೆ. ವಿತ್ತ ಸಚಿವರು ಮತ್ತು ವಿತ್ತ ಸಚಿವಾಲಯದ ಎಲ್ಲಾ ಪ್ರಮುಖ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದು, ಶುಭ ಕಾರ್ಯದ ಆರಂಭವನ್ನು ಸೂಚಿಸುತ್ತಾರೆ. ಬಜೆಟ್ ಪೇಪರ್‌ಗಳ ಮುದ್ರಣಕ್ಕೆ ಹೋಗುವ ಮೊದಲು ಅಧಿಕಾರಿಗಳನ್ನು ಲಾಕ್ ಮಾಡಲಾಗುತ್ತದೆ. ಬಜೆಟ್ ಮಂಡನೆಯಾಗುವವರೆಗೆ ಬಜೆಟ್‌ನ ಮುದ್ರಣದಲ್ಲಿ ತೊಡಗಿರುವ ಎಲ್ಲ ಅಧಿಕಾರಿಗಳು ಹೊರ ಜಗತ್ತಿನೊಂದಿಗೆ ಯಾವುದೇ ಸಂವಹನವಿಲ್ಲದೆ ಹಣಕಾಸು ಸಚಿವಾಲಯದೊಳಗೆ ಬಂಧಿಯಾಗುತ್ತಾರೆ.

10. ಸೋರಿಕೆಯಾಗಿತ್ತು ಬಜೆಟ್‌ ಸಾರ

1950ರಲ್ಲಿ ಬಜೆಟ್ ಸೋರಿಕೆಯಾಯಿತು. ಅದರ ಅನಂತರ ಸರ್ಕಾರವು ಬಜೆಟ್‌ನ ಮುದ್ರಣವನ್ನು ರಾಷ್ಟ್ರಪತಿ ಭವನದಿಂದ ಮಿಂಟೋ ರಸ್ತೆಯಲ್ಲಿರುವ ಮುದ್ರಣಾಲಯಕ್ಕೆ ವರ್ಗಾಯಿಸಿತು. 1980ರಲ್ಲಿ ಇದನ್ನು ದೆಹಲಿಯ ರೈಸಿನಾ ರಸ್ತೆಯಲ್ಲಿರುವ ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯದ ನೆಲಮಾಳಿಗೆಯಲ್ಲಿರುವ ಸರ್ಕಾರಿ ಮುದ್ರಣಾಲಯಕ್ಕೆ ಸ್ಥಳಾಂತರಿಸಲಾಯಿತು.

Continue Reading

ದೇಶ

Yogi Adityanath: ನಿಂತ ಜಾಗದಲ್ಲೇ ಬಡ ಮಹಿಳೆಗೆ ಮನೆ ಮಂಜೂರು ಮಾಡಿದ ಯೋಗಿ ಆದಿತ್ಯನಾಥ್;‌ ಇದು ‌Instant ಮಾನವೀಯತೆ

Yogi Adityanath: ಭಾನುವಾರ (ಜುಲೈ 7) ಬೆಳಗ್ಗೆ ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರದ ಟಿಪಿ ನಗರ ಫ್ಲೈಓವರ್‌ ಹಾಗೂ ಷಟ್ಪಥ ರಸ್ತೆ ನಿರ್ಮಾಣದ ಕಾಮಗಾರಿ ಪರಿಶೀಲನೆ ನಡೆಸುವಾಗ, ಮನೆ ಇಲ್ಲದ ಕುರಿತು ಸಮಸ್ಯೆ ಹೇಳಿಕೊಂಡ ಮಂಜು ಎಂಬ ಮಹಿಳೆಗೆ ಶೀಘ್ರದಲ್ಲೇ ಸುಸಜ್ಜಿತ ಮನೆ ನಿರ್ಮಿಸಿಕೊಡಬೇಕು ಎಂಬುದಾಗಿ ಸೂಚಿಸಿದರು.

VISTARANEWS.COM


on

Yogi Adityanath
Koo

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು ರಾಜ್ಯದಲ್ಲಿ ಅಘೋಷಿತ ‘ಇನ್‌ಸ್ಟಂಟ್‌ ಜಸ್ಟಿಸ್’‌ (Instant Justice) ಎಂಬ ಪದ್ಧತಿ ಜಾರಿಗೆ ತಂದಿದ್ದಾರೆ. ಮಹಿಳೆ ಮೇಲೆ ಅತ್ಯಾಚಾರ ಎಸಗುವವರು, ಅಪರಾಧ ಕೃತ್ಯಗಳಲ್ಲಿ ತೊಡಗಿದವರ ಎನ್‌ಕೌಂಟರ್‌, ಅವರ ಮನೆ ನೆಲಸಮ ಸೇರಿ ಹಲವು ಕಠಿಣ ಕ್ರಮಗಳ ಮೂಲಕ ಉತ್ತರ ಪ್ರದೇಶದಲ್ಲಿ (Uttar Pradesh) ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದಾರೆ. ಇಷ್ಟೆಲ್ಲ ಕಠೋರ ನಿರ್ಣಯ ತೆಗೆದುಕೊಳ್ಳುವ ಯೋಗಿ ಆದಿತ್ಯನಾಥ್‌ ಅವರು ತಲೆಗೊಂದು ಸೂರು ಇಲ್ಲದ ಮಹಿಳೆಗೆ ನಿಂತ ಜಾಗದಲ್ಲಿಯೇ ಮನೆ ಮಂಜೂರು ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹೌದು, ಭಾನುವಾರ (ಜುಲೈ 7) ಬೆಳಗ್ಗೆ ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರದ ಟಿಪಿ ನಗರ ಫ್ಲೈಓವರ್‌ ಹಾಗೂ ಷಟ್ಪಥ ರಸ್ತೆ ನಿರ್ಮಾಣದ ಕಾಮಗಾರಿ ಪರಿಶೀಲನೆ ನಡೆಸುವಾಗ, ಮನೆ ಇಲ್ಲದ ಕುರಿತು ಸಮಸ್ಯೆ ಹೇಳಿಕೊಂಡ ಮಂಜು ಎಂಬ ಮಹಿಳೆಗೆ ಶೀಘ್ರದಲ್ಲೇ ಸುಸಜ್ಜಿತ ಮನೆ ನಿರ್ಮಿಸಿಕೊಡಬೇಕು ಎಂಬುದಾಗಿ ಸೂಚಿಸಿದರು. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಮಹಿಳೆಗೆ ಮನೆ ನಿರ್ಮಿಸಿಕೊಡಬೇಕು ಎಂಬುದಾಗಿ ಅಧಿಕಾರಿಗಳಿಗೆ ಆದೇಶ ನೀಡಿದರು.

Yogi Adityanath

ಮಂಜು ಎಂಬ ಮಹಿಳೆಯು ದಿಯೋರಿಯಾ ಬೈಪಾಸ್‌ ರಸ್ತೆಯ ಬಳಿ ಶೆಡ್‌ನಲ್ಲಿ ವಾಸಿಸುತ್ತಿದ್ದಾರೆ. ಮಗಳ ಜತೆ ಅವರು ವಾಸಿಸುತ್ತಿದ್ದು, ಸ್ವಂತದ್ದೊಂದು ಮನೆ ನಿರ್ಮಿಸಿಕೊಡಿ ಎಂಬುದಾಗಿ ಮುಖ್ಯಮಂತ್ರಿ ಬಳಿ ಅಳಲು ತೋಡಿಕೊಂಡರು. ಆಗ ಕೂಡಲೇ ಯೋಗಿ ಆದಿತ್ಯನಾಥ್‌ ಅವರು, ಮಹಿಳೆಯು ಎಲ್ಲಿ ಸ್ವಂತ ಜಾಗ ಹೊಂದಿದ್ದಾರೋ, ಅಲ್ಲಿಯೇ ಮನೆ ನಿರ್ಮಿಸಿಕೊಡಿ ಎಂಬುದಾಗಿ ಅಧಿಕಾರಿಗಳಿಗೆ ಸೂಚಿಸಿದರು.

“ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿಯಾಗಿ, ನಮಗೊಂದು ಮನೆ ನಿರ್ಮಿಸಿಕೊಡಿ ಎಂಬುದಾಗಿ ಮನವಿ ಮಾಡಿದೆ. ನನ್ನ ಆರ್ಥಿಕ ದುಸ್ಥಿತಿಯ ಬಗ್ಗೆ ಅವರಿಗೆ ವಿವರಣೆ ನೀಡಿದೆ. ಒಂದು ಕ್ಷಣವೂ ಯೋಚಿಸದೆ ಅವರು ನಮಗೆ ಮನೆ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಇದರಿಂದ ನಮಗೆ ಭಾರಿ ಖುಷಿಯಾಗಿದೆ. ಯೋಗಿ ಆದಿತ್ಯನಾಥ್‌ ಅವರಿಗೆ ಧನ್ಯವಾದಗಳು” ಎಂಬುದಾಗಿ ಮಹಿಳೆ ತಿಳಿಸಿದ್ದಾರೆ. ಇನ್ನು, ಅಭಿವೃದ್ಧಿ ಕಾರ್ಯಗಳಿಗಾಗಿ ಮಹಿಳೆಯ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಅವರಿಗೆ ಕೂಡಲೇ ಪರಿಹಾರವನ್ನೂ ಒದಗಿಸಿ ಎಂಬುದಾಗಿಯೂ ಸಿಎಂ ಸೂಚಿಸಿದರು.

ಇದನ್ನೂ ಓದಿ: Hathras Stampede: 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಆಸ್ತಿ ಧ್ವಂಸಕ್ಕೆ ಮುಂದಾದ ಯೋಗಿ!

Continue Reading
Advertisement
Puri Jagannath Yatra
ದೇಶ10 mins ago

Puri Jagannath Yatra: ಪುರಿ ಜಗನ್ನಾಥನ ಅದ್ದೂರಿ ರಥಯಾತ್ರೆ; ರಾಷ್ಟ್ರಪತಿ ಮುರ್ಮು ಉಪಸ್ಥಿತಿ

Rahul Dravid
ಪ್ರಮುಖ ಸುದ್ದಿ15 mins ago

Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

Abhishek Sharma
ಪ್ರಮುಖ ಸುದ್ದಿ43 mins ago

Abhishek Sharma : ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ

Bengaluru's Second Airport
ಕರ್ನಾಟಕ46 mins ago

Bengaluru’s Second Airport: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ? ಸಚಿವ ಎಂ.ಬಿ. ಪಾಟೀಲ್ ಸುಳಿವು

Mahua Moitra
ದೇಶ1 hour ago

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Self harming
ವಿಜಯನಗರ1 hour ago

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Land Dispute
ಕರ್ನಾಟಕ1 hour ago

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Vastu Tips
ಧಾರ್ಮಿಕ2 hours ago

Vastu Tips: ಆರ್ಥಿಕ ಸಂಕಷ್ಟ ದೂರವಾಗಿ ಶ್ರೀಮಂತರಾಗಬೇಕೆ? ಈ ವಾಸ್ತು ನಿಯಮ ಪಾಲಿಸಿ

Union Budget 2024
ಬಜೆಟ್ 20242 hours ago

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

Sanath Jayasuriya
ಪ್ರಮುಖ ಸುದ್ದಿ2 hours ago

Sanath Jayasuriya : ಬ್ಯಾಟಿಂಗ್​ ದಿಗ್ಗಜ ಸನತ್​ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್​ ತಂಡದ ನೂತನ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Davanagere news
ಮಳೆ3 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ3 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ13 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌